ಉದ್ಯೋಗ
SBI-SSLC ಪೂರ್ಣಗೊಳಿಸಿದವರಿಗೆ ಎಸ್ ಬಿ ಐ ಯಲ್ಲಿ 484 ಹುದ್ದೆಗಳು – ತಕ್ಷಣ ಅರ್ಜಿ ಸಲ್ಲಿಸಿ
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಒಟ್ಟು 484 ಸಫಾಯಿ ಕರ್ಮಚಾರಿ ಮತ್ತು ಸಬ್ ಸ್ಟಾಪ್ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ, ವಯೋಮಿತಿ, ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ಇಲಾಖೆ ಹೆಸರು: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ
ಹುದ್ದೆಗಳ ಹೆಸರು: ಸಫಾಯಿ ಕರ್ಮಚಾರಿ ಮತ್ತು ಸಬ್ ಸ್ಟಾಪ್
ಒಟ್ಟು ಹುದ್ದೆಗಳು – 484
ಅರ್ಜಿ ಸಲ್ಲಿಸುವ ಬಗೆ – Online
ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು SSLC ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ:
- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 26 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷಗಳು ಹಾಗೂ
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ 5 ವರ್ಷಗಳು
- ಅಂಗವಿಕಲ ಅಭ್ಯರ್ಥಿಗಳಿಗೆ: 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
ವೇತನಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ 14,500/- ರೂ ಗಳಿಂದ 28,145/- ರೂ ಗಳ ವರೆಗೆ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
ಅರ್ಜಿ ಶುಲ್ಕ:
- ಸಾಮಾನ್ಯ ಅಭ್ಯರ್ಥಿಗಳಿಗೆ ಹಿಂದುಳಿದ ವರ್ಗದ (2A/2B/3A/3B) ಅಭ್ಯರ್ಥಿಗಳಿಗೆ ರೂ. 850/-
- SC/ST/CAT-1/PWBD ಅಭ್ಯರ್ಥಿಗಳು ಮತ್ತು ಮಹಿಳಾ ಅಭ್ಯರ್ಥಿಗಳಿಗೆ ರೂ 175/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್ ಲೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ – 21 ಜೂನ್ 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 27 ಜೂನ್ 2024
ಸುಳ್ಯ
Puttur-ಸುಳ್ಯ ಮತ್ತು ಪುತ್ತೂರಿನಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ನೇರ ಸಂದರ್ಶನ
ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕ್ಷೇತ್ರದಲ್ಲಿ ಪ್ರಸಿದ್ಧಿ ಪಡೆದಿರುವ ‘ವಿದ್ಯಾಮಾತಾ ಅಕಾಡೆಮಿ’ ಸಂಸ್ಥೆಯು ತನ್ನ ವಿವಿಧ ಶಾಖೆ ಮತ್ತು ವಿಭಾಗಗಳಿಗೆ ಅಗತ್ಯವಿರುವ ನೌಕರರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ನೇರ ಸಂದರ್ಶನವನ್ನು ಆಯೋಜಿಸಿದೆ.
ಪುತ್ತೂರು: ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕ್ಷೇತ್ರದಲ್ಲಿ ಪ್ರಸಿದ್ಧಿ ಪಡೆದಿರುವ ‘ವಿದ್ಯಾಮಾತಾ ಅಕಾಡೆಮಿ’ ಸಂಸ್ಥೆಯು ತನ್ನ ವಿವಿಧ ಶಾಖೆ ಮತ್ತು ವಿಭಾಗಗಳಿಗೆ ಅಗತ್ಯವಿರುವ ನೌಕರರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ನೇರ ಸಂದರ್ಶನವನ್ನು ಆಯೋಜಿಸಿದೆ.
ಸಂಸ್ಥೆಯಲ್ಲಿ ಖಾಲಿ ಇರುವ ಕಂಪ್ಯೂಟರ್ ಶಿಕ್ಷಕಿ ಹಾಗೂ ಬಿಸಿನೆಸ್ ಡೆವಲಪ್ಮೆಂಟ್ ಆಫೀಸರ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತಿದ್ದು, ಆಸಕ್ತರು ಈ ಅವಕಾಶವನ್ನು ಪಡೆದುಕೊಳ್ಳಬಹುದಾಗಿದೆ.
ಸುಳ್ಯ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸಲು ಮಹಿಳಾ ಕಂಪ್ಯೂಟರ್ ಶಿಕ್ಷಕಿಯ ಹುದ್ದೆಗೆ ಅರ್ಹ ಅಭ್ಯರ್ಥಿಗಳ ಅಗತ್ಯವಿದೆ. ಅದೇ ರೀತಿ, ಪುತ್ತೂರು ಹಾಗೂ ಅದರ ಸುತ್ತಮುತ್ತಲಿನ ಭಾಗಗಳಲ್ಲಿ ಕಾರ್ಯನಿರ್ವಹಿಸಲು ಬಿಸಿನೆಸ್ ಡೆವಲಪ್ಮೆಂಟ್ ಆಫೀಸರ್ (Business Development Officer) ಹುದ್ದೆಗೆ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ತಮ್ಮ ವೃತ್ತಿಜೀವನವನ್ನು ಉತ್ತಮ ರೀತಿಯಲ್ಲಿ ರೂಪಿಸಿಕೊಳ್ಳಲು ಬಯಸುವ ಹಾಗೂ ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುವ ಅಭ್ಯರ್ಥಿಗಳಿಗೆ ಇದು ಸೂಕ್ತ ವೇದಿಕೆಯಾಗಿದೆ.
ಈ ಹುದ್ದೆಗಳಿಗೆ ಸಂಬಂಧಿಸಿದಂತೆ ನೇರ ಸಂದರ್ಶನವು ದಿನಾಂಕ 26-10-2026 ರಂದು ಬೆಳಿಗ್ಗೆ 10ಕ್ಕೆ ನಡೆಯಲಿದೆ.
ಉದ್ಯೋಗ
Puttur-Salesನಿಂದ Technicianವರೆಗೆ; ಪುತ್ತೂರಿನ ಶ್ರೀ ತಿರುಮಲಾ TVSನಲ್ಲಿ ಭರ್ಜರಿ Job Opening
ಉದ್ಯೋಗ ಹುಡುಕುತ್ತಿರುವ ಯುವಕ-ಯುವತಿಯರಿಗೆ ಇಲ್ಲಿದೆ ಉತ್ತಮ ಅವಕಾಶ. ದ್ವಿಚಕ್ರ ವಾಹನ ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವವರಿಗೆ ಪುತ್ತೂರಿನ ಶ್ರೀ ತಿರುಮಲಾ TVS ಸಂಸ್ಥೆಯಲ್ಲಿ ಸೇಲ್ಸ್, ಸರ್ವೀಸ್, ಅಕೌಂಟ್ಸ್, ಫೈನಾನ್ಸ್, ಇನ್ಶೂರೆನ್ಸ್ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಹಲವು ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ.
ಪುತ್ತೂರು: ಉದ್ಯೋಗ ಹುಡುಕುತ್ತಿರುವ ಯುವಕ-ಯುವತಿಯರಿಗೆ ಇಲ್ಲಿದೆ ಉತ್ತಮ ಅವಕಾಶ. ದ್ವಿಚಕ್ರ ವಾಹನ ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವವರಿಗೆ ಪುತ್ತೂರಿನ ಶ್ರೀ ತಿರುಮಲಾ TVS ಸಂಸ್ಥೆಯಲ್ಲಿ ಸೇಲ್ಸ್, ಸರ್ವೀಸ್, ಅಕೌಂಟ್ಸ್, ಫೈನಾನ್ಸ್, ಇನ್ಶೂರೆನ್ಸ್ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಹಲವು ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ.
TVS ಸಂಸ್ಥೆಯ ಪ್ರೀಮಿಯಂ, EV ಹಾಗೂ IC ವಿಭಾಗಗಳಲ್ಲಿ ಉದ್ಯೋಗಾವಕಾಶ ಕಲ್ಪಿಸಲಾಗಿದ್ದು, ‘ಪುತ್ತೂರಿನ ಅತಿದೊಡ್ಡ 2-ವೀಲರ್ ಜಾಬ್ ಓಪನಿಂಗ್’ ಎಂಬ ಘೋಷಣೆಯೊಂದಿಗೆ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ.
ಸೇಲ್ಸ್ ವಿಭಾಗದಲ್ಲಿ ಹಲವು ಅವಕಾಶ
ಪುತ್ತೂರು ಸೇಲ್ಸ್ ವಿಭಾಗದಲ್ಲಿ ಸೇಲ್ಸ್ ಎಕ್ಸಿಕ್ಯೂಟಿವ್, ಸೇಲ್ಸ್ ಮ್ಯಾನೇಜರ್, ಎಕ್ಸ್ಚೇಂಜ್ ಕೋಆರ್ಡಿನೇಟರ್, ಸೇಲ್ಸ್ ಟೆಲಿಕಾಲಿಂಗ್ (CRE), ಅಕೌಂಟ್ಸ್ ಮ್ಯಾನೇಜರ್, ಫೈನಾನ್ಸ್ ಮ್ಯಾನೇಜರ್, ರಿಸೆಪ್ಷನಿಸ್ಟ್, RTO ಎಕ್ಸಿಕ್ಯೂಟಿವ್, ಇನ್ವಾಯ್ಸ್ ಎಕ್ಸಿಕ್ಯೂಟಿವ್, ಅಕೌಂಟ್ಸ್ ಎಕ್ಸಿಕ್ಯೂಟಿವ್, ಫೈನಾನ್ಸ್ ಕೋಆರ್ಡಿನೇಟರ್ ಹಾಗೂ ಇನ್ಶೂರೆನ್ಸ್ ಎಕ್ಸಿಕ್ಯೂಟಿವ್ ಸೇರಿದಂತೆ ಹಲವು ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.

ಸರ್ವೀಸ್ ವಿಭಾಗದಲ್ಲೂ ಭರ್ಜರಿ ನೇಮಕಾತಿ
ಸರ್ವೀಸ್ ವಿಭಾಗದಲ್ಲಿ ಅಡ್ವೈಸರ್, ಫ್ಲೋರ್ ಸೂಪರ್ವೈಸರ್, ಟೆಕ್ನಿಷಿಯನ್, ಪಾರ್ಟ್ಸ್ ಪಿಕರ್, ಬಿಲ್ಲಿಂಗ್/ರಿಸೆಪ್ಷನಿಸ್ಟ್ ಎಕ್ಸಿಕ್ಯೂಟಿವ್, ಪಾರ್ಟ್ಸ್ ಮ್ಯಾನೇಜರ್, ವಾಷಿಂಗ್ ಸಿಬ್ಬಂದಿ, PDI ಟೆಕ್ನಿಷಿಯನ್, ಸರ್ವೀಸ್ ಮ್ಯಾನೇಜರ್, ನೆಟ್ವರ್ಕ್ ಕೋಆರ್ಡಿನೇಟರ್, ವಾರಂಟಿ ಇನ್ಚಾರ್ಜ್, ಅಕ್ಸಿಡೆಂಟ್ ಸೂಪರ್ವೈಸರ್, CRE ಟೆಲಿಕಾಲಿಂಗ್, CRM, PDI ಸೂಪರ್ವೈಸರ್ ಹಾಗೂ ಪೇಂಟರ್ ಮತ್ತು ಡೆಂಟಿಂಗ್ ಹುದ್ದೆಗಳಿಗೆ ಅವಕಾಶವಿದೆ.

ಬೆಳ್ಳಾರೆಯಲ್ಲೂ ಉದ್ಯೋಗದ ಬಾಗಿಲು ತೆರೆದಿದೆ
ಬೆಳ್ಳಾರೆ ಭಾಗದಲ್ಲಿಯೂ ಉದ್ಯೋಗಾವಕಾಶ ಕಲ್ಪಿಸಲಾಗಿದೆ. ಸರ್ವೀಸ್ ವಿಭಾಗದಲ್ಲಿ ಅಡ್ವೈಸರ್, ಪಾರ್ಟ್ಸ್ ಪಿಕರ್, ಬಿಲ್ಲಿಂಗ್/ರಿಸೆಪ್ಷನಿಸ್ಟ್ ಎಕ್ಸಿಕ್ಯೂಟಿವ್, ಫ್ಲೋರ್ ಸೂಪರ್ವೈಸರ್, ಟೆಕ್ನಿಷಿಯನ್ ಹಾಗೂ ವಾಷಿಂಗ್ ಸಿಬ್ಬಂದಿ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.

ಸೇಲ್ಸ್ ವಿಭಾಗದಲ್ಲಿ 6 ಸೇಲ್ಸ್ ಎಕ್ಸಿಕ್ಯೂಟಿವ್ ಹಾಗೂ 2 ರಿಸೆಪ್ಷನಿಸ್ಟ್ ಹುದ್ದೆಗಳಿಗೂ ಅವಕಾಶವಿದೆ.
PF, ESI ಜೊತೆಗೆ ₹25 ಸಾವಿರದವರೆಗೆ ಗಳಿಕೆ!
ಆಯ್ಕೆಯಾಗುವ ಅಭ್ಯರ್ಥಿಗಳಿಗೆ PF, ESI, ಸ್ಪಾಟ್ ಇನ್ಸೆಂಟಿವ್, ಮಾಸಿಕ ಹಾಗೂ ತ್ರೈಮಾಸಿಕ ಇನ್ಸೆಂಟಿವ್ ಸೌಲಭ್ಯಗಳು ದೊರೆಯಲಿವೆ. 25 ಕಿ.ಮೀ.ಗಿಂತ ಹೆಚ್ಚಿನ ಪ್ರಯಾಣಕ್ಕೆ ಪೆಟ್ರೋಲ್ ವೋಚರ್ ನೀಡಲಾಗುತ್ತಿದ್ದು, ಅರ್ಹ ಅಭ್ಯರ್ಥಿಗಳಿಗೆ ತಿಂಗಳಿಗೆ ₹25,000 ವರೆಗೆ ಗಳಿಸುವ ಅವಕಾಶ ಇದೆ ಎಂದು ಸಂಸ್ಥೆ ತಿಳಿಸಿದೆ.
ದ್ವಿಚಕ್ರ ವಾಹನ ಕ್ಷೇತ್ರದಲ್ಲಿ ಆಸಕ್ತಿ ಹೊಂದಿರುವವರು ಮಾತ್ರವಲ್ಲದೆ, ಸೇಲ್ಸ್, ಅಕೌಂಟ್ಸ್, ಫೈನಾನ್ಸ್, ಟೆಲಿಕಾಲಿಂಗ್, ಗ್ರಾಹಕ ಸೇವೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಉದ್ಯೋಗ ಹುಡುಕುತ್ತಿರುವವರೂ ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ.
ಉದ್ಯೋಗಾವಕಾಶ ಸೀಮಿತವಾಗಿರುವುದರಿಂದ ಆಸಕ್ತ ಅಭ್ಯರ್ಥಿಗಳು ಕೂಡಲೇ ಸಂಪರ್ಕಿಸಬಹುದು.
📞 ಸಂಪರ್ಕ: +91 82965 79206
📍 ವಿಳಾಸ: ಶ್ರೀ ತಿರುಮಲಾ TVS, ಬೈಪಾಸ್ ಜಂಕ್ಷನ್, ಮಂಜಲ್ಪಡ್ಡು, ಮೇನ್ ರೋಡ್, ಬೋಳ್ವಾರ್ ವೆಸ್ಟ್, ಪುತ್ತೂರು–574201.
ಉದ್ಯೋಗ
Constable recruitment: ಕಾನ್ಸ್ಟೆಬಲ್ ನೇಮಕಾತಿ: ಸೆ.28ರಿಂದ ದೈಹಿಕ ಪರೀಕ್ಷೆ; 3,991 ಹುದ್ದೆಗಳಿಗೆ 19,396 ಅಭ್ಯರ್ಥಿಗಳು
ರಾಜ್ಯ ಪೊಲೀಸ್ ಇಲಾಖೆಯ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ (ಆರ್ಪಿಸಿ ಮತ್ತು ಕೆಕೆ) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ದೇಹದಾರ್ಢ್ಯ ಪರೀಕ್ಷೆ (ಪಿಎಸ್ಟಿ) ಹಾಗೂ ಸಹಿಷ್ಣುತೆ ಪರೀಕ್ಷೆ (ಇಟಿ) ಸೆ.28ರಿಂದ ಆರಂಭವಾಗಲಿದೆ. ಪೊಲೀಸ್ ನೇಮಕಾತಿ ವಿಭಾಗವು ವಲಯವಾರು ವೇಳಾಪಟ್ಟಿಯನ್ನು ಪ್ರಕಟಿಸಿದೆ.
ಬೆಂಗಳೂರು, ಸೆ.25: ರಾಜ್ಯ ಪೊಲೀಸ್ ಇಲಾಖೆಯ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ (ಆರ್ಪಿಸಿ ಮತ್ತು ಕೆಕೆ) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ದೇಹದಾರ್ಢ್ಯ ಪರೀಕ್ಷೆ (ಪಿಎಸ್ಟಿ) ಹಾಗೂ ಸಹಿಷ್ಣುತೆ ಪರೀಕ್ಷೆ (ಇಟಿ) ಸೆ.28ರಿಂದ ಆರಂಭವಾಗಲಿದೆ. ಪೊಲೀಸ್ ನೇಮಕಾತಿ ವಿಭಾಗವು ವಲಯವಾರು ವೇಳಾಪಟ್ಟಿಯನ್ನು ಪ್ರಕಟಿಸಿದೆ.
ಈ ನೇಮಕಾತಿ ಪ್ರಕ್ರಿಯೆಯಡಿ ಒಟ್ಟು 3,991 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ರಾಜ್ಯಾದ್ಯಂತ 19,396 ಅಭ್ಯರ್ಥಿಗಳು ದೈಹಿಕ ಪರೀಕ್ಷೆಗೆ ಅರ್ಹತೆ ಪಡೆದಿದ್ದಾರೆ. ಉಳಿಕೆ ಮೂಲ ವೃಂದದ (ಆರ್ಪಿಸಿ) 3,395 ಹುದ್ದೆಗಳಿಗೆ 16,454 ಅಭ್ಯರ್ಥಿಗಳು ಹಾಗೂ ಕಲ್ಯಾಣ ಕರ್ನಾಟಕ (ಕೆಕೆ) ವೃಂದದ 596 ಹುದ್ದೆಗಳಿಗೆ 2,942 ಅಭ್ಯರ್ಥಿಗಳು ಪರೀಕ್ಷೆಗೆ ಆಯ್ಕೆಯಾಗಿದ್ದಾರೆ.
ಮಂಗಳೂರಿನಲ್ಲಿ 395 ಹುದ್ದೆಗಳಿಗೆ 1,803 ಅಭ್ಯರ್ಥಿಗಳು
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ (ಕಾರವಾರ), ಚಿಕ್ಕಮಗಳೂರು ಹಾಗೂ ಮಂಗಳೂರು ನಗರ ಘಟಕಗಳ ವ್ಯಾಪ್ತಿಯ 395 ಹುದ್ದೆಗಳಿಗೆ 1,803 ಅಭ್ಯರ್ಥಿಗಳು ದೈಹಿಕ ಪರೀಕ್ಷೆಯಲ್ಲಿ ಭಾಗವಹಿಸಲಿದ್ದಾರೆ. ಈ ಅಭ್ಯರ್ಥಿಗಳಿಗೆ ಸೆ.28ರಿಂದ ಅ.3ರವರೆಗೆ ಮಂಗಳೂರಿನ ಲಾಲ್ಬಾಗ್ನ ಮಂಗಳ ಕ್ರೀಡಾಂಗಣದಲ್ಲಿ ದೈಹಿಕ ಪರೀಕ್ಷೆ ನಡೆಯಲಿದೆ.
ಕರೆಪತ್ರ ಡೌನ್ಲೋಡ್ಗೆ ಸೂಚನೆ
ದೈಹಿಕ ಪರೀಕ್ಷೆಗೆ ಅರ್ಹತೆ ಪಡೆದ ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಅಧಿಕೃತ ವೆಬ್ಸೈಟ್ನಿಂದ ತಮ್ಮ ಕರೆಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳಬಹುದು. ಅಭ್ಯರ್ಥಿಗಳು ಕರೆಪತ್ರದಲ್ಲಿ ನಮೂದಿಸಿರುವ ದಿನಾಂಕದಂದು ನಿಗದಿತ ಪರೀಕ್ಷಾ ಕೇಂದ್ರಕ್ಕೆ ಕಡ್ಡಾಯವಾಗಿ ಹಾಜರಾಗುವಂತೆ ಪೊಲೀಸ್ ನೇಮಕಾತಿ ವಿಭಾಗ ಸೂಚಿಸಿದೆ.
ಕಾನ್ಸ್ಟೆಬಲ್ ಲಿಖಿತ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶ ಪ್ರಕಟ
ಇದೇ ವೇಳೆ, ಕೆಎಸ್ಆರ್ಪಿ, ಕೆಎಸ್ಐಎಸ್ಎಫ್ ಹಾಗೂ ಐಆರ್ಬಿ ಪೊಲೀಸ್ ಕಾನ್ಸ್ಟೆಬಲ್ ನೇಮಕಾತಿಗಾಗಿ ಸೆ.20ರಂದು ನಡೆದ ಲಿಖಿತ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶವನ್ನು ಕೇವಲ ಐದು ದಿನಗಳಲ್ಲಿ ಕೆಇಎ ಪ್ರಕಟಿಸಿದೆ.
ಪರೀಕ್ಷೆಯ ಫಲಿತಾಂಶಕ್ಕೆ ಆಕ್ಷೇಪಣೆಗಳಿದ್ದಲ್ಲಿ ಅಭ್ಯರ್ಥಿಗಳು ಸೆ.27ರೊಳಗೆ ನಿಗದಿತ ಲಿಂಕ್ ಮೂಲಕ ಸಲ್ಲಿಸಬಹುದು ಎಂದು ಕೆಇಎ ತಿಳಿಸಿದೆ.
ಉಳಿಕೆ ಮೂಲ ವೃಂದದ 1,13,390 ಹಾಗೂ ಕಲ್ಯಾಣ ಕರ್ನಾಟಕ ವೃಂದದ 33,061 ಅಭ್ಯರ್ಥಿಗಳು ಲಿಖಿತ ಪರೀಕ್ಷೆ ಬರೆದಿದ್ದರು. ಪರೀಕ್ಷೆ ನಡೆದ ದಿನವೇ ಎಲ್ಲ ಅಭ್ಯರ್ಥಿಗಳ ಒಎಂಆರ್ ಉತ್ತರ ಪತ್ರಿಕೆಗಳನ್ನು ಸ್ಕ್ಯಾನ್ ಮಾಡಿ ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಲಾಗಿತ್ತು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ.
-
ಮಂಗಳೂರು17 hours agoMangalore-ಮಂಗಳೂರು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಹೊಸ ತಿರುವು: ಮನೆಯವರ ಜೊತೆ ತೆರಳಲು ಯುವತಿ ನಕಾರ..!
-
ಅಂತರ ರಾಜ್ಯ22 hours agoFormer CBI officer-ಅಧಿಕಾರ, ಹಣ, ಐಷಾರಾಮಿ ಬದುಕಿಗೆ ಗುಡ್ಬೈ; ಗುಹೆಯಲ್ಲಿ ಧ್ಯಾನ ಮಾಡುತ್ತಿರುವ ಮಾಜಿ ಸಿಬಿಐ ಅಧಿಕಾರಿ..!
-
ಬಿಗ್ ನ್ಯೂಸ್24 hours agoBail rejected-ಸಿದ್ದರಾಮಯ್ಯ ವಿರುದ್ಧದ ‘ಸ್ಟಿಂಗ್’ ಪ್ರಕರಣ: ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿ 6 ಮಂದಿಯ ಜಾಮೀನು ಅರ್ಜಿ ವಜಾ
-
ಅಂತರ ರಾಜ್ಯ16 hours agoArrested-14ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿ ಅಪಹರಣಕಾರರ ಬೇಡಿಕೆಯಂತೆ 25ಲಕ್ಷ ರೂ ನೀಡಿದರೂ ಮರಳಿ ಬಾರದ ಶಿಕ್ಷಕನ ಪ್ರಕರಣಕ್ಕೆ ಮಹತ್ವದ ತಿರುವು..!
-
ಸಿನೆಮಾ22 hours agoDawood-‘ಧುರಂಧರ್ ‘ ನಲ್ಲಿ ದಾವೂದ್ ನ ತೋರಿಸಿದ ರೀತಿ ವಾಸ್ತವವಲ್ಲ…! ಮೋಸ್ಟ್ ವಾಂಟೆಡ್ ಪಾತಕಿ ಈಗ ಹೇಗಿದ್ದಾನೆ ಗೊತ್ತೇ..? ಮಾಜಿ FBI ಅಧಿಕಾರಿ ಹೇಳಿದ್ದೇನೂ..?
-
ನಿಧನ ವಾರ್ತೆ23 hours agoHeart attack-ಸಾಲಿಗ್ರಾಮ: ಕಚೇರಿಯಲ್ಲೇ ಹೃದಯಾಘಾತ; ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ ನಿಧನ
-
ನಿಧನ ವಾರ್ತೆ23 hours agoMudbidri-ಮಂಗಳೂರಿನಲ್ಲಿ ಮೇಲ್ಛಾವಣಿ ಕೆಲಸದ ವೇಳೆ ಅವಘಡ: ಮೂಡುಬಿದಿರೆ ತಾ.ಪಂ. ಮಾಜಿ ಉಪಾಧ್ಯಕ್ಷ ಸಾವು
-
ನಿಧನ ವಾರ್ತೆ23 hours agoOne-sided love-ಇನ್ಸ್ಟಾಗ್ರಾಮ್ ಇನ್ಫ್ಲುಯೆನ್ಸರ್ ಮೇಲಿನ ಒನ್ಸೈಡೆಡ್ ಲವ್; ಹಲ್ಲೆಗೊಳಗಾದ ಯುವಕ ಸಾವು















