ಬಿಗ್ ನ್ಯೂಸ್
Heavy rains-ಭಾರೀ ಮಳೆ – ಪ್ರಸಿದ್ದ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಸಂಬಂದಿಸಿದ ಕುಮಾರಧಾರ ಸ್ನಾನಘಟ್ಟ ಮುಳುಗಡೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದೊಂದು ವಾರದಿಂದ ವ್ಯಾಪಕ ಮಳೆಯಾಗುತ್ತಿದ್ದು, ಪಶ್ಞಿಮ ಘಟ್ಟದ ತಪ್ಪಲಿನಲ್ಲಿರುವ ಕಾರಣೀಕ ಪ್ರಸಿದ್ದ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಸಂಬಂದಿಸಿದ ಕುಮಾರಧಾರ ಸ್ನಾನಘಟ್ಟ ಮುಳುಗಡೆಯಾಗಿದೆ. ಕಳೆದೆರೆಡು ದಿನಗಳಿಂದ ದಕ್ಷಿಣ ಭಾರತದ ಪ್ರಸಿದ್ದ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ .

ಕುಮಾರಧಾರ ಸ್ನಾನಘಟ್ಟವು ಗುರುವಾರ ಮುಂಜಾನೆ ಮುಳುಗಡೆಗೊಂಡಿದೆ. ಸ್ನಾನಘಟ್ಟದಲ್ಲಿ ನಿರ್ಮಿತವಾಗಿದ್ದ ಶೌಚಾಲಯ ನೀರಿನಿಂದ ಅವೃತಗೊಂಡಿದೆ. ಅಲ್ಲದೆ, ಸ್ನಾನಘಟ್ಟದಲ್ಲಿದ್ದ ದೇವರ ಅವಭೃತ ಕಟ್ಟೆಯು ಭಾಗಶ: ಮುಳುಗಡೆಗೊಂಡಿದೆ.ಅಲ್ಲದೇ ಕುಮಾರಧಾರ ಕಿಂಡಿ ಆಣೆಕಟ್ಟು ಮುಳುಗಡೆಯಾಗಿದೆ.
ಮಳೆಯಲ್ಲಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ತೆರಳುವ ಭಕ್ತರಿಗೂ ತೊಂದರೆ ಆಗಿದೆ ನದಿ ಉಕ್ಕಿ ಹರಿಯುತ್ತಿದ್ದರಿಂದ ಭಕ್ತರು ನದಿಗೆ ಇಳಿಯದಂತೆ ಸೂಚನೆ ನೀಡಲಾಗಿದೆ. ಅಲ್ಲದೆ ನದಿತೀರದಲ್ಲಿ ದೇವಳದ ಭದ್ರತಾ ಸಿಬ್ಬಂದಿ, ಹೋಮ್ ಗಾರ್ಡ್ಸ್ ನಿಯೋಜನೆ ಮಾಡಲಾಗಿದೆ. ಭಕ್ತರು ಜಾಗರೂಕರಾಗಿರುವಂತೆ ಸೂಚನೆ ನೀಡಿ ಫಲಕಗಳನ್ನು ಹಾಕಲಾಗಿದೆ.

ಸುಬ್ರಹ್ಮಣ್ಯ-ಪುತ್ತೂರು ಸಂಚಾರಕ್ಕೂ ಅಡಚಣೆ
ಕುಮಾರಧಾರದ ಉಪನದಿಯಾದ ದರ್ಪಣತೀರ್ಥವು ತುಂಬಿ ಹರಿದು ದರ್ಪಣತೀರ್ಥ ಸೇತುವೆಯು ಮುಳುಗಡೆಗೊಂಡಿತ್ತು. ಇದರಿಂದಾಗಿ ಸುಬ್ರಹ್ಮಣ್ಯ-ಪುತ್ತೂರು ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದ ತಗ್ಗು ಪ್ರದೇಶಗಳು ಜಲಾವೃತಗೊಂಡಿದೆ. ಮಳೆ ಇನ್ನೂ ಕಡಿಮೆಯಾಗದಿರುವುದರಿಂದ ನದಿ ತೀರದಲ್ಲಿ ವಾಸಿಸುತ್ತಿರುವವರಲ್ಲಿ ಆತಂಕ ಹೆಚ್ಚಾಗಿದೆ.
ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ಗ್ರಾಮದ ಆಸುಪಾಸಿನ ಗ್ರಾಮೀಣ ಪ್ರದೇಶದಲ್ಲಿನ ನದಿ ತೊರೆ, ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿದೆ. ಮಲೆನಾಡು ಪ್ರದೇಶದಲ್ಲಿ ಸುರಿದ ಮಳೆಯ ಪರಿಣಾಮ ಕುಮಾರಧಾರ ನದಿಯು ಉಕ್ಕಿ ಹರಿಯುತ್ತಿದೆ. ಕುಮಾರಧಾರ ನದಿಯಲ್ಲಿ ಪ್ರವಾಹ ಅಧಿಕಗೊಂಡು ಕುಲ್ಕಂದ, ಪರ್ವತಮುಖಿ ಪರಿಸರದಲ್ಲಿ ಗದ್ದೆಗಳಿಗೆ ನೀರು ನುಗ್ಗಿದೆ.
ಬಿಗ್ ನ್ಯೂಸ್
ಡಿಕೆಶಿ ಸರ್ಕಾರದಿಂದ ಜನತೆಗೆ ಬಿಗ್ ಶಾಕ್ – ರೈತರಿಗೆ ಬಂಪರ್ ಗಿಫ್ಟ್..! ಹಾಲಿನ ದರ 8 ರೂ. ಏರಿಕೆ : 6 ರೂ. ರೈತರಿಗೆ..! ನ.1 ರಿಂದ ಬಹುತೇಕ ಜಾರಿ
ಬೆಂಗಳೂರು: ರಾಜ್ಯದ ಜನತೆಗೆ ಸರ್ಕಾರ ಬಿಗ್ ಶಾಕ್ ಕೊಟ್ಟಿದೆ. ಹಾಲಿನ (Milk Price Hike) ದರ 8 ರೂ. ಹೆಚ್ಚಳಕ್ಕೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಇದರ ಜೊತೆಗೆ ಬಸ್ ಟಿಕೆಟ್ ದರ ಹೆಚ್ಚಳಕ್ಕೂ ಒಪ್ಪಿಗೆ ಸೂಚಿಸಲಾಗಿದೆ.
ಬಹುತೇಕ ನವೆಂಬರ್ 1 ರಿಂದ ಹಾಲಿನ ದರ ಹೆಚ್ಚಳವಾಗುವ ಸಾಧ್ಯತೆ ಇದೆ. 80:20 ರಂತೆ ದರ ಏರಿಕೆ ತೀರ್ಮಾನಕ್ಕೆ ಸರ್ಕಾರ ಬಂದಿದೆ. ಅಂದರೆ, 8 ರೂ. ಏರಿಕೆಯಾದರೆ 6 ರೂ. ರೈತರಿಗೆ ಮತ್ತು 2 ರೂ. ಒಕ್ಕೂಟಗಳಿಗೆ ಸಿಗಲಿದೆ. ಸರ್ಕಾರಕ್ಕೆ 70:30 ರಂತೆ ದರ ಏರಿಕೆಗೆ ಒಕ್ಕೂಟಗಳು ಮನವಿ ಮಾಡಿದ್ದವು. ಆದರೆ, 80:20 ರಂತೆ ದರ ಏರಿಕೆ ಮಾಡಲಾಗುವುದು ಎಂದು ಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದರು. ಅದರಂತೆಯೇ 8 ರೂ. ಪೈಕಿ 6 ರೂ. ರೈತರಿಗೆ ಮತ್ತು 2 ರೂ. ಒಕ್ಕೂಟಗಳಿಗೆ ನೀಡುವ ಸಾಧ್ಯತೆಯಿದೆ.
ಬಸ್ ಟಿಕೆಟ್ ದರ ಹಾಗೂ ಹಾಲಿನ ದರ ಎರಡು ಹೆಚ್ಚಳಕ್ಕೆ ಸಂಪುಟ ಒಪ್ಪಿಗೆ ನೀಡಿದೆ. ಆದರೆ, ಅಧಿಕೃತ ಘೋಷಣೆ ಮಾಡದಿರಲು ತೀರ್ಮಾನಿಸಿದೆ. ಚುನಾವಣಾ ಆಯೋಗಕ್ಕೆ ಪ್ರಸ್ತಾಪ ಕಳುಹಿಸಿ ಅವರ ಅನುಮತಿ ಸಿಕ್ಕ ಮೇಲೆ ಅಧಿಕೃತ ಘೋಷಣೆ ಮಾಡಲು ಸರ್ಕಾರ ನಿರ್ಧರಿಸಿದೆ.
ಹಾಲಿನ ಮೇಲೆ ಪೂರ್ಣ 8 ರೂ. ದರ ಏರಿಕೆಯಾದರೆ
1 ಲೀಟರ್ ದರ
ಟೋನ್ಡ್ ಹಾಲು
46- 54 ರೂ.
ಹೋಮೋಜಿನೈಸ್ಡ್ ಟೋನ್ಡ್ ಹಾಲು
47- 55 ರೂ.
ಅಂತರ ರಾಜ್ಯ
ID-ಪ್ರತಿಭಟನೆ ವರದಿ ಮಾಡುವ ಪತ್ರಕರ್ತರಿಗೆ ಐಡಿ ಕಡ್ಡಾಯ; ಮಹಿಳಾ ಪತ್ರಕರ್ತರ ಲೈಂಗಿಕ ಕಿರುಕುಳ ಆರೋಪ ಬೆನ್ನಲ್ಲೇ ದಿಲ್ಲಿ ಪೊಲೀಸರ ಹೊಸ ಮಾರ್ಗಸೂಚಿ
ಪ್ರತಿಭಟನೆಗಳು ಹಾಗೂ ಧರಣಿಗಳನ್ನು ವರದಿ ಮಾಡುವ ಪತ್ರಕರ್ತರು ತಮ್ಮ ಸಂಸ್ಥೆ ನೀಡಿರುವ ಮಾನ್ಯ ಗುರುತಿನ ಚೀಟಿ ಮತ್ತು/ಅಥವಾ PIB/DIP ಮಾನ್ಯತಾ ಕಾರ್ಡ್‌ಗಳನ್ನು ಕಡ್ಡಾಯವಾಗಿ ಕೊಂಡೊಯ್ಯಬೇಕು. ಅಲ್ಲದೆ, ಗುರುತಿನ ಚೀಟಿಯನ್ನು ಎಲ್ಲ ಸಮಯದಲ್ಲೂ ಸ್ಪಷ್ಟವಾಗಿ ಕಾಣುವಂತೆ ಪ್ರದರ್ಶಿಸಬೇಕು ಹಾಗೂ ಪೊಲೀಸ್ ಕಾರ್ಯಾಚರಣೆ ಅಥವಾ ಕಾನೂನು ಜಾರಿ ಸಿಬ್ಬಂದಿಯ ಚಲನವಲನಕ್ಕೆ ಅಡ್ಡಿಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ದಿಲ್ಲಿ ಪೊಲೀಸರು ಮಾರ್ಗಸೂಚಿ ಹೊರಡಿಸಿದ್ದಾರೆ.
ಹೊಸದಿಲ್ಲಿ: ಪ್ರತಿಭಟನೆಗಳು ಹಾಗೂ ಧರಣಿಗಳನ್ನು ವರದಿ ಮಾಡುವ ಪತ್ರಕರ್ತರು ತಮ್ಮ ಸಂಸ್ಥೆ ನೀಡಿರುವ ಮಾನ್ಯ ಗುರುತಿನ ಚೀಟಿ ಮತ್ತು/ಅಥವಾ PIB/DIP ಮಾನ್ಯತಾ ಕಾರ್ಡ್‌ಗಳನ್ನು ಕಡ್ಡಾಯವಾಗಿ ಕೊಂಡೊಯ್ಯಬೇಕು. ಅಲ್ಲದೆ, ಗುರುತಿನ ಚೀಟಿಯನ್ನು ಎಲ್ಲ ಸಮಯದಲ್ಲೂ ಸ್ಪಷ್ಟವಾಗಿ ಕಾಣುವಂತೆ ಪ್ರದರ್ಶಿಸಬೇಕು ಹಾಗೂ ಪೊಲೀಸ್ ಕಾರ್ಯಾಚರಣೆ ಅಥವಾ ಕಾನೂನು ಜಾರಿ ಸಿಬ್ಬಂದಿಯ ಚಲನವಲನಕ್ಕೆ ಅಡ್ಡಿಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ದಿಲ್ಲಿ ಪೊಲೀಸರು ಮಾರ್ಗಸೂಚಿ ಹೊರಡಿಸಿದ್ದಾರೆ.
ಜಂತರ್ ಮಂತರ್‌ನಲ್ಲಿ ಇತ್ತೀಚೆಗೆ ನಡೆದ ಪ್ರತಿಭಟನೆಯನ್ನು ವರದಿ ಮಾಡುತ್ತಿದ್ದ ಮಹಿಳಾ ಪತ್ರಕರ್ತರ ಮೇಲೆ ಪೊಲೀಸ್ ಸಿಬ್ಬಂದಿ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿರುವ ಬೆನ್ನಲ್ಲೇ ಈ ಮಾರ್ಗಸೂಚಿ ಪ್ರಕಟಿಸಲಾಗಿದೆ.
‘ಸುದ್ದಿ ಮುಖ್ಯ, ಅದನ್ನು ಹೇಗೆ ಪಡೆಯುತ್ತೀರಿ ಎಂಬುದೂ ಮುಖ್ಯ’ ಎಂಬ ಸಂದೇಶದೊಂದಿಗೆ ದಿಲ್ಲಿ ಪೊಲೀಸರು ಸಾಮಾಜಿಕ ಜಾಲತಾಣದಲ್ಲಿ ಪತ್ರಕರ್ತರು ಕರ್ತವ್ಯ ನಿರ್ವಹಿಸುವ ವೇಳೆ ಪಾಲಿಸಬೇಕಾದ ನಾಲ್ಕು ಪ್ರಮುಖ ನಿರ್ದೇಶನಗಳನ್ನು ಹಂಚಿಕೊಂಡಿದ್ದಾರೆ.
ಪ್ರತಿಭಟನೆಗಳನ್ನು ವರದಿ ಮಾಡಲು ನಿಯೋಜಿಸಲ್ಪಟ್ಟಿರುವ ಎಲ್ಲ ಪತ್ರಕರ್ತರು ತಮ್ಮ ಸಂಸ್ಥೆಗಳು ನೀಡಿರುವ ಮಾನ್ಯ ಗುರುತಿನ ಚೀಟಿ ಮತ್ತು/ಅಥವಾ ಮಾನ್ಯ PIB/DIP ಮಾನ್ಯತಾ ಕಾರ್ಡ್‌ಗಳನ್ನು ಕೊಂಡೊಯ್ಯಬೇಕು ಎಂದು ಪೊಲೀಸರು ಸೂಚಿಸಿದ್ದಾರೆ.
ಸ್ಥಳದಲ್ಲಿರುವ ಕಾನೂನು ಜಾರಿ ಸಿಬ್ಬಂದಿಗೆ ಪತ್ರಕರ್ತರ ಗುರುತು ಸುಲಭವಾಗಿ ತಿಳಿಯುವಂತೆ ಗುರುತಿನ ಚೀಟಿಗಳನ್ನು ಸದಾ ಗೋಚರಿಸುವಂತೆ ಪ್ರದರ್ಶಿಸಬೇಕು ಎಂದು ತಿಳಿಸಿದ್ದಾರೆ.
ಅದೇ ರೀತಿ, ಪತ್ರಕರ್ತರ ಉಪಸ್ಥಿತಿ ಅಥವಾ ಚಟುವಟಿಕೆಗಳು ಪೊಲೀಸ್ ಕಾರ್ಯಾಚರಣೆಗಳಿಗೆ ಹಾಗೂ ಕಾನೂನು ಜಾರಿ ಸಿಬ್ಬಂದಿಯ ಚಲನವಲನಕ್ಕೆ ಯಾವುದೇ ರೀತಿಯಲ್ಲೂ ಅಡ್ಡಿಯಾಗದಂತೆ ನೋಡಿಕೊಳ್ಳಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.
ಉದ್ವಿಗ್ನ ಪರಿಸ್ಥಿತಿಗಳಲ್ಲಿ ಘಟನೆಗಳನ್ನು ವರದಿ ಮಾಡುವಾಗ ಹಾಗೂ ದೃಶ್ಯಗಳನ್ನು ದಾಖಲಿಸುವಾಗ ಪತ್ರಕರ್ತರು ಸುರಕ್ಷಿತ ಅಂತರ ಕಾಯ್ದುಕೊಳ್ಳಬೇಕು. ಪ್ರತಿಭಟನಾಕಾರರಿಂದ ತಮ್ಮನ್ನು ಸ್ಪಷ್ಟವಾಗಿ ಪ್ರತ್ಯೇಕಿಸುವ ರೀತಿಯಲ್ಲಿ ಅಂತರ ಕಾಯ್ದುಕೊಂಡು ವರದಿ ಮಾಡಬೇಕು ಎಂದು ಪೊಲೀಸರು ಸೂಚಿಸಿದ್ದಾರೆ.
#EthicsofJournalism ಹ್ಯಾಶ್‌ಟ್ಯಾಗ್‌ನೊಂದಿಗೆ ದಿಲ್ಲಿ ಪೊಲೀಸರು ಈ ನಾಲ್ಕು ನಿರ್ದೇಶನಗಳನ್ನು ಪ್ರಕಟಿಸಿದ್ದಾರೆ.
ಪೊಲೀಸ್ ಅಧಿಕಾರಿಗಳ ವಿರುದ್ಧ ಮೂವರು ಮಹಿಳಾ ಪತ್ರಕರ್ತರಿಂದ ಲೈಂಗಿಕ ಕಿರುಕುಳ ಆರೋಪ
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಶನಿವಾರ ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮೂವರು ಮಹಿಳಾ ಪತ್ರಕರ್ತರು ದಿಲ್ಲಿ ಪೊಲೀಸ್ ಅಧಿಕಾರಿಗಳ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದಾರೆ.
ಈ ಸಂಬಂಧ ದಿಲ್ಲಿ ಪೊಲೀಸರು ದೂರುಗಳನ್ನು ಸ್ವೀಕರಿಸಿದ್ದು, ಹೆಚ್ಚಿನ ವಿಚಾರಣೆಗಾಗಿ ಅವುಗಳನ್ನು ಅಪರಾಧ ಶಾಖೆಗೆ ವರ್ಗಾಯಿಸಿದ್ದಾರೆ.
ಅಕ್ಟೋಬರ್ 3ರಂದು ಹೊಸದಿಲ್ಲಿ ಪ್ರದೇಶದಲ್ಲಿ ನಡೆದ ಪ್ರತಿಭಟನೆ ವೇಳೆ ‘ಕಾನೂನು ಮತ್ತು ಸುವ್ಯವಸ್ಥೆಯ ಪರಿಸ್ಥಿತಿ’ ನಿರ್ಮಾಣವಾಗಿತ್ತು. ಈ ಸಂದರ್ಭದಲ್ಲಿ ಮೂವರು ಮಹಿಳಾ ಪತ್ರಕರ್ತರು ಪೊಲೀಸ್ ಅಧಿಕಾರಿಗಳ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದಾರೆ ಎಂದು ದಿಲ್ಲಿ ಪೊಲೀಸರು ರವಿವಾರ ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಮಾಹಿತಿ ನೀಡಿದ್ದರು.
ಮೂವರು ಮಹಿಳಾ ಪತ್ರಕರ್ತರಿಂದ ಬಂದ ದೂರುಗಳನ್ನು ಹೊಸದಿಲ್ಲಿ ಜಿಲ್ಲೆ ಸ್ವೀಕರಿಸಿದ್ದು, ನ್ಯಾಯಯುತ ಹಾಗೂ ನಿಷ್ಪಕ್ಷಪಾತ ವಿಚಾರಣೆಗಾಗಿ ಅವುಗಳನ್ನು ಅಪರಾಧ ಶಾಖೆಗೆ ವರ್ಗಾಯಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಆರೋಪಗಳ ಬಳಿಕ ಹಲವು ಸ್ವತಂತ್ರ ಪತ್ರಕರ್ತರು ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆಯ ಹೊರಗೆ ಪ್ರತಿಭಟನೆ ನಡೆಸಿದರು. ಆರೋಪ ಎದುರಿಸುತ್ತಿರುವ ಪೊಲೀಸ್ ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಅವರು ಒತ್ತಾಯಿಸಿದರು.
ಬಿಗ್ ನ್ಯೂಸ್
Puttur-ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ: ‘ಭಕ್ತರನ್ನು ಕಡೆಗಣಿಸಿ ಜೀರ್ಣೋದ್ಧಾರ ಸಮಿತಿ ರಚನೆ’ – ವಿಹಿಂಪ ಆಕ್ಷೇಪ
ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯು ಸೀಮೆಯ ಭಕ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಜೀರ್ಣೋದ್ಧಾರ ಸಮಿತಿ ರಚಿಸಿದೆ ಎಂದು ವಿಶ್ವಹಿಂದು ಪರಿಷತ್ ಆಕ್ಷೇಪ ವ್ಯಕ್ತಪಡಿಸಿದೆ. ಈಗಿರುವ ಜೀರ್ಣೋದ್ಧಾರ ಸಮಿತಿಯನ್ನು ವಿಸರ್ಜಿಸಿ, ಭಕ್ತರ ಸಭೆ ನಡೆಸಿ ಎಲ್ಲರನ್ನೂ ವಿಶ್ವಾಸಕ್ಕೆ ಪಡೆದು ನಿಯಮಾನುಸಾರ ಹೊಸ ಸಮಿತಿ ರಚಿಸಬೇಕು ಎಂದು ವಿಹಿಂಪ ಆಗ್ರಹಿಸಿದೆ.
ಪುತ್ತೂರು, ಅ.6: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯು ಸೀಮೆಯ ಭಕ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಜೀರ್ಣೋದ್ಧಾರ ಸಮಿತಿ ರಚಿಸಿದೆ ಎಂದು ವಿಶ್ವಹಿಂದು ಪರಿಷತ್ ಆಕ್ಷೇಪ ವ್ಯಕ್ತಪಡಿಸಿದೆ. ಈಗಿರುವ ಜೀರ್ಣೋದ್ಧಾರ ಸಮಿತಿಯನ್ನು ವಿಸರ್ಜಿಸಿ, ಭಕ್ತರ ಸಭೆ ನಡೆಸಿ ಎಲ್ಲರನ್ನೂ ವಿಶ್ವಾಸಕ್ಕೆ ಪಡೆದು ನಿಯಮಾನುಸಾರ ಹೊಸ ಸಮಿತಿ ರಚಿಸಬೇಕು ಎಂದು ವಿಹಿಂಪ ಆಗ್ರಹಿಸಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಶ್ವಹಿಂದು ಪರಿಷತ್ ಪುತ್ತೂರು ಜಿಲ್ಲಾಧ್ಯಕ್ಷ ಕೃಷ್ಣಪ್ರಸನ್ನ, ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನವು ಸಮಸ್ತ ಹಿಂದೂ ಸಮಾಜಕ್ಕೆ ಸೇರಿದ್ದಾಗಿದ್ದು, ದೇವಸ್ಥಾನದ ಪ್ರಮುಖ ವಿಚಾರಗಳಲ್ಲಿ ಭಕ್ತರ ವಿಶ್ವಾಸ ಪಡೆದುಕೊಳ್ಳುವುದು ಅಗತ್ಯ ಎಂದರು.
ಭಕ್ತರ ಸಭೆ ನಡೆಸದೆ, ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಅಧಿಕಾರಿಗಳ ಉಪಸ್ಥಿತಿಯಲ್ಲಿ ಜೀರ್ಣೋದ್ಧಾರ ಹಾಗೂ ಅಭಿವೃದ್ಧಿ ಸಮಿತಿ ರಚಿಸದಿರುವುದು ಗೊಂದಲಕ್ಕೆ ಕಾರಣವಾಗಿದೆ ಎಂದು ಅವರು ಆರೋಪಿಸಿದರು.
ದೇವಸ್ಥಾನದ ಐತಿಹಾಸಿಕ ಪವಿತ್ರ ಪುಷ್ಕರಿಣಿಯ ಅಭಿವೃದ್ಧಿ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ಕಾಮಗಾರಿ ಅಪೂರ್ಣವಾಗಿರುವ ನಡುವೆಯೇ ಜಾತ್ರಾ ಸಂದರ್ಭದಲ್ಲಿ ದೇವರಿಗೆ ಕೆರೆ ಉತ್ಸವ ನಡೆಸಿರುವುದು ಆಗಮ ಶಾಸ್ತ್ರಕ್ಕೆ ವಿರುದ್ಧವಾಗಿದೆ ಎಂದು ಕೃಷ್ಣಪ್ರಸನ್ನ ಆಕ್ಷೇಪಿಸಿದರು. ಪುಷ್ಕರಿಣಿಯ ಕಾಮಗಾರಿಯನ್ನು ವ್ಯವಸ್ಥಾಪನಾ ಸಮಿತಿ ಪೂರ್ಣಗೊಳಿಸಬೇಕು ಎಂದು ಒತ್ತಾಯಿಸಿದರು.
ದೇವಸ್ಥಾನದ ಆಡಳಿತದ ಕಾರ್ಯವೈಖರಿಯಿಂದ ಭಕ್ತರ ಧಾರ್ಮಿಕ ಭಾವನೆ ಹಾಗೂ ನಂಬಿಕೆಗಳಿಗೆ ಧಕ್ಕೆ ಉಂಟಾಗುವ ಸಂದರ್ಭಗಳಲ್ಲಿ ವಿಶ್ವಹಿಂದು ಪರಿಷತ್ ಧ್ವನಿ ಎತ್ತಲಿದೆ. ಅಗತ್ಯ ಬಿದ್ದರೆ ಹಿಂದೂ ಸಮಾಜವನ್ನು ಒಗ್ಗೂಡಿಸಿಕೊಂಡು ಹೋರಾಟ ನಡೆಸಲೂ ಹಿಂಜರಿಯುವುದಿಲ್ಲ ಎಂದು ಅವರು ಎಚ್ಚರಿಕೆ ನೀಡಿದರು.
ಸುದ್ದಿಗೋಷ್ಠಿಯಲ್ಲಿ ವಿಹಿಂಪ ಜಿಲ್ಲಾ ಕೋಶಾಧಿಕಾರಿ ಮಾಧವ ಪೂಜಾರಿ, ಉಪಾಧ್ಯಕ್ಷ ಸತೀಶ್ ಬಿ.ಎಸ್., ನಗರ ಸಂಚಾಲಕ ಚೇತನ್ ಹಾಗೂ ಸೇವಾ ಪ್ರಮುಖ್ ಹರೀಶ್ ದೋಳ್ಪಾಡಿ ಉಪಸ್ಥಿತರಿದ್ದರು.
-
ದಕ್ಷಿಣ ಕನ್ನಡ17 hours ago
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಪ್ರಯಾಣಿಸುತ್ತಿದ್ದ ಕಾರು ಅಪಘಾತ
-
Uncategorized23 hours ago
ಬೆಳೆ ವಿಮೆ ಪರಿಹಾರ ಕಡಿತ: ಸರ್ಕಾರದ ಮುಂದೆ ಅರುಣ್ ಪುತ್ತಿಲ ಆಕ್ರೋಶ – ಪ್ರಶ್ನೆಗಳ ಸುರಿಮಳೆ
-
ಸಿನೆಮಾ24 hours agoPrema Da Ooralli-ಅಮ್ಮನ ಮಂಗಳಸೂತ್ರವನ್ನೇ ಗಿರವಿಡಲು ಮುಂದಾಗಿದ್ದ ನಿರ್ದೇಶಕ; ಇಂದು ₹17 ಕೋಟಿಯತ್ತ ಸಿನಿಮಾ! ‘ಪ್ರೇಮದ ಊರಲ್ಲಿ’ ಸೃಷ್ಟಿಸಿದ ಬಾಕ್ಸ್ ಆಫೀಸ್ ಅಚ್ಚರಿ
-
ಅಪರಾಧ17 hours agoSomasekhar-ನಕಲಿ ದಾಖಲೆ ಸೃಷ್ಟಿಸಿ ಕೈದಿಯ ಬಿಡುಗಡೆ..! ಪ್ರತಿಯಾಗಿ ಆತನ ಪತ್ನಿಯನ್ನು ಲೈಂಗಿಕವಾಗಿ ಬಳಸಿಕೊಳ್ಳುವ ಒಪ್ಪಂದ ಮಾಡಿಕೊಂಡಿದ್ದ ಡಿಐಜಿ ಎಂ. ಸೋಮಶೇಖರ್
-
ಅಪರಾಧ24 hours agoMangalore-ಮಂಗಳೂರು: ಜೈಲಿನಲ್ಲೇ ವಾರ್ಡನ್ ಮೇಲೆ ಹಲ್ಲೆ ಪ್ರಕರಣ : ಆರೋಪಿಗೆ 5 ವರ್ಷ ಜೈಲು, 40,000 ರೂ. ದಂಡ
-
ಬಿಗ್ ನ್ಯೂಸ್23 hours agoPuttur-ಪುತ್ತೂರಿನಲ್ಲಿ ಆಸರೆ ಇಲ್ಲದೆ ಭಿಕ್ಷಾಟನೆ ಮಾಡುತ್ತಿದ್ದ 60ರ ವ್ಯಕ್ತಿಗೆ ನೆರವು; ಪಚ್ಚನಾಡಿ ಪುನರ್ವಸತಿ ಕೇಂದ್ರಕ್ಕೆ ದಾಖಲು
-
ನಿಧನ ವಾರ್ತೆ16 hours agoPuttur-ಪುತ್ತೂರು: ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಪಡೆಯುತ್ತಿದ್ದ ಸ್ಕೂಟರ್ ಸವಾರ ಮೃತ್ಯು
-
ಮಂಗಳೂರು24 hours agoPandamburu-ಪಣಂಬೂರು ಬೀಚ್ನಲ್ಲಿ ಹುಲಿವೇಷ ತರಬೇತಿಗೆ ಬಂದಿದ್ದ ಬಾಲಕ ನೀರುಪಾಲು


















