Connect with us

ರಾಜಕೀಯ

Scholarship-ವಿದ್ಯಾರ್ಥಿಗಳಿಗೆ ಬಂಪರ್ : ತಿಂಗಳಿಗೆ 15000 ರೂ ಸ್ಕಾಲರ್ ಶಿಪ್

Published

on

Ad Widget

Ad Widget

Ad Widget

Ad Widget

ಬೆಂಗಳೂರು:  ಸಿಎಂ ಅಧ್ಯಕ್ಷತೆಯಲ್ಲಿ ನಡೆದ ಅಭಿವೃದ್ಧಿ ಪರಿಷತ್‌ ಸಭೆಯಲ್ಲಿ ಐಎಎಸ್‌, ಐಪಿಎಸ್‌, ಐಆರ್‌ಎಸ್‌ ಸೇರಿದಂತೆ ಸ್ಪರ್ಧಾತ್ಮಕ ಪರೀಕ್ಷೆ ಸಿದ್ಧತೆಗಳಿಗಾಗಿ ದಿಲ್ಲಿಯಲ್ಲಿ ವಾಸಿಸುತ್ತಿರುವ ಪರಿಶಿಷ್ಟ ಜಾತಿ ಹಾಗೂ ಪಂಗಡದ ವಿದ್ಯಾರ್ಥಿಗಳಿಗೆ ಉತ್ತಮ ಹಾಸ್ಟೆಲ್‌ ಕಟ್ಟಿಸುವ ಜತೆಗೆ ತಿಂಗಳಿಗೆ 15 ಸಾವಿರ ರೂಪಾಯಿ ಸಹಾಯ ಧನ ನೀಡಲು ನಿರ್ಣಯ ತೆಗೆದುಕೊಳ್ಳಲಾಗಿದೆ.

Ad Widget

Ad Widget

Ad Widget

Ad Widget

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಸದ್ಯ 10 ಸಾವಿರ ಸಹಾಯಧನ ಕೊಡಲಾಗುತ್ತಿದ್ದು, ಈ ವರ್ಷದಿಂದ 5 ಸಾವಿರ ರೂ. ಹೆಚ್ಚಿಸಲಾಗುವುದು. ಈ ಸಂಬಂಧ ತತ್‌ಕ್ಷಣ ಆದೇಶ ಹೊರಡಿಸಲಾಗುವುದು. ದಿಲ್ಲಿ ಹಾಸ್ಟೆಲ್‌ನಲ್ಲಿ ಹೈಟೆಕ್‌ ಲೈಬ್ರರಿ ಮಾಡಲಾಗುವುದು. ಅಲ್ಲಿ ಎಲ್ಲ ರೀತಿಯ ಪುಸ್ತಕಗಳು ಸಿಗುವ ವ್ಯವಸ್ಥೆಯನ್ನು ಕಲ್ಪಿಸಲಾಗುವುದು ಎಂದರು.

Ad Widget

Ad Widget alt="Ad Widget"/>

Ad Widget

ಎಸ್‌ಸಿಎಸ್‌ಪಿ ಹಾಗೂ ಟಿಎಸ್‌ಪಿ ಕಾರ್ಯಕ್ರಮಗಳಿಗಾಗಿ ಈ ವರ್ಷ 39,121.46 ಕೋಟಿ ರೂ. ಮೊತ್ತದ ಕ್ರಿಯಾ ಯೋಜನೆಗೆ ಅನುಮತಿ ನೀಡಲಾಗಿದೆ. ಈ ಪೈಕಿ ಪರಿಶಿಷ್ಟ ಜಾತಿಗೆ 27,673.93 ಕೋಟಿ ರೂ. ಪರಿಶಿಷ್ಟ ಜಾತಿಗೆ 11,445.51 ಕೋಟಿ ರೂ. ಮೀಸಲಿಡಲಾಗಿದೆ. ಹಿಂದಿನ ವರ್ಷ 97.81 ಕೋಟಿ ಉಳಿತಾಯವಾಗಿದೆ. ಈ ಹಣವೂ ಸೇರಿದೆ. ಕಳೆದ ವರ್ಷಕ್ಕಿಂತ ಈ ವರ್ಷ 3,900 ಕೋಟಿ ರೂ. ಹೆಚ್ಚಾಗಿದೆ. ಈ ಹಣ ಇಲಾಖೆಗಳಿಗೆ ಹಂಚಿಕೆಯಾಗಿದ್ದು ಇದರ ಸದುಪಯೋಗ ಆಗಬೇಕು. ಸಮಾಜ ಕಲ್ಯಾಣ ಇಲಾಖೆ, ನಿಗಮಗಳು ಕಾಯ್ದೆಯ ಉದ್ದೇಶಕ್ಕೆ ಪೂರಕವಾಗಿ ಕೆಲಸ ಮಾಡಬೇಕು ಎಂದು ಸೂಚನೆ ನೀಡಿದರು.

Ad Widget

Ad Widget <> Ad Widget

ಶೇ. 100 ಸಾಧನೆ:
ಶೇ. 100 ಸಾಧನೆ ಈ ವರ್ಷ ಆಗಬೇಕು. ಇದರಲ್ಲಿ ನಿರ್ಲಕ್ಷ್ಯ ಮಾಡಿದವರ ಮೇಲೆ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗುತ್ತದೆ. ಕಾಯ್ದೆಯಲ್ಲಿದ್ದ 7ಇ ರದ್ದು ಮಾಡಿದ ರೀತಿಯಲ್ಲಿ 7ಡಿ ಕೂಡ ರದ್ದು ಮಾಡಬೇಕು ಎಂದು ಶಾಸಕ ನರೇಂದ್ರಸ್ವಾಮಿ ಸಲಹೆ ನೀಡಿದ್ದಾರೆ. ಈ ಸಲಹೆಯ ಸಾಧಕ ಬಾಧಕಗಳನ್ನು ಪರಿಶೀಲಿಸಲಾಗುವುದು ಎಂದರು.

ಆರ್ಥಿಕ ಸ್ಥಿತಿ ಪ್ರಗತಿ ಬಗ್ಗೆ ಮೌಲ್ಯಮಾಪನ:
ಕಳೆದ 10 ವರ್ಷದಲ್ಲಿ ಈ ಯೋಜನೆಯಿಂದ ಪರಿಶಿಷ್ಟ ಜಾತಿ ಮತ್ತು ಪಂಗಡದ ಮೇಲೆ ಬೀರಿರುವ ಪರಿಣಾಮಗಳ ಬಗ್ಗೆ ಈ ವರ್ಷ ಮನೆ-ಮನೆಗೆ ಭೇಟಿ ನೀಡಿ ಅಧ್ಯಯನ ನಡೆಸಲಾಗುವುದು. ಸಮುದಾಯದ ಮೇಲೆ ಬೀರಿರುವ ಪರಿಣಾಮ, ಸಮುದಾಯಕ್ಕೆ ಯೋಜನೆ ತಲುಪಿರುವ ಪ್ರಮಾಣದ ಬಗ್ಗೆ, ಹಾಗೂ ಅವರ ಆರ್ಥಿಕ ಸ್ಥಿತಿ ಪ್ರಗತಿ ಆಗಿರುವ ಬಗ್ಗೆ ಮೌಲ್ಯಮಾಪನ ಮಾಡಲಾಗುವುದು. ಕಳೆದ ವರ್ಷ ಯಾದ್ರಚ್ಛಿಕವಾಗಿ ಅಧ್ಯಯನ ನಡೆಸಿದ್ದು ಶೇ. 65ರಷ್ಟು ಯಶಸ್ಸು ಕಂಡು ಬಂದಿದೆ. ಈ ವರ್ಷ ಸಂಪೂರ್ಣ ಅಧ್ಯಯನ ಹಾಗೂ ಮೌಲ್ಯಮಾಪನ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

Ad Widget

Ad Widget

ಲ್ಯಾಪ್‌ಟಾಪ್‌ಗೆ 300 ಕೋಟಿ ರೂ ವೆಚ್ಚ?:
ಪರಿಶಿಷ್ಟ ಜಾತಿ ಹಾಗೂ ಪಂಗಡದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ನೀಡುವಂತೆ ಶಾಸಕ ನರೇಂದ್ರಸ್ವಾಮಿ ಸಲಹೆ ನೀಡಿದ್ದು, ಇದಕ್ಕೆ ಸುಮಾರು 300 ಕೋಟಿ ರೂ. ವೆಚ್ಚವಾಗಬಹುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಪಿಜಿ ವಿದ್ಯಾರ್ಥಿಗಳಿಗೂ ಲ್ಯಾಪ್‌ಟಾಪ್‌ ನೀಡಬೇಕೆಂಬ ಪ್ರಸ್ತಾವ ಇದೆ. ಇದಕ್ಕೆ ಹೆಚ್ಚುವರಿಯಾಗಿ 90 ಕೋಟಿ ರೂ. ಬೇಕು. ಈ ಬಗ್ಗೆ ಪರಿಶೀಲನೆ ನಡೆಸಿ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಹೇಳಿದರು.

Ad Widget
Click to comment

Leave a Reply

ರಾಜಕೀಯ

Kumaraswamy-ಹಾಸನ ಡಿಸಿ ವಿರುದ್ಧ ಭ್ರಷ್ಟಾಚಾರ ಆರೋಪ: ಕುಮಾರಸ್ವಾಮಿಗೆ ಸೈಬರ್ ಕಮಾಂಡ್ ಸೆಂಟರ್ ನೋಟಿಸ್

Published

on

Ad Widget

Ad Widget

Ad Widget

Ad Widget

ಹಾಸನ ಜಿಲ್ಲಾಧಿಕಾರಿ ಲತಾ ಕುಮಾರಿ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದ ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಇದೀಗ ಸಂಕಷ್ಟ ಎದುರಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಸೈಬರ್ ಕಮಾಂಡ್ ಸೆಂಟರ್ ಅಧಿಕಾರಿಗಳು ಕುಮಾರಸ್ವಾಮಿ ಅವರಿಗೆ ನೋಟಿಸ್ ಜಾರಿ ಮಾಡಿದ್ದಾರೆ.

Ad Widget

Ad Widget

Ad Widget

Ad Widget

ಬೆಂಗಳೂರು: ಹಾಸನ ಜಿಲ್ಲಾಧಿಕಾರಿ ಲತಾ ಕುಮಾರಿ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದ ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಇದೀಗ ಸಂಕಷ್ಟ ಎದುರಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಸೈಬರ್ ಕಮಾಂಡ್ ಸೆಂಟರ್ ಅಧಿಕಾರಿಗಳು ಕುಮಾರಸ್ವಾಮಿ ಅವರಿಗೆ ನೋಟಿಸ್ ಜಾರಿ ಮಾಡಿದ್ದಾರೆ.

Ad Widget

Ad Widget alt="Ad Widget"/>

Ad Widget

ಹಾಸನದಿಂದ ಬೆಂಗಳೂರಿನಲ್ಲಿರುವ ಕುಮಾರಸ್ವಾಮಿ ಅವರ ನಿವಾಸಕ್ಕೆ ಆಗಮಿಸಿದ ಅಧಿಕಾರಿಗಳು ನೋಟಿಸ್ ನೀಡಲು ಮುಂದಾಗಿದ್ದಾರೆ. ಆದರೆ, ಕುಮಾರಸ್ವಾಮಿ ಅವರು ನೋಟಿಸ್ ಸ್ವೀಕರಿಸಲು ನಿರಾಕರಿಸಿದ್ದಾರೆ ಎನ್ನಲಾಗಿದೆ.

Ad Widget

Ad Widget <> Ad Widget

ಏನಿದು ಪ್ರಕರಣ?
ಹಾಸನ ಜಿಲ್ಲಾಧಿಕಾರಿಯಾಗಿ ಮುಂದುವರಿಯಲು ಜಿಲ್ಲಾಧಿಕಾರಿ ಲತಾ ಕುಮಾರಿ ಅವರು ಜಿಲ್ಲಾ ಉಸ್ತುವಾರಿ ಸಚಿವ ಶಿವಲಿಂಗೇಗೌಡ ಅವರಿಗೆ 75 ಲಕ್ಷ ರೂಪಾಯಿ ಲಂಚ ನೀಡಿದ್ದಾರೆ ಎಂದು ಎಚ್.ಡಿ. ಕುಮಾರಸ್ವಾಮಿ ಇತ್ತೀಚೆಗೆ ಗಂಭೀರ ಆರೋಪ ಮಾಡಿದ್ದರು. ತಮ್ಮ ಆರೋಪಕ್ಕೆ ಪೂರಕವಾಗಿ ಜಿಲ್ಲಾಧಿಕಾರಿಗಳ ಆಪ್ತ ಸಹಾಯಕರಿಗೆ ಸಂಬಂಧಿಸಿದ್ದು ಎನ್ನಲಾದ ವಾಟ್ಸಾಪ್ ಚಾಟ್‌ಗಳನ್ನು ಮಾಧ್ಯಮಗಳ ಮುಂದೆ ಪ್ರದರ್ಶಿಸಿದ್ದರು.

ಆರೋಪ ನಿರಾಕರಿಸಿದ್ದ ಜಿಲ್ಲಾಧಿಕಾರಿ
ಕುಮಾರಸ್ವಾಮಿ ಅವರ ಆರೋಪವನ್ನು ಜಿಲ್ಲಾಧಿಕಾರಿ ಲತಾ ಕುಮಾರಿ ಸಂಪೂರ್ಣವಾಗಿ ತಳ್ಳಿಹಾಕಿದ್ದರು. ತಮ್ಮ ವಿರುದ್ಧ ಮಾಡಿರುವ ಲಂಚದ ಆರೋಪಗಳು ಸುಳ್ಳು. ವಾಟ್ಸಾಪ್ ಚಾಟ್‌ಗಳನ್ನು ಎಡಿಟ್ ಮಾಡಲಾಗಿದೆ ಎಂದು ತಮ್ಮ ಆಪ್ತ ಸಹಾಯಕರು ತಿಳಿಸಿದ್ದಾರೆ. ಈ ಬಗ್ಗೆ ಸಮಗ್ರ ತನಿಖೆಯಾಗಲಿ. ತಾವು ಸೈಬರ್ ಕ್ರೈಂ ವಿಭಾಗಕ್ಕೂ ದೂರು ನೀಡುವುದಾಗಿ ಹೇಳಿದ್ದರು.

Ad Widget

Ad Widget

ಇನ್ನೊಂದೆಡೆ, ಜಿಲ್ಲಾಧಿಕಾರಿಗಳ ಆಪ್ತ ಸಹಾಯಕ ಶಶಿಕಿರಣ್ ಅವರು ಹಾಸನ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ತಮ್ಮ ಹೆಸರು ಮತ್ತು ಫೋನ್ ಸಂಖ್ಯೆಯನ್ನು ಬಳಸಿಕೊಂಡು ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನದ ಮೂಲಕ ನಕಲಿ ವಾಟ್ಸಾಪ್ ಚಾಟ್‌ಗಳನ್ನು ಸೃಷ್ಟಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡಲಾಗಿದೆ ಎಂದು ಆರೋಪಿಸಿದ್ದರು.

ಎಫ್‌ಐಆರ್ ದಾಖಲು, ಕುಮಾರಸ್ವಾಮಿಗೆ ನೋಟಿಸ್
ಶಶಿಕಿರಣ್ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 335 ಮತ್ತು 336(4) ಅಡಿಯಲ್ಲಿ ಎಫ್‌ಐಆರ್ ದಾಖಲಿಸಿಕೊಂಡಿದ್ದರು.

ಪ್ರಕರಣದ ತನಿಖೆ ಕೈಗೆತ್ತಿಕೊಂಡಿರುವ ಹಾಸನ ಸೈಬರ್ ಕಮಾಂಡ್ ಸೆಂಟರ್ ಅಧಿಕಾರಿಗಳು ನಕಲಿ ವಾಟ್ಸಾಪ್ ಚಾಟ್‌ಗಳ ಮೂಲ ಪತ್ತೆಹಚ್ಚಲು ಮುಂದಾಗಿದ್ದಾರೆ. ಈ ಸಂಬಂಧ ಮಾಹಿತಿ ಪಡೆಯುವ ಉದ್ದೇಶದಿಂದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಿಗೆ ನೋಟಿಸ್ ಜಾರಿ ಮಾಡಿದ್ದು, ನೋಟಿಸ್ ಸ್ವೀಕರಿಸಲು ಅವರು ನಿರಾಕರಿಸಿದ್ದಾರೆ ಎನ್ನಲಾಗಿದೆ.

Ad Widget
Continue Reading

ಅಂತರ ರಾಜ್ಯ

Kerala government-ಪೋಷಕರ ಆಸ್ತಿ ಬರೆಸಿಕೊಂಡು ನಿರ್ಲಕ್ಷಿಸಿದರೆ ಮಕ್ಕಳಿಗೆ 3 ವರ್ಷ ಜೈಲು: ಕೇರಳ ಸರ್ಕಾರದ ಮಹತ್ವದ ನಿರ್ಧಾರ..!

Published

on

Ad Widget

Ad Widget

Ad Widget

Ad Widget

ಪೋಷಕರ ಆಸ್ತಿಯನ್ನು ತಮ್ಮ ಹೆಸರಿಗೆ ವರ್ಗಾಯಿಸಿಕೊಂಡ ಬಳಿಕ ಅವರನ್ನು ನಿರ್ಲಕ್ಷಿಸುವ ಅಥವಾ ಹಿಂಸಿಸುವ ಮಕ್ಕಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಇಂತಹ ಮಕ್ಕಳಿಗೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸುವ ಮಹತ್ವದ ಕಾನೂನನ್ನು ಕೇರಳ ಸರ್ಕಾರ ಜಾರಿಗೆ ತರಲು ಮುಂದಾಗಿದೆ ಎಂದು ಮುಖ್ಯಮಂತ್ರಿ ವಿ.ಡಿ. ಸತೀಶನ್ ತಿಳಿಸಿದ್ದಾರೆ.

Ad Widget

Ad Widget

Ad Widget

Ad Widget

ಕೊಲ್ಲಂ: ಪೋಷಕರ ಆಸ್ತಿಯನ್ನು ತಮ್ಮ ಹೆಸರಿಗೆ ವರ್ಗಾಯಿಸಿಕೊಂಡ ಬಳಿಕ ಅವರನ್ನು ನಿರ್ಲಕ್ಷಿಸುವ ಅಥವಾ ಹಿಂಸಿಸುವ ಮಕ್ಕಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಇಂತಹ ಮಕ್ಕಳಿಗೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸುವ ಮಹತ್ವದ ಕಾನೂನನ್ನು ಕೇರಳ ಸರ್ಕಾರ ಜಾರಿಗೆ ತರಲು ಮುಂದಾಗಿದೆ ಎಂದು ಮುಖ್ಯಮಂತ್ರಿ ವಿ.ಡಿ. ಸತೀಶನ್ ತಿಳಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ಕೊಲ್ಲಂ ಜಿಲ್ಲೆಯ ಪಟ್ಟಣಪುರಂನ ಗಾಂಧಿ ಭವನದಲ್ಲಿ 20 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ವೃದ್ಧ ಪುರುಷರಿಗಾಗಿ ಅತ್ಯಾಧುನಿಕ ವಸತಿ ಸೌಲಭ್ಯವಾದ ‘ಪಿತೃಮಂದಿರಂ’ ಉದ್ಘಾಟಿಸಿ ಅವರು ಮಾತನಾಡಿದರು.

Ad Widget

Ad Widget <> Ad Widget

ಅಕ್ಟೋಬರ್‌ನಲ್ಲಿ ರಾಜ್ಯ ವಿಧಾನಸಭೆ ಅಂಗೀಕರಿಸಿರುವ ಹಿರಿಯ ನಾಗರಿಕರ ಕಾಳಜಿ ಮತ್ತು ರಕ್ಷಣೆಗೆ ಸಂಬಂಧಿಸಿದ ಮಸೂದೆಯ ಪ್ರಮುಖ ಅಂಶಗಳನ್ನು ವಿವರಿಸಿದ ಅವರು, ಪೋಷಕರ ಆಸ್ತಿಯನ್ನು ಸಂಪೂರ್ಣವಾಗಿ ತಮ್ಮ ಹೆಸರಿಗೆ ಬರೆಸಿಕೊಂಡ ಬಳಿಕ ಅವರನ್ನು ನಿರ್ಲಕ್ಷಿಸುವ ಮಕ್ಕಳಿಗೆ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸುವ ನಿಬಂಧನೆಯನ್ನು ಉದ್ದೇಶಪೂರ್ವಕವಾಗಿಯೇ ಕಾಯ್ದೆಯಲ್ಲಿ ಸೇರಿಸಲಾಗಿದೆ ಎಂದು ಹೇಳಿದರು.

ಯುಡಿಎಫ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಕೈಗೊಂಡ ಮೊದಲ ನಿರ್ಧಾರವೇ ಹಿರಿಯ ನಾಗರಿಕರಿಗಾಗಿ ದೇಶದಲ್ಲೇ ಪ್ರಪ್ರಥಮ ಬಾರಿಗೆ ಪ್ರತ್ಯೇಕ ಇಲಾಖೆಯನ್ನು ಸ್ಥಾಪಿಸುವುದಾಗಿತ್ತು. ಹಿರಿಯ ನಾಗರಿಕರಿಗೆ ಹಲವು ಹಕ್ಕುಗಳನ್ನು ಒದಗಿಸುವ ವಿಶೇಷ ಕಾನೂನನ್ನು ಸರ್ಕಾರ ರೂಪಿಸಿದೆ ಎಂದು ತಿಳಿಸಿದರು.

Ad Widget

Ad Widget

ಈ ಮಸೂದೆಗೆ ರಾಜ್ಯಪಾಲರ ಅಂಕಿತ ದೊರೆತ ಬಳಿಕ ಕಾನೂನಾಗಿ ಜಾರಿಗೆ ಬರಲಿದೆ. ಪೋಷಕರ ಆಸ್ತಿಯನ್ನು ಪಡೆದುಕೊಂಡು ಅವರನ್ನು ಬೀದಿಗೆ ತಳ್ಳುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಎಚ್ಚರಿಕೆ ನೀಡಿದರು.

ಮಕ್ಕಳನ್ನು ಬೆಳೆಸಲು ಪೋಷಕರು ತಮ್ಮ ಜೀವನವನ್ನೇ ಮುಡಿಪಾಗಿಟ್ಟು ಅಪಾರ ತ್ಯಾಗ ಮಾಡುತ್ತಾರೆ. ಆದರೆ ಮಕ್ಕಳು ದೊಡ್ಡವರಾದ ಬಳಿಕ ಅದೇ ಪೋಷಕರನ್ನು ನಿರ್ಲಕ್ಷಿಸುವ ಘಟನೆಗಳು ನಡೆಯುತ್ತಿರುವುದು ವಿಷಾದನೀಯ. ಇಂತಹ ಸಂಸ್ಕೃತಿ ಕೇರಳದಲ್ಲಿ ಬೆಳೆಯಬಾರದು ಎಂದು ಅವರು ಹೇಳಿದರು.

ಪೋಷಕರನ್ನು ತಮ್ಮೊಂದಿಗೆ ಇರಿಸಿಕೊಂಡು ಪ್ರೀತಿ ಹಾಗೂ ಗೌರವದಿಂದ ನೋಡಿಕೊಳ್ಳುವ ಮನೋಭಾವ ಪ್ರತಿಯೊಬ್ಬರಲ್ಲೂ ಬೆಳೆಯಬೇಕು. ಕೇರಳದಲ್ಲಿ ಯಾವೊಬ್ಬ ಹಿರಿಯ ನಾಗರಿಕರೂ ಏಕಾಂಗಿಯಾಗಿ ಬದುಕುವ ಪರಿಸ್ಥಿತಿ ನಿರ್ಮಾಣವಾಗಬಾರದು ಎಂಬುದೇ ತಮ್ಮ ದೊಡ್ಡ ಕನಸು ಎಂದು ಮುಖ್ಯಮಂತ್ರಿ ತಿಳಿಸಿದರು.

Ad Widget
Continue Reading

ಅಂತರ ರಾಜ್ಯ

Punjab election-6 ವರ್ಷಗಳ ಬಳಿಕ ಮತ್ತೆ ಒಂದಾದ ಬಿಜೆಪಿ–ಅಕಾಲಿದಳ; 2027ರ ಪಂಜಾಬ್ ಚುನಾವಣೆಗೆ ಮೈತ್ರಿ ಘೋಷಣೆ

Published

on

Ad Widget

Ad Widget

Ad Widget

Ad Widget

ಪಂಜಾಬ್ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಆರು ವರ್ಷಗಳ ಬಳಿಕ ಬಿಜೆಪಿ ಮತ್ತು ಶಿರೋಮಣಿ ಅಕಾಲಿದಳ ಮತ್ತೆ ಮೈತ್ರಿ ಮಾಡಿಕೊಂಡಿವೆ. 2027ರಲ್ಲಿ ನಡೆಯಲಿರುವ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಎರಡೂ ಪಕ್ಷಗಳು ಒಟ್ಟಾಗಿ ಸ್ಪರ್ಧಿಸುವುದಾಗಿ ಘೋಷಿಸಿವೆ.

Ad Widget

Ad Widget

Ad Widget

Ad Widget

ಹೊಸದಿಲ್ಲಿ: ಪಂಜಾಬ್ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಆರು ವರ್ಷಗಳ ಬಳಿಕ ಬಿಜೆಪಿ ಮತ್ತು ಶಿರೋಮಣಿ ಅಕಾಲಿದಳ ಮತ್ತೆ ಮೈತ್ರಿ ಮಾಡಿಕೊಂಡಿವೆ. 2027ರಲ್ಲಿ ನಡೆಯಲಿರುವ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಎರಡೂ ಪಕ್ಷಗಳು ಒಟ್ಟಾಗಿ ಸ್ಪರ್ಧಿಸುವುದಾಗಿ ಘೋಷಿಸಿವೆ.

Ad Widget

Ad Widget alt="Ad Widget"/>

Ad Widget

ಹೊಸದಿಲ್ಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಜಂಟಿ ಸುದ್ದಿಗೋಷ್ಠಿ ನಡೆಸಿ ಮೈತ್ರಿಯನ್ನು ಪ್ರಕಟಿಸಿದರು. ಈ ಸಂದರ್ಭದಲ್ಲಿ ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸುಖಬೀರ್ ಸಿಂಗ್ ಬಾದಲ್ ಹಾಗೂ ಬಿಜೆಪಿ ಅಧ್ಯಕ್ಷ ನಿತಿನ್ ನಬಿನ್ ಉಪಸ್ಥಿತರಿದ್ದರು.

Ad Widget

Ad Widget <> Ad Widget

ಗುರುಪುರಬ್ ದಿನದಂದೇ ಮೈತ್ರಿ ಘೋಷಣೆ ಹೊರಬಿದ್ದಿರುವುದು ರಾಜಕೀಯವಾಗಿ ವಿಶೇಷ ಮಹತ್ವ ಪಡೆದಿದೆ. ಈ ಹಿಂದೆ ಎರಡೂ ಪಕ್ಷಗಳ ಮೈತ್ರಿ ಮುರಿದುಬೀಳಲು ಕಾರಣವಾದ ಘಟನೆಗಳಿಗೂ ಗುರುಪುರಬ್ ದಿನಕ್ಕೂ ಸಾಂಕೇತಿಕ ಸಂಬಂಧವಿದೆ ಎನ್ನಲಾಗಿದ್ದು, ಇದೀಗ ಆರು ವರ್ಷಗಳ ಬಳಿಕ ಮತ್ತೆ ಎರಡೂ ಪಕ್ಷಗಳು ಒಂದಾಗಿವೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!