ಕಾರ್ಯಕ್ರಮಗಳು
Selco-ಸೆಲ್ಕೋ ಪ್ರತಿಷ್ಠಾನದ ಪ್ರಾಯೋಜಕತ್ವದಲ್ಲಿ ಅನ್ನಪೂರ್ಣ ಛತ್ರ ಮತ್ತು ಕಾರ್ ಮ್ಯೂಸಿಯಂನಲ್ಲಿ ಸೌರಶಕ್ತಿ ಬಳಕೆಗೆ ಚಾಲನೆ
ಉಜಿರೆ: ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ನಿತ್ಯವೂ ಸಾವಿರಾರು ಮಂದಿ ಭಕ್ತಾದಿಗಳಿಗೆ ನಡೆಯುತ್ತಿರುವ ಅನ್ನದಾನದ ಪುಣ್ಯಕಾರ್ಯಕ್ಕೆ ಸೆಲ್ಕೊ ಪ್ರತಿಷ್ಠಾನದ ಪ್ರಾಯೋಜಕತ್ವದಲ್ಲಿ ವಿದ್ಯುತ್ ಪೂರೈಕೆ ಅಳವಡಿಸಿರುವ ಸೆಲ್ಕೊ ಪ್ರತಿಷ್ಠಾನದ ಅಧಿಕಾರಿಗಳನ್ನು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಅಭಿನಂದಿಸಿದರು.

ಅವರು ಸೋಮವಾರ ಧರ್ಮಸ್ಥಳದಲ್ಲಿ ಅನ್ನಪೂರ್ಣ ಛತ್ರದಲ್ಲಿ ಸೆಲ್ಕೊ ಪ್ರತಿಷ್ಠಾನದ ಸಹಯೋಗದಲ್ಲಿ ಸೌರಶಕ್ತಿ ಬಳಕೆಗೆ ಚಾಲನೆ ನೀಡಿ ಶುಭ ಹಾರೈಸಿದರು. ಇದೊಂದು ಮಾದರಿ ಕಾರ್ಯಕ್ರಮವಾಗಿದ್ದು, ಇತರ ಸಂಸ್ಥೆಗಳೂ ಇದನ್ನು ಅನುಸರಿಸಬಹುದು ಎಂದು ಹೆಗ್ಗಡೆಯವರು ಸಲಹೆ ನೀಡಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ ಸೌರಶಕ್ತಿ ಬಳಕೆ ಬಗ್ಗೆ ಗ್ರಾಮೀಣ ಪ್ರದೇಶದಲ್ಲಿ ಸಾಕಷ್ಟು ಅರಿವು, ಜಾಗೃತಿ ಮೂಡಿಸಿ ಸೌರಶಕ್ತಿಯನ್ನು ಬಳಸಲಾಗುತ್ತಿದೆ. ಈ ಕಾರ್ಯಕ್ರಮಕ್ಕೆ ಲಂಡನ್ನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ಆಶ್ಡೆನ್ ಪ್ರಶಸ್ತಿ ನೀಡಿ ಗೌರವಿಸಲಾಗಿದೆ ಎಂದು ಧನ್ಯತೆಯಿಂದ ಸ್ಮರಿಸಿಕೊಂಡರು.

ಸದ್ಯದಲ್ಲೆ ಧರ್ಮಸ್ಥಳದಿಂದ ಕೆಲವು ಹಿರಿಯ ನೌಕರರು ಶಿರ್ಡಿಗೆ ಹೋಗಿ ಸೌರಶಕ್ತಿ ಬಳಕೆ ಬಗ್ಯೆ ಅಧ್ಯಯನ ನಡೆಸಿ ಹೆಚ್ಚಿನ ಮಾಹಿತಿ ಕಲೆ ಹಾಕುವರು. ಮುಂದೆ ಇಲ್ಲಿನ ಎಲ್ಲಾ ವಸತಿ ಛತ್ರಗಳು ಹಾಗೂ ಕಚೇರಿಗಳಲ್ಲಿಯೂ ಸೌರಶಕ್ತಿಯ ಸದುಪಯೋಗ ಮಾಡಲಾಗುವುದು ಎಂದು ಹೆಗ್ಗಡೆಯವರು ಹೇಳಿದರು.
ಸೆಲ್ಕೊ ಪ್ರತಿಷ್ಠಾನದ ಸಿ.ಇ.ಒ. ಭಾಸ್ಕರಮೋಹನ ಹೆಗಡೆ ಮಾತನಾಡಿ ಹರೀಶ್ ಹಂದೆಯವರ ನೇತೃತ್ವ ಮತ್ತು ದೂರದೃಷ್ಟಿಯ ಯೋಜನೆಯಿಂದ ಸೌರಶಕ್ತಿಯ ಬಳಕೆ ಹೆಚ್ಚಾಗುತ್ತಿದೆ. ಸೆಲ್ಕೊ ಪ್ರತಿಷ್ಠಾನವು ಜನರ ಅವಶ್ಯಕತೆಯ ದೃಷ್ಟಿಯಿಂದ ಕಾರ್ಯನಿರ್ವಹಿಸುತ್ತಿದೆ ಹೊರತು ಲಾಭದ ದೃಷ್ಟಿಕೋನದಿಂದ ಅಲ್ಲ. ಪೂಜ್ಯ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ 2001ರಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ 1500 ಸೌರಘಟಕಗಳನ್ನು ಪ್ರಾರಂಭಿಸಿದ್ದು ಈಗ ಮೂರು ಲಕ್ಷ ಫಲಾನುಭವಿಗಳು ಇದರ ಪ್ರಯೋಜನ ಪಡೆಯುತ್ತಿದ್ದಾರೆ ಎಂದರು. ಅನೇಕ ಬ್ಯಾಂಕ್ಗಳು ಮತ್ತು ವಿದೇಶಿ ಕಂಪೆನಿಗಳು ಕೂಡಾ ಸೌರಶಕ್ತಿ ಬಳಕೆ ಬಗ್ಯೆ ಸೆಲ್ಕೊ ಪ್ರತಿಷ್ಠಾನದೊಂದಿಗೆ ಒಡಂಬಡಿಕೆ ಮಾಡಿಕೊಂಡಿವೆ. ಇದರಿಂದಾಗಿ ಜನರ ಬದುಕು ಮತ್ತು ಮನಸು ಹಸನಾಗಿದೆ ಎಂದರು.
ಅನೇಕ ಮಂದಿ ಸೌರಶಕ್ತಿ ಬಳಕೆಯಿಂದ ಸ್ವ-ಉದ್ಯೋಗವನ್ನೂ ಯಶಸ್ವಿಯಾಗಿ ಪ್ರಾರಂಭಿಸಿದ್ದಾರೆ ಎಂದರು. ಧಾರವಾಡದಲ್ಲಿರುವ ಧರ್ಮಸ್ಥಳದ ತರಬೇತಿ ಸಂಸ್ಥೆಯಲ್ಲಿ ವರ್ಷಕ್ಕೆ ಎರಡೂವರೆ ಸಾವಿರ ಯುವತಿಯರಿಗೆ ತರಬೇತಿ ನೀಡುತ್ತಿದ್ದು ಅವರು ಸ್ವ-ಉದ್ಯೋಗ ಪ್ರಾರಂಭಿಸಿ ಸ್ವಾವಲಂಬಿ ಜೀವನ ನಡೆಸುತ್ತಿದ್ದಾರೆ ಎಂದರು.
ಪ್ರಧಾನಿ ನರೇಂದ್ರ ಮೋದಿಯವರ ಉಜ್ವಲ ಯೋಜನೆಯಂತೆ ಸೌರಶಕ್ತಿ ಬಳಸಿದಾಗ ಸರ್ಕಾರದಿಂದ ಸಹಾಯಧನವೂ ಸಿಗುತ್ತದೆ ಎಂದರು.
ಸೆಲ್ಕೊ ಪ್ರತಿಷ್ಠಾನಕ್ಕೆ ಆರಂಭದಿಂದಲೂ ಸೌರಶಕ್ತಿ ಬಳಕೆ ಬಗ್ಯೆ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ನಿರಂತರ ಮಾರ್ಗದರ್ಶನ, ಪ್ರೇರಣೆ ಮತ್ತು ಪ್ರೋತ್ಸಾಹವನ್ನು ಅವರು ಕೃತಜ್ಞತೆಯಿಂದ ಸ್ಮರಿಸಿದರು. ಸೆಲ್ಕೋದ ಡಿ.ಜಿ.ಎಂ. ಗುರುಪ್ರಸಾದ್ ಉಪಸ್ಥಿತರಿದ್ದರು.
ಅನ್ನಪೂರ್ಣ ಛತ್ರಕ್ಕೆ 32 ಕಿಲೊ ವಾಟ್ ಸಾಮರ್ಥ್ಯದ ಘಟಕ ಹಾಗೂ ಕಾರ್ ಮ್ಯೂಸಿಯಂ ಗೆ 5 ಕಿಲೊವಾಟ್ ಸಾಮರ್ಥ್ಯದ ಘಟಕ ಸೇರಿದಂತೆ ಒಟ್ಟು 37 ಕಿಲೊವಾಟ್ ಸಾಮರ್ಥ್ಯದ ಎರಡು ಘಟಕಗಳನ್ನು ಅಳವಡಿಸಿ ಸೌರಶಕ್ತಿ ಬಳಕೆಯೊಂದಿಗೆ ವಿದ್ಯುತ್ ದೀಪ ಮತ್ತು ಫ್ಯಾನುಗಳಿಗೆ ವಿದ್ಯುತ್ ಪೂರೈಕೆ ಮಾಡಲಾಗಿದೆ.
ಹೇಮಾವತಿ ವೀ. ಹೆಗ್ಗಡೆ, ಡಿ. ಹರ್ಷೇಂದ್ರ ಕುಮಾರ್ ಮತ್ತು ಸುಪ್ರಿಯಾ ಹರ್ಷೇಂದ್ರ ಕುಮಾರ್ ಉಪಸ್ಥಿತರಿದ್ದರು. ಅನ್ನಪೂರ್ಣ ಛತ್ರದ ಪ್ರಬಂಧಕ ಸುಬ್ರಹ್ಮಣ್ಯಪ್ರಸಾದ್ ಸ್ವಾಗತಿಸಿದರು. ನವೀನ್ ಬೆಳ್ತಂಗಡಿ ಧನ್ಯವಾದವಿತ್ತರು.
ಕಾರ್ಯಕ್ರಮಗಳು
Puttur-ಪುತ್ತೂರಿನಲ್ಲಿ ‘ಸಾಮರಸ್ಯದ ತುಡರ್’ ಕಾರ್ಯಕ್ರಮ: ಮಹಾಲಿಂಗೇಶ್ವರ ದೇವಸ್ಥಾನದಿಂದ ಮನೆಮನೆಗೆ ದೀಪದ ಬೆಳಕು
ಸಾಮರಸ್ಯ ವೇದಿಕೆ ಪುತ್ತೂರು ಜಿಲ್ಲೆ ಹಾಗೂ ಸಾಮರಸ್ಯ ವೇದಿಕೆ ಪುತ್ತೂರು ನಗರ ಘಟಕದ ವತಿಯಿಂದ ‘ಸಾಮರಸ್ಯದ ತುಡರ್’ ಕಾರ್ಯಕ್ರಮ ನಡೆಯಿತು. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗರ್ಭಗುಡಿಯಲ್ಲಿ ಉರಿಯುತ್ತಿದ್ದ ದೀಪದಿಂದ ಉರ್ಲಾಂಡಿ, ಮಣ್ಣಾಪು, ಶೇವಿರೆ ಹಾಗೂ ಬ್ರಹ್ಮನಗರ ಪ್ರದೇಶದ ಉಪೇಕ್ಷಿತ ಬಂಧುಗಳು ತಂದ ದೀಪಗಳನ್ನು ದೇವಸ್ಥಾನದ ಅರ್ಚಕರು ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಪುತ್ತೂರು: ಸಾಮರಸ್ಯ ವೇದಿಕೆ ಪುತ್ತೂರು ಜಿಲ್ಲೆ ಹಾಗೂ ಸಾಮರಸ್ಯ ವೇದಿಕೆ ಪುತ್ತೂರು ನಗರ ಘಟಕದ ವತಿಯಿಂದ ‘ಸಾಮರಸ್ಯದ ತುಡರ್’ ಕಾರ್ಯಕ್ರಮ ನಡೆಯಿತು.
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗರ್ಭಗುಡಿಯಲ್ಲಿ ಉರಿಯುತ್ತಿದ್ದ ದೀಪದಿಂದ ಉರ್ಲಾಂಡಿ, ಮಣ್ಣಾಪು, ಶೇವಿರೆ ಹಾಗೂ ಬ್ರಹ್ಮನಗರ ಪ್ರದೇಶದ ಉಪೇಕ್ಷಿತ ಬಂಧುಗಳು ತಂದ ದೀಪಗಳನ್ನು ದೇವಸ್ಥಾನದ ಅರ್ಚಕರು ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಬಳಿಕ ದೇವಸ್ಥಾನದಲ್ಲಿ ಬೆಳಗಿಸಿದ ದೀಪವನ್ನು ಮೆರವಣಿಗೆಯ ಮೂಲಕ ಕೊಂಡೊಯ್ದು ಉರ್ಲಾಂಡಿ, ಮಣ್ಣಾಪು, ಶೇವಿರೆ ಹಾಗೂ ಬ್ರಹ್ಮನಗರ ಪ್ರದೇಶಗಳ ಸುತ್ತಮುತ್ತಲಿನ ಮನೆಗಳಲ್ಲಿ ದೀಪ ಬೆಳಗಿಸಲಾಯಿತು.
ಕಾರ್ಯಕ್ರಮದಲ್ಲಿ ಮಂಗಳೂರು ವಿಭಾಗದ ಸಾಮರಸ್ಯ ಸಂಯೋಜಕ ರವೀಂದ್ರ, ಜಿಲ್ಲಾ ಸಾಮರಸ್ಯ ಸಂಯೋಜಕ ಶ್ರೀಕುಮಾರ್ ಸುಬ್ರಹ್ಮಣ್ಯ, ದಾಮೋದರ ಪಾಟಲಿ, ಅಪ್ಪಯ್ಯ ಮಣಿಯಾಣಿ, ರಮೇಶ್ ಪ್ರಭು, ಸಂತೋಷ್ ಬೊನಂತಾಯ, ರಮೇಶ್ ನೆಗಳಗುಳಿ, ದಯಾನಂದ ಬೋಲ್ವಾರ್, ಸಚಿನ್ ಶೆಣೈ, ರಮೇಶ್ ಉರ್ಲಾಂಡಿ, ಅಶೋಕ್ ಬ್ರಹ್ಮನಗರ ಸೇರಿದಂತೆ ಪ್ರಮುಖರು ಹಾಗೂ ಮಾತೆಯರು ಉಪಸ್ಥಿತರಿದ್ದರು.
ಕಾರ್ಯಕ್ರಮಗಳು
Puttur-ಡಿ.8ರಂದು ಪುತ್ತೂರು ದೀಪೋತ್ಸವ: ದೇವಸ್ಥಾನದ ಮುಂಭಾಗದಲ್ಲಿ ಚಪ್ಪರ ಮುಹೂರ್ತ
ಪುತ್ತೂರು ದೀಪೋತ್ಸವ ಸಮಿತಿಯ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದೊಂದಿಗೆ ಡಿ.8ರಂದು ದೇವಸ್ಥಾನದ ಮುಂಭಾಗದಲ್ಲಿ ನಡೆಯಲಿರುವ ಪುತ್ತೂರು ದೀಪೋತ್ಸವದ ಪೂರ್ವಭಾವಿಯಾಗಿ ಚಪ್ಪರ ಮುಹೂರ್ತ ಸಮಾರಂಭ ಬುಧವಾರ ನಡೆಯಿತು.
ಪುತ್ತೂರು, ನ.18: ಪುತ್ತೂರು ದೀಪೋತ್ಸವ ಸಮಿತಿಯ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದೊಂದಿಗೆ ಡಿ.8ರಂದು ದೇವಸ್ಥಾನದ ಮುಂಭಾಗದಲ್ಲಿ ನಡೆಯಲಿರುವ ಪುತ್ತೂರು ದೀಪೋತ್ಸವದ ಪೂರ್ವಭಾವಿಯಾಗಿ ಚಪ್ಪರ ಮುಹೂರ್ತ ಸಮಾರಂಭ ಬುಧವಾರ ನಡೆಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಪುತ್ತೂರಿನ ಉದ್ಯಮಿ ವಾಮನ ಪೈ ಮಾತನಾಡಿ, ಶ್ರೀ ಮಹಾಲಿಂಗೇಶ್ವರ ದೇವರ ಅನುಗ್ರಹದಿಂದ ದೀಪೋತ್ಸವ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಲಿ ಎಂದು ಹಾರೈಸಿದರು.
ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಸುಭಾಶ್ ರೈ ಬೆಳ್ಳಿಪ್ಪಾಡಿ ಮಾತನಾಡಿ, ದೇವಸ್ಥಾನದ ಮುಂಭಾಗದಲ್ಲಿ ನಡೆಯುವ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳಿಗೂ ವ್ಯವಸ್ಥಾಪನಾ ಸಮಿತಿಯ ಸಂಪೂರ್ಣ ಸಹಕಾರ ಇರಲಿದೆ. ಮುಂದಿನ ದಿನಗಳಲ್ಲಿ ಎಲ್ಲರ ಸಹಕಾರದೊಂದಿಗೆ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಗಳನ್ನೂ ಕೈಗೆತ್ತಿಕೊಳ್ಳಲಾಗುವುದು ಎಂದರು.

ದೀಪೋತ್ಸವ ಸಮಿತಿ ಅಧ್ಯಕ್ಷ ಎನ್. ರವೀಂದ್ರ ಶೆಟ್ಟಿ ನುಳಿಯಾಲು ಪ್ರಾಸ್ತಾವಿಕವಾಗಿ ಮಾತನಾಡಿ, ಈ ಬಾರಿ ದೀಪೋತ್ಸವವನ್ನು ಉತ್ಸವದ ರೀತಿಯಲ್ಲಿ ಆಯೋಜಿಸಲಾಗುತ್ತಿದೆ. ಐದು ಸಾವಿರಕ್ಕೂ ಅಧಿಕ ಮಂದಿ ದೀಪ ಬೆಳಗಿಸುವ ನಿರೀಕ್ಷೆಯಿದ್ದು, ಕಾರ್ಯಕ್ರಮದ ಯಶಸ್ಸಿಗಾಗಿ ಉತ್ತಮ ಸಮಿತಿ ರಚಿಸಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಕಾರ್ಯಕ್ರಮಗಳು
Puttur-ಪುತ್ತೂರು: ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಾ ಸಂಸ್ಥಾನ ಹಾಗೂ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಸಹಯೋಗದಲ್ಲಿ ರಾಷ್ಟ್ರೀಯ ಈಜು ಚಾಂಪಿಯನ್ಶಿಪ್-2026
ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಾ ಸಂಸ್ಥಾನ ಹಾಗೂ ಪುತ್ತೂರಿನ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಸಹಯೋಗದಲ್ಲಿ 37ನೇ ರಾಷ್ಟ್ರೀಯ ಸ್ವಿಮ್ಮಿಂಗ್ ಚಾಂಪಿಯನ್ಶಿಪ್-2026 ನವೆಂಬರ್ 20ರಿಂದ 22ರವರೆಗೆ ಪುತ್ತೂರಿನಲ್ಲಿ ನಡೆಯಲಿದೆ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಜತೆ ಕಾರ್ಯದರ್ಶಿ ಭರತ್ ಪೈ ತಿಳಿಸಿದರು.
ಪುತ್ತೂರು: ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಾ ಸಂಸ್ಥಾನ ಹಾಗೂ ಪುತ್ತೂರಿನ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಸಹಯೋಗದಲ್ಲಿ 37ನೇ ರಾಷ್ಟ್ರೀಯ ಸ್ವಿಮ್ಮಿಂಗ್ ಚಾಂಪಿಯನ್ಶಿಪ್-2026 ನವೆಂಬರ್ 20ರಿಂದ 22ರವರೆಗೆ ಪುತ್ತೂರಿನಲ್ಲಿ ನಡೆಯಲಿದೆ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಜತೆ ಕಾರ್ಯದರ್ಶಿ ಭರತ್ ಪೈ ತಿಳಿಸಿದರು.
ಪುತ್ತೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ರಾಷ್ಟ್ರಮಟ್ಟದ ಈಜು ಸ್ಪರ್ಧೆಯಲ್ಲಿ ವಿದ್ಯಾಭಾರತಿಯ ಅಧೀನದಲ್ಲಿರುವ ದೇಶದ ವಿವಿಧ ರಾಜ್ಯಗಳ ಆರು ಕ್ಷೇತ್ರಗಳ ಒಟ್ಟು 162 ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದಾರೆ. ಇವರೊಂದಿಗೆ 30 ಎಸ್ಕಾರ್ಟ್ಗಳು ಹಾಗೂ ತರಬೇತುದಾರರು ಭಾಗವಹಿಸಲಿದ್ದು, ಒಟ್ಟು 104 ಸ್ಪರ್ಧಾ ವಿಭಾಗಗಳನ್ನು ಆಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು.
ನವೆಂಬರ್ 20ರಂದು ಸಂಜೆ 6 ಗಂಟೆಗೆ ವಿವೇಕಾನಂದ ಸೆಂಟ್ರಲ್ ಸ್ಕೂಲ್ನಲ್ಲಿ ಉದ್ಘಾಟನಾ ಸಮಾರಂಭ ನಡೆಯಲಿದೆ. ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಕೃಷ್ಣಕುಮಾರ್ ಶೆಟ್ಟಿ ಕಡಬ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮವನ್ನು ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಮಟ್ಟದ ಈಜುಪಟು ರಾಧಾಕೃಷ್ಣ ನಾಯಕ್ ಉದ್ಘಾಟಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ವಿದ್ಯಾಭಾರತಿ ಕರ್ನಾಟಕದ ರಾಜ್ಯಾಧ್ಯಕ್ಷ ಪರಮೇಶ್ವರ ಹೆಗ್ಡೆ ಭಾಗವಹಿಸಲಿದ್ದು, ಮನಮೋಹನ್ ರೈ ಚೆಲ್ಯಡ್ಕ, ವಸಂತ ಮಾಧವ, ಯು.ಪಿ. ಹರಿದಾಸ್ ಹಾಗೂ ಬಿ.ಡಿ. ಮಣಿ ಉಪಸ್ಥಿತರಿರಲಿದ್ದಾರೆ.
ನವೆಂಬರ್ 21ರಂದು ಪುತ್ತೂರಿನ ಬಾಲವನ ಈಜುಕೊಳದಲ್ಲಿ ವಿವಿಧ ಸ್ಪರ್ಧೆಗಳು ನಡೆಯಲಿವೆ.
ನವೆಂಬರ್ 22ರಂದು ಬೆಳಗ್ಗೆ 11.30ಕ್ಕೆ ವಿವೇಕಾನಂದ ಸೆಂಟ್ರಲ್ ಸ್ಕೂಲ್ನಲ್ಲಿ ಸಮಾರೋಪ ಸಮಾರಂಭ ಆಯೋಜಿಸಲಾಗಿದೆ. ವಿದ್ಯಾಭಾರತಿ ದಕ್ಷಿಣ ಮಧ್ಯ ಕ್ಷೇತ್ರದ ಜಂಟಿ ಕಾರ್ಯದರ್ಶಿ ವಸಂತ ಮಾಧವ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಬೆಂಗಳೂರಿನ ಬ್ರಾಂಡ್ ಮತ್ತು ಡಿಜಿಟಲ್ ಮಾರ್ಕೆಟಿಂಗ್ ಮ್ಯಾನೇಜರ್ ಶ್ರೀಕಾಂತ್ ಪ್ರಭು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ವಸಂತಿ ಕೆ. ಹಾಗೂ ಪ್ರತಿಮಾ ಹೆಗ್ಡೆ ಉಪಸ್ಥಿತರಿರಲಿದ್ದಾರೆ ಎಂದು ಭರತ್ ಪೈ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಆಡಳಿತ ಮಂಡಳಿ ಅಧ್ಯಕ್ಷ ವಿಷ್ಣು ಪ್ರಸಾದ್ ಸಿ., ಪ್ರಾಂಶುಪಾಲೆ ಸಿಂಧು ವಿ.ಜಿ., ರವಿನಾರಾಯಣ, ಶ್ಯಾಮಲಾ ಹಾಗೂ ವೆಂಕಟರಮಣ ಮಂಕುಡೆ ಉಪಸ್ಥಿತರಿದ್ದರು
-
ಮಂಗಳೂರು19 hours agoMangalore-ಮಂಗಳೂರು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಹೊಸ ತಿರುವು: ಮನೆಯವರ ಜೊತೆ ತೆರಳಲು ಯುವತಿ ನಕಾರ..!
-
ಅಂತರ ರಾಜ್ಯ24 hours agoFormer CBI officer-ಅಧಿಕಾರ, ಹಣ, ಐಷಾರಾಮಿ ಬದುಕಿಗೆ ಗುಡ್ಬೈ; ಗುಹೆಯಲ್ಲಿ ಧ್ಯಾನ ಮಾಡುತ್ತಿರುವ ಮಾಜಿ ಸಿಬಿಐ ಅಧಿಕಾರಿ..!
-
ಅಂತರ ರಾಜ್ಯ18 hours agoArrested-14ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿ ಅಪಹರಣಕಾರರ ಬೇಡಿಕೆಯಂತೆ 25ಲಕ್ಷ ರೂ ನೀಡಿದರೂ ಮರಳಿ ಬಾರದ ಶಿಕ್ಷಕನ ಪ್ರಕರಣಕ್ಕೆ ಮಹತ್ವದ ತಿರುವು..!
-
ಸಿನೆಮಾ24 hours agoDawood-‘ಧುರಂಧರ್ ‘ ನಲ್ಲಿ ದಾವೂದ್ ನ ತೋರಿಸಿದ ರೀತಿ ವಾಸ್ತವವಲ್ಲ…! ಮೋಸ್ಟ್ ವಾಂಟೆಡ್ ಪಾತಕಿ ಈಗ ಹೇಗಿದ್ದಾನೆ ಗೊತ್ತೇ..? ಮಾಜಿ FBI ಅಧಿಕಾರಿ ಹೇಳಿದ್ದೇನೂ..?
-
ಕಾರ್ಯಕ್ರಮಗಳು19 hours agoPuttur-ಪುತ್ತೂರಿನಲ್ಲಿ ‘ಸಾಮರಸ್ಯದ ತುಡರ್’ ಕಾರ್ಯಕ್ರಮ: ಮಹಾಲಿಂಗೇಶ್ವರ ದೇವಸ್ಥಾನದಿಂದ ಮನೆಮನೆಗೆ ದೀಪದ ಬೆಳಕು
-
ದಕ್ಷಿಣ ಕನ್ನಡ13 hours ago
Puttur Medical College : ಮೆಡಿಕಲ್ ಕಾಲೇಜು ಆರಂಭಕ್ಕೆ ಪುತ್ತೂರು ಸಜ್ಜು; ಪ್ಲಾನ್ “ಬಿ” ಗೆ ವೇಗ; ಮೂಲಸೌಕರ್ಯ ಪರಿಶೀಲಿಸಿದ ತಜ್ಞರ ತಂಡ – ನವೆಂಬರ್ 30ರೊಳಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ
-
ಶಿಕ್ಷಣ18 hours agoPuttur-ಪುತ್ತೂರಿನ ಸುಪ್ರಜಾ ರಾವ್ ಗೆ ರಾಜ್ಯೋತ್ಸವ ಸಾಧಕ ಪುರಸ್ಕಾರ
-
Uncategorized20 hours agoPhilomena-ಫಿಲೋಮಿನಾ ಪ.ಪೂ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಾಗಾರ















