Connect with us

ರಾಜಕೀಯ

BJP Karnataka | ವಿಜಯೇಂದ್ರ ಬದಲಾವಣೆಗೆ ತಂತ್ರ ಹಣೆಯುತ್ತಿದ್ದ ಸಂತೋಷ್ ಬಣಕ್ಕೆ ತೀವ್ರ ಹಿನ್ನಡೆ..! ವಿಜಯೇಂದ್ರಗೆ ಸಂಪೂರ್ಣ ಅಧಿಕಾರ ನೀಡಿದ ಅಮಿತ್ ಶಾ

Published

on



Ad Widget

Ad Widget

Ad Widget

Ad Widget

ಬೆಂಗಳೂರು : ಸದ್ಯ ಕರ್ನಾಟಕ ರಾಜಕೀಯದಲ್ಲಿ ಭಾರೀ ಬೆಳವಣಿಗೆಗಳು ಆಗ್ತಿವೆ. ಕಾಂಗ್ರೆಸ್‌ನಲ್ಲಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್‌ ನಡುವೆ ಇದ್ದ ಶೀತಲ ಸಮರ ಈಗ ಬಹಿರಂಗ ವಾಕ್ಸಮರಕ್ಕೆ ಕಾರಣವಾಗಿದೆ. ಬಿಜೆಪಿಯಲ್ಲೂ ಕೂಡ ಪರಿಸ್ಥಿತಿ ಭಿನ್ನವಾಗಿಲ್ಲ. ಅಲ್ಲೂ ಕೂಡ ಆಂತರಿಕ ಭಿನ್ನಮತ ಸೃಷ್ಟಿಯಾಗಿದೆ. ಸಿಎಂ VS ಡಿಸಿಎಂ ದಂಗಲ್‌ನಿಂದ ಮುಜುಗರಕ್ಕೆ ಈಡಾಗಿದ್ದ ಕಾಂಗ್ರೆಸ್‌ ನಾಯಕರು ಬಿಜೆಪಿಯಲ್ಲಿ (BJP Karnataka) ನಡೆಯುತ್ತಿರೋ ವಿದ್ಯಮಾನಗಳನ್ನು ನೋಡಿ ಸ್ವಲ್ಪ ಸಮಾಧಾನಗೊಂಡಂತೆ ಕಾಣ್ತಿದೆ.

Ad Widget

Ad Widget

Ad Widget

Ad Widget

ಲೋಕಸಭಾ ಚುನಾವಣೆಯ ಫಲಿತಾಂಶ ಬಂದ ಬೆನ್ನಲ್ಲೇ ಬಿಜೆಪಿ ಶಾಸಕರ ಒಂದು ಬಣ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆಗೆ ಆಗ್ರಹಿಸುತ್ತಿದೆ. ಈ ಬದಲಾವಣೆಯ ಕೂಗು ಎಷ್ಟರ ಮಟ್ಟಿಗೆ ಇದೆ ಎಂದರೆ ಬಿಜೆಪಿ ಹೈಕಮಾಂಡ್‌ ಮಧ್ಯಪ್ರವೇಶಿಸಿ ಕಮಲ ನಾಯಕರನ್ನು ತರಾಟೆಗೆ ತೆಗೆದುಕೊಳ್ಳುವಷ್ಟರ ಮಟ್ಟಿಗೆ ಹೋಗಿದೆ. ನಿಮ್ಮ ನಿಮ್ಮಲ್ಲೇ ಜಗಳ ಆಡುವುದಕ್ಕಿಂತ ಬೆಲೆ ಏರಿಕೆ, ಭ್ರಷ್ಟಾಚಾರ ಸೇರಿ ಅನೇಕ ವಿಷಯಗಳಲ್ಲಿ ರಾಜ್ಯದಲ್ಲಿನ ಕಾಂಗ್ರೆಸ್‌ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸುವ ಕೆಲಸವನ್ನು ಮಾಡಲು ಪ್ರಯತ್ನಿಸಿ ಎಂಬ ಖಡಕ್‌ ಸೂಚನೆಯನ್ನು ನೀಡಿದೆ.

Ad Widget

Ad Widget

Ad Widget alt="Ad Widget"/>

Ad Widget

ಕಳೆದ ವರ್ಷ ನವೆಂಬರ್‌ನಲ್ಲಿ ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ಅವರ ಪುತ್ರ ಬಿವೈ ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲಾಯಿತು. ಇದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹಾಗೂ ಕೇಂದ್ರ ಸಚಿವ ವಿ ಸೋಮಣ್ಣರಂತಹ ರಾಜ್ಯ ಬಿಜೆಪಿ ನಾಯಕರನ್ನು ಕೆರಳಿಸಿತ್ತು. ಮೊದಲ ಬಾರಿ ಶಾಸಕರಾದವರನ್ನು ಹೇಗೆ ರಾಜ್ಯಾಧ್ಯಕ್ಷರನ್ನಾಗಿ ಮಾಡ್ತೀರಿ ಎಂದು ವಿರೋಧ ವ್ಯಕ್ತಪಡಿಸಿದ್ದರು. ಆ ಬಳಿಕ ಸ್ವಲ್ಪ ಕಡಿಮೆ ಆಗಿದ್ದ ಈ ವಿರೋಧ ಲೋಕಸಭಾ ಚುನಾವಣೆ ಫಲಿತಾಂಶದ ಬೆನ್ನಲ್ಲೇ ಜಾಸ್ತಿಯಾಗಿದೆ.

Ad Widget

Ad Widget <> Ad Widget

ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಕನಿಷ್ಠ 20 ಸ್ಥಾನಗಳನ್ನು ಗೆಲ್ಲಲು ಬಿಜೆಪಿ ವಿಫಲವಾದ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಬದಲಾವಣೆಗೆ ಆಗ್ರಹ ಜೋರಾಗಿದೆ. ಈ ಬೆಳವಣಿಗೆ ಬಿಜೆಪಿ ಹೈಕಮಾಂಡ್‌ ಈಗ ರಾಜ್ಯ ನಾಯಕರಿಗೆ ಖಡಕ್‌ ಸೂಚನೆ ನೀಡುವಂತೆ ಮಾಡಿದೆ. ಹರಿಹರದ ಬಿಜೆಪಿ ಶಾಸಕ ಬಿಪಿ ಹರೀಶ್ ಅವರು ಬಹಿರಂಗವಾಗಿಯೇ ಬಿವೈ ವಿಜಯೇಂದ್ರ ವಿರುದ್ಧ ಟೀಕೆ ಮಾಡಿದ ಬಳಿಕ ಕೇಸರಿ ಪಡೆಯಲ್ಲಿ ಒಂದಿಷ್ಟು ಅಸಮಾಧಾನ ಉಂಟಾಗಿದೆ. ಬಿಜೆಪಿಯ ಸೋಲಿನ ಹೊಣೆಯನ್ನು ಬಿವೈ ವಿಜಯೇಂದ್ರ ಹೊರಬೇಕು. ಅದರಲ್ಲೂ ಬಿಜೆಪಿಯ ಭದ್ರಕೋಟೆಯಾಗಿದ್ದ ದಾವಣಗೆರೆಯಲ್ಲಿ ಬಿಜೆಪಿ ಸೋಲಿಗೆ ವಿಜಯೇಂದ್ರ ಕಾರಣ, ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಯಿಂದ ವಿಜಯೇಂದ್ರ ಕೆಳಗಿಳಿಯಬೇಕು ಎಂದು ಆಗ್ರಹಿಸಿದ್ದರು.



Ad Widget

ರಾಜ್ಯ ಬಿಜೆಪಿಯಲ್ಲಿ ನಡೆಯುತ್ತಿರುವ ಈ ಬೆಳವಣಿಗೆಗಳನ್ನು ವಿಜಯೇಂದ್ರ ಅವರು ತಕ್ಷಣ ಕೇಂದ್ರ ಗೃಹ ಸಚಿವ ಮತ್ತು ಬಿಜೆಪಿ ಚಾಣಕ್ಯ ಅಮಿತ್‌ ಶಾ ಅವರ ಗಮನಕ್ಕೆ ತಂದಿದ್ದಾರೆ. ಇಂತಹ ಭಿನ್ನಾಭಿಪ್ರಾಯಗಳನ್ನು ನಿಗ್ರಹಿಸಲು ಸಂಪೂರ್ಣ ಅಧಿಕಾರವನ್ನು ಅಮಿತ್‌ ಶಾ ವಿಜಯೇಂದ್ರಗೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಅದಲ್ಲದೇ ಮುಂದೆ ಬರುವ ಸರಣಿ ಚುನಾವಣೆಗಳಿಗೆ ಪಕ್ಷವನ್ನು ಸಿದ್ಧಪಡಿಸುವ ಯೋಜನೆಗಳಿಗೂ ಬಿವೈ ವಿಜಯೇಂದ್ರ ಅಮಿತ್‌ ಶಾ ಅವರಿಂದ ಅನುಮೋದನೆ ಪಡೆದಿದ್ದಾರೆ ಎಂದು ಹೇಳಲಾಗಿದೆ. ಅದಲ್ಲದೇ ಕರ್ನಾಟಕ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಸಾಧನೆಗೆ ಅಮಿತ್‌ ಶಾ ತೃಪ್ತಿ ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ.

Ad Widget

Ad Widget

ಜುಲೈನಲ್ಲಿ ವಿಧಾನ ಮಂಡಲ ಅಧಿವೇಶನ ಇದೆ. ಅದಕ್ಕೂ ಮುನ್ನ ಮಾಡಬೇಕಾದ ಟಾಸ್ಕ್‌ಗಳ ಪಟ್ಟಿಯನ್ನು ಅಮಿತ್‌ ಶಾ ಅವರು ಬಿವೈ ವಿಜಯೇಂದ್ರಗೆ ನೀಡಿದ್ದಾರೆ. ಅದರಲ್ಲಿ ರಾಜ್ಯಾದ್ಯಂತ ಜಿಲ್ಲಾಧಿಕಾರಿಗಳ ಕಚೇರಿಗಳಿಗೆ ಮುತ್ತಿಗೆ ಹಾಕುವುದು ಪ್ರಮುಖವಾದ ಟಾಸ್ಕ್‌ ಆಗಿದೆ. ಅದೇ ಕಾರಣಕ್ಕೆ ಶುಕ್ರವಾರ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗಿದೆ. ಕಾಂಗ್ರೆಸ್‌ನ ದುರಾಡಳಿತದ ವಿರುದ್ಧ ಹೋರಾಡಲು ಎಲ್ಲಾ ಜಿಲ್ಲೆಗಳಲ್ಲಿ ನಾವು ಪ್ರತಿಭಟನೆ ನಡೆಸಿ, ಬಿಜೆಪಿ ನಾಯಕರು ಒಗ್ಗಟ್ಟಾಗಿ ನಿಲ್ಲುತ್ತೇವೆ ಎಂಬ ಸಂದೇಶವನ್ನು ರವಾನಿಸಬೇಕು ಎಂದು ವಿಜಯೇಂದ್ರ ಕರೆ ನೀಡಿದ್ದರು.

ಜುಲೈ 6 ರಂದು ಬಿಜೆಪಿಯ ರಾಜ್ಯ ಕೋರ್ ಕಮಿಟಿ ಮತ್ತು ಕಾರ್ಯಕಾರಿ ಸಮಿತಿ ಸಭೆ ನಿಗದಿಯಾಗಿದೆ. ಇದರಲ್ಲಿ ಭಿನ್ನಾಭಿಪ್ರಾಯದ ಬಗ್ಗೆ ಚರ್ಚೆ ನಡೆಯಲಿದೆ. ಅದಲ್ಲದೇ ಕೋಟಾ ಶ್ರೀನಿವಾಸ್‌ ಪೂಜಾರಿ ಲೋಕಸಭೆಗೆ ಆಯ್ಕೆಯಾಗಿದ್ದರಿಂದ ತೆರವಾಗಿರುವ ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕರ ನೇಮಕದ ಬಗ್ಗೆಯೂ ಈ ವೇಳೆ ಚರ್ಚೆ ನಡೆಯಲಿದೆ. ಪರಿಷತ್‌ನ ನೂತನ ವಿಪಕ್ಷ ನಾಯಕರ ಆಯ್ಕೆಗೆ ಶೀಘ್ರದಲ್ಲೇ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಕೂಡ ನಡೆಯಲಿದೆ. ಪರಿಷತ್‌ ವಿಪಕ್ಷ ನಾಯಕ ಸ್ಥಾನಕ್ಕೆ ಸಿಟಿ ರವಿ ಪ್ರಬಲ ಆಕಾಂಕ್ಷಿಯಾಗಿದ್ದಾರೆ.

ಆದರೆ, ವಿಧಾನಸಭೆಯಲ್ಲಿ ಆರ್‌ ಅಶೋಕ್‌ ವಿಪಕ್ಷ ನಾಯಕ ಇದ್ದು, ಎರಡು ಕಡೆ ಒಕ್ಕಲಿಗರೇ ಪ್ರಮುಖ ಹುದ್ದೆ ಅಲಂಕರಿಸಿದರೆ ಬಿಜೆಪಿಯ ಜಾತಿ ಸಮೀಕರಣದ ಮೇಲೆ ಪರಿಣಾಮ ಬೀರುತ್ತದೆ. ಇದರ ಹಿಂದೆ ಬಿಎಸ್‌ ಯಡಿಯೂರಪ್ಪ ವಿರೋಧಿ ಬಣದ ತಂತ್ರ ಅಡಗಿದೆ ಎನ್ನಲಾಗುತ್ತಿದೆ. ಸಿಟಿ ರವಿ ಅವರು ಪ್ರಮುಖವಾಗಿ ವಿಜಯೇಂದ್ರ ವಿರೋಧಿ ಬಣದಲ್ಲಿ ಗುರುತಿಸಿಕೊಂಡಿದ್ದಾರೆ. ಜೊತೆಗೆ ಬಿಜೆಪಿಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್‌ ಸಂತೋಷ್‌ ಅವರ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದಾರೆ.

ಪರಿಷತ್‌ ವಿಪಕ್ಷ ನಾಯಕನ ಸ್ಥಾನದ ಮೇಲೆ ಕಣ್ಣಿಡುವ ಮೂಲಕ ಬಿಎಸ್‌ವೈ ಟೀಂಗೆ ಸಿಟಿ ರವಿ ಟಾಂಗ್‌ ನೀಡಿದ್ದಾರೆ. ಈ ಮೂಲಕ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿರುವ ಬಿಎಸ್‌ ಯಡಿಯೂರಪ್ಪ ಅವರ ನಿಷ್ಠಾವಂತ ಆರ್‌ ಅಶೋಕ್‌ ಅವರನ್ನು ಬದಲಿಸಲು ಪ್ಲಾನ್‌ ಮಾಡಲಾಗಿದೆ. ಇದಾದ ಬಳಿಕ ರಾಜ್ಯಾಧ್ಯಕ್ಷರನ್ನು ಕೂಡ ಬದಲಿಸುವ ತಂತ್ರಗಾರಿಕೆಯನ್ನು ಬಿಎಲ್‌ ಸಂತೋಷ್‌ ಟೀಂ ಮಾಡಿದೆ ಎನ್ನಲಾಗಿದೆ. ಇದರೊಂದಿಗೆ ಬಿವೈ ವಿಜಯೇಂದ್ರ ಅವರನ್ನು ಕಟ್ಟಿಹಾಕಲು ಕೆಡ್ಡಾ ತೊಡಲಾಗಿದೆ ಎಂದು ಹೇಳಲಾಗಿದೆ.

ಇದೇ ವಿಚಾರವಾಗಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ ರಾಜೀವ್‌ ಕೂಡ ಮಾತನಾಡಿದ್ದು, ಪಕ್ಷದಲ್ಲಿನ ಅಶಿಸ್ತನ್ನು ಬಿಜೆಪಿ ಹೈಕಮಾಂಡ್‌ ಸಹಿಸಲ್ಲ, ಭಿನ್ನಾಭಿಪ್ರಾಯಗಳನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಈ ಬಗ್ಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಹೇಳಿದ್ದಾರೆ. ಇದರೊಂದಿಗೆ ಬಿಜೆಪಿಯಲ್ಲಿ ಏನು ಸರಿಯಿಲ್ಲ ಎಂಬುದನ್ನು ಒಪ್ಪಿಕೊಂಡಿರುವುದು ಸ್ಪಷ್ಟವಾಗುತ್ತದೆ.

Ad Widget
Click to comment

Leave a Reply

ಸ್ಥಳೀಯ

Mysuru-ಮೈಸೂರು ಕಂಬಳಕ್ಕೆ ಆಗಮಿಸಲಿರುವ ಕೋಣಗಳಿಗೆ ಕುಶಾಲನಗರದಲ್ಲಿ ವಿಶ್ರಾಂತಿಗೆ ವ್ಯವಸ್ಥೆ – ಶಾಸಕರಾದ ಅಶೋಕ್ ರೈ ಮಂಥರ್ ಗೌಡ ನೇತೃತ್ವದಲ್ಲಿ ಸಭೆ

Published

on



Ad Widget

Ad Widget

Ad Widget

Ad Widget

ಮೈಸೂರಿನಲ್ಲಿ ನಡೆಯಲಿರುವ ಕಂಬಳಕ್ಕೆ ಆಗಮಿಸುವ ಕೋಣಗಳಿಗೆ ಕುಶಾಲನಗರದಲ್ಲಿ ಸೂಕ್ತ ವಿಶ್ರಾಂತಿ ಹಾಗೂ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ನಿಟ್ಟಿನಲ್ಲಿ ಪೂರ್ವಸಿದ್ಧತಾ ಸಭೆ ನಡೆಯಿತು.

Ad Widget

Ad Widget

Ad Widget

Ad Widget

ಕುಶಾಲನಗರ: ಮೈಸೂರಿನಲ್ಲಿ ನಡೆಯಲಿರುವ ಕಂಬಳಕ್ಕೆ ಆಗಮಿಸುವ ಕೋಣಗಳಿಗೆ ಕುಶಾಲನಗರದಲ್ಲಿ ಸೂಕ್ತ ವಿಶ್ರಾಂತಿ ಹಾಗೂ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ನಿಟ್ಟಿನಲ್ಲಿ ಪೂರ್ವಸಿದ್ಧತಾ ಸಭೆ ನಡೆಯಿತು.

Ad Widget

Ad Widget

Ad Widget alt="Ad Widget"/>

Ad Widget

ಕುಶಾಲನಗರ ಪುರಸಭೆ ಸಭಾಂಗಣದಲ್ಲಿ ನಡೆದ ಸಭೆಯು ಮೈಸೂರು ಕಂಬಳದ ಅಧ್ಯಕ್ಷ ಹಾಗೂ ಶಾಸಕ ಅಶೋಕ್ ಕುಮಾರ್ ರೈ ಮತ್ತು ಮಡಿಕೇರಿ ಶಾಸಕ ಮಂಥರ್ ಗೌಡ ಅವರ ನೇತೃತ್ವದಲ್ಲಿ ನಡೆಯಿತು.

Ad Widget

Ad Widget <> Ad Widget

ಕಂಬಳ ಕೋಣಗಳಿಗೆ ಪ್ರಯಾಣದ ಬಳಿಕ ವಿಶ್ರಾಂತಿ, ಆರೈಕೆ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಒದಗಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.



Ad Widget

ಸಭೆಯಲ್ಲಿ ರಾಜ್ಯ ಕಂಬಳ ಅಧ್ಯಕ್ಷ ಬೆಳಪು ದೇವಿಪ್ರಸಾದ್ ಶೆಟ್ಟಿ ಹಾಗೂ ಮುರಳೀಧರ ರೈ ಮಠಂತಬೆಟ್ಟು ಉಪಸ್ಥಿತರಿದ್ದರು.

Ad Widget

Ad Widget

ತುಳುನಾಡಿನ ಸಾಂಪ್ರದಾಯಿಕ ಕ್ರೀಡೆಯಾದ ಕಂಬಳಕ್ಕೆ ಮೈಸೂರಿನಲ್ಲಿ ಭರ್ಜರಿ ಸಿದ್ಧತೆ ನಡೆಯುತ್ತಿದ್ದು, ವಿವಿಧ ಭಾಗಗಳಿಂದ ಕಂಬಳ ಕೋಣಗಳು ಮೈಸೂರಿನತ್ತ ಪ್ರಯಾಣ ಬೆಳೆಸಲಿವೆ.

Ad Widget
Continue Reading

ರಾಜಕೀಯ

U.T. Khader-₹86ರ ಔಷಧಕ್ಕೆ ₹4,528; ಆಸ್ಪತ್ರೆಗಳಲ್ಲಿ ದುಬಾರಿ ದರಕ್ಕೆ ಔಷಧಗಳ ಮಾರಾಟ – ಆಸ್ಪತ್ರೆಗಳಲ್ಲಿ ಲ್ಯಾಂಡಿಂಗ್ ಮತ್ತು ಮಾರಾಟ ದರ ಪಟ್ಟಿ ಪ್ರಕಟಿಸಲು ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕು : ಯು.ಟಿ ಖಾದರ್

Published

on



Ad Widget

Ad Widget

Ad Widget

Ad Widget

ಆಸ್ಪತ್ರೆಗಳಲ್ಲಿ ಮಾರಾಟವಾಗುತ್ತಿರುವ ಕ್ಯಾನ್ಸರ್ ಸೇರಿದಂತೆ ವಿವಿಧ ಕ್ರಿಟಿಕಲ್‌ ಔಷಧಗಳ ಲ್ಯಾಂಡಿಂಗ್ ದರ ಮತ್ತು ಮಾರಾಟ ದರದ ನಡುವೆ ಭಾರೀ ವ್ಯತ್ಯಾಸ ಕಂಡುಬಂದಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.

Ad Widget

Ad Widget

Ad Widget

Ad Widget

ಬೆಂಗಳೂರು: ಆಸ್ಪತ್ರೆಗಳಲ್ಲಿ ಮಾರಾಟವಾಗುತ್ತಿರುವ ಕ್ಯಾನ್ಸರ್ ಸೇರಿದಂತೆ ವಿವಿಧ ಕ್ರಿಟಿಕಲ್‌ ಔಷಧಗಳ ಲ್ಯಾಂಡಿಂಗ್ ದರ ಮತ್ತು ಮಾರಾಟ ದರದ ನಡುವೆ ಭಾರೀ ವ್ಯತ್ಯಾಸ ಕಂಡುಬಂದಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಬರೊಬ್ಬರಿ ಶೇ.5000 ರಷ್ಟು ದುಬಾರಿ ದರಕ್ಕೆ ಮಾರಾಟ ಮಾಡಲಾಗುತ್ತಿದೆ ಎಂಬ ಆಘಾತಕಾರಿ ಅಂಕಿ-ಅಂಶಗಳನ್ನು ಆರೋಗ್ಯ ಸಚಿವ ಯು.ಟಿ. ಖಾದರ್‌ ಬಿಚ್ಚಿಟ್ಟಿದ್ದಾರೆ

Ad Widget

Ad Widget <> Ad Widget

ಆಹಾರ ಸುರಕ್ಷತೆ ಹಾಗೂ ಔಷಧ ನಿಯಂತ್ರಣ ಅಧಿಕಾರಿಗಳು ವಿವಿಧ ಆಸ್ಪತ್ರೆಗಳಲ್ಲಿ ನಡೆಸಿದ ಪರಿಶೀಲನೆ ವೇಳೆ ಔಷಧಗಳನ್ನು ಲ್ಯಾಂಡಿಂಗ್ ದರಕ್ಕಿಂತ ಹಲವು ಪಟ್ಟು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ ಎಂದು ಸಚಿವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.



Ad Widget

ಪ್ರತಿ ಆಸ್ಪತ್ರೆ, ಫಾರ್ಮಾಸಿಗಳು ಔಷಧಗಳ ಲ್ಯಾಂಡಿಂಗ್ ದರ ಹಾಗೂ ಮಾರಾಟ ದರವನ್ನು ಪ್ರತ್ಯೇಕವಾಗಿ ಪಟ್ಟಿ ಮಾಡಿ ಬಹಿರಂಗ ಮಾಡಬೇಕು. ಈ ಬಗ್ಗೆ ಕೇಂದ್ರ ಸರ್ಕಾರ ಕಾನೂನು ರೂಪಿಸಬೇಕು. ದರ ನಿಯಂತ್ರಿಸಲು ರಾಜ್ಯಕ್ಕೆ ಅಧಿಕಾರ ಇಲ್ಲ. ಹೀಗಾಗಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದರು.

Ad Widget

Ad Widget

ಅಜಗಜಾಂತರ ವ್ಯತ್ಯಾಸ (ರೂಗಳಲ್ಲಿ)
ಔಷಧ- ಲ್ಯಾಂಡಿಂಗ್ ದರ – ಎಂಆರ್‌ಪಿ

ಗುಫೋಲ್-86- 4,528
ಗುಫಿಸೈಕ್ಲೈನ್-50 ಇಂಜೆಕ್ಷನ್ – 160-7,110
ಟೆರ್ಲಿಟಿಸ್-118-4,416
ಟ್ಯಾಕ್ಸೋಕೇರ್-120 ಎಂಜಿ-1,000-21,617
ಕ್ಯಾನ್‌ಮ್ಯಾಬ್ 440 ಎಂಜಿ-6,600-57,457
ಬೆವಾಟಸ್ 400 ಎಂಜಿ-5,850-62,690
ಸೈಟ್ಯಾಕ್ಸ್ 100 (ಕ್ಯಾನ್ಸರ್ ಔಷಧ)-342-3,836
ನೆಬ್ಯುಲೈಸರ್ ಮಾಸ್ಕ್-44.50-950
ಐವಿಸೆಟ್-14.75-295
ಪಾಲಿಸೇಫಿಟಿ ಪಿಆರ್‌ಒ ಕ್ಯಾನುಲಾ-33.21-548

Ad Widget
Continue Reading

ಅಂತರ ರಾಜ್ಯ

Shivraj Singh Chauhan-ಕರ್ನಾಟಕ ಸೇರಿ 5 ರಾಜ್ಯಗಳು ಬರಪೀಡಿತವೆಂದು ಘೋಷಣೆ : ಅ.3ಕ್ಕೆ ರಾಜ್ಯಕ್ಕೆ ಕೇಂದ್ರ ತಂಡ ಭೇಟಿ – ಶಿವರಾಜ್ ಸಿಂಗ್ ಚೌಹಾಣ್

Published

on



Ad Widget

Ad Widget

Ad Widget

Ad Widget

ಕೇಂದ್ರ ಸರಕಾರವು ಈವರೆಗೆ ಕರ್ನಾಟಕ ಸೇರಿದಂತೆ ಐದು ರಾಜ್ಯಗಳು ಬರಪೀಡಿತವೆಂದು ಘೋಷಣೆ ಮಾಡಿದೆ ಹಾಗೂ ದೇಶದ ವಿವಿಧೆಡೆ ಅತಿಯಾದ ಮಳೆ ಹಾಗೂ ಪ್ರವಾಹದಿಂದಾಗಿ 6.11 ಲಕ್ಷ ಹೆಕ್ಟೇರ್ ಪ್ರದೇಶದ ಕೃಷಿಭೂಮಿ ಹಾನಿಯಾಗಿದೆ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ತಿಳಿಸಿದ್ದಾರೆ.

Ad Widget

Ad Widget

Ad Widget

Ad Widget

ಹೊಸದಿಲ್ಲಿ: ಕೇಂದ್ರ ಸರಕಾರವು ಈವರೆಗೆ ಕರ್ನಾಟಕ ಸೇರಿದಂತೆ ಐದು ರಾಜ್ಯಗಳು ಬರಪೀಡಿತವೆಂದು ಘೋಷಣೆ ಮಾಡಿದೆ ಹಾಗೂ ದೇಶದ ವಿವಿಧೆಡೆ ಅತಿಯಾದ ಮಳೆ ಹಾಗೂ ಪ್ರವಾಹದಿಂದಾಗಿ 6.11 ಲಕ್ಷ ಹೆಕ್ಟೇರ್ ಪ್ರದೇಶದ ಕೃಷಿಭೂಮಿ ಹಾನಿಯಾಗಿದೆ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ತಿಳಿಸಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಹೊಸದಿಲ್ಲಿಯಲ್ಲಿ ನಡೆದ ‘ರಬಿ (ಹಿಂಗಾರು ಬೆಳೆ) 2026-27’ ರಾಷ್ಟ್ರೀಯ ಕೃಷಿ ಸಮ್ಮೇಳನದ ವೇಳೆ ಮಾತನಾಡಿದ ಅವರು, ಕರ್ನಾಟಕ, ಮಹಾರಾಷ್ಟ್ರ, ತೆಲಂಗಾಣ, ಆಂಧ್ರಪ್ರದೇಶದ ಕೆಲವು ಭಾಗಗಳು ಹಾಗೂ ರಾಜಸ್ಥಾನದ ಪ್ರದೇಶಗಳಲ್ಲಿ ಬರ ಪರಿಸ್ಥಿತಿ ಕುರಿತು ಕಳವಳ ವ್ಯಕ್ತಪಡಿಸಿದರು.

Ad Widget

Ad Widget <> Ad Widget

ಕರ್ನಾಟಕ ಸರ್ಕಾರದ ಮನವಿ ಹಿನ್ನೆಲೆಯಲ್ಲಿ ರಾಜ್ಯದಲ್ಲಿನ ಬರ ಪರಿಸ್ಥಿತಿ ಹಾಗೂ ಬೆಳೆ ಹಾನಿಯ ವಾಸ್ತವ ಸ್ಥಿತಿಯನ್ನು ಪರಿಶೀಲಿಸಲು ಕೇಂದ್ರ ತಂಡವು ಅಕ್ಟೋಬರ್ 3ರಂದು ಕರ್ನಾಟಕಕ್ಕೆ ಭೇಟಿ ನೀಡಲಿದೆ ಎಂದು ಚೌಹಾಣ್ ತಿಳಿಸಿದರು.



Ad Widget

ದೇಶದ ಇತರ ಭಾಗಗಳಲ್ಲಿನ ಬರ ಪರಿಸ್ಥಿತಿಯನ್ನೂ ಶೀಘ್ರದಲ್ಲೇ ಪರಿಶೀಲಿಸಲಾಗುವುದು. ಬರಪೀಡಿತ ಪ್ರದೇಶಗಳಿಗೆ ತಾವು ವೈಯಕ್ತಿಕವಾಗಿ ಭೇಟಿ ನೀಡುವುದರ ಜೊತೆಗೆ, ಆಯಾ ರಾಜ್ಯ ಸರ್ಕಾರಗಳೊಂದಿಗೆ ನಿರಂತರ ಸಂಪರ್ಕದಲ್ಲಿರುವುದಾಗಿ ಸಚಿವರು ಹೇಳಿದರು.

Ad Widget

Ad Widget

ರೈತರಿಗೆ ನೆರವಿನ ಭರವಸೆ
ಬರ ಪರಿಸ್ಥಿತಿಯ ನಡುವೆಯೂ ಕೃಷಿ ಚಟುವಟಿಕೆ ಮುಂದುವರಿಸುತ್ತಿರುವ ರೈತರಿಗೆ ಕೇಂದ್ರ ಸರ್ಕಾರ ನೆರವು ನೀಡಲಿದೆ ಎಂದು ಚೌಹಾಣ್ ಭರವಸೆ ನೀಡಿದರು. ಕೃಷಿಭೂಮಿ ಪಾಳು ಬೀಳದಂತೆ ನೋಡಿಕೊಳ್ಳುವುದು ಸರ್ಕಾರದ ತಕ್ಷಣದ ಉದ್ದೇಶವಾಗಿದೆ ಎಂದರು.

ನೀರಿನ ಲಭ್ಯತೆ ಹಾಗೂ ಮಣ್ಣಿನ ತೇವಾಂಶಕ್ಕೆ ಅನುಗುಣವಾಗಿ ಬೆಳೆ ಆಯ್ಕೆ ಮಾಡುವಂತೆ ರಾಜ್ಯಗಳಿಗೆ ಸೂಚಿಸಲಾಗಿದ್ದು, ಕಡಿಮೆ ನೀರು ಅಗತ್ಯವಿರುವ ಬೆಳೆಗಳು ಹಾಗೂ ಕಡಿಮೆ ಅವಧಿಯಲ್ಲಿ ಕಟಾವಿಗೆ ಬರುವ ತಳಿಗಳಿಗೆ ಆದ್ಯತೆ ನೀಡುವಂತೆ ಸಲಹೆ ನೀಡಲಾಗಿದೆ.

ಶೇ.12.3ರಷ್ಟು ಮಳೆ ಕೊರತೆ
ಎಲ್‌ನೀನೊ ಪರಿಣಾಮ ಸೇರಿದಂತೆ ಹವಾಮಾನ ವೈಪರೀತ್ಯಗಳಿಂದಾಗಿ ದೇಶದಲ್ಲಿ ಮುಂಗಾರು ಮಳೆಯ ಕೊರತೆ ಉಂಟಾಗಿದೆ. ಮುಂಗಾರು ಋತುವಿನ ಅಂತ್ಯದ ವೇಳೆಗೆ ದೇಶದಲ್ಲಿ ಸಾಮಾನ್ಯಕ್ಕಿಂತ ಸುಮಾರು ಶೇ.12.3ರಷ್ಟು ಮಳೆ ಕಡಿಮೆಯಾಗಿದೆ ಎಂದು ಸಚಿವರು ತಿಳಿಸಿದರು.

ಮಳೆ ಕೊರತೆಯ ಪರಿಣಾಮ 2026-27ರ ಖಾರಿಫ್‌ ಬೆಳೆಗಳ ಒಟ್ಟು ಬಿತ್ತನೆ ಪ್ರದೇಶದಲ್ಲಿ ಸುಮಾರು ಶೇ.1ರಷ್ಟು ಇಳಿಕೆ ಕಂಡುಬಂದಿದೆ. ಭತ್ತದ ಬಿತ್ತನೆ ಪ್ರದೇಶದಲ್ಲಿ 16.32 ಲಕ್ಷ ಹೆಕ್ಟೇರ್‌ಗಳಷ್ಟು ಇಳಿಕೆಯಾಗಿದ್ದು, ಜೋಳ, ಸೋಯಾಬೀನ್ ಮತ್ತು ಹತ್ತಿ ಬೆಳೆಗಳ ವಿಸ್ತೀರ್ಣದಲ್ಲೂ ಕುಸಿತವಾಗಿದೆ.

ಇದಕ್ಕೆ ವಿರುದ್ಧವಾಗಿ ಉದ್ದು, ಬಾಜ್ರಾ, ಜೋಳ, ಎಳ್ಳು, ಸೂರ್ಯಕಾಂತಿ, ಹೆಸರು ಮತ್ತು ತೊಗರಿ ಸೇರಿದಂತೆ ಕೆಲವು ದ್ವಿದಳ ಧಾನ್ಯಗಳು ಹಾಗೂ ಸಿರಿಧಾನ್ಯಗಳ ಬಿತ್ತನೆ ಪ್ರದೇಶದಲ್ಲಿ ಏರಿಕೆ ಕಂಡುಬಂದಿದೆ.

ಕೇಂದ್ರ ಸರ್ಕಾರವು ರಬಿ ಹಂಗಾಮಿಗೆ ಅಗತ್ಯವಿರುವ ರಸಗೊಬ್ಬರ ಮತ್ತು ಬೀಜಗಳ ಲಭ್ಯತೆ ಖಚಿತಪಡಿಸಿಕೊಳ್ಳಲು ಕ್ರಮ ಕೈಗೊಂಡಿದ್ದು, ಬರಪೀಡಿತ ಪ್ರದೇಶಗಳಲ್ಲಿ ಪರಿಸ್ಥಿತಿಗೆ ಅನುಗುಣವಾಗಿ ಬೆಳೆ ಯೋಜನೆ ರೂಪಿಸುವಂತೆ ರಾಜ್ಯಗಳಿಗೆ ಸೂಚಿಸಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading