ನಿಧನ ವಾರ್ತೆ
Lonavala waterfalls-ಜಲಪಾತದಲ್ಲಿ ಏಕಾಏಕಿ ಉಕ್ಕಿ ಬಂದ ನೀರು : ಕಣ್ಣೆದುರೇ ಕೊಚ್ಚಿ ಹೋದ ಒಂದೇ ಕುಟುಂಬದ ಏಳು ಸದಸ್ಯರು – ಭಯಾನಕ ದೃಶ್ಯ ವೈರಲ್
ಮುಂಬೈ: ಇಲ್ಲಿನ ಲೋನಾವಾಲಾ ಜಲಪಾತದಲ್ಲಿ ಭಾನುವಾರ ಪ್ರವಾಹಕ್ಕೆ ಸಿಲುಕಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿ ಇಬ್ಬರು ನಾಪತ್ತೆಯಾಗಿರುವ ಘಟನೆ ಸಂಭವಿಸಿದೆ.
ಮೃತರನ್ನು ಪುಣೆ ಮೂಲದ ಶಾಹಿಸ್ತಾ ಅನ್ಸಾರಿ (36), ಅಮಿಮಾ ಅನ್ಸಾರಿ (13) ಮತ್ತು ಉಮೇರಾ ಅನ್ಸಾರಿ (8) ಎನ್ನಲಾಗಿದ್ದು. ಅದ್ಘಾನ್ ಅನ್ಸಾರಿ (4) ಮತ್ತು ಮರಿಯಾ ಸೈಯದ್ (9) ನಾಪತ್ತೆಯಾಗಿದ್ದಾರೆ.
ಭಾನುವಾರ ಪುಣೆ ನಗರದ ಸೈಯದ್ ನಗರ ಮೂಲದ ಕುಟುಂಬವೊಂದು ರಜಾದಿನವಾಗಿದ್ದರಿಂದ ಕುಟುಂಬದ ಏಳು ಮಂದಿ ಸದಸ್ಯರು ಮುಂಬೈಯಿಂದ 80 ಕಿ.ಮೀ ದೂರದಲ್ಲಿರುವ ಭೂಶಿ ಅಣೆಕಟ್ಟಿನ ಹಿನ್ನೀರಿನ ಲೋನಾವಾಲಾ ಜಲಪಾತ ಬಳಿ ಬಂದಿದ್ದಾರೆ. ಈ ವೇಳೆ ನೀರಿನ ಪ್ರಮಾಣ ಕಡಿಮೆ ಇದ್ದುದರಿಂದ ಕುಟುಂಬ ಸದಸ್ಯರು ನೀರಿನ ನಡುವೆ ಆಟವಾಡಲು ತೆರಳಿದ್ದಾರೆ ದುರದೃಷ್ಟವಶಾತ್ ಈ ಪ್ರದೇಶದಲ್ಲಿ ಕಳೆದ ಎರಡು ದಿನಗಳಿಂದ ಸರಿಯುತ್ತಿರುವ ಮಳೆಯಿಂದ ಅಣೆಕಟ್ಟಿನಲ್ಲಿ ನೀರಿನ ಪ್ರಮಾಣ ಏರಿಕೆಯಾಗಿದ್ದು ಪರಿಣಾಮ ಹಿನ್ನೀರಿನ ಮಟ್ಟ ಏರಿಕೆಯಾಗಿದೆ ಹಾಗಾಗಿ ಏಕಾಏಕಿ ಜಲಪಾತದ ಬಳಿ ನೀರಿನ ಮಟ್ಟ ಏರಿಕೆಯಾದ ಪರಿಣಾಮ ಏಳು ಮಂದಿ ಪ್ರವಾಹದ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ ಈ ವೇಳೆ ಇಬ್ಬರು ಈಜಿ ದಡ ಸೇರಿ ಬಚಾವಾಗಿದ್ದು ಐವರು ನಿರುಪಾಲಾಗಿದ್ದಾರೆ.
ಮೂವರ ಮೃತ ದೇಹ ಭಾನುವಾರ ಪತ್ತೆಯಾಗಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ. ಅವರ ಪತ್ತೆ ಕಾರ್ಯಾಚರಣೆ ಸೋಮವಾರ ನಡೆಸುವುದಾಗಿ ರಕ್ಷಣಾ ತಂಡ ತಿಳಿಸಿದೆ. ಘಟನಾ ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಇದ್ದರೂ ಪ್ರವಾಹದಲ್ಲಿ ಸಿಲುಕಿದ್ದವರನ್ನು ರಕ್ಷಣೆ ಮಾಡಲು ಸಾಧ್ಯವಾಗಲಿಲ್ಲ ಎನ್ನಲಾಗಿದೆ.
ನಿಧನ ವಾರ್ತೆ
One-sided love-ಇನ್ಸ್ಟಾಗ್ರಾಮ್ ಇನ್ಫ್ಲುಯೆನ್ಸರ್ ಮೇಲಿನ ಒನ್ಸೈಡೆಡ್ ಲವ್; ಹಲ್ಲೆಗೊಳಗಾದ ಯುವಕ ಸಾವು
ಸೋಶಿಯಲ್ ಮೀಡಿಯಾದಲ್ಲಿ ಖ್ಯಾತಿ ಪಡೆದಿದ್ದ ಮಹಿಳಾ ಇನ್ಫ್ಲುಯೆನ್ಸರ್ ಮೇಲಿನ ಏಕಪಕ್ಷೀಯ ಪ್ರೀತಿಯ ಹಿನ್ನೆಲೆಯಲ್ಲಿ ಯುವಕನೊಬ್ಬನ ದುರಂತ ಅಂತ್ಯವಾಗಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಇನ್ಸ್ಟಾಗ್ರಾಮ್ನಲ್ಲಿ 6 ಲಕ್ಷಕ್ಕೂ ಅಧಿಕ ಫಾಲೋವರ್ಸ್ ಹೊಂದಿರುವ ಕಂಟೆಂಟ್ ಕ್ರಿಯೇಟರ್ ನೇಹಾ ಬಿಷ್ಟ್ ಅವರ ಮನೆಯಲ್ಲೇ ಈ ಘಟನೆ ನಡೆದಿದೆ.
ನವದೆಹಲಿ: ಸೋಶಿಯಲ್ ಮೀಡಿಯಾದಲ್ಲಿ ಖ್ಯಾತಿ ಪಡೆದಿದ್ದ ಮಹಿಳಾ ಇನ್ಫ್ಲುಯೆನ್ಸರ್ ಮೇಲಿನ ಏಕಪಕ್ಷೀಯ ಪ್ರೀತಿಯ ಹಿನ್ನೆಲೆಯಲ್ಲಿ ಯುವಕನೊಬ್ಬನ ದುರಂತ ಅಂತ್ಯವಾಗಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಇನ್ಸ್ಟಾಗ್ರಾಮ್ನಲ್ಲಿ 6 ಲಕ್ಷಕ್ಕೂ ಅಧಿಕ ಫಾಲೋವರ್ಸ್ ಹೊಂದಿರುವ ಕಂಟೆಂಟ್ ಕ್ರಿಯೇಟರ್ ನೇಹಾ ಬಿಷ್ಟ್ ಅವರ ಮನೆಯಲ್ಲೇ ಈ ಘಟನೆ ನಡೆದಿದೆ.
ನೇಹಾ ಬಿಷ್ಟ್ ಇತ್ತೀಚೆಗೆ ತಮ್ಮ ನಿಶ್ಚಿತಾರ್ಥ ಹಾಗೂ ಮುಂಬರುವ ವಿವಾಹದ ಸಿದ್ಧತೆಗಳ ಕುರಿತು ಇನ್ಸ್ಟಾಗ್ರಾಮ್ ಮತ್ತು ಯೂಟ್ಯೂಬ್ನಲ್ಲಿ ನಿರಂತರವಾಗಿ ವಿಡಿಯೋಗಳನ್ನು ಹಂಚಿಕೊಳ್ಳುತ್ತಿದ್ದರು. ಈ ವಿಚಾರದಿಂದ ಅಸಮಾಧಾನಗೊಂಡಿದ್ದ ಉತ್ತರ ಪ್ರದೇಶದ ಗಾಜಿಪುರ ಮೂಲದ ಅಭಿನವ್ ಎಂಬ ಯುವಕ ಚೆನ್ನೈನಿಂದ ದೆಹಲಿಗೆ ಬಂದಿದ್ದಾನೆ.
ಚೆನ್ನೈನ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಅಭಿನವ್, ನವೆಂಬರ್ 7ರಂದು ಪೂರ್ವ ದೆಹಲಿಯ ಮಧು ವಿಹಾರ್ನಲ್ಲಿರುವ ನೇಹಾ ಬಿಷ್ಟ್ ಅವರ ಮನೆಗೆ ಬಲವಂತವಾಗಿ ಪ್ರವೇಶಿಸಿದ್ದಾನೆ. ಈ ವೇಳೆ ನೇಹಾ ಅವರನ್ನೇ ಮದುವೆಯಾಗಬೇಕೆಂದು ಪಟ್ಟು ಹಿಡಿದು ಗಲಾಟೆ ನಡೆಸಿದ್ದಾನೆ ಎನ್ನಲಾಗಿದೆ. ಮರುದಿನ ದಾಖಲಾದ ಎಫ್ಐಆರ್ನಲ್ಲಿ ಆತ ಮದ್ಯಪಾನ ಮಾಡಿದ್ದನೆಂದು ಉಲ್ಲೇಖಿಸಲಾಗಿದೆ.
ಯುವಕನ ವರ್ತನೆಯಿಂದ ಆಕ್ರೋಶಗೊಂಡ ನೇಹಾ ಅವರ ಕುಟುಂಬದ ಸದಸ್ಯರು ಹಾಗೂ ಕೆಲವು ನೆರೆಹೊರೆಯವರು ಆತನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಬೆನ್ನು ಹಾಗೂ ಬಲಗಾಲಿಗೆ ಗಂಭೀರ ಗಾಯಗಳಾಗಿ ರಕ್ತಸ್ರಾವವಾಗುತ್ತಿದ್ದ ಅಭಿನವ್ನನ್ನು ತಕ್ಷಣ ರಾಜೀವ್ ಗಾಂಧಿ ಆಸ್ಪತ್ರೆಗೆ ದಾಖಲಿಸಿದ್ದರು.
ಸುಮಾರು ಒಂದು ವಾರ ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಭಿನವ್, ಚಿಕಿತ್ಸೆ ಫಲಕಾರಿಯಾಗದೆ ನವೆಂಬರ್ 15ರಂದು ಮೃತಪಟ್ಟಿದ್ದಾನೆ.
ಪೊಲೀಸರ ತನಿಖೆಯ ವೇಳೆ ಅಭಿನವ್ ನಿರಂತರವಾಗಿ ನೇಹಾ ಬಿಷ್ಟ್ ಅವರ ವಿಡಿಯೋಗಳನ್ನು ವೀಕ್ಷಿಸುತ್ತಿದ್ದು, ಅವರ ಮೇಲೆ ಏಕಪಕ್ಷೀಯ ಪ್ರೀತಿ ಬೆಳೆಸಿಕೊಂಡಿದ್ದ ಎಂಬ ವಿಚಾರ ಬೆಳಕಿಗೆ ಬಂದಿದೆ ಎನ್ನಲಾಗಿದೆ. ಕೆಲವು ತಿಂಗಳ ಹಿಂದೆಯೂ ಅಭಿಮಾನಿಯ ಸೋಗಿನಲ್ಲಿ ನೇಹಾ ಅವರ ಮನೆಗೆ ಭೇಟಿ ನೀಡಿದ್ದ ಎಂದು ತಿಳಿದುಬಂದಿದೆ.
ನೇಹಾ ಬೇರೊಬ್ಬರೊಂದಿಗೆ ವಿವಾಹವಾಗುತ್ತಿರುವ ವಿಚಾರ ತಿಳಿದ ಬಳಿಕ ಅಭಿನವ್ ಅಸಮಾಧಾನಗೊಂಡಿದ್ದ ಎನ್ನಲಾಗಿದೆ. ಆದರೆ, ಅಭಿನವ್ ಯಾರೆಂಬುದೇ ನೇಹಾ ಅವರಿಗೆ ತಿಳಿದಿರಲಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.
ಯುವಕನ ಸಾವಿನ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ನೇಹಾ ಬಿಷ್ಟ್ ಅವರ ತಂದೆ ವೀರೇಂದ್ರ ಬಿಷ್ಟ್ ಹಾಗೂ ಓರ್ವ ನೆರೆಹೊರೆಯ ವ್ಯಕ್ತಿಯನ್ನು ಬಂಧಿಸಿದ್ದಾರೆ. ಪ್ರಕರಣದಲ್ಲಿ ಭಾಗಿಯಾಗಿರುವ ಇತರ ಆರೋಪಿಗಳ ಪತ್ತೆಗಾಗಿ ಪೊಲೀಸರು ತನಿಖೆ ಮುಂದುವರಿಸಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ.
ನಿಧನ ವಾರ್ತೆ
Mudbidri-ಮಂಗಳೂರಿನಲ್ಲಿ ಮೇಲ್ಛಾವಣಿ ಕೆಲಸದ ವೇಳೆ ಅವಘಡ: ಮೂಡುಬಿದಿರೆ ತಾ.ಪಂ. ಮಾಜಿ ಉಪಾಧ್ಯಕ್ಷ ಸಾವು
ಮೂಡುಬಿದಿರೆ ತಾಲೂಕು ಪಂಚಾಯತ್ನ ಮಾಜಿ ಉಪಾಧ್ಯಕ್ಷ ಸಂತೋಷ್ ಅವರು ಮಂಗಳೂರಿನಲ್ಲಿ ಮನೆಯ ಮೇಲ್ಛಾವಣಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಗುರುವಾರ ಸಂಭವಿಸಿದ ಈ ದುರಂತ ಘಟನೆ ದುಃಖಕ್ಕೆ ಕಾರಣವಾಗಿದೆ.
ಮೂಡುಬಿದಿರೆ, ನ.20: ಮೂಡುಬಿದಿರೆ ತಾಲೂಕು ಪಂಚಾಯತ್ನ ಮಾಜಿ ಉಪಾಧ್ಯಕ್ಷ ಸಂತೋಷ್ ಅವರು ಮಂಗಳೂರಿನಲ್ಲಿ ಮನೆಯ ಮೇಲ್ಛಾವಣಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಗುರುವಾರ ಸಂಭವಿಸಿದ ಈ ದುರಂತ ಘಟನೆ ದುಃಖಕ್ಕೆ ಕಾರಣವಾಗಿದೆ.
ಮೂಡುಬಿದಿರೆ ತಾಲೂಕಿನ ಬೆಳುವಾಯಿ ನಿವಾಸಿಯಾಗಿದ್ದ ಸಂತೋಷ್ ಅವರು ಬೆಳುವಾಯಿ ಕ್ಷೇತ್ರದಿಂದ ತಾಲೂಕು ಪಂಚಾಯತ್ ಸದಸ್ಯರಾಗಿ ಆಯ್ಕೆಯಾಗಿದ್ದರು. ಹೊಸದಾಗಿ ರಚನೆಯಾಗಿದ್ದ ಮೂಡುಬಿದಿರೆ ತಾಲೂಕು ಪಂಚಾಯತ್ನ ಮೊದಲ ಅವಧಿಯಲ್ಲಿ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.
ಸಂತೋಷ್ ಅವರು ಪ್ರತಿದಿನ ಕೆಲಸದ ನಿಮಿತ್ತ ಮಂಗಳೂರಿಗೆ ತೆರಳುತ್ತಿದ್ದರು. ಗುರುವಾರ ಬೇರೆ ಸ್ಥಳದಲ್ಲಿ ಬದಲಿ ಕೆಲಸಗಾರನಾಗಿ ಕೆಲಸಕ್ಕೆ ತೆರಳಿದ್ದ ಅವರು, ಮನೆಯೊಂದರ ಮೇಲ್ಛಾವಣಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಕೆಳಕ್ಕೆ ಬಿದ್ದಿದ್ದಾರೆ ಎನ್ನಲಾಗಿದೆ.
ಘಟನೆಯಲ್ಲಿ ಗಂಭೀರ ಗಾಯಗೊಂಡ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.
ನಿಧನ ವಾರ್ತೆ
Heart attack-ಸಾಲಿಗ್ರಾಮ: ಕಚೇರಿಯಲ್ಲೇ ಹೃದಯಾಘಾತ; ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ ನಿಧನ
ಫೋಟೋಗ್ರಫಿ, ಕಂಪ್ಯೂಟರ್ ತಂತ್ರಜ್ಞಾನ, ವೆಬ್ಡಿಸೈನಿಂಗ್ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಪರಿಣತಿ ಹೊಂದಿದ್ದ ಸಾಲಿಗ್ರಾಮದ ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ (52) ಅವರು ಗುರುವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಸಾಲಿಗ್ರಾಮ: ಫೋಟೋಗ್ರಫಿ, ಕಂಪ್ಯೂಟರ್ ತಂತ್ರಜ್ಞಾನ, ವೆಬ್ಡಿಸೈನಿಂಗ್ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಪರಿಣತಿ ಹೊಂದಿದ್ದ ಸಾಲಿಗ್ರಾಮದ ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ (52) ಅವರು ಗುರುವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಗುರುವಾರ ಬೆಳಿಗ್ಗೆ ಸಾಲಿಗ್ರಾಮದಲ್ಲಿರುವ ತಮ್ಮ ಕಚೇರಿಯಲ್ಲಿ ಕುಳಿತಿದ್ದ ವೇಳೆ ಅವರಿಗೆ ತೀವ್ರ ಹೃದಯಾಘಾತ ಸಂಭವಿಸಿದ್ದು, ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಅವರ ಅಕಾಲಿಕ ನಿಧನದ ಸುದ್ದಿ ಬಂಧುಮಿತ್ರರು ಹಾಗೂ ಸ್ಥಳೀಯರಲ್ಲಿ ತೀವ್ರ ದುಃಖಕ್ಕೆ ಕಾರಣವಾಗಿದೆ.
ದಿನೇಶ್ ಹೊಳ್ಳ ಅವರು ಫೋಟೋಗ್ರಫಿ, ಕಂಪ್ಯೂಟರ್ ತಂತ್ರಜ್ಞಾನ, ವೆಬ್ಡಿಸೈನಿಂಗ್, ವ್ಯಂಗ್ಯಚಿತ್ರ ರಚನೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ತಮ್ಮ ಪ್ರತಿಭೆ ಹಾಗೂ ಪರಿಣತಿಯಿಂದ ಗುರುತಿಸಿಕೊಂಡಿದ್ದರು. ಇದರ ಜೊತೆಗೆ ಚಪ್ಪಲಿ ಉದ್ಯಮದಲ್ಲಿಯೂ ತೊಡಗಿಸಿಕೊಂಡು ಹಲವು ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.
ಬಹುಮುಖ ಪ್ರತಿಭೆ ಹಾಗೂ ವಿವಿಧ ಕ್ಷೇತ್ರಗಳ ಜ್ಞಾನ ಹೊಂದಿದ್ದ ಅವರು ಸ್ನೇಹಜೀವಿಯಾಗಿದ್ದು, ಎಲ್ಲರೊಂದಿಗೆ ಆತ್ಮೀಯ ಒಡನಾಟ ಹೊಂದಿದ್ದರು.
-
ಅಪರಾಧ23 hours agoMangalore-ಕಣಚೂರು ಮೆಡಿಕಲ್ ಕಾಲೇಜು ಆವರಣದಲ್ಲೇ ವಿದ್ಯಾರ್ಥಿನಿ ಅಪಹರಣ..! ಹಿಂದೂ ಯುವಕ ಲವ್ ಆರೋಪ – ವಿಡಿಯೋ ವೈರಲ್ : ತನಿಖೆಗೆ ಕಮಿಷನರ್ ಸೂಚನೆ
-
ರಾಜಕೀಯ23 hours agoBJP leaders-ಗಡಿಪಾರಿಗೊಳಗಾದ ನರಸಿಂಹ ಮಾಣಿ ಮನೆಗೆ ಬಿಜೆಪಿ ಮುಖಂಡರ ಭೇಟಿ; ಕುಟುಂಬಕ್ಕೆ ಆತ್ಮಸ್ಥೈರ್ಯ
-
ಬಿಗ್ ನ್ಯೂಸ್22 hours agoHigh Court-Social Media ಅಕೌಂಟ್ ಇದ್ದ ಮಾತ್ರಕ್ಕೆ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡುವ Free Licence ಇಲ್ಲ : ಬೆಳ್ತಂಗಡಿಯ ಮೋಹನ್ ಬೋಳಂಗಡಿ – ಶುಭಾ ರೈ ವಿರುದ್ಧ ದಾಖಲಾದ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ಎಚ್ಚರಿಕೆ
-
ದಕ್ಷಿಣ ಕನ್ನಡ20 hours ago
Ashok janamana 2026 : ಪುತ್ತೂರಿನಲ್ಲಿ ಅದ್ದೂರಿ ‘ಅಶೋಕ ಜನಮನ-2026’ ಸಂಭ್ರಮಕ್ಕೆ ಕ್ಷಣಗಣನೆ ! ಬಿ.ಕೆ. ಹರಿಪ್ರಸಾದ್, ಕೃಷ್ಣ ಬೈರೇಗೌಡ, ಯು.ಟಿ. ಖಾದರ್ ಸಹಿತ ರಾಜಕೀಯ, ಧಾರ್ಮಿಕ ಗಣ್ಯರ ಸಮಾಗಮ
-
ನಿಧನ ವಾರ್ತೆ22 hours agoSavitri Devi-ಸಿಎಂ ಯೋಗಿ ಆದಿತ್ಯನಾಥ್ ತಾಯಿ ಸಾವಿತ್ರಿ ದೇವಿ ನಿಧನ
-
ಅಪರಾಧ21 hours agoMangalore-ಮಂಗಳೂರು: ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಮನೆ ಮಾಲೀಕನ ಕೊಲೆ; ಆರೋಪಿಗೆ ಜೀವಾವಧಿ ಶಿಕ್ಷೆ, ಮತ್ತೊಬ್ಬ ಖುಲಾಸೆ
-
ಬಿಗ್ ನ್ಯೂಸ್6 hours agoBail rejected-ಸಿದ್ದರಾಮಯ್ಯ ವಿರುದ್ಧದ ‘ಸ್ಟಿಂಗ್’ ಪ್ರಕರಣ: ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿ 6 ಮಂದಿಯ ಜಾಮೀನು ಅರ್ಜಿ ವಜಾ
-
ಮಂಗಳೂರು22 hours agoSavanuru Cooperative Society-ʻಅತ್ಯುತ್ತಮ ವಿವಿಧೋದ್ದೇಶ ಸಹಕಾರ ಸಂಘʼಪ್ರಶಸ್ತಿಯ ಗರಿ ಮುಡಿಗೇರಿಸಿಕೊಂಡ ‘ಆದರ್ಶ ವಿವಿಧೋದ್ದೇಶ ಸಹಕಾರ ಸಂಘ’; ಸವಣೂರು ಸೀತಾರಾಮ ರೈ ಅವರಿಗೆ ಜಿ.ಟಿ. ದೇವೇಗೌಡರಿಂದ ಪ್ರಶಸ್ತಿ ಪ್ರಧಾನ















