ಶಿಕ್ಷಣ
Vivekananda-ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ವಿವೇಕನಗರ, ತೆಂಕಿಲದ ವಿದ್ಯಾರ್ಥಿನಿ ಪ್ರೀತಿ ಪ್ರಭು Inspire Award ಸ್ಪರ್ಧೆಯಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ
ಭಾರತ ಸರಕಾರದ ಅಧೀನದಲ್ಲಿರುವ ವಿಜ್ಞಾನ ಹಾಗೂ ತಂತ್ರಜ್ಞಾನ ವಿಭಾಗ ವಿಜ್ಞಾನ ಹಾಗೂ ತಂತ್ರಜ್ಞಾನದ ಪ್ರಗತಿಗೋಸ್ಕರ ಮತ್ತು ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಪ್ರಕ್ರಿಯೆಯಲ್ಲಿ ವೈಜ್ಞಾನಿಕ ಆವಿಷ್ಕಾರಗಳಲ್ಲಿ ತೊಡಗಿಸಿಕೊಳ್ಳುವಂತೆ ಪ್ರೇರೆಪಿಸಲು ಇನ್‌ಸ್ಪಾಯರ್ ಸ್ಪರ್ಧೆಗಳನ್ನು [Inspire Award] ದೇಶಾದ್ಯಂತವಿರುವ ಶಾಲೆಗಳಲ್ಲಿ ಆಯೋಜಿಸಿತ್ತು.
ಎಲ್ಲಾ ಪಠ್ಯಕ್ರಮಗಳ ಶಾಲೆಗಳ ವಿದ್ಯಾರ್ಥಿಗಳಿಗೆ ಭಾಗವಹಿಸುವ ಮುಕ್ತ ಅವಕಾಶವಿರುವ ಸ್ಪರ್ಧೆಯಾಗಿದ್ದು, ಲಕ್ಷಾಂತರ ವಿದ್ಯಾರ್ಥಿಗಳು ಆರಂಭಿಕ ಹಂತದ ಸ್ಪರ್ಧೆಗಳಲ್ಲಿ ಭಾಗವಹಿಸಿರುತ್ತಾರೆ. 2ನೇ ಹಂತದಲ್ಲಿ ಆಯಾಯ ರಾಜ್ಯ ಮಟ್ಟದಲ್ಲಿ ಸ್ಪರ್ಧೆಗಳನ್ನು ನಡೆಸಲಾಗುತ್ತಿದ್ದು, ರಾಜ್ಯದಿಂದ ರಾಷ್ಟçಮಟ್ಟದ ಸ್ಪರ್ಧೆಗೆ ಆಯ್ಕೆ ಮಾಡಲಾಗುತ್ತದೆ. ರಾಷ್ಟç ಮಟ್ಟದ ಸ್ಪರ್ಧೆಗೆ ನಮ್ಮ ಕರ್ನಾಟಕ ರಾಜ್ಯದಿಂದ 39 ಮಂದಿ ಆಯ್ಕೆಯಾಗಿದ್ದು, ದಕ್ಷಿಣ ಕನ್ನಡದಿಂದ ನಾಲ್ಕು ವಿದ್ಯಾರ್ಥಿಗಳು ಆಯ್ಕೆಯಾಗಿರುತ್ತಾರೆ.
ಅವರಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಪ್ರೀತಿ ಪ್ರಭು ಒಬ್ಬರಾಗಿದ್ದು, 9ನೇ ತರಗತಿಯಲ್ಲಿ ಓದುತ್ತಿದ್ದು, ಮುಕ್ರಂಪಾಡಿ ನಿವಾಸಿ ಕೆ.ಪಿ.ಟಿ.ಸಿ.ಎಲ್‌ನ ಉದ್ಯೋಗಿ ಶ್ರೀ ಪುಂಡಲಿಕ ಪ್ರಭು ಮತ್ತು ನಾಗಮಣಿ ಪಿ ಪ್ರಭು ದಂಪತಿಗಳ ಪುತ್ರಿಯಾಗಿರುತ್ತಾರೆ. ಇವರು ರಚಿಸಿದ “DWIPRATHI TWO LANE FULLY AUTOMATIC SEED SOWING MACHINE” ಎಂಬ ವಿಜ್ಞಾನ ಮಾದರಿಯು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುತ್ತದೆ ಎಂದು ಶಾಲಾ ಮುಖ್ಯೋಪಾಧ್ಯಾಯರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಶಿಕ್ಷಣ
Vivekananda-ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ – ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ
ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಬೆಟ್ಟಂಪಾಡಿ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣ ದಲ್ಲಿ ನಡೆಯಿತು. ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಬೆಟ್ಟಂಪಾಡಿ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣ ದಲ್ಲಿ ನಡೆಯಿತು. ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ತಂಡದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ ಧನುಷ್ ಎಸ್, ಯಶಸ್ ಎಚ್ . ಸಿ ದ್ವಿತೀಯ ಪಿಯುಸಿ ಗಗನ್ ಕೆ.ಎನ್, ತೇಜಸ್ ಟಿ. ಆರ್, ಜಶ್ವಂತ್ ಗೌಡ, ಧನುಷ್ ಕೆ . ಎಚ್, ಆಕಾಶ್ ಭಾಗವಹಿಸಿರುತ್ತಾರೆ.
ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್ ,ಡಾ .ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ .ಇವರನ್ನು ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗೂ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.
ಶಿಕ್ಷಣ
Taekwondo Competition-ಟೇಕ್ವಾಂಡೋ ಸ್ಪರ್ಧೆ: ಸಂತ ಫಿಲೋಮಿನಾ ಪ ಪೂ ಕಾಲೇಜಿನ ಮೊಹಮ್ಮದ್ ಶಾಜ್ ಗೆ ಪ್ರಶಸ್ತಿ
ಸೆ 30 ರಂದು ಚಿಕ್ಕಮಗಳೂರು ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣ ಜ್ಯೋತಿನಗರದಲ್ಲಿ ನಡೆದ ‘ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ 2026 – 27’ ಟೇಕ್ವಾಂಡೋ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಮೊಹಮ್ಮದ್ ಶಾಜ್ ಕಂಚಿನ ಪದಕವನ್ನು ಪಡೆದುಕೊಂಡಿರುತ್ತಾರೆ.
ಪುತ್ತೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಚಿಕ್ಕಮಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಚಿಕ್ಕಮಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ಸೆ 30 ರಂದು ಚಿಕ್ಕಮಗಳೂರು ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣ ಜ್ಯೋತಿನಗರದಲ್ಲಿ ನಡೆದ ‘ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ 2026 – 27’ ಟೇಕ್ವಾಂಡೋ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಮೊಹಮ್ಮದ್ ಶಾಜ್ ಕಂಚಿನ ಪದಕವನ್ನು ಪಡೆದುಕೊಂಡಿರುತ್ತಾರೆ.
ಇವರು ಉಪ್ಪಿನಂಗಡಿ ನಿವಾಸಿ ಮೊಹಮ್ಮದ್ ಮುಸ್ತಫಾ ಮತ್ತು ಸೌಧ ದಂಪತಿಗಳ ಪುತ್ರ.
ಇವರಿಗೆ ಶಿಹಾಬ್ ಟಿ ತರಬೇತಿ ನೀಡಿರುತ್ತಾರೆ.
ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ. ಅಶೋಕ್ ರಾಯನ್ ಕ್ರಾಸ್ತಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ದೈಹಿಕ ಶಿಕ್ಷಣ ನಿರ್ದೇಶಕರಾದ ರಾಜೇಶ್ ಮೂಲ್ಯ ಉಪಸ್ಥಿತರಿದ್ದರು.
ಶಿಕ್ಷಣ
Vivekananda-ರಾಷ್ಟ್ರಮಟ್ಟದ ಭೌತಶಾಸ್ತ್ರ ಸ್ಪರ್ಧೆಯಲ್ಲಿ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿಯ ಸಾಧನೆ..!
ಪುತ್ತೂರು: ವಿವೇಕಾನಂದ ಮಹಾವಿದ್ಯಾಲಯ (ಸ್ವಾಯತ್ತ) ಇದರ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿ ಶ್ರೀಹರಿ ಶರ್ಮಾ ನೋಯ್ಡಾದ ಆಮಿಟಿ ಯುನಿವರ್ಸಿಟಿಯಲ್ಲಿ ಇಂಡಿಯನ್ ಅಸೋಸಿಯೇಷನ್ ಆಫ್ ಫಿಸಿಕ್ಸ್ ಟೀರ‍್ಸ್ (ಐಎಪಿಟಿ) ಸಂಸ್ಥೆಯ ಸಹಯೋಗದೊಂದಿಗೆ ನಡೆದ ರಾಷ್ಟ್ರಮಟ್ಟದ ಭೌತಶಾಸ್ತ್ರ ಸ್ಪರ್ಧೆ National Competition for Innovative Experiments in Physics (NCIEP)ನಲ್ಲಿ “Electromagnetic Shock-Absorber for the Real-Time Landing of Reusable Spacecraft” ಎಂಬ ಭೌತಶಾಸ್ತ್ರದ ಮಾದರಿಯನ್ನು ಸ್ಪರ್ಧೆಯಲ್ಲಿ ಪ್ರಸ್ತುತಪಡಿಸುವ ಮೂಲಕ ಗಮನಾರ್ಹ ಸಾಧನೆ ಮಾಡಿದ್ದಾರೆ.

ಅಕ್ಟೋಬರ್ 4ರಿಂದ 6ರವರೆಗೆ ನಡೆದ 40ನೇ IAPT Annual Conventionನಲ್ಲಿ ಇವರು ಪದವಿ ಮತ್ತು ಸ್ನಾತಕೋತ್ತರ ವಿಭಾಗದಲ್ಲಿ ಭಾಗವಹಿಸಿದ್ದರು. ದೇಶದ ವಿವಿಧ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳು, ಐಐಟಿಗಳು ಹಾಗೂ ವಿಶ್ವವಿದ್ಯಾಲಯಗಳ ಒಟ್ಟು 118 ಮಾದರಿಗಳ ಪೈಕಿ 12ಮಾದರಿಗಳು ಸ್ಪರ್ಧೆಗೆ ಆಯ್ಕೆಯಾಗಿದ್ದವು.
ಕರ್ನಾಟಕದಿಂದ ಪ್ರಸ್ತುತಪಡಿಸಲು ಆಯ್ಕೆಯಾದ ಏಕೈಕ ಮಾದರಿ ಇವರದ್ದಾಗಿತ್ತು. ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೋ. ಶಿವಪ್ರಸಾದ್ ಕೆ.ಎಸ್. ಈ ಮಾದರಿ ತಯಾರಿಕೆಯಲ್ಲಿ ಮಾರ್ಗದರ್ಶನ ನೀಡಿರುದ್ದಾರೆ. ಈ ಸಾಧನೆಗೆ ಆಡಳಿತ ಮಂಡಳಿ, ಪ್ರಾಂಶುಪಾಲರು, ಶಿಕ್ಷಕ ಮತ್ತು ಶಿಕ್ಷಕೇತರ ವೃಂದ ಮತ್ತು ವಿದ್ಯಾರ್ಥಿಗಳು ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.
-
ನಿಧನ ವಾರ್ತೆ9 hours agoMumbai-ಪ್ರೀತಿಸಿ ಮದುವೆಯಾಗಿದ್ದ ಜೋಡಿಯ ದುರಂತ ಅಂತ್ಯ? ಸರಪಳಿಯಿಂದ ಕಾಲು ಕಟ್ಟಿದ ಸ್ಥಿತಿಯಲ್ಲಿ ಶವ ಪತ್ತೆ
-
ಮಂಗಳೂರು7 hours agoUjire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ
-
ಅಂತರ ರಾಜ್ಯ9 hours agoArrested-ಕಾಸರಗೋಡು: ಮದುವೆಯ ನೆಪದಲ್ಲಿ ಹತ್ತಾರು ಯುವತಿಯರಿಗೆ ವಂಚನೆ: ಮದುವೆಯಾದ ಮೂರೇ ದಿನಕ್ಕೆ ಚಿನ್ನ, ಹಣದೊಂದಿಗೆ ಪರಾರಿ; ಆರೋಪಿ ಬಿಜು ಆಂಟನಿ ಬಂಧನ
-
ಅಂತರ ರಾಜ್ಯ8 hours agoJantar Mantar-ಸಿಜೆಪಿ ಪ್ರತಿಭಟನೆಗೆ ದೆಹಲಿಯಲ್ಲಿ ಬಿಗಿ ಭದ್ರತೆ – ಪಂಚರ್ ಆಗಲು ರಸ್ತೆಗಳಿಗೆ ತಡೆಬೇಲಿ..! ವಿಮಾನದಲ್ಲೇ ಅಭಿಜಿತ್ ದಿಪ್ಕೆ ಪೊಲೀಸ್ ವಶಕ್ಕೆ..! ಸಾವಿರಕ್ಕೂ ಮಿಕ್ಕಿ ಪ್ರತಿಭಟನಾಕಾರರೂ ವಶಕ್ಕೆ-ಸುಪ್ರೀಂ ಕೋರ್ಟ್ ವಕೀಲರಿಗೆ ತಡೆ..! ತೀವ್ರ ಅಡೆತಡೆಗಳ ನಡುವೆ ಜಂತರ್ ಮಂತರ್ ಗೆ ಹರಿದು ಬರುತ್ತಿರುವ ಜನಸಾಗರ
-
ರಾಜ್ಯ9 hours agoRobotic technology-ರೋಬೋಟಿಕ್ ತಂತ್ರಜ್ಞಾನದ ಅದ್ಭುತ: ಸ್ಪೇನ್ನಲ್ಲಿ ಕುಳಿತು ಕರ್ನಾಟಕದ ಮಹಿಳೆಗೆ ಹೃದಯ ಶಸ್ತ್ರಚಿಕಿತ್ಸೆ
-
ಮಂಗಳೂರು5 hours agoMulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ
-
ಅಂತರ ರಾಜ್ಯ10 hours agoDhruv Rati-BIG BREAKING: ದೆಹಲಿಯ ಜಂತರ್ ಮಂತರ್ ನಲ್ಲಿ ಸಿಜೆಪಿ ಪ್ರತಿಭಟನೆ ಹಿನ್ನಲೆ – ಯೂಟ್ಯೂಬರ್ ಧ್ರುವ್ ರಾಠಿ ಪೊಲೀಸ್ ವಶಕ್ಕೆ?
-
Uncategorized10 hours agoCJP protest-ಇಂದು CJP ಪ್ರತಿಭಟನೆ : ದೆಹಲಿಗೆ ಬರಬೇಕಾಗಿದ್ದ 250 ರೈಲು ರದ್ದು, ಹಲವು ರೈಲಿನ ವೇಳಾಪಟ್ಟಿ ಬದಲಾವಣೆ : ಮೆಟ್ರೋ ಸಂಚಾರ ಸ್ಥಗಿತ – ಇಂಟರ್ ನೆಟ್ ಬಂದ್..! ‘ಹೆದರಿದ್ರಾ ಮೋದಿಜೀ..?’ ಎಂದ CJP




















