Connect with us

ರಾಜಕೀಯ

Hemanatha Shetty-ಪುತ್ತೂರು -ಕುಂಬ್ರ- ಕೌಡಿಚ್ಚಾರ್ ಸಿಟಿ ಬಸ್‌ಗೆ ಚಾಲನೆ; ಪುತ್ತೂರು ಕ್ಷೇತ್ರ ಪ್ರತೀ ರಂಗದಲ್ಲೂ ಅಭಿವೃದ್ದಿ ಹೊಂದುತ್ತಿದೆ: ಕಾವು ಹೇಮನಾಥ ಶೆಟ್ಟಿ

Published

on

Ad Widget

Ad Widget

Ad Widget

Ad Widget

ಪುತ್ತೂರು; ಅಶೋಕ್ ರೈಯವರು ಶಾಸಕರಾಗಿ ಆಯ್ಕೆಯಾದ ಬಳಿಕ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ದಿ ಕಾರ್ಯಗಳು ನಡೆಯುತ್ತಲೇ ಇದ್ದು ಪ್ರತೀ ರಂಗದಲ್ಲೂ ಇದನ್ನು ಕಾಣಲು ಸಾಧ್ಯವಾಗಿದೆ ಎಂದು ಕೆಪಿಸಿಸಿ ಸಂಯೋಜಕರಾದ ಕಾವು ಹೇಮನಾಥ ಶೆಟ್ಟಿಯವರು ಹೇಳಿದರು. ಅವರು ಪುತ್ತೂರು- ಕೌಡಿಚ್ಚಾರ್ ಸಿಟಿ ಬಸ್ ವ್ಯವಸ್ಥೆಗೆ ಕೌಡಿಚ್ಚಾರ್‌ನಲ್ಲಿ ಚಾಲನೆ ನೀಡಿ ಮಾತನಾಡಿದರು.

Ad Widget

Ad Widget

Ad Widget

Ad Widget

ಕೌಡಿಚ್ಚಾರ್‌ಗೆ ಸಿಟಿ ಬಸ್ ವ್ಯವಸ್ಥೆ ಆಗಬೇಕು , ಇಲ್ಲಿ ಶಾಲಾ ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ, ಕಾರ್ಮಿಕರಿಗೆ ತೀವ್ರ ತೊಂದರೆಯಾಗುತ್ತಿದೆ ಎಂದು ಶಾಸಕರಿಗೆ ತಿಳಿಸಿ ಸಿಟಿ ಬಸ್ ವ್ಯವಸ್ಥೆ ಮಾಡುವ ಮೂಲಕ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಕೆಲದಿನಗಳ ಹಿಂದೆ ಮನವಿ ಮಾಡಿದ್ದೆವು ಮನವಿಯನ್ನು ಪುರಸ್ಕರಿಸಿದ ಶಾಸಕರು ಕೆಲವೇ ದಿನಗಳಲ್ಲಿ ಬಸ್ಸಿನ ವ್ಯವಸ್ಥೆ ಮಾಡಿದ್ದಾರೆ ಇದಕ್ಕಾಗಿ ಶಾಸಕರಿಗೆ ಅಭಿನಂದನೆ ಸಲ್ಲಿಸುವುದಾಗಿ ಹೇಳಿದರು. ಪುತ್ತೂರು ಕ್ಷೇತ್ರಕ್ಕೆ ಈಗಾಗಲೇ ಶಾಸಕರು 1500 ಕೋಟಿ ರೂ ಅನುದಾನವನ್ನು ತಂದಿದ್ದಾರೆ. ಜನರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಶಾಸಕರು ಬಡವರ ಬಂಧುವಾಗಿ ಪ್ರಸಿದ್ದಿಪಡೆಯುತ್ತಿದ್ದಾರೆ. ಹಲವು ವರ್ಷಗಳಿಂದ ಕೌಡಿಚ್ಚಾರ್‌ಗೆ ಸಿಟಿ ಬಸ್ ಬೇಕು ಎಂಬ ಬೇಡಿಕೆ ಇತ್ತು ಅದನ್ನು ಈಡೇರಿಸಲು ಯಾರಿದಂಲೂ ಸಾಧ್ಯವಾಗಿಲ್ಲ. ಇಚ್ಚಾಶಕ್ತಿ ಇದ್ದರೆ ಯಾವುದೇ ಕೆಲಸವನ್ನು ಮಾಡಬಹುದು ಎಂಬುದಕ್ಕೆ ಇದೊಂದು ಸ್ಪಷ್ಟ ಉಧಾಹರಣೆಯಾಗಿದೆ ಎಂದು ಕಾವು ಹೇಮನಾಥ ಶೆಟ್ಟಿ ಹೇಳಿದರು.

Ad Widget

Ad Widget alt="Ad Widget"/>

Ad Widget

ಯಾರದೋ ಮಗುವಿಗೆ ಅಪ್ಪನಾಗಲು ಹೋಗಬೇಡಿ
ಕೌಡಿಚ್ಚಾರ್‌ಗೆ ಸಿಟಿ ಬಸ್ ವ್ಯವಸ್ಥೆಯಾಗಲು ನಾವು ಕಾರಣ ಎಂದು ಕೆಲವರು ವ್ಯಾಟ್ಸಪ್‌ನಲ್ಲಿ ಹಾಕಿದ್ದನ್ನು ನಾನು ನೋಡಿದ್ದೇನೆ, ಯಾರೋ ಮಡಿದ ಕೆಲಸವನ್ನು ನಾವೇ ಮಾಡಿದ್ದು ಎಂದು ಹೇಳಲು ನಾಚಿಕೆಯಿಲ್ಲದ, ಮಾನ ಮರ್ಯಾದೆ ಇಲ್ಲದ ಕೆಲವರು ಈ ರೀತಿಯ ಪೋಸ್ಟ್ಗಳನ್ನು ಹಾಕಿದ್ದಾರೆ. ಯಾರದೋ ಮಗುವಿಗೆ ಅಪ್ಪನಾಗಲು ಹೋಗಬೇಡಿ. ಅರಿಯಡ್ಕ ಗ್ರಾಪಂ ನವರಿಗೆ ಸಿಟಿ ಬಸ್ ವ್ಯವಸ್ಥೆ ಮಾಡಲು ಈ ಹಿಂದೆ ಯಾಕೆ ಸಾಧ್ಯವಾಗಿಲ್ಲ, ಎಲ್ಲವೂ ನಿಮ್ಮದೇ ಕೈಯ್ಯಲ್ಲಿದ್ದಾಗ ಮಾಡಲು ಯಾಕೆ ಸಾಧ್ಯವಾಗಿಲ್ಲ, ಈಗ ಕಾಂಗ್ರೆಸ್ ಶಾಸಕರಿದ್ದಾರೆ, ಕಾಂಗ್ರೆಸ್ ಸರಕಾರ ಇದೆ ನಾವು ಮಾಡಿದ ಕೆಲಸವನ್ನು ಬೆಂಬಲಿಸಿ ಅದನ್ನು ಬಿಟ್ಟು ಜನರಿಗೆ ತಪ್ಪು ಮಾಹಿತಿ ನೀಡಿ ಮರ್ಯಾದೆ ಕಳೇದುಕೊಳ್ಳಬೇಡಿ ಎಂದು ಕಾವು ಹೇಮನಾಥ ಶೆಟ್ಟಿಯವರು ಬಿಜೆಪಿಗೆ ಪರೋಕ್ಷ ಟಾಂಗ್ ನೀಡಿದರು.

Ad Widget

Ad Widget <> Ad Widget

ಅಮ್ಚಿನಡ್ಕಕ್ಕೆ ಶೀಘ್ರವೇ ಸಿಟಿ ಬಸ್
ಅಮ್ಚಿಡನ್ಕದವರೆಗೂ ಶೀಘ್ರವೇ ಸಿಟಿ ಬಸ್ ವ್ಯವಸ್ಥೆ ಮಾಡಲಾಗುತ್ತದೆ, ಈ ಬಗ್ಗೆ ಈಗಾಗಲೇ ಶಾಸಕರಿಗೆ ಮನವಿ ಸಲ್ಲಿಸಲಾಗಿದೆ. ಕಾಂಗ್ರೆಸ್ ಸರಕಾರ, ಕಾಂಗ್ರೆಸ್ ಶಾಸಕರಿದ್ದಲ್ಲಿ ಎಲ್ಲ ಕೆಲಸಗಳೂ ಆಗುತ್ತದೆ ಎಂಬ ನಂಬಿಕೆ ಜನ ಸಾಮಾನ್ಯರಲ್ಲಿ ಇದೆ. ನಾವು ಬಡವರ ಕಷ್ಟಗಳಿಗೆ ಸಪಂದಿಸುವ ಮನಸ್ಸುಳ್ಳವರು ನಾವು ಧರ್ಮ ಧರ್ಮಗಳ ನಡುವೆ ಕಂದಕ ಸೃಷ್ಟಿಸುವ ಜಾಯಾಮಾನದವರಲ್ಲ ನಾವು ಎಂದೆಂದೂ ಅಭಿವೃದ್ದಿ ಪರವಾಗಿಯೇ ಇರುವವರು ಎಂದು ಕಾವು ಹೇಮನಾಥ ಶೆಟ್ಟಿ ತಿಳಿಸಿದರು.

ಗ್ಯಾರಂಟಿ ಉಚಿತ ಸಿಟಿಬಸ್ ಖಚಿತ
ಸಿಟಿ ಬಸ್ ಎರಡು ದಿನದಲ್ಲಿ ನಿಲ್ಲುತ್ತದೆ ಎಂದು ಬಿಜೆಪಿಯವರು ಅಪಪ್ರಚಾರ ಮಾಡುತ್ತಿದ್ದಾರೆ. ಕಾಂಗ್ರೆಸ್ ಸರಕಾರ ಮಾಡಿದ ಯೋಜನೆ ಯಾವುದೂ ನಿಲ್ಲುವುದಿಲ್ಲ, ಗ್ಯಾರಂಟಿ ಯೋಜನೆಯ ಬಗ್ಗೆಯೂ ಬಿಜೆಪಿ ನಿಲ್ಲುತ್ತದೆ ಎಂದು ಅಪಪ್ರಚಾರ ಮಾಡಿದ್ದರು ಅದು ನಿಲ್ಲಲಿಲ್ಲ. ಗ್ಯಾರಂಟಿ ಉಚಿತ ಸಿಟಿ ಬಸ್ ಇನ್ನು ಖಚಿತವಾಗಿಯೂ ಬಂದೇ ಬರುತ್ತದೆ. ಮಹಿಳಾ ಪ್ರಯಾನಿಕರಿಗೆ ಉಚಿತ ಪ್ರಯಾಣವಿದೆ. ಆಧಾರ್ ಕಾರ್ಡು ಹಿಡಿದು ಎಲ್ಲರೂ ಪ್ರಯಾನಿಸಬಹುದು. ಗ್ಯಾರಂಟಿ ಯೋಜನೆಯನ್ನು ಅಪಹಾಸ್ಯ ಮಾಡಿದವರೂ ಉಚಿತವಾಗಿ ಬಸ್ಸಲ್ಲಿ ಪ್ರಯಾಣ ಮಾಡಬಹುದು ಎಂದು ಅರಿಯಡ್ಕ ವಲಯ ಕಾಂಗ್ರೆಸ್ ಅಧ್ಯಕ್ಷರಾದ ಇಕ್ಬಾಲ್ ಹುಸೇನ್ ಕೌಡಿಚ್ಚಾರ್ ಹೇಳಿದರು.

Ad Widget

Ad Widget

ಬಸ್ ಕೊಟ್ಟದ್ದು ಶಾಸಕ ಅಶೋಕ್ ರೈ
ಕೌಡಿಚ್ಚಾರ್‌ಗೆ ಸಿಟಿ ಬಸ್ ವ್ಯವಸ್ಥೆ ಕಲ್ಪಿಸಿದ್ದು ಶಾಸಕ ಅಶೋಕ್ ರೈಯವರು. ಕುಂಬ್ರದ ವರೆಗೆ ಇದ್ದ ಬಸ್ಸನ್ನು ಇಲ್ಲಿಯವರೆಗೆ ಬಂದು ಹೋಗುವಂತೆ ನಾನು ಮತ್ತು ಒಳಮೊಗ್ರು ವಲಯ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಪೂಜಾರಿಯವರು ಮನವಿ ಮಾಡಿದ್ದರ ಪರಿಣಾಮ ಬಸ್ಸು ಬಂದಿದೆ ವಿನ ಯಾವುದೇ ನಿರ್ಣಯ ಮಾಡಿದ್ದರ ಪ್ರಭಾವ ಅಲ್ಲ. ಅರಿಯಡ್ಕ ಗ್ರಾಪಂ ನ ಕೆಲವು ಸದಸ್ಯರು ಸಿಟಿ ಬಸ್ ವ್ಯವಸ್ಥೆಯನ್ನು ಕಂಡು ಮರುಗಿದ್ದಾರೆ, ಅವರಿಗೆ ಇಷ್ಟು ದಿನ ಮಾಡ್ಲಿಕ್ಕೆ ಸಾಧ್ಯವಾಗಿಲ್ಲ ನಾವು ಮಾಡಿದ್ದನ್ನು ಸ್ವಾಗತಿಸಿ ಬಸ್ಸಲ್ಲಿ ಪ್ರಯಾಣಿಸಲಿ ಎಂದು ಇಕ್ಬಾಲ್ ಹುಸೇನ್ ಹೇಳಿದರು.

ನಾವು ಮಾಡಿದ್ದನ್ನು ಉದ್ಘಾಟನೆ ಮಾಡಲು ನಮಗೆ ಗೊತ್ತಿದೆ: ಅಶೋಕ್ ಪೂಜಾರಿ
ಸಿಟಿ ಬಸ್ ಕಾಂಗ್ರೆಸ್ ಶಾಸಕರು ಮಾಡಿದ ವ್ಯವಸ್ಥೆ ಅದನ್ನು ಉದ್ಘಾಟನೆ ಮಾಡಲು ಕಾಂಗ್ರೆಸ್ಸಿಗರಾದ ನಮಗೆ ಗೊತ್ತಿದೆ. ನಮ್ಮ ಶಾಸಕರು ಮಾಡಿದ್ದನ್ನು ಯಾರೋ ಉದ್ಘಾಟನೆ ಮಾಡುವುದು ಬೇಡ ಮತ್ತು ಅದರ ಲಾಭವನ್ನು ಪಡೆದುಕೊಳ್ಳುವ ಯತ್ನ ಮಾಡುವುದು ಬೇಡ ಎಂದು ಒಳಮೊಗ್ರು ವಲಯ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಪೂಜಾರಿ ಹೇಳಿದರು. ಈ ಹಿಂದೆ ನಿಮ್ಮ ಸರಕಾರ ಇತ್ತು ನಿಮ್ಮ ಶಾಸರಕೇ ಇದ್ದರು ಆವಾಗ ಸಿಟಿ ಬಸ್ ವ್ಯವಸ್ಥೆ ಮಾಡ್ಲಿಕ್ಕೆ ನಿಮ್ಮಿಂದ ಸಾಧ್ಯವಾಗಿಲ್ಲ. ಬಿಜೆಪಿ ವಿರೋಧ ಪಕ್ಷದಲ್ಲೇ ಇರಲು ಲಾಯಕ್ಕು ಎಂದು ಹೇಳಿದರು.

ನಾವು ಬಸ್ ಬಿಟ್ಟಿದ್ದೇವೆ; ಬಿಜೆಪಿಯವರು ರೈಲೇ ಬಿಟ್ಟದ್ದು
ನಾವು ವಿದ್ಯಾರ್ಥಿಗಳ, ಸಾರ್ವಜನಿಕರ ಸಂಕಷ್ಟವನ್ನು ಅರಿತು ಅವರಿಗೆ ಪ್ರಯೋಜನವಾಗಲೆಂದು ಸಿಟಿ ಬಸ್ ಬಿಟ್ಟಿದ್ದೇವೆ ಆದರೆ ಬಿಜೆಪಿಯವರು ಇಷ್ಟು ವರ್ಷ ಅದು ಮಾಡುತ್ತೇವೆ ಇದು ಮಾಡುತ್ತೇವೆ ಎಂದು ರೈಲೇ ಬಿಟ್ಟಿದ್ದು ವಿನ ಜನಪರ ಕೆಲಸ ಯಾವುದನ್ನೂ ಮಾಡಲಿಲ್ಲ. ಪಂಚಾಯತ್‌ನಲ್ಲೇ ಸರಿಯಗಿ ಆಡಳಿತ ನಡೆಸಲು ಸಾಧ್ಯವಾಗದ ಇವರು ಸಾರ್ವಜನಿಕ ಸಮಸ್ಯೆಗಳಿಗೆ ಸ್ಪಂದಿಸುವುದು ಹೇಗೆ ಎಂದು ಅಶೋಕ್ ಪೂಜಾರಿ ಬೊಳ್ಳಾಡಿ ಪ್ರಶ್ನಿಸಿದರು.

ಪಟಾಕಿ ಸಿಡಿಸಿ ಸಂಭ್ರಮ
ಬಸ್ಸು ಕೌಡಿಚ್ಚಾರ್ ತಲುಪುತ್ತಿದ್ದಂತೆಯೇ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು. ಬಸ್ಸಿಗೆ ಹೂವಿನ ಹಾರ ಹಾಕಿದರು. ತೆಂಗಿನ ಕಾಯಿ ಒಡೆಯುವ ಮೂಲಕ ಸ್ವಾಗತ ಮಾಡಿದರು. ಕೌಡಿಚ್ಚಾರ್‌ನಿಂದ ಶೇಕಮಲೆ ತನಕ ಬಸ್ಸಿನಲ್ಲಿ ಟಿಕೆಟ್ ನೀಡಿ ಪ್ರಯಾಣ ಮಾಡಿದರು. ಬಸ್ಸಿನಲ್ಲಿದ್ದವರು ಶಾಸಕರಿಗೆ ಹಾಗೂ ಕಾಂಗ್ರೆಸ್ ನಾಯಕರುಗಳಿಗೆ ಜ್ಯಕಾರ ಘೋಷಣೆ ಕೂಗಿದರು.

ಕಾರ್ಯಕ್ರಮದಲ್ಲಿ ಜಿಪಂ ಮಾಜಿ ಸದಸ್ಯೆ ಅನಿತಾ ಹೇಮನಾಥ ಶೆಟ್ಟಿ, ಗ್ರಾಪಂ ಸದಸ್ಯೆ ಜಯಂತಿ ಪಟ್ಟುಮೂಲೆ, ವಿನುತಾ, ಒಳಮೊಗ್ರು ಗ್ರಾಪಂ ಸದಸ್ಯರಾದ ಶೀನಪ್ಪ ನಾಯ್ಕ್, ಕಾಂಗ್ರೆಸ್ ಮುಖಂಡರುಗಳಾದ ರಾಜೀವ ರೈ ಕುತ್ಯಾಡಿ, ಶಿವರಾಮ ಮಣಿಯಾಣಿ, ಚಂಧ್ರಶೇಖರ ಮಣಿಯಾಣಿ ಕುರಿಂಜ, ಸುಂದರ ಮುಂಡಕೊಚ್ಚಿ, ರವಿಮುಡಂಕೊಚ್ಚಿ, ಶೀನಪ್ಪ ಮುಂಡಕೊಚ್ಚಿ, ಬಶೀರ್ ಕೌಡಿಚ್ಚಾರ್, ಮಹಮ್ಮದ್ ಬೊಳ್ಳಾಡಿ, ಇಸ್ಮಾಯಿಲ್ ಹಾಜಿ ಕೌಡಿಚ್ಚಾರ್, ವಿಠಲ್ ನಾಯ್ಕ್ ಬಳ್ಳಿಕಾನ, ಗಂಗಾಧರ ಪಾಠಾಳಿ ಪಟ್ಟುಮೂಲೆ, ಅನ್ನಪೂರ್ಣಿಮಾ ರೈ ಕುತ್ಯಾಡಿ,ಹನೀಫ್ ಶೇಕಮಲೆ, ರಫೀಕ್ ದರ್ಖಾಸು, ಕೇಶವ ಶೇಕಮಲೆ,ರವಿ ಜಾರತ್ತಾರು, ಶಿವರಾಮ ಮಣಿಯಾಣಿ ಪೊನ್ನತ್ತಲಕ,ಇಸ್ಮಾಯಿಲ್ ಹೊಸಗದ್ದೆ, ಬದ್ರು ಪರ್ಪುಂಜ, ಜೀವನ್ ಕುರಿಂಜ, ಚಂದ್ರ ಮಣಿಯಾಣಿ ಕುಂಟಾಪು ಮೊದಲಾದವರು ಉಪಸ್ಥಿತರಿದ್ದರು.

Ad Widget
Click to comment

Leave a Reply

ರಾಜಕೀಯ

BJP leaders-ಗಡಿಪಾರಿಗೊಳಗಾದ ನರಸಿಂಹ ಮಾಣಿ ಮನೆಗೆ ಬಿಜೆಪಿ ಮುಖಂಡರ ಭೇಟಿ; ಕುಟುಂಬಕ್ಕೆ ಆತ್ಮಸ್ಥೈರ್ಯ

Published

on

Ad Widget

Ad Widget

Ad Widget

Ad Widget

ಗಡಿಪಾರಿಗೊಳಗಾದ ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಸಂಯೋಜಕ ನರಸಿಂಹ ಮಾಣಿ ಅವರ ನಿವಾಸಕ್ಕೆ ಬಿಜೆಪಿ ಮುಖಂಡರಾದ ಸಹಜ್ ರೈ ಬಳಜ್ಜ, ಪ್ರಸನ್ನ ದರ್ಬೆ ಹಾಗೂ ಅಜಿತ್ ರೈ ಹೊಸಮನೆ ಭೇಟಿ ನೀಡಿ ಕುಟುಂಬದ ಸದಸ್ಯರೊಂದಿಗೆ ಮಾತುಕತೆ ನಡೆಸಿದರು.

Ad Widget

Ad Widget

Ad Widget

Ad Widget

ಪುತ್ತೂರು: ಗಡಿಪಾರಿಗೊಳಗಾದ ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಸಂಯೋಜಕ ನರಸಿಂಹ ಮಾಣಿ ಅವರ ನಿವಾಸಕ್ಕೆ ಬಿಜೆಪಿ ಮುಖಂಡರಾದ ಸಹಜ್ ರೈ ಬಳಜ್ಜ, ಪ್ರಸನ್ನ ದರ್ಬೆ ಹಾಗೂ ಅಜಿತ್ ರೈ ಹೊಸಮನೆ ಭೇಟಿ ನೀಡಿ ಕುಟುಂಬದ ಸದಸ್ಯರೊಂದಿಗೆ ಮಾತುಕತೆ ನಡೆಸಿದರು.

Ad Widget

Ad Widget alt="Ad Widget"/>

Ad Widget

ನರಸಿಂಹ ಮಾಣಿ ಅವರು ಎದುರಿಸುತ್ತಿರುವ ಪ್ರಸಕ್ತ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಕುಟುಂಬದ ಸದಸ್ಯರಿಗೆ ಧೈರ್ಯ ಹಾಗೂ ಆತ್ಮಸ್ಥೈರ್ಯ ತುಂಬುವ ಉದ್ದೇಶದಿಂದ ಈ ಭೇಟಿ ನಡೆಯಿತು. ಈ ಸಂದರ್ಭದಲ್ಲಿ ಅವರ ತಾಯಿಯ ಯೋಗಕ್ಷೇಮ ವಿಚಾರಿಸಿದ ಮುಖಂಡರು, ಧೈರ್ಯ ಕಳೆದುಕೊಳ್ಳದೆ ಆತ್ಮವಿಶ್ವಾಸದಿಂದ ಇರುವಂತೆ ಪ್ರೇರಣೆ ನೀಡಿದರು.

Ad Widget

Ad Widget <> Ad Widget

ಸಾಮಾಜಿಕ ಹಾಗೂ ಸಂಘಟನಾತ್ಮಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಕಾರ್ಯಕರ್ತರ ಕುಟುಂಬದೊಂದಿಗೆ ಸಮಾಜ ನಿಲ್ಲಬೇಕು ಎಂಬ ಆಶಯವನ್ನು ಈ ಸಂದರ್ಭದಲ್ಲಿ ವ್ಯಕ್ತಪಡಿಸಲಾಯಿತು.

ಭೇಟಿಯ ವೇಳೆ ಬಿಜೆಪಿ ಪುತ್ತೂರು ಮಂಡಲ ಉಪಾಧ್ಯಕ್ಷ ರತನ್ ರೈ ಕುಂಬ್ರ, ಪುತ್ತೂರು ಯುವಮೋರ್ಚಾ ನಗರ ಮಂಡಲ ಅಧ್ಯಕ್ಷ ನಿತೇಶ್ ನೆಲಪ್ಪಾಲು, ಯುವಮೋರ್ಚಾದ ಪವನ್ ಶೆಟ್ಟಿ ಕಂಬಳತ್ತಡ್ಡ, ಪ್ರೀತಮ್ ಶೆಟ್ಟಿ ಪೆರ್ನೆ, ಆದೇಶ್ ಶೆಟ್ಟಿ ಉಪ್ಪಿನಂಗಡಿ, ವಿಶ್ವನಾಥ ಕುಲಾಲ್ ಹಾಗೂ ಹಿಂದೂ ಜಾಗರಣ ವೇದಿಕೆಯ ರಾಜೇಶ್ ಉಪಸ್ಥಿತರಿದ್ದರು.

Continue Reading

ಮಂಗಳೂರು

Lakshman Sawadi-ಸಹಕಾರಿ ಕ್ಷೇತ್ರದ ಮೂಲಕ ಕರಾವಳಿಯಲ್ಲಿ ಕಾಂಗ್ರೆಸ್‌ಗೆ ಹೊಸ ಶಕ್ತಿ; ತಳಮಟ್ಟದಿಂದ ಪಕ್ಷ ಕಟ್ಟಲು ಕಾರ್ಯಕರ್ತರಿಗೆ ಸಚಿವ ಲಕ್ಷ್ಮಣ ಸವದಿ ಕರೆ

Published

on

Ad Widget

Ad Widget

Ad Widget

Ad Widget

ಹಕಾರಿ ಕ್ಷೇತ್ರದಲ್ಲಿ ಜಾತಿ-ಮತಗಳ ಬೇಧವಿಲ್ಲದೆ ಜನರಿಗೆ ನೇರವಾಗಿ ಸಹಾಯ ಮಾಡಬಹುದು. ಹೀಗಾಗಿ, ತಳಮಟ್ಟದಲ್ಲಿ ಸಹಕಾರಿ ಸಂಘಗಳನ್ನು ಬಲಪಡಿಸುವ ಮೂಲಕ ಮಂಗಳೂರು, ಉಡುಪಿ ಹಾಗೂ ಕಾರವಾರ ಜಿಲ್ಲೆಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಸದೃಢಗೊಳಿಸಲು ಕಾರ್ಯಕರ್ತರು ಮುಂದಾಗಬೇಕು,” ಎಂದು ಸಹಕಾರ ಸಚಿವ ಲಕ್ಷ್ಮಣ ಸವದಿ ಕರೆ ನೀಡಿದರು.

Ad Widget

Ad Widget

Ad Widget

Ad Widget

ಮಂಗಳೂರು: ಸಹಕಾರಿ ಕ್ಷೇತ್ರದಲ್ಲಿ ಜಾತಿ-ಮತಗಳ ಬೇಧವಿಲ್ಲದೆ ಜನರಿಗೆ ನೇರವಾಗಿ ಸಹಾಯ ಮಾಡಬಹುದು. ಹೀಗಾಗಿ, ತಳಮಟ್ಟದಲ್ಲಿ ಸಹಕಾರಿ ಸಂಘಗಳನ್ನು ಬಲಪಡಿಸುವ ಮೂಲಕ ಮಂಗಳೂರು, ಉಡುಪಿ ಹಾಗೂ ಕಾರವಾರ ಜಿಲ್ಲೆಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಸದೃಢಗೊಳಿಸಲು ಕಾರ್ಯಕರ್ತರು ಮುಂದಾಗಬೇಕು,” ಎಂದು ಸಹಕಾರ ಸಚಿವ ಲಕ್ಷ್ಮಣ ಸವದಿ ಕರೆ ನೀಡಿದರು.

Ad Widget

Ad Widget alt="Ad Widget"/>

Ad Widget

​ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿದರು.

Ad Widget

Ad Widget <> Ad Widget

ಗ್ರಾಮೀಣ ಮಟ್ಟದಲ್ಲಿ ಕೃಷಿ ಪತ್ತಿನ ಸಹಕಾರಿ ಸಂಘಗಳು ಪಕ್ಷದ ಮೂಲ ಬೇರುಗಳಿದ್ದಂತೆ. ಜಿಲ್ಲೆಯ ಯಾವ ಗ್ರಾಮಗಳಲ್ಲಿ ಇನ್ನೂ ಸಹಕಾರಿ ಸಂಘಗಳು ಸ್ಥಾಪನೆಯಾಗಿಲ್ಲವೋ ಅಂತಹ ಗ್ರಾಮಗಳನ್ನು ಗುರುತಿಸಿ ಪಟ್ಟಿ ನೀಡಿದರೆ, ತಕ್ಷಣವೇ ಅಧಿಕಾರಿಗಳ ಮೂಲಕ ನೋಂದಣಿ ಮಾಡಿಸಿ ಜಿಲ್ಲಾ ಮಧ್ಯವರ್ತಿ ಬ್ಯಾಂಕ್ (DCC) ಸದಸ್ಯತ್ವ ಕೊಡಿಸಲಾಗುವುದು ಎಂದರು.

ಕರಾವಳಿಯ ಮೂರು ಜಿಲ್ಲೆಗಳಲ್ಲಿ ಪಕ್ಷವನ್ನು ಸಂಘಟಿಸಲು ನಾನು ಸಂಪೂರ್ಣ ಬದ್ಧನಾಗಿದ್ದೇನೆ ಎಂದರು.

Ad Widget

Ad Widget

“2008ರಲ್ಲಿ ನಾನು ಸಹಕಾರ ಸಚಿವನಾಗಿದ್ದಾಗ ಕೃಷಿ ಸಾಲದ ಬಡ್ಡಿದರವನ್ನು ಶೇ.3ಕ್ಕೆ ಇಳಿಸಿದ್ದೆ. ಆದರೆ, ಅಂದಿನ ಪ್ರಧಾನಿ ಡಾ.ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರವು ಅವಧಿಗೆ ಮುನ್ನ ಸಾಲ ಮರುಪಾವತಿಸುವವರಿಗೆ ಶೇ.3ರಷ್ಟು ಸಹಾಯಧನ ಘೋಷಿಸಿದ್ದರಿಂದ, ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕದಲ್ಲಿ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ಸಿಗುವಂತಾಯಿತು. ಈ ಸತ್ಯವನ್ನು ಜನರಿಗೆ ತಿಳಿಸುವ ಕೆಲಸವಾಗಬೇಕು ಎಂದರು.

​ಜೈನ ಅಭಿವೃದ್ಧಿ ನಿಗಮಕ್ಕೆ ಸಿಎಂ ಅನುಮೋದನೆ:

ಕಾಂಗ್ರೆಸ್ ಪಕ್ಷಕ್ಕೆ ‘ಹಸ್ತದ ಚಿಹ್ನೆ’ ಸಿಕ್ಕ ಇತಿಹಾಸವನ್ನು ಸ್ಮರಿಸಿದ ಸವದಿ, “ತುರ್ತು ಪರಿಸ್ಥಿತಿಯ ನಂತರ ಚಿಹ್ನೆಯ ವ್ಯಾಜ್ಯ ಎದುರಾದಾಗ ನಮ್ಮ ಭಾಗದ ಜೈನ ಮುನಿ ಶ್ರೀ ವಿದ್ಯಾನಂದ ಮುನಿಗಳು ಇಂದಿರಾ ಗಾಂಧಿ ಅವರಿಗೆ ಬೆಳ್ಳಿಯ ಹಸ್ತದ ಚಿಹ್ನೆ ನೀಡಿ ಆಶೀರ್ವದಿಸಿದ್ದರು. ಆ ಸಮಾಜದ ಋಣ ತೀರಿಸುವ ಉದ್ದೇಶದಿಂದ ಹಾಗೂ ಕರಾವಳಿ ಭಾಗದಲ್ಲಿ ಹೆಚ್ಚಿರುವ ಜೈನ ಸಮುದಾಯದ ಬೇಡಿಕೆಯಂತೆ, ಪ್ರತ್ಯೇಕ ‘ಜೈನ ಅಭಿವೃದ್ಧಿ ನಿಗಮ’ ಸ್ಥಾಪನೆಗೆ ಎರಡು ದಿನಗಳ ಹಿಂದಷ್ಟೇ ಮುಖ್ಯಮಂತ್ರಿಗಳಿಂದ ಕಡತಕ್ಕೆ ಅನುಮೋದನೆ ಪಡೆಯಲಾಗಿದೆ,” ಎಂದು ಮಾಹಿತಿ ನೀಡಿದರು.

ಸಚಿವರನ್ನು ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಗೌರವಿಸಿದರು.

ಮಾಜಿ ಸಚಿವ ಬಿ. ರಮಾನಾಥ್ ರೈ, ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್, ಮುಡಾ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ಮಾಜಿ ಮೇಯರ್ ಶಶಿಧರ ಹೆಗ್ಡೆ, ಪರಿಸರ‌ಮತ್ತು ಪ್ರವಾಸೋದ್ಯಮ‌ ನಿಗಮ ಅಧ್ಯಕ್ಷೆ ಶಾಲೆಟ್ ಪಿಂಟೋ, ಗ್ಯಾರಂಟಿ ಸಮಿತಿ ಜಿಲ್ಲಾಧ್ಯಕ್ಷ ಭರತ್ ಮುಂಡೋಡಿ, ವಿಶ್ವಾಸ್ ದಾಸ್, ಶುಭೋದಯ ಆಳ್ವ, ಬ್ಲಾಕ್ ಅಧ್ಯಕ್ಷರು, ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

Ad Widget
Continue Reading

ರಾಜಕೀಯ

Puttur-ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ: ಬೂಡಿಯಾರು; ಶಾಸಕರು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆಯುವುದು ಮಾತ್ರ : ಸಾಜ

Published

on

Ad Widget

Ad Widget

Ad Widget

Ad Widget

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲ ಹಾಗೂ ನೆಟ್ಟಣಿಗೆ ಮುಡೂರು ಶಕ್ತಿ ಕೇಂದ್ರದ ವತಿಯಿಂದ ನ.18ರಂದು ಈಶ್ವರಮಂಗಲದಲ್ಲಿ ನಡೆದ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪ್ರತಿಭಟನಾ ಸಭೆಯಲ್ಲಿ ಜಿಲ್ಲಾ ಬಿಜೆಪಿ ಮಾಜಿ ಉಪಾಧ್ಯಕ್ಷ ಹಾಗೂ ಪಾದಯಾತ್ರೆಯ ಜಿಲ್ಲಾ ಸಹ ಸಂಚಾಲಕ ಬೂಡಿಯಾರ್ ರಾಧಾಕೃಷ್ಣ ರೈ ಅವರು ಮಾತನಾಡಿದರು.

Ad Widget

Ad Widget

Ad Widget

Ad Widget

ಪುತ್ತೂರು: ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ. ಅಭಿವೃದ್ಧಿಯ ಹೆಸರಿನಲ್ಲಿ ನೀಡಲಾಗುತ್ತಿರುವ ಭರವಸೆಗಳು ಕೇವಲ ಬ್ಯಾನರ್‌ಗಳಿಗೆ ಸೀಮಿತವಾಗಿದ್ದು, ಕ್ಷೇತ್ರಕ್ಕೆ ಯಾವುದೇ ಗಮನಾರ್ಹ ಅನುದಾನ ಬರುತ್ತಿಲ್ಲ. ಶಾಸಕರು ಕಳೆದ ಮೂರೂವರೆ ವರ್ಷಗಳಲ್ಲಿ ಎಷ್ಟು ಅನುದಾನ ತಂದಿದ್ದಾರೆ ಎಂಬುದನ್ನು ಬಹಿರಂಗಪಡಿಸಲಿ ಎಂದು ಜಿಲ್ಲಾ ಬಿಜೆಪಿ ಮಾಜಿ ಉಪಾಧ್ಯಕ್ಷ ಹಾಗೂ ಪಾದಯಾತ್ರೆಯ ಜಿಲ್ಲಾ ಸಹ ಸಂಚಾಲಕ ಬೂಡಿಯಾರ್ ರಾಧಾಕೃಷ್ಣ ರೈ ಸವಾಲು ಹಾಕಿದರು.

Ad Widget

Ad Widget alt="Ad Widget"/>

Ad Widget

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲ ಹಾಗೂ ನೆಟ್ಟಣಿಗೆ ಮುಡೂರು ಶಕ್ತಿ ಕೇಂದ್ರದ ವತಿಯಿಂದ ನ.18ರಂದು ಈಶ್ವರಮಂಗಲದಲ್ಲಿ ನಡೆದ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪ್ರತಿಭಟನಾ ಸಭೆಯಲ್ಲಿ ಅವರು ಮಾತನಾಡಿದರು.

Ad Widget

Ad Widget <> Ad Widget

ರೈತರಿಗೆ ಬೆಳೆ ವಿಮೆಯ ಸೂಕ್ತ ಮೊತ್ತ ನೀಡದೆ ವಂಚಿಸಲಾಗುತ್ತಿದೆ. ಕಾರ್ಮಿಕರ ನಿಧಿಯ ವಿಚಾರದಲ್ಲೂ ಅನ್ಯಾಯವಾಗುತ್ತಿದೆ. ಕ್ಷೇತ್ರದಾದ್ಯಂತ ರಸ್ತೆ ದುರಸ್ತಿ ಕಾರ್ಯಗಳು ಸಮರ್ಪಕವಾಗಿ ನಡೆಯುತ್ತಿಲ್ಲ. ಒಂದಿಷ್ಟು ಅನುದಾನ ಬಂದಿದ್ದರೆ ಅದು ಕೇಂದ್ರ ಸರ್ಕಾರದಿಂದ ಮಾತ್ರವೇ ಹೊರತು ರಾಜ್ಯ ಸರ್ಕಾರದಿಂದಲ್ಲ ಎಂದು ಆರೋಪಿಸಿದರು.

ಅನ್ನಭಾಗ್ಯ ಯೋಜನೆಯಡಿ ಕೇಂದ್ರ ಸರ್ಕಾರ ನೀಡುವ ಅಕ್ಕಿಯನ್ನೇ ವಿತರಿಸಲಾಗುತ್ತಿದೆ. ಆದರೆ ಬೆಳೆ ವಿಮೆಯಲ್ಲಿ ರಾಜ್ಯ ಸರ್ಕಾರ ತನ್ನ ಪಾಲಿನ ಮೊತ್ತವನ್ನು ನೀಡದೆ ರೈತರಿಗೆ ಅನ್ಯಾಯ ಮಾಡುತ್ತಿದೆ. ಅಭಿವೃದ್ಧಿಯ ಬಗ್ಗೆ ದೊಡ್ಡ ದೊಡ್ಡ ಮಾತುಗಳನ್ನಾಡುವ ಶಾಸಕರು ಕ್ಷೇತ್ರಕ್ಕೆ ತಂದಿರುವ ಅನುದಾನದ ಲೆಕ್ಕವನ್ನು ಜನರ ಮುಂದಿಡಬೇಕು ಎಂದು ಆಗ್ರಹಿಸಿದರು.

Ad Widget

Ad Widget

ಬಿಜೆಪಿ ಅವಧಿಯಲ್ಲಿ ನೆಟ್ಟಣಿಗೆ ಮುಡೂರಿಗೆ ₹29.50 ಕೋಟಿ ಅನುದಾನ: ಸಾಜ ರಾಧಾಕೃಷ್ಣ ಆಳ್ವ

ಗ್ರಾಮಾಂತರ ಮಂಡಲದ ನಿಕಟಪೂರ್ವ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ಮಾತನಾಡಿ, ಬಿಜೆಪಿ ಸರ್ಕಾರದ ಅವಧಿಯಲ್ಲಿ ನೆಟ್ಟಣಿಗೆ ಮುಡೂರು ಗ್ರಾಮಕ್ಕೆ ಅಂದಿನ ಶಾಸಕ ಸಂಜೀವ ಮಠಂದೂರು ಹಾಗೂ ಸಂಸದ ನಳಿನ್ ಕುಮಾರ್ ಕಟೀಲು ಅವರ ಮೂಲಕ ಒಟ್ಟು ₹29.50 ಕೋಟಿ ಅನುದಾನ ಒದಗಿಸಲಾಗಿತ್ತು ಎಂದು ತಿಳಿಸಿದರು.

ಈಶ್ವರಮಂಗಲ-ಸುಳ್ಯಪದವು ರಸ್ತೆ ಹಾಗೂ ಹನುಮಗಿರಿಯಿಂದ ನಿಡಳ್ಳಿ ಮುಂಡೂರು ರಸ್ತೆಯನ್ನು ಪಿಎಂಜಿಎಸ್‌ವೈ ಯೋಜನೆಯಡಿ ಅಭಿವೃದ್ಧಿಪಡಿಸಲಾಗಿತ್ತು. ಆದರೆ ಈಗಿನ ಶಾಸಕರು ಮೂರೂವರೆ ವರ್ಷಗಳಲ್ಲಿ ಸಾಕಷ್ಟು ಅನುದಾನ ತಂದಿದ್ದೇನೆ ಎಂದು ಹೇಳಿಕೊಳ್ಳುತ್ತಿರುವುದು ಕೇವಲ ಭಾಷಣಗಳಿಗೆ ಸೀಮಿತವಾಗಿದೆ. ಬಂದಿರುವುದು ಶಾಸನಬದ್ಧ ಅನುದಾನ ಮಾತ್ರ ಎಂದು ಟೀಕಿಸಿದರು.

ಅನುದಾನ ಮಂಜೂರಾಗಿದೆ ಎಂದು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆದು ಶಿಲಾನ್ಯಾಸ ನೆರವೇರಿಸಲಾಗುತ್ತದೆ. ಆದರೆ ಕಾಮಗಾರಿಗಳು ಆರಂಭವಾಗಲು ಒಂದು ವರ್ಷವೇ ಬೇಕಾಗುತ್ತದೆ. ಶಿಲಾನ್ಯಾಸ ನಡೆದ ಹಲವು ಕಾಮಗಾರಿಗಳು ಇನ್ನೂ ಅನುಷ್ಠಾನಗೊಂಡಿಲ್ಲ. ಆದರೂ ಹಿಂದಿನ ಬಿಜೆಪಿ ಆಡಳಿತದ ಅವಧಿಯಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ ಎಂದು ಅಪಪ್ರಚಾರ ಮಾಡಲಾಗುತ್ತಿದೆ ಎಂದು ಆರೋಪಿಸಿದರು.

ಕಳೆದ ಬಿಜೆಪಿ ಆಡಳಿತದ ಅವಧಿಯಲ್ಲಿ ನೆಟ್ಟಣಿಗೆ ಮುಡೂರು ಗ್ರಾಮಕ್ಕೆ ಬಂದಿರುವ ಅನುದಾನಗಳ ಸಂಪೂರ್ಣ ಪಟ್ಟಿ ಶಕ್ತಿ ಕೇಂದ್ರದ ಪ್ರಮುಖರ ಬಳಿ ಇದೆ ಎಂದು ಅವರು ಹೇಳಿದರು.

ಸಭೆಯಲ್ಲಿ ಶಕ್ತಿ ಕೇಂದ್ರದ ಅಧ್ಯಕ್ಷ ರಾಜೇಶ್ ರೈ ಪರ್ಪುಂಜ ಹಾಗೂ ಗ್ರಾಮಾಂತರ ಮಂಡಲದ ಪ್ರಧಾನ ಕಾರ್ಯದರ್ಶಿ ಲೋಕೇಶ್ ಚಾಕೋಟೆ ಉಪಸ್ಥಿತರಿದ್ದರು.

ಪ್ರತಿಭಟನಾ ಸಭೆಯ ಬಳಿಕ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಗ್ರಾಮ ಪಂಚಾಯತ್ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು. ನೆಟ್ಟಣಿಗೆ ಮುಡೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯ ಅಬ್ದುಲ್ ಖಾದರ್ ನರಸೀನಡ್ಕ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ದೀಪಕ್ ಕುಮಾರ್ ಮುಂಡ್ಯ ವಂದಿಸಿದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!