ಕ್ರೈಂ
Wife Killed Husband ಮಂಗಳೂರು :ಸುಪಾರಿ ನೀಡಿ ಪತಿಯನ್ನೇ ಕೊಲೆಗೈದ ಪತ್ನಿ ಸಹಿತ ಐವರಿಗೆ ಜೀವಾವಧಿ ಶಿಕ್ಷೆ – 8 ವರ್ಷಗಳ ಹಿಂದೆ ಶಿರಾಡಿ ಬಳಿ ಚೂರಿ ಇರಿದು ಕೊಂದ ಪ್ರಕರಣ
ಸುಪಾರಿ ನೀಡಿ ಪತಿಯನ್ನೇ ಕೊಲೆಗೈದ ಪತ್ನಿ ಸಹಿತ ಐವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ 6ನೇ ಜಿಲ್ಲಾ ಮತ್ತು ಹೆಚ್ಚುವರಿ ಸತ್ರ ನ್ಯಾಯಾಲಯ ನ್ಯಾಯಾಲಯ ತೀರ್ಪು ನೀಡಿದೆ. ಉಳ್ಳಾಲ ಸಮೀಪದ ಪಾವೂರು ಇನೋಳಿ ದೆಂಡಿಂಜೆ ನಿವಾಸಿ ಇಸ್ಮಾಯಿಲ್ (59) ಕೊಲೆ ಪ್ರಕರಣದಲ್ಲಿ ಐವರು ಆರೋಪಿಗಳ ಆರೋಪ ಸಾಬೀತಾದ ಹಿನ್ನಲೆಯಲ್ಲಿ ನ್ಯಾಯಾಲಯ ಈ ತೀರ್ಪು ಪ್ರಕಟಿಸಿದೆ. 8 ವರ್ಷಗಳ ಹಿಂದೆ ಅಂದರೇ 2016ರ ಫೆ.16ರಂದು ಇಸ್ಮಾಯಿಲ್ ಅನ್ನು ಚೂರಿ ಇರಿದು ಹತ್ಯೆ ಮಾಡಲಾಗಿತ್ತು.
ಮೂಲತಃ ಉಳ್ಳಾಲ, ಪ್ರಸ್ತುತ ಬಿ.ಸಿ.ರೋಡ್ ನಿವಾಸಿ ಅಬ್ದುಲ್ ಮುನಾಫ್ ಯಾನೆ ಮುನ್ನ (41), ಉಳ್ಳಾಲ್ ನಿವಾಸಿ ಅಬ್ದುಲ್ ರಹಿಮಾನ್ (36), ಬೊಳಿಯಾರು ನಿವಾಸಿ ಶಬೀರ್ ಯಾನೆ ಶಬ್ಬಿ (31), ಕುತ್ತಾರ್‌ಪದವು ನಿವಾಸಿ ಜಮಾಲ್ ಅಹಮದ್ (38) ಮತ್ತು ಕೊಲೆಯಾದ ಇಸ್ಮಾಯಿಲ್ ಪತ್ನಿ ಪಾವೂರು ನೆಬಿಸಾ (40) ಶಿಕ್ಷೆಗೆ ಒಳಗಾದವರು.
ಪಾವೂರು ನಿವಾಸಿಯಾಗಿದ್ದ ಇಸ್ಮಾಯಿಲ್‌ಗೆ ನೆಬಿಸಾ ಜತೆ ಎರಡನೇ ಮದುವೆಯಾಗಿದ್ದು, ಈ ಈ ದಂಪತಿಗೆ ನಾಲ್ವರು ಮಕ್ಕಳಿದ್ದರು. ನೆಬಿಸಾಳಿಗೆ ಕುತ್ತಾರ್‌ಪದವು ಜಮಾಲ್ ಜತೆ ಅಕ್ರಮ ಸಂಬಂಧವಿದ್ದು, ಇದೇ ವಿಚಾರದಲ್ಲಿ ಇಸ್ಮಾಯಿಲ್ ಮತ್ತು ನೆಬಿಸಾ ನಡುವೆ ಗಲಾಟೆಯಾಗುತ್ತಿತ್ತು. ಹೀಗಾಗಿ ನೆಬಿಸಾ, ಜಮಾಲ್ ಜತೆ ಸೇರಿಕೊಂಡು ಗಂಡ ಇಸ್ಮಾಯಿಲ್ ನನ್ನು ಕೊಲೆ ಮಾಡಲು ನಿರ್ಧರಿಸಿ, ಅಬ್ದುಲ್ ರಹಿಮಾನ್ ಎಂಬಾತನ ಜತೆ ಸೇರಿ ಸಂಚು ರೂಪಿಸಿದ್ದರು.
2016ರ ಫೆ.16ರಂದು ಸಂಜೆ ಆರೋಪಿ ಅಬ್ದುಲ್ ರಹಿಮಾನ್ ಬೆಂಗಳೂರಿಗೆ ಬಾಡಿಗೆಯಿದೆ ಎಂದು ಹೇಳಿ ಇಸ್ಮಾಯಿಲ್ನನ್ನು ನಂಬಿಸಿ ಫರಂಗಿಪೇಟೆಯಿಂದ ಕರೆದೊಯ್ದಿದ್ದ. ಬಿ.ಸಿ.ರೋಡ್ ಹೊಟೇಲ್ ಮುಂಭಾಗ ಇತರ ಆರೋಪಿಗಳಾದ ಮುನಾಫ್ ಮತ್ತು ಶಬೀರ್ ಅದೇ ವಾಹನ ಹತ್ತಿಕೊಂಡು ಬೆಂಗಳೂರಿನತ್ತ ಹೊರಟರು. ನೆಲ್ಯಾಡಿಯಲ್ಲಿ ಇಸ್ಮಾಯಿಲ್ಗೆ ಕಂಠಪೂರ್ತಿ ಮದ್ಯಪಾನ ಮಾಡಿಸಿ ಶಿರಾಡಿಯತ್ತ ತೆರಳಿದ್ದಾರೆ. ಕೆಂಪುಹೊಳೆ ಸಮೀಪ ತಲುಪಿದಾಗ ಏಸ್ ವಾಹನ ರಸ್ತೆಯಲ್ಲೇ ಹಾಳಾಗಿ ನಿಲ್ಲುತ್ತದೆ. ಈ ಸಂದರ್ಭ ವಾಹನದಿಂದ ಇಳಿದ ಆರೋಪಿಗಳು ರಕ್ಷಿತಾರಣ್ಯದೊಳಗೆ ಕರೆದೊಯ್ದು ಮೂವರು ಸೇರಿ ಚೂರಿಯಿಂದ ಇರಿದು ಇಸ್ಮಾಯಿಲ್ ಕೊಲೆಮಾಡುತ್ತಾರೆ. ಬಳಿಕ ವಾಹನವನ್ನು ತಾವೇ ರಿಪೇರಿ ಮಾಡಿ ತಂದು ಉಪ್ಪಿನಂಗಡಿ ಬತ್ತೂರು ನೀರಕಟ್ಟೆಬಳಿ ಸಮೀಪ ನಿಲ್ಲಿಸಿದ್ದರು.
ಕೊಲೆಗೆ ಸುಪಾರಿ ಕೊಟ್ಟ ಆರೋಪಿ ನೆಬಿಸಾ ತನ್ನ ಮೇಲೆ ಅನುಮಾನ ಬರದಿರಲೆಂದು ಗಂಡ ನಾಪತ್ತೆಯಾಗಿರುವ ಬಗ್ಗೆ ತೊಕ್ಕೊಟ್ಟು ಪೊಲೀಸರಿಗೆ ದೂರು ನೀಡಿದ್ದಳು. ಕೊನೆಗೂ ಪೊಲೀಸರು ಪ್ರಕರಣ ಭೇದಿಸಿದ್ದರು. ಕೊಲೆಗೈದ ಆರೋಪಿಗಳು ಉಪ್ಪಿನಂಗಡಿ ಬತ್ತೂರು ನೀರಕಟ್ಟೆ ಬಳಿ ಏಸ್ ವಾಹನವನ್ನು ಬಿಟ್ಟು ಮಂಗಳೂರಿಗೆ ಬಂದಿದ್ದರು. ಈ ವಾಹನದಲ್ಲಿ ರಕ್ತದ ಕಲೆಗಳು ಕಂಡು ಬಂದಿತ್ತು ಇದೇ ಅನುಮಾನದಲ್ಲಿ ಇಸ್ಮಾಯಿಲ್ ಅವರ ಮೊದಲ ಪತ್ನಿಯ ಪುತ್ರ ತಮ್ಮ ಚಿಕ್ಕಮ್ಮನ ಮೇಲೆಯೇ ಅನುಮಾನಪಟ್ಟು .18ರಂದು ಪೊಲೀಸರಿಗೆ ದೂರು ನೀಡಿದ್ದು, ಪೊಲೀಸ್ ವಿಚಾರಣೆ ಸತ್ಯಾಂಶ ಬಯಲಿಗೆ ಬಂದಿದೆ. ಗಂಡನ ಕೊಲೆಗೆ ಸುಪಾರಿ ನೀಡಿದ ನೆಬಿಸಾ, ಇದಕ್ಕಾಗಿ 2.50 ಲಕ್ಷ ರು. ಹಣ ನೀಡಬೇಕಿತ್ತು. ಚಿನ್ನಾಭರಣಗಳನ್ನು ತೊಕ್ಕೊಟ್ಟಿನ ಫೈನಾನ್ಸ್ನಲ್ಲಿ ಅಡವಿಟ್ಟು ಹಣ ನೀಡಿರುವುದು ತನಿಖೆ ವೇಳೆ ಬಹಿರಂಗವಾಗಿದೆ.
ಶಿಕ್ಷೆ ಪ್ರಮಾಣ:
5ಮಂದಿ ಅಪರಾಧಿಗಳಿಗೆ ಕೊಲೆ ಪ್ರಕರಣದಡಿ ಜೀವಾವಧಿ ಶಿಕ್ಷೆ ಮತ್ತು 2ಲಕ್ಷ ರೂ. ದಂಡ, ದಂಡ ತೆರಲು ತಪ್ಪಿದಲ್ಲಿ ಮತ್ತೆ 2ವರ್ಷ ಸಜೆ, ಸಾಕ್ಷ್ಯ ನಾಶದಡಿ 7ವರ್ಷ ಕಠಿಣ ಸಜೆ ಮತ್ತು 1 ಲಕ್ಷ ರೂ. ದಂಡ, ದಂಡ ತೆರಲು ತಪ್ಪಿದಲ್ಲಿ 1 ವರ್ಷ ಸಾದಾ ಸಜೆ, ಒಳಸಂಚು ಪ್ರಕರಣದಡಿ 7ವರ್ಷ ಕಠಿಣ ಸಜೆ ಮತ್ತು 50ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ.
ಸಮಗ್ರ ವಿಚಾರಣೆ ನಡೆಸಿದ 6ನೇ ಜಿಲ್ಲಾ ಮತ್ತು ಹೆಚ್ಚುವರಿ ಸತ್ರ ನ್ಯಾಯಾಲಯದ ನ್ಯಾಯಾಧೀಶರು ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ಪ್ರಕರಣದಲ್ಲಿ ಕೊಣಾಜೆ ಠಾಣಾ ಇನ್‌ಸ್ಪೆಕ್ಟರ್ ಅಶೋಕ್ ಅವರು ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಸರ್ಕಾರಿ ಅಭಿಯೋಜಕರಾದ ಜುಡಿತ್ ಒ.ಎಂ. ಕ್ರಾಸ್ತಾ ಮತ್ತು ಜ್ಯೋತಿ ಪಿ. ನಾಯಕ್ ಸಾಕ್ಷಿ ವಿಚಾರಣೆ ನಡೆಸಿದ್ದರು. ಬಿ.ಶೇಖರ್ ಶೆಟ್ಟಿ ಮತ್ತು ಚೌಧರಿ ಮೋತಿಲಾಲ್ ವಾದ ಮಂಡಿಸಿದ್ದರು.
ಅಂತರ ರಾಜ್ಯ
Murder-ಆಸ್ತಿಗಾಗಿ ಬೆಲ್ಟ್‌ನಿಂದ ಕುತ್ತಿಗೆ ಬಿಗಿದು ಪತಿಯ ಕೊಲೆ: ಆಕಸ್ಮಿಕ ಸಾವೆಂದು ನಂಬಿಸಿದ್ದ ಪತ್ನಿ ಅರೆಸ್ಟ್
ಆಕಸ್ಮಿಕ ಸಾವು ಎಂದು ದಾಖಲಾಗಿದ್ದ 53 ವರ್ಷದ ವ್ಯಕ್ತಿಯೊಬ್ಬರ ಪ್ರಕರಣ ತನಿಖೆ ವೇಳೆ ಕೊಲೆಯಾಗಿ ಬಯಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿ ಅವರ ಪತ್ನಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೊಲ್ಲಂನ ಚೆರುಮೂಡು ಮೂಲದ ರಾಜು ಕೊಲೆಯಾದ ವ್ಯಕ್ತಿ.
ಕೊಲ್ಲಂ: ಆಕಸ್ಮಿಕ ಸಾವು ಎಂದು ದಾಖಲಾಗಿದ್ದ 53 ವರ್ಷದ ವ್ಯಕ್ತಿಯೊಬ್ಬರ ಪ್ರಕರಣ ತನಿಖೆ ವೇಳೆ ಕೊಲೆಯಾಗಿ ಬಯಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿ ಅವರ ಪತ್ನಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕೊಲ್ಲಂನ ಚೆರುಮೂಡು ಮೂಲದ ರಾಜು (53) ಅವರು ಬಣ್ಣ ಬಳಿಯುವ ಕೆಲಸ ಮಾಡುತ್ತಿದ್ದರು. ರಾಜು ಹಾಗೂ ಅವರ ಪತ್ನಿ ಲೇಖಾ ಮೇರಿ ನಡುವೆ ಆಸ್ತಿ ವಿಚಾರವಾಗಿ ಆಗಾಗ್ಗೆ ಜಗಳ ನಡೆಯುತ್ತಿತ್ತು ಎನ್ನಲಾಗಿದೆ. ಆಸ್ತಿ ಮೂಲತಃ ರಾಜು ಕುಟುಂಬಕ್ಕೆ ಸೇರಿದ್ದಾಗಿದ್ದು, ಬಳಿಕ ರಾಜು ಅವರ ಹೆಸರಿಗೆ ವರ್ಗಾವಣೆಯಾಗಿತ್ತು. ಆದರೆ ಸಂಪೂರ್ಣ ಆಸ್ತಿಯ ಮಾಲೀಕತ್ವ ತನಗೇ ಬೇಕೆಂದು ಲೇಖಾ ಪಟ್ಟು ಹಿಡಿದಿದ್ದರಿಂದ ದಂಪತಿ ನಡುವೆ ನಿರಂತರವಾಗಿ ಮನಸ್ತಾಪ ಉಂಟಾಗುತ್ತಿತ್ತು.
ಈ ಹಿನ್ನೆಲೆಯಲ್ಲಿ ಕೆಲಕಾಲ ಬೇರೆ ಬೇರೆಯಾಗಿದ್ದ ದಂಪತಿ, ಕಳೆದ ಒಂದು ವರ್ಷದಿಂದ ಮತ್ತೆ ಒಟ್ಟಿಗೆ ವಾಸಿಸುತ್ತಿದ್ದರು.
ಅ.2ರಂದು ಬೆಳಗ್ಗೆ ಸುಮಾರು 5.30ಕ್ಕೆ ರಾಜು ಮನೆಯಲ್ಲಿ ದಿಢೀರ್ ಕುಸಿದುಬಿದ್ದಿದ್ದಾರೆ ಎಂದು ಹೇಳಲಾಗಿತ್ತು. ತಕ್ಷಣ ಸಹೋದರ ಹಾಗೂ ನೆರೆಹೊರೆಯವರ ನೆರವಿನಿಂದ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಪರೀಕ್ಷಿಸಿದ ವೈದ್ಯರು ರಾಜು ಮೃತಪಟ್ಟಿರುವುದಾಗಿ ಘೋಷಿಸಿದರು.
ಆದರೆ ಮರಣೋತ್ತರ ಪರೀಕ್ಷೆ ವೇಳೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ. ರಾಜು ಸಾಮಾನ್ಯವಾಗಿ ಕುಸಿದುಬಿದ್ದು ಮೃತಪಟ್ಟಿಲ್ಲ ಎಂದು ಶಂಕಿಸಿರುವ ವೈದ್ಯರು, ಅವರ ಕುತ್ತಿಗೆಯ ಭಾಗದಲ್ಲಿ ಅನುಮಾನಾಸ್ಪದ ಗುರುತುಗಳು ಕಂಡುಬಂದಿರುವುದಾಗಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಈ ಹಿನ್ನೆಲೆಯಲ್ಲಿ ಪೊಲೀಸರು ರಾಜು ಅವರ ಪತ್ನಿ ಲೇಖಾ ಮೇರಿಯನ್ನು ವಿಚಾರಣೆ ನಡೆಸಿದಾಗ, ಆಸ್ತಿ ವಿಚಾರವಾಗಿ ಅ.2ರಂದು ಮತ್ತೆ ಜಗಳ ನಡೆದಿತ್ತು ಎಂದು ಆಕೆ ಒಪ್ಪಿಕೊಂಡಿದ್ದಾಳೆ ಎನ್ನಲಾಗಿದೆ. ಜಗಳದ ವೇಳೆ ಕೋಪಗೊಂಡು ಬೆಲ್ಟ್‌ನಿಂದ ಪತಿಯ ಕುತ್ತಿಗೆಯನ್ನು ಬಿಗಿದು ಕೊಲೆ ಮಾಡಿದ್ದಾಗಿ ಆಕೆ ಪೊಲೀಸರಿಗೆ ತಿಳಿಸಿದ್ದಾಳೆ ಎಂದು ಮೂಲಗಳು ಹೇಳಿವೆ.
ಬಳಿಕ ರಾಜು ಪ್ರಜ್ಞೆ ತಪ್ಪಿ ಬಿದ್ದಿರುವುದಾಗಿ ಅವರ ಸಹೋದರನಿಗೆ ಕರೆ ಮಾಡಿ ತಿಳಿಸಿದ್ದಳು ಎನ್ನಲಾಗಿದೆ.
ಕೊಲ್ಲಿ ರಾಷ್ಟ್ರದಲ್ಲಿ ಕೆಲಸ ಮಾಡಿ ಬಳಿಕ ವಾಪಸ್ ಬಂದಿದ್ದ ಲೇಖಾ ಮೇರಿ ಸದ್ಯ ಗೃಹಿಣಿಯಾಗಿದ್ದು, ದಂಪತಿಗೆ ಒಬ್ಬ ಮಗಳಿದ್ದಾಳೆ. ಪ್ರಕರಣದಲ್ಲಿ ಬೇರೆಯವರ ಕೈವಾಡವಿದೆಯೇ ಎಂಬ ಬಗ್ಗೆಯೂ ಕುಂದರ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಕ್ರೈಂ
Honeytrap-ಹಳೆಯ ದ್ವೇಷಕ್ಕೆ ಇನ್‌ಸ್ಟಾಗ್ರಾಂ ಹನಿಟ್ರ್ಯಾಪ್ ಅಸ್ತ್ರ: ಯುವಕನ ಕೊಲೆ ಪ್ರಕರಣ ಭೇದಿಸಿದ ಪೊಲೀಸರು; ನಾಲ್ವರ ಬಂಧನ
ಕಾಣೆಯಾಗಿದ್ದ ಯುವಕನೊಬ್ಬನ ಕೊಲೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದ್ದು, ಇನ್‌ಸ್ಟಾಗ್ರಾಂ ಮೂಲಕ ‘ಹನಿಟ್ರ್ಯಾಪ್’ ಮಾಡಿ ಯುವಕನನ್ನು ಬಲೆಗೆ ಬೀಳಿಸಿ ಕೊಲೆ ಮಾಡಿದ ಆರೋಪದ ಮೇಲೆ ನಾಲ್ವರನ್ನು ಬೆಳಗಾವಿ ನಗರ ಪೊಲೀಸರು ಬಂಧಿಸಿದ್ದಾರೆ. ಮೃತ ಯುವಕನನ್ನು ಬೆಳಗಾವಿಯ ಗಾಂಧಿನಗರ ನಿವಾಸಿ ಸರ್ವೇಶ ಕಂಗ್ರಾಳಕರ ಎಂದು ಗುರುತಿಸಲಾಗಿದೆ.
ಬೆಳಗಾವಿ: ಕಾಣೆಯಾಗಿದ್ದ ಯುವಕನೊಬ್ಬನ ಕೊಲೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದ್ದು, ಇನ್‌ಸ್ಟಾಗ್ರಾಂ ಮೂಲಕ ‘ಹನಿಟ್ರ್ಯಾಪ್’ ಮಾಡಿ ಯುವಕನನ್ನು ಬಲೆಗೆ ಬೀಳಿಸಿ ಕೊಲೆ ಮಾಡಿದ ಆರೋಪದ ಮೇಲೆ ನಾಲ್ವರನ್ನು ಬೆಳಗಾವಿ ನಗರ ಪೊಲೀಸರು ಬಂಧಿಸಿದ್ದಾರೆ.
ಮೃತ ಯುವಕನನ್ನು ಬೆಳಗಾವಿಯ ಗಾಂಧಿನಗರ ನಿವಾಸಿ ಸರ್ವೇಶ ಕಂಗ್ರಾಳಕರ ಎಂದು ಗುರುತಿಸಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಶಶಿ ಜಾಲಗಾರ, ರಾಹುಲ್ ಜಾಲಗಾರ, ದಶರತ ರಜಪೂತ ಹಾಗೂ ಅರುಣ ಹುಲ್ಲೋಳಿ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಬೆಳಗಾವಿ ನಗರ ಪೊಲೀಸ್ ಆಯುಕ್ತ ಪ್ರಕಾಶ್ ನಿಕಮ್ ಅವರ ಮಾರ್ಗದರ್ಶನದಲ್ಲಿ ಮಾಳಮಾರುತಿ ಠಾಣೆ ಸಿಪಿಐ ಬಿ.ಆರ್. ಗಡೇಕರ್ ನೇತೃತ್ವದ ತಂಡ ತನಿಖೆ ನಡೆಸಿ ಪ್ರಕರಣವನ್ನು ಭೇದಿಸಿದೆ.
ಹಣಕಾಸಿನ ವಿಚಾರದ ದ್ವೇಷವೇ ಕೊಲೆಗೆ ಕಾರಣ?
ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, 2025ರಲ್ಲಿ ನಡೆದ ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದ ಜಗಳವೇ ಕೊಲೆಗೆ ಪ್ರಮುಖ ಕಾರಣ ಎನ್ನಲಾಗಿದೆ. ಈ ಸಂದರ್ಭದಲ್ಲಿ ಸರ್ವೇಶ ಹಾಗೂ ಶಶಿ ಜಾಲಗಾರ ನಡುವೆ ಗಲಾಟೆ ನಡೆದಿದ್ದು, ಸರ್ವೇಶ ಅವರು ಶಶಿ ಮೇಲೆ ಹಲ್ಲೆ ನಡೆಸಿದ್ದರು ಎನ್ನಲಾಗಿದೆ. ಇದರಿಂದ ಇಬ್ಬರ ನಡುವೆ ವೈಷಮ್ಯ ಬೆಳೆದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಈ ಹಳೆಯ ದ್ವೇಷವನ್ನೇ ಮುಂದಿಟ್ಟುಕೊಂಡು ಶಶಿ ಜಾಲಗಾರ ತನ್ನ ಸಹಚರರೊಂದಿಗೆ ಸೇರಿ ಸರ್ವೇಶನ ಕೊಲೆಗೆ ಸಂಚು ರೂಪಿಸಿದ್ದಾನೆ ಎನ್ನುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಯುವತಿಯ ಹೆಸರಿನಲ್ಲಿ ನಕಲಿ ಖಾತೆ
ಕೊಲೆಗೆ ಆರೋಪಿಗಳು ಇನ್‌ಸ್ಟಾಗ್ರಾಂ ಬಳಸಿಕೊಂಡಿದ್ದಾರೆ ಎನ್ನಲಾಗಿದೆ. ಯುವತಿಯ ಹೆಸರಿನಲ್ಲಿ ನಕಲಿ ಇನ್‌ಸ್ಟಾಗ್ರಾಂ ಖಾತೆ ಸೃಷ್ಟಿಸಿ, ಅದರ ಮೂಲಕ ಸರ್ವೇಶನಿಗೆ ಸಂದೇಶ ಕಳುಹಿಸಿ ಆತನೊಂದಿಗೆ ಆತ್ಮೀಯತೆ ಬೆಳೆಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಬಳಿಕ ಇದೇ ಪರಿಚಯವನ್ನು ಬಳಸಿಕೊಂಡು ಸರ್ವೇಶನನ್ನು ನಿರ್ದಿಷ್ಟ ಸ್ಥಳಕ್ಕೆ ಕರೆಸಿಕೊಂಡು ಕೊಲೆ ಮಾಡಲಾಗಿದೆ ಎನ್ನಲಾಗಿದೆ.
ಅಂತರ ರಾಜ್ಯ
Arrested-ಪೊಲೀಸರೆಂದು ಹೇಳಿಕೊಂಡು 17 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ; ಮೂವರ ಬಂಧನ
ದಕ್ಷಿಣ ದಿಲ್ಲಿಯ ಆಸ್ಥಾ ಕುಂಜ್ ಉದ್ಯಾನವನದಲ್ಲಿ ಪೊಲೀಸರಂತೆ ವೇಷ ಧರಿಸಿದ್ದ ಮೂವರು ವ್ಯಕ್ತಿಗಳು 17 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಸೋಮವಾರ ಸಂಜೆ ನಡೆದ ಘಟನೆಗೆ ಸಂಬಂಧಿಸಿದಂತೆ ಬಾಲಕಿ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.
ಹೊಸದಿಲ್ಲಿ: ದಕ್ಷಿಣ ದಿಲ್ಲಿಯ ಆಸ್ಥಾ ಕುಂಜ್ ಉದ್ಯಾನವನದಲ್ಲಿ ಪೊಲೀಸರಂತೆ ವೇಷ ಧರಿಸಿದ್ದ ಮೂವರು ವ್ಯಕ್ತಿಗಳು 17 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಸೋಮವಾರ ಸಂಜೆ ನಡೆದ ಘಟನೆಗೆ ಸಂಬಂಧಿಸಿದಂತೆ ಬಾಲಕಿ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.
ಫರಿದಾಬಾದ್ ನಿವಾಸಿಯಾಗಿರುವ ಬಾಲಕಿ ತನ್ನ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಪ್ರಾರ್ಥನೆ ಸಲ್ಲಿಸಲು 17 ವರ್ಷದ ಸ್ನೇಹಿತನೊಂದಿಗೆ ಕಾಲ್ಕಾಜಿ ದೇವಸ್ಥಾನಕ್ಕೆ ತೆರಳಿದ್ದಳು. ಬಳಿಕ ಸಮೀಪದ ಇಸ್ಕಾನ್ ದೇವಸ್ಥಾನಕ್ಕೆ ತೆರಳುವ ಮುನ್ನ ಇಬ್ಬರೂ ಆಸ್ಥಾ ಕುಂಜ್ ಉದ್ಯಾನವನಕ್ಕೆ ಹೋಗಿದ್ದರು.
ಉದ್ಯಾನವನದ ಗೇಟ್ ನಂ.7 ಮೂಲಕ ಪ್ರವೇಶಿಸಿ ಬೆಂಚ್‌ನಲ್ಲಿ ಕುಳಿತಿದ್ದ ವೇಳೆ 30ರಿಂದ 35 ವರ್ಷ ವಯಸ್ಸಿನ ಮೂವರು ವ್ಯಕ್ತಿಗಳು ಅಲ್ಲಿಗೆ ಬಂದಿದ್ದರು. ತಾವು ಪೊಲೀಸರು ಎಂದು ಪರಿಚಯಿಸಿಕೊಂಡ ಅವರು, ಉದ್ಯಾನವನದಲ್ಲಿ ಏಕೆ ಕುಳಿತಿದ್ದೀರಿ ಎಂದು ಬಾಲಕಿ ಹಾಗೂ ಆಕೆಯ ಸ್ನೇಹಿತನನ್ನು ಪ್ರಶ್ನಿಸಿದ್ದರು ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.
ಆರೋಪಿಗಳು ಬಾಲಕಿಯ ಸ್ನೇಹಿತನಿಗೆ ಹಲ್ಲೆ ನಡೆಸಿ, ಇಬ್ಬರ ಮೊಬೈಲ್ ಫೋನ್‌ಗಳನ್ನು ಕಸಿದುಕೊಂಡಿದ್ದರು ಎನ್ನಲಾಗಿದೆ. ಬಳಿಕ ಒಬ್ಬ ಆರೋಪಿಯು ಬಾಲಕಿಯ ಸ್ನೇಹಿತನನ್ನು ದೂರಕ್ಕೆ ಕರೆದೊಯ್ದಿದ್ದು, ಇತರರು ಬಾಲಕಿಯನ್ನು ಉದ್ಯಾನವನದ ಪೊದೆಗಳಿರುವ ಪ್ರದೇಶದತ್ತ ಕರೆದೊಯ್ದಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಎಫ್‌ಐಆರ್ ಪ್ರಕಾರ, ಆರೋಪಿಗಳಲ್ಲಿ ಒಬ್ಬನಾದ ಆಸಿಫ್ ಬಂದೂಕು ತೋರಿಸಿ ಬಾಲಕಿಗೆ ಬೆದರಿಸಿದ್ದಾನೆ. ಬಳಿಕ ಕತ್ತಲೆಯ ಪ್ರದೇಶಕ್ಕೆ ಕರೆದೊಯ್ದು ಚಾಕುವಿನಿಂದ ಬೆದರಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.
ದೌರ್ಜನ್ಯದ ಬಳಿಕ ಬಾಲಕಿಯ ಬಟ್ಟೆ ಹಾಗೂ ಮೊಬೈಲ್ ಫೋನ್‌ಗಳನ್ನು ವಾಪಸ್ ನೀಡಿದ್ದ ಆರೋಪಿಗಳು, ಘಟನೆ ಬಗ್ಗೆ ಯಾರಿಗೂ ತಿಳಿಸದಂತೆ ಬೆದರಿಕೆ ಹಾಕಿದ್ದರು ಎನ್ನಲಾಗಿದೆ. ಬಳಿಕ ಬಾಲಕಿ ತನ್ನ ಸ್ನೇಹಿತನಿಗೆ ಘಟನೆಯ ಬಗ್ಗೆ ತಿಳಿಸಿದ್ದು, ಆತ ಪೊಲೀಸ್ ನಿಯಂತ್ರಣ ಕೊಠಡಿಗೆ (PCR) ಕರೆ ಮಾಡಿ ಮಾಹಿತಿ ನೀಡಿದ್ದಾನೆ.
ಮೂವರು ಆರೋಪಿಗಳ ಬಂಧನ
ಘಟನೆಯ ಆಘಾತದ ನಡುವೆಯೂ ಬಾಲಕಿಗೆ ಆರೋಪಿಗಳ ಹೆಸರು, ಅಡ್ಡಹೆಸರುಗಳು ಹಾಗೂ ಅವರು ಧರಿಸಿದ್ದ ಉಡುಪುಗಳ ಕುರಿತು ಕೆಲವು ವಿವರಗಳು ನೆನಪಿದ್ದವು ಎಂದು ಪೊಲೀಸರು ತಿಳಿಸಿದ್ದಾರೆ.
ಬಾಲಕಿ ನೀಡಿದ ಮಾಹಿತಿಯ ಆಧಾರದ ಮೇಲೆ ಪೊಲೀಸರು 30 ವರ್ಷದ ಆಸಿಫ್‌ನನ್ನು ಪತ್ತೆಹಚ್ಚಿದ್ದಾರೆ. ಮಂಗಳವಾರ ಮುಂಜಾನೆ ನಡೆದ ಗುಂಡಿನ ಚಕಮಕಿಯ ಬಳಿಕ ಆತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆತನ ಸಹಚರರಾದ 31 ವರ್ಷದ ಹೇಮಂತ್ ಸಿಂಗ್ ಹಾಗೂ ಆತನ ಕಿರಿಯ ಸಹೋದರ ಮುಕೇಶ್ ಸಿಂಗ್ ಅವರನ್ನು ಶ್ರೀನಿವಾಸಪುರಿಯಲ್ಲಿರುವ ಅವರ ಮನೆಯಿಂದ ವಶಕ್ಕೆ ಪಡೆದು ಬಂಧಿಸಲಾಗಿದೆ.
ಪ್ರಕರಣದ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದು, ಎಫ್‌ಐಆರ್‌ನಲ್ಲಿ ದಾಖಲಿಸಿರುವ ಆರೋಪಗಳ ಆಧಾರದ ಮೇಲೆ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ.
ಉದ್ಯಾನವನದ ಭದ್ರತೆ ಬಗ್ಗೆ ಪ್ರಶ್ನೆ
ಘಟನೆಯ ಬಳಿಕ ಆಸ್ಥಾ ಕುಂಜ್ ಉದ್ಯಾನವನದ ಭದ್ರತೆ ಮತ್ತು ನಿರ್ವಹಣೆ ಕುರಿತು ಸ್ಥಳೀಯ ನಿವಾಸಿಗಳು ಕಳವಳ ವ್ಯಕ್ತಪಡಿಸಿದ್ದಾರೆ. ಉದ್ಯಾನವನದ ಕೆಲವು ಭಾಗಗಳಲ್ಲಿ ಸಮರ್ಪಕ ಬೆಳಕಿನ ವ್ಯವಸ್ಥೆ ಹಾಗೂ ಭದ್ರತಾ ಸಿಬ್ಬಂದಿಯ ಕೊರತೆ ಇರುವುದರಿಂದ ಇಂತಹ ಘಟನೆಗಳಿಗೆ ಅವಕಾಶವಾಗುತ್ತಿದೆ ಎಂಬ ಆರೋಪಗಳು ಕೇಳಿಬಂದಿವೆ.
-
ನಿಧನ ವಾರ್ತೆ15 hours agoUppinangadi-ಉಪ್ಪಿನಂಗಡಿ: ಸೇತುವೆ ಮೇಲೆ ಬೈಕ್, ಮೊಬೈಲ್ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ನದಿಯಲ್ಲಿ ಶವವಾಗಿ ಪತ್ತೆ
-
ಬಿಗ್ ನ್ಯೂಸ್20 hours agoBantwal-Big Breaking-ದ.ಕ. ಜಿಲ್ಲೆಯಲ್ಲಿ ಗುಡುಗು-ಮಿಂಚಿನ ಮಳೆ: ಸಿಡಿಲು ಬಡಿದು ಮನೆ ಜಖಂ-ಮಹಿಳೆ ಅಸ್ವಸ್ಥ
-
ಅಪರಾಧ21 hours agoPuttur-ಪುತ್ತೂರು: ಹಿಂಸಾತ್ಮಕ ರೀತಿಯಲ್ಲಿ 11 ಗೋವುಗಳ ಸಾಗಾಟ; ವಾಹನ ಪತ್ತೆ, ಇಬ್ಬರು ಪರಾರಿ
-
ಅಂತರ ರಾಜ್ಯ19 hours agoMurder-ಆಸ್ತಿಗಾಗಿ ಬೆಲ್ಟ್‌ನಿಂದ ಕುತ್ತಿಗೆ ಬಿಗಿದು ಪತಿಯ ಕೊಲೆ: ಆಕಸ್ಮಿಕ ಸಾವೆಂದು ನಂಬಿಸಿದ್ದ ಪತ್ನಿ ಅರೆಸ್ಟ್
-
ಸ್ಥಳೀಯ20 hours agoCrop insurance-ಬೆಳೆ ವಿಮೆಯಲ್ಲಿ ಭಾರೀ ಇಳಿಕೆ – ದ.ಕ. ಜಿಲ್ಲೆಯ ಅಡಿಕೆ, ಕಾಳುಮೆಣಸು ಬೆಳೆಗಾರರು ಶಾಕ್..!; ಬೇಗನೆ ಜಮೆಯಾದರೂ ಪರಿಹಾರ ಮೊತ್ತದಲ್ಲಿ ಭಾರೀ ಇಳಿಕೆ; ಲೆಕ್ಕಾಚಾರ ಬಹಿರಂಗಕ್ಕೆ ಆಗ್ರಹ
-
ನಿಧನ ವಾರ್ತೆ18 hours agoAccident-ಹುತಾತ್ಮ ಸೈನಿಕನ ಮೃತದೇಹ ಕೊಂಡೊಯ್ಯುತ್ತಿದ್ದ ಆಂಬ್ಯುಲೆನ್ಸ್ ಅಪಘಾತ: ಸೈನಿಕನ ಮಗ, ಸಹೋದರ ಸೇರಿ ನಾಲ್ವರು ಸಾವು
-
ನಿಧನ ವಾರ್ತೆ20 hours agoLalitamma-ಸುಂಟರಗಾಳಿ’, ‘ಜಂಗ್ಲಿ’ ಖ್ಯಾತಿಯ ಹಿರಿಯ ನಟಿ ಲಲಿತಮ್ಮ ನಿಧನ
-
ರಾಜಕೀಯ14 hours agoPuttur-ಪುತ್ತೂರು: ಅಲ್ಪಸಂಖ್ಯಾತ ಸೇವಾ ಕೇಂದ್ರ ಉದ್ಘಾಟನೆಗೆ ಬಿಜೆಪಿ ಮೋರ್ಚಾದಿಂದ ಆಗ್ರಹ


















