ಉದ್ಯೋಗ
karnataka grama panchayat posts recruitment 2024 : ಪ್ರತಿ ಗ್ರಾ.ಪಂಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಕ್ಕೆ ಸರ್ಕಾರ ಆದೇಶ
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಡಿಯಲ್ಲಿನ ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯವು ಪ್ರತಿ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ವಿವಿಧ ನಾಲ್ಕು ಪದನಾಮಗಳ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯಿತಿ ಆಡಳಿತಾಧಿಕಾರಿಗಳಿಗೆ ಆದೇಶ ನೀಡಿದೆ. ಈ ಹುದ್ದೆಗಳಿಗೆ ಆಯಾ ಜಿಲ್ಲಾ ಪಂಚಾಯ್ತಿಗಳು ನೇಮಕಾತಿ ಅಧಿಸೂಚನೆ ಹೊರಡಿಸಿ, ಜಿಲ್ಲಾ ಮಟ್ಟದಲ್ಲಿ ನೇಮಕಾತಿ ಪ್ರಕ್ರಿಯೆ ನಡೆಸಿ, ಆಯ್ಕೆಪಟ್ಟಿ ಬಿಡುಗಡೆ ಮಾಡಲಿವೆ. ಯಾವ ಜಿಲ್ಲೆ ಯಾವಾಗ ಅಧಿಸೂಚನೆ ಹೊರಡಿಸಲಿದೆ ಎಂಬುದನ್ನು ಕಾದುನೋಡಬೇಕಿದೆ. ಈ ಕುರಿತು ಆಯಾ ಜಿಲ್ಲೆಯ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳು ಆಯಾ ಜಿಲ್ಲಾಡಳಿತದ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬಹುದು.
ಪಂಚಾಯತ್ ರಾಜ್ ಇಲಾಖೆ ನೇಮಕಾತಿಗೆ ಆದೇಶ ನೀಡಿರುವ ಆ ಹುದ್ದೆಗಳೆಂದರೆ..
ಕರವಸೂಲಿಗಾರರು / ಬಿಲ್ ಕಲೆಕ್ಟರ್
ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್‌ಗಳು
ವಾಟರ್ ಆಪರೇಟರ್
ಸ್ವಚ್ಛತಾಗಾರರು
ಹುದ್ದೆವಾರು ವಿದ್ಯಾರ್ಹತೆಗಳ ವಿವರ
ಕರವಸೂಲಿಗಾರರು/ ಬಿಲ್ ಕಲೆಕ್ಟರ್ ದ್ವಿತೀಯ ಪಿಯುಸಿ ಪಾಸ್.
ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್‌ಗಳು -ದ್ವಿತೀಯ ಪಿಯುಸಿ ಪಾಸ್ ಜತೆಗೆ ಕಂಪ್ಯೂಟರ್ ಜ್ಞಾನ ಹೊಂದಿರುವುದು, ಪ್ರಮಾಣ ಪತ್ರ ಹೊಂದಿರುವುದು.
ವಾಟರ್ ಆಪರೇಟರ್-ಕನಿಷ್ಠ 7ನೇ ತರಗತಿ.
ಸ್ವಚ್ಛತಾಗಾರರು-ಯಾವುದೇ ವಿದ್ಯಾರ್ಹತೆ ಕಡ್ಡಾಯವಲ್ಲ.
ಈ ಮೇಲಿನ ಹುದ್ದೆಗಳಿಗೆ ಜಿಲ್ಲಾ ಪಂಚಾಯಿತಿ ಇಂದ ಈಗಾಗಲೇ ಅನುಮೋದನೆ ಹೊಂದಿರುವ ಸದರಿ ನೌಕರರ ವಯೋನಿವೃತ್ತಿಯಿಂದ, ಮುಂಬಡ್ತಿಯಿಂದ ಅಥವಾ ಮರಣಹೊಂದಿರುವ ಕಾರಣಗಳಿಂದಾಗಿ ಖಾಲಿಯಾಗಿದ್ದಲ್ಲಿ, ಗ್ರಾಮ ಪಂಚಾಯಿತಿಯ ಸಿಬ್ಬಂದಿ ವರ್ಗದ ಮಾದರಿಯಲ್ಲಿ ಖಾಲಿಯಾದ ಈ ಮೇಲಿನ ನಾಲ್ಕು ವೃಂದದ ಹುದ್ದೆಗಳಲ್ಲಿ ಯಾರು ಕಾರ್ಯನಿರ್ವಹಿಸದೇ ಇದ್ದಲ್ಲಿ, ಸದರಿ ಹುದ್ದೆಗೆ ಒಂದು ಸಿಬ್ಬಂದಿಯನ್ನು ಸರ್ಕಾರದ ಅಧಿಸೂಚನೆ ಸಂ:ಗ್ರಾಅಪ 886 ಗ್ರಾಪಂಕಾ 2016 ದಿನಾಂಕ 29-06-2020 ರಲ್ಲಿ ಸೂಚಿಸಿರುವಂತೆ ನಿಯಮಾನುಸಾರ ನೇಮಕಾತಿ ಮಾಡಿಕೊಳ್ಳಲು ಎಲ್ಲಾ ಜಿಲ್ಲಾ ಪಂಚಾಯಿತಿಯ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳಿಗೆ ತಿಳಿಸಿದೆ. ಮುಂದುವರೆದು, ನೇಮಕಾತಿಯ ಮೀಸಲಾತಿಯನ್ನು ಕಡ್ಡಾಯವಾಗಿ ಅನುಸರಿಸಲು ಇಲಾಖೆ ಕೋರಿದೆ.
ನೇಮಕಾತಿಗೆ ತಿದ್ದುಪಡಿ ತರುವ ಪ್ರಸ್ತಾವನೆ ಸರ್ಕಾರದ ಮುಂದೆ
ಪ್ರಸ್ತುತ ಪ್ರತಿ ಗ್ರಾಮ ಪಂಚಾಯತಿಗಳಿಗೆ ಸಿಬ್ಬಂದಿ ಸಂಖ್ಯೆಯನ್ನು ನಿಗದಿಪಡಿಸುವ ಬಗ್ಗೆ ನಿಯಮಗಳಲ್ಲಿ ತಿದ್ದುಪಡಿ ತರುವ ಪ್ರಸ್ತಾವನೆಯು ಸರ್ಕಾರದ ಹಂತದಲ್ಲಿ ಪರಿಶೀಲನೆಯಲ್ಲಿದೆ. ಆದ್ದರಿಂದ ಎಲ್ಲ ಜಿಲ್ಲಾ ಪಂಚಾಯಿತಿಗಳು ಮುಂದಿನ ಆದೇಶ ಬರುವವರೆಗೂ ಗ್ರಾಮ ಪಂಚಾಯಿತಿ ಸಿಬ್ಬಂದಿಗಳ ಸಂಖ್ಯೆಯನ್ನು ನಿಗದಿಪಡಿಸುವ ಕುರಿತಾಗಿ ಯಾವುದೇ ಕ್ರಮ ಕೈಗೊಳ್ಳದಂತೆ ಹಾಗೂ ಮುಂದಿನ ಆದೇಶ ನಿರೀಕ್ಷಿಸುವಂತೆ ತಿಳಿಸಿರುತ್ತದೆ.
ಉದ್ಯೋಗ
Puttur-Salesನಿಂದ Technicianವರೆಗೆ; ಪುತ್ತೂರಿನ ಶ್ರೀ ತಿರುಮಲಾ TVSನಲ್ಲಿ ಭರ್ಜರಿ Job Opening
ಉದ್ಯೋಗ ಹುಡುಕುತ್ತಿರುವ ಯುವಕ-ಯುವತಿಯರಿಗೆ ಇಲ್ಲಿದೆ ಉತ್ತಮ ಅವಕಾಶ. ದ್ವಿಚಕ್ರ ವಾಹನ ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವವರಿಗೆ ಪುತ್ತೂರಿನ ಶ್ರೀ ತಿರುಮಲಾ TVS ಸಂಸ್ಥೆಯಲ್ಲಿ ಸೇಲ್ಸ್, ಸರ್ವೀಸ್, ಅಕೌಂಟ್ಸ್, ಫೈನಾನ್ಸ್, ಇನ್ಶೂರೆನ್ಸ್ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಹಲವು ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ.
ಪುತ್ತೂರು: ಉದ್ಯೋಗ ಹುಡುಕುತ್ತಿರುವ ಯುವಕ-ಯುವತಿಯರಿಗೆ ಇಲ್ಲಿದೆ ಉತ್ತಮ ಅವಕಾಶ. ದ್ವಿಚಕ್ರ ವಾಹನ ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವವರಿಗೆ ಪುತ್ತೂರಿನ ಶ್ರೀ ತಿರುಮಲಾ TVS ಸಂಸ್ಥೆಯಲ್ಲಿ ಸೇಲ್ಸ್, ಸರ್ವೀಸ್, ಅಕೌಂಟ್ಸ್, ಫೈನಾನ್ಸ್, ಇನ್ಶೂರೆನ್ಸ್ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಹಲವು ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ.
TVS ಸಂಸ್ಥೆಯ ಪ್ರೀಮಿಯಂ, EV ಹಾಗೂ IC ವಿಭಾಗಗಳಲ್ಲಿ ಉದ್ಯೋಗಾವಕಾಶ ಕಲ್ಪಿಸಲಾಗಿದ್ದು, ‘ಪುತ್ತೂರಿನ ಅತಿದೊಡ್ಡ 2-ವೀಲರ್ ಜಾಬ್ ಓಪನಿಂಗ್’ ಎಂಬ ಘೋಷಣೆಯೊಂದಿಗೆ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ.
ಸೇಲ್ಸ್ ವಿಭಾಗದಲ್ಲಿ ಹಲವು ಅವಕಾಶ
ಪುತ್ತೂರು ಸೇಲ್ಸ್ ವಿಭಾಗದಲ್ಲಿ ಸೇಲ್ಸ್ ಎಕ್ಸಿಕ್ಯೂಟಿವ್, ಸೇಲ್ಸ್ ಮ್ಯಾನೇಜರ್, ಎಕ್ಸ್‌ಚೇಂಜ್ ಕೋಆರ್ಡಿನೇಟರ್, ಸೇಲ್ಸ್ ಟೆಲಿಕಾಲಿಂಗ್ (CRE), ಅಕೌಂಟ್ಸ್ ಮ್ಯಾನೇಜರ್, ಫೈನಾನ್ಸ್ ಮ್ಯಾನೇಜರ್, ರಿಸೆಪ್ಷನಿಸ್ಟ್, RTO ಎಕ್ಸಿಕ್ಯೂಟಿವ್, ಇನ್‌ವಾಯ್ಸ್ ಎಕ್ಸಿಕ್ಯೂಟಿವ್, ಅಕೌಂಟ್ಸ್ ಎಕ್ಸಿಕ್ಯೂಟಿವ್, ಫೈನಾನ್ಸ್ ಕೋಆರ್ಡಿನೇಟರ್ ಹಾಗೂ ಇನ್ಶೂರೆನ್ಸ್ ಎಕ್ಸಿಕ್ಯೂಟಿವ್ ಸೇರಿದಂತೆ ಹಲವು ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.

ಸರ್ವೀಸ್ ವಿಭಾಗದಲ್ಲೂ ಭರ್ಜರಿ ನೇಮಕಾತಿ
ಸರ್ವೀಸ್ ವಿಭಾಗದಲ್ಲಿ ಅಡ್ವೈಸರ್, ಫ್ಲೋರ್ ಸೂಪರ್‌ವೈಸರ್, ಟೆಕ್ನಿಷಿಯನ್, ಪಾರ್ಟ್ಸ್ ಪಿಕರ್, ಬಿಲ್ಲಿಂಗ್/ರಿಸೆಪ್ಷನಿಸ್ಟ್ ಎಕ್ಸಿಕ್ಯೂಟಿವ್, ಪಾರ್ಟ್ಸ್ ಮ್ಯಾನೇಜರ್, ವಾಷಿಂಗ್ ಸಿಬ್ಬಂದಿ, PDI ಟೆಕ್ನಿಷಿಯನ್, ಸರ್ವೀಸ್ ಮ್ಯಾನೇಜರ್, ನೆಟ್‌ವರ್ಕ್ ಕೋಆರ್ಡಿನೇಟರ್, ವಾರಂಟಿ ಇನ್‌ಚಾರ್ಜ್, ಅಕ್ಸಿಡೆಂಟ್ ಸೂಪರ್‌ವೈಸರ್, CRE ಟೆಲಿಕಾಲಿಂಗ್, CRM, PDI ಸೂಪರ್‌ವೈಸರ್ ಹಾಗೂ ಪೇಂಟರ್ ಮತ್ತು ಡೆಂಟಿಂಗ್ ಹುದ್ದೆಗಳಿಗೆ ಅವಕಾಶವಿದೆ.

ಬೆಳ್ಳಾರೆಯಲ್ಲೂ ಉದ್ಯೋಗದ ಬಾಗಿಲು ತೆರೆದಿದೆ
ಬೆಳ್ಳಾರೆ ಭಾಗದಲ್ಲಿಯೂ ಉದ್ಯೋಗಾವಕಾಶ ಕಲ್ಪಿಸಲಾಗಿದೆ. ಸರ್ವೀಸ್ ವಿಭಾಗದಲ್ಲಿ ಅಡ್ವೈಸರ್, ಪಾರ್ಟ್ಸ್ ಪಿಕರ್, ಬಿಲ್ಲಿಂಗ್/ರಿಸೆಪ್ಷನಿಸ್ಟ್ ಎಕ್ಸಿಕ್ಯೂಟಿವ್, ಫ್ಲೋರ್ ಸೂಪರ್‌ವೈಸರ್, ಟೆಕ್ನಿಷಿಯನ್ ಹಾಗೂ ವಾಷಿಂಗ್ ಸಿಬ್ಬಂದಿ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.

ಸೇಲ್ಸ್ ವಿಭಾಗದಲ್ಲಿ 6 ಸೇಲ್ಸ್ ಎಕ್ಸಿಕ್ಯೂಟಿವ್ ಹಾಗೂ 2 ರಿಸೆಪ್ಷನಿಸ್ಟ್ ಹುದ್ದೆಗಳಿಗೂ ಅವಕಾಶವಿದೆ.
PF, ESI ಜೊತೆಗೆ ₹25 ಸಾವಿರದವರೆಗೆ ಗಳಿಕೆ!
ಆಯ್ಕೆಯಾಗುವ ಅಭ್ಯರ್ಥಿಗಳಿಗೆ PF, ESI, ಸ್ಪಾಟ್ ಇನ್ಸೆಂಟಿವ್, ಮಾಸಿಕ ಹಾಗೂ ತ್ರೈಮಾಸಿಕ ಇನ್ಸೆಂಟಿವ್ ಸೌಲಭ್ಯಗಳು ದೊರೆಯಲಿವೆ. 25 ಕಿ.ಮೀ.ಗಿಂತ ಹೆಚ್ಚಿನ ಪ್ರಯಾಣಕ್ಕೆ ಪೆಟ್ರೋಲ್ ವೋಚರ್ ನೀಡಲಾಗುತ್ತಿದ್ದು, ಅರ್ಹ ಅಭ್ಯರ್ಥಿಗಳಿಗೆ ತಿಂಗಳಿಗೆ ₹25,000 ವರೆಗೆ ಗಳಿಸುವ ಅವಕಾಶ ಇದೆ ಎಂದು ಸಂಸ್ಥೆ ತಿಳಿಸಿದೆ.
ದ್ವಿಚಕ್ರ ವಾಹನ ಕ್ಷೇತ್ರದಲ್ಲಿ ಆಸಕ್ತಿ ಹೊಂದಿರುವವರು ಮಾತ್ರವಲ್ಲದೆ, ಸೇಲ್ಸ್, ಅಕೌಂಟ್ಸ್, ಫೈನಾನ್ಸ್, ಟೆಲಿಕಾಲಿಂಗ್, ಗ್ರಾಹಕ ಸೇವೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಉದ್ಯೋಗ ಹುಡುಕುತ್ತಿರುವವರೂ ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ.
ಉದ್ಯೋಗಾವಕಾಶ ಸೀಮಿತವಾಗಿರುವುದರಿಂದ ಆಸಕ್ತ ಅಭ್ಯರ್ಥಿಗಳು ಕೂಡಲೇ ಸಂಪರ್ಕಿಸಬಹುದು.
📞 ಸಂಪರ್ಕ: +91 82965 79206
📍 ವಿಳಾಸ: ಶ್ರೀ ತಿರುಮಲಾ TVS, ಬೈಪಾಸ್ ಜಂಕ್ಷನ್, ಮಂಜಲ್ಪಡ್ಡು, ಮೇನ್ ರೋಡ್, ಬೋಳ್ವಾರ್ ವೆಸ್ಟ್, ಪುತ್ತೂರು–574201.
ಉದ್ಯೋಗ
Constable recruitment: ಕಾನ್‌ಸ್ಟೆಬಲ್ ನೇಮಕಾತಿ: ಸೆ.28ರಿಂದ ದೈಹಿಕ ಪರೀಕ್ಷೆ; 3,991 ಹುದ್ದೆಗಳಿಗೆ 19,396 ಅಭ್ಯರ್ಥಿಗಳು
ರಾಜ್ಯ ಪೊಲೀಸ್ ಇಲಾಖೆಯ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ (ಆರ್‌ಪಿಸಿ ಮತ್ತು ಕೆಕೆ) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ದೇಹದಾರ್ಢ್ಯ ಪರೀಕ್ಷೆ (ಪಿಎಸ್‌ಟಿ) ಹಾಗೂ ಸಹಿಷ್ಣುತೆ ಪರೀಕ್ಷೆ (ಇಟಿ) ಸೆ.28ರಿಂದ ಆರಂಭವಾಗಲಿದೆ. ಪೊಲೀಸ್ ನೇಮಕಾತಿ ವಿಭಾಗವು ವಲಯವಾರು ವೇಳಾಪಟ್ಟಿಯನ್ನು ಪ್ರಕಟಿಸಿದೆ.
ಬೆಂಗಳೂರು, ಸೆ.25: ರಾಜ್ಯ ಪೊಲೀಸ್ ಇಲಾಖೆಯ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ (ಆರ್‌ಪಿಸಿ ಮತ್ತು ಕೆಕೆ) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ದೇಹದಾರ್ಢ್ಯ ಪರೀಕ್ಷೆ (ಪಿಎಸ್‌ಟಿ) ಹಾಗೂ ಸಹಿಷ್ಣುತೆ ಪರೀಕ್ಷೆ (ಇಟಿ) ಸೆ.28ರಿಂದ ಆರಂಭವಾಗಲಿದೆ. ಪೊಲೀಸ್ ನೇಮಕಾತಿ ವಿಭಾಗವು ವಲಯವಾರು ವೇಳಾಪಟ್ಟಿಯನ್ನು ಪ್ರಕಟಿಸಿದೆ.
ಈ ನೇಮಕಾತಿ ಪ್ರಕ್ರಿಯೆಯಡಿ ಒಟ್ಟು 3,991 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ರಾಜ್ಯಾದ್ಯಂತ 19,396 ಅಭ್ಯರ್ಥಿಗಳು ದೈಹಿಕ ಪರೀಕ್ಷೆಗೆ ಅರ್ಹತೆ ಪಡೆದಿದ್ದಾರೆ. ಉಳಿಕೆ ಮೂಲ ವೃಂದದ (ಆರ್‌ಪಿಸಿ) 3,395 ಹುದ್ದೆಗಳಿಗೆ 16,454 ಅಭ್ಯರ್ಥಿಗಳು ಹಾಗೂ ಕಲ್ಯಾಣ ಕರ್ನಾಟಕ (ಕೆಕೆ) ವೃಂದದ 596 ಹುದ್ದೆಗಳಿಗೆ 2,942 ಅಭ್ಯರ್ಥಿಗಳು ಪರೀಕ್ಷೆಗೆ ಆಯ್ಕೆಯಾಗಿದ್ದಾರೆ.
ಮಂಗಳೂರಿನಲ್ಲಿ 395 ಹುದ್ದೆಗಳಿಗೆ 1,803 ಅಭ್ಯರ್ಥಿಗಳು
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ (ಕಾರವಾರ), ಚಿಕ್ಕಮಗಳೂರು ಹಾಗೂ ಮಂಗಳೂರು ನಗರ ಘಟಕಗಳ ವ್ಯಾಪ್ತಿಯ 395 ಹುದ್ದೆಗಳಿಗೆ 1,803 ಅಭ್ಯರ್ಥಿಗಳು ದೈಹಿಕ ಪರೀಕ್ಷೆಯಲ್ಲಿ ಭಾಗವಹಿಸಲಿದ್ದಾರೆ. ಈ ಅಭ್ಯರ್ಥಿಗಳಿಗೆ ಸೆ.28ರಿಂದ ಅ.3ರವರೆಗೆ ಮಂಗಳೂರಿನ ಲಾಲ್‌ಬಾಗ್‌ನ ಮಂಗಳ ಕ್ರೀಡಾಂಗಣದಲ್ಲಿ ದೈಹಿಕ ಪರೀಕ್ಷೆ ನಡೆಯಲಿದೆ.
ಕರೆಪತ್ರ ಡೌನ್‌ಲೋಡ್‌ಗೆ ಸೂಚನೆ
ದೈಹಿಕ ಪರೀಕ್ಷೆಗೆ ಅರ್ಹತೆ ಪಡೆದ ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಅಧಿಕೃತ ವೆಬ್‌ಸೈಟ್‌ನಿಂದ ತಮ್ಮ ಕರೆಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು. ಅಭ್ಯರ್ಥಿಗಳು ಕರೆಪತ್ರದಲ್ಲಿ ನಮೂದಿಸಿರುವ ದಿನಾಂಕದಂದು ನಿಗದಿತ ಪರೀಕ್ಷಾ ಕೇಂದ್ರಕ್ಕೆ ಕಡ್ಡಾಯವಾಗಿ ಹಾಜರಾಗುವಂತೆ ಪೊಲೀಸ್ ನೇಮಕಾತಿ ವಿಭಾಗ ಸೂಚಿಸಿದೆ.
ಕಾನ್‌ಸ್ಟೆಬಲ್ ಲಿಖಿತ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶ ಪ್ರಕಟ
ಇದೇ ವೇಳೆ, ಕೆಎಸ್‌ಆರ್‌ಪಿ, ಕೆಎಸ್‌ಐಎಸ್‌ಎಫ್ ಹಾಗೂ ಐಆರ್‌ಬಿ ಪೊಲೀಸ್ ಕಾನ್‌ಸ್ಟೆಬಲ್ ನೇಮಕಾತಿಗಾಗಿ ಸೆ.20ರಂದು ನಡೆದ ಲಿಖಿತ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶವನ್ನು ಕೇವಲ ಐದು ದಿನಗಳಲ್ಲಿ ಕೆಇಎ ಪ್ರಕಟಿಸಿದೆ.
ಪರೀಕ್ಷೆಯ ಫಲಿತಾಂಶಕ್ಕೆ ಆಕ್ಷೇಪಣೆಗಳಿದ್ದಲ್ಲಿ ಅಭ್ಯರ್ಥಿಗಳು ಸೆ.27ರೊಳಗೆ ನಿಗದಿತ ಲಿಂಕ್ ಮೂಲಕ ಸಲ್ಲಿಸಬಹುದು ಎಂದು ಕೆಇಎ ತಿಳಿಸಿದೆ.
ಉಳಿಕೆ ಮೂಲ ವೃಂದದ 1,13,390 ಹಾಗೂ ಕಲ್ಯಾಣ ಕರ್ನಾಟಕ ವೃಂದದ 33,061 ಅಭ್ಯರ್ಥಿಗಳು ಲಿಖಿತ ಪರೀಕ್ಷೆ ಬರೆದಿದ್ದರು. ಪರೀಕ್ಷೆ ನಡೆದ ದಿನವೇ ಎಲ್ಲ ಅಭ್ಯರ್ಥಿಗಳ ಒಎಂಆರ್ ಉತ್ತರ ಪತ್ರಿಕೆಗಳನ್ನು ಸ್ಕ್ಯಾನ್ ಮಾಡಿ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾಗಿತ್ತು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ.
ಅಂತರ ರಾಜ್ಯ
Oracle-‘ಇಂದು ನಿಮ್ಮ ಕೊನೆಯ ಕೆಲಸದ ದಿನ’; Oracle ಉದ್ಯೋಗಿಗಳಿಗೆ ಮುಂಜಾನೆ ʻಇ-ಮೇಲ್ ʼಶಾಕ್
ಜಾಗತಿಕ ಸಾಫ್ಟ್‌ವೇರ್ ದೈತ್ಯ ಒರಾಕಲ್ (Oracle) ಸಂಸ್ಥೆಯ ಉದ್ಯೋಗಿಗಳಿಗೆ ಮಂಗಳವಾರ ಮುಂಜಾನೆ ಕಳುಹಿಸಲಾದ ಇ-ಮೇಲ್‌ವೊಂದು ಆತಂಕ ಮೂಡಿಸಿದೆ. “ನಿಮ್ಮ ಹುದ್ದೆಗೆ ಸಂಬಂಧಿಸಿದಂತೆ ಕೆಲವು ಕಠಿಣ ಸುದ್ದಿಯನ್ನು ಹಂಚಿಕೊಳ್ಳುತ್ತಿದ್ದೇವೆ. ಇಂದು ನಿಮ್ಮ ಕೊನೆಯ ಕೆಲಸದ ದಿನ” ಎಂದು ಇ-ಮೇಲ್‌ನಲ್ಲಿ ತಿಳಿಸಲಾಗಿದೆ ಎಂದು ಬಿಸಿನೆಸ್ ಇನ್‌ಸೈಡರ್ ವರದಿ ಮಾಡಿದೆ.
ನವದೆಹಲಿ, ಸೆ.16: ಜಾಗತಿಕ ಸಾಫ್ಟ್‌ವೇರ್ ದೈತ್ಯ ಒರಾಕಲ್ (Oracle) ಸಂಸ್ಥೆಯ ಉದ್ಯೋಗಿಗಳಿಗೆ ಮಂಗಳವಾರ ಮುಂಜಾನೆ ಕಳುಹಿಸಲಾದ ಇ-ಮೇಲ್‌ವೊಂದು ಆತಂಕ ಮೂಡಿಸಿದೆ. “ನಿಮ್ಮ ಹುದ್ದೆಗೆ ಸಂಬಂಧಿಸಿದಂತೆ ಕೆಲವು ಕಠಿಣ ಸುದ್ದಿಯನ್ನು ಹಂಚಿಕೊಳ್ಳುತ್ತಿದ್ದೇವೆ. ಇಂದು ನಿಮ್ಮ ಕೊನೆಯ ಕೆಲಸದ ದಿನ” ಎಂದು ಇ-ಮೇಲ್‌ನಲ್ಲಿ ತಿಳಿಸಲಾಗಿದೆ ಎಂದು ಬಿಸಿನೆಸ್ ಇನ್‌ಸೈಡರ್ ವರದಿ ಮಾಡಿದೆ.
ಮಂಗಳವಾರ ಬೆಳಗ್ಗೆ ಸುಮಾರು 6 ಗಂಟೆಗೆ ಉದ್ಯೋಗಿಗಳಿಗೆ ಈ ಇ-ಮೇಲ್ ಕಳುಹಿಸಲಾಗಿದೆ ಎನ್ನಲಾಗಿದ್ದು, ಸಂಸ್ಥೆಯ ವ್ಯಾಪಕ ಸಾಂಸ್ಥಿಕ ಪುನರ್‌ರಚನೆಯ ಭಾಗವಾಗಿ ಕೆಲವು ಹುದ್ದೆಗಳನ್ನು ರದ್ದುಗೊಳಿಸಲಾಗಿದೆ ಎಂದು ತಿಳಿಸಲಾಗಿದೆ. ಆದರೆ, ನಿರ್ದಿಷ್ಟ ಉದ್ಯೋಗಿಯನ್ನು ವೈಯಕ್ತಿಕವಾಗಿ ಕೆಲಸದಿಂದ ತೆಗೆದುಹಾಕಲು ಕಾರಣವೇನು ಎಂಬುದನ್ನು ಇ-ಮೇಲ್‌ನಲ್ಲಿ ವಿವರಿಸಲಾಗಿಲ್ಲ.
ಉದ್ಯೋಗಿಗಳ ಕಂಪ್ಯೂಟರ್, ಇ-ಮೇಲ್, ವಾಯ್ಸ್‌ಮೇಲ್ ಹಾಗೂ ಫೈಲ್‌ಗಳಿಗೆ ಇರುವ ಲಾಗಿನ್ ಪ್ರವೇಶವನ್ನು ಶೀಘ್ರದಲ್ಲೇ ಸ್ಥಗಿತಗೊಳಿಸಲಾಗುವುದು ಎಂದು ಕಂಪನಿ ತಿಳಿಸಿದೆ. ಅಲ್ಲದೆ, ಪರಿಹಾರಧನ ಹಾಗೂ ಇತರ ಅಗತ್ಯ ದಾಖಲೆಗಳನ್ನು ಪಡೆಯಲು ವೈಯಕ್ತಿಕ ಇ-ಮೇಲ್ ವಿಳಾಸವನ್ನು ನೀಡುವಂತೆ ಉದ್ಯೋಗಿಗಳಿಗೆ ಸೂಚಿಸಲಾಗಿದೆ.
AI, ಕ್ಲೌಡ್ ಮೂಲಸೌಕರ್ಯ ವೆಚ್ಚದ ನಡುವೆ ಲೇಆಫ್
ಕೃತಕ ಬುದ್ಧಿಮತ್ತೆ (AI) ಹಾಗೂ ಕ್ಲೌಡ್ ಮೂಲಸೌಕರ್ಯ ಕ್ಷೇತ್ರದಲ್ಲಿ ಒರಾಕಲ್ ಭಾರಿ ಪ್ರಮಾಣದಲ್ಲಿ ಹೂಡಿಕೆ ಮಾಡುತ್ತಿರುವ ಸಂದರ್ಭದಲ್ಲೇ ಈ ಹೊಸ ಸುತ್ತಿನ ಉದ್ಯೋಗ ಕಡಿತ ನಡೆದಿದೆ ಎಂದು ವರದಿ ತಿಳಿಸಿದೆ. ಆದರೆ, ಪ್ರಸ್ತುತ ಸುತ್ತಿನಲ್ಲಿ ಎಷ್ಟು ಉದ್ಯೋಗಿಗಳು ಕೆಲಸ ಕಳೆದುಕೊಂಡಿದ್ದಾರೆ ಎಂಬುದನ್ನು ಒರಾಕಲ್ ಅಧಿಕೃತವಾಗಿ ಬಹಿರಂಗಪಡಿಸಿಲ್ಲ.
ಈಗಾಗಲೇ 21 ಸಾವಿರ ಉದ್ಯೋಗಿಗಳ ಕಡಿತ
2026ರ ಆರ್ಥಿಕ ವರ್ಷದಲ್ಲಿ ಒರಾಕಲ್ ತನ್ನ ಜಾಗತಿಕ ಸಿಬ್ಬಂದಿ ಬಳಗದ ಸುಮಾರು ಶೇ.13ರಷ್ಟು, ಅಂದರೆ ಸುಮಾರು 21,000 ಉದ್ಯೋಗಿಗಳನ್ನು ವಜಾಗೊಳಿಸಿತ್ತು ಎಂದು ವರದಿಯಾಗಿದೆ.
ಈ ಪುನರ್‌ರಚನಾ ಪ್ರಕ್ರಿಯೆಗಾಗಿ ಕಂಪನಿಯ ವೆಚ್ಚವು 2.8 ಬಿಲಿಯನ್ ಡಾಲರ್‌ವರೆಗೆ ಹೆಚ್ಚಾಗಿದೆ ಎನ್ನಲಾಗಿದೆ. ಉದ್ಯೋಗ ಕಡಿತಗಳ ಬಳಿಕ ಒರಾಕಲ್‌ನ ಜಾಗತಿಕ ಸಿಬ್ಬಂದಿ ಸಂಖ್ಯೆ ಸುಮಾರು 1.41 ಲಕ್ಷಕ್ಕೆ ಇಳಿದಿದೆ ಎಂದು ವರದಿ ತಿಳಿಸಿದೆ.
-
Uncategorized12 hours ago
ಸಮುದ್ರಕ್ಕೆ ಇಳಿದಿದ್ದ ಉಜಿರೆ ಕಾಲೇಜಿನ ವಿದ್ಯಾರ್ಥಿ ಅಲೆಗಳ ಸೆಳೆತಕ್ಕೆ ಬಲಿ; ಮೃತದೇಹ ಪತ್ತೆ
-
Uncategorized15 hours ago
ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ!
-
Uncategorized14 hours ago
ರಬ್ಬರ್ ಗೆ ಭರ್ಜರಿ ಬೆಲೆ; ರಬ್ಬರ್ ಶೀಟ್ ದರದಲ್ಲೂ ಏರಿಕೆ
-
Uncategorized16 hours ago
ಪುತ್ತೂರು–ಉಪ್ಪಿನಂಗಡಿ ರಸ್ತೆ ದುರಸ್ತಿಗೆ ಶಾಸಕ ಅಶೋಕ್ ರೈ ಸೂಚನೆ
-
Uncategorized15 hours ago
ಪುತ್ತೂರು : ನಸುಕಿನ ಜಾವ ಹಳೇ ಕಟ್ಟಡದಲ್ಲಿ ಕಾಣಿಸಿದ ಬೆಂಕಿ – ಅನಾಹುತ ತಪ್ಪಿಸಲು ನೆರವಾದ ರವಿಕುಮಾರ್ ರೈ
-
Uncategorized14 hours ago
ಮುಂಬೈನಲ್ಲಿ ‘ಬನ’ ತುಳು ಚಿತ್ರಕ್ಕೆ ಪ್ರೇಕ್ಷಕರ ಮೆಚ್ಚುಗೆ; ಎರಡೂ ಪ್ರೀಮಿಯರ್ ಶೋ ಹೌಸ್ಫುಲ್ |


















