ಸ್ಥಳೀಯ
Excel-ಎಕ್ಸೆಲ್ : ವಾಣಿಜ್ಯ ವಿಭಾಗದ ಮಕ್ಕಳಿಂದ ಶೈಕ್ಷಣಿಕ ಭೇಟಿ ಕಾರ್ಯಕ್ರಮ
ಗುರುವಾಯನಕೆರೆ ಇಲ್ಲಿನ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ಮಕ್ಕಳಿಗೆ ತುಳು ನಾಡಿನ ಸಂಸ್ಕೃತಿ ಸೊಬಗನ್ನು ತಿಳಿಯಪಡಿಸುವ, ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರ ಮತ್ತು ತುಳು ಬದುಕು ವಸ್ತು ಸಂಗ್ರಹಾಲಯಕ್ಕೆ ಕರೆದುಕೊಂಡು ಹೋಗಲಾಯಿತು. ತುಳುವ ಇತಿಹಾಸ, ಸಂಸ್ಕೃತಿ ಮತ್ತು ಜಾನಪದ ಅಧ್ಯಯನಕ್ಕಾಗಿ ಚಾರಿಟಬಲ್ ಟ್ರಸ್ಟ್ ಆಗಿ ನೋಂದಾಯಿಸಲ್ಪಟ್ಟ ಪ್ರಸಿದ್ಧ ಸ್ವಯಂಸೇವಾ ಸಂಸ್ಥೆಯಾಗಿದೆ.
1995 ರಲ್ಲಿ ಖ್ಯಾತ ಇತಿಹಾಸಕಾರ ಮತ್ತು ಮ್ಯೂಸಿಯಾಲಜಿಸ್ಟ್ ಡಾ. ತುಕಾರಾಂ ಪೂಜಾರಿ ಅವರಿಂದ ಸ್ಥಾಪಿಸಲ್ಪಟ್ಟ ಕೇಂದ್ರವು ಈಗ ತುಳುವ ಇತಿಹಾಸ ಮತ್ತು ಸಂಸ್ಕೃತಿಯ ಪ್ರಮುಖ ಭಂಡಾರವಾಗಿ ಬೆಳೆದಿದೆ. ಪ್ರಪಂಚದಾದ್ಯಂತದ ವಿದ್ಯಾರ್ಥಿಗಳು ಮತ್ತು ಪರಂಪರೆಯ ಉತ್ಸಾಹಿಗಳಿಗೆ ಅಧ್ಯಯನ ಕೇಂದ್ರವಾಗಿ ಉಳಿದುಕೊಂಡಿದ್ದು, ಎಕ್ಸೆಲ್ ನ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ, ಪರಂಪರೆಯ ಪ್ರವಾಸಗಳು, ಪ್ರಾತ್ಯಕ್ಷಿಕೆಗಳು, ಪ್ರದರ್ಶನಗಳು, ಸ್ಪರ್ಧೆಗಳ ಜೊತೆಗೆ ತುಳು ಪ್ರಕಟಣೆಗಳು, ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ಕುರಿತಾದ ಮಾಹಿತಿ ಪಡೆದುಕೊಂಡರು. ಕರ್ನಾಟಕದ ಹಲವು ಭಾಗಗಳಿಂದ ಎಕ್ಸೆಲ್ ಕಾಲೇಜಿಗೆ ಆಗಮಿಸಿದ ವಿದ್ಯಾರ್ಥಿಗಳಿಗೆ ತಾವು ವಿದ್ಯಾರ್ಜನೆ ಮಾಡುತ್ತಿರುವ ನೆಲದ ಸಂಸ್ಕೃತಿಯ ಪರಿಚಯವಾಗಬೇಕು, ಇದರೊಂದಿಗೆ ತುಳುವ ನಾಡಿನ ಪರಂಪರೆಯ ಅಧ್ಯಯನವಾಗಬೇಕೆಂಬುದು ಈ ಶೈಕ್ಷಣಿಕ ಭೇಟಿ ಕಾರ್ಯಕ್ರಮದ ಸದುದ್ದೇಶವಾಗಿದೆ.
ಸಂಸ್ಥೆಯ ಸದಾ ಕ್ರಿಯಾಶೀಲರಾಗಿ ಮಕ್ಕಳಿಗೆ ಶೈಕ್ಷಣಿಕ ಪ್ರೋತ್ಸಾಹ ನೀಡುತ್ತಿರುವ ಅಧ್ಯಕ್ಷರಾದ ಶ್ರೀ ಸುಮಂತ್ ಕುಮಾರ್ ಜೈನ್ ರವರು, ಈ ಕೇಂದ್ರವು ತುಳುನಾಡಿನ ಸೊಬಗನ್ನು ಮೆರೆಯುವ, ತಿಳಿಯುವ ವಸ್ತು ಸಂಗ್ರಹಾಲಯ ಮಾತ್ರವಲ್ಲದೇ, ಅನೇಕ ಚಟುವಟಿಕೆಗಳ ಸಂಗ್ರಹಗಳ ಮೂಲಕ ಯಶಸ್ವಿಯಾಗಿ ತನ್ನ ಛಾಪು ಮೂಡಿಸಿದೆ ಮತ್ತು ನಮ್ಮ ಪರಂಪರೆಯ ಹಿಂದಿನದನ್ನು ಅರ್ಥೈಸುವ ಮಾರ್ಗವನ್ನು ತೋರಿಸಿದೆ ಎಂದು ಅಭಿನಂದಿಸಿದರು.
ಕಾಲೇಜಿನ ಪ್ರಾಂಶುಪಾಲರಾದ ಡಾ. ನವೀನ್ ಕುಮಾರ್ ಮರಿಕೆ, ಇಂಜಿನಿಯರಿಂಗ್ ಐತಿಹಾಸಿಕ ಮತ್ತು ಸಾಂಸ್ಕೃತಿಕ ಜಾಗೃತಿಗೆ ಯಶಸ್ವಿಯಾಗಿ ಕಾಲಿಟ್ಟಿರುವ ಅಧ್ಯಯನ ಕೇಂದ್ರವೆಂಬುದು ಅತ್ಯಂತ ಹೆಮ್ಮೆಯ ಸಂಗತಿ. ಭೂತ, ವರ್ತಮಾನ ಮತ್ತು ಭವಿಷ್ಯವನ್ನು ಸಕಾರಾತ್ಮಕವಾಗಿ ಸೇತುವೆ ಮಾಡುವಲ್ಲಿ ಜನರನ್ನು ತಲುಪಲು ಶ್ರಮಿಸಿದೆ. ಈ ಪ್ರಯಾಣವನ್ನು ಮತ್ತಷ್ಟು ಘಟನಾತ್ಮಕವಾಗಿಸಲು ಕೇಂದ್ರವು ತುಳುವ ಸಂಸ್ಕೃತಿ ಮತ್ತು ಪರಂಪರೆಯ ಪ್ರಚಾರದಲ್ಲಿ ದೃಢವಾದ ಘಟನೆಗಳ ಸರಣಿಯನ್ನು ಸ್ವೀಕರಿಸಿದೆ ಎಂದು ಅಭಿಪ್ರಾಯ ಪಟ್ಟರು.
ಅಪರಾಧ
Bantwal-ಬಂಟ್ವಾಳ: 17 ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ಆರೋಪಿ ಅರೆಸ್ಟ್..!
ಸುಮಾರು 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ, ವಾರೆಂಟ್ ಜಾರಿಯಾಗಿದ್ದ ಆರೋಪಿ ಬಂಟ್ವಾಳದ ತಲಪಾಡಿ ನಿವಾಸಿ ಹನೀಫ್ ಅಲಿಯಾಸ್ ಕೊಕ್ಕಡ ಹನೀಫ್ (57)ನನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ.
ಬಂಟ್ವಾಳ: ಸುಮಾರು 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ, ವಾರೆಂಟ್ ಜಾರಿಯಾಗಿದ್ದ ಆರೋಪಿ ಬಂಟ್ವಾಳದ ತಲಪಾಡಿ ನಿವಾಸಿ ಹನೀಫ್ ಅಲಿಯಾಸ್ ಕೊಕ್ಕಡ ಹನೀಫ್ (57)ನನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ.
2009ರಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಅಬಕಾರಿ ಕಾಯ್ದೆಯ ವಿವಿಧ ಕಲಂಗಳಡಿ ದಾಖಲಾಗಿದ್ದ ಪ್ರಕರಣದಲ್ಲಿ ಹನೀಫ್ ಆರೋಪಿಯಾಗಿದ್ದ. ಈ ಪ್ರಕರಣಕ್ಕೆ ಸಂಬಂಧಿಸಿ ಸುಮಾರು 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.
ಇದಲ್ಲದೆ, 2023ರಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅ.ಕ್ರ 143/2023 ಕಲಂ 143,147, 448, 427, 436, 307, 149 IPC ಪ್ರಕರಣದಲ್ಲಿ ಆರೋಪಿಯಾಗಿದ್ದ ಆತನ ವಿರುದ್ಧ ವಾರೆಂಟ್ ಜಾರಿಯಾಗಿತ್ತು.
ಅಕ್ಟೋಬರ್ 9ರಂದು ಮೂಡುಬಿದಿರೆಯ ಶಿರ್ತಾಡಿ ಎಂಬಲ್ಲಿ ಬಂಟ್ವಾಳ ನಗರ ಠಾಣೆಯ ಎಎಸ್‌ಐ ಬಶೀರ್, ಹೆಡ್ ಕಾನ್‌ಸ್ಟೆಬಲ್‌ಗಳಾದ ಜಗದೀಶ್ ಮತ್ತು ಸಂತೋಷ್ ಹಾಗೂ ಪೊಲೀಸ್ ಕಾನ್‌ಸ್ಟೆಬಲ್ ಗವಿಸಿದ್ದಪ್ಪ ಅವರ ತಂಡ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದೆ.
ಮಂಗಳೂರು
Mulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್‌ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ
ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ಮಂಗಳೂರು: ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ಲಕ್ಷ್ಮಿ ಗಣೇಶ್ ಹೆಸರಿನ ಎಕ್ಸ್‌ಪ್ರೆಸ್ ಬಸ್ ಸಂಚರಿಸುತ್ತಿದ್ದ ವೇಳೆ ಏಕಾಏಕಿ ಗಿಡುಗ ಬಸ್‌ನ ಮುಂಭಾಗದ ಗಾಜಿಗೆ ಬಡಿದಿದೆ. ಇದರಿಂದ ಗಾಜು ಒಡೆದು ಚೂರುಚೂರಾಗಿದೆ.
ಘಟನೆಯಿಂದ ಪ್ರಯಾಣಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾದರೂ, ಚಾಲಕ ಹರೀಶ್ ಪೂಜಾರಿ ಅವರು ವಿಚಲಿತರಾಗದೆ ಸಮಯಪ್ರಜ್ಞೆಯಿಂದ ಬಸ್ ನಿಲ್ಲಿಸಿದ್ದಾರೆ. ಅವರ ಈ ನಡೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಬಸ್ ಚಾಲಕ ಪುತ್ತೂರಿನ ಸಂಟ್ಯಾರು ಕೂರೇಲು ನಿವಾಸಿ ಹರೀಶ್ ಪೂಜಾರಿ ಮೇಲೆ ಗಾಜಿನ ಚೂರುಗಳು ಬಿದ್ದು ಗಾಯಗೊಂಡಿದ್ದರು ಅವರು ವೇಗವಾಗಿ ಹೋಗುತ್ತಿದ್ದ ಬಸ್ ನ್ನು ತಕ್ಷಣ ನಿಯಂತ್ರಿಸಿದ್ದಾರೆ. ಅವಘಡ ಸಂದರ್ಭ ಡ್ರೈವರ್ ಸ್ಟೇರೀಂಗ್ ಕೈಬಿಟ್ಟದ್ದರೂ ಬಸ್ ಡಿವೈಡರ್ ಹಾರಿ ಭಾರೀ ಅವಘಡ ಸಂಭವಿಸುತ್ತಿತ್ತು ಎನ್ನಲಾಗಿದೆ.
ಮಂಗಳೂರು
Ujire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ
ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.

ಮಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.
ಉಜಿರೆಯಿಂದ ಆರಂಭವಾದ ಬೃಹತ್ ಜಾಥಾದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದು, ಮೌನ ಮೆರವಣಿಗೆಯ ಮೂಲಕ ಸೌಜನ್ಯಳಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಆಗ್ರಹಿಸಲಾಯಿತು. ಸುಮಾರು ಐದು ಕಿಲೋಮೀಟರ್ ದೂರದವರೆಗೆ ಹೋರಾಟಗಾರರು ನಡಿಗೆಯಲ್ಲಿ ಸಾಗಲಿದ್ದಾರೆ.
ನ್ಯಾಯದ ನಡಿಗೆಯ ಬಳಿಕ ಬೆಳ್ತಂಗಡಿಯ ಮೈದಾನದಲ್ಲಿ ಬೃಹತ್ ಅಭಿನಂದನಾ ಸಮಾವೇಶ ನಡೆಯಲಿದೆ. ಸೌಜನ್ಯ ಪರವಾಗಿ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ ವಕೀಲರ ತಂಡಕ್ಕೆ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಲಾಗುತ್ತದೆ. ಕಾರ್ಯಕ್ರಮದಲ್ಲಿ ವಕೀಲರು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.
-
Uncategorized9 hours ago
ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ!
-
Uncategorized8 hours ago
ರಬ್ಬರ್ ಗೆ ಭರ್ಜರಿ ಬೆಲೆ; ರಬ್ಬರ್ ಶೀಟ್ ದರದಲ್ಲೂ ಏರಿಕೆ
-
Uncategorized6 hours ago
ಸಮುದ್ರಕ್ಕೆ ಇಳಿದಿದ್ದ ಉಜಿರೆ ಕಾಲೇಜಿನ ವಿದ್ಯಾರ್ಥಿ ಅಲೆಗಳ ಸೆಳೆತಕ್ಕೆ ಬಲಿ; ಮೃತದೇಹ ಪತ್ತೆ
-
Uncategorized10 hours ago
ಪುತ್ತೂರು–ಉಪ್ಪಿನಂಗಡಿ ರಸ್ತೆ ದುರಸ್ತಿಗೆ ಶಾಸಕ ಅಶೋಕ್ ರೈ ಸೂಚನೆ
-
Uncategorized8 hours ago
ಪುತ್ತೂರು : ನಸುಕಿನ ಜಾವ ಹಳೇ ಕಟ್ಟಡದಲ್ಲಿ ಕಾಣಿಸಿದ ಬೆಂಕಿ – ಅನಾಹುತ ತಪ್ಪಿಸಲು ನೆರವಾದ ರವಿಕುಮಾರ್ ರೈ
-
Uncategorized8 hours ago
ಮುಂಬೈನಲ್ಲಿ ‘ಬನ’ ತುಳು ಚಿತ್ರಕ್ಕೆ ಪ್ರೇಕ್ಷಕರ ಮೆಚ್ಚುಗೆ; ಎರಡೂ ಪ್ರೀಮಿಯರ್ ಶೋ ಹೌಸ್ಫುಲ್ |




















