Connect with us

ವರದಿಗಳು

ಕಾಸೆರಗೋಡು : ಪರ್ಸ್ ಪಿಕ್ ಪಾಕೆಟ್ ಮಾಡಿದ ಕಳ್ಳ ಅದರಲ್ಲಿದ್ದ ಹಣ ತಾನಿರಿಸಿ ಅಗತ್ಯ ದಾಖಲೆಗಳನ್ನು ಪೋಸ್ಟ್ ಮೂಲಕ ವಾರಸುದಾರರಿಗೆ ಮರಳಿಸಿದ …!

Published

on



Ad Widget

Ad Widget

Ad Widget

Ad Widget

ಕಾಸರಗೋಡು, ಅ. 7: ಪಿಕ್‌ಪಾಕೆಟ್ ಕಳ್ಳನೊಬ್ಬ ತಾನೂ ಪಿಕ್‌ ಪಾಕೆಟ್‌ ಮಾಡಿದ್ದ  ಪರ್ಸ್ ನಲ್ಲಿದ್ದ ಬೆಲೆ ಬಾಳುವ ದಾಖಲೆಗಳನ್ನು ಅಂಚೆ ಮೂಲಕ ಅದರ ವಾರಸುದಾರರಿಗೆ ಕಳುಹಿಸಿದ ಘಟನೆ  ಕಾಸರಗೋಡು ಜಿಲ್ಲೆಯಲ್ಲಿ ನಡೆದಿದೆ.

Ad Widget

Ad Widget

Ad Widget

Ad Widget

ಮೂರು ದಿನಗಳ ಹಿಂದೆ ಕಾಸರಗೋಡು ಆಸ್ಪತ್ರೆಗೆ ಆಗಮಿಸಿದ್ಧ ಪೊಯಿನಾಚಿಯ ಕೆ. ಮಾಧವನ್ ನಾಯರ್ ಅವರ ಪರ್ಸ್ ಬಸ್‌ನಲ್ಲಿ ಪಿಕ್‌ ಪಾಕೆಟ್‌ ಆಗಿತ್ತು. ಆ ಪರ್ಸ್‌ ನಲ್ಲಿ 7 ಸಾವಿರ ರೂಪಾಯಿ ಹಣ,  ಡೈವಿಂಗ್ ಲೈಸನ್ಸ್, ಪಾನ್ ಕಾರ್ಡ್, ಎಟಿಎಂ ಕಾರ್ಡ್, ಆಧಾರ್ ಕಾರ್ಡ್ ಇತ್ಯಾದಿ ಅಗತ್ಯ ದಾಖಲೆಗಳಿದ್ದವು.

Ad Widget

Ad Widget

Ad Widget alt="Ad Widget"/>

Ad Widget

ಪರ್ಸ್‌ ಕಳವಾಗಿರುವ ಕುರಿತು ಮಾಧವನ್ ನಾಯರ್ ಪತ್ರಿಕೆಯಲ್ಲಿ ಜಾಹೀರಾತು ನೀಡಿದ್ದು, ದುಡ್ಡನ್ನು ಇರಿಸಿಕೊಂಡು  ದಾಖಲೆ ಪತ್ರ ಸಿಕ್ಕಿದವರು ಮರಳಿಸುವಂತೆ ಕೋರಿದ್ದರು.ಆ ಜಾಹೀರಾತು ಪ್ರಕಟವಾದ ಎರಡು ದಿನದ ಬಳಿಕ ಆ ಎಲ್ಲ ದಾಖಲೆಗಳು ಅಂಚೆ ಮೂಲಕ ಅವರ ಕೈಸೇರಿದೆ. ಪರ್ಸ್‌ನಲ್ಲಿ 7 ಸಾವಿರ ರೂ. ಗಳನ್ನು ಕಳ್ಳ ಇರಿಸಿಕೊಂಡಿದ್ದಾನೆ.

Ad Widget

Ad Widget <> Ad Widget

Ad Widget
Click to comment

Leave a Reply

ಅಂತರ ರಾಜ್ಯ

ಕಾಸರಗೋಡು: ಆರ್‌ಎಸ್‌ಎಸ್‌ ವಕ್ತಾರರ ಭಾಗವಹಿಸುವಿಕೆ ವಿರೋಧಿಸಿ ಪ್ರತಿಭಟನೆ; ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳಿಗೆ ಗಾಯ

Published

on



Ad Widget

Ad Widget

Ad Widget

Ad Widget

ವಂದೇ ಮಾತರಂನ 150ನೇ ವಾರ್ಷಿಕೋತ್ಸವದ ಅಂಗವಾಗಿ ಕೇರಳ ಕೇಂದ್ರ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ಎರಡು ದಿನಗಳ ರಾಷ್ಟ್ರೀಯ ವಿಚಾರಸಂಕಿರಣದಲ್ಲಿ ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವಕ್ತಾರರು ಭಾಗವಹಿಸಿರುವುದನ್ನು ವಿರೋಧಿಸಿ ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಈ ವೇಳೆ ಪೊಲೀಸರು ಹಾಗೂ ವಿದ್ಯಾರ್ಥಿಗಳ ನಡುವೆ ನಡೆದ ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.

Ad Widget

Ad Widget

Ad Widget

Ad Widget

ಕಾಸರಗೋಡು, ಅ.6: ವಂದೇ ಮಾತರಂನ 150ನೇ ವಾರ್ಷಿಕೋತ್ಸವದ ಅಂಗವಾಗಿ ಕೇರಳ ಕೇಂದ್ರ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ಎರಡು ದಿನಗಳ ರಾಷ್ಟ್ರೀಯ ವಿಚಾರಸಂಕಿರಣದಲ್ಲಿ ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವಕ್ತಾರರು ಭಾಗವಹಿಸಿರುವುದನ್ನು ವಿರೋಧಿಸಿ ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಈ ವೇಳೆ ಪೊಲೀಸರು ಹಾಗೂ ವಿದ್ಯಾರ್ಥಿಗಳ ನಡುವೆ ನಡೆದ ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಸಾಹಿತ್ಯ ಅಕಾಡೆಮಿ, ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಹಾಗೂ ಕೇರಳ ಕೇಂದ್ರ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಈ ವಿಚಾರಸಂಕಿರಣ ಆಯೋಜಿಸಲಾಗಿದೆ. ಆರ್‌ಎಸ್‌ಎಸ್‌ನ ಬೌದ್ಧಿಕ ವಿಭಾಗವೆಂದು ಪರಿಗಣಿಸಲಾಗುವ ಪ್ರಜ್ಞಾ ಪ್ರವಾಹದ ರಾಷ್ಟ್ರೀಯ ಸಂಚಾಲಕ ಜೆ. ನಂದಕುಮಾರ್ ಅವರು ವಿಚಾರಸಂಕಿರಣದಲ್ಲಿ ಮುಖ್ಯ ಭಾಷಣ ಮಾಡುತ್ತಿರುವುದನ್ನು ವಿರೋಧಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

Ad Widget

Ad Widget <> Ad Widget

ಕಾರ್ಯಕ್ರಮ ನಡೆಯುತ್ತಿದ್ದ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳು ಪ್ರವೇಶಿಸಲು ಯತ್ನಿಸಿದಾಗ ಪೊಲೀಸರು ಅವರನ್ನು ತಡೆದರು. ಈ ವೇಳೆ ಪೊಲೀಸರು ಮತ್ತು ವಿದ್ಯಾರ್ಥಿಗಳ ನಡುವೆ ಘರ್ಷಣೆ ಸಂಭವಿಸಿದೆ.



Ad Widget

ಘರ್ಷಣೆಯಲ್ಲಿ ಎಸ್‌ಎಫ್‌ಐ ಕೇರಳ ಕೇಂದ್ರ ವಿಶ್ವವಿದ್ಯಾಲಯ ಘಟಕದ ಕಾರ್ಯದರ್ಶಿ ಸೈಯದ್ ಅಲಿ, ಪ್ಲಾಂಟ್ ಸೈನ್ಸ್ ವಿಭಾಗದ ಅಭಿರಾಗ್ ಹಾಗೂ ಇಂಟರ್‌ನ್ಯಾಷನಲ್ ರಿಲೇಶನ್ಸ್ ವಿಭಾಗದ ಮುರಳೀಕೃಷ್ಣನ್ ಎಂಬ ಮೂವರು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ.

Ad Widget

Ad Widget

ಇನ್ನು ವಿಚಾರಸಂಕಿರಣದಲ್ಲಿ ಭಾಗವಹಿಸಿದ್ದ ಗಣ್ಯರು ಮಧ್ಯಾಹ್ನ ಕಾರ್ಯಕ್ರಮದ ಸ್ಥಳದಿಂದ ಹೊರಬರುವಾಗಲೂ ವಿದ್ಯಾರ್ಥಿಗಳು ಪ್ರತಿಭಟನೆ ಮುಂದುವರಿಸಿ ಘೋಷಣೆಗಳನ್ನು ಕೂಗಿದರು.

Ad Widget
Continue Reading

ಅಂತರ ರಾಜ್ಯ

Fire truck-ಬಿಜೆಪಿ ಶಾಸಕನ ಬಂಗಲೆ ತೊಳೆಯಲು ಅಗ್ನಿಶಾಮಕ ವಾಹನ ಬಳಕೆ; ವಿಡಿಯೋ ವೈರಲ್ ಬಳಿಕ ₹2,700 ದಂಡ

Published

on



Ad Widget

Ad Widget

Ad Widget

Ad Widget

ಗುಜರಾತ್‌ನ ದಾಹೋದ್ ಜಿಲ್ಲೆಯಲ್ಲಿ ಬಿಜೆಪಿ ಶಾಸಕರೊಬ್ಬರ ಬಂಗಲೆಯನ್ನು ಸ್ವಚ್ಛಗೊಳಿಸಲು ಅಗ್ನಿಶಾಮಕ ದಳದ ವಾಹನ ಬಳಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸಾರ್ವಜನಿಕರಿಂದಲೂ ಆಕ್ಷೇಪ ವ್ಯಕ್ತವಾಗಿದೆ.

Ad Widget

Ad Widget

Ad Widget

Ad Widget

ದಾಹೋದ್: ಗುಜರಾತ್‌ನ ದಾಹೋದ್ ಜಿಲ್ಲೆಯಲ್ಲಿ ಬಿಜೆಪಿ ಶಾಸಕರೊಬ್ಬರ ಬಂಗಲೆಯನ್ನು ಸ್ವಚ್ಛಗೊಳಿಸಲು ಅಗ್ನಿಶಾಮಕ ದಳದ ವಾಹನ ಬಳಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸಾರ್ವಜನಿಕರಿಂದಲೂ ಆಕ್ಷೇಪ ವ್ಯಕ್ತವಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ದೇವಗಢ್ ಬಾರಿಯಾ ಪುರಸಭೆಯ ಅಗ್ನಿಶಾಮಕ ವಾಹನವು ಧನ್‌ಪುರ್ ತಾಲೂಕಿನಲ್ಲಿರುವ ಬಿಜೆಪಿ ಶಾಸಕ ಬಚುಭಾಯ್ ಖಬಾದ್ ಅವರ ನಿವಾಸದ ಬಳಿ ನಿಂತಿದ್ದು, ಸಿಬ್ಬಂದಿ ಬಂಗಲೆಯ ಆವರಣ ಹಾಗೂ ಗೋಡೆಗಳಿಗೆ ಪೈಪ್ ಮೂಲಕ ನೀರು ಸಿಂಪಡಿಸುತ್ತಿರುವುದು ವಿಡಿಯೋದಲ್ಲಿ ಕಂಡುಬಂದಿದೆ.

Ad Widget

Ad Widget <> Ad Widget

ವಿಡಿಯೋ ವೈರಲ್ ಆದ ಬಳಿಕ ತುರ್ತು ಸೇವೆಗೆ ಮೀಸಲಾಗಿರುವ ಅಗ್ನಿಶಾಮಕ ವಾಹನವನ್ನು ವೈಯಕ್ತಿಕ ಬಳಕೆಗೆ ಬಳಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಶಾಸಕ ಖಬಾದ್ ಅವರಿಂದ ₹2,700 ದಂಡ ವಸೂಲಿ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.



Ad Widget

ಈ ಕುರಿತು ಎಎನ್‌ಐ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ದೇವಗಢ್ ಬಾರಿಯಾ ಪುರಸಭೆ ಅಧ್ಯಕ್ಷ ಘಮೇಶ್ ಕಲಾಲ್, ಅಗ್ನಿಶಾಮಕ ವಾಹನ ಕಳುಹಿಸುವಂತೆ ಶಾಸಕರು ಕರೆ ಮಾಡಿದ್ದರು. ಯಾವುದಾದರೂ ಗಂಭೀರ ಘಟನೆ ಸಂಭವಿಸಿರಬಹುದು ಎಂದು ಭಾವಿಸಿ ತಕ್ಷಣ ಅಗ್ನಿಶಾಮಕ ದಳವನ್ನು ಸಂಪರ್ಕಿಸಿ ವಾಹನ ಕಳುಹಿಸಿದ್ದಾಗಿ ತಿಳಿಸಿದ್ದಾರೆ.

Ad Widget

Ad Widget

ಆದರೆ, ಬಂಗಲೆ ಸ್ವಚ್ಛಗೊಳಿಸುವ ಉದ್ದೇಶಕ್ಕಾಗಿ ಅಗ್ನಿಶಾಮಕ ವಾಹನವನ್ನು ಬಳಸಲಾಗುತ್ತಿದೆ ಎಂಬುದು ತಮಗೆ ತಿಳಿದಿರಲಿಲ್ಲ ಎಂದು ಅಗ್ನಿಶಾಮಕ ಅಧಿಕಾರಿ ಸ್ಪಷ್ಟಪಡಿಸಿದ್ದಾರೆ.

ಬಂಗಲೆ ತೊಳೆಯಲು ವಾಹನ ಬಳಸಲಾಗುತ್ತದೆ ಎಂಬ ಮಾಹಿತಿ ಮುಂಚಿತವಾಗಿ ನೀಡಲಾಗಿರಲಿಲ್ಲ. ಈ ಕಾರಣದಿಂದ ಅಚಾತುರ್ಯ ಸಂಭವಿಸಿದೆ. ಇದೀಗ ತಪ್ಪಿತಸ್ಥರಿಂದ ದಂಡ ವಸೂಲಿ ಮಾಡಲಾಗಿದೆ ಎಂದು ಅಗ್ನಿಶಾಮಕ ಇಲಾಖೆ ತಿಳಿಸಿದೆ.

ವಿಡಿಯೋದಲ್ಲಿ ಏನಿದೆ?
ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ ಬೃಹತ್ ಬಂಗಲೆಯೊಂದರ ಮುಂಭಾಗ ಅಗ್ನಿಶಾಮಕ ವಾಹನ ನಿಂತಿರುವುದು ಕಾಣಿಸುತ್ತದೆ. ಅಗ್ನಿಶಾಮಕ ಸಿಬ್ಬಂದಿ ಪೈಪ್‌ಗಳ ಮೂಲಕ ಬಂಗಲೆಯ ಕಂಪೌಂಡ್ ಹಾಗೂ ಗೋಡೆಗಳಿಗೆ ನೀರು ಸಿಂಪಡಿಸಿ ಸ್ವಚ್ಛಗೊಳಿಸುತ್ತಿರುವ ದೃಶ್ಯಗಳು ವಿಡಿಯೋದಲ್ಲಿವೆ.

Ad Widget
Continue Reading

ಸಿನೆಮಾ

Drishyam 3-ಮಲಯಾಳಂ ನ ದಾಖಲೆ ಮುರಿದು ಬಾಕ್ಸ್ ಆಫೀಸ್‌ನಲ್ಲಿ ‘ದೃಶ್ಯಂ 3’ ಧಮಾಕಾ; 4 ದಿನದಲ್ಲೇ ₹300 ಕೋಟಿ ಕ್ಲಬ್‌ಗೆ ಎಂಟ್ರಿ..!

Published

on



Ad Widget

Ad Widget

Ad Widget

Ad Widget

ಅಜಯ್ ದೇವಗನ್ ಅಭಿನಯದ ‘ದೃಶ್ಯಂ 3: ದಿ ಕನ್‌ಕ್ಲೂಷನ್’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಪ್ರದರ್ಶನ ಮುಂದುವರಿಸಿದ್ದು, ಬಿಡುಗಡೆಯಾದ ಕೇವಲ ನಾಲ್ಕು ದಿನಗಳಲ್ಲಿ ವಿಶ್ವಾದ್ಯಂತ ₹300 ಕೋಟಿ ಗಡಿ ದಾಟಿದೆ. ಚಿತ್ರದ ಒಟ್ಟು ವಿಶ್ವಾದ್ಯಂತ ಗಳಿಕೆ ಇದೀಗ ₹303 ಕೋಟಿ ತಲುಪಿದೆ.

Ad Widget

Ad Widget

Ad Widget

Ad Widget

ಮುಂಬೈ: ಅಜಯ್ ದೇವಗನ್ ಅಭಿನಯದ ‘ದೃಶ್ಯಂ 3: ದಿ ಕನ್‌ಕ್ಲೂಷನ್’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಪ್ರದರ್ಶನ ಮುಂದುವರಿಸಿದ್ದು, ಬಿಡುಗಡೆಯಾದ ಕೇವಲ ನಾಲ್ಕು ದಿನಗಳಲ್ಲಿ ವಿಶ್ವಾದ್ಯಂತ ₹300 ಕೋಟಿ ಗಡಿ ದಾಟಿದೆ. ಚಿತ್ರದ ಒಟ್ಟು ವಿಶ್ವಾದ್ಯಂತ ಗಳಿಕೆ ಇದೀಗ ₹303 ಕೋಟಿ ತಲುಪಿದೆ.

Ad Widget

Ad Widget

Ad Widget alt="Ad Widget"/>

Ad Widget

ಬಿಡುಗಡೆಯ ನಾಲ್ಕನೇ ದಿನ ಚಿತ್ರವು ಭಾರತದಲ್ಲಿ 16,274 ಪ್ರದರ್ಶನಗಳಿಂದ ಸುಮಾರು ₹21 ಕೋಟಿ ನಿವ್ವಳ ಗಳಿಸಿದೆ. ಇದರೊಂದಿಗೆ ಭಾರತದಲ್ಲಿ ಚಿತ್ರದ ಒಟ್ಟು ನಿವ್ವಳ ಗಳಿಕೆ ₹197.50 ಕೋಟಿಗೆ ತಲುಪಿದ್ದು, ಒಟ್ಟು ಕಲೆಕ್ಷನ್ ಸುಮಾರು ₹237 ಕೋಟಿ ಆಗಿದೆ.

Ad Widget

Ad Widget <> Ad Widget

ಚಿತ್ರಕ್ಕೆ ಭಾರತ ಮಾತ್ರವಲ್ಲದೆ ಸಾಗರೋತ್ತರ ಮಾರುಕಟ್ಟೆಯಲ್ಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ನಾಲ್ಕನೇ ದಿನ ವಿದೇಶಿ ಮಾರುಕಟ್ಟೆಯಲ್ಲಿ ಸುಮಾರು ₹5 ಕೋಟಿ ಗಳಿಸಿದ್ದು, ಇದರೊಂದಿಗೆ ವಿದೇಶದಲ್ಲಿನ ಒಟ್ಟು ಗಳಿಕೆ ₹66 ಕೋಟಿ ತಲುಪಿದೆ.



Ad Widget

ಮಲಯಾಳಂ ‘ದೃಶ್ಯಂ 3’ ಗಳಿಕೆಯನ್ನೂ ಮೀರಿಸಿದ ಹಿಂದಿ ಸಿನಿಮಾ
ಅಜಯ್ ದೇವಗನ್ ಅಭಿನಯದ ಹಿಂದಿ ‘ದೃಶ್ಯಂ 3’ಗೂ ಮುನ್ನ ಮೋಹನ್‌ಲಾಲ್ ನಟನೆಯ ಮಲಯಾಳಂ ‘Drishyam 3: The Past Never Stays Silent’ ಬಿಡುಗಡೆಯಾಗಿತ್ತು. ಆ ಚಿತ್ರವು ವಿಶ್ವಾದ್ಯಂತ ₹237.70 ಕೋಟಿ ಗಳಿಕೆ ದಾಖಲಿಸಿತ್ತು ಎಂದು ವರದಿಯಾಗಿದೆ.

Ad Widget

Ad Widget

ಬಾಕ್ಸ್ ಆಫೀಸ್ ಗಳಿಕೆಯ ವಿವರ
ಕೇರಳ: ಸುಮಾರು ₹86.25 ಕೋಟಿ
ಭಾರತದ ಇತರ ಭಾಗಗಳು: ₹37.52 ಕೋಟಿ
ವಿದೇಶಿ ಮಾರುಕಟ್ಟೆ: ₹109.15 ಕೋಟಿ

ಮಧ್ಯಪ್ರಾಚ್ಯ, ಉತ್ತರ ಅಮೆರಿಕಾ ಹಾಗೂ ಯುಕೆ ಮಾರುಕಟ್ಟೆಗಳಲ್ಲಿ ಚಿತ್ರದ ಗಳಿಕೆ ಗಮನಾರ್ಹವಾಗಿದ್ದು, ವಿದೇಶಿ ಕಲೆಕ್ಷನ್ ಹೆಚ್ಚಲು ಈ ಪ್ರದೇಶಗಳ ಕೊಡುಗೆ ಪ್ರಮುಖವಾಗಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading