ಮಳೆ ತೀವ್ರವಾದ ಕಾರಣ ಜಿಲ್ಲಾಧಿಕಾರಿ […]" /> ಮಳೆ ತೀವ್ರವಾದ ಕಾರಣ ಜಿಲ್ಲಾಧಿಕಾರಿ […]"> ಜು.6 ಕರಾವಳಿಯಲ್ಲಿ ಭಾರಿ ಮಳೆ - ರೆಡ್ ಅಲರ್ಟ್ : ಉಡುಪಿ ಜಿಲ್ಲೆಯಲ್ಲಿ ಪಿಯುಸಿಯವರೆಗೆ ರಜೆ ಘೋಷಣೆ - Nikhara News | Kannada News Website
Connect with us

ಬಿಗ್ ನ್ಯೂಸ್

ಜು.6 ಕರಾವಳಿಯಲ್ಲಿ ಭಾರಿ ಮಳೆ – ರೆಡ್ ಅಲರ್ಟ್ : ಉಡುಪಿ ಜಿಲ್ಲೆಯಲ್ಲಿ ಪಿಯುಸಿಯವರೆಗೆ ರಜೆ ಘೋಷಣೆ

Published

on

Ad Widget

Ad Widget

Ad Widget

Ad Widget

ಉಡುಪಿ : ಜಿಲ್ಲೆಯಲ್ಲಿ ಗುಡುಗು ಸಹಿತ ಭಾರೀ ಮಳೆ ಸುರಿಯುತ್ತಿದ್ದು ತಗ್ಗು ಪ್ರದೇಶಗಳಲ್ಲಿ ನೆರೆ ಭೀತಿ ಎದುರಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಶನಿವಾರ (ಜುಲೈ 6) ಜಿಲ್ಲಾದ್ಯಂತ ಅಂಗನವಾಡಿ , ಪ್ರಾಥಮಿಕ, ಪ್ರೌಢ ಶಾಲೆ ಮತ್ತು ಪಿಯು ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

Ad Widget

Ad Widget

Ad Widget

Ad Widget

ಮೊದಲು ಮುನ್ನೆಚ್ಚರಿಕಾ ಕ್ರಮವಾಗಿ ಕುಂದಾಪುರ ಮತ್ತು ಬ್ರಹ್ಮಾವರ ವಲಯದ ಅಂಗನವಾಡಿ , ಪ್ರಾಥಮಿಕ, ಪ್ರೌಢ ಶಾಲೆ ಮತ್ತು ಪಿಯು ಕಾಲೇಜುಗಳಿಗೆ ಶನಿವಾರ ರಜೆ ಘೋಷಣೆ ಮಾಡಲಾಗಿತ್ತು.

Ad Widget

Ad Widget alt="Ad Widget"/>

Ad Widget

ಮಳೆ ತೀವ್ರವಾದ ಕಾರಣ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಅವರು ಸಂಪೂರ್ಣ ಜಿಲ್ಲೆಗೆ ಅನ್ವಯಿಸಿ ಶುಕ್ರವಾರ ರಾತ್ರಿ ರಜೆ ಘೋಷಣೆ ಮಾಡಿದ್ದಾರೆ. ಭಾರೀ ಮಳೆ ಸುರಿಯುವ ಸಾಧ್ಯತೆ ಇರುವ ಹಿನ್ನಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ರಜೆ ಘೋಷಣೆ ಮಾಡಿ ಕುಂದಾಪುರ ಉಪವಿಭಾಗಾಧಿಕಾರಿ ರಶ್ಮಿ ಅವರು ಆದೇಶ ಹೊರಡಿಸಿದ್ದಾರೆ.

Ad Widget

Ad Widget <> Ad Widget

ಭಾರತೀಯ ಹವಾಮಾನ ಇಲಾಖೆ (IMD) ಮುಂದಿನ ಎರಡು ದಿನಗಳಲ್ಲಿ, ಜುಲೈ 6 ಮತ್ತು 7, ರಂದು ಕರಾವಳಿ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ರೆಡ್ ಅಲರ್ಟ್ ನೀಡಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಲಾಗಿದೆ.

Click to comment

Leave a Reply

ಅಂತರ ರಾಜ್ಯ

WhatsApp-WhatsApp ಬಳಕೆದಾರರಿಗೆ CERT-In ಎಚ್ಚರಿಕೆ; ಡೇಟಾ ಕದಿಯುವ, ಅಳಿಸುವ ಅಪಾಯ..!

Published

on

Ad Widget

Ad Widget

Ad Widget

Ad Widget

ಜನಪ್ರಿಯ ಮೆಸೇಜಿಂಗ್ ಆ್ಯಪ್ WhatsAppನ ವಿವಿಧ ಆವೃತ್ತಿಗಳಲ್ಲಿ ಹಲವು ಭದ್ರತಾ ನ್ಯೂನತೆಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಭಾರತೀಯ ಕಂಪ್ಯೂಟರ್ ತುರ್ತು ಪ್ರತಿಕ್ರಿಯಾ ತಂಡ (CERT-In) ಬಳಕೆದಾರರಿಗೆ ಎಚ್ಚರಿಕೆ ನೀಡಿದೆ. ಈ ದೋಷಗಳನ್ನು ದುರ್ಬಳಕೆ ಮಾಡಿಕೊಂಡು ಹ್ಯಾಕರ್‌ಗಳು ಸಾಧನಗಳಿಗೆ ಅನಧಿಕೃತ ಪ್ರವೇಶ ಪಡೆಯುವುದರ ಜತೆಗೆ ಸೂಕ್ಷ್ಮ ಮಾಹಿತಿಯನ್ನು ಕದಿಯುವ ಅಥವಾ ಡೇಟಾವನ್ನು ಅಳಿಸುವ ಸಾಧ್ಯತೆಯಿದೆ ಎಂದು ಸಂಸ್ಥೆ ತಿಳಿಸಿದೆ.

Ad Widget

Ad Widget

Ad Widget

Ad Widget

ನವದೆಹಲಿ: ಜನಪ್ರಿಯ ಮೆಸೇಜಿಂಗ್ ಆ್ಯಪ್ WhatsAppನ ವಿವಿಧ ಆವೃತ್ತಿಗಳಲ್ಲಿ ಹಲವು ಭದ್ರತಾ ನ್ಯೂನತೆಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಭಾರತೀಯ ಕಂಪ್ಯೂಟರ್ ತುರ್ತು ಪ್ರತಿಕ್ರಿಯಾ ತಂಡ (CERT-In) ಬಳಕೆದಾರರಿಗೆ ಎಚ್ಚರಿಕೆ ನೀಡಿದೆ. ಈ ದೋಷಗಳನ್ನು ದುರ್ಬಳಕೆ ಮಾಡಿಕೊಂಡು ಹ್ಯಾಕರ್‌ಗಳು ಸಾಧನಗಳಿಗೆ ಅನಧಿಕೃತ ಪ್ರವೇಶ ಪಡೆಯುವುದರ ಜತೆಗೆ ಸೂಕ್ಷ್ಮ ಮಾಹಿತಿಯನ್ನು ಕದಿಯುವ ಅಥವಾ ಡೇಟಾವನ್ನು ಅಳಿಸುವ ಸಾಧ್ಯತೆಯಿದೆ ಎಂದು ಸಂಸ್ಥೆ ತಿಳಿಸಿದೆ.

Ad Widget

Ad Widget alt="Ad Widget"/>

Ad Widget

WhatsApp ನಮ್ಮ ದೈನಂದಿನ ಜೀವನದ ಪ್ರಮುಖ ಸಂವಹನ ಸಾಧನವಾಗಿದ್ದು, ಅದರ ಭದ್ರತೆಗೆ ಸಂಬಂಧಿಸಿದಂತೆ CERT-In ಇದೀಗ ಅಧಿಕ ತೀವ್ರತೆಯ ಸಲಹೆ ನೀಡಿದೆ. Android, iOS, Mac ಹಾಗೂ Windows ಸೇರಿದಂತೆ ವಿವಿಧ ಪ್ಲಾಟ್‌ಫಾರ್ಮ್‌ಗಳಲ್ಲಿ ಬಳಕೆಯಾಗುವ WhatsAppನ ಕೆಲವು ಆವೃತ್ತಿಗಳಲ್ಲಿನ ನ್ಯೂನತೆಗಳು ಸೈಬರ್ ದಾಳಿಗೆ ಅವಕಾಶ ಮಾಡಿಕೊಡಬಹುದು ಎಂದು ಎಚ್ಚರಿಸಲಾಗಿದೆ.

Ad Widget

Ad Widget <> Ad Widget

ಕೇಂದ್ರ ಸರ್ಕಾರದ ಸೈಬರ್ ಭದ್ರತಾ ಸಂಸ್ಥೆಯ ಪ್ರಕಾರ, ವಿಶೇಷವಾಗಿ ರೂಪಿಸಲಾದ ಸಂದೇಶಗಳು, ಅಟ್ಯಾಚ್‌ಮೆಂಟ್‌ಗಳು ಅಥವಾ URL ಲಿಂಕ್‌ಗಳ ಮೂಲಕ ಈ ದೋಷಗಳನ್ನು ದುರ್ಬಳಕೆ ಮಾಡಿಕೊಳ್ಳುವ ಸಾಧ್ಯತೆಯಿದೆ. ಹೀಗಾಗಿ ಬಳಕೆದಾರರು ಹಾಗೂ ಸಂಸ್ಥೆಗಳು ತಮ್ಮ ಸಾಧನಗಳಲ್ಲಿ WhatsApp ಅನ್ನು ತಕ್ಷಣವೇ ನವೀಕರಿಸಿಕೊಳ್ಳುವಂತೆ ಸಲಹೆ ನೀಡಲಾಗಿದೆ.

ಈ ಹಿಂದೆ ಕೇಂದ್ರ ಗೃಹ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರದ (I4C) ರಾಷ್ಟ್ರೀಯ ಸೈಬರ್ ಅಪರಾಧ ಬೆದರಿಕೆ ವಿಶ್ಲೇಷಣಾ ಘಟಕ (NCTAU) ಕೂಡ WhatsApp ಬಳಕೆಯ ಕುರಿತು ಎಚ್ಚರಿಕೆ ನೀಡಿತ್ತು. ಸಾರ್ವಜನಿಕ ಕಂಪ್ಯೂಟರ್‌ಗಳಲ್ಲಿ WhatsApp ವೆಬ್‌ಗೆ ಲಾಗಿನ್ ಮಾಡಿ ಕೆಲಸ ಮುಗಿದ ಬಳಿಕ ಲಾಗ್‌ಔಟ್ ಮಾಡದೆ ಬಿಟ್ಟರೆ, ಅನಧಿಕೃತ ವ್ಯಕ್ತಿಗಳು ಖಾತೆಯನ್ನು ಪ್ರವೇಶಿಸಿ ದುರ್ಬಳಕೆ ಮಾಡಿಕೊಳ್ಳುವ ಸಾಧ್ಯತೆಯಿದೆ ಎಂದು ತಿಳಿಸಿತ್ತು. ಬ್ರೌಸರ್ ಟ್ಯಾಬ್ ಮುಚ್ಚಿದ ಮಾತ್ರಕ್ಕೆ WhatsApp ವೆಬ್‌ನಿಂದ ಲಾಗ್‌ಔಟ್ ಆಗುವುದಿಲ್ಲ ಎಂಬುದನ್ನೂ ಎಚ್ಚರಿಸಿತ್ತು.

Ad Widget

Ad Widget

WhatsAppನಲ್ಲಿ ಪತ್ತೆಯಾದ ಪ್ರಮುಖ ಭದ್ರತಾ ದೋಷಗಳೇನು?
CERT-In ಸಲಹೆಯಲ್ಲಿ WhatsAppನ ವಿವಿಧ ಆವೃತ್ತಿಗಳಲ್ಲಿನ ಐದು ಭದ್ರತಾ ನ್ಯೂನತೆಗಳನ್ನು ಉಲ್ಲೇಖಿಸಲಾಗಿದೆ.

CVE-2026-102769: Android WhatsAppನಲ್ಲಿ ವಿಶೇಷವಾಗಿ ರೂಪಿಸಲಾದ ಆರ್ಡರ್ ವಿವರಗಳ ಸಂದೇಶಕ್ಕೆ ಸಂಬಂಧಿಸಿದ ಈ ದೋಷವು SQL ಇಂಜೆಕ್ಷನ್‌ಗೆ ಅವಕಾಶ ನೀಡಬಹುದು. ಸಂದೇಶವನ್ನು ಬಳಕೆದಾರರು ತೆರೆಯುವ ಸಂದರ್ಭದಲ್ಲಿ ಸ್ಥಳೀಯವಾಗಿ ಸಂಗ್ರಹವಾಗಿರುವ ಚಾಟ್‌ಗಳು, ಮಾಧ್ಯಮ ಹಾಗೂ ಇತರ ಫೈಲ್‌ಗಳನ್ನು ಅಳಿಸುವ ಅಪಾಯವಿದೆ ಎಂದು ಎಚ್ಚರಿಸಲಾಗಿದೆ. ಸಂದೇಶ ತಲುಪಿದ ಸಮಯ ಹಾಗೂ ಡಬಲ್ ಟಿಕ್‌ನ ಮಾಹಿತಿಯನ್ನು ಗಮನಿಸುವ ಮೂಲಕ ಚಾಟ್ ಡೇಟಾಬೇಸ್ ಕುರಿತು ಕೆಲವು ಮಾಹಿತಿಯನ್ನು ತಿಳಿದುಕೊಳ್ಳುವ ಸಾಧ್ಯತೆಯೂ ಇದೆ. ಆದರೆ ಈ ದೋಷದ ದುರ್ಬಳಕೆಗೆ ಸಂಬಂಧಿಸಿದ ಯಾವುದೇ ಪುರಾವೆ ಇಲ್ಲ ಎಂದು WhatsApp ತಿಳಿಸಿದೆ.

CVE-2026-44908: Meta AIನ ಕಂಪ್ಯೂಟಿಂಗ್ ವ್ಯವಸ್ಥೆಯೊಂದಿಗೆ ವಿಶ್ವಾಸಾರ್ಹ ಸಂಪರ್ಕ ಸ್ಥಾಪಿಸಲು ಬಳಸುವ ಸರ್ಟಿಫಿಕೇಟ್ ಚೈನ್ ಪರಿಶೀಲನೆಯಲ್ಲಿನ ನ್ಯೂನತೆಗೆ ಈ ದೋಷ ಸಂಬಂಧಿಸಿದೆ. ಇದರಿಂದ ಕೆಲವು ಸಂದರ್ಭಗಳಲ್ಲಿ ಹಾರ್ಡ್‌ವೇರ್ ಭದ್ರತಾ ವ್ಯವಸ್ಥೆಯನ್ನು ಬೈಪಾಸ್ ಮಾಡುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ. ಈ ದೋಷವನ್ನು ದುರ್ಬಳಕೆ ಮಾಡಿಕೊಂಡಿರುವ ಪುರಾವೆಯೂ ಇಲ್ಲ ಎಂದು WhatsApp ಹೇಳಿದೆ.

CVE-2026-23871: Android ಸಾಧನಗಳಲ್ಲಿನ ಬಾಹ್ಯ ಜಾಹೀರಾತು-ಪ್ರತಿಕ್ರಿಯೆ URLಗಳಿಗೆ ಸಂಬಂಧಿಸಿದ ಈ ದೋಷವು ವಿಶೇಷವಾಗಿ ರೂಪಿಸಲಾದ ‘Click to WhatsApp’ ಸಂದೇಶಗಳ ಮೂಲಕ ಸಾಧನವು ಹ್ಯಾಕರ್ ನಿಯಂತ್ರಿತ ವಿಳಾಸದಿಂದ ಮಾಧ್ಯಮವನ್ನು ಲೋಡ್ ಮಾಡುವಂತೆ ಮಾಡಬಹುದು. ಇದರಿಂದ ಬಳಕೆದಾರರ IP ವಿಳಾಸ ಬಹಿರಂಗಗೊಳ್ಳುವ ಸಾಧ್ಯತೆಯಿದೆ.

ಇದಲ್ಲದೆ, Instagram Reelಗೆ ಸಂಬಂಧಿಸಿದ AI ಪ್ರತಿಕ್ರಿಯೆಯಲ್ಲಿನ ದುರ್ಬಲತೆಯ ಮೂಲಕ iOS ಅಥವಾ Android ಸಾಧನಗಳಲ್ಲಿ ದುರುದ್ದೇಶಪೂರಿತ ವಿಷಯವನ್ನು ಪ್ರಕ್ರಿಯೆಗೊಳಿಸುವ ಸಾಧ್ಯತೆಯಿರುವ ಮತ್ತೊಂದು ದೋಷವನ್ನೂ ಉಲ್ಲೇಖಿಸಲಾಗಿದೆ.

CVE-2026-23863: Windows WhatsAppನಲ್ಲಿ ದುರುದ್ದೇಶಪೂರಿತ ಅಟ್ಯಾಚ್‌ಮೆಂಟ್‌ಗಳನ್ನು ಸಾಮಾನ್ಯ ಫೈಲ್‌ಗಳಂತೆ ತೋರಿಸಿ, ತೆರೆಯುವಾಗ ಕಾರ್ಯಗತಗೊಳಿಸಬಹುದಾದ ಫೈಲ್‌ಗಳಾಗಿ ರನ್ ಆಗುವಂತೆ ಮಾಡುವ ನ್ಯೂನತೆ ಇದಾಗಿದೆ. ಈ ದೋಷಗಳ ದುರ್ಬಳಕೆಗೆ ಸಂಬಂಧಿಸಿದ ಪುರಾವೆಗಳು ಇಲ್ಲ ಎಂದು WhatsApp ತಿಳಿಸಿದೆ.

ಸೈಬರ್ ಭದ್ರತಾ ಆತಂಕಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ CERT-In ಬಳಕೆದಾರರು WhatsAppನ ಇತ್ತೀಚಿನ ಆವೃತ್ತಿಯನ್ನು ಬಳಸುವಂತೆ ಹಾಗೂ ಅಪರಿಚಿತ ಸಂದೇಶಗಳು, ಲಿಂಕ್‌ಗಳು ಮತ್ತು ಅಟ್ಯಾಚ್‌ಮೆಂಟ್‌ಗಳನ್ನು ತೆರೆಯುವಾಗ ಎಚ್ಚರಿಕೆ ವಹಿಸುವಂತೆ ಸೂಚಿಸಿದೆ.

Ad Widget
Continue Reading

ಬಿಗ್ ನ್ಯೂಸ್

Vitla-ವಿಟ್ಲ: ಚಿಕ್ಕಪ್ಪನನ್ನು ಕತ್ತಿಯಿಂದ ಕಡಿದು ಹತ್ಯೆಗೈದ ಯುವತಿ ಬಂಧನ

Published

on

Ad Widget

Ad Widget

Ad Widget

Ad Widget

ಕನ್ಯಾನ ಗ್ರಾಮದ ನಂದರಬೆಟ್ಟು ನಿವಾಸಿ ಚೆನ್ನಯ್ಯ ಪೂಜಾರಿ (45) ಅವರನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿದ ಆರೋಪದಲ್ಲಿ ರಿಶಿಕಾ (24) ಎಂಬ ಯುವತಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದು, ನ್ಯಾಯಾಲಯ ಆಕೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

Ad Widget

Ad Widget

Ad Widget

Ad Widget

ವಿಟ್ಲ: ಕನ್ಯಾನ ಗ್ರಾಮದ ನಂದರಬೆಟ್ಟು ನಿವಾಸಿ ಚೆನ್ನಯ್ಯ ಪೂಜಾರಿ (45) ಅವರನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿದ ಆರೋಪದಲ್ಲಿ ರಿಶಿಕಾ (24) ಎಂಬ ಯುವತಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದು, ನ್ಯಾಯಾಲಯ ಆಕೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

Ad Widget

Ad Widget alt="Ad Widget"/>

Ad Widget

ಚೆನ್ನಯ್ಯ ಪೂಜಾರಿ ಮದ್ಯಪಾನ ಮಾಡಿ ತನ್ನ ಅಣ್ಣನ ಮಗಳಿಗೆ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಈ ಸಂದರ್ಭ ಯುವತಿ ಕತ್ತಿಯಿಂದ ಬೀಸಿದಾಗ ಅದು ಚೆನ್ನಯ್ಯ ಪೂಜಾರಿ ಅವರ ಎದೆಗೆ ತಾಗಿ ಗಂಭೀರ ಗಾಯಗೊಂಡಿದ್ದರು.

Ad Widget

Ad Widget <> Ad Widget

ಗಾಯಗೊಂಡ ಅವರನ್ನು ತಕ್ಷಣ ಆಂಬ್ಯುಲೆನ್ಸ್ ಮೂಲಕ ಪುತ್ತೂರಿಗೆ ಕರೆದೊಯ್ಯಲಾಗಿತ್ತು. ಆದರೆ, ಅಲ್ಲಿ ಅವರು ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ.

ಕುಟುಂಬದೊಳಗಿನ ಕಲಹ ಕೊಲೆಯಲ್ಲಿ ಅಂತ್ಯಗೊಂಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ರಿಶಿಕಾಳನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ಆಕೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

Continue Reading

ಬಿಗ್ ನ್ಯೂಸ್

Virupaksha Bhat-ಮಹಾಲಿಂಗೇಶ್ವರ ದೇವಸ್ಥಾನದ ಕಾಮಗಾರಿಗಳಿಗೆ ಹೈಕೋರ್ಟ್ ತಡೆಯಾಜ್ಞೆ: ಅನುಮತಿಯಿಲ್ಲದ ಕಾಮಗಾರಿ, ಟೆಂಡರ್ ಪ್ರಕ್ರಿಯೆ ಮುಂದುವರಿಸದಂತೆ ಮಧ್ಯಂತರ ಆದೇಶ; ದೇವಸ್ಥಾನದ ಅಭಿವೃದ್ಧಿಗೆ ನಮ್ಮ ವಿರೋಧವಿಲ್ಲ, ನಿಯಮಬದ್ಧ ಆಡಳಿತಕ್ಕೆ ಆಗ್ರಹ : ದೂರುದಾರ ವಿರೂಪಾಕ್ಷ ಭಟ್ ಪತ್ರಿಕಾಗೋಷ್ಟಿ

Published

on

Ad Widget

Ad Widget

Ad Widget

Ad Widget

ಪುತ್ತೂರಿನ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಧಾರ್ಮಿಕ ದತ್ತಿ ಇಲಾಖೆಯ ಪೂರ್ವಾನುಮತಿ ಪಡೆಯದೆ ಕೈಗೊಳ್ಳಲಾಗುತ್ತಿದೆ ಎನ್ನಲಾದ ವಿವಿಧ ಅಭಿವೃದ್ಧಿ ಕಾಮಗಾರಿಗಳು ಹಾಗೂ ಟೆಂಡರ್ ಪ್ರಕ್ರಿಯೆಗಳಿಗೆ ಕರ್ನಾಟಕ ಉಚ್ಚ ನ್ಯಾಯಾಲಯ ಮಧ್ಯಂತರ ತಡೆಯಾಜ್ಞೆ ನೀಡಿದೆ. ನ.23ರಂದು ನೀಡಿರುವ ಈ ಆದೇಶವು ಮುಂದಿನ ವಿಚಾರಣೆಯವರೆಗೆ ಜಾರಿಯಲ್ಲಿರಲಿದ್ದು, ಇಲಾಖಾ ನಿಯಮಗಳನ್ನು ಉಲ್ಲಂಘಿಸಿ ಯಾವುದೇ ಕಾಮಗಾರಿ ನಡೆಸದಂತೆ ದೇವಸ್ಥಾನದ ಆಡಳಿತ ಸಮಿತಿ ಹಾಗೂ ಸರಕಾರಕ್ಕೆ ನ್ಯಾಯಾಲಯ ನಿರ್ದೇಶನ ನೀಡಿದೆ ಎಂದು ಮಚ್ಚಿಮಲೆ ವಿರೂಪಾಕ್ಷ ಭಟ್ ತಿಳಿಸಿದ್ದಾರೆ.

Ad Widget

Ad Widget

Ad Widget

Ad Widget

ಪುತ್ತೂರು: ಪುತ್ತೂರಿನ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಧಾರ್ಮಿಕ ದತ್ತಿ ಇಲಾಖೆಯ ಪೂರ್ವಾನುಮತಿ ಪಡೆಯದೆ ಕೈಗೊಳ್ಳಲಾಗುತ್ತಿದೆ ಎನ್ನಲಾದ ವಿವಿಧ ಅಭಿವೃದ್ಧಿ ಕಾಮಗಾರಿಗಳು ಹಾಗೂ ಟೆಂಡರ್ ಪ್ರಕ್ರಿಯೆಗಳಿಗೆ ಕರ್ನಾಟಕ ಉಚ್ಚ ನ್ಯಾಯಾಲಯ ಮಧ್ಯಂತರ ತಡೆಯಾಜ್ಞೆ ನೀಡಿದೆ. ನ.23ರಂದು ನೀಡಿರುವ ಈ ಆದೇಶವು ಮುಂದಿನ ವಿಚಾರಣೆಯವರೆಗೆ ಜಾರಿಯಲ್ಲಿರಲಿದ್ದು, ಇಲಾಖಾ ನಿಯಮಗಳನ್ನು ಉಲ್ಲಂಘಿಸಿ ಯಾವುದೇ ಕಾಮಗಾರಿ ನಡೆಸದಂತೆ ದೇವಸ್ಥಾನದ ಆಡಳಿತ ಸಮಿತಿ ಹಾಗೂ ಸರಕಾರಕ್ಕೆ ನ್ಯಾಯಾಲಯ ನಿರ್ದೇಶನ ನೀಡಿದೆ ಎಂದು ಮಚ್ಚಿಮಲೆ ವಿರೂಪಾಕ್ಷ ಭಟ್ ತಿಳಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ಪುತ್ತೂರು ವಾರ್ತಾಭವನದಲ್ಲಿ ನ.25ರಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೇವಸ್ಥಾನದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಗಳ ಹೆಸರಿನಲ್ಲಿ ಧಾರ್ಮಿಕ ದತ್ತಿ ಇಲಾಖೆಯ ನಿಯಮಾವಳಿಗಳನ್ನು ಉಲ್ಲಂಘಿಸಲಾಗಿದೆ. ಸಮರ್ಪಕ ಅನುಮೋದನೆ ಪಡೆಯದೆ ಕಾಮಗಾರಿಗಳನ್ನು ನಡೆಸಿರುವುದು, ಹಣಕಾಸಿನ ನಿರ್ವಹಣೆಯಲ್ಲಿ ಲೋಪದೋಷಗಳು ಹಾಗೂ ದೇವಸ್ಥಾನದ ದೈನಂದಿನ ಆಡಳಿತದಲ್ಲಿ ಪಾರದರ್ಶಕತೆಯ ಕೊರತೆ ಕಂಡುಬಂದಿರುವ ಹಿನ್ನೆಲೆಯಲ್ಲಿ ಕಾನೂನು ಹೋರಾಟಕ್ಕೆ ಮುಂದಾಗಿದ್ದೇವೆ ಎಂದರು.

Ad Widget

Ad Widget <> Ad Widget

ಈ ಸಂಬಂಧ ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರು ಹಾಗೂ ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಸಲಾಗಿದ್ದು, ಇಲಾಖಾ ಮಟ್ಟದಲ್ಲಿ ತನಿಖೆ ನಡೆಯುತ್ತಿದೆ. ಇದೇ ವಿಚಾರವಾಗಿ ಮಚ್ಚಿಮಲೆ ವಿರೂಪಾಕ್ಷ ಭಟ್ ಮತ್ತು ದಿನೇಶ್ ಜೈನ್ ಅವರು ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ W.P. No. 32628/2026ರಡಿ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿದಾರರು ಸಲ್ಲಿಸಿದ ದಾಖಲೆಗಳು ಮತ್ತು ಮನವಿಯನ್ನು ಪರಿಗಣಿಸಿರುವ ನ್ಯಾಯಾಲಯವು ನ.23ರಂದು ಮುಂದಿನ ವಿಚಾರಣೆಯವರೆಗೆ ಮಧ್ಯಂತರ ತಡೆಯಾಜ್ಞೆ ನೀಡಿದೆ ಎಂದು ಅವರು ವಿವರಿಸಿದರು.

ಅಭಿವೃದ್ಧಿ ಸಮಿತಿ ರಚನೆ ಬಗ್ಗೆಯೂ ಆಕ್ಷೇಪ

Ad Widget

Ad Widget

ದೇವಸ್ಥಾನದಲ್ಲಿ ರಚಿಸಲಾಗಿರುವ ಅಭಿವೃದ್ಧಿ ಸಮಿತಿಯ ರಚನೆಯೇ ಧಾರ್ಮಿಕ ದತ್ತಿ ಇಲಾಖೆಯ ನಿಯಮಗಳಿಗೆ ಅನುಗುಣವಾಗಿಲ್ಲ ಎಂಬುದು ಅರ್ಜಿದಾರರ ಪ್ರಮುಖ ಆಕ್ಷೇಪವಾಗಿದೆ. ಇಲಾಖೆಯಿಂದ ಅನುಮೋದನೆ ಪಡೆಯದ ಜೀರ್ಣೋದ್ಧಾರ ಅಥವಾ ಅಭಿವೃದ್ಧಿ ಸಮಿತಿಯ ಹೆಸರಿನಲ್ಲಿ ಭಕ್ತರಿಂದ ಹಣ ಸಂಗ್ರಹಿಸುವುದು, ಕಾಮಗಾರಿಗಳನ್ನು ಕೈಗೊಳ್ಳುವುದು ಹಾಗೂ ಅನಧಿಕೃತ ಸಭೆಗಳನ್ನು ನಡೆಸುವುದು ನಿಯಮಬಾಹಿರವಾಗಿದೆ ಎಂದು ವಿರೂಪಾಕ್ಷ ಭಟ್ ಆರೋಪಿಸಿದರು.

ಅನುಮೋದನೆ ಪಡೆಯದ ಸಮಿತಿಯ ಹೆಸರಿನಲ್ಲಿ ಟೆಂಡರ್ ಪ್ರಕ್ರಿಯೆ ನಡೆಸಿರುವುದು ಮತ್ತು ಪತ್ರಿಕೆಗಳಲ್ಲಿ ಟೆಂಡರ್ ಪ್ರಕಟಣೆಗಳನ್ನು ನೀಡಿರುವುದಕ್ಕೂ ಅವರು ಆಕ್ಷೇಪ ವ್ಯಕ್ತಪಡಿಸಿದರು. ಇಲಾಖೆಯ ಅಧಿಕೃತ ಅನುಮೋದನೆ ಹಾಗೂ ನಿಗದಿತ ಪ್ರಕ್ರಿಯೆಗಳನ್ನು ಪಾಲಿಸದೆ ಇಂತಹ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ದೂರಿದರು.

ಉತ್ತರ ಭಾಗದ ಜಮೀನಿನಲ್ಲಿ ರಸ್ತೆ ನಿರ್ಮಾಣಕ್ಕೆ ಆಕ್ಷೇಪ

ದೇವಸ್ಥಾನದ ಉತ್ತರ ಭಾಗದ ಜಮೀನಿನಲ್ಲಿ ರಸ್ತೆ ನಿರ್ಮಾಣಕ್ಕೆ ಮುಂದಾಗಿರುವುದರ ಬಗ್ಗೆಯೂ ನ್ಯಾಯಾಲಯದಲ್ಲಿ ಪ್ರಶ್ನಿಸಲಾಗಿದೆ. ಈ ಕಾಮಗಾರಿಗೆ ಧಾರ್ಮಿಕ ದತ್ತಿ ಇಲಾಖೆಯ ಪೂರ್ವಾನುಮತಿ ಪಡೆದಿಲ್ಲ. ಅಲ್ಲದೆ, ಇದೇ ಜಮೀನಿಗೆ ಸಂಬಂಧಿಸಿದಂತೆ ಬೇರೆ ಬೇರೆ ನ್ಯಾಯಾಲಯಗಳಲ್ಲಿ ಪ್ರಕರಣಗಳು ಬಾಕಿಯಿದ್ದು, ತಡೆಯಾಜ್ಞೆಗಳಿದ್ದರೂ ಕಾಮಗಾರಿ ಮುಂದುವರಿಸಲಾಗಿದೆ ಎಂಬುದು ಅರ್ಜಿದಾರರ ಆರೋಪವಾಗಿದೆ.

ಐದು ಕಟ್ಟೆಗಳ ತೆರವು, ನೂತನ ಶಿಲಾಮಯ ಕಟ್ಟಡ ನಿರ್ಮಾಣ

ದೇವಸ್ಥಾನದ ಹೊರಾಂಗಣದಲ್ಲಿದ್ದ ಐದು ಹಳೆಯ ಕಟ್ಟೆಗಳನ್ನು ತೆರವುಗೊಳಿಸಿ, ಧಾರ್ಮಿಕ ದತ್ತಿ ಇಲಾಖೆಯ ಅನುಮತಿ ಪಡೆಯದೆ ನೂತನ ಶಿಲಾಮಯ ಕಟ್ಟಡ ನಿರ್ಮಿಸಲಾಗಿದೆ ಎಂದು ವಿರೂಪಾಕ್ಷ ಭಟ್ ಆರೋಪಿಸಿದರು. ಈ ಕಾಮಗಾರಿಗೆ ಸಂಬಂಧಿಸಿದಂತೆ ಅನಧಿಕೃತವಾಗಿ ಹಣ ಸಂಗ್ರಹಿಸಲಾಗಿದ್ದು, ಯಾವುದೇ ಟೆಂಡರ್ ಪ್ರಕ್ರಿಯೆ ನಡೆಸದೆ ಸರಕಾರದ ನಿಯಮಾವಳಿಗಳನ್ನು ಪಾಲಿಸದೆ ನಿರ್ಮಾಣ ಕಾರ್ಯ ಕೈಗೊಳ್ಳಲಾಗಿದೆ ಎಂದು ದೂರಿದರು.

ಇದಲ್ಲದೆ, ದೇವಸ್ಥಾನಕ್ಕೆ ಸಂಬಂಧಿಸಿದ ನವಗ್ರಹ ಗುಡಿ, ಅಯ್ಯಪ್ಪ ಸನ್ನಿಧಿ ಹಾಗೂ ನಟರಾಜ ವೇದಿಕೆ ಸಭಾಂಗಣವನ್ನು ತೆರವುಗೊಳಿಸುವ ಸಂದರ್ಭದಲ್ಲಿಯೂ ಸರಕಾರದ ನಿಯಮದಂತೆ ಟೆಂಡರ್ ಪ್ರಕ್ರಿಯೆ ಮತ್ತು ಮೌಲ್ಯಮಾಪನ ನಡೆಸಿಲ್ಲ. ಅಗತ್ಯ ಇಲಾಖಾ ಅನುಮೋದನೆಯನ್ನೂ ಪಡೆದಿಲ್ಲ ಎಂದು ಅವರು ಆರೋಪಿಸಿದರು.

ಚಿನ್ನದ ಮುಖವಾಡಕ್ಕೆ ಚಿನ್ನ ಸಂಗ್ರಹ: ಸಮರ್ಪಕ ಮಾಹಿತಿ ಇಲ್ಲವೆಂಬ ಆರೋಪ

ಶ್ರೀ ದೇವರಿಗೆ ಚಿನ್ನದ ಮುಖವಾಡ ನಿರ್ಮಿಸುವ ಉದ್ದೇಶದಿಂದ ಭಕ್ತರಿಂದ ಕಾಣಿಕೆ ರೂಪದಲ್ಲಿ ಚಿನ್ನ ಸಂಗ್ರಹಿಸಲಾಗುತ್ತಿದೆ. ಆದರೆ ಈ ಸಂಬಂಧ ಧಾರ್ಮಿಕ ದತ್ತಿ ಇಲಾಖೆಯ ಸಮರ್ಪಕ ಅನುಮತಿ ಪಡೆಯಲಾಗಿದೆಯೇ, ಆಗಮ ಪಂಡಿತರ ಅಭಿಪ್ರಾಯ ಹಾಗೂ ವರದಿ ಪಡೆಯಲಾಗಿದೆಯೇ ಎಂಬ ಬಗ್ಗೆ ಸ್ಪಷ್ಟತೆ ಇಲ್ಲ. ಸಂಗ್ರಹಿಸಲಾದ ಚಿನ್ನದ ನಿರ್ವಹಣೆ ಮತ್ತು ಅದರ ಲೆಕ್ಕಪತ್ರಗಳ ಕುರಿತು ದೇವಸ್ಥಾನದಲ್ಲಿ ಸಮರ್ಪಕ ಮಾಹಿತಿ ಲಭ್ಯವಿಲ್ಲ ಎಂಬ ವಿಚಾರವನ್ನೂ ನ್ಯಾಯಾಲಯದ ಗಮನಕ್ಕೆ ತರಲಾಗಿದೆ ಎಂದು ತಿಳಿಸಿದರು.

ದೇವಸ್ಥಾನದ ಆಡಳಿತ ಸಮಿತಿ ನೇಮಕಗೊಂಡ ಬಳಿಕ ನಿರ್ವಹಿಸಲಾದ ವಾರ್ಷಿಕ ಲೆಕ್ಕಪತ್ರಗಳಲ್ಲಿನ ಲೋಪದೋಷಗಳ ಬಗ್ಗೆಯೂ ಅರ್ಜಿಯಲ್ಲಿ ಪ್ರಶ್ನಿಸಲಾಗಿದೆ. ದೇವಸ್ಥಾನದ ಆಡಳಿತದಲ್ಲಿ ಇಲಾಖಾ ನಿಯಮಗಳ ಉಲ್ಲಂಘನೆ ಹಾಗೂ ಕಾರ್ಯನಿರ್ವಹಣಾಧಿಕಾರಿಗಳ ಅಧಿಕಾರ ಬಳಕೆಯಲ್ಲಿನ ಲೋಪಗಳ ಬಗ್ಗೆಯೂ ಕಾನೂನು ಹೋರಾಟ ನಡೆಸಲಾಗುತ್ತಿದೆ ಎಂದು ಹೇಳಿದರು.

ನ್ಯಾಯಾಲಯದ ಆದೇಶ ಪಾಲನೆಗೆ ಆಗ್ರಹ

ನ್ಯಾಯಾಲಯ ನೀಡಿರುವ ಮಧ್ಯಂತರ ತಡೆಯಾಜ್ಞೆಯ ಪ್ರಕಾರ, ಮುಂದಿನ ವಿಚಾರಣೆಯವರೆಗೆ ಇಲಾಖೆಯ ಅನುಮತಿ ಇಲ್ಲದ ಕಾಮಗಾರಿಗಳನ್ನು ನಡೆಸುವಂತಿಲ್ಲ. ಈಗಾಗಲೇ ಕರೆಯಲಾಗಿರುವ ನಿಯಮಬಾಹಿರ ಟೆಂಡರ್ ಪ್ರಕ್ರಿಯೆಗಳನ್ನು ಮುಂದುವರಿಸುವಂತಿಲ್ಲ. ಅನುಮೋದನೆ ಪಡೆಯದ ಜೀರ್ಣೋದ್ಧಾರ ಸಮಿತಿಯ ಹೆಸರಿನಲ್ಲಿ ಕಾಮಗಾರಿಗಳನ್ನು ನಡೆಸಲು ಅಥವಾ ಸಭೆಗಳನ್ನು ಆಯೋಜಿಸಿ ಕಾಮಗಾರಿಗಳನ್ನು ಮುಂದುವರಿಸಲು ಅವಕಾಶವಿಲ್ಲ. ಕಾಮಗಾರಿಗಳ ಹೆಸರನ್ನು ಬದಲಾಯಿಸಿ ಆದೇಶದ ವ್ಯಾಪ್ತಿಯಿಂದ ಹೊರಬಂದು ಮುಂದುವರಿಸುವ ಪ್ರಯತ್ನವೂ ಮಾಡಬಾರದು ಎಂಬುದು ನ್ಯಾಯಾಲಯದ ಆದೇಶದ ಆಶಯವಾಗಿದೆ ಎಂದು ವಿರೂಪಾಕ್ಷ ಭಟ್ ತಿಳಿಸಿದರು.

ನ್ಯಾಯಾಲಯದ ಆದೇಶವನ್ನು ಪ್ರತಿವಾದಿಗಳು ಗೌರವಿಸಬೇಕು. ಆದೇಶದ ವ್ಯಾಪ್ತಿಗೆ ಒಳಪಡುವ ಕಾಮಗಾರಿಗಳನ್ನು ತಕ್ಷಣ ಸ್ಥಗಿತಗೊಳಿಸಿ, ಮುಂದಿನ ದಿನಗಳಲ್ಲಿ ಎಲ್ಲ ಅಭಿವೃದ್ಧಿ ಕಾರ್ಯಗಳನ್ನು ಧಾರ್ಮಿಕ ದತ್ತಿ ಇಲಾಖೆಯ ಕಾನೂನುಬದ್ಧ ಅನುಮೋದನೆ ಮತ್ತು ಪಾರದರ್ಶಕ ಟೆಂಡರ್ ಪ್ರಕ್ರಿಯೆಯ ಮೂಲಕವೇ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.

ದೇವಸ್ಥಾನದ ಅಭಿವೃದ್ಧಿಗೆ ವಿರೋಧವಿಲ್ಲ

ದೇವಸ್ಥಾನದ ಅಭಿವೃದ್ಧಿಗೆ ನಮ್ಮ ಯಾವುದೇ ವಿರೋಧವಿಲ್ಲ. ದೇವಸ್ಥಾನ ಇನ್ನಷ್ಟು ಅಭಿವೃದ್ಧಿಯಾಗಬೇಕು, ಭಕ್ತರಿಗೆ ಉತ್ತಮ ಸೌಲಭ್ಯಗಳು ದೊರೆಯಬೇಕು ಎಂಬುದೇ ನಮ್ಮ ಆಶಯ. ಆದರೆ ಅಭಿವೃದ್ಧಿಯ ಹೆಸರಿನಲ್ಲಿ ಇಲಾಖಾ ನಿಯಮಗಳನ್ನು ಮೀರಿ, ಕಾನೂನುಬಾಹಿರವಾಗಿ ಕಾಮಗಾರಿಗಳನ್ನು ನಡೆಸುವುದನ್ನು ಒಪ್ಪಲು ಸಾಧ್ಯವಿಲ್ಲ. ದೇವಸ್ಥಾನದ ಆಡಳಿತದಲ್ಲಿ ಗೊಂದಲ ಸೃಷ್ಟಿಯಾಗದೆ ಪಾರದರ್ಶಕ ವ್ಯವಸ್ಥೆ ಇರಬೇಕು. ಭಕ್ತರ ಧಾರ್ಮಿಕ ಶ್ರದ್ಧೆ ಮತ್ತು ನಂಬಿಕೆಗೆ ಧಕ್ಕೆಯಾಗದಂತೆ ದೇವಸ್ಥಾನದ ಆಡಳಿತ ನಡೆಯಬೇಕು. ಕಾನೂನುಬದ್ಧ ಅನುಮೋದನೆ, ನಿಯಮಾನುಸಾರ ಹಣಕಾಸಿನ ನಿರ್ವಹಣೆ ಹಾಗೂ ಪಾರದರ್ಶಕತೆಯೊಂದಿಗೆ ಅಭಿವೃದ್ಧಿ ಕಾರ್ಯಗಳು ನಡೆಯಬೇಕು ಎಂದು ಮಚ್ಚಿಮಲೆ ವಿರೂಪಾಕ್ಷ ಭಟ್ ಒತ್ತಾಯಿಸಿದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!