Connect with us

ಉದ್ಯೋಗ

SSC-SSC Recruitment 2024 -ಎಸ್‌ಎಸ್‌ಸಿ ನೇಮಕಾತಿ; 8,326 ಹುದ್ದೆಗಳಿಗೆ ಆನ್‌ಲೈನ್ ಅರ್ಜಿ ಆಹ್ವಾನ -SSLC ಪಾಸಾದವರು ಅರ್ಜಿ ಸಲ್ಲಿಸಬಹುದು

Published

on

Ad Widget

Ad Widget

Ad Widget

Ad Widget

ಬೆಂಗಳೂರು: ಸಿಬ್ಬಂದಿ ನೇಮಕಾತಿ ಅಯೋಗದ ವತಿಯಿಂದ ಕೇಂದ್ರ ಸಚಿವಾಲಯಗಳಲ್ಲಿ ಖಾಲಿ ಇರುವ ‘ನಾನ್‌ ಟೆಕ್ನಿಕಲ್ ಮಲ್ಟಿ ಟಾಸ್ಕಿಂಗ್ ಸಿಬ್ಬಂದಿ’ (ಎಂಟಿಎಸ್) ಮತ್ತು ‘ಸಿಬಿಐಸಿ–ಸಿಬಿಎನ್’ನಲ್ಲಿ ಖಾಲಿಯಿರುವ ಹವಾಲ್ದಾರ್ ಒಟ್ಟು 8,326 ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಆನ್‌ಲೈನ್ ಅರ್ಜಿ ಮೂಲಕ ನೇಮಕಾತಿ ಪ್ರಕ್ರಿಯೆ ಪ್ರಾರಂಭಿಸಲಾಗಿದೆ

Ad Widget

Ad Widget

Ad Widget

Ad Widget

ಸಚಿವಾಲಯಗಳಲ್ಲಿ ಒಟ್ಟು 4,887 ಎಂಟಿಎಸ್ ಹುದ್ದೆಗಳಿವೆ. ಸಿಬಿಐಸಿ–ಸಿಬಿಎನ್‌ನಲ್ಲಿ ಒಟ್ಟು 3,439 ಹವಾಲ್ದಾರ್ ಹುದ್ದೆಗಳಿವೆ. ಈ ಹುದ್ದೆಗಳು ಗ್ರೂಪ್- ‘ಸಿ’ ವಿಭಾಗದ ಹುದ್ದೆಗಳಾಗಿವೆ. ಇದರಲ್ಲಿ ಎಸ್‌ಎಸ್‌ಸಿ ಕರ್ನಾಟಕ–ಕೇರಳ ಸರ್ಕಲ್‌ನ ಒಟ್ಟು 399 ಹುದ್ದೆಗಳೂ ಸೇರಿವೆ. ಕೇಂದ್ರ ಹಣಕಾಸು ಸಚಿವಾಲಯದಡಿ ಕಾರ್ಯನಿರ್ವಹಿಸುವ ಕಂದಾಯ ಇಲಾಖೆಯ ಕೇಂದ್ರೀಯ ಪರೋಕ್ಷ ತೆರಿಗೆ ಮತ್ತು ಕಸ್ಟಮ್ಸ್ ಮಂಡಳಿ (ಸಿಬಿಐಸಿ) ಹಾಗೂ ಸೆಂಟ್ರಲ್ ಬ್ಯೂರೋ ಆಫ್ ನಾರ್ಕೋಟಿಕ್ಸ್ (ಸಿಬಿಎನ್) ವಿಭಾಗಕ್ಕೆ ಹವಾಲ್ದಾರ್ ಹುದ್ದೆಗಳು ಸಂಬಂಧಿಸಿವೆ.

Ad Widget

Ad Widget alt="Ad Widget"/>

Ad Widget

ಎಂಟಿಎಸ್ ಹುದ್ದೆಗಳಿಗೆ ವಯೋಮಿತಿ ಕನಿಷ್ಠ 18 ರಿಂದ ಗರಿಷ್ಠ 25 ಇದ್ದು, ಹವಾಲ್ದಾರ್ ಹುದ್ದೆಗಳಿಗೆ ಕನಿಷ್ಠ 18 ರಿಂದ ಗರಿಷ್ಠ 27 ಇದೆ. ಮೀಸಲು ವರ್ಗಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ಇದೆ. ಎರಡೂ ಹುದ್ದೆಗಳಿಗೂ ಕನಿಷ್ಠ ಶೈಕ್ಷಣಿಕ ವಿದ್ಯಾರ್ಹತೆ 10 ನೇ ತರಗತಿ ಪಾಸಾಗಿರಬೇಕು.

Ad Widget

Ad Widget <> Ad Widget

ಅರ್ಜಿ ಸಲ್ಲಿಸಲು ಇದೇ ಜುಲೈ 31 ಕಡೆಯ ದಿನ. ಅರ್ಜಿ ಶುಲ್ಕ ₹100 ಇರಲಿದೆ. (ಎಸ್.ಎಸಿ, ಎಸ್.ಟಿ, ಮಾಜಿ ಸೈನಿಕರಿಗೆ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದೆ).

ಪರೀಕ್ಷೆ ಹೇಗಿದೆ?
ಈ ಎರಡೂ ವಿಭಾಗದ ಹುದ್ದೆಗಳಿಗೆ ಅಕ್ಟೋಬರ್‌ ಅಥವಾ ನವೆಂಬರ್‌ನಲ್ಲಿ ಕಂಪ್ಯೂಟರ್ ಆಧರಿತ ಪರೀಕ್ಷೆ (ಸಿಬಿಟಿ) ನಡೆಯಲಿವೆ. ಎಂಟಿಎಸ್ ಹುದ್ದೆಗಳಿಗೆ ಸಿಬಿಟಿ ಮಾತ್ರ ಇರುತ್ತದೆ. ಹವಾಲ್ದಾರ್ ಹುದ್ದೆಗಳಿಗೆ ಸಿಬಿಟಿ ಜೊತೆಗೆ ದೈಹಿಕ ಸಹಿಷ್ಣುತೆ ಹಾಗೂ ದೈಹಿಕ ಸಾಮರ್ಥ್ಯ ಪರೀಕ್ಷೆ ಇರಲಿದೆ.

Ad Widget

Ad Widget

ಮೊದಲು ನಡೆಯುವ ಸಿಬಿಟಿಯಲ್ಲಿ ಎರಡು ಪಶ್ನೆ ಪತ್ರಿಕೆಗಳಿರುತ್ತವೆ. ಸೆಷನ್ 1ರ ಪತ್ರಿಕೆಯಲ್ಲಿ ಎರಡು ವಿಭಾಗಗಳಿರುತ್ತವೆ (ನ್ಯೂಮೆರಿಕಲ್ ಆ್ಯಂಡ್ ಮ್ಯಾಥಮೆಟಿಕ್ ಎಬಿಲಿಟಿ, ರಿಸನಿಂಗ್ ಎಬಿಲಿಟಿ ಆ್ಯಂಡ್ ಪ್ರಾಬ್ಲಮ್ ಸಾಲ್ವಿಂಗ್‌) ಇದಕ್ಕೆ 120 ಅಂಕಗಳಿರುತ್ತವೆ. 45 ನಿಮಿಷ ಅವಧಿ. ಎರಡೂ ಭಾಗಗಳಲ್ಲಿ ತಲಾ 20 ಪ್ರಶ್ನೆಗಳಿರುತ್ತವೆ.

ಸೆಷನ್ 2ನೇ ಪತ್ರಿಕೆಯ ಎರಡು ವಿಭಾಗಗಳಿಗೆ (ಸಾಮಾನ್ಯ ಜ್ಞಾನ, ಇಂಗ್ಲಿಷ್ ಭಾಷಾ ಸಾಮರ್ಥ್ಯ) 150 ಅಂಕಗಳಿದ್ದು, ಇದರಲ್ಲಿ ತಲಾ 25 ಪ್ರಶ್ನೆಗಳಿರುತ್ತವೆ. 45 ನಿಮಿಷ ಅವಧಿ.

ಮುಂದಿನ ಹಂತಕ್ಕೆ ಪ್ರವೇಶಿಸಬೇಕಾದರೆ ಎರಡರಲ್ಲೂ ಕನಿಷ್ಠ ಶೇ 30 ರಷ್ಟು ಅಂಕಗಳನ್ನು ಗಳಿಸಲೇಬೇಕು. ಸೆಷನ್ 1ರ ಪತ್ರಿಕೆಗೆ ನಕಾರಾತ್ಮಕ ಅಂಕಗಳಿರುವುದಿಲ್ಲ. ಸೆಷನ್ 2ನೇ ಪತ್ರಿಕೆಗೆ ನಕಾರಾತ್ಮಕ ಅಂಕಗಳು ಇರುತ್ತವೆ. ಅಂದರೆ ಪ್ರತಿ ನಾಲ್ಕು ತಪ್ಪು ಉತ್ತರಗಳಿಗೆ ಒಂದು ಅಂಕ ಕಳೆಯಲಾಗುತ್ತದೆ.

ಎಂಟಿಎಸ್ ಹುದ್ದೆ ಆಯ್ಕೆ ಮಾಡಿಕೊಳ್ಳುವವರಿಗೆ ಸಿಬಿಟಿ ಪರೀಕ್ಷೆಯ ಮೆರಿಟ್ ಆಧಾರದ ಮೇಲೆ ಮೂಲ ದಾಖಲಾತಿ ಪರಿಶೀಲನೆ ನಡೆಸಿ ಆಯ್ಕೆ ಪಟ್ಟಿ ಪ್ರಕಟಿಸಲಾಗುತ್ತದೆ. ಹವಾಲ್ದಾರ್ ಹುದ್ದೆಗಳಿಗೆ ಸಿಬಿಟಿ ಮೆರಿಟ್ ಹಾಗೂ ದೈಹಿಕ ಪರೀಕ್ಷೆಯ ಫಲಿತಾಂಶವನ್ನು ಅನುಸರಿಸಿ ಆಯ್ಕೆ ಪಟ್ಟಿ ಪ್ರಕಟಿಸಲಾಗುತ್ತದೆ.

ಇಂಗ್ಲಿಷ್, ಹಿಂದಿ ಜೊತೆಗೆ ಕನ್ನಡ ಸೇರಿದಂತೆ 13 ಪ್ರಾದೇಶಿಕ ಭಾಷೆಗಳಲ್ಲಿ ಪರೀಕ್ಷೆ ನಡೆಯಲಿದೆ. ಕರ್ನಾಟಕದ ಅಭ್ಯರ್ಥಿಗಳಿಗೆ ಬೆಂಗಳೂರು, ಬೆಳಗಾವಿ, ಹುಬ್ಬಳ್ಳಿ, ಕಲಬುರಗಿ, ಮಂಗಳೂರು, ಮೈಸೂರು, ಉಡುಪಿ ಹಾಗೂ ಶಿವಮೊಗ್ಗ ಪರೀಕ್ಷಾ ಕೇಂದ್ರಗಳಾಗಿವೆ.

ಹುದ್ದೆಗಳ ವಿಂಗಡಣೆ, ಹವಾಲ್ದಾರ್ ಹುದ್ದೆಗಳ ದೈಹಿಕ ಸಹಿಷ್ಣುತೆ, ಸಾಮರ್ಥ್ಯ ಪರೀಕ್ಷೆಯ ಮಾನದಂಡಗಳು, ಅರ್ಜಿ ಸಲ್ಲಿಸಲು ಹಾಗೂ ಇತರೆ ಹೆಚ್ಚಿನ ಮಾಹಿತಿಗೆ ಆಸಕ್ತರು ಆಯೋಗದ ಅಧಿಕೃತ ವೆಬ್‌ಸೈಟ್ https://ssc.gov.in/ ವೀಕ್ಷಿಸಬೇಕು.

ಹವಾಲ್ದಾರ್ ಹುದ್ದೆಗಳು ಎಲ್ಲೆಲ್ಲಿ?
ಸಿಬಿಐಸಿ ಹಾಗೂ ಸಿಬಿಎನ್ ಕೇಂದ್ರ ಹಣಕಾಸು ಸಚಿವಾಲಯದ ರೆವಿನ್ಯೂ ಡಿಪಾರ್ಟ್‌ಮೆಂಟ್ ಅಡಿ ಬರುವ ಸಂಸ್ಥೆಗಳಾಗಿವೆ. ಇದರಲ್ಲಿ ಪೊಲೀಸ್ ಹೆಡ್ ಕಾನ್ಸ್‌ಟೇಬಲ್ ರೀತಿ ಕೆಲಸ ಮಾಡುವ ಹುದ್ದೆಗಳಿಗೆ ಹವಾಲ್ದಾರ್ ಹುದ್ದೆಗಳು ಎನ್ನುತ್ತಾರೆ.

ಎಂಟಿಎಸ್‌ ಹುದ್ದೆಗಳು ಯಾವವು?
ಕೇಂದ್ರ ಸರ್ಕಾರದ ಸಚಿವಾಲಯಗಳಲ್ಲಿ ಗ್ರೂಪ್ ಸಿ ಅಡಿಯಿರುವ ನಾನ್ ಟೆಕ್ನಿಕಲ್ ಮಲ್ಟಿ ಟಾಸ್ಕಿಂಗ್ ಹುದ್ದೆಗಳಿಗೆ ಎಂಟಿಎಸ್‌ ಹುದ್ದೆಗಳು ಎನ್ನುತ್ತಾರೆ. ಪಿಓನ್ ಡ್ರಾಫ್ಟಿ ಚೌಕಿದಾರ್ ಸಫಾಯಿವಾಲಾ ಇತರೆ ಹುದ್ದೆಗಳು ಇದರ ಅಡಿ ಬರುತ್ತವೆ.

ಪದವಿಯಾದವರಿಗೆ 17727 ಹುದ್ದೆಗಳು
ಕೇಂದ್ರ ಸರ್ಕಾರದ ವಿವಿಧ ಸಚಿವಾಲಯ ಹಾಗೂ ಸಂಸ್ಥೆಗಳಲ್ಲಿನ ಗ್ರೂಪ್ ಎ ಬಿ ಹಂತದ ಮತ್ತು ಇನ್‌ಸ್ಪೆಕ್ಟರ್ ಹಿರಿಯ ಸಹಾಯಕ ಹಂತದ ಒಟ್ಟು 17727 ಹುದ್ದೆಗಳ ಭರ್ತಿಗೆ ಎಸ್‌ಎಸ್‌ಸಿ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ. ಜುಲೈ 24 ಅರ್ಜಿ ಸಲ್ಲಿಸಲು ಕಡೆಯ ದಿನ. ಯಾವುದೇ ಪದವಿ ತೇರ್ಗಡೆ ಹೊಂದಿದವರು ಅರ್ಜಿ ಸಲ್ಲಿಸಬಹುದು. ಸಂಯೋಜಿತ ಪದವಿ ಮಟ್ಟದ ಪರೀಕ್ಷೆ ಮೂಲಕ ನೇಮಕಾತಿ ನಡೆಯುತ್ತದೆ. ವಿವರವಾದ ಅಧಿಸೂಚನೆಗೆ https://ssc.gov.in/ ವೆಬ್‌ಸೈಟ್ ಪರಿಶೀಲಿಸಬಹುದು.

Ad Widget
Click to comment

Leave a Reply

ಸುಳ್ಯ

Puttur-ಸುಳ್ಯ ಮತ್ತು ಪುತ್ತೂರಿನಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ನೇರ ಸಂದರ್ಶನ

Published

on

Ad Widget

Ad Widget

Ad Widget

Ad Widget

ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕ್ಷೇತ್ರದಲ್ಲಿ ಪ್ರಸಿದ್ಧಿ ಪಡೆದಿರುವ ‘ವಿದ್ಯಾಮಾತಾ ಅಕಾಡೆಮಿ’ ಸಂಸ್ಥೆಯು ತನ್ನ ವಿವಿಧ ಶಾಖೆ ಮತ್ತು ವಿಭಾಗಗಳಿಗೆ ಅಗತ್ಯವಿರುವ ನೌಕರರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ನೇರ ಸಂದರ್ಶನವನ್ನು ಆಯೋಜಿಸಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕ್ಷೇತ್ರದಲ್ಲಿ ಪ್ರಸಿದ್ಧಿ ಪಡೆದಿರುವ ‘ವಿದ್ಯಾಮಾತಾ ಅಕಾಡೆಮಿ’ ಸಂಸ್ಥೆಯು ತನ್ನ ವಿವಿಧ ಶಾಖೆ ಮತ್ತು ವಿಭಾಗಗಳಿಗೆ ಅಗತ್ಯವಿರುವ ನೌಕರರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ನೇರ ಸಂದರ್ಶನವನ್ನು ಆಯೋಜಿಸಿದೆ.

Ad Widget

Ad Widget alt="Ad Widget"/>

Ad Widget

ಸಂಸ್ಥೆಯಲ್ಲಿ ಖಾಲಿ ಇರುವ ಕಂಪ್ಯೂಟರ್ ಶಿಕ್ಷಕಿ ಹಾಗೂ ಬಿಸಿನೆಸ್ ಡೆವಲಪ್‌ಮೆಂಟ್ ಆಫೀಸರ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತಿದ್ದು, ಆಸಕ್ತರು ಈ ಅವಕಾಶವನ್ನು ಪಡೆದುಕೊಳ್ಳಬಹುದಾಗಿದೆ.

Ad Widget

Ad Widget <> Ad Widget

ಸುಳ್ಯ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸಲು ಮಹಿಳಾ ಕಂಪ್ಯೂಟರ್ ಶಿಕ್ಷಕಿಯ ಹುದ್ದೆಗೆ ಅರ್ಹ ಅಭ್ಯರ್ಥಿಗಳ ಅಗತ್ಯವಿದೆ. ಅದೇ ರೀತಿ, ಪುತ್ತೂರು ಹಾಗೂ ಅದರ ಸುತ್ತಮುತ್ತಲಿನ ಭಾಗಗಳಲ್ಲಿ ಕಾರ್ಯನಿರ್ವಹಿಸಲು ಬಿಸಿನೆಸ್ ಡೆವಲಪ್‌ಮೆಂಟ್ ಆಫೀಸರ್ (Business Development Officer) ಹುದ್ದೆಗೆ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ತಮ್ಮ ವೃತ್ತಿಜೀವನವನ್ನು ಉತ್ತಮ ರೀತಿಯಲ್ಲಿ ರೂಪಿಸಿಕೊಳ್ಳಲು ಬಯಸುವ ಹಾಗೂ ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುವ ಅಭ್ಯರ್ಥಿಗಳಿಗೆ ಇದು ಸೂಕ್ತ ವೇದಿಕೆಯಾಗಿದೆ.

ಈ ಹುದ್ದೆಗಳಿಗೆ ಸಂಬಂಧಿಸಿದಂತೆ ನೇರ ಸಂದರ್ಶನವು ದಿನಾಂಕ 26-10-2026 ರಂದು ಬೆಳಿಗ್ಗೆ 10ಕ್ಕೆ ನಡೆಯಲಿದೆ.

Ad Widget

Ad Widget

ಸಂದರ್ಶನವು ಪುತ್ತೂರಿನ ಎಪಿಎಂಸಿ ರಸ್ತೆಯಲ್ಲಿರುವ ‘ವಿದ್ಯಾಮಾತಾ ಅಕಾಡೆಮಿ’ಯ ಮುಖ್ಯ ಕಚೇರಿಯಲ್ಲಿ ನಡೆಯಲಿದ್ದು, ಆಸಕ್ತ ಅಭ್ಯರ್ಥಿಗಳು ತಮ್ಮ ಅಗತ್ಯ ದಾಖಲೆಗಳೊಂದಿಗೆ ನಿಗದಿತ ದಿನದಂದು ಸಂದರ್ಶನಕ್ಕೆ ಹಾಜರಾಗಬಹುದು. ಹುದ್ದೆಯ ವಿವರಗಳು ಹಾಗೂ ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 96204 68869 ಅನ್ನು ಸಂಪರ್ಕಿಸಬಹುದಾಗಿದೆ.

Ad Widget
Continue Reading

ಉದ್ಯೋಗ

Puttur-Sales‌ನಿಂದ Technicianವರೆಗೆ; ಪುತ್ತೂರಿನ ಶ್ರೀ ತಿರುಮಲಾ TVSನಲ್ಲಿ ಭರ್ಜರಿ Job Opening

Published

on

Ad Widget

Ad Widget

Ad Widget

Ad Widget

ಉದ್ಯೋಗ ಹುಡುಕುತ್ತಿರುವ ಯುವಕ-ಯುವತಿಯರಿಗೆ ಇಲ್ಲಿದೆ ಉತ್ತಮ ಅವಕಾಶ. ದ್ವಿಚಕ್ರ ವಾಹನ ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವವರಿಗೆ ಪುತ್ತೂರಿನ ಶ್ರೀ ತಿರುಮಲಾ TVS ಸಂಸ್ಥೆಯಲ್ಲಿ ಸೇಲ್ಸ್, ಸರ್ವೀಸ್, ಅಕೌಂಟ್ಸ್, ಫೈನಾನ್ಸ್, ಇನ್ಶೂರೆನ್ಸ್ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಹಲವು ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಉದ್ಯೋಗ ಹುಡುಕುತ್ತಿರುವ ಯುವಕ-ಯುವತಿಯರಿಗೆ ಇಲ್ಲಿದೆ ಉತ್ತಮ ಅವಕಾಶ. ದ್ವಿಚಕ್ರ ವಾಹನ ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವವರಿಗೆ ಪುತ್ತೂರಿನ ಶ್ರೀ ತಿರುಮಲಾ TVS ಸಂಸ್ಥೆಯಲ್ಲಿ ಸೇಲ್ಸ್, ಸರ್ವೀಸ್, ಅಕೌಂಟ್ಸ್, ಫೈನಾನ್ಸ್, ಇನ್ಶೂರೆನ್ಸ್ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಹಲವು ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ.

Ad Widget

Ad Widget alt="Ad Widget"/>

Ad Widget

TVS ಸಂಸ್ಥೆಯ ಪ್ರೀಮಿಯಂ, EV ಹಾಗೂ IC ವಿಭಾಗಗಳಲ್ಲಿ ಉದ್ಯೋಗಾವಕಾಶ ಕಲ್ಪಿಸಲಾಗಿದ್ದು, ‘ಪುತ್ತೂರಿನ ಅತಿದೊಡ್ಡ 2-ವೀಲರ್ ಜಾಬ್ ಓಪನಿಂಗ್’ ಎಂಬ ಘೋಷಣೆಯೊಂದಿಗೆ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ.

Ad Widget

Ad Widget <> Ad Widget

ಸೇಲ್ಸ್ ವಿಭಾಗದಲ್ಲಿ ಹಲವು ಅವಕಾಶ

ಪುತ್ತೂರು ಸೇಲ್ಸ್ ವಿಭಾಗದಲ್ಲಿ ಸೇಲ್ಸ್ ಎಕ್ಸಿಕ್ಯೂಟಿವ್, ಸೇಲ್ಸ್ ಮ್ಯಾನೇಜರ್, ಎಕ್ಸ್‌ಚೇಂಜ್ ಕೋಆರ್ಡಿನೇಟರ್, ಸೇಲ್ಸ್ ಟೆಲಿಕಾಲಿಂಗ್ (CRE), ಅಕೌಂಟ್ಸ್ ಮ್ಯಾನೇಜರ್, ಫೈನಾನ್ಸ್ ಮ್ಯಾನೇಜರ್, ರಿಸೆಪ್ಷನಿಸ್ಟ್, RTO ಎಕ್ಸಿಕ್ಯೂಟಿವ್, ಇನ್‌ವಾಯ್ಸ್ ಎಕ್ಸಿಕ್ಯೂಟಿವ್, ಅಕೌಂಟ್ಸ್ ಎಕ್ಸಿಕ್ಯೂಟಿವ್, ಫೈನಾನ್ಸ್ ಕೋಆರ್ಡಿನೇಟರ್ ಹಾಗೂ ಇನ್ಶೂರೆನ್ಸ್ ಎಕ್ಸಿಕ್ಯೂಟಿವ್ ಸೇರಿದಂತೆ ಹಲವು ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.

Ad Widget

Ad Widget

ಸರ್ವೀಸ್ ವಿಭಾಗದಲ್ಲೂ ಭರ್ಜರಿ ನೇಮಕಾತಿ

ಸರ್ವೀಸ್ ವಿಭಾಗದಲ್ಲಿ ಅಡ್ವೈಸರ್, ಫ್ಲೋರ್ ಸೂಪರ್‌ವೈಸರ್, ಟೆಕ್ನಿಷಿಯನ್, ಪಾರ್ಟ್ಸ್ ಪಿಕರ್, ಬಿಲ್ಲಿಂಗ್/ರಿಸೆಪ್ಷನಿಸ್ಟ್ ಎಕ್ಸಿಕ್ಯೂಟಿವ್, ಪಾರ್ಟ್ಸ್ ಮ್ಯಾನೇಜರ್, ವಾಷಿಂಗ್ ಸಿಬ್ಬಂದಿ, PDI ಟೆಕ್ನಿಷಿಯನ್, ಸರ್ವೀಸ್ ಮ್ಯಾನೇಜರ್, ನೆಟ್‌ವರ್ಕ್ ಕೋಆರ್ಡಿನೇಟರ್, ವಾರಂಟಿ ಇನ್‌ಚಾರ್ಜ್, ಅಕ್ಸಿಡೆಂಟ್ ಸೂಪರ್‌ವೈಸರ್, CRE ಟೆಲಿಕಾಲಿಂಗ್, CRM, PDI ಸೂಪರ್‌ವೈಸರ್ ಹಾಗೂ ಪೇಂಟರ್ ಮತ್ತು ಡೆಂಟಿಂಗ್ ಹುದ್ದೆಗಳಿಗೆ ಅವಕಾಶವಿದೆ.

ಬೆಳ್ಳಾರೆಯಲ್ಲೂ ಉದ್ಯೋಗದ ಬಾಗಿಲು ತೆರೆದಿದೆ

ಬೆಳ್ಳಾರೆ ಭಾಗದಲ್ಲಿಯೂ ಉದ್ಯೋಗಾವಕಾಶ ಕಲ್ಪಿಸಲಾಗಿದೆ. ಸರ್ವೀಸ್ ವಿಭಾಗದಲ್ಲಿ ಅಡ್ವೈಸರ್, ಪಾರ್ಟ್ಸ್ ಪಿಕರ್, ಬಿಲ್ಲಿಂಗ್/ರಿಸೆಪ್ಷನಿಸ್ಟ್ ಎಕ್ಸಿಕ್ಯೂಟಿವ್, ಫ್ಲೋರ್ ಸೂಪರ್‌ವೈಸರ್, ಟೆಕ್ನಿಷಿಯನ್ ಹಾಗೂ ವಾಷಿಂಗ್ ಸಿಬ್ಬಂದಿ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.

ಸೇಲ್ಸ್ ವಿಭಾಗದಲ್ಲಿ 6 ಸೇಲ್ಸ್ ಎಕ್ಸಿಕ್ಯೂಟಿವ್ ಹಾಗೂ 2 ರಿಸೆಪ್ಷನಿಸ್ಟ್ ಹುದ್ದೆಗಳಿಗೂ ಅವಕಾಶವಿದೆ.

PF, ESI ಜೊತೆಗೆ ₹25 ಸಾವಿರದವರೆಗೆ ಗಳಿಕೆ!

ಆಯ್ಕೆಯಾಗುವ ಅಭ್ಯರ್ಥಿಗಳಿಗೆ PF, ESI, ಸ್ಪಾಟ್ ಇನ್ಸೆಂಟಿವ್, ಮಾಸಿಕ ಹಾಗೂ ತ್ರೈಮಾಸಿಕ ಇನ್ಸೆಂಟಿವ್ ಸೌಲಭ್ಯಗಳು ದೊರೆಯಲಿವೆ. 25 ಕಿ.ಮೀ.ಗಿಂತ ಹೆಚ್ಚಿನ ಪ್ರಯಾಣಕ್ಕೆ ಪೆಟ್ರೋಲ್ ವೋಚರ್ ನೀಡಲಾಗುತ್ತಿದ್ದು, ಅರ್ಹ ಅಭ್ಯರ್ಥಿಗಳಿಗೆ ತಿಂಗಳಿಗೆ ₹25,000 ವರೆಗೆ ಗಳಿಸುವ ಅವಕಾಶ ಇದೆ ಎಂದು ಸಂಸ್ಥೆ ತಿಳಿಸಿದೆ.

ದ್ವಿಚಕ್ರ ವಾಹನ ಕ್ಷೇತ್ರದಲ್ಲಿ ಆಸಕ್ತಿ ಹೊಂದಿರುವವರು ಮಾತ್ರವಲ್ಲದೆ, ಸೇಲ್ಸ್, ಅಕೌಂಟ್ಸ್, ಫೈನಾನ್ಸ್, ಟೆಲಿಕಾಲಿಂಗ್, ಗ್ರಾಹಕ ಸೇವೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಉದ್ಯೋಗ ಹುಡುಕುತ್ತಿರುವವರೂ ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ.

ಉದ್ಯೋಗಾವಕಾಶ ಸೀಮಿತವಾಗಿರುವುದರಿಂದ ಆಸಕ್ತ ಅಭ್ಯರ್ಥಿಗಳು ಕೂಡಲೇ ಸಂಪರ್ಕಿಸಬಹುದು.

📞 ಸಂಪರ್ಕ: +91 82965 79206

📍 ವಿಳಾಸ: ಶ್ರೀ ತಿರುಮಲಾ TVS, ಬೈಪಾಸ್ ಜಂಕ್ಷನ್, ಮಂಜಲ್ಪಡ್ಡು, ಮೇನ್ ರೋಡ್, ಬೋಳ್ವಾರ್ ವೆಸ್ಟ್, ಪುತ್ತೂರು–574201.

Ad Widget
Continue Reading

ಉದ್ಯೋಗ

Constable recruitment: ಕಾನ್‌ಸ್ಟೆಬಲ್ ನೇಮಕಾತಿ: ಸೆ.28ರಿಂದ ದೈಹಿಕ ಪರೀಕ್ಷೆ; 3,991 ಹುದ್ದೆಗಳಿಗೆ 19,396 ಅಭ್ಯರ್ಥಿಗಳು

Published

on

Ad Widget

Ad Widget

Ad Widget

Ad Widget

ರಾಜ್ಯ ಪೊಲೀಸ್ ಇಲಾಖೆಯ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ (ಆರ್‌ಪಿಸಿ ಮತ್ತು ಕೆಕೆ) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ದೇಹದಾರ್ಢ್ಯ ಪರೀಕ್ಷೆ (ಪಿಎಸ್‌ಟಿ) ಹಾಗೂ ಸಹಿಷ್ಣುತೆ ಪರೀಕ್ಷೆ (ಇಟಿ) ಸೆ.28ರಿಂದ ಆರಂಭವಾಗಲಿದೆ. ಪೊಲೀಸ್ ನೇಮಕಾತಿ ವಿಭಾಗವು ವಲಯವಾರು ವೇಳಾಪಟ್ಟಿಯನ್ನು ಪ್ರಕಟಿಸಿದೆ.

Ad Widget

Ad Widget

Ad Widget

Ad Widget

ಬೆಂಗಳೂರು, ಸೆ.25: ರಾಜ್ಯ ಪೊಲೀಸ್ ಇಲಾಖೆಯ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ (ಆರ್‌ಪಿಸಿ ಮತ್ತು ಕೆಕೆ) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ದೇಹದಾರ್ಢ್ಯ ಪರೀಕ್ಷೆ (ಪಿಎಸ್‌ಟಿ) ಹಾಗೂ ಸಹಿಷ್ಣುತೆ ಪರೀಕ್ಷೆ (ಇಟಿ) ಸೆ.28ರಿಂದ ಆರಂಭವಾಗಲಿದೆ. ಪೊಲೀಸ್ ನೇಮಕಾತಿ ವಿಭಾಗವು ವಲಯವಾರು ವೇಳಾಪಟ್ಟಿಯನ್ನು ಪ್ರಕಟಿಸಿದೆ.

Ad Widget

Ad Widget alt="Ad Widget"/>

Ad Widget

ಈ ನೇಮಕಾತಿ ಪ್ರಕ್ರಿಯೆಯಡಿ ಒಟ್ಟು 3,991 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ರಾಜ್ಯಾದ್ಯಂತ 19,396 ಅಭ್ಯರ್ಥಿಗಳು ದೈಹಿಕ ಪರೀಕ್ಷೆಗೆ ಅರ್ಹತೆ ಪಡೆದಿದ್ದಾರೆ. ಉಳಿಕೆ ಮೂಲ ವೃಂದದ (ಆರ್‌ಪಿಸಿ) 3,395 ಹುದ್ದೆಗಳಿಗೆ 16,454 ಅಭ್ಯರ್ಥಿಗಳು ಹಾಗೂ ಕಲ್ಯಾಣ ಕರ್ನಾಟಕ (ಕೆಕೆ) ವೃಂದದ 596 ಹುದ್ದೆಗಳಿಗೆ 2,942 ಅಭ್ಯರ್ಥಿಗಳು ಪರೀಕ್ಷೆಗೆ ಆಯ್ಕೆಯಾಗಿದ್ದಾರೆ.

Ad Widget

Ad Widget <> Ad Widget

ಮಂಗಳೂರಿನಲ್ಲಿ 395 ಹುದ್ದೆಗಳಿಗೆ 1,803 ಅಭ್ಯರ್ಥಿಗಳು
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ (ಕಾರವಾರ), ಚಿಕ್ಕಮಗಳೂರು ಹಾಗೂ ಮಂಗಳೂರು ನಗರ ಘಟಕಗಳ ವ್ಯಾಪ್ತಿಯ 395 ಹುದ್ದೆಗಳಿಗೆ 1,803 ಅಭ್ಯರ್ಥಿಗಳು ದೈಹಿಕ ಪರೀಕ್ಷೆಯಲ್ಲಿ ಭಾಗವಹಿಸಲಿದ್ದಾರೆ. ಈ ಅಭ್ಯರ್ಥಿಗಳಿಗೆ ಸೆ.28ರಿಂದ ಅ.3ರವರೆಗೆ ಮಂಗಳೂರಿನ ಲಾಲ್‌ಬಾಗ್‌ನ ಮಂಗಳ ಕ್ರೀಡಾಂಗಣದಲ್ಲಿ ದೈಹಿಕ ಪರೀಕ್ಷೆ ನಡೆಯಲಿದೆ.

ಕರೆಪತ್ರ ಡೌನ್‌ಲೋಡ್‌ಗೆ ಸೂಚನೆ
ದೈಹಿಕ ಪರೀಕ್ಷೆಗೆ ಅರ್ಹತೆ ಪಡೆದ ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಅಧಿಕೃತ ವೆಬ್‌ಸೈಟ್‌ನಿಂದ ತಮ್ಮ ಕರೆಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು. ಅಭ್ಯರ್ಥಿಗಳು ಕರೆಪತ್ರದಲ್ಲಿ ನಮೂದಿಸಿರುವ ದಿನಾಂಕದಂದು ನಿಗದಿತ ಪರೀಕ್ಷಾ ಕೇಂದ್ರಕ್ಕೆ ಕಡ್ಡಾಯವಾಗಿ ಹಾಜರಾಗುವಂತೆ ಪೊಲೀಸ್ ನೇಮಕಾತಿ ವಿಭಾಗ ಸೂಚಿಸಿದೆ.

Ad Widget

Ad Widget

ಕಾನ್‌ಸ್ಟೆಬಲ್ ಲಿಖಿತ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶ ಪ್ರಕಟ
ಇದೇ ವೇಳೆ, ಕೆಎಸ್‌ಆರ್‌ಪಿ, ಕೆಎಸ್‌ಐಎಸ್‌ಎಫ್ ಹಾಗೂ ಐಆರ್‌ಬಿ ಪೊಲೀಸ್ ಕಾನ್‌ಸ್ಟೆಬಲ್ ನೇಮಕಾತಿಗಾಗಿ ಸೆ.20ರಂದು ನಡೆದ ಲಿಖಿತ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶವನ್ನು ಕೇವಲ ಐದು ದಿನಗಳಲ್ಲಿ ಕೆಇಎ ಪ್ರಕಟಿಸಿದೆ.

ಪರೀಕ್ಷೆಯ ಫಲಿತಾಂಶಕ್ಕೆ ಆಕ್ಷೇಪಣೆಗಳಿದ್ದಲ್ಲಿ ಅಭ್ಯರ್ಥಿಗಳು ಸೆ.27ರೊಳಗೆ ನಿಗದಿತ ಲಿಂಕ್ ಮೂಲಕ ಸಲ್ಲಿಸಬಹುದು ಎಂದು ಕೆಇಎ ತಿಳಿಸಿದೆ.

ಉಳಿಕೆ ಮೂಲ ವೃಂದದ 1,13,390 ಹಾಗೂ ಕಲ್ಯಾಣ ಕರ್ನಾಟಕ ವೃಂದದ 33,061 ಅಭ್ಯರ್ಥಿಗಳು ಲಿಖಿತ ಪರೀಕ್ಷೆ ಬರೆದಿದ್ದರು. ಪರೀಕ್ಷೆ ನಡೆದ ದಿನವೇ ಎಲ್ಲ ಅಭ್ಯರ್ಥಿಗಳ ಒಎಂಆರ್ ಉತ್ತರ ಪತ್ರಿಕೆಗಳನ್ನು ಸ್ಕ್ಯಾನ್ ಮಾಡಿ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾಗಿತ್ತು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!