ಬೆಂಗಳೂರು
BSY-ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ಪ್ರಕರಣ; ಹಲವು ಪುರಾವೆಗಳೊಂದಿಗೆ ಬಿಎಸ್ವೈ ವಿರುದ್ಧ ಚಾರ್ಜ್ ಶೀಟ್
ಬೆಂಗಳೂರು : ಹದಿನೇಳು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ನಾಲ್ವರ ವಿರುದ್ಧ ಸಿಐಡಿ ಅಧಿಕಾರಿಗಳು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.
ಸದಾಶಿವನಗರ ಠಾಣೆಯಲ್ಲಿ ಮಾ. 14ರಂದು ಬಾಲಕಿ ತಾಯಿ ನೀಡಿದ್ದ ದೂರಿನಡಿ ದಾಖಲಾಗಿದ್ದ ಪ್ರಕರಣದ ವಿಚಾರಣೆ ನಡೆಸಿದ್ದ ಸಿಐಡಿ ಅಧಿಕಾರಿಗಳು, ಇತ್ತೀಚೆಗಷ್ಟೇ ಯಡಿಯೂರಪ್ಪ ಅವರನ್ನು ವಿಚಾರಣೆಗೆ ಒಳಪಡಿಸಿ ಹೇಳಿಕೆ ಪಡೆದಿದ್ದರು. ಬಾಲಕಿಯ ಹೇಳಿಕೆಯನ್ನೂ ಸಿಆರ್‌ಪಿಸಿ 164 ಅಡಿ ನ್ಯಾಯಾಧೀಶರ ಎದುರು ದಾಖಲಿಸಿಕೊಂಡಿದ್ದರು.
ಯಡಿಯೂರಪ್ಪ ರವರ ಮೇಲಿನ ಆರೋಪಕ್ಕೆ ಸಂಬಂಧಪಟ್ಟಂತೆ ಹಲವು ಪುರಾವೆಗಳನ್ನು ಸಂಗ್ರಹಿಸಿರುವ ಸಿಐಡಿ ಅಧಿಕಾರಿಗಳು, ತ್ವರಿತಗತಿಯ ವಿಶೇಷ ನ್ಯಾಯಾಲಯ-1ಕ್ಕೆ ಗುರುವಾರ ದೋಷಾರೋಪ ಪಟ್ಟಿ ಸಲ್ಲಿಸಿರುವುದಾಗಿ ಮೂಲಗಳು ಹೇಳಿವೆ.
‘ಪ್ರಕರಣದ ಮೊದಲ ಆರೋಪಿ ಬಿ.ಎಸ್. ಯಡಿಯೂರಪ್ಪ, ಎರಡನೇ ಆರೋಪಿ ಅರುಣ್ ವೈ.ಎಂ, ಮೂರನೇ ಆರೋಪಿ ರುದ್ರೇಶ್ ಎಂ. ಹಾಗೂ ನಾಲ್ಕನೇ ಆರೋಪಿ ಜಿ. ಮರಿಸ್ವಾಮಿ ವಿರುದ್ಧ ಆರೋಪ ಪಟ್ಟಿ ಸಲ್ಲಿಸಲಾಗಿದೆ. ಆರೋಪಿಗಳ ವಿರುದ್ಧ ದೋಷಾರೋಪ ಹೊರಿಸಿರುವ ನ್ಯಾಯಾಧೀಶ ಎನ್.ಎಂ. ರಮೇಶ್ ಅವರು, ವಿಚಾರಣೆಯನ್ನು ಮುಂದೂಡಿದ್ದಾರೆ. ಮುಂದಿನ ವಿಚಾರಣೆ ಸಂದರ್ಭದಲ್ಲಿ ಆರೋಪಿಗಳ ಪರ ವಕೀಲರು ಹಾಜರಾಗುವ ಸಾಧ್ಯತೆ ಇದೆ’ ಎಂದು ಸಿಐಡಿ ಮೂಲಗಳು ಹೇಳಿವೆ.
ತಾಯಿಗೆ ರೂ 2 ಲಕ್ಷ ನಗದು ನೀಡಿದ್ದ ಆರೋಪಿಗಳು:
‘ಬಾಲಕಿಯ ತಾಯಿ ಕೃತ್ಯಕ್ಕೆ ಸಂಬಂಧಿಸಿದಂತೆ ಫೋಟೊ ಹಾಗೂ ವಿಡಿಯೊಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅಪಲೋಡ್ ಮಾಡಿದ್ದರು. ಅದನ್ನು ಗಮನಿಸಿದ್ದ ಬಿ.ಎಸ್.ಯಡಿಯೂರಪ್ಪ, ಇತರೆ ಆರೋಪಿಗಳ ಸಹಾಯದಿಂದ ಬಾಲಕಿ ಹಾಗೂ ತಾಯಿಯನ್ನು ತಮ್ಮ ಮನೆಗೆ ಕರೆಯಿಸಿಕೊಂಡಿದ್ದರು. ಸಾಮಾಜಿಕ ಮಾಧ್ಯಮಗಳಲ್ಲಿ ಅಪ್‌ಲೋಡ್ ಮಾಡಿದ್ದ ವಿಡಿಯೊ ಮತ್ತು ಫೋಟೊಗಳನ್ನು ಅಳಿಸಿ ಹಾಕಿಸಿದ್ದರು. ನಂತರ ಮೊಬೈಲ್‌ನಲ್ಲಿರುವ ವಿಡಿಯೊ ಹಾಗೂ ಪೋಟೊಗಳನ್ನು ಸಹ ಅಳಿಸಿದ್ದರು. ಇದೇ ಸಂದರ್ಭದಲ್ಲಿ ಆರೋಪಿಗಳುತಾಯಿಗೆ ರೂ 2 ಲಕ್ಷ ನಗದು, ಬಾಲಕಿಯ ನೀಡಿದ್ದರು’ ಎಂಬ ಮಾಹಿತಿಯೂ ಆರೋಪ ಪಟ್ಟಿಯಲ್ಲಿದೆ.
‘354ಎ (ಲೈಂಗಿಕ ಕಿರುಕುಳ), 204 (ಸಾಕ್ಷ್ಯ ನಾಶ) ಹಾಗೂ 214 (ಪ್ರಕರಣ ಮುಚ್ಚಿ ಹಾಕಲು ಆಮಿಷ) ಮತ್ತು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಇದಕ್ಕೆ ಸಂಬಂಧಪಟ್ಟಂತೆ ಪ್ರತಿಯೊಂದು ಪುರಾವೆಯನ್ನೂ ಆರೋಪ ಪಟ್ಟಿ ಜೊತೆ ಲಗತ್ತಿಸಲಾಗಿದೆ’ ಎಂದು ಗೊತ್ತಾಗಿದೆ.
ಯಡಿಯೂರಪ್ಪ ವಿರುದ್ಧ ದೂರು ನೀಡಿದ್ದ ಬಾಲಕಿಯ ತಾಯಿ ಆರೋಗ್ಯ ಸಮಸ್ಯೆಯಿಂದ ತೀರಿಕೊಂಡಿದ್ದಾರೆ.
ಏನಿದು ಪ್ರಕರಣ :
ಫೆ.2ರಂದು ನ್ಯಾಯ ಕೇಳಿ ಬಿ.ಎಸ್.ಯಡಿಯೂರಪ್ಪ ಮನೆಗೆ ತೆರಳಿದ್ದ ಸಂತ್ರಸ್ತೆ ಹಾಗೂ ಆಕೆಯ ತಾಯಿ ಮಾ. 3ರಂದು ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆಯ ತಾಯಿಯಿಂದ ದೂರು ದಾಖಲು. ಮಾ. 14ರಂದು ಸದಾಶಿವನಗರ ಠಾಣೆಯಲ್ಲಿ ಬಿಎಸ್ವೈ ವಿರುದ್ಧ ಪೋಕ್ಸೊ ಪ್ರಕರಣ ದಾಖಲು. ನಂತರ ಎಸಿಎಂಎಂ 25ನೇ ನ್ಯಾಯಾಧೀಶರ ಎದುರು ಸಂತ್ರಸ್ತೆಯ ಹೇಳಿಕೆ ದಾಖಲು. ಮಾ. 14ರಂದೇ ಪ್ರಕರಣವನ್ನು ಸಿಐಡಿಗೆ ಹಸ್ತಾಂತರಿಸಿದ್ದ ಸರ್ಕಾರ ಏ. 12ರಂದು ವಿಚಾರಣೆಗೆ ಹಾಜರಾಗುವಂತೆ ಬಿಎಸ್ವೈಗೆ ಸಿಐಡಿ ನೋಟಿಸ್ ನಂತರ ತನಿಖಾಧಿಕಾರಿಗಳು ಧ್ವನಿ ಮಾದರಿ ಸಂಗ್ರಹಿಸಿದ್ದರು. ಏ. 27ರಂದು ಬಿಎಸ್‌ವೈ ವಿರುದ್ದ ದೂರು ನೀಡಿದ್ದ ಸಂತ್ರಸ್ತೆಯ ತಾಯಿ ಮೃತಪಟ್ಟಿದ್ದರು. ಜೂನ್. 12ರಂದು ಬಂಧನ ವಾರಂಟ್ ಜಾರಿಗೊಂಡಿತ್ತು ಜೂನ್. 14ರಂದು ಮುಂದಿನ ವಿಚಾರಣೆ ನಡೆಯುವವರೆಗೂ ಯಡಿಯೂರಪ್ಪ ಅವರನ್ನು ಬಂಧಿಸದಂತೆ ಸೂಚಿಸಿದ್ದ ಹೈಕೋರ್ಟ್ ಸಿಐಡಿ ವಿಚಾರಣೆಗೆ ಹಾಜರಾಗಲು ಸೂಚಿಸಿತ್ತು. ಜೂನ್ 17ರಂದು ಹೈಕೋರ್ಟ್ ಸೂಚನೆ ಮೇರೆಗೆ ಬಿಎಸ್‌ವೈ ಅವರು ಸಿಐಡಿ ವಿಚಾರಣೆಗೆ ಹಾಜರಾಗಿದ್ದರು
ಹಣ ಕೊಡಿಸಿದ್ದ ಮೂವರು ‘ಆರೋಪಿಗಳಾದ ಅರುಣ್ ರುದ್ರೇಶ್ ಹಾಗೂ ಮರಿಸ್ವಾಮಿ ಕೃತ್ಯಕ್ಕೆ ಸಂಬಂಧಪಟ್ಟ ವಿಡಿಯೊವನ್ನು ನೋಡಿದ್ದರು. ಯಡಿಯೂರಪ್ಪ ಹೇಳಿದರೆಂಬ ಕಾರಣಕ್ಕೆ ದೂರುದಾರ ಮಹಿಳೆಯನ್ನು ಸಂಪರ್ಕಿಸಿದ್ದರು. ನಂತರ ಅವರನ್ನು ಯಡಿಯೂರಪ್ಪ ಬಳಿ ಕರೆಸಿದ್ದರು. ಅವರ ಮನೆಯಲ್ಲಿ ಮಾತುಕತೆ ಆಗಿತ್ತು. ನಂತರ ದೂರುದಾರ ಮಹಿಳೆಗೆ ಮೂವರು ಆರೋಪಿಗಳು ರೂ 2 ಲಕ್ಷ ಕೊಡಿಸಿ ಕಳುಹಿಸಿದ್ದರು’ ಎಂಬ ಮಾಹಿತಿ ಆರೋಪ ಪಟ್ಟಿಯಲ್ಲಿದೆ.
ಬಿಗ್ ನ್ಯೂಸ್
Bail rejected-ಸಿದ್ದರಾಮಯ್ಯ ವಿರುದ್ಧದ ‘ಸ್ಟಿಂಗ್’ ಪ್ರಕರಣ: ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿ 6 ಮಂದಿಯ ಜಾಮೀನು ಅರ್ಜಿ ವಜಾ
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ವಿಡಿಯೋ ಚಿತ್ರೀಕರಣ ಹಾಗೂ ಅದನ್ನು ಪ್ರಸಾರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿದಂತೆ ಆರು ಮಂದಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ನ್ಯಾಯಾಲಯ ವಜಾಗೊಳಿಸಿದೆ. ಇದರಿಂದ ಆರೋಪಿಗಳು ಪೊಲೀಸರಿಗೆ ಶರಣಾಗಬೇಕಾದ ಪರಿಸ್ಥಿತಿ ಎದುರಾಗಿದೆ.
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ವಿಡಿಯೋ ಚಿತ್ರೀಕರಣ ಹಾಗೂ ಅದನ್ನು ಪ್ರಸಾರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿದಂತೆ ಆರು ಮಂದಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ನ್ಯಾಯಾಲಯ ವಜಾಗೊಳಿಸಿದೆ. ಇದರಿಂದ ಆರೋಪಿಗಳು ಪೊಲೀಸರಿಗೆ ಶರಣಾಗಬೇಕಾದ ಪರಿಸ್ಥಿತಿ ಎದುರಾಗಿದೆ.
ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ನಡೆಸಲಾಗಿದೆ ಎಂದು ಹೇಳಲಾದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಈ ವಿಡಿಯೋ ಕುರಿತು ಸಿದ್ದರಾಮಯ್ಯ ಅವರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಬೆಂಗಳೂರಿನ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೇಂದ್ರ ಅಪರಾಧ ವಿಭಾಗ (CCB) ಪೊಲೀಸರು ತನಿಖೆ ಕೈಗೊಂಡಿದ್ದರು.
ಪ್ರಕರಣದ ತನಿಖೆಯ ಭಾಗವಾಗಿ ಪವರ್ ಟಿವಿ ವ್ಯವಸ್ಥಾಪಕ ನಿರ್ದೇಶಕ ರಾಕೇಶ್ ಶೆಟ್ಟಿ, ಕಾಂಗ್ರೆಸ್‌ನಿಂದ ಉಚ್ಚಾಟಿತರಾಗಿರುವ ಕೃಪಾ ಆಳ್ವಾ, ಪ್ರಜ್ವಲ್ ಪ್ರಸಾದ್, ಚಂದನ್ ಎಚ್.ಎಸ್., ಕೆ.ವಿ. ಪ್ರಶಾಂತ್ ಕುಮಾರ್ ಹಾಗೂ ವಿನೋದ್ ಕುಮಾರ್ ಅವರಿಗೆ ಸಿಸಿಬಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದರು.
ಈ ಹಿನ್ನೆಲೆಯಲ್ಲಿ ಆರು ಮಂದಿ ಆರೋಪಿಗಳು ಬಂಧನದ ಭೀತಿಯಿಂದ ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯದ ಮೊರೆ ಹೋಗಿದ್ದರು. ಅರ್ಜಿಗಳ ವಿಚಾರಣೆ ನಡೆಯುವವರೆಗೆ ನ್ಯಾಯಾಲಯ ಷರತ್ತುಬದ್ಧ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು.
ಆದರೆ, ನವೆಂಬರ್ 20ರಂದು ವಿಚಾರಣೆ ಪೂರ್ಣಗೊಳಿಸಿದ 66ನೇ ಸಿಸಿಎಚ್ ನ್ಯಾಯಾಲಯ ಆರು ಮಂದಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ವಜಾಗೊಳಿಸಿದೆ. ಈ ಹಿಂದೆ ಮಧ್ಯಂತರ ರಕ್ಷಣೆ ನೀಡುವಾಗ, ಅಂತಿಮವಾಗಿ ನಿರೀಕ್ಷಣಾ ಜಾಮೀನು ದೊರೆಯದಿದ್ದಲ್ಲಿ ತನಿಖಾಧಿಕಾರಿಗಳ ಮುಂದೆ ಶರಣಾಗುವಂತೆ ನ್ಯಾಯಾಲಯ ಷರತ್ತು ವಿಧಿಸಿತ್ತು ಎನ್ನಲಾಗಿದೆ.
ಇದೀಗ ಜಾಮೀನು ಅರ್ಜಿಗಳು ವಜಾಗೊಂಡಿರುವುದರಿಂದ ಆರೋಪಿಗಳು ಪೊಲೀಸರಿಗೆ ಶರಣಾಗಬೇಕಿದ್ದು, ಇಲ್ಲವಾದಲ್ಲಿ ಬಂಧನಕ್ಕೆ ಒಳಗಾಗುವ ಸಾಧ್ಯತೆ ಎದುರಾಗಿದೆ.
ಬಿಗ್ ನ್ಯೂಸ್
Girish Mattannavar-ಧರ್ಮಸ್ಥಳ ಪ್ರಕರಣ: ಗಿರೀಶ್ ಮಟ್ಟಣ್ಣನವರ್‌ಗೆ ಹೈಕೋರ್ಟ್‌ನಲ್ಲಿ ಹಿನ್ನಡೆ; ಎಫ್‌ಐಆರ್ ರದ್ದುಪಡಿಸಲು ನಿರಾಕರಣೆ
ಧರ್ಮಸ್ಥಳದಲ್ಲಿ ಸಾವಿರಾರು ಶವಗಳನ್ನು ಹೂಳಲಾಗಿದೆ ಎಂದು ಸುಳ್ಳು ಸಾಕ್ಷ್ಯ ಸೃಷ್ಟಿಸಿ, ತಪ್ಪು ಮಾಹಿತಿ ಹರಡಿದ ಆರೋಪಕ್ಕೆ ಸಂಬಂಧಿಸಿದಂತೆ ದಾಖಲಿಸಲಾಗಿರುವ ಎಫ್‌ಐಆರ್ ಹಾಗೂ ವಿಶೇಷ ತನಿಖಾ ತಂಡದ (SIT) ತನಿಖೆಯನ್ನು ರದ್ದುಗೊಳಿಸುವಂತೆ ಕೋರಿ ಗಿರೀಶ್ ಮಟ್ಟಣ್ಣನವರ್ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.
ಬೆಂಗಳೂರು: ಧರ್ಮಸ್ಥಳದಲ್ಲಿ ಸಾವಿರಾರು ಶವಗಳನ್ನು ಹೂಳಲಾಗಿದೆ ಎಂದು ಸುಳ್ಳು ಸಾಕ್ಷ್ಯ ಸೃಷ್ಟಿಸಿ, ತಪ್ಪು ಮಾಹಿತಿ ಹರಡಿದ ಆರೋಪಕ್ಕೆ ಸಂಬಂಧಿಸಿದಂತೆ ದಾಖಲಿಸಲಾಗಿರುವ ಎಫ್‌ಐಆರ್ ಹಾಗೂ ವಿಶೇಷ ತನಿಖಾ ತಂಡದ (SIT) ತನಿಖೆಯನ್ನು ರದ್ದುಗೊಳಿಸುವಂತೆ ಕೋರಿ ಗಿರೀಶ್ ಮಟ್ಟಣ್ಣನವರ್ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.
ಈ ಮೂಲಕ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್, ಎಸ್‌ಐಟಿ ನೀಡಿರುವ ನೋಟಿಸ್ ಹಾಗೂ ಬೆಳ್ತಂಗಡಿಯ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯದ ವಿಚಾರಣಾ ಪ್ರಕ್ರಿಯೆಗಳನ್ನು ರದ್ದುಗೊಳಿಸಲು ನ್ಯಾಯಾಲಯ ನಿರಾಕರಿಸಿದೆ.
ಏನಿದು ಪ್ರಕರಣ?
ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ ಎಂದು ಮುಸುಕುಧಾರಿ ವ್ಯಕ್ತಿಯೊಬ್ಬರು ನೀಡಿದ್ದ ದೂರಿನ ಸತ್ಯಾಸತ್ಯತೆ ಪರಿಶೀಲಿಸಲು ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡವನ್ನು ರಚಿಸಿತ್ತು. ಆದರೆ, ತನಿಖೆಯ ವೇಳೆ ದೂರುದಾರ ಚಿನ್ನಯ್ಯನ ಹೇಳಿಕೆಗಳಲ್ಲಿ ಗೊಂದಲಗಳು ಕಂಡುಬಂದ ಹಿನ್ನೆಲೆಯಲ್ಲಿ, ಸುಳ್ಳು ಸಾಕ್ಷ್ಯ ಸೃಷ್ಟಿ ಮತ್ತು ನಕಲಿ ದಾಖಲೆ ತಯಾರಿಕೆಯ ಸಂಘಟಿತ ಪಿತೂರಿಯ ಆರೋಪದಡಿ ಗಿರೀಶ್ ಮಟ್ಟಣ್ಣನವರ್, ಮಹೇಶ್ ಶೆಟ್ಟಿ ತಿಮರೋಡಿ, ಚಿನ್ನಯ್ಯ, ಜಯಂತ್ ಟಿ., ವಿಠಲ ಗೌಡ ಮತ್ತು ಸುಜಾತಾ ಭಟ್ ಸೇರಿದಂತೆ ಆರು ಜನರ ವಿರುದ್ಧ ಎಸ್‌ಐಟಿ ತನಿಖೆ ತೀವ್ರಗೊಳಿಸಿದೆ. ಈ ಹಿನ್ನೆಲೆಯಲ್ಲಿ ಮಟ್ಟಣ್ಣನವರ್ ಹೈಕೋರ್ಟ್ ಮೆಟ್ಟಿಲೇರಿದ್ದರು.
ಈ ವೇಳೆ, ಗಿರೀಶ್ ಮಟ್ಟಣ್ಣನವರ್ ಪರ ಹಿರಿಯ ವಕೀಲ ಎಸ್. ಬಾಲನ್ ಅವರು, ಈ ಪ್ರಕರಣದಲ್ಲಿ ಸರ್ಕಾರಿ ಅಧಿಕಾರಿಯೇ ದೂರು ನೀಡಬೇಕಿತ್ತು; ಆದರೆ ಸರ್ಕಾರಿ ನೌಕರನಲ್ಲದ ಮುಸುಕುಧಾರಿ ಚಿನ್ನಯ್ಯ ದೂರು ನೀಡಿದ್ದಾರೆ ಎಂದು ವಾದಿಸಿ, ಅಸಂಜ್ಞೆಯ ಅಪರಾಧಕ್ಕೆ ಪೊಲೀಸರು ನೇರ ಎಫ್‌ಐಆರ್ ದಾಖಲಿಸಿರುವುದು ಕಾನೂನುಬಾಹಿರವಾಗಿದ್ದು, ದೂರುದಾರರಿಗೆ ಮ್ಯಾಜಿಸ್ಟ್ರೇಟ್ ಕೋರ್ಟ್ ಮೊರೆ ಹೋಗುವಂತೆ ತಿಳಿಸಬೇಕಿತ್ತು ಎಂದರು. ಜೊತೆಗೆ, ವಿಚಾರಣೆಯ ನೆಪದಲ್ಲಿ ಅರ್ಜಿದಾರರಿಗೆ ಬೆಳಗಿನಿಂದ ರಾತ್ರಿಯವರೆಗೆ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿ, ಎಸ್‌ಐಟಿ ತನಿಖೆಯನ್ನು ರದ್ದುಗೊಳಿಸುವಂತೆ ಕೋರಿದರು.
ಮತ್ತೊಂದೆಡೆ, ಎಸ್‌ಐಟಿ ಪರವಾಗಿ ರಾಜ್ಯ ಸರ್ಕಾರಿ ಅಭಿಯೋಜಕ ಬಿ.ಎನ್. ಜಗದೀಶ್ ಅವರು, ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಪೂರ್ವಾನುಮತಿ ಪಡೆದೇ ಕಾನೂನುಬದ್ಧವಾಗಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ತಿಳಿಸಿದರು. ಜೊತೆಗೆ, ತನಿಖೆಯ ಹಂತದಲ್ಲಿ ತಾಂತ್ರಿಕ ನಿರ್ಬಂಧಗಳು ಅನ್ವಯವಾಗುವುದಿಲ್ಲ; ಅವು ಆರೋಪಪಟ್ಟಿ ಸಲ್ಲಿಕೆಯಾದ ನಂತರ ಅನ್ವಯವಾಗುತ್ತವೆ. ಹಿಂದೆ ತನಿಖೆ ಸರಿಯಾಗಿ ನಡೆಯಲಿ ಎಂದು ಕೋರಿದ್ದ ಅರ್ಜಿದಾರರು, ಈಗ ತನಿಖೆ ತಮ್ಮ ಕಡೆ ತಿರುಗುತ್ತಿದ್ದಂತೆ ಎಫ್‌ಐಆರ್ ರದ್ದತಿಗೆ ಕೋರುತ್ತಿದ್ದಾರೆ ಎಂದು ವಾದಿಸಿದರು.
ಹೈಕೋರ್ಟ್ ಹೇಳಿದ್ದೇನು?
ವಿಚಾರಣೆ ವೇಳೆ ಮೌಖಿಕ ಅಭಿಪ್ರಾಯ ವ್ಯಕ್ತಪಡಿಸಿದ ನ್ಯಾಯಾಧೀಶರು, “ಒಂದೆಡೆ ಪ್ರಕರಣದ ಸಮಗ್ರ ತನಿಖೆಯಾಗಬೇಕೆಂದು ನೀವೇ ಒತ್ತಾಯಿಸುತ್ತೀರಿ, ಮತ್ತೊಂದೆಡೆ ತನಿಖೆ ನಡೆಯುತ್ತಿರುವಾಗಲೇ ಎಫ್‌ಐಆರ್ ರದ್ದುಗೊಳಿಸುವಂತೆ ಕೋರುತ್ತಿದ್ದೀರಿ” ಎಂದು ಪ್ರಶ್ನಿಸಿದರು. ಜೊತೆಗೆ, ಮೂಲ ಎಫ್‌ಐಆರ್ ಅಪರಿಚಿತ ವ್ಯಕ್ತಿಗಳ ವಿರುದ್ಧ ದಾಖಲಾಗಿದ್ದು, ತನಿಖೆಯಲ್ಲಿ ದೊರೆತ ಸಾಕ್ಷ್ಯದ ಆಧಾರದ ಮೇಲೆ ಮ್ಯಾಜಿಸ್ಟ್ರೇಟ್ ಅನುಮತಿಯೊಂದಿಗೆ ಅರ್ಜಿದಾರರನ್ನು ಆರೋಪಿಗಳನ್ನಾಗಿ ಮಾಡಲಾಗಿದೆ. ತನಿಖೆ ಇನ್ನೂ ಪ್ರಗತಿಯಲ್ಲಿರುವಾಗ ಎಫ್‌ಐಆರ್ ರದ್ದು ಕೋರುವುದು ಅಕಾಲಿಕ ಎಂದು ಪೀಠ ಸ್ಪಷ್ಟಪಡಿಸಿತು. ಇದೆ ವೇಳೆ, ನ್ಯಾಯಾಧೀಶರ ಕರ್ತವ್ಯವು ತಾವರೆ ಎಲೆಯ ಮೇಲಿನ ನೀರಿನಂತಿರಬೇಕು; ನೈತಿಕ ವಿಚಾರಗಳಿಂದ ಪ್ರಭಾವಿತವಾಗದೆ ಕೇವಲ ಕಾನೂನುಬದ್ಧ ದಾಖಲೆಗಳ ಆಧಾರದ ಮೇಲೆ ನಿರ್ಧಾರ ತೆಗೆದುಕೊಳ್ಳಬೇಕು ಎಂದು ನ್ಯಾಯಮೂರ್ತಿ ಶ್ರೀಶಾನಂದ ಅಭಿಪ್ರಾಯಪಟ್ಟರು.
ಬಿಗ್ ನ್ಯೂಸ್
High Court-Social Media ಅಕೌಂಟ್ ಇದ್ದ ಮಾತ್ರಕ್ಕೆ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡುವ Free Licence ಇಲ್ಲ : ಬೆಳ್ತಂಗಡಿಯ ಮೋಹನ್ ಬೋಳಂಗಡಿ – ಶುಭಾ ರೈ ವಿರುದ್ಧ ದಾಖಲಾದ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ಎಚ್ಚರಿಕೆ
ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಹಾಗೂ ಬೆದರಿಕೆಯ ಸಂದೇಶಗಳನ್ನು ಪೋಸ್ಟ್ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ರದ್ದುಗೊಳಿಸಲು ನಿರಾಕರಿಸಿರುವ ಕರ್ನಾಟಕ ಹೈಕೋರ್ಟ್, “ಸಾಮಾಜಿಕ ಜಾಲತಾಣದ ಖಾತೆ ಹೊಂದಿರುವ ಮಾತ್ರಕ್ಕೆ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡಲು ಮುಕ್ತ ಪರವಾನಗಿ (Free Licence) ಸಿಕ್ಕಿದೆ ಎಂದು ಭಾವಿಸಬಾರದು” ಎಂದು ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ.
ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಹಾಗೂ ಬೆದರಿಕೆಯ ಸಂದೇಶಗಳನ್ನು ಪೋಸ್ಟ್ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ರದ್ದುಗೊಳಿಸಲು ನಿರಾಕರಿಸಿರುವ ಕರ್ನಾಟಕ ಹೈಕೋರ್ಟ್, “ಸಾಮಾಜಿಕ ಜಾಲತಾಣದ ಖಾತೆ ಹೊಂದಿರುವ ಮಾತ್ರಕ್ಕೆ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡಲು ಮುಕ್ತ ಪರವಾನಗಿ (Free Licence) ಸಿಕ್ಕಿದೆ ಎಂದು ಭಾವಿಸಬಾರದು” ಎಂದು ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ. ಆ ಕುರಿತ ವರದಿ ಇಲ್ಲಿದೆ:
ಏನಿದು ಪ್ರಕರಣ?
ಏಪ್ರಿಲ್ 24, 2025 ರಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ ನಿವಾಸಿ ತನುಷ್ ಎಂ. ಶೆಟ್ಟಿ (24 ವರ್ಷ) ಎಂಬುವವರು ನೀಡಿದ ದೂರುಗಳ ಆಧಾರದ ಮೇಲೆ ಶುಭಾ ರೈ ಮತ್ತು ಮೋಹನ್ ಬೋಳಂಗಡಿ ವಿರುದ್ಧ ಎರಡು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿದ್ದರು. ಅದರಲ್ಲಿ, ದೂರುದಾರರು ಆಸ್ಪತ್ರೆಯ ಹಾಸಿಗೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಫೋಟೋವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಬಳಸಿಕೊಂಡು ಅಸಭ್ಯ ಮತ್ತು ಬೆದರಿಕೆಯ ಸಂದೇಶಗಳನ್ನು ಹಾಕಲಾಗಿದೆ ಎಂದು ಆರೋಪಿಸಿದ್ದರು. ಅಲ್ಲದೆ, ಮಾರ್ಫ್ ಮಾಡಿದ (ತಿರುಚಿದ) ಫೋಟೋಗಳನ್ನು ಹಂಚಿಕೊಂಡು, ದೂರುದಾರರು ಕ್ರಿಶ್ಚಿಯನ್ ಸಮುದಾಯಕ್ಕೆ ಸೇರಿದವರು ಎಂದು ಸುಳ್ಳು ಪ್ರಚಾರ ಮಾಡಿ ಕೋಮು ದ್ವೇಷ ಹರಡಲು ಯತ್ನಿಸಲಾಗಿದೆ; ಜೊತೆಗೆ ದೂರುದಾರರು ಅತ್ಯಾಚಾರ, ಬಲವಂತದ ಗರ್ಭಪಾತ, ಪೋಕ್ಸೋ ಅಪರಾಧ, ಹಿಂದೂ ದೇವಾಲಯಗಳಿಗೆ ಅವಮಾನ ಮತ್ತು ಸೌಜನ್ಯ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಸುಳ್ಳು ಹಾಗೂ ಮಾನಹಾನಿಕರ ಪೋಸ್ಟ್‌ಗಳನ್ನು ಹರಿಬಿಡಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಬೆನ್ನಲ್ಲೇ, ಆರೋಪಿಗಳು ತಮ್ಮ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 353(2) ಮತ್ತು 62ರ ಅಡಿಯಲ್ಲಿ ದಾಖಲಾಗಿರುವ ಎರಡು ಕ್ರಿಮಿನಲ್ ಪ್ರಕರಣಗಳನ್ನು ರದ್ದುಗೊಳಿಸುವಂತೆ ಕೋರಿ ಕರ್ನಾಟಕ ಹೈಕೋರ್ಟ್ ಮೇಟ್ಟಿಲೇರಿದ್ದರು.
ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿನ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಪೂರ್ವಾನುಮತಿ ಕಡ್ಡಾಯ:
ಕರ್ನಾಟಕ ಹೈಕೋರ್ಟ್ ಮುಂದುವರೆದು, ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ಪೀಠವು, “ಮೇಲ್ನೋಟಕ್ಕೆ ದೂರುದಾರರ ಆರೋಪಗಳು ಸುಳ್ಳಲ್ಲ ಎಂಬುದು ಕಂಡುಬರುತ್ತಿದೆ. ಈ ಹಿಂದೆ ನ್ಯಾಯಾಲಯ ನೀಡಿದ್ದ ಮಧ್ಯಂತರ ತಡೆಯಾಜ್ಞೆಯಿಂದಾಗಿ ಪೊಲೀಸ್ ತನಿಖೆ ಸ್ಥಗಿತಗೊಂಡಿತ್ತು. ಆರೋಪಗಳು ಗಂಭೀರವಾಗಿದ್ದು, ಅವುಗಳ ಸತ್ಯಾಸತ್ಯತೆ ತಿಳಿಯಲು ತನಿಖೆಯ ಅಗತ್ಯವಿದೆ” ಎಂದು ಅಭಿಪ್ರಾಯಪಟ್ಟು ಅರ್ಜಿಗಳನ್ನು ವಜಾಗೊಳಿಸಿದ್ದಾರೆ. ಜೊತೆಗೆ, “ಸಾಮಾಜಿಕ ಜಾಲತಾಣದಲ್ಲಿ ಖಾತೆ ಇದೆ ಎಂಬ ಮಾತ್ರಕ್ಕೆ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡಲು ಅದೊಂದು ಮುಕ್ತ ಪರವಾನಗಿ (Free Licence) ಅಲ್ಲ. ವಾಕ್ ಸ್ವಾತಂತ್ರ್ಯಕ್ಕೆ ಸಂವಿಧಾನದ ಮಿತಿಗಳಿವೆ” ಎಂದು ಸ್ಪಷ್ಟಪಡಿಸಿದರು.
-
ಮಂಗಳೂರು11 hours agoMangalore-ಮಂಗಳೂರು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಹೊಸ ತಿರುವು: ಮನೆಯವರ ಜೊತೆ ತೆರಳಲು ಯುವತಿ ನಕಾರ..!
-
ಬಿಗ್ ನ್ಯೂಸ್18 hours agoBail rejected-ಸಿದ್ದರಾಮಯ್ಯ ವಿರುದ್ಧದ ‘ಸ್ಟಿಂಗ್’ ಪ್ರಕರಣ: ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿ 6 ಮಂದಿಯ ಜಾಮೀನು ಅರ್ಜಿ ವಜಾ
-
ಅಂತರ ರಾಜ್ಯ16 hours agoFormer CBI officer-ಅಧಿಕಾರ, ಹಣ, ಐಷಾರಾಮಿ ಬದುಕಿಗೆ ಗುಡ್ಬೈ; ಗುಹೆಯಲ್ಲಿ ಧ್ಯಾನ ಮಾಡುತ್ತಿರುವ ಮಾಜಿ ಸಿಬಿಐ ಅಧಿಕಾರಿ..!
-
ನಿಧನ ವಾರ್ತೆ18 hours agoHeart attack-ಸಾಲಿಗ್ರಾಮ: ಕಚೇರಿಯಲ್ಲೇ ಹೃದಯಾಘಾತ; ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ ನಿಧನ
-
ಸಿನೆಮಾ16 hours agoDawood-‘ಧುರಂಧರ್ ‘ ನಲ್ಲಿ ದಾವೂದ್ ನ ತೋರಿಸಿದ ರೀತಿ ವಾಸ್ತವವಲ್ಲ…! ಮೋಸ್ಟ್ ವಾಂಟೆಡ್ ಪಾತಕಿ ಈಗ ಹೇಗಿದ್ದಾನೆ ಗೊತ್ತೇ..? ಮಾಜಿ FBI ಅಧಿಕಾರಿ ಹೇಳಿದ್ದೇನೂ..?
-
ನಿಧನ ವಾರ್ತೆ18 hours agoMudbidri-ಮಂಗಳೂರಿನಲ್ಲಿ ಮೇಲ್ಛಾವಣಿ ಕೆಲಸದ ವೇಳೆ ಅವಘಡ: ಮೂಡುಬಿದಿರೆ ತಾ.ಪಂ. ಮಾಜಿ ಉಪಾಧ್ಯಕ್ಷ ಸಾವು
-
ಅಂತರ ರಾಜ್ಯ11 hours agoArrested-14ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿ ಅಪಹರಣಕಾರರ ಬೇಡಿಕೆಯಂತೆ 25ಲಕ್ಷ ರೂ ನೀಡಿದರೂ ಮರಳಿ ಬಾರದ ಶಿಕ್ಷಕನ ಪ್ರಕರಣಕ್ಕೆ ಮಹತ್ವದ ತಿರುವು..!
-
ನಿಧನ ವಾರ್ತೆ17 hours agoOne-sided love-ಇನ್ಸ್ಟಾಗ್ರಾಮ್ ಇನ್ಫ್ಲುಯೆನ್ಸರ್ ಮೇಲಿನ ಒನ್ಸೈಡೆಡ್ ಲವ್; ಹಲ್ಲೆಗೊಳಗಾದ ಯುವಕ ಸಾವು















