Connect with us

Uncategorized

ICC T20 World Cup 2024 2nd Semi-Final: ಹೈಲೈಟ್ಸ್‌ : ಅಂಗ್ಲರನ್ನು ಬಗ್ಗು ಬಡಿದ ಭಾರತ – ಸ್ಪೀನರ್‌ ಗಳ ಮೋಡಿಗೆ ಬಳಲಿ ಬೆಂಡಾದ ಇಂಗ್ಲೇಡ್‌

Published

on

Ad Widget

Ad Widget

Ad Widget

Ad Widget

ನಾಯಕ ರೋಹಿತ್ ಶರ್ಮಾ ಅವರ 57 ರನ್, ಹಾಗು ಸೂರ್ಯಕುಮಾರ್ (47 ರನ್ ಪ್ರಚಂಡ ಬ್ಯಾಟಿಂಗ್ ಹಾಗೂ ಅಕ್ಷರ್ ಪಟೇಲ್(23ಕ್ಕೆ 3), ಕುಲ್ದೀಪ್ ಯಾದವ್(19ಕ್ಕೆ 3) ಜೋಡಿಯ ಸ್ಪಿನ್ ದಾಳಿ ನೆರವಿನಿಂದ ಭಾರತ ತಂಡ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ(IND vs ENG Semi Final) ಇಂಗ್ಲೆಂಡ್ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ 68 ರನ್ಗಳ ಭರ್ಜರಿ ಗೆಲುವು ಸಾಧಿಸಿದೆ.

Ad Widget

Ad Widget

Ad Widget

Ad Widget

ಶನಿವಾರ ಬಾರ್ಬಡೋಸ್ನಲ್ಲಿ ನಡೆಯುವ ಫೈನಲ್ ಪಂದ್ಯದಲ್ಲಿ ರೋಹಿತ್ ಪಡೆ ದಕ್ಷಿಣ ಆಫ್ರಿಕಾದ ಸವಾಲು ಎದುರಿಸಲಿದೆ. 2013ರ ಚಾಂಪಿಯನ್ಸ್‌ ಟ್ರೋಪಿಯ ಬಳಿಕ ಕೂಟದ ಎರಡು ಅಜೇಯ ತಂಡಗಳ ನಡುವಣ ಪ್ರಶಸ್ತಿಗಾಗಿ ಕದನ ನಡೆಯಲಿದೆ. ದಕ್ಷಿಣ ಆಫ್ರಿಕಾ ಇದೆ ಮೊದಲ ಬಾರಿಗೆ ಐಸಿಸಿ ಖುಟವೊಂದರ ಫೈನಲ್‌ ಹಂತಕ್ಕೆ ಏರಿತ್ತು. 1992ರಲ್ಲಿ ವಿಶ್ವ ಕ್ರಿಕೆಟ್‌ ಗೆ ಮರಳಿ ಬಂದ ಬಳಿಕ ಕಳೆದ 32 ವರ್ಷಗಳಲ್ಲಿ ಈ ತಂಡ ಹಲವು ಬಾರಿ ಐಸಿಸಿ ಕೂಟದ ಸೆಮಿಫೈನಲ್‌ ಹಂತ ತಲುಪಿತಾದಾರೂ, ಅಂತಿಮ ಸುತ್ತಿಗೆ ತಲುಪುವಲ್ಲಿ ವಿಫಲವಾಗಿತ್ತು.

Ad Widget

Ad Widget alt="Ad Widget"/>

Ad Widget


ಹಾಲಿ ಚಾಂಪಿಯನ್ ಇಂಗ್ಲೇಡ್‌ ವಿರುದ್ದದ ಗೆಲುವಿನ ಬಳಿಕ ಭಾರತ ಅಂತಿಮ ಸುತ್ತು ತಲುಪಿದ್ದು, ಈ ಮೂಲಕ 10 ವರ್ಷಗಳ ಬಳಿಕ ಟಿ -20 ಕೂಟದ ಫೈನಲ್ ಪ್ರವೇಶಿಸಿದ ಸಾಧನೆ ಇಂಡಿಯಾ ಮಾಡಿದೆ. 2022ರ ಟಿ -20 ವಿಶ್ವಕಪ್ ನ ಸೆಮಿಫೈನಲ್ ಪಂದ್ಯದಲ್ಲಿ ಅಂಗ್ಲರು ಭಾರತವನ್ನು ಮಣಿಸಿ ಅಂತಿಮ ಹಂತಕ್ಕೆರಿದ್ದರು. ಇದೀಗ ಈ ಸೋಲಿನ ಸೇಡು ಭಾರತ ತೀರಿಸಿಕೊಂಡಿದೆ. ಜೂ 29ರಂದು ಫೈನಲ್‌ ನಡೆಯಲಿದೆ.

Ad Widget

Ad Widget <> Ad Widget

ಮಹತ್ವದ ಪಂದ್ಯದಲ್ಲಿ ಟೀಮ್ ಇಂಡಿಯಾ ಸ್ಪಿನ್ ಬೌಲರ್ಗಳು ವಿಕೆಟ್ ಟು ವಿಕೆಟ್ ಬೌಲಿಂಗ್ ನಡೆಸಿದರು. ಪರಿಸ್ಥಿತಿಯ ಸಂಪೂರ್ಣ ಲಾಭ ಪಡೆದ ಬೌಲರ್ಸ್ ಇಂಗ್ಲೆಂಡ್ ಬ್ಯಾಟರ್ಗಳನ್ನು ಬಹುವಾಗಿ ಕಾಡಿದರು. ಆರಂಭದಲ್ಲಿ ಅಕ್ಷರ್ ಪಟೇಲ್ ಆಂಗ್ಲರ್ ಸದ್ದಡಗಿಸದರೆ, ಬಳಿಕ ಚೈನಾ ಮೆನ್ ಬೌಲರ್ ಕುಲ್ದೀಪ್ ಯಾದವ್ ಅಮೋಘ ದಾಳಿ ಸಂಘಟಿಸಿದರು. ಈ ಇಬ್ಬರೂ ಸ್ಪಿನ್ ಬೌಲರ್ಸ್ ತಲಾ ಮೂರು ವಿಕೆಟ್ ಕಬಳಿಸಿದರು.

ಪ್ರೊವಿಡೆನ್ಸ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್ಗೆ ಇಳಿಸಲ್ಪಟ್ಟ ಭಾರತ, ರೋಹಿತ್ ಶರ್ಮ ಅವರ ಅರ್ಧಶತಕದ ನೆರವಿನಿಂದ ನಿಗದಿತ 20 ಓವರ್ಗಳಲ್ಲಿ 7 ವಿಕೆಟ್ಗೆ 171 ರನ್ ಬಾರಿಸಿ ಸವಾಲೊಡ್ಡಿತು. ಜವಾಬಿತ್ತ ಇಂಗ್ಲೆಂಡ್ ನಾಟಕೀಯ ಕುಸಿತ ಕಂಡು 16.4 ಓವರ್ಗಳಲ್ಲಿ 103 ರನ್ಗೆ ಸರ್ವಪತನ ಕಂಡಿತು.

Ad Widget

Ad Widget

ಮೊದಲು ಬ್ಯಾಟಿಂಗ್ ಗೆ ಇಳಿದ ಭಾರತ .ಆರಂಭದಲ್ಲೆ ಸ್ಟಾರ್‌ ಆಟಗಾರ ವಿರಾಟ್ ಕೊಹ್ಲಿ ವಿಕೆಟ್‌ ಕಳೆದುಕೊಂಡಿತ್ತು. ಕೇವಲ 9 ರನ್ ಗಳಿಸಿ ಅವರು ಔಟ್ ಆದರು. ರಿಷಬ್ ಪಂತ್ ಕೂಡ 4 ರನ್ ಗಳಿಸಿ ಔಟಾದರು. ಆದರೆ ನಾಯಕ ರೋಹಿತ್ ಶರ್ಮಾ ಮತ್ತು ಸೂರ್ಯಕುಮಾರ್ ಯಾದವ್ ಇಂಗ್ಲೆಂಡ್ ಬೌಲರ್ ಗಳನ್ನು ಸಮರ್ಥವಾಗಿ ಎದುರಿಸಿದರು.

ರೋಹಿತ್ ಶರ್ಮಾ 39 ಎಸೆತಗಳಲ್ಲಿ 6 ಬೌಂಡರಿ, 2 ಸಿಕ್ಸರ್ ಸಹಿತ 57 ರನ್ ಗಳಿಸಿದರೆ, ಸೂರ್ಯಕುಮಾರ್ ಯಾದವ್ 36 ಎಸೆತಗಳಲ್ಲಿ 47 ರನ್ ಗಳಿಸಿದರು. ಹಾರ್ದಿಕ್ ಪಾಂಡ್ಯ 13 ಎಸೆತಗಳಲ್ಲಿ 23 ರನ್ ಗಳಿಸಿದರು. ರವೀಂದ್ರ ಜಡೇಜಾ 9 ಎಸೆತಗಳಲ್ಲಿ ಅಜೇಯ 17 ರನ್ ಗಳಿಸಿದರು.
ಕ್ರಿಸ್ ಜೋರ್ಡಾನ್ 3 ಓವರ್ ಗಳಲ್ಲಿ 37 ರನ್ ನೀಡಿ 3 ವಿಕೆಟ್ ಪಡೆದರು. ಆದಿಲ್ ರಶೀದ್, ಸ್ಯಾಮ್ ಕರನ್, ಜೋಫ್ರಾ ಆರ್ಚರ್, ರೀಸ್ ಟೋಪ್ಲೆ ತಲಾ ಒಂದು ವಿಕೆಟ್ ಪಡೆದರು.


ಅಂಗ್ಲರನ್ನು ಕಾಡಿದ ಸ್ಪಿನ್ನರ್ಸ್

172 ರನ್ಗಳ ಸವಾಲಿನ ಮೊತ್ತ ಬೆನ್ನತ್ತಿದ ಇಂಗ್ಲೆಂಡ್ ತಂಡಕ್ಕೆ ಭಾರತದ ಬೌಲಿಂಗ್ ಪಡೆ ಮಾರಕವಾಯಿತು. ಅಕ್ಷರ್ ಪಟೇಲ್ ತಮ್ಮ ಮೊದಲನೇ ಓವರ್ ನ ಮೊದಲ ಎಸೆತದಲ್ಲೇ ಜೋಸ್ ಬಟ್ಲರ್ ಅವರ ವಿಕೆಟ್ ಪಡೆದರು. ಬಳಿಕ ಬುಮ್ರಾ 5 ರನ್ ಗಳಿಸಿದ್ದ ಆರಂಭಿಕ ಆಟಗಾರ ಫಿಲ್ ಸಾಲ್ಟ್ ಅವರನ್ನು ಕ್ಲೀನ್ ಬೌಲ್ಡ್ ಮಾಡಿದರು. ಒಂದು ಎಂಡ್‌ ನಿಂದ ಉತ್ತಮ ಬೌಲಿಂಗ್‌ ಪ್ರದರ್ಶನ ತೋರಿದ ಅಕ್ಷರ್ ಪಟೇಲ್‌, ಜಾನಿ ಬೈರ್ ಸ್ಟೋ ಮತ್ತು ಮೊಯೀನ್ ಅಲಿ ಅವರ ವಿಕೆಟ್ ಪಡೆಯುವ ಮೂಲಕ ಇಂಗ್ಲೆಂಡ್ ಆಘಾತದ ಮೇಲೆ ಆಘಾತ ಕೊಟ್ಟರು.

ಮತ್ತೊಂದು ಕಡೆಯಿಂದ ದಾಳಿ ಆರಂಭಿಸಿದ ಕುಲದೀಪ್ ಯಾದವ್ ಕೂಡ ಹ್ಯಾರಿ ಬ್ರೂಕ್, ಸ್ಯಾಮ್ ಕರನ್, ಕ್ರಿಸ್ ಜೋರ್ಡಾನ್ ವಿಕೆಟ್ ಪಡೆದು, ಇಂಗ್ಲೆಂಡ್ ಸೋಲನ್ನು ಖಚಿತಪಡಿಸಿದರು.

ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿದ ಅಕ್ಷರ್ ಪಟೇಲ್ 4 ಓವರ್ ಗಳಲ್ಲಿ 23 ರನ್ ನೀಡಿ ಪ್ರಮುಖ ಮೂರು ವಿಕೆಟ್ ಪಡೆದರು. ಕುಲದೀಪ್ ಯಾದವ್ 4 ಓವರ್ ಗಳಲ್ಲಿ 19 ರನ್ ನೀಡಿ 3 ವಿಕೆಟ್ ಪಡೆದರು. ಜಸ್ಪ್ರೀತ್ ಬುಮ್ರಾ 2.4 ಓವರ್ ಗಳಲ್ಲಿ 12 ರನ್ ನೀಡಿ 2 ವಿಕೆಟ್ ಪಡೆದುಕೊಂಡರು.

Ad Widget
Click to comment

Leave a Reply

Uncategorized

Puttur-ಪುತ್ತೂರು: ಕೃಷ್ಣನಗರದಲ್ಲಿ ಮನೆ ಕಳ್ಳತನ- 2.19 ಲಕ್ಷ ರೂ. ಮೌಲ್ಯದ ಸೊತ್ತು ಕಳವು

Published

on

Ad Widget

Ad Widget

Ad Widget

Ad Widget

ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕುಟುಂಬ ಸಮೇತರಾಗಿ ಊರಿಗೆ ತೆರಳಿದ್ದ ಸಂದರ್ಭವನ್ನು ದುರುಪಯೋಗಪಡಿಸಿಕೊಂಡ ಕಳ್ಳರು ಮನೆಯ ಬೀಗ ಮುರಿದು ಚಿನ್ನಾಭರಣ ಹಾಗೂ ನಗದು ಹಣ ಕಳವು ಮಾಡಿರುವ ಘಟನೆ ಪುತ್ತೂರು ತಾಲೂಕಿನ ಚಿಕ್ಕಮುಡೂರು ಗ್ರಾಮದ ಕೃಷ್ಣನಗರದಲ್ಲಿ ನಡೆದಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕುಟುಂಬ ಸಮೇತರಾಗಿ ಊರಿಗೆ ತೆರಳಿದ್ದ ಸಂದರ್ಭವನ್ನು ದುರುಪಯೋಗಪಡಿಸಿಕೊಂಡ ಕಳ್ಳರು ಮನೆಯ ಬೀಗ ಮುರಿದು ಚಿನ್ನಾಭರಣ ಹಾಗೂ ನಗದು ಹಣ ಕಳವು ಮಾಡಿರುವ ಘಟನೆ ಪುತ್ತೂರು ತಾಲೂಕಿನ ಚಿಕ್ಕಮುಡೂರು ಗ್ರಾಮದ ಕೃಷ್ಣನಗರದಲ್ಲಿ ನಡೆದಿದೆ.

Ad Widget

Ad Widget alt="Ad Widget"/>

Ad Widget

ಕೃಷ್ಣನಗರದಲ್ಲಿ ಉದಯ ಕುಮಾರ್ ಅವರಿಗೆ ಸೇರಿದ ಬಾಡಿಗೆ ಮನೆಯಲ್ಲಿ ಹಿರೇಬಂಡಾಡಿ ಮೂಲದ ಯತೀಶ್ ಅವರು ಕುಟುಂಬ ಸಮೇತರಾಗಿ ವಾಸವಾಗಿದ್ದಾರೆ. ಸಹೋದರ ತಿಲಕ್ ಅವರ ಮದುವೆ ಕಾರ್ಯಕ್ರಮದ ನಿಮಿತ್ತ ನ.12ರಂದು ರಾತ್ರಿ ಮನೆಗೆ ಬೀಗ ಹಾಕಿ ಕುಟುಂಬದೊಂದಿಗೆ ಹಿರೇಬಂಡಾಡಿ ಗ್ರಾಮದ ಕೆಮ್ಮಾರದಲ್ಲಿರುವ ತಮ್ಮ ಮನೆಗೆ ತೆರಳಿದ್ದರು.

Ad Widget

Ad Widget <> Ad Widget

ಮದುವೆ ಕಾರ್ಯಕ್ರಮ ಮುಗಿಸಿ, ನ.16ರಂದು ರಾತ್ರಿ ನಡೆಯಲಿದ್ದ ಔತಣಕೂಟಕ್ಕೆ ತೆರಳುವ ಮೊದಲು ಮಗುವಿನ ಬಟ್ಟೆ ಹಾಗೂ ಇತರ ಅಗತ್ಯ ವಸ್ತುಗಳನ್ನು ತೆಗೆದುಕೊಂಡು ಹೋಗಲು ಸಂಜೆ ವೇಳೆ ಬಾಡಿಗೆ ಮನೆಗೆ ಬಂದಾಗ ಮನೆಯ ಮುಂಭಾಗದ ಬಾಗಿಲಿನ ಬೀಗ ಮುರಿದಿರುವುದು ಗಮನಕ್ಕೆ ಬಂದಿದೆ.

ತಕ್ಷಣ ಮನೆಯೊಳಗೆ ತೆರಳಿ ಪರಿಶೀಲಿಸಿದಾಗ ಎರಡು ಕಬ್ಬಿಣದ ಕಪಾಟುಗಳ ಬಾಗಿಲುಗಳನ್ನು ಯಾವುದೋ ಸಾಧನದಿಂದ ಮೀಟಿ ತೆರೆಯಲಾಗಿತ್ತು. ಕಪಾಟಿನಲ್ಲಿದ್ದ ಚಿನ್ನಾಭರಣ ಹಾಗೂ ನಗದು ಹಣ ಕಳವಾಗಿರುವುದು ಬೆಳಕಿಗೆ ಬಂದಿದೆ.

Ad Widget

Ad Widget

ಕಳ್ಳರು ಮೂರು ಜೊತೆ ಚಿನ್ನದ ಬೆಂಡೋಲೆ (12 ಗ್ರಾಂ), ಒಂದು ಮೂಗುತಿ (1 ಗ್ರಾಂ), ಮಗುವಿನ ಎರಡು ಜೊತೆ ಕಿವಿಯೋಲೆಗಳು (ಒಟ್ಟು 5 ಗ್ರಾಂ), ಎರಡು ಮಗುವಿನ ಬಳೆಗಳು (4 ಗ್ರಾಂ), 40 ಸಾವಿರ ರೂ. ಮೌಲ್ಯದ ಡೈಮಂಡ್ ಪೆಂಡೆಂಟ್ ಹಾಗೂ 3 ಸಾವಿರ ರೂ. ನಗದು ಹಣವನ್ನು ಕಳವು ಮಾಡಿದ್ದಾರೆ.

ಕಳವಾದ ಚಿನ್ನಾಭರಣಗಳ ಒಟ್ಟು ತೂಕ ಸುಮಾರು 22 ಗ್ರಾಂ ಆಗಿದ್ದು, ನಗದು ಹಣ ಹಾಗೂ ಡೈಮಂಡ್ ಪೆಂಡೆಂಟ್ ಸೇರಿದಂತೆ ಕಳವಾದ ಸೊತ್ತುಗಳ ಒಟ್ಟು ಅಂದಾಜು ಮೌಲ್ಯ 2.19 ಲಕ್ಷ ರೂ. ಎಂದು ದೂರಿನಲ್ಲಿ ತಿಳಿಸಲಾಗಿದೆ.

ಈ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget
Continue Reading

Uncategorized

Soujanya case-Big Breaking: ಸೌಜನ್ಯ ಪ್ರಕರಣ: ಎಸ್‌ಐಟಿ ಕಚೇರಿಯಲ್ಲಿ ಕೊನೆಯದಾಗಿ ನೋಡಿದ್ದ ಐವರು ಸಾಕ್ಷಿಗಳ ಹೇಳಿಕೆ ದಾಖಲು

Published

on

Ad Widget

Ad Widget

Ad Widget

Ad Widget

ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ಮಂಗಳೂರಿನ ಎಸ್‌ಐಟಿ ಕಚೇರಿಯಲ್ಲಿ ಐವರ ವಿಚಾರಣೆ ನಡೆಸಲು ಮುಂದಾಗಿದೆ. ಸೌಜನ್ಯಾಳನ್ನು ಕೊನೆಯದಾಗಿ ನೋಡಿದ್ದ ಐವರು ಸಾಕ್ಷಿಗಳಾದ ಆಕೆಯ ಮಾವ ವಿಠಲ ಗೌಡ, ಕೃಷ್ಣಪ್ಪ, ಪುರಂದರ ಗೌಡ, ಯಶೋಧಾ ಹಾಗೂ ಯಶೋಧಾ ಅವರ ಪುತ್ರ ಪ್ರತೀಕ್ ಅವರು ಇಂದು ಎಸ್‌ಐಟಿ ಕಚೇರಿಗೆ ಆಗಮಿಸಿದ್ದಾರೆ.

Ad Widget

Ad Widget

Ad Widget

Ad Widget

ಮಂಗಳೂರು: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ಮಂಗಳೂರಿನ ಎಸ್‌ಐಟಿ ಕಚೇರಿಯಲ್ಲಿ ಐವರ ವಿಚಾರಣೆ ನಡೆಸಲು ಮುಂದಾಗಿದೆ.

Ad Widget

Ad Widget alt="Ad Widget"/>

Ad Widget

ಸೌಜನ್ಯಾಳನ್ನು ಕೊನೆಯದಾಗಿ ನೋಡಿದ್ದ ಐವರು ಸಾಕ್ಷಿಗಳಾದ ಆಕೆಯ ಮಾವ ವಿಠಲ ಗೌಡ, ಕೃಷ್ಣಪ್ಪ, ಪುರಂದರ ಗೌಡ, ಯಶೋಧಾ ಹಾಗೂ ಯಶೋಧಾ ಅವರ ಪುತ್ರ ಪ್ರತೀಕ್ ಅವರು ಇಂದು ಎಸ್‌ಐಟಿ ಕಚೇರಿಗೆ ಆಗಮಿಸಿದ್ದಾರೆ.

Ad Widget

Ad Widget <> Ad Widget

ಈ ಪೈಕಿ ಸೌಜನ್ಯಾಳ ಮಾವ ವಿಠಲ ಗೌಡ ಹಾಗೂ ಪುರಂದರ ಗೌಡ ಅವರು ವಿಚಾರಣೆಗೆ ಹಾಜರಾಗಿದ್ದು, ಕೃಷ್ಣಪ್ಪ, ಯಶೋಧಾ ಮತ್ತು ಪ್ರತೀಕ್ ಅವರು ಜೀಪಿನಲ್ಲಿ ಆಗಮಿಸಿದ್ದಾರೆ.

ಇಂದು ಐವರ ಹೇಳಿಕೆಗಳನ್ನು ಎಸ್‌ಐಟಿ ತಂಡ ದಾಖಲಿಸಿಕೊಳ್ಳಲಿದೆ ಎಂದು ತಿಳಿದುಬಂದಿದೆ.

Ad Widget

Ad Widget

ಈ ನಡುವೆ ತನಿಖಾಧಿಕಾರಿ ಲೋಕೇಶ್ ಹಾಗೂ ಸಹ ತನಿಖಾಧಿಕಾರಿ ಮನೋಜ್ ನಾಯ್ಕ್ ಅವರು ಕೂಡ ಎಸ್‌ಐಟಿ ಕಚೇರಿಗೆ ಆಗಮಿಸಿದ್ದಾರೆ.

Ad Widget
Continue Reading

Uncategorized

Modi visit effect-ಮೋದಿ ಭೇಟಿ ಎಫೆಕ್ಟ್: ಬೆಂಗಳೂರಿನಲ್ಲಿ ಭಾರಿ ಟ್ರಾಫಿಕ್ ಜಾಮ್, ಗಂಟೆಗಟ್ಟಲೆ ಪರದಾಡಿದ ವಾಹನ ಸವಾರರು..!

Published

on

Ad Widget

Ad Widget

Ad Widget

Ad Widget

ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಯ ಹಿನ್ನೆಲೆಯಲ್ಲಿ ನಗರದಲ್ಲಿ ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿದ್ದು, ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿತ್ತು. ಭದ್ರತಾ ಕ್ರಮವಾಗಿ ಹಲವು ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧಿಸಿ ಮಾರ್ಗ ಬದಲಾವಣೆ ಮಾಡಿದ್ದರಿಂದ ದಕ್ಷಿಣ ಬೆಂಗಳೂರಿನಾದ್ಯಂತ ತೀವ್ರ ಸಂಚಾರ ದಟ್ಟಣೆ ಉಂಟಾಗಿ ವಾಹನ ಸವಾರರು ಗಂಟೆಗಟ್ಟಲೆ ಪರದಾಡುವಂತಾಯಿತು.

Ad Widget

Ad Widget

Ad Widget

Ad Widget

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಯ ಹಿನ್ನೆಲೆಯಲ್ಲಿ ನಗರದಲ್ಲಿ ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿದ್ದು, ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿತ್ತು. ಭದ್ರತಾ ಕ್ರಮವಾಗಿ ಹಲವು ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧಿಸಿ ಮಾರ್ಗ ಬದಲಾವಣೆ ಮಾಡಿದ್ದರಿಂದ ದಕ್ಷಿಣ ಬೆಂಗಳೂರಿನಾದ್ಯಂತ ತೀವ್ರ ಸಂಚಾರ ದಟ್ಟಣೆ ಉಂಟಾಗಿ ವಾಹನ ಸವಾರರು ಗಂಟೆಗಟ್ಟಲೆ ಪರದಾಡುವಂತಾಯಿತು.

Ad Widget

Ad Widget alt="Ad Widget"/>

Ad Widget

ಬನ್ನೇರುಘಟ್ಟ ಮುಖ್ಯರಸ್ತೆ, ಆಡುಗೋಡಿ, ಜಯನಗರ, ಜೆ.ಪಿ.ನಗರ, ತಲಘಟ್ಟಪುರ ಹಾಗೂ ಹುಳಿಮಾವು ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಮುಖ ರಸ್ತೆಗಳಲ್ಲಿ ಸಂಚಾರ ನಿರ್ಬಂಧ ಹಾಗೂ ಮಾರ್ಗ ಬದಲಾವಣೆ ಮಾಡಲಾಗಿತ್ತು.

Ad Widget

Ad Widget <> Ad Widget

ನಗರದಾದ್ಯಂತ ಪೊಲೀಸರು ಕಟ್ಟೆಚ್ಚರ ವಹಿಸಿದ್ದು, ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಅವರ ಮಾರ್ಗದರ್ಶನದಲ್ಲಿ ತಾವರೆಕೆರೆ ಮೆಟ್ರೋ ನಿಲ್ದಾಣದ ಸುತ್ತಮುತ್ತ ಬಿಗಿ ಭದ್ರತೆ ಕೈಗೊಳ್ಳಲಾಗಿತ್ತು. ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನದಳದಿಂದಲೂ ತಪಾಸಣೆ ನಡೆಸಲಾಗಿತ್ತು.

ಬನ್ನೇರುಘಟ್ಟ ರಸ್ತೆಯಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಿದ್ದರಿಂದ ಐಐಎಂಬಿ ಹಾಗೂ ಜಯದೇವ ಆಸ್ಪತ್ರೆ ಮಾರ್ಗವಾಗಿ ಸಂಚರಿಸುವವರು ತೀವ್ರ ತೊಂದರೆ ಅನುಭವಿಸಿದರು. ಮುಖ್ಯ ರಸ್ತೆಗೆ ಬ್ಯಾರಿಕೇಡ್ ಅಳವಡಿಸಿದ್ದರಿಂದ ವಾಹನ ಸವಾರರು ಬಿಟಿಎಂ ಬಡಾವಣೆ, ಜೆ.ಪಿ.ನಗರ ಮತ್ತು ಜಯನಗರದ ಒಳರಸ್ತೆಗಳ ಮೂಲಕ ಸಂಚರಿಸಬೇಕಾಯಿತು. ಇದರಿಂದ ಕಿರಿದಾದ ವಸತಿ ಪ್ರದೇಶಗಳ ರಸ್ತೆಗಳಲ್ಲಿ ವಾಹನಗಳ ಸಂಖ್ಯೆ ಹೆಚ್ಚಾಗಿ ಹಲವು ಜಂಕ್ಷನ್‌ಗಳಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದವು.

Ad Widget

Ad Widget

ಸಿಲ್ಕ್ ಬೋರ್ಡ್ ಮೇಲ್ಸೇತುವೆ ಸಂಪರ್ಕ ರಸ್ತೆಗಳು, ಬಿಟಿಎಂ ಬಡಾವಣೆ ಒಳರಸ್ತೆಗಳಲ್ಲಿ ತೀವ್ರ ಸಂಚಾರ ದಟ್ಟಣೆ ಕಂಡುಬಂದಿತು. ಡೇರಿ ವೃತ್ತ, ಮೈಕೋ ಲೇಔಟ್, ಹುಳಿಮಾವು ಹಾಗೂ ಜಯನಗರದ ಪ್ರಮುಖ ರಸ್ತೆಗಳಲ್ಲಿ ವಾಹನಗಳು ನಿಧಾನವಾಗಿ ಚಲಿಸಿದವು.

ಬೆಳಿಗ್ಗೆ 9 ಗಂಟೆಗೆ ಹುಳಿಮಾವಿನಿಂದ ಹೊರಟು ಡೇರಿ ವೃತ್ತದಲ್ಲಿ 11 ಗಂಟೆಗೆ ನಡೆಯಬೇಕಿದ್ದ ಸಭೆಗೆ ತೆರಳುತ್ತಿದ್ದರೂ ಮಧ್ಯಾಹ್ನ 1 ಗಂಟೆಯಾದರೂ ತಲುಪಲು ಸಾಧ್ಯವಾಗಲಿಲ್ಲ ಎಂದು ಪ್ರಯಾಣಿಕ ರಮೇಶ್ ಕುಮಾರ್ ಅಸಮಾಧಾನ ವ್ಯಕ್ತಪಡಿಸಿದರು. ಮುಖ್ಯ ರಸ್ತೆಯನ್ನು ಸಂಪೂರ್ಣ ಬಂದ್ ಮಾಡಲಾಗಿತ್ತು. ಪರ್ಯಾಯ ಮಾರ್ಗಗಳಲ್ಲಿಯೂ ವಾಹನ ದಟ್ಟಣೆ ಇತ್ತು. ಯಾವ ರಸ್ತೆಯಲ್ಲಿ ಸಂಚರಿಸಬೇಕು ಎಂಬುದರ ಕುರಿತು ಸ್ಪಷ್ಟ ಸೂಚನಾ ಫಲಕಗಳಿರಲಿಲ್ಲ ಎಂದು ಅವರು ದೂರಿದರು.

ಸಂಚಾರ ನಿರ್ಬಂಧದಿಂದ ಉದ್ಯೋಗಿಗಳಿಗೆ ತೊಂದರೆಯಾಗುವುದನ್ನು ಗಮನದಲ್ಲಿಟ್ಟುಕೊಂಡು ನಗರದ ಹಲವು ಐಟಿ ಕಂಪನಿಗಳು ಶುಕ್ರವಾರ ತಮ್ಮ ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡುವಂತೆ (ವರ್ಕ್ ಫ್ರಂ ಹೋಮ್) ಸೂಚಿಸಿದ್ದವು.

ಮಾರ್ಗ ಬದಲಾವಣೆ ಕುರಿತು ಎಫ್‌ಎಂ ರೇಡಿಯೊ, ಸುದ್ದಿವಾಹಿನಿಗಳು ಹಾಗೂ ಸಾಮಾಜಿಕ ಮಾಧ್ಯಮಗಳ ಮೂಲಕ ಮುಂಚಿತವಾಗಿಯೇ ಮಾಹಿತಿ ನೀಡಲಾಗಿತ್ತು. ಆದರೂ ಪರ್ಯಾಯ ಮಾರ್ಗಗಳ ಪರಿಚಯವಿಲ್ಲದವರು ಕಿರಿದಾದ ಒಳರಸ್ತೆಗಳಿಗೆ ಪ್ರವೇಶಿಸಿದ್ದರಿಂದ ಗೊಂದಲ ಉಂಟಾಗಿ ಸಂಚಾರ ದಟ್ಟಣೆ ಹೆಚ್ಚಾಯಿತು ಎಂದು ಹಿರಿಯ ಸಂಚಾರ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಹೆಚ್ಚು ಸಂಚಾರ ದಟ್ಟಣೆ ಕಂಡುಬಂದ ಪ್ರದೇಶಗಳು:
ಸಿಲ್ಕ್ ಬೋರ್ಡ್ ಮೇಲ್ಸೇತುವೆ ಸಂಪರ್ಕ ರಸ್ತೆಗಳು
ಬಿಟಿಎಂ ಬಡಾವಣೆ ಒಳರಸ್ತೆಗಳು
ಜೆ.ಪಿ.ನಗರ ಮತ್ತು ಜಯನಗರದ ಒಳರಸ್ತೆಗಳು
ಮೈಕೋ ಲೇಔಟ್ ಜಂಕ್ಷನ್‌ಗಳು
ಹುಳಿಮಾವು ಜಂಕ್ಷನ್‌ಗಳು
ಡೇರಿ ವೃತ್ತ
ಜಯದೇವ ಆಸ್ಪತ್ರೆ ಮತ್ತು ಐಐಎಂಬಿ ಮುಂಭಾಗದ ರಸ್ತೆಗಳು

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!