ಆರೋಗ್ಯ
Foot and mouth-ಸಣ್ಣ ಮಕ್ಕಳಲ್ಲಿ ಕಾಣಿಸುವ ಸಾಂಕ್ರಾಮಿಕ ರೋಗ ಕಾಲು ಬಾಯಿಯ ಲಕ್ಷಣ, ಮುಂಜಾಗ್ರತಾ ಕ್ರಮ ಹಾಗೂ ಚಿಕಿತ್ಸೆ ಕುರಿತು ಇಲ್ಲಿದೆ ಮಾಹಿತಿ
ಬೆಂಗಳೂರು: ಕೈ, ಕಾಲು, ಬಾಯಿ ರೋಗ ವೈರಸ್ ನಿಂದ ಹರಡುವ ಒಂದು ಸಾಂಕ್ರಾಮಿಕ ರೋಗವಾಗಿದೆ. ಕಾಕ್ಸ್ ಸಾಕಿ ವೈರಸ್ ಗಳಿಂದ ಈ ರೋಗ ಬರುತ್ತದೆ.ಈ ರೋಗದ ಲಕ್ಷಣ, ಮುಂಜಾಗ್ರತಾ ಕ್ರಮಗಳು, ಮತ್ತು ಚಿಕಿತ್ಸೆ ಬಗ್ಗೆ ಮಾಹಿತಿಯನ್ನು ನೀಡಲಾಗಿದೆ.
ರೋಗ ಲಕ್ಷಣಗಳು:
- ಒಂದು ಅಥವಾ ಎರಡು ದಿನದ ಜ್ವರದಿಂದ ಈ ಕಾಯಿಲೆ ಪ್ರಾರಂಭವಾಗುತ್ತದೆ ನಂತರ ದದ್ದುಗಳು ಮತ್ತು ಗುಳ್ಳೆಗಳು ಕಾಣಿಸಿಕೊಳ್ಳುತ್ತವೆ.
- ಕೈ, ಬಾಯಿ ಹಾಗೂ ಕಾಲುಗಳಲ್ಲಿ ದದ್ದುಗಳು ಕಾಣಿಸಿಕೊಳ್ಳುತ್ತವೆ. ಇವುಗಳು ಕುಂಡಿಯವರೆಗೂ ತಲುಪುತ್ತವೆ.
- ಬಾಯಿಗಳಲ್ಲಿ ಹುಣ್ಣಾಗಿ ಮಕ್ಕಳು ಊಟ ಮಾಡಲು ಕಷ್ಟವಾಗುತ್ತದೆ ಆದರೆ, ಕೈ ಹಾಗೂ ಕಾಲುಗಳಲ್ಲಿನ ಗುಳ್ಳೆಗಳಿಂದಾಗಿ ಸ್ವಲ್ಪ ಪ್ರಮಾಣದ ನೋವು ಉಂಟಾಗಿ ಕಿರಿಕಿರಿ ಉಂಟಾಗುತ್ತದೆ.
ಯಾವ ವಯಸ್ಸಿನವರಲ್ಲಿ ಈ ರೋಗ ಕಂಡುಬರುತ್ತದೆ:
ಸಾಮಾನ್ಯವಾಗಿ 10ಕ್ಕಿಂತಲೂ ಕಡಿಮೆ ವಯಸ್ಸಿನ ಮಕ್ಕಳಲ್ಲಿ ಈ ರೋಗ ಹೆಚ್ಚಾಗಿ ಕಂಡುಬರುತ್ತದೆ. ರೋಗ ನಿರೋಧಕ ಶಕ್ತಿ ಕಡಿಮೆ ಇರುವ ಪ್ರೌಢ ವಯಸ್ಸಿನ ಮಕ್ಕಳಲ್ಲಿಯೂ ಈ ರೋಗ ಬರುತ್ತದೆ. ಆದಾಗ್ಯೂ, ಅಪರೂಪಕ್ಕೊಬ್ಬರಿಗೆ ವಯಸ್ಕರಲ್ಲಿಯೂ ಈ ರೋಗ ಬರುತ್ತದೆ.
ಗುಣಪಡಿಸಲು ತಗಲುವ ಅವಧಿ:
ಕೈ, ಕಾಲು, ಹಾಗೂ ಬಾಯಿ ರೋಗಗಳು ಸಾಮಾನ್ಯವಾಗಿ 5 ರಿಂದ 7 ದಿನಗಳೊಳಗೆ ಗುಣವಾಗುತ್ತವೆ. ಅಂದರೆ, ಅದರಷ್ಟಕ್ಕೆ ಅದೇ ಈ ರೋಗಗಳು ಹೋಗುತ್ತವೆ. ಚಿಕಿತ್ಸೆ ಇಲ್ಲದೆಯೂ ಕೂಡಾ ಒಂದು ವಾರದೊಳಗೆ ಈ ರೋಗದಿಂದ ಮುಕ್ತಿಯಾಗಬಹುದು.ಯಾವುದೇ ಕಲೆ ಇಲ್ಲದೆ ಎರಡು ವಾರಗಳ ನಂತರವೂ ಗುಳ್ಳೆಗಳು ಮಾಯವಾಗುತ್ತವೆ.
ಮುಂಜಾಗ್ರತಾ ಕ್ರಮಗಳು:
ಮೂಗಿನ ಸ್ರವಿಸುವಿಕೆ, ಮಲ ಅಥವಾ ಗುಳ್ಳೆಗಳಿಂದ ದ್ರವದಂತಹ ದೈಹಿಕ ವಿಸರ್ಜನೆಯೊಂದಿಗೆ ನೇರ ಅಥವಾ ಪರೋಕ್ಷ ಸಂಪರ್ಕದ ಮೂಲಕ ವೈರಸ್ ಹರಡುತ್ತದೆ.
- ಈ ಸೋಂಕು ಕಾಣಿಸಿಕೊಂಡಂತಹ ಮಕ್ಕಳನ್ನು ಒಂದು ವಾರಗಳ ಕಾಲ ಮನೆಯಲ್ಲಿಯೇ ಇಡುವುದರಿಂದ ಮತ್ತೊಬ್ಬರಿಗೆ ಈ ಸೋಂಕು ಹರಡದಂತೆ ತಡೆಗಟ್ಟಬಹುದು. ಕೆಲ ಪ್ರಕರಣಗಳಲ್ಲಿ 11 ವಾರಗಳ ಕಾಲ ಈ ಸೋಂಕು ಮುಂದುವರೆಯಬಹುದು ಅಂತಹ ಸಂದರ್ಭದಲ್ಲಿ ಸಾರ್ವಜನಿಕ ಸ್ಥಳಗಳಿಗೆ ಭೇಟಿ ನೀಡಬಾರದು.
- ಪ್ರತಿನಿತ್ಯ ಸಾಬೂನಿನಿಂದ ಕೈ ತೊಳೆಯುವಂತೆ ಹಾಗೂ ಕೈಗಳ್ಳನ್ನು ಶುದ್ಧವಾಗಿಟ್ಟುಕೊಳ್ಳುವಂತೆ ಮಕ್ಕಳಲ್ಲಿ ಅರಿವು ಮೂಡಿಸಬೇಕು
- ಸೂಪರ್ ಮಾರ್ಕೆಟ್ ಗಳಲ್ಲಿ ಟ್ರಾಲಿ, ಟಾಯ್ಸ್ ಗಳನ್ನು ಮುಟ್ಟಿದ್ದ ಸೋಂಕಿತ ಮಕ್ಕಳಿಂದಲೂ ಈ ರೋಗ ಹರಡಿರುವ ಬಗ್ಗೆ ವರದಿಯಾಗಿದೆ. ಆದ್ದರಿಂದ ಇಂತಹ ಸಂದರ್ಭಗಳ ಬಗ್ಗೆಯೂ ಎಚ್ಚರಿಕೆ ವಹಿಸಬೇಕು ಎಂದು ಅಸ್ಟರ್ ಸಿಎಂಐ ಆಸ್ಪತ್ರೆಯ ಸಮಾಲೋಚಕರು ತಿಳಿಸಿದ್ದಾರೆ.
ಚಿಕಿತ್ಸೆ: ಸಾಮಾನ್ಯವಾಗಿ ಇಂತಹ ರೋಗಗಳಿಗೆ ಹೆಚ್ಚಿನ ಚಿಕಿತ್ಸೆ ಅಗತ್ಯವಿರುವುದಿಲ್ಲ. ಜ್ವರ ಹಾಗೂ ನೋವಿಗಾಗಿ ಪ್ಯಾರಾಸಿಟಮೊಲಾ ಮಾತ್ರೆ ಸೇವಿಸಬೇಕು. ಗುಳ್ಳೆಗಳ ನಿವಾರಣೆಗಾಗಿ ಕಾಲಮೈನ್ ಲೋಷನ್ ಬಳಸಬೇಕು. ಬಾಯಿಯಲ್ಲಿ ಹುಣ್ಣಿನಿಂದ ಆಹಾರ ಸೇವನೆ ಕಷ್ಟಕರವಾಗುವುದರಿಂದ ದ್ರವ ಪದಾರ್ಥಗಳ ಸೇವನೆ ಮಾಡಬೇಕು, ಹೆಚ್ಚಾಗಿ ಎಳನೀರು ಕುಡಿಯಬೇಕು. ಉಪ್ಪು ನೀರಿನಲ್ಲಿ ಸ್ನಾನ ಮಾಡಬೇಕು. ಲ್ಯಾವೆಂಡರ್ ಎಣ್ಣೆ ಬಳಸುವುದರಿಂದಲೂ ಹೆಚ್ಚು ಅನುಕೂಲವಾಗುತ್ತದೆ.
ಆರೋಗ್ಯ
Puttur-ಸೆ.29: ವಿಶ್ವ ಹೃದಯ ದಿನ: ಪುತ್ತೂರಿನ ಮೆಡ್‌ಲ್ಯಾಂಡ್ ಆಸ್ಪತ್ರೆಯಲ್ಲಿ ಹೃದಯ ತಪಾಸಣಾ ಶಿಬಿರ
ವಿಶ್ವ ಹೃದಯ ದಿನದ ಅಂಗವಾಗಿ ಪುತ್ತೂರಿನ ಸಂಪ್ಯದಲ್ಲಿರುವ ಮೆಡ್‌ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಸೆ.29, ಮಂಗಳವಾರದಂದು ಸಂಜೆ ಗಂಟೆ 3ರಿಂದ ವಿಶೇಷ ಹೃದಯ ತಪಾಸಣಾ ಶಿಬಿರ ಹಾಗೂ ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಗಿದೆ.
ಪುತ್ತೂರು: ವಿಶ್ವ ಹೃದಯ ದಿನದ ಅಂಗವಾಗಿ ಪುತ್ತೂರಿನ ಸಂಪ್ಯದಲ್ಲಿರುವ ಮೆಡ್‌ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಸೆ.29, ಮಂಗಳವಾರದಂದು ಸಂಜೆ ಗಂಟೆ 3ರಿಂದ ವಿಶೇಷ ಹೃದಯ ತಪಾಸಣಾ ಶಿಬಿರ ಹಾಗೂ ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಗಿದೆ.
ಶಿಬಿರದಲ್ಲಿ ಹೃದಯದ ಆರೋಗ್ಯಕ್ಕೆ ಸಂಬಂಧಿಸಿದಂತೆ ಇ.ಸಿ.ಜಿ., ಇಕೋ (ECHO), ಟಿ.ಎಂ.ಟಿ. (TMT) ಸೇರಿದಂತೆ ಅಗತ್ಯ ತಪಾಸಣೆಗಳನ್ನು ನಡೆಸಲಾಗುವುದು. ತಪಾಸಣೆಯ ಬಳಿಕ ಹೃದ್ರೋಗ ತಜ್ಞ ವೈದ್ಯರಿಂದ ಸೂಕ್ತ ಸಲಹೆ ಮತ್ತು ಮಾರ್ಗದರ್ಶನವೂ ದೊರೆಯಲಿದೆ.
ಹೃದಯ ಸಂಬಂಧಿ ಕಾಯಿಲೆಗಳನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚಿ ಸೂಕ್ತ ಚಿಕಿತ್ಸೆ ಪಡೆಯಲು ಶಿಬಿರವು ಸಾರ್ವಜನಿಕರಿಗೆ ಉಪಯುಕ್ತ ಅವಕಾಶವಾಗಲಿದೆ. ವಿಶೇಷವಾಗಿ ಎದೆನೋವು, ಉಸಿರಾಟದ ತೊಂದರೆ, ಹೃದಯ ಬಡಿತದಲ್ಲಿ ವ್ಯತ್ಯಾಸ, ಅಧಿಕ ರಕ್ತದೊತ್ತಡ, ಮಧುಮೇಹ ಅಥವಾ ಕುಟುಂಬದಲ್ಲಿ ಹೃದಯ ಕಾಯಿಲೆಯ ಹಿನ್ನೆಲೆ ಹೊಂದಿರುವವರು ಶಿಬಿರದ ಪ್ರಯೋಜನ ಪಡೆಯುವಂತೆ ಆಸ್ಪತ್ರೆಯ ಆಡಳಿತ ಮಂಡಳಿ ಮನವಿ ಮಾಡಿದೆ.
ಹೃದಯದ ಆರೋಗ್ಯದ ಬಗ್ಗೆ ಮುನ್ನೆಚ್ಚರಿಕೆ ವಹಿಸುವುದು ಹಾಗೂ ನಿಯಮಿತ ತಪಾಸಣೆ ಮಾಡಿಸಿಕೊಳ್ಳುವ ಮೂಲಕ ಆರೋಗ್ಯಕರ ಜೀವನಶೈಲಿಯನ್ನು ರೂಢಿಸಿಕೊಳ್ಳುವಂತೆ ಆಸ್ಪತ್ರೆ ತಿಳಿಸಿದೆ.
ಆರೋಗ್ಯ
HIV test-ಯುವಜನರಲ್ಲಿ ಹೆಚ್ಚುತ್ತಿದೆ HIV ಸೋಂಕು; ರಾಜ್ಯದ ಪದವಿ ಮತ್ತು ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಎಚ್‌ಐವಿ ತಪಾಸಣೆ
ರಾಜ್ಯದ ಯುವ ಸಮೂಹದಲ್ಲಿ ಎಚ್‌ಐವಿ (HIV) ಸೋಂಕು ಆತಂಕಕಾರಿ ರೀತಿಯಲ್ಲಿ ಹರಡುತ್ತಿರುವುದನ್ನು ಮನಗಂಡಿರುವ ಕರ್ನಾಟಕ ಸರ್ಕಾರ, ಎಲ್ಲ ಪದವಿ ಮತ್ತು ಎಂಜಿನಿಯರಿಂಗ್ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಎಚ್‌ಐವಿ ತಪಾಸಣೆ ನಡೆಸಲು ನಿರ್ಧರಿಸಿದೆ.
ಬೆಂಗಳೂರು: ರಾಜ್ಯದ ಯುವ ಸಮೂಹದಲ್ಲಿ ಎಚ್‌ಐವಿ (HIV) ಸೋಂಕು ಆತಂಕಕಾರಿ ರೀತಿಯಲ್ಲಿ ಹರಡುತ್ತಿರುವುದನ್ನು ಮನಗಂಡಿರುವ ಕರ್ನಾಟಕ ಸರ್ಕಾರ, ಎಲ್ಲ ಪದವಿ ಮತ್ತು ಎಂಜಿನಿಯರಿಂಗ್ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಎಚ್‌ಐವಿ ತಪಾಸಣೆ ನಡೆಸಲು ನಿರ್ಧರಿಸಿದೆ.
ದೇಶದಲ್ಲೇ ಮೂರನೇ ಸ್ಥಾನ:
ರಾಷ್ಟ್ರೀಯ ಏಡ್ಸ್ ನಿಯಂತ್ರಣ ಸಂಸ್ಥೆಯ ವರದಿ ಪ್ರಕಾರ, ಎಚ್‌ಐವಿ ಸೋಂಕಿತರ ಸಂಖ್ಯೆಯಲ್ಲಿ ಕರ್ನಾಟಕವು ದೇಶದಲ್ಲೇ 3ನೇ ಸ್ಥಾನದಲ್ಲಿದೆ. ರಾಜ್ಯದಲ್ಲಿ ಒಟ್ಟು 2.60 ಲಕ್ಷ ಸೋಂಕಿತರಿದ್ದು, ಈ ಪೈಕಿ ಸುಮಾರು 54 ಸಾವಿರ ಮಂದಿಗೆ ತಮಗೆ ಸೋಂಕು ತಗುಲಿರುವ ಅರಿವೇ ಇಲ್ಲದಿರುವುದು ದೊಡ್ಡ ಆತಂಕಕ್ಕೆ ಕಾರಣವಾಗಿದೆ. ವಿಶೇಷವಾಗಿ 18 ರಿಂದ 35 ವರ್ಷದೊಳಗಿನವರಲ್ಲಿ ಸೋಂಕು ವೇಗವಾಗಿ ಹರಡುತ್ತಿದೆ ಎಂದು ಕರ್ನಾಟಕ ರಾಜ್ಯ ಏಡ್ಸ್ ತಡೆ ಸೊಸೈಟಿ (KSAPS) ಕಳವಳ ವ್ಯಕ್ತಪಡಿಸಿದೆ.
ಕಾಲೇಜುಗಳಲ್ಲಿ ಆರೋಗ್ಯ ಶಿಬಿರ ಮತ್ತು ಜಾಗೃತಿ:
ಸೋಂಕನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚಲು ಆರೋಗ್ಯ ಇಲಾಖೆ ಹಾಗೂ ಕಾಲೇಜು ಶಿಕ್ಷಣ ಇಲಾಖೆಯು ಜಂಟಿಯಾಗಿ ‘ಸಂಯೋಜಿತ ಆರೋಗ್ಯ ಶಿಬಿರ’ಗಳನ್ನು (IHC) ಆಯೋಜಿಸುತ್ತಿವೆ.
ವಿಟಿಯು (VTU) ವ್ಯಾಪ್ತಿಯಲ್ಲೂ ತಪಾಸಣೆ: ರಾಜ್ಯದ ಎಲ್ಲ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ತಪಾಸಣೆ ಹಾಗೂ ಆಪ್ತ ಸಮಾಲೋಚನೆ ನಡೆಸುವಂತೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಸೂಚನೆ ನೀಡಿದೆ.
ವಿವಿಧ ಸ್ಪರ್ಧೆಗಳು: 2026ರ ಜುಲೈನಿಂದ 2027ರ ಫೆಬ್ರವರಿವರೆಗೆ ಕಾಲೇಜುಗಳಲ್ಲಿ ಬೀದಿ ನಾಟಕ, ರಸಪ್ರಶ್ನೆ ಮತ್ತು ತಜ್ಞರ ಉಪನ್ಯಾಸಗಳ ಮೂಲಕ ಜಾಗೃತಿ ಮೂಡಿಸಲು ಯೋಜನೆ ರೂಪಿಸಲಾಗಿದೆ. ಇದಕ್ಕೆ ಅಂಕಗಳ ಆಧಾರದ ಮೇಲೆ ಮಾರ್ಗಸೂಚಿಯನ್ನೂ ನೀಡಲಾಗಿದೆ.
ಮಾಹಿತಿಯ ಗೌಪ್ಯತೆಗೆ ಆದ್ಯತೆ (QR Code ಸೌಲಭ್ಯ):
ವಿದ್ಯಾರ್ಥಿಗಳು ತಮ್ಮ ಎಚ್‌ಐವಿ ಸ್ಥಿತಿಯನ್ನು ಅತ್ಯಂತ ಗೌಪ್ಯವಾಗಿ ತಿಳಿದುಕೊಳ್ಳಲು ಸರ್ಕಾರವು ವಿಶೇಷ ತಂತ್ರಜ್ಞಾನದ ಮೊರೆ ಹೋಗಿದೆ.
ಕ್ಯೂಆರ್ ಕೋಡ್ (QR Code): ಕಾಲೇಜುಗಳಲ್ಲಿ ಕಡ್ಡಾಯವಾಗಿ ಕ್ಯೂಆರ್ ಕೋಡ್ ಪ್ರದರ್ಶಿಸಲಾಗುತ್ತದೆ. ಇದನ್ನು ಸ್ಕ್ಯಾನ್ ಮಾಡುವ ಮೂಲಕ ವಿದ್ಯಾರ್ಥಿಗಳು ಸ್ವಯಂ-ಅಪಾಯ ಮೌಲ್ಯಮಾಪನ ಮಾಡಿಕೊಳ್ಳಬಹುದು.
ವೆಬ್‌ಸೈಟ್: ಗೌಪ್ಯ ಮಾರ್ಗದರ್ಶನಕ್ಕಾಗಿ www.breakfreeindia.org ಜಾಲತಾಣವನ್ನು ಬಳಸಿಕೊಳ್ಳಲು ಅವಕಾಶ ನೀಡಲಾಗಿದೆ.
ಸರ್ಕಾರದ ಮುಂದಿರುವ ಸವಾಲು:
ಕಾಲೇಜುಗಳಲ್ಲಿ ಮಾದಕ ದ್ರವ್ಯಗಳ ವಿರುದ್ಧ ಸಮರ ಸಾರಿರುವ ಸರ್ಕಾರಕ್ಕೆ, ಈಗ ಎಚ್‌ಐವಿ ಹರಡದಂತೆ ತಡೆಯುವುದು ದೊಡ್ಡ ಸವಾಲಾಗಿದೆ. ರಾಜ್ಯದ ಸರ್ಕಾರಿ ಮತ್ತು ಖಾಸಗಿ ಕಾಲೇಜುಗಳಲ್ಲಿರುವ ಲಕ್ಷಾಂತರ ವಿದ್ಯಾರ್ಥಿಗಳ ಆರೋಗ್ಯ ಸುರಕ್ಷತೆಯ ದೃಷ್ಟಿಯಿಂದ ಈ ಕ್ರಮ ಅನಿವಾರ್ಯ ಎಂದು ಕೆಎಸ್‌ಎಪಿಎಸ್ ತಿಳಿಸಿದೆ. ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿಗಳು ಈ ತಪಾಸಣಾ ಪ್ರಕ್ರಿಯೆಯ ಉಸ್ತುವಾರಿ ವಹಿಸಲಿದ್ದಾರೆ.
ಆರೋಗ್ಯ
Puttur-ಪುತ್ತೂರು: ಜು.9ರಂದು ಡಾ. ನಝೀರ್ ಅಹಮ್ಮದ್ ರವರ ಕ್ಲಿನಿಕ್ ನಲ್ಲಿ ಮಾಸಿಕ ಉಚಿತ ಆರೋಗ್ಯ ತಪಾಸಣಾ ಶಿಬಿರ
ಸಾರ್ವಜನಿಕರ ಆರೋಗ್ಯದ ಕಾಳಜಿಯೊಂದಿಗೆ, ಪುತ್ತೂರಿನ ಖ್ಯಾತ ವೈದ್ಯಕೀಯ ತಜ್ಞ ಡಾ. ನಝೀರ್ ಅಹಮದ್, ರೋಟರಿ ಕ್ಲಬ್ ಪುತ್ತೂರು ಸಿಟಿ ಹಾಗೂ ರೋಟರ್ಯಾಕ್ಟ್ ಕ್ಲಬ್ ಪುತ್ತೂರು ಇವರ ಜಂಟಿ ಆಶ್ರಯದಲ್ಲಿ ಮಾಸಿಕ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ.
ಪುತ್ತೂರು: ಸಾರ್ವಜನಿಕರ ಆರೋಗ್ಯದ ಕಾಳಜಿಯೊಂದಿಗೆ, ಪುತ್ತೂರಿನ ಖ್ಯಾತ ವೈದ್ಯಕೀಯ ತಜ್ಞ ಡಾ. ನಝೀರ್ ಅಹಮದ್, ರೋಟರಿ ಕ್ಲಬ್ ಪುತ್ತೂರು ಸಿಟಿ ಹಾಗೂ ರೋಟರ್ಯಾಕ್ಟ್ ಕ್ಲಬ್ ಪುತ್ತೂರು ಇವರ ಜಂಟಿ ಆಶ್ರಯದಲ್ಲಿ ಮಾಸಿಕ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ.
ಶಿಬಿರವು ಜು.9, ಗುರುವಾರದಂದು ಬೆಳಗ್ಗೆ 9-30ರಿಂದ ಮಧ್ಯಾಹ್ನ 12-30ರವರೆಗೆ ಪುತ್ತೂರಿನ ಕಲ್ಲಾರೆಯಲ್ಲಿರುವ ಡಾ. ನಝೀರ್ ಅಹಮದ್ ರವರ ಕ್ಲಿನಿಕ್ ನಲ್ಲಿ ನಡೆಯಲಿರುವುದು.
ಶಿಬಿರದಲ್ಲಿ ಸಿಗುವ ಸೌಲಭ್ಯಗಳು:
ಈ ಶಿಬಿರದಲ್ಲಿ ಸಾರ್ವಜನಿಕರಿಗೆ ಈ ಕೆಳಗಿನ ಪರೀಕ್ಷೆಗಳನ್ನು ಸಂಪೂರ್ಣ ಉಚಿತವಾಗಿ ಮಾಡಿಕೊಡಲಾಗುವುದು.
ಉಚಿತ ಪರೀಕ್ಷೆಗಳು: ಥೈರಾಯಿಡ್ (TSH), ರಕ್ತದ ಸಕ್ಕರೆ ಅಂಶ (Sugar), HBA1C ಮತ್ತು ಮೂಳೆ ಸಾಂದ್ರತೆ ಪರೀಕ್ಷೆ (BMD Test).
-
ನಿಧನ ವಾರ್ತೆ22 hours agoKadaba-ಕಡಬ : ಹೆದ್ದಾರಿಯಲ್ಲಿ ದಿಢೀರ್ ಪ್ರತ್ಯಕ್ಷವಾದ ಕಡವೆ; ಕಾರಿಗೆ ಡಿಕ್ಕಿ, ಸ್ಥಳದಲ್ಲೇ ಸಾವು
-
ಬಿಗ್ ನ್ಯೂಸ್17 hours agoArshia Khan-ನವರಾತ್ರಿಗೆ ‘ಅಷ್ಟಭುಜ ಧಾರಿಣಿ ದೇವಿ’ಯಾಗಿ ಮಿಂಚಲಿರುವ ವಿಟ್ಲದ ಅರ್ಷಿಯಾ ಖಾನ್
-
ಪುತ್ತೂರು14 hours ago
ಮಾಣಿ : ಲೈನ್ ದುರಸ್ತಿ ವೇಳೆ ವಿದ್ಯುತ್ ಸ್ಪರ್ಶ: ಪವರ್ಮ್ಯಾನ್ ಮೃತ್ಯು
-
ಅಪರಾಧ24 hours ago
Vittal Police raid :ಕೋಳಿ ಅಂಕಕ್ಕೆ ವಿಟ್ಲ ಪೊಲೀಸ್ ದಾಳಿ – ನಾಲ್ವರು ವಶಕ್ಕೆ
-
ಮಂಗಳೂರು17 hours agoCM-ಒಂದು ಅಭಿನಂದನೆಯೂ ಇಲ್ಲ ಎಂದು ಕ್ರೀಡಾಪಟುವಿನಿಂದ ಬೇಸರ ವ್ಯಕ್ತವಾದ ಕೂಡಲೇ ಪೂವಮ್ಮಗೆ ಕರೆ ಮಾಡಿದ ಸಿಎಂ..! ಏನೂ ಹೇಳಿದ್ರು ಗೊತ್ತೇ..?
-
Uncategorized22 hours agoಅ.6: ಮಂಗಳೂರಿನ ಪುರಭವನದಲ್ಲಿ ‘ಲವ್ ಜಿಹಾದ್ ಮತ್ತು ಮತಾಂತರ: ಪ್ರಚಾರ ಮತ್ತು ವಾಸ್ತವ’ ಪುಸ್ತಕ ಬಿಡುಗಡೆ
-
ಅಂತರ ರಾಜ್ಯ20 hours agoECI-ಮುಖ್ಯ ಚುನಾವಣ ಆಯುಕ್ತ ವಿರುದ್ಧ ದೇಶಾದ್ಯಂತ ಹೋರಾಟ ತೀವ್ರಗೊಳ್ಳುತ್ತಿದ್ದಂತೆ ‘ಬಿಟ್ಟು ಹೋದವರ ಹೆಸರು ಸೇರ್ಪಡೆಗೆ ಅಭಿಯಾನ’…! 20 ರಾಜ್ಯಗಳಲ್ಲಿ ಕೈಬಿಟ್ಟ 13 ಕೋಟಿ ಮತದಾರರ ಮರುಸೇರ್ಪಡೆಗೆ ಆಯೋಗ ಅವಕಾಶ
-
ಬಿಗ್ ನ್ಯೂಸ್16 hours agoNagalakshmi Chowdary-ಬಂಗ್ಲೆಗುಡ್ಡೆ ಏನೂ ಸ್ಮಶಾನ ಅಲ್ಲ : ಅಲ್ಲಿ ಯಾಕೆ ಅಷ್ಟು ಅಸ್ಥಿಪಂಜರಗಳು ಸಿಕ್ಕಿದವು..? ಧರ್ಮಸ್ಥಳ ಎಸ್ಐಟಿಗೆ ಹೆಚ್ಚಿನ ಅಧಿಕಾರ ನೀಡಬೇಕು..! : ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ


















