ಮಂಗಳೂರು
Ullala Mascare: ಬೆಟ್ಟವನ್ನು ಕಡಿದು ಮನೆಯನ್ನು ಕಟ್ಟಿದ್ದಾರೆ – ಮನೆ ಕಟ್ಟುವಾಗ ಅಡಿಪಾಯ ಸರಿಯಾಗಿ ಹಾಕಿಲ್ಲ : ಕೃಷ್ಣ ಭೈರೇ ಗೌಡ
ಮಂಗಳೂರು :ಉಳ್ಳಾಲದ ಮದನಿನಗರದಲ್ಲಿ ಮನೆ ಕುಸಿದು ನಾಲ್ವರು ಸಾವನ್ನಪ್ಪಿದ್ದ ಘಟನೆ ಇಂದು ಮುಂಜಾನೆ ನಡೆದಿದ್ದು, ಘಟನಾ ಸ್ಥಳಕ್ಕೆ ಕಂದಾಯ ಸಚಿವ ಕೃಷ್ಣ ಭೈರೇಗೌಡ ಇಂದು ಸಂಜೆ ಭೇಟಿ ನೀಡಿದರು. ಈ ವೇಳೆ ಅವರಿಗೆ ಉಳ್ಳಾಲ ಶಾಸಕ,ಸ್ಪೀಕರ್ ಯುಟಿ ಖಾದರ್, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಜತೆಯಾದರು. ಈ ವೇಳೆ ಸೂಕ್ತ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸಚಿವ ಕೃಷ್ಣ ಭೈರೇ ಗೌಡ ಜಿಲ್ಲಾಧಿಕಾರಿಗೆ ಸೂಚಿಸಿದರು.

ಘಟನಾ ಸ್ಥಳವನ್ನು ಪರಿಶೀಲಿಸಿ ಮಾತನಾಡಿದ ಸಚಿವರು “ ಉಳ್ಳಾಲದಲ್ಲಿ ನಡೆದ ಘಟನೆಯಲ್ಲಿ ನಾಲ್ಕು ಜನ ಮೃತರಾಗಿದ್ದಾರೆ.ಈ ಕುಟುಂಬದಲ್ಲಿ ಒಬ್ಬರು ಮಾತ್ರ ಬದುಕಿ ಉಳಿದಿದ್ದಾರೆ. ಸರ್ಕಾರದ ಪರವಾಗಿ ನಾನು ವಿಷಾದ ವ್ಯಕ್ತಪಡಿಸುತ್ತೇನೆ. ಸಭಾಧ್ಯಕ್ಷರ ಮಾರ್ಗದರ್ಶನದಲ್ಲಿ ಸಂತ್ರಸ್ತ ಕುಟುಂಬಕ್ಕೆ ಸರ್ಕಾರ ಶೀಘ್ರ ಪರಿಹಾರ ನೀಡುವ ವ್ಯವಸ್ಥೆ ಮಾಡುತ್ತೇನೆ” ಎಂದರು.

ಕಡಲು ಕೊರೆತ ಸಮಸ್ಯೆಯನ್ನು ಕರಾವಳಿ ಭಾಗದಲ್ಲಿ 320km ಕಡಲು ತೀರ ಇದೆ. ಸುಮಾರು ಕಡೆ ಕಡಲು ಕೊರೆತದಿಂದ ತೊಂದರೆ ಆಗುತ್ತಿ.ಕೆಲವು ಯೋಜನೆಗಳಲ್ಲಿ ಪ್ರಯೋಜನ ಅಗಿದೆ. ಇನ್ನೂ ಕೆಲವು ಯೋಜನೆ ಉಪಯೋಗ ಅಗಿಲ್ಲ. ಈಗಾಗಲೇ ಈ ಬಗ್ಗೆ ಸ್ವೀಕರ್ ಜೊತೆ ಚರ್ಚೆ ಮಾಡಲಾಗಿದೆ. ಅದಷ್ಟು ಶೀಘ್ರ ವಾಗಿ ಈ ಬಗ್ಗೆ ಸರ್ಕಾರ ಗಮನ ಹರಿಸಲಿದೆ ಎಂದರು.

ಭೌಗೋಳಿಕ ಸರ್ವೆ ಇಲಾಖೆ ಜೊತೆ ಮಾತನಾಡಿ ಭೂ ಕುಸಿತ ಪ್ರದೇಶವನ್ನು ಪರಿಶೀಲನೆ ಮಾಡಲಿದ್ದೇವೆ.ಈಗಾಗಲೇ ಅನೇಕ ಸ್ಥಳಗಳನ್ನು ಗುರುತಿಸಲಾಗಿದೆ. ತೀವ್ರ ಸ್ವರೂಪದ ಅಪಾಯಕಾರಿ ಸ್ಥಳಗಳನ್ನು ಗುರುತಿಸಿ ಜಿಲ್ಲಾಡಳಿತಕ್ಕೆ ತಿಳಿಸಿದ್ದೇವೆ. ಇಲ್ಲಿಗೆ ವಿಶೇಷ ಅನುದಾನವನ್ನು ನೀಡಲು ಯೋಜನೆ ಇದೆ.ಎಲ್ಲಾ ಕಡೆಗಳಲ್ಲಿ ತಡೆಗೋಡೆ ನಿರ್ಮಿಸಲು ಸಾಧ್ಯವಿಲ್ಲ. ಇದಕ್ಕೆ ೮೦ ಕೋಟಿ ಅನುದಾನವನ್ನು ಇಲಾಖೆಗೆ ಹಾಕಲಾಗಿದೆ. ಇದನ್ನು ಅದಷ್ಟು ಬೇಗ ಬಿಡುಗಡೆ ಮಾಡಲಾಗುತ್ತದೆ ಎಂದರು.

“ಅದರೆ ಈ ಬೆಟ್ಟವನ್ನು ಕಡಿದು ಮನೆಯನ್ನು ಕಟ್ಟಿದ್ದಾರೆ. ಮನೆ ಕಟ್ಟುವಾಗ ಅಡಿಪಾಯ ಸರಿಯಾಗಿ ಹಾಕಿಲ್ಲ. ತಡೆಗೋಡೆಯು ಸರಿಯಾಗಿ ಮಾಡಿಲ್ಲ. ಮನೆ ಕಟ್ಟುವಾಗ ಸರಿಯಾಗಿ ಇಲ್ಲಂದ್ರೆ ಇಂತಹ ಘಟನೆಗಳು ಅಗುತ್ತದೆ.ಅದರೆ ರಸ್ತೆ ಬದಿಯಲ್ಲಿ ಭೂ ಕುಸಿತಕ್ಕೆ ಎಲ್ಲಾ ಜಿಲ್ಲೆಗಳಿಗೆ ಅನುದಾನವನ್ನು ಕೊಡುತ್ತೇವೆ” ಎಂದರು.
ಮಂಗಳೂರು
D.K. Shivakumar-ಅ.15ರಂದು ಮಂಗಳೂರು, ಉಡುಪಿ ಜಿಲ್ಲೆಗೆ ಡಿ.ಕೆ. ಶಿವಕುಮಾರ್ ಭೇಟಿ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಕ್ಟೋಬರ್ 15ರ ಗುರುವಾರ ಮಂಗಳೂರು ಹಾಗೂ ಉಡುಪಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಗುರುವಾರ ಮಧ್ಯಾಹ್ನ 4.10ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಅವರು, ಸಂಜೆ 4.40ಕ್ಕೆ ಕಾಪು ಉಚ್ಚಿಲದಲ್ಲಿ ನಡೆಯುವ ದಸರಾ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ, ಮಹಿಳಾ ದಸರಾವನ್ನು ಉದ್ಘಾಟಿಸಲಿದ್ದಾರೆ.
ಮಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಕ್ಟೋಬರ್ 15ರ ಗುರುವಾರ ಮಂಗಳೂರು ಹಾಗೂ ಉಡುಪಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಗುರುವಾರ ಮಧ್ಯಾಹ್ನ 4.10ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಅವರು, ಸಂಜೆ 4.40ಕ್ಕೆ ಕಾಪು ಉಚ್ಚಿಲದಲ್ಲಿ ನಡೆಯುವ ದಸರಾ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ, ಮಹಿಳಾ ದಸರಾವನ್ನು ಉದ್ಘಾಟಿಸಲಿದ್ದಾರೆ.
ಬಳಿಕ ಸಂಜೆ 6.30ಕ್ಕೆ ಮಂಗಳೂರಿನಲ್ಲಿ ನಡೆಯುವ ಮಂಗಳೂರು ದಸರಾ ನವರಾತ್ರಿ ಮಹೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ. ರಾತ್ರಿ 8 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ತೆರಳಲಿರುವ ಅವರು, ಅಲ್ಲಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ತಿಳಿದುಬಂದಿದೆ.
ಮಂಗಳೂರು
Dakshina Kannada-ದಕ್ಷಿಣ ಕನ್ನಡ ಜಿಲ್ಲೆಗೆ ‘ಮಂಗಳೂರು ಜಿಲ್ಲೆ’ ಎಂದು ಮರುನಾಮಕರಣ ಪ್ರಸ್ತಾವ: ಸಾರ್ವಜನಿಕ ಅಭಿಪ್ರಾಯ ಆಹ್ವಾನಿಸಿದ ಸರ್ಕಾರ
ದಕ್ಷಿಣ ಕನ್ನಡ ಜಿಲ್ಲೆಯನ್ನು ‘ಮಂಗಳೂರು ಜಿಲ್ಲೆ’ ಎಂದು ಮರುನಾಮಕರಣ ಮಾಡಲು ರಾಜ್ಯ ಸರ್ಕಾರ ಉದ್ದೇಶಿಸಿದ್ದು, ಈ ಕುರಿತು ಸಾರ್ವಜನಿಕರಿಂದ ಸಲಹೆ ಹಾಗೂ ಅಭಿಪ್ರಾಯಗಳನ್ನು ಆಹ್ವಾನಿಸಿದೆ. ಅಧಿಸೂಚನೆ ರಾಜ್ಯ ಪತ್ರದಲ್ಲಿ ಪ್ರಕಟಗೊಂಡ ದಿನಾಂಕದಿಂದ 30 ದಿನಗಳೊಳಗೆ ಸಾರ್ವಜನಿಕರು ತಮ್ಮ ಅಭಿಪ್ರಾಯಗಳನ್ನು ಸಲ್ಲಿಸಬಹುದಾಗಿದೆ.
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯನ್ನು ‘ಮಂಗಳೂರು ಜಿಲ್ಲೆ’ ಎಂದು ಮರುನಾಮಕರಣ ಮಾಡಲು ರಾಜ್ಯ ಸರ್ಕಾರ ಉದ್ದೇಶಿಸಿದ್ದು, ಈ ಕುರಿತು ಸಾರ್ವಜನಿಕರಿಂದ ಸಲಹೆ ಹಾಗೂ ಅಭಿಪ್ರಾಯಗಳನ್ನು ಆಹ್ವಾನಿಸಿದೆ. ಅಧಿಸೂಚನೆ ರಾಜ್ಯ ಪತ್ರದಲ್ಲಿ ಪ್ರಕಟಗೊಂಡ ದಿನಾಂಕದಿಂದ 30 ದಿನಗಳೊಳಗೆ ಸಾರ್ವಜನಿಕರು ತಮ್ಮ ಅಭಿಪ್ರಾಯಗಳನ್ನು ಸಲ್ಲಿಸಬಹುದಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಗೆ ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವಂತೆ ರಾಜಕಾರಣಿಗಳು, ಸಾಮಾಜಿಕ ಚಿಂತಕರು, ಸರ್ವಧರ್ಮಗಳ ಹಿರಿಯರು ಹಾಗೂ ಜಿಲ್ಲೆಯ ವಿವಿಧ ಸಂಘಟನೆಗಳಿಂದ ಸರ್ಕಾರಕ್ಕೆ ಹಲವು ಮನವಿಗಳು ಸಲ್ಲಿಕೆಯಾಗಿವೆ. ಸಾರ್ವಜನಿಕರ ಬೇಡಿಕೆ ಹಾಗೂ ಆಡಳಿತಾತ್ಮಕ ಅನುಕೂಲತೆಗಳನ್ನು ಪರಿಗಣಿಸಿ ಈ ಪ್ರಸ್ತಾವವನ್ನು ಸರ್ಕಾರ ಮುಂದಿಟ್ಟಿದೆ.
ಭಾರತ ಸರ್ಕಾರದ ಗೃಹ ಸಚಿವಾಲಯದ 1953ರ ಸೆಪ್ಟೆಂಬರ್ 11ರ ಮಾರ್ಗಸೂಚಿಗಳು ಹಾಗೂ ಕರ್ನಾಟಕ ಭೂ ಕಂದಾಯ ಅಧಿನಿಯಮ, 1964ರ ಸೆಕ್ಷನ್ 4(4A) ಅಡಿಯಲ್ಲಿ ಲಭ್ಯವಿರುವ ಅಧಿಕಾರಗಳನ್ವಯ ಮರುನಾಮಕರಣ ಪ್ರಕ್ರಿಯೆ ಕೈಗೊಳ್ಳಲು ಉದ್ದೇಶಿಸಲಾಗಿದೆ.
ಈ ಸಂಬಂಧ ಸಾರ್ವಜನಿಕರು ತಮ್ಮ ಸಲಹೆ ಮತ್ತು ಆಕ್ಷೇಪಣೆಗಳನ್ನು ಲಿಖಿತ ರೂಪದಲ್ಲಿ ಅಥವಾ ಇ-ಮೇಲ್ ಮೂಲಕ ಸರ್ಕಾರಕ್ಕೆ ಸಲ್ಲಿಸಬಹುದು. ಸ್ವೀಕೃತವಾಗುವ ಅಭಿಪ್ರಾಯಗಳನ್ನು ಪರಿಶೀಲಿಸಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಅಭಿಪ್ರಾಯ ಸಲ್ಲಿಸಬೇಕಾದ ವಿಳಾಸಗಳು
- ಮುಖ್ಯಮಂತ್ರಿಯವರ ಸಚಿವಾಲಯ, ಕೊಠಡಿ ಸಂಖ್ಯೆ: 235, 2ನೇ ಮಹಡಿ, ವಿಧಾನಸೌಧ, ಬೆಂಗಳೂರು – 560001; ಇ-ಮೇಲ್: cm.kar@nic.in
- ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ, ಕಂದಾಯ ಇಲಾಖೆ, ಕೊಠಡಿ ಸಂಖ್ಯೆ: 711, 7ನೇ ಮಹಡಿ, ಬಹುಮಹಡಿಗಳ ಕಟ್ಟಡ, ಡಾ. ಬಿ.ಆರ್. ಅಂಬೇಡ್ಕರ್ ವೀದಿ, ಬೆಂಗಳೂರು – 560001; ಇ-ಮೇಲ್: Prs.revenue@gmail.com
- ಗಮನಿಸಿ: ಸಾರ್ವಜನಿಕರು ತಮ್ಮ ಅಭಿಪ್ರಾಯಗಳನ್ನು ಅಧಿಸೂಚನೆ ರಾಜ್ಯ ಪತ್ರದಲ್ಲಿ ಪ್ರಕಟಗೊಂಡ ದಿನಾಂಕದಿಂದ 30 ದಿನಗಳೊಳಗೆ ಸಲ್ಲಿಸಬೇಕು.
ಮಂಗಳೂರು
Raghupti Bhat-2028ರ ಚುನಾವಣೆಯಲ್ಲಿ ಸ್ಪರ್ಧೆ ಖಚಿತ; ಕಾಂಗ್ರೆಸ್ ಸೇರ್ಪಡೆ ಬಗ್ಗೆ ಏನು ಹೇಳಿದ್ರು ರಘುಪತಿ ಭಟ್
ಕಾಂಗ್ರೆಸ್ ಸೇರ್ಪಡೆಯ ಕುರಿತು ಇನ್ನೂ ಯಾವುದೇ ಅಂತಿಮ ನಿರ್ಧಾರ ಕೈಗೊಂಡಿಲ್ಲ. ಆದರೆ 2028ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ ಎಂದು ಉಡುಪಿ ಮಾಜಿ ಶಾಸಕ ರಘುಪತಿ ಭಟ್ ತಿಳಿಸಿದ್ದಾರೆ.
ಮಂಗಳೂರು: ಕಾಂಗ್ರೆಸ್ ಸೇರ್ಪಡೆಯ ಕುರಿತು ಇನ್ನೂ ಯಾವುದೇ ಅಂತಿಮ ನಿರ್ಧಾರ ಕೈಗೊಂಡಿಲ್ಲ. ಆದರೆ 2028ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ ಎಂದು ಉಡುಪಿ ಮಾಜಿ ಶಾಸಕ ರಘುಪತಿ ಭಟ್ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ನಿಂದ ಈಗಾಗಲೇ ಆಹ್ವಾನ ಬಂದಿರುವುದು ನಿಜ. ಈ ಬಗ್ಗೆ ಯೋಚನೆ ಮಾಡುತ್ತಿದ್ದೇನೆ. ನನ್ನ ಬೆಂಬಲಿಗರೊಂದಿಗೆ ಚರ್ಚಿಸಿ, ಅವರ ಅಭಿಪ್ರಾಯ ಪಡೆದುಕೊಂಡ ಬಳಿಕವೇ ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ ಎಂದು ಹೇಳಿದರು.
“ಬಿಜೆಪಿಯವರು ಕರೆಯುತ್ತಾರೆ ಎಂದು ಕಾಯುತ್ತಿದ್ದೇನೆ. ಬಿಜೆಪಿ ಸೇರುವ ಬಗ್ಗೆಯೂ ಯೋಚಿಸಬಹುದು. ಆದರೆ ಕಾಂಗ್ರೆಸ್ ಸೇರುವ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ” ಎಂದು ಸ್ಪಷ್ಟಪಡಿಸಿದರು.
ಬಾಲ್ಯದಿಂದಲೂ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕರ್ತನಾಗಿ ಬೆಳೆದು, ಬಿಜೆಪಿಯಲ್ಲಿ ಯುವ ಮೋರ್ಚಾ ಜಿಲ್ಲಾ ಘಟಕ ಹಾಗೂ ಜಿಲ್ಲಾಧ್ಯಕ್ಷನಾಗಿ ಕೆಲಸ ಮಾಡಿದ್ದೇನೆ. ಮೂರು ಬಾರಿ ಶಾಸಕನಾಗಿದ್ದೇನೆ. ಹೀಗಿರುವಾಗ ಏಕಾಏಕಿ ಪಕ್ಷ ಬದಲಿಸುವ ನಿರ್ಧಾರ ಕೈಗೊಳ್ಳಲು ನನ್ನ ಮನಸ್ಸು ಒಪ್ಪುತ್ತಿಲ್ಲ. ನನ್ನ ಬೆಂಬಲಿಗರ ವಿಶ್ವಾಸ ಪಡೆದುಕೊಂಡೇ ಮುಂದಿನ ಹೆಜ್ಜೆ ಇಡುತ್ತೇನೆ ಎಂದು ತಿಳಿಸಿದರು.
ಕಳೆದ ಚುನಾವಣೆಯ ಸಂದರ್ಭ ತಮಗೆ ಅನ್ಯಾಯವಾಗಿದೆ ಎಂಬ ಅಸಮಾಧಾನ ವ್ಯಕ್ತಪಡಿಸಿದ ರಘುಪತಿ ಭಟ್, ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ತಪ್ಪಿದ್ದಕ್ಕಿಂತಲೂ ವಿಧಾನ ಪರಿಷತ್ ಸ್ಥಾನ ನೀಡುವುದಾಗಿ ಹೇಳಿ, ಕೊನೆಗೆ ಅವಕಾಶ ನೀಡದಿರುವುದು ನೋವು ತಂದಿದೆ ಎಂದರು.
ತಮ್ಮದೇ ಪಕ್ಷದ ಕೆಲವು ಶಾಸಕರಿಂದ ವೈಯಕ್ತಿಕ ದಬ್ಬಾಳಿಕೆ ಎದುರಿಸಬೇಕಾಯಿತು ಎಂದು ಆರೋಪಿಸಿದ ಅವರು, ಈ ವಿಚಾರದಲ್ಲಿ ಸಂಘದ ಹಿರಿಯರು ಹಾಗೂ ಬಿಜೆಪಿಯ ನಾಯಕರು ತಮ್ಮೊಂದಿಗೆ ಮಾತನಾಡದಿರುವುದು ಬೇಸರ ತಂದಿದೆ ಎಂದು ಹೇಳಿದರು.
“ನನ್ನ ಹತ್ತಿರದ ಕ್ಷೇತ್ರಗಳ ಮಾಜಿ ಶಾಸಕರನ್ನು ಗೌರವದಿಂದ ಕಾಣಲಾಗುತ್ತದೆ. ನನಗೆ ವಿಶೇಷ ಗೌರವ ಬೇಡ. ಕನಿಷ್ಠ ಬಹುವಚನದಲ್ಲಿ ಮಾತನಾಡಿದ್ದರೂ ಸಾಕಿತ್ತು. ಈ ಎಲ್ಲ ಘಟನೆಗಳು ಮಾನಸಿಕವಾಗಿ ನೋವುಂಟುಮಾಡಿವೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.
2028ರ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತು ಮಾತನಾಡಿದ ಅವರು, ಕ್ಷೇತ್ರದ ಜನರು ನನ್ನನ್ನು ಸೋಲಿಸಿಲ್ಲ. ಪಕ್ಷವೇ ನನಗೆ ಟಿಕೆಟ್ ತಪ್ಪಿಸಿದೆ ಎಂಬ ಭಾವನೆ ಜನರಲ್ಲಿದೆ. ಜನರು ಸ್ಪರ್ಧಿಸುವಂತೆ ಒತ್ತಾಯಿಸುತ್ತಿದ್ದಾರೆ. ಜನರು ಬೇಡ, ನೀವು ಚುನಾವಣೆಗೆ ನಿಲ್ಲಬೇಡಿ ಎಂದು ಹೇಳಿದರೆ ಮನೆಯಲ್ಲೇ ಕುಳಿತುಕೊಳ್ಳುತ್ತೇನೆ. ಜನರ ಕೆಲಸ ಮಾಡಲು ಜನಪ್ರತಿನಿಧಿಯಾಗಲೇಬೇಕೆಂದಿಲ್ಲ. ಚುನಾವಣಾ ರಾಜಕೀಯದಿಂದ ದೂರವಿದ್ದರೂ ಜನರಿಗೆ ಸಹಾಯ ಮಾಡಬಹುದು ಎಂದು ರಘುಪತಿ ಭಟ್ ಹೇಳಿದರು
-
ದಕ್ಷಿಣ ಕನ್ನಡ14 hours ago
ಕಳವು ಮಾಡಿ ಮನೆಗೆ ಬೆಂಕಿ ಹಚ್ಚಿದ ಶಂಕೆ: ಪುತ್ತೂರಿನಲ್ಲಿ ಪ್ರಕರಣ ದಾಖಲು
-
ಅಂತರ ರಾಜ್ಯ12 hours agoRestaurant-ನೀರಿನ ಬಾಟ್ಲಿಗೆ ₹2 ಹೆಚ್ಚುವರಿ ವಸೂಲಿ; ರೆಸ್ಟೋರೆಂಟ್ಗೆ ₹1 ಲಕ್ಷ ದಂಡ..!
-
ಕಾರ್ಯಕ್ರಮಗಳು6 hours agoPuttur-ಪುತ್ತೂರು: ಅ.16ರಂದು ಪ್ರವೀಣ್ ಕ್ಯಾಪಿಟಲ್ನ ನವೀಕೃತ ಪ್ರಧಾನ ಕಚೇರಿ ಉದ್ಘಾಟನೆ
-
ಸುಳ್ಯ14 hours ago
ಸಿಜೆಪಿ ಮುಖಂಡರಾದ ಸೌರವ್ ದಾಸ್, ಅಶುತೋಷ್ ರಾಂಕಾ ಮತ್ತು ಅಜಿಂಕ್ಯ ಶಿಂಧೆ ಬಂಧನ, ತಿಹಾರ್ ಜೈಲಿಗೆ ಶಿಫ್ಟ್ ಸಾಧ್ಯತೆ
-
Uncategorized13 hours agoKumaraswamy-ಸ್ಟಿಂಗ್ ಆಪರೇಷನ್ ವಿವಾದ: ಸಿದ್ದರಾಮಯ್ಯ ಮೌನವಾಗಿರಬಾರದು – ಸಿಬಿಐ ತನಿಖೆಗೆ ಕುಮಾರಸ್ವಾಮಿ ಆಗ್ರಹ
-
ನಿಧನ ವಾರ್ತೆ12 hours agoBoat Sink-ಹಾಜಿಪುರ: ಗಂಗಾ ನದಿಯಲ್ಲಿ ದೋಣಿ ಮುಳುಗಿ 11 ಮಂದಿ ಸಾವು
-
ಬಿಗ್ ನ್ಯೂಸ್13 hours agoG.L. Acharya Jewellers-ವಿಜಯದಶಮಿ ಪ್ರಯುಕ್ತ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ನಿಂದ ವಿಶೇಷ ಕೊಡುಗೆ
-
ಮಂಗಳೂರು13 hours agoD.K. Shivakumar-ಅ.15ರಂದು ಮಂಗಳೂರು, ಉಡುಪಿ ಜಿಲ್ಲೆಗೆ ಡಿ.ಕೆ. ಶಿವಕುಮಾರ್ ಭೇಟಿ



















