ಅಪರಾಧ
Divya Vasanth-100 ಜನರಿಗೆ ದಿವ್ಯಾ ವಸಂತ್ ಗ್ಯಾಂಗ್ ಸುಲಿಗೆ : ಇಬ್ಬರ ಬಂಧನ : ದಿವ್ಯಾ ನಾಪತ್ತೆ
ಬೆಂಗಳೂರು : ಇಂದಿರಾನಗರ ‘ಸ್ಪಾ’ ವ್ಯವಸ್ಥಾಪಕನಿಗೆ ಬೆದರಿಸಿ 15 ಲಕ್ಷ ರೂ ಹಣ ಸುಲಿಗೆ ಯತ್ನ ಪ್ರಕರಣ ಸಂಬಂಧ ‘ರಾಜ್ ನ್ಯೂಸ್’ ಸುದ್ದಿವಾಹಿನಿ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಸೇರಿ ಇಬ್ಬರನ್ನು ಜೆ.ಬಿ.ನಗರ ಪೊಲೀಸರು ಬಂಧಿಸಿದ್ದಾರೆ.
ಸುದ್ದಿವಾಹಿನಿಯ ಸಿಇಒ ರಾಜಾನುಕುಂಟೆ ವೆಂಕಟೇಶ್ ಹಾಗೂ ದಿವ್ಯಾ ವಸಂತ್, ಸೋದರ ಸಂದೇಶ್ ಬಂಧಿತರಾಗಿದ್ದು, ಆರೋಪಿಗಳಿಂದ ಕೆಲ ದಾಖಲೆಗಳನ್ನು ಜಪ್ತಿ ಮಾಡಲಾಗಿದೆ. ಕೃತ್ಯ ಬೆಳಕಿಗೆ ಬಂದ ನಂತರ ತಪ್ಪಿಸಿಕೊಂಡಿರುವ ನಿರೂಪಕಿ ದಿವ್ಯಾ, ಸಚಿನ್ ಹಾಗೂ ಆಕಾಶ್ ಪತ್ತೆಗೆ ಪೊಲೀಸರು ಹುಡುಕಾಟ ನಡೆಸಿದ್ದಾರೆ.
ಇತ್ತೀಚಿಗೆ ಇಂದಿರಾನಗರದ 100 ಅಡಿ ರಸ್ತೆ 15ನೇ ಮುಖ್ಯರಸ್ತೆಯ ‘ಟ್ರೀ ಸ್ಪಾ ಆ್ಯಂಡ್ ಬ್ಯೂಟಿ’ ಪಾರ್ಲರ್‌ನ ವ್ಯವಸ್ಥಾಪಕ ಶಿವಶಂಕರ್‌ರವರಿಗೆ ವೇಶ್ಯಾವಾಟಿಕೆ ನಡೆದಿದೆ ಎಂದು ಬೆದರಿಸಿ ಹಣ ಸುಲಿಗೆ ವೆಂಕಟೇಶ್ ತಂಡ ಯತ್ನಿಸಿತ್ತು. ಈ ಬಗ್ಗೆ ತನಿಖೆಗಿಳಿದ ಪೊಲೀಸರು, ತಾಂತ್ರಿಕ ಮಾಹಿತಿ ಆಧರಿಸಿ ಸಿಇಒ ಸೇರಿ ಇಬ್ಬರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.
‘ಸ್ಪೈ ರಿಸರ್ಚ್ ಟೀಂ’ ಹೆಸರಿನ ಗ್ರೂಪ್:
ಸುಲಿಗೆ ಕೃತ್ಯಗಳಿಗೆ ವಾಟ್ಸ್ ಆಪ್‌ನಲ್ಲಿ ‘ಸ್ಪೈ ರಿಸರ್ಚ್ ಟೀಂ’ ಹೆಸರಿನ ಗ್ರೂಪ್ ಅನ್ನು ವೆಂಕಟೇಶ್ ಹಾಗೂ ದಿವ್ಯಾ ಮಾಡಿಕೊಂಡಿದ್ದರು. ಈ ಗ್ರೂಪ್‌ನಲ್ಲಿ ತಮ್ಮ ಕಾರ್ಯಸೂಚಿಗಳ ಬಗ್ಗೆ ಆರೋಪಿಗಳು ಚರ್ಚಿಸುತ್ತಿದ್ದರು ಎಂದು ಮೂಲಗಳು ಹೇಳಿವೆ.
ಸುಲಭವಾಗಿ ಹಣ ಸಂಪಾದಿಸಲು ಅಡ್ಡ ಮಾರ್ಗ:
ಖಾಸಗಿ ಸುದ್ದಿವಾಹಿನಿಯಲ್ಲಿ ನಿರೂಪಕಿಯಾಗಿದ್ದ ದಿವ್ಯಾ, ಆರು ತಿಂಗಳ ಹಿಂದೆ ಕೆಲಸ ಬಿಟ್ಟಿದ್ದಳು. ಅಲ್ಲದೆ ಇನ್‌ಸ್ಟಾಗ್ರಾಂ ಹಾಗೂ ಫೇಸ್‌ಬುಕ್ ಸೇರಿ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಮತ್ತು ರೀಲ್ಸ್‌ಗಳ ಮೂಲಕ ಆಕೆ ಖ್ಯಾತಿ ಪಡೆದಿದ್ದಳು. ಖಾಸಗಿ ಸುದ್ದಿವಾಹಿನಿಯಲ್ಲಿ ಆಕೆಗೆ 15 ಸಾವಿರ ರೂ ಸಂಬಳ ಇದ್ದರೆ, ಮನರಂಜನಾ ವಾಹಿನಿಯಲ್ಲಿ ಹಾಸ್ಯ ಕಾರ್ಯಕ್ರಮದ ನಟಿಸಿದ್ದ ಆಕೆಗೆ ವಾರಕ್ಕೆ 6 ರಿಂದ 7 ಸಾವಿರ ರೂ ಸಂಭಾವನೆ ಸಿಗುತ್ತಿತ್ತು. ಐಷಾರಾಮಿ ಜೀವನಕ್ಕೆ ಬಿದ್ದಿದ್ದ ದಿವ್ಯಾ, ಸುಲಭವಾಗಿ ಹಣ ಸಂಪಾದಿಸಲು ಅಡ್ಡ ಮಾರ್ಗ ತುಳಿದು ಸಂಕಷ್ಟಕ್ಕೆ ತುತ್ತಾಗಿದ್ದಾಳೆ ಎಂದು ಅಧಿಕಾರಿಗಳು ಹೇಳಿದ್ದಾರೆ.
100ಕ್ಕೂ ಹೆಚ್ಚು ಜನರಿಂದ ರೂ 1 ಲಕ್ಷ ವರೆಗೆ ಸುಲಿಗೆ:
ರಾಜ್ ನ್ಯೂಸ್ ವಾಹಿನಿ ಸೇರುವ ಮುನ್ನ ಯೂಟ್ಯೂಬ್‌ನಲ್ಲಿ ತನ್ನದೇ ಚಾನಲ್ ಅನ್ನು ವೆಂಕಟೇಶ್ ಮಾಡಿಕೊಂಡಿದ್ದ. ಆ ಚಾನೆಲ್‌ಗೆ ಸಂದರ್ಶನಕ್ಕಾಗಿ ದಿವ್ಯಾಳನ್ನು ಆತ ಪರಿಚಯ ಮಾಡಿಕೊಂಡಿದ್ದ. ನಂತರ ಇಬ್ಬರ ನಡುವೆ ಆತ್ಮೀಯ ಒಡನಾಟವಿತ್ತು. ಈ ಗೆಳೆತನದಲ್ಲೇ ಇಬ್ಬರು ಸುಲಿಗೆಗೆ ಕೃತ್ಯಕ್ಕಿಳಿದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಮಸಾಜ್ ಪಾರ್ಲರ್‌ಗಳು ಹಾಗೂ ವೈದ್ಯರು ಸೇರಿ ಹಣವಂತರಿಗೆ ಹನಿಟ್ರ್ಯಾಪ್ ಮಾದರಿಯಲ್ಲಿ ಸ್ನೇಹದ ಬಲೆಗೆ ಬೀಳಿಸಿಕೊಂಡು ಸುಲಿಗೆ ಮಾಡುತ್ತಿದ್ದರು. ಇದುವರೆಗೆ ಸುಮಾರು 100ಕ್ಕೂ ಹೆಚ್ಚಿನ ಜನರಿಂದ ಈ ತಂಡ ಸುಲಿಗೆ ಮಾಡಿದೆ. ಸಂತ್ರಸ್ತರಿಂದ 80 ಸಾವಿರ, 50 ಸಾವಿರ ಹಾಗೂ 1 ಲಕ್ಷ ರುವರೆಗೆ ಆನ್‌ಲೈನ್ ಮೂಲಕ ತಮ್ಮ ಖಾತೆಗಳಿಗೆ ವೆಂಕಟೇಶ್ ಹಾಗೂ ದಿವ್ಯಾ ಹಣ ವರ್ಗಾಯಿಸಿಕೊಂಡಿರುವುದು ತನಿಖೆಯಲ್ಲಿ ಪತ್ತೆಯಾಗಿದೆ ಎಂದು ಮೂಲಗಳು ಹೇಳಿವೆ.
ದಿವ್ಯಾ ಮನೆಗೆ ಪೊಲೀಸರ ದಾಳಿ:
ಪ್ರಕರಣ ಸಂಬಂಧ ಲಗ್ಗೆರೆಯಲ್ಲಿರುವ ದಿವ್ಯಾ ಮನೆ ಮೇಲೆ ಪೊಲೀಸರು ದಾಳಿ ನಡೆಸಿ ಕೆಲ ದಾಖಲೆಗಳನ್ನು ಜಪ್ತಿ ಮಾಡಿದ್ದಾರೆ. ಬಂಧನ ಭೀತಿಗೊಳಗಾದ ದಿವ್ಯಾ, ಮನೆಯಲ್ಲಿದ್ದ ಕ್ಯಾಮೆರಾ ಹಾಗೂ ಲ್ಯಾಪ್ ಟಾಪ್ ಸೇರಿದಂತೆ ಕೆಲ ವಸ್ತುಗಳನ್ನು ತೆಗೆದುಕೊಂಡು ಕಾರಿನಲ್ಲಿ ಪರಾರಿಯಾಗಿದ್ದಾಳೆ ಎಂದು ಮೂಲಗಳು ತಿಳಿಸಿವೆ.
ದಿವ್ಯಾ ತಾಯಿ ಕಣ್ಣೀರು:
ಈ ಸುಲಿಗೆ ಯತ್ನ ಪ್ರಕರಣದಲ್ಲಿ ತಮ್ಮ ಮಕ್ಕಳು ಸಿಕ್ಕಿಬಿದ್ದರಿಂದ ತೀವ್ರವಾಗಿ ನೊಂದಿರುವ ದಿವ್ಯಾ ತಾಯಿ, ಜೆ.ಬಿ.ನಗರ ಠಾಣೆಗೆ ತೆರಳಿ ಪೊಲೀಸರ ಮುಂದೆ ಕಣ್ಣೀರಿಟ್ಟಿದ್ದಾರೆ. ತಾನು ಮನೆಗಳಲ್ಲಿ ಕೆಲಸ ಮಾಡಿ ಮಕ್ಕಳನ್ನು ಸಾಕಿದ್ದೇನೆ. ವೆಂಕಟೇಶ್‌ನಿಂದಲೇ ದಿವ್ಯಾ ತಪ್ಪು ದಾರಿ ತುಳಿದಿದ್ದಾಳೆ ಎಂದು ಅವರು ಅಲವತ್ತುಕೊಂಡಿದ್ದಾಗಿ ತಿಳಿದು ಬಂದಿದೆ.
ಮಸಾಜ್ ಪಾರ್ಲರ್ ಟ್ರ್ಯಾಪ್ ವೆಂಕಟೇಶ್ ಹಾಗೂ ದಿವ್ಯಾ ತಂಡ ಕೆಲ ದಿನಗಳ ಹಿಂದೆ ಇಂದಿರಾನಗರದ ಟ್ರೀ ಸ್ಪಾ ಆ್ಯಂಡ್ ಬ್ಯೂಟಿ ಪಾರ್ಲರ್‌ಗೆ ಈಶಾನ್ಯ ರಾಜ್ಯದ ಯುವತಿಯನ್ನು ಕೆಲಸಕ್ಕೆ ಸೇರಿಸಿತ್ತು. ಬಳಿಕ ಗ್ರಾಹಕನ ಸೋಗಿನಲ್ಲಿ ಸ್ಪಾಗೆ ದಿವ್ಯಾ ಸೋದರ ಸಂದೇಶ್ ತೆರಳಿದ್ದ. ಈ ಮೊದಲೇ ಸ್ಪಾನಲ್ಲಿ ಕೆಲಸದಲ್ಲಿದ್ದ ತನ್ನ ಗ್ಯಾಂಗ್‌ನ ಯುವತಿ ಬಳಿಯೇ ಮಸಾಜ್‌ಗೆ ಗೊತ್ತುಪಡಿಸಿದ್ದ. ಆಗ ಕೊಠಡಿಯಲ್ಲಿ ರಹಸ್ಯ ಕ್ಯಾಮೆರಾವಿಟ್ಟು ಸಲುಗೆಯಿಂದಿರುವ ದೃಶ್ಯಾವಳಿಗಳನ್ನು ಸಂದೇಶ್ ಚಿತ್ರೀಕರಿಸಿಕೊಂಡಿದ್ದ. ಇದಾದ ಬಳಿಕ ತನ್ನ ನ್ಯೂಸ್ ಚಾನೆಲ್‌ನ ವರದಿಗಾರ್ತಿಯನ್ನು ಆ ಸ್ಪಾಗೆ ಕಳುಹಿಸಿ ವೆಂಕಟೇಶ್ ಹಣ ಸುಲಿಗೆಗೆ ಯತ್ನಿಸಿದ್ದನು
ನಿಮ್ಮ ಸ್ಪಾನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎಂದು ಸಂದೇಶ್ ಚಿತ್ರೀಕರಿಸಿದ್ದ ವಿಡಿಯೋವನ್ನು ಸ್ಪಾ ವ್ಯವಸ್ಥಾಪಕನಿಗೆ ತೋರಿಸಿ ವೆಂಕಟೇಶ್ ಬೆದರಿಸಿದ್ದ. ಮೊದಲು 15 ಲಕ್ಷ ರೂಗೆ ಬೇಡಿಕೆ ಇಟ್ಟಿದ್ದ ಆರೋಪಿಗಳು, ಕೊನೆಗೆ 8 ಲಕ್ಷ ರೂ ನೀಡುವಂತೆ ಒತ್ತಾಯಿಸಿದ್ದರು. ಈ ಬೆದರಿಕೆ ಸಹಿಸಲಾರದೆ ಸ್ಪಾ ವ್ಯವಸ್ಥಾಪಕ, ಜೆ.ಬಿ.ನಗರ ಠಾಣೆಗೆ ದೂರು ಕೊಟ್ಟಿದ್ದರು. ಅಂತೆಯೇ ತನಿಖೆಗಿಳಿದ ಪೊಲೀಸರು, ಮೊಬೈಲ್ ಕರೆಗಳನ್ನು ಪರಿಶೀಲಿಸಿದಾಗ ವೆಂಕಟೇಶ್ ತಂಡದ ಬಗ್ಗೆ ಮಾಹಿತಿ ಸಿಕ್ಕಿತು. ಈ ಸುಳಿವು ಆಧರಿಸಿ ವೆಂಕಟೇಶ್ ಹಾಗೂ ಸಂದೇಶ್‌ನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಂತರ ರಾಜ್ಯ
Blackmail-ದೋಸೆಯಲ್ಲಿ ಸತ್ತ ಇಲಿ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ದೂರು ನೀಡಿದ್ದ ಮಹಿಳೆಯಿಂದಲೇ ₹25 ಲಕ್ಷಕ್ಕೆ ಬ್ಲ್ಯಾಕ್‌ಮೇಲ್..!
ಮುಂಬೈನ ಬೊರಿವಲಿ ಪ್ರದೇಶದ ಹೋಟೆಲ್‌ವೊಂದರಲ್ಲಿ ಮೈಸೂರು ಮಸಾಲೆ ದೋಸೆಯಲ್ಲಿ ಸತ್ತ ಇಲಿ ಪತ್ತೆಯಾದ ಪ್ರಕರಣಕ್ಕೆ ಇದೀಗ ಅಚ್ಚರಿಯ ತಿರುವು ಸಿಕ್ಕಿದೆ. ಘಟನೆಯ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಮತ್ತಷ್ಟು ವೈರಲ್ ಮಾಡುವುದಾಗಿ ಬೆದರಿಸಿ ಹೋಟೆಲ್ ಮಾಲೀಕರಿಂದ ₹25 ಲಕ್ಷಕ್ಕೆ ಬೇಡಿಕೆ ಇಟ್ಟ ಆರೋಪದಲ್ಲಿ, ದೂರು ನೀಡಿದ್ದ ಮಹಿಳೆಯನ್ನೇ ಪೊಲೀಸರು ಬಂಧಿಸಿದ್ದಾರೆ.
ಮುಂಬೈ: ಮುಂಬೈನ ಬೊರಿವಲಿ ಪ್ರದೇಶದ ಹೋಟೆಲ್‌ವೊಂದರಲ್ಲಿ ಮೈಸೂರು ಮಸಾಲೆ ದೋಸೆಯಲ್ಲಿ ಸತ್ತ ಇಲಿ ಪತ್ತೆಯಾದ ಪ್ರಕರಣಕ್ಕೆ ಇದೀಗ ಅಚ್ಚರಿಯ ತಿರುವು ಸಿಕ್ಕಿದೆ. ಘಟನೆಯ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಮತ್ತಷ್ಟು ವೈರಲ್ ಮಾಡುವುದಾಗಿ ಬೆದರಿಸಿ ಹೋಟೆಲ್ ಮಾಲೀಕರಿಂದ ₹25 ಲಕ್ಷಕ್ಕೆ ಬೇಡಿಕೆ ಇಟ್ಟ ಆರೋಪದಲ್ಲಿ, ದೂರು ನೀಡಿದ್ದ ಮಹಿಳೆಯನ್ನೇ ಪೊಲೀಸರು ಬಂಧಿಸಿದ್ದಾರೆ.
ಸೆ.24ರಂದು ಮಾನ್ಸಿ ಎಂಬ ಮಹಿಳೆ ತನ್ನ ಮಗುವಿನೊಂದಿಗೆ ಇಬ್ಬರು ಪುರುಷರ ಜತೆ ಬೊರಿವಲಿಯ ಹೋಟೆಲ್‌ಗೆ ತೆರಳಿದ್ದರು. ಈ ವೇಳೆ ಮೈಸೂರು ಮಸಾಲೆ ದೋಸೆ ಆರ್ಡರ್ ಮಾಡಿದ್ದರು. ದೋಸೆ ತಿನ್ನುವ ಸಂದರ್ಭದಲ್ಲಿ ಅದರೊಳಗೆ ಸತ್ತ ಸಣ್ಣ ಇಲಿ ಪತ್ತೆಯಾಗಿದೆ ಎಂದು ಅವರು ಆರೋಪಿಸಿದ್ದರು.
ಮಾನ್ಸಿ ಅವರ ಹೇಳಿಕೆಯಂತೆ, ಅವರ ಸಹೋದರ ದೋಸೆಯ ಕೆಲವು ಭಾಗಗಳನ್ನು ಸೇವಿಸಿದ ಬಳಿಕ ಅದರೊಳಗೆ ಸತ್ತ ಇಲಿ ಇರುವುದನ್ನು ಗಮನಿಸಿದ್ದರು. ಇದರಿಂದ ಆಘಾತಗೊಂಡ ಅವರು ವಾಂತಿ ಮಾಡಿಕೊಂಡಿದ್ದರು. ಬಳಿಕ ಮಾನ್ಸಿ ಬೊರಿವಲಿ ಪೊಲೀಸ್ ಠಾಣೆಗೆ ಕರೆ ಮಾಡಿ ಘಟನೆ ಕುರಿತು ದೂರು ನೀಡಿದ್ದರು.
ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ, ಆಹಾರ ಮತ್ತು ಔಷಧ ಆಡಳಿತ (FDA) ಇಲಾಖೆ ಸೆ.28ರಂದು ಹೋಟೆಲ್‌ನ ಪರವಾನಗಿಯನ್ನು ಅಮಾನತುಗೊಳಿಸಿತ್ತು. ಇದರಿಂದ ಹೋಟೆಲ್ ಮುಚ್ಚುವ ಪರಿಸ್ಥಿತಿ ಎದುರಾಗಿತ್ತು.
₹25 ಲಕ್ಷಕ್ಕೆ ಬ್ಲ್ಯಾಕ್‌ಮೇಲ್
ವಿಡಿಯೋ ವೈರಲ್ ಆದ ಬಳಿಕ ಹೋಟೆಲ್ ಮಾಲೀಕರಿಗೆ ಬೆದರಿಕೆ ಕರೆಗಳು ಬರಲಾರಂಭಿಸಿದ್ದವು. ವಿಡಿಯೋವನ್ನು ಮತ್ತಷ್ಟು ವೈರಲ್ ಮಾಡುವುದಾಗಿ ಹಾಗೂ ಸಂಬಂಧಿಕರಿಗೆ ಕಳುಹಿಸುವುದಾಗಿ ಬೆದರಿಸಿ ₹25 ಲಕ್ಷ ನೀಡುವಂತೆ ಒತ್ತಾಯಿಸಲಾಗಿತ್ತು ಎನ್ನಲಾಗಿದೆ.
ನಿರಂತರ ಬೆದರಿಕೆ ಮತ್ತು ಮಾನಸಿಕ ಕಿರುಕುಳದಿಂದಾಗಿ ಹೋಟೆಲ್ ಮಾಲೀಕರು ₹6 ಲಕ್ಷಕ್ಕೆ ಒಪ್ಪಂದ ಮಾಡಿಕೊಂಡಿದ್ದರು. ಅದರಂತೆ ₹1 ಲಕ್ಷವನ್ನು ಮುಂಗಡವಾಗಿ ನಗದು ರೂಪದಲ್ಲಿ ನೀಡಿದ್ದರು.
ಹಣ ಪಡೆಯುವ ವೇಳೆ ರೆಡ್‌ಹ್ಯಾಂಡ್ ಆಗಿ ಬಂಧನ
ಸೆ.29ರಂದು ಹೋಟೆಲ್ ಮಾಲೀಕರು ಬೊರಿವಲಿ ಪೊಲೀಸರಿಗೆ ದೂರು ನೀಡಿದ್ದರು. ಬಳಿಕ ಪೊಲೀಸರು ಬಲೆ ಬೀಸಿ, ಮತ್ತಷ್ಟು ಹಣ ಪಡೆಯಲು ಮಹಿಳೆಯನ್ನು ಕರೆಸಿಕೊಂಡಿದ್ದರು. ಹಣ ಸ್ವೀಕರಿಸುತ್ತಿದ್ದ ವೇಳೆ ಪೊಲೀಸರು ಆಕೆಯನ್ನು ರೆಡ್‌ಹ್ಯಾಂಡ್ ಆಗಿ ಬಂಧಿಸಿದ್ದಾರೆ.
ತನಿಖೆ ವೇಳೆ ಬಂಧಿತ ಮಹಿಳೆ ಬೇರೆ ಯಾರೂ ಅಲ್ಲ, ದೋಸೆಯಲ್ಲಿ ಸತ್ತ ಇಲಿ ಪತ್ತೆಯಾಗಿದೆ ಎಂದು ದೂರು ನೀಡಿದ್ದ ಮಾನ್ಸಿ ಅಮಿತ್ ಎಂಬುದು ಬೆಳಕಿಗೆ ಬಂದಿದೆ. ಅವರು ಬೊರಿವಲಿಯ ಗೋರೆಗಾಂವ್ ಪ್ರದೇಶದ ನಿವಾಸಿ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಕಾನೂನು ಕ್ರಮ ಕೈಗೊಂಡಿದ್ದು, ಬ್ಲ್ಯಾಕ್‌ಮೇಲ್‌ನಲ್ಲಿ ಭಾಗಿಯಾಗಿರುವ ಇತರ ಆರೋಪಿಗಳ ಪಾತ್ರದ ಬಗ್ಗೆಯೂ ತನಿಖೆ ಮುಂದುವರಿಸಿದ್ದಾರೆ.
ಅಂತರ ರಾಜ್ಯ
Premananda Ashram-ಪ್ರೇಮಾನಂದ ಆಶ್ರಮದ ಶಿಷ್ಯನ ಸಾವು ಪ್ರಕರಣಕ್ಕೆ ಟ್ವಿಸ್ಟ್: ರಕ್ತದ ಕಲೆ, ಸಿಸಿಟಿವಿ ದೃಶ್ಯಗಳ ಪರಿಶೀಲನೆ
ಪ್ರೇಮಾನಂದ ಮಹಾರಾಜರ ಆಶ್ರಮದಲ್ಲಿ ಶಿಷ್ಯ ರಸಿಕ್ ದುಲಾರಿ ನಾಲ್ಕನೇ ಮಹಡಿಯಿಂದ ಬಿದ್ದು ಮೃತಪಟ್ಟ ಪ್ರಕರಣದ ತನಿಖೆಯನ್ನು ಮಥುರಾ ಪೊಲೀಸರು ಚುರುಕುಗೊಳಿಸಿದ್ದಾರೆ. ಸೆ.25ರಂದು ನಡೆದ ಈ ಘಟನೆ ಆರಂಭದಲ್ಲಿ ಆತ್ಮಹತ್ಯೆ ಎಂದು ಪೊಲೀಸರು ಪರಿಗಣಿಸಿದ್ದರು. ಆದರೆ, ಸಿಸಿಟಿವಿ ದೃಶ್ಯಗಳು ಹಾಗೂ ತನಿಖೆಯಲ್ಲಿ ಸಿಕ್ಕಿರುವ ಕೆಲವು ಮಾಹಿತಿಗಳಿಂದ ಪ್ರಕರಣವು ಅನೂಹ್ಯ ತಿರುವು ಪಡೆದಿದೆ.
ಮಥುರಾ: ಪ್ರೇಮಾನಂದ ಮಹಾರಾಜರ ಆಶ್ರಮದಲ್ಲಿ ಶಿಷ್ಯ ರಸಿಕ್ ದುಲಾರಿ ನಾಲ್ಕನೇ ಮಹಡಿಯಿಂದ ಬಿದ್ದು ಮೃತಪಟ್ಟ ಪ್ರಕರಣದ ತನಿಖೆಯನ್ನು ಮಥುರಾ ಪೊಲೀಸರು ಚುರುಕುಗೊಳಿಸಿದ್ದಾರೆ. ಸೆ.25ರಂದು ನಡೆದ ಈ ಘಟನೆ ಆರಂಭದಲ್ಲಿ ಆತ್ಮಹತ್ಯೆ ಎಂದು ಪೊಲೀಸರು ಪರಿಗಣಿಸಿದ್ದರು. ಆದರೆ, ಸಿಸಿಟಿವಿ ದೃಶ್ಯಗಳು ಹಾಗೂ ತನಿಖೆಯಲ್ಲಿ ಸಿಕ್ಕಿರುವ ಕೆಲವು ಮಾಹಿತಿಗಳಿಂದ ಪ್ರಕರಣವು ಅನೂಹ್ಯ ತಿರುವು ಪಡೆದಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ 85 ಮಂದಿಯನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ. ರಸಿಕ್ ಅವರ ಕುಟುಂಬಸ್ಥರು, ಸ್ನೇಹಿತರು ಹಾಗೂ ಹಳೆಯ ಪರಿಚಯಸ್ಥರಿಂದಲೂ ಮಾಹಿತಿ ಪಡೆಯಲಾಗುತ್ತಿದೆ. ಆಶ್ರಮಕ್ಕೆ ಸೇರುವ ಮುನ್ನ ಅವರ ಜೀವನ ಹೇಗಿತ್ತು, ಬಳಿಕ ಅವರ ನಡೆ-ನುಡಿಯಲ್ಲಿ ಯಾವುದೇ ಬದಲಾವಣೆಯಾಗಿತ್ತೇ ಎಂಬುದನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.
ಆಶ್ರಮಕ್ಕೆ ಸೇರುವವರ ವೈಯಕ್ತಿಕ ಮೊಬೈಲ್‌ಗಳನ್ನು ಪಡೆದುಕೊಂಡು, ಬದಲಿಗೆ ಆಶ್ರಮದ ವ್ಯವಸ್ಥೆಯಲ್ಲಿರುವ ಮೊಬೈಲ್ ಮತ್ತು ಸಿಮ್ ನೀಡಲಾಗುತ್ತಿತ್ತು ಎನ್ನಲಾಗಿದೆ. ಹೀಗೆ ಮೊಬೈಲ್ ಬದಲಾಯಿಸುವ ಅಗತ್ಯ ಏನಿತ್ತು, ಆ ಮೊಬೈಲ್‌ಗಳ ಬಳಕೆಯ ಮೇಲೆ ಯಾರಾದರೂ ನಿಗಾ ಇಡುತ್ತಿದ್ದರೇ ಎಂಬುದನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.
ಆಶ್ರಮದಲ್ಲಿದ್ದವರು ಕುಟುಂಬದವರು ಹಾಗೂ ಸ್ನೇಹಿತರನ್ನು ಎಷ್ಟು ಬಾರಿ ಸಂಪರ್ಕಿಸುತ್ತಿದ್ದರು ಎಂಬುದನ್ನೂ ತನಿಖೆ ನಡೆಸಲಾಗುತ್ತಿದೆ. ರಸಿಕ್ ಅವರ ಹಳೆಯ ಮೊಬೈಲ್, ಹೊಸ ಸಿಮ್, ಕರೆಗಳ ವಿವರ ಹಾಗೂ ಸಂದೇಶಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.
ಸಾವಿಗೂ ಮುನ್ನ ಏನಾಗಿತ್ತು?
ರಸಿಕ್ ಕೊಠಡಿಯಿಂದ ಹೊರಬಂದಾಗಲೇ ಅವರ ಬಟ್ಟೆಯಲ್ಲಿ ರಕ್ತದ ಕಲೆಗಳು ಕಾಣಿಸಿಕೊಂಡಿದ್ದವು ಎಂದು ಸಿಸಿಟಿವಿ ದೃಶ್ಯಗಳಿಂದ ತಿಳಿದುಬಂದಿದೆ ಎನ್ನಲಾಗಿದೆ. ನಂತರ ಅವರು ನಾಲ್ಕನೇ ಮಹಡಿಯ ಮೇಲ್ಛಾವಣಿಗೆ ತೆರಳಿದ್ದಾರೆ. ಅಲ್ಲಿ ಕೆಲಕಾಲ ಕುಳಿತುಕೊಂಡು, ಬಳಿಕ ಮಲಗಿದ್ದರು. ನಂತರ ಎದ್ದು ನಿಂತ ಕೆಲವೇ ಕ್ಷಣಗಳಲ್ಲಿ ಮೇಲಿನಿಂದ ಕೆಳಗೆ ಬಿದ್ದಿದ್ದಾರೆ.
ರಸಿಕ್ ಅವರ ದೇಹದಲ್ಲಿ, ವಿಶೇಷವಾಗಿ ತೊಡೆಸಂಧಿ ಭಾಗದಲ್ಲಿ ಗಂಭೀರ ಗಾಯವಾಗಿರುವುದು ತನಿಖೆಯಲ್ಲಿ ಗಮನಕ್ಕೆ ಬಂದಿದೆ. ಈ ಗಾಯ ಹೇಗೆ ಉಂಟಾಯಿತು ಎಂಬುದನ್ನೂ ಪೊಲೀಸರು ಪರಿಶೀಲಿಸುತ್ತಿದ್ದಾರೆ.
ಅವರು ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು ಯಾವುದೇ ಮಾನಸಿಕ ಒತ್ತಡ ಅಥವಾ ಖಿನ್ನತೆಯಿಂದ ಬಳಲುತ್ತಿದ್ದರೇ ಎಂಬ ಬಗ್ಗೆಯೂ ತನಿಖೆ ನಡೆಯುತ್ತಿದೆ. ಈ ಕುರಿತು ಅವರು ಕುಟುಂಬದವರು ಅಥವಾ ಸ್ನೇಹಿತರ ಬಳಿ ಏನಾದರೂ ಹೇಳಿಕೊಂಡಿದ್ದರೇ ಎಂಬುದನ್ನು ಪೊಲೀಸರು ತಿಳಿದುಕೊಳ್ಳುತ್ತಿದ್ದಾರೆ.
ಇದಲ್ಲದೆ, ಸಾವಿಗೂ ಮುನ್ನ ಅವರು ಮದ್ಯ, ಮಾದಕ ವಸ್ತು ಅಥವಾ ಇತರ ಯಾವುದೇ ಮನಸ್ಸಿನ ಮೇಲೆ ಪರಿಣಾಮ ಬೀರುವ ವಸ್ತು ಸೇವಿಸಿದ್ದರೇ ಎಂಬುದನ್ನು ತಿಳಿಯಲು ಅವರ ರಕ್ತದ ಮಾದರಿಯನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.
ಸಿಸಿಟಿವಿ ದೃಶ್ಯಗಳು, ಮೊಬೈಲ್ ದಾಖಲೆ, ವೈದ್ಯಕೀಯ ವರದಿ ಹಾಗೂ ವಿಚಾರಣೆ ವೇಳೆ ಸಿಕ್ಕ ಮಾಹಿತಿಗಳನ್ನು ಆಧರಿಸಿ ರಸಿಕ್ ಅವರ ಸಾವಿಗೆ ನಿಖರ ಕಾರಣವೇನು ಎಂಬುದನ್ನು ಪೊಲೀಸರು ಪತ್ತೆಹಚ್ಚಲು ಮುಂದಾಗಿದ್ದಾರೆ.
ಅಂತರ ರಾಜ್ಯ
Fire truck-ಬಿಜೆಪಿ ಶಾಸಕನ ಬಂಗಲೆ ತೊಳೆಯಲು ಅಗ್ನಿಶಾಮಕ ವಾಹನ ಬಳಕೆ; ವಿಡಿಯೋ ವೈರಲ್ ಬಳಿಕ ₹2,700 ದಂಡ
ಗುಜರಾತ್‌ನ ದಾಹೋದ್ ಜಿಲ್ಲೆಯಲ್ಲಿ ಬಿಜೆಪಿ ಶಾಸಕರೊಬ್ಬರ ಬಂಗಲೆಯನ್ನು ಸ್ವಚ್ಛಗೊಳಿಸಲು ಅಗ್ನಿಶಾಮಕ ದಳದ ವಾಹನ ಬಳಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸಾರ್ವಜನಿಕರಿಂದಲೂ ಆಕ್ಷೇಪ ವ್ಯಕ್ತವಾಗಿದೆ.
ದಾಹೋದ್: ಗುಜರಾತ್‌ನ ದಾಹೋದ್ ಜಿಲ್ಲೆಯಲ್ಲಿ ಬಿಜೆಪಿ ಶಾಸಕರೊಬ್ಬರ ಬಂಗಲೆಯನ್ನು ಸ್ವಚ್ಛಗೊಳಿಸಲು ಅಗ್ನಿಶಾಮಕ ದಳದ ವಾಹನ ಬಳಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸಾರ್ವಜನಿಕರಿಂದಲೂ ಆಕ್ಷೇಪ ವ್ಯಕ್ತವಾಗಿದೆ.
ದೇವಗಢ್ ಬಾರಿಯಾ ಪುರಸಭೆಯ ಅಗ್ನಿಶಾಮಕ ವಾಹನವು ಧನ್‌ಪುರ್ ತಾಲೂಕಿನಲ್ಲಿರುವ ಬಿಜೆಪಿ ಶಾಸಕ ಬಚುಭಾಯ್ ಖಬಾದ್ ಅವರ ನಿವಾಸದ ಬಳಿ ನಿಂತಿದ್ದು, ಸಿಬ್ಬಂದಿ ಬಂಗಲೆಯ ಆವರಣ ಹಾಗೂ ಗೋಡೆಗಳಿಗೆ ಪೈಪ್ ಮೂಲಕ ನೀರು ಸಿಂಪಡಿಸುತ್ತಿರುವುದು ವಿಡಿಯೋದಲ್ಲಿ ಕಂಡುಬಂದಿದೆ.
ವಿಡಿಯೋ ವೈರಲ್ ಆದ ಬಳಿಕ ತುರ್ತು ಸೇವೆಗೆ ಮೀಸಲಾಗಿರುವ ಅಗ್ನಿಶಾಮಕ ವಾಹನವನ್ನು ವೈಯಕ್ತಿಕ ಬಳಕೆಗೆ ಬಳಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಶಾಸಕ ಖಬಾದ್ ಅವರಿಂದ ₹2,700 ದಂಡ ವಸೂಲಿ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಕುರಿತು ಎಎನ್‌ಐ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ದೇವಗಢ್ ಬಾರಿಯಾ ಪುರಸಭೆ ಅಧ್ಯಕ್ಷ ಘಮೇಶ್ ಕಲಾಲ್, ಅಗ್ನಿಶಾಮಕ ವಾಹನ ಕಳುಹಿಸುವಂತೆ ಶಾಸಕರು ಕರೆ ಮಾಡಿದ್ದರು. ಯಾವುದಾದರೂ ಗಂಭೀರ ಘಟನೆ ಸಂಭವಿಸಿರಬಹುದು ಎಂದು ಭಾವಿಸಿ ತಕ್ಷಣ ಅಗ್ನಿಶಾಮಕ ದಳವನ್ನು ಸಂಪರ್ಕಿಸಿ ವಾಹನ ಕಳುಹಿಸಿದ್ದಾಗಿ ತಿಳಿಸಿದ್ದಾರೆ.
ಆದರೆ, ಬಂಗಲೆ ಸ್ವಚ್ಛಗೊಳಿಸುವ ಉದ್ದೇಶಕ್ಕಾಗಿ ಅಗ್ನಿಶಾಮಕ ವಾಹನವನ್ನು ಬಳಸಲಾಗುತ್ತಿದೆ ಎಂಬುದು ತಮಗೆ ತಿಳಿದಿರಲಿಲ್ಲ ಎಂದು ಅಗ್ನಿಶಾಮಕ ಅಧಿಕಾರಿ ಸ್ಪಷ್ಟಪಡಿಸಿದ್ದಾರೆ.
ಬಂಗಲೆ ತೊಳೆಯಲು ವಾಹನ ಬಳಸಲಾಗುತ್ತದೆ ಎಂಬ ಮಾಹಿತಿ ಮುಂಚಿತವಾಗಿ ನೀಡಲಾಗಿರಲಿಲ್ಲ. ಈ ಕಾರಣದಿಂದ ಅಚಾತುರ್ಯ ಸಂಭವಿಸಿದೆ. ಇದೀಗ ತಪ್ಪಿತಸ್ಥರಿಂದ ದಂಡ ವಸೂಲಿ ಮಾಡಲಾಗಿದೆ ಎಂದು ಅಗ್ನಿಶಾಮಕ ಇಲಾಖೆ ತಿಳಿಸಿದೆ.
ವಿಡಿಯೋದಲ್ಲಿ ಏನಿದೆ?
ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ ಬೃಹತ್ ಬಂಗಲೆಯೊಂದರ ಮುಂಭಾಗ ಅಗ್ನಿಶಾಮಕ ವಾಹನ ನಿಂತಿರುವುದು ಕಾಣಿಸುತ್ತದೆ. ಅಗ್ನಿಶಾಮಕ ಸಿಬ್ಬಂದಿ ಪೈಪ್‌ಗಳ ಮೂಲಕ ಬಂಗಲೆಯ ಕಂಪೌಂಡ್ ಹಾಗೂ ಗೋಡೆಗಳಿಗೆ ನೀರು ಸಿಂಪಡಿಸಿ ಸ್ವಚ್ಛಗೊಳಿಸುತ್ತಿರುವ ದೃಶ್ಯಗಳು ವಿಡಿಯೋದಲ್ಲಿವೆ.
-
ಬಿಗ್ ನ್ಯೂಸ್21 hours agoಡಿಕೆಶಿ ಸರ್ಕಾರದಿಂದ ಜನತೆಗೆ ಬಿಗ್ ಶಾಕ್ – ರೈತರಿಗೆ ಬಂಪರ್ ಗಿಫ್ಟ್..! ಹಾಲಿನ ದರ 8 ರೂ. ಏರಿಕೆ : 6 ರೂ. ರೈತರಿಗೆ..! ನ.1 ರಿಂದ ಬಹುತೇಕ ಜಾರಿ
-
Uncategorized22 hours ago
ಶಿಕ್ಷೆಯ ವಿರುದ್ಧ ಹೈಕೋರ್ಟಿಗೆ ಅಪೀಲು; ನ್ಯಾಯಾಲಯಕ್ಕೆ ಗೈರು: ನೆಕ್ಕಿಲಾಡಿಯಲ್ಲಿ ಆರೋಪಿಯ ಬಂಧನ
-
ರಾಜಕೀಯ20 hours ago2027ರ ಜನವರಿ ಮೊದಲ ವಾರದಲ್ಲೇ ಜಿ.ಪಂ ಮತ್ತು ತಾ.ಪಂ ಚುನಾವಣೆ : ಸಚಿವ ಸಂಪುಟದಲ್ಲಿ ಚರ್ಚೆ..!
-
Uncategorized21 hours ago
Rahul Gandhi ;8 ಗಂಟೆಗಳ ಧರಣಿ ಬಳಿಕ ಪೊಲೀಸ್ ಆ್ಯಕ್ಷನ್: ರಾಹುಲ್–ಪ್ರಿಯಾಂಕಾ ಸೇರಿ 50 ಸಂಸದರು ವಶ
-
ಮಂಗಳೂರು9 hours agoChouta-ಫಾರಂ 7 ಕೊಟ್ಟ ಮಾತ್ರಕ್ಕೆ ಮತ ಡಿಲೀಟ್ ಆಗಲ್ಲ; ಅಕ್ರಮ ಡಿಲೀಷನ್ಗೆ ದಾಖಲೆ ತೋರಿಸಿ: ಕಾಂಗ್ರೆಸ್ಗೆ ಚೌಟ ಸವಾಲು
-
ಅಂತರ ರಾಜ್ಯ7 hours agoಕಾಸರಗೋಡು: ಆರ್ಎಸ್ಎಸ್ ವಕ್ತಾರರ ಭಾಗವಹಿಸುವಿಕೆ ವಿರೋಧಿಸಿ ಪ್ರತಿಭಟನೆ; ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳಿಗೆ ಗಾಯ
-
ರಾಜಕೀಯ9 hours agoAshok Rai-ಪಕ್ಷ ಸಂಘಟನೆಗೆ ಅಶೋಕ್ ರೈ ಹೊಸ ಹೆಜ್ಜೆ: ಪುತ್ತೂರು ಬ್ಲಾಕ್ ಕಾಂಗ್ರೆಸ್ಗೆ ಬೊಲೆರೋ
-
ಸ್ಥಳೀಯ7 hours agoBeltangadi-ಬೆಳ್ತಂಗಡಿ: ಚಾಲಕನ ಸಮಯಪ್ರಜ್ಞೆ; ಬಸ್ನಲ್ಲಿ ಅಸ್ವಸ್ಥಗೊಂಡ ಮಹಿಳೆ ಅಪಾಯದಿಂದ ಪಾರು


















