ಉದ್ಯೋಗ
KSRTC Recruitment-KSRTC Recruitment 2024 : ಭರ್ಜರಿ 13000 ಚಾಲಕ ಹುದ್ದೆ ನೇಮಕಾತಿ; 7th ಪಾಸಾದವರು ಅರ್ಜಿ ಸಲ್ಲಿಸಿ
ಬೆಂಗಳೂರು, ಜೂ. 30: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಭರ್ಜರಿ ಉದ್ಯೋಗ ನೇಮಕಾತಿ ಆರಂಭಿಸಿದೆ. ಈ ಸಂಬಂಧ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸರ್ಕಾರಿ ಉದ್ಯೋಗ ಪಡೆಯಲು ಇಚ್ಛಿಸುವವರು ಕೂಡಲೇ ಅರ್ಜಿ ಸಲ್ಲಿಸಬೇಕು.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಒಟ್ಟು 13000 ಕ್ಕೂ ಹೆಚ್ಚು ಚಾಲಕ ಹುದ್ದೆಗಳ ನೇಮಕಾತಿ ನಡೆಯಲಿದೆ. ಇದರ ನೇಮಕಾತಿಗೆ ನಿರ್ಧರಿಸಿರುವ ಸಾರಿಗೆ ಇಲಾಖೆ ಶೀಘ್ರವೇ ಭರ್ತಿ ಮಾಡಿಕೊಳ್ಳಲಿದೆ. ಈ ಕುರಿತು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ತಿಳಿಸುತ್ತಲೇ ಇದ್ದಾರೆ. ಆದರೆ ಅರ್ಹ ಅಭ್ಯರ್ಥಿಗಳು ಯಾವಾಗ ಇದೆಲ್ಲ ನೇಮಕಾತಿ ನಡೆಯಲಿದೆ ಎಂದು ಕಾತರರಾಗಿದ್ದಾರೆ.
ಸದ್ಯ ಖಾಲಿ ಇರುವ ಕೆಎಸ್ಆರ್ಟಿಸಿ ಬಸ್ ಚಾಲಕರ ಹುದ್ದೆಗಳನ್ನು ಆಯಾ ಬಸ್ ಡಿಪೋಗಳು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲು ಪ್ರಕಟಣೆ ಹೊರಡಿಸಿವೆ. ಹಾಗಾದರೆ ಎಲ್ಲೆಲ್ಲಿ KSRTC ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತದೆ ಎಂದು ಇಲ್ಲಿ ತಿಳಿಯಿರಿ.
ನೇಮಕಾತಿ ಪೂರ್ಣ ವಿವರ
ಸಂಸ್ಥೆ ಹೆಸರು: ಕೆಎಸ್ಆರ್ಟಿಸಿ
ಹುದ್ದೆ ಹೆಸರು: ಚಾಲಕ ಹುದ್ದೆಗಳು (ಹೊರಗುತ್ತಿಗೆ ಆಧಾರದಲ್ಲಿ)
ಒಟ್ಟು ಹುದ್ದೆ: 13000
ಉದ್ಯೋಗ ಸ್ಥಳ: ಬೆಂಗಳೂರು, ರಾಮನಗರ, ಆನೇಕಲ್ ಹಾಗೂ ಇತರ ಕಡೆ
ಮಾಸಿಕ ವೇತನ : 23,700 ರೂ., (PF, ESI ಸೌಲಭ್ಯ ಇರಲಿದೆ)
ಶೈಕ್ಷಣಿಕ ಅರ್ಹತೆಗಳು ಏನು?
ಚಾಲಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 7ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಇದರೊಂದಿಗೆ ಮಾನ್ಯತೆ ಪಡೆದ ವಾಹನ ಚಾಲನೆಯ ಪರವಾನಗಿ ಹೊಂದಿರುವುದು ಕಡ್ಡಾಯ ಎಂದು ತಿಳಿಸಲಾಗಿದೆ.
ಸೇವಾ ಅನುಭವ, ಷರತ್ತುಗಳು:
ಅಭ್ಯರ್ಥಿಗಳು ಲಘು ಮೋಟಾರ್ ವಾಹನ ಚಾಲಕರಾಗಿ ಕನಿಷ್ಠ ಎರಡು ವರ್ಷಗಳ ಕೆಲಸ ಮಾಡಿದ ಅನುಭವ ಇರಬೇಕು. ಹೊರಗುತ್ತಿಗೆ ನೇಮಕಾತಿ ಇದಾಗಿದ್ದರಿಂದ ಹುದ್ದೆಗಳ ಮೇಲೆ ಅಭ್ಯರ್ಥಿಗಳಿಗೆ ಯಾವುದೇ ರೀತಿ ಹಕ್ಕು ಇರುವುದಿಲ್ಲ. ಖಾಯಂ ನೇಮಕಾತಿ ವೇಳೆ ಇವರನ್ನು ತೆರವು ಮಾಡಲಾಗುವುದು ಎಂಬ ಷರತ್ತು ವಿಧಿಸಲಾಗಿದೆ
ಅರ್ಜಿ ಸಲ್ಲಿಕೆ ವಿಧಾನ:
ಈ ಮೇಲ್ಕಂಡ ಮಾನದಂಡ, ಅರ್ಹತೆ, ಷರತ್ತುಗಳಿಗೆ ಒಪ್ಪಿ ದಾಖಲೆಗಳನ್ನು ಸಲ್ಲಿಸುವ ಅಭ್ಯರ್ಥಿಗಳ ಅರ್ಜಿಗಳು ಮಾತ್ರವೇ ಮಾನ್ಯ ಆಗಲಿವೆ.
ಅಭ್ಯರ್ಥಿಗಳ ಆಯ್ಕೆ ಹೇಗೆ?
ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಗಳಿಗೆ ಚಾಲನೆ ತರಬೇತಿಯನ್ನು ನೀಡಿ ಪರೀಕ್ಷೆಯನ್ನು ನಡೆಸಿ ಸಂದರ್ಶನ ಹಾಗೂ ದಾಖಲೆಗಳ ಪರಿಶೀಲನೆಯ ಜೊತೆ ನೇಮಕಾತಿಯನ್ನು ಮಾಡಿಕೊಳ್ಳಲಾಗುವುದು ಎಂದು ನಿಗಮ ಮಾಹಿತಿ ನೀಡಿದೆ.
ನೇಮಕಾತಿ ಕುರಿತು ಹೆಚ್ಚಿನ ಮಾಹಿತಿ ಸಂಪರ್ಕ
ರಾಮನಗರ ಮತ್ತು ಆನೇಕಲ್ KSRTC – 8090980889-8618876846
ಚಾಮರಾಜನಗರ KSRTC – 8050980889- 8618876846 ಇಲ್ಲಿಗೆ ಕರೆ ಮಾಡಿ ನಿಮ್ಮ ಅನುಮಾನಗಳನ್ನು ಬಗೆಹರಿಸಿಕೊಳ್ಳಬೇಕು.
ಈ ಮೇಲಿನ ಡಿಪೋಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸಲು ವಾಹನ ಚಾಲಕರು ತಕ್ಷಣ ಬೇಕಾಗಿದ್ದಾರೆ ಎಂದು ಸಾರಿಗೆ ನಿಗಮ ತಿಳಿಸಿದೆ. ಸರ್ಕಾರಿ ವ್ಯಾಪ್ತಿಯಲ್ಲಿ ಕೆಲಸ ಮಾಡುವ ಆಸಕ್ತರು ಈ ಕೂಡಲೇ ಈ ಮೇಲಿನ ಸಹಾಯವಾಣಿಗೆ ಸಂಪರ್ಕಿಸಬೇಕಿದೆ.
ಸುಳ್ಯ
Puttur-ಸುಳ್ಯ ಮತ್ತು ಪುತ್ತೂರಿನಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ನೇರ ಸಂದರ್ಶನ
ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕ್ಷೇತ್ರದಲ್ಲಿ ಪ್ರಸಿದ್ಧಿ ಪಡೆದಿರುವ ‘ವಿದ್ಯಾಮಾತಾ ಅಕಾಡೆಮಿ’ ಸಂಸ್ಥೆಯು ತನ್ನ ವಿವಿಧ ಶಾಖೆ ಮತ್ತು ವಿಭಾಗಗಳಿಗೆ ಅಗತ್ಯವಿರುವ ನೌಕರರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ನೇರ ಸಂದರ್ಶನವನ್ನು ಆಯೋಜಿಸಿದೆ.
ಪುತ್ತೂರು: ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕ್ಷೇತ್ರದಲ್ಲಿ ಪ್ರಸಿದ್ಧಿ ಪಡೆದಿರುವ ‘ವಿದ್ಯಾಮಾತಾ ಅಕಾಡೆಮಿ’ ಸಂಸ್ಥೆಯು ತನ್ನ ವಿವಿಧ ಶಾಖೆ ಮತ್ತು ವಿಭಾಗಗಳಿಗೆ ಅಗತ್ಯವಿರುವ ನೌಕರರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ನೇರ ಸಂದರ್ಶನವನ್ನು ಆಯೋಜಿಸಿದೆ.
ಸಂಸ್ಥೆಯಲ್ಲಿ ಖಾಲಿ ಇರುವ ಕಂಪ್ಯೂಟರ್ ಶಿಕ್ಷಕಿ ಹಾಗೂ ಬಿಸಿನೆಸ್ ಡೆವಲಪ್ಮೆಂಟ್ ಆಫೀಸರ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತಿದ್ದು, ಆಸಕ್ತರು ಈ ಅವಕಾಶವನ್ನು ಪಡೆದುಕೊಳ್ಳಬಹುದಾಗಿದೆ.
ಸುಳ್ಯ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸಲು ಮಹಿಳಾ ಕಂಪ್ಯೂಟರ್ ಶಿಕ್ಷಕಿಯ ಹುದ್ದೆಗೆ ಅರ್ಹ ಅಭ್ಯರ್ಥಿಗಳ ಅಗತ್ಯವಿದೆ. ಅದೇ ರೀತಿ, ಪುತ್ತೂರು ಹಾಗೂ ಅದರ ಸುತ್ತಮುತ್ತಲಿನ ಭಾಗಗಳಲ್ಲಿ ಕಾರ್ಯನಿರ್ವಹಿಸಲು ಬಿಸಿನೆಸ್ ಡೆವಲಪ್ಮೆಂಟ್ ಆಫೀಸರ್ (Business Development Officer) ಹುದ್ದೆಗೆ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ತಮ್ಮ ವೃತ್ತಿಜೀವನವನ್ನು ಉತ್ತಮ ರೀತಿಯಲ್ಲಿ ರೂಪಿಸಿಕೊಳ್ಳಲು ಬಯಸುವ ಹಾಗೂ ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುವ ಅಭ್ಯರ್ಥಿಗಳಿಗೆ ಇದು ಸೂಕ್ತ ವೇದಿಕೆಯಾಗಿದೆ.
ಈ ಹುದ್ದೆಗಳಿಗೆ ಸಂಬಂಧಿಸಿದಂತೆ ನೇರ ಸಂದರ್ಶನವು ದಿನಾಂಕ 26-10-2026 ರಂದು ಬೆಳಿಗ್ಗೆ 10ಕ್ಕೆ ನಡೆಯಲಿದೆ.
ಉದ್ಯೋಗ
Puttur-Salesನಿಂದ Technicianವರೆಗೆ; ಪುತ್ತೂರಿನ ಶ್ರೀ ತಿರುಮಲಾ TVSನಲ್ಲಿ ಭರ್ಜರಿ Job Opening
ಉದ್ಯೋಗ ಹುಡುಕುತ್ತಿರುವ ಯುವಕ-ಯುವತಿಯರಿಗೆ ಇಲ್ಲಿದೆ ಉತ್ತಮ ಅವಕಾಶ. ದ್ವಿಚಕ್ರ ವಾಹನ ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವವರಿಗೆ ಪುತ್ತೂರಿನ ಶ್ರೀ ತಿರುಮಲಾ TVS ಸಂಸ್ಥೆಯಲ್ಲಿ ಸೇಲ್ಸ್, ಸರ್ವೀಸ್, ಅಕೌಂಟ್ಸ್, ಫೈನಾನ್ಸ್, ಇನ್ಶೂರೆನ್ಸ್ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಹಲವು ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ.
ಪುತ್ತೂರು: ಉದ್ಯೋಗ ಹುಡುಕುತ್ತಿರುವ ಯುವಕ-ಯುವತಿಯರಿಗೆ ಇಲ್ಲಿದೆ ಉತ್ತಮ ಅವಕಾಶ. ದ್ವಿಚಕ್ರ ವಾಹನ ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವವರಿಗೆ ಪುತ್ತೂರಿನ ಶ್ರೀ ತಿರುಮಲಾ TVS ಸಂಸ್ಥೆಯಲ್ಲಿ ಸೇಲ್ಸ್, ಸರ್ವೀಸ್, ಅಕೌಂಟ್ಸ್, ಫೈನಾನ್ಸ್, ಇನ್ಶೂರೆನ್ಸ್ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಹಲವು ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ.
TVS ಸಂಸ್ಥೆಯ ಪ್ರೀಮಿಯಂ, EV ಹಾಗೂ IC ವಿಭಾಗಗಳಲ್ಲಿ ಉದ್ಯೋಗಾವಕಾಶ ಕಲ್ಪಿಸಲಾಗಿದ್ದು, ‘ಪುತ್ತೂರಿನ ಅತಿದೊಡ್ಡ 2-ವೀಲರ್ ಜಾಬ್ ಓಪನಿಂಗ್’ ಎಂಬ ಘೋಷಣೆಯೊಂದಿಗೆ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ.
ಸೇಲ್ಸ್ ವಿಭಾಗದಲ್ಲಿ ಹಲವು ಅವಕಾಶ
ಪುತ್ತೂರು ಸೇಲ್ಸ್ ವಿಭಾಗದಲ್ಲಿ ಸೇಲ್ಸ್ ಎಕ್ಸಿಕ್ಯೂಟಿವ್, ಸೇಲ್ಸ್ ಮ್ಯಾನೇಜರ್, ಎಕ್ಸ್ಚೇಂಜ್ ಕೋಆರ್ಡಿನೇಟರ್, ಸೇಲ್ಸ್ ಟೆಲಿಕಾಲಿಂಗ್ (CRE), ಅಕೌಂಟ್ಸ್ ಮ್ಯಾನೇಜರ್, ಫೈನಾನ್ಸ್ ಮ್ಯಾನೇಜರ್, ರಿಸೆಪ್ಷನಿಸ್ಟ್, RTO ಎಕ್ಸಿಕ್ಯೂಟಿವ್, ಇನ್ವಾಯ್ಸ್ ಎಕ್ಸಿಕ್ಯೂಟಿವ್, ಅಕೌಂಟ್ಸ್ ಎಕ್ಸಿಕ್ಯೂಟಿವ್, ಫೈನಾನ್ಸ್ ಕೋಆರ್ಡಿನೇಟರ್ ಹಾಗೂ ಇನ್ಶೂರೆನ್ಸ್ ಎಕ್ಸಿಕ್ಯೂಟಿವ್ ಸೇರಿದಂತೆ ಹಲವು ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.

ಸರ್ವೀಸ್ ವಿಭಾಗದಲ್ಲೂ ಭರ್ಜರಿ ನೇಮಕಾತಿ
ಸರ್ವೀಸ್ ವಿಭಾಗದಲ್ಲಿ ಅಡ್ವೈಸರ್, ಫ್ಲೋರ್ ಸೂಪರ್ವೈಸರ್, ಟೆಕ್ನಿಷಿಯನ್, ಪಾರ್ಟ್ಸ್ ಪಿಕರ್, ಬಿಲ್ಲಿಂಗ್/ರಿಸೆಪ್ಷನಿಸ್ಟ್ ಎಕ್ಸಿಕ್ಯೂಟಿವ್, ಪಾರ್ಟ್ಸ್ ಮ್ಯಾನೇಜರ್, ವಾಷಿಂಗ್ ಸಿಬ್ಬಂದಿ, PDI ಟೆಕ್ನಿಷಿಯನ್, ಸರ್ವೀಸ್ ಮ್ಯಾನೇಜರ್, ನೆಟ್ವರ್ಕ್ ಕೋಆರ್ಡಿನೇಟರ್, ವಾರಂಟಿ ಇನ್ಚಾರ್ಜ್, ಅಕ್ಸಿಡೆಂಟ್ ಸೂಪರ್ವೈಸರ್, CRE ಟೆಲಿಕಾಲಿಂಗ್, CRM, PDI ಸೂಪರ್ವೈಸರ್ ಹಾಗೂ ಪೇಂಟರ್ ಮತ್ತು ಡೆಂಟಿಂಗ್ ಹುದ್ದೆಗಳಿಗೆ ಅವಕಾಶವಿದೆ.

ಬೆಳ್ಳಾರೆಯಲ್ಲೂ ಉದ್ಯೋಗದ ಬಾಗಿಲು ತೆರೆದಿದೆ
ಬೆಳ್ಳಾರೆ ಭಾಗದಲ್ಲಿಯೂ ಉದ್ಯೋಗಾವಕಾಶ ಕಲ್ಪಿಸಲಾಗಿದೆ. ಸರ್ವೀಸ್ ವಿಭಾಗದಲ್ಲಿ ಅಡ್ವೈಸರ್, ಪಾರ್ಟ್ಸ್ ಪಿಕರ್, ಬಿಲ್ಲಿಂಗ್/ರಿಸೆಪ್ಷನಿಸ್ಟ್ ಎಕ್ಸಿಕ್ಯೂಟಿವ್, ಫ್ಲೋರ್ ಸೂಪರ್ವೈಸರ್, ಟೆಕ್ನಿಷಿಯನ್ ಹಾಗೂ ವಾಷಿಂಗ್ ಸಿಬ್ಬಂದಿ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.

ಸೇಲ್ಸ್ ವಿಭಾಗದಲ್ಲಿ 6 ಸೇಲ್ಸ್ ಎಕ್ಸಿಕ್ಯೂಟಿವ್ ಹಾಗೂ 2 ರಿಸೆಪ್ಷನಿಸ್ಟ್ ಹುದ್ದೆಗಳಿಗೂ ಅವಕಾಶವಿದೆ.
PF, ESI ಜೊತೆಗೆ ₹25 ಸಾವಿರದವರೆಗೆ ಗಳಿಕೆ!
ಆಯ್ಕೆಯಾಗುವ ಅಭ್ಯರ್ಥಿಗಳಿಗೆ PF, ESI, ಸ್ಪಾಟ್ ಇನ್ಸೆಂಟಿವ್, ಮಾಸಿಕ ಹಾಗೂ ತ್ರೈಮಾಸಿಕ ಇನ್ಸೆಂಟಿವ್ ಸೌಲಭ್ಯಗಳು ದೊರೆಯಲಿವೆ. 25 ಕಿ.ಮೀ.ಗಿಂತ ಹೆಚ್ಚಿನ ಪ್ರಯಾಣಕ್ಕೆ ಪೆಟ್ರೋಲ್ ವೋಚರ್ ನೀಡಲಾಗುತ್ತಿದ್ದು, ಅರ್ಹ ಅಭ್ಯರ್ಥಿಗಳಿಗೆ ತಿಂಗಳಿಗೆ ₹25,000 ವರೆಗೆ ಗಳಿಸುವ ಅವಕಾಶ ಇದೆ ಎಂದು ಸಂಸ್ಥೆ ತಿಳಿಸಿದೆ.
ದ್ವಿಚಕ್ರ ವಾಹನ ಕ್ಷೇತ್ರದಲ್ಲಿ ಆಸಕ್ತಿ ಹೊಂದಿರುವವರು ಮಾತ್ರವಲ್ಲದೆ, ಸೇಲ್ಸ್, ಅಕೌಂಟ್ಸ್, ಫೈನಾನ್ಸ್, ಟೆಲಿಕಾಲಿಂಗ್, ಗ್ರಾಹಕ ಸೇವೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಉದ್ಯೋಗ ಹುಡುಕುತ್ತಿರುವವರೂ ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ.
ಉದ್ಯೋಗಾವಕಾಶ ಸೀಮಿತವಾಗಿರುವುದರಿಂದ ಆಸಕ್ತ ಅಭ್ಯರ್ಥಿಗಳು ಕೂಡಲೇ ಸಂಪರ್ಕಿಸಬಹುದು.
📞 ಸಂಪರ್ಕ: +91 82965 79206
📍 ವಿಳಾಸ: ಶ್ರೀ ತಿರುಮಲಾ TVS, ಬೈಪಾಸ್ ಜಂಕ್ಷನ್, ಮಂಜಲ್ಪಡ್ಡು, ಮೇನ್ ರೋಡ್, ಬೋಳ್ವಾರ್ ವೆಸ್ಟ್, ಪುತ್ತೂರು–574201.
ಉದ್ಯೋಗ
Constable recruitment: ಕಾನ್ಸ್ಟೆಬಲ್ ನೇಮಕಾತಿ: ಸೆ.28ರಿಂದ ದೈಹಿಕ ಪರೀಕ್ಷೆ; 3,991 ಹುದ್ದೆಗಳಿಗೆ 19,396 ಅಭ್ಯರ್ಥಿಗಳು
ರಾಜ್ಯ ಪೊಲೀಸ್ ಇಲಾಖೆಯ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ (ಆರ್ಪಿಸಿ ಮತ್ತು ಕೆಕೆ) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ದೇಹದಾರ್ಢ್ಯ ಪರೀಕ್ಷೆ (ಪಿಎಸ್ಟಿ) ಹಾಗೂ ಸಹಿಷ್ಣುತೆ ಪರೀಕ್ಷೆ (ಇಟಿ) ಸೆ.28ರಿಂದ ಆರಂಭವಾಗಲಿದೆ. ಪೊಲೀಸ್ ನೇಮಕಾತಿ ವಿಭಾಗವು ವಲಯವಾರು ವೇಳಾಪಟ್ಟಿಯನ್ನು ಪ್ರಕಟಿಸಿದೆ.
ಬೆಂಗಳೂರು, ಸೆ.25: ರಾಜ್ಯ ಪೊಲೀಸ್ ಇಲಾಖೆಯ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ (ಆರ್ಪಿಸಿ ಮತ್ತು ಕೆಕೆ) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ದೇಹದಾರ್ಢ್ಯ ಪರೀಕ್ಷೆ (ಪಿಎಸ್ಟಿ) ಹಾಗೂ ಸಹಿಷ್ಣುತೆ ಪರೀಕ್ಷೆ (ಇಟಿ) ಸೆ.28ರಿಂದ ಆರಂಭವಾಗಲಿದೆ. ಪೊಲೀಸ್ ನೇಮಕಾತಿ ವಿಭಾಗವು ವಲಯವಾರು ವೇಳಾಪಟ್ಟಿಯನ್ನು ಪ್ರಕಟಿಸಿದೆ.
ಈ ನೇಮಕಾತಿ ಪ್ರಕ್ರಿಯೆಯಡಿ ಒಟ್ಟು 3,991 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ರಾಜ್ಯಾದ್ಯಂತ 19,396 ಅಭ್ಯರ್ಥಿಗಳು ದೈಹಿಕ ಪರೀಕ್ಷೆಗೆ ಅರ್ಹತೆ ಪಡೆದಿದ್ದಾರೆ. ಉಳಿಕೆ ಮೂಲ ವೃಂದದ (ಆರ್ಪಿಸಿ) 3,395 ಹುದ್ದೆಗಳಿಗೆ 16,454 ಅಭ್ಯರ್ಥಿಗಳು ಹಾಗೂ ಕಲ್ಯಾಣ ಕರ್ನಾಟಕ (ಕೆಕೆ) ವೃಂದದ 596 ಹುದ್ದೆಗಳಿಗೆ 2,942 ಅಭ್ಯರ್ಥಿಗಳು ಪರೀಕ್ಷೆಗೆ ಆಯ್ಕೆಯಾಗಿದ್ದಾರೆ.
ಮಂಗಳೂರಿನಲ್ಲಿ 395 ಹುದ್ದೆಗಳಿಗೆ 1,803 ಅಭ್ಯರ್ಥಿಗಳು
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ (ಕಾರವಾರ), ಚಿಕ್ಕಮಗಳೂರು ಹಾಗೂ ಮಂಗಳೂರು ನಗರ ಘಟಕಗಳ ವ್ಯಾಪ್ತಿಯ 395 ಹುದ್ದೆಗಳಿಗೆ 1,803 ಅಭ್ಯರ್ಥಿಗಳು ದೈಹಿಕ ಪರೀಕ್ಷೆಯಲ್ಲಿ ಭಾಗವಹಿಸಲಿದ್ದಾರೆ. ಈ ಅಭ್ಯರ್ಥಿಗಳಿಗೆ ಸೆ.28ರಿಂದ ಅ.3ರವರೆಗೆ ಮಂಗಳೂರಿನ ಲಾಲ್ಬಾಗ್ನ ಮಂಗಳ ಕ್ರೀಡಾಂಗಣದಲ್ಲಿ ದೈಹಿಕ ಪರೀಕ್ಷೆ ನಡೆಯಲಿದೆ.
ಕರೆಪತ್ರ ಡೌನ್ಲೋಡ್ಗೆ ಸೂಚನೆ
ದೈಹಿಕ ಪರೀಕ್ಷೆಗೆ ಅರ್ಹತೆ ಪಡೆದ ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಅಧಿಕೃತ ವೆಬ್ಸೈಟ್ನಿಂದ ತಮ್ಮ ಕರೆಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳಬಹುದು. ಅಭ್ಯರ್ಥಿಗಳು ಕರೆಪತ್ರದಲ್ಲಿ ನಮೂದಿಸಿರುವ ದಿನಾಂಕದಂದು ನಿಗದಿತ ಪರೀಕ್ಷಾ ಕೇಂದ್ರಕ್ಕೆ ಕಡ್ಡಾಯವಾಗಿ ಹಾಜರಾಗುವಂತೆ ಪೊಲೀಸ್ ನೇಮಕಾತಿ ವಿಭಾಗ ಸೂಚಿಸಿದೆ.
ಕಾನ್ಸ್ಟೆಬಲ್ ಲಿಖಿತ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶ ಪ್ರಕಟ
ಇದೇ ವೇಳೆ, ಕೆಎಸ್ಆರ್ಪಿ, ಕೆಎಸ್ಐಎಸ್ಎಫ್ ಹಾಗೂ ಐಆರ್ಬಿ ಪೊಲೀಸ್ ಕಾನ್ಸ್ಟೆಬಲ್ ನೇಮಕಾತಿಗಾಗಿ ಸೆ.20ರಂದು ನಡೆದ ಲಿಖಿತ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶವನ್ನು ಕೇವಲ ಐದು ದಿನಗಳಲ್ಲಿ ಕೆಇಎ ಪ್ರಕಟಿಸಿದೆ.
ಪರೀಕ್ಷೆಯ ಫಲಿತಾಂಶಕ್ಕೆ ಆಕ್ಷೇಪಣೆಗಳಿದ್ದಲ್ಲಿ ಅಭ್ಯರ್ಥಿಗಳು ಸೆ.27ರೊಳಗೆ ನಿಗದಿತ ಲಿಂಕ್ ಮೂಲಕ ಸಲ್ಲಿಸಬಹುದು ಎಂದು ಕೆಇಎ ತಿಳಿಸಿದೆ.
ಉಳಿಕೆ ಮೂಲ ವೃಂದದ 1,13,390 ಹಾಗೂ ಕಲ್ಯಾಣ ಕರ್ನಾಟಕ ವೃಂದದ 33,061 ಅಭ್ಯರ್ಥಿಗಳು ಲಿಖಿತ ಪರೀಕ್ಷೆ ಬರೆದಿದ್ದರು. ಪರೀಕ್ಷೆ ನಡೆದ ದಿನವೇ ಎಲ್ಲ ಅಭ್ಯರ್ಥಿಗಳ ಒಎಂಆರ್ ಉತ್ತರ ಪತ್ರಿಕೆಗಳನ್ನು ಸ್ಕ್ಯಾನ್ ಮಾಡಿ ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಲಾಗಿತ್ತು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ.
-
ಬಿಗ್ ನ್ಯೂಸ್9 hours agoBail rejected-ಸಿದ್ದರಾಮಯ್ಯ ವಿರುದ್ಧದ ‘ಸ್ಟಿಂಗ್’ ಪ್ರಕರಣ: ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿ 6 ಮಂದಿಯ ಜಾಮೀನು ಅರ್ಜಿ ವಜಾ
-
ಅಂತರ ರಾಜ್ಯ7 hours agoFormer CBI officer-ಅಧಿಕಾರ, ಹಣ, ಐಷಾರಾಮಿ ಬದುಕಿಗೆ ಗುಡ್ಬೈ; ಗುಹೆಯಲ್ಲಿ ಧ್ಯಾನ ಮಾಡುತ್ತಿರುವ ಮಾಜಿ ಸಿಬಿಐ ಅಧಿಕಾರಿ..!
-
ನಿಧನ ವಾರ್ತೆ9 hours agoHeart attack-ಸಾಲಿಗ್ರಾಮ: ಕಚೇರಿಯಲ್ಲೇ ಹೃದಯಾಘಾತ; ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ ನಿಧನ
-
ನಿಧನ ವಾರ್ತೆ9 hours agoMudbidri-ಮಂಗಳೂರಿನಲ್ಲಿ ಮೇಲ್ಛಾವಣಿ ಕೆಲಸದ ವೇಳೆ ಅವಘಡ: ಮೂಡುಬಿದಿರೆ ತಾ.ಪಂ. ಮಾಜಿ ಉಪಾಧ್ಯಕ್ಷ ಸಾವು
-
ಸಿನೆಮಾ8 hours agoDawood-‘ಧುರಂಧರ್ ‘ ನಲ್ಲಿ ದಾವೂದ್ ನ ತೋರಿಸಿದ ರೀತಿ ವಾಸ್ತವವಲ್ಲ…! ಮೋಸ್ಟ್ ವಾಂಟೆಡ್ ಪಾತಕಿ ಈಗ ಹೇಗಿದ್ದಾನೆ ಗೊತ್ತೇ..? ಮಾಜಿ FBI ಅಧಿಕಾರಿ ಹೇಳಿದ್ದೇನೂ..?
-
ನಿಧನ ವಾರ್ತೆ8 hours agoOne-sided love-ಇನ್ಸ್ಟಾಗ್ರಾಮ್ ಇನ್ಫ್ಲುಯೆನ್ಸರ್ ಮೇಲಿನ ಒನ್ಸೈಡೆಡ್ ಲವ್; ಹಲ್ಲೆಗೊಳಗಾದ ಯುವಕ ಸಾವು
-
ಮಂಗಳೂರು3 hours agoMangalore-ಮಂಗಳೂರು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಹೊಸ ತಿರುವು: ಮನೆಯವರ ಜೊತೆ ತೆರಳಲು ಯುವತಿ ನಕಾರ..!
-
ಸ್ಥಳೀಯ9 hours agoBail-ಬೆಳ್ತಂಗಡಿ: ಯತೀಶ್ ಗೌಡ ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ರಿಲೀಫ್; ಮತ್ತಿಬ್ಬರಿಗೆ ಜಾಮೀನು















