ಕ್ರೈಂ
ಕಡಬ : ಸೇತುವೆಯಿಂದ ಕುಮಾರಧಾರ ನದಿಗೆ ಹಾರಿದ ವ್ಯಕ್ತಿ – ತೀವ್ರ ಹುಡುಕಾಟ
ಕಡಬ ; ವ್ಯಕ್ತಿಯೊಬ್ಬರು ನದಿಗೆ ಹಾರಿದ ಘಟನೆ ಜೂ 9 ರಂದು ಬೆಳ್ಳಿಗೆ ಕಡಬ ತಾಲೂಕಿನ ಕೋಡಿಂಬಾಳ ಬಳಿ ಕುಮಾರಧಾರ ಎಂಬಲ್ಲಿ ನಡೆದಿದೆ. ಸದ್ಯ ಆತ ನೀರಿನಲ್ಲಿ ಕಣ್ಮರೆಯಾಗಿದ್ದು ಆತನಿಗಾಗಿ ಹುಡುಕಾಟ ಮುಂದುವರಿದಿದೆ.
ಇಂದು ಬೆಳ್ಳಿಗೆ ಅಪರಿಚಿತ ವ್ಯಕ್ತಿ ಕೋಡಿಂಬಾಳ ಸಮೀಪ ಪುಳಿಕುಕ್ಕು
ಸೇತುವೆಯಿಂದ ನದಿಗೆ ಹಾರಿದ್ದಾನೆ ಎನ್ನಲಾಗಿದೆ.
ನದಿಯಲ್ಲಿ ಸಿಲುಕಿಕೊಂಡಿರುವ ವ್ಯಕ್ತಿಯ ರಕ್ಷಣೆಗೆ ಸ್ಥಳೀಯರು ಯತ್ನಿಸಿದರಾದರೂ, ಪ್ರಯೋಜನವಾಗಿಲ್ಲ ಎಂದು ತಿಳಿದು ಬಂದಿದೆ.
ಕಡಬ ಎಸ್ಐ ಅಭಿನಂದನ್ ನೇತೃತ್ವದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.
ಸ್ಥಳೀಯ
Kalaburagi-ಕಲಬುರಗಿ: ಪತ್ನಿಯ ಕತ್ತು ಹಿಸುಕಿ ಹತ್ಯೆ; ಆತ್ಮಹತ್ಯೆಯಂತೆ ಬಿಂಬಿಸಲು ಯತ್ನಿಸಿದ ಪತಿ ಬಂಧನ
ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿ, ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬಂತೆ ಬಿಂಬಿಸಲು ಯತ್ನಿಸಿದ ಆರೋಪದ ಮೇಲೆ ಪತಿಯನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕಲಬುರಗಿ: ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿ, ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬಂತೆ ಬಿಂಬಿಸಲು ಯತ್ನಿಸಿದ ಆರೋಪದ ಮೇಲೆ ಪತಿಯನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ಪ್ರಿಯಾಂಕಾ ಹಡಪದ್ (30) ಎಂದು ಗುರುತಿಸಲಾಗಿದೆ.
ಆಕೆಯ ಪತಿ ಸೂರ್ಯಕಾಂತ್ ಹಡಪದ್ ಕೊಲೆ ಆರೋಪಿಯಾಗಿದ್ದು, ವಕೀಲ ವೃತ್ತಿ ಮಾಡಿಕೊಂಡಿದ್ದ ಎನ್ನಲಾಗಿದೆ.
ಮಕ್ಕಳಾಗದಿರುವ ವಿಚಾರ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಸಂಬಂಧಿಸಿ ಸೂರ್ಯಕಾಂತ್ ಪತ್ನಿಗೆ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಇದೇ ವಿಚಾರವಾಗಿ ದಂಪತಿ ನಡುವೆ ಗಲಾಟೆ ನಡೆದಿದ್ದು, ಬಳಿಕ ಸೂರ್ಯಕಾಂತ್ ಪತ್ನಿಯ ಕತ್ತು ಹಿಸುಕಿ ಹತ್ಯೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.
ಅಂತರ ರಾಜ್ಯ
Murder-ಆಸ್ತಿಗಾಗಿ ಬೆಲ್ಟ್‌ನಿಂದ ಕುತ್ತಿಗೆ ಬಿಗಿದು ಪತಿಯ ಕೊಲೆ: ಆಕಸ್ಮಿಕ ಸಾವೆಂದು ನಂಬಿಸಿದ್ದ ಪತ್ನಿ ಅರೆಸ್ಟ್
ಆಕಸ್ಮಿಕ ಸಾವು ಎಂದು ದಾಖಲಾಗಿದ್ದ 53 ವರ್ಷದ ವ್ಯಕ್ತಿಯೊಬ್ಬರ ಪ್ರಕರಣ ತನಿಖೆ ವೇಳೆ ಕೊಲೆಯಾಗಿ ಬಯಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿ ಅವರ ಪತ್ನಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೊಲ್ಲಂನ ಚೆರುಮೂಡು ಮೂಲದ ರಾಜು ಕೊಲೆಯಾದ ವ್ಯಕ್ತಿ.
ಕೊಲ್ಲಂ: ಆಕಸ್ಮಿಕ ಸಾವು ಎಂದು ದಾಖಲಾಗಿದ್ದ 53 ವರ್ಷದ ವ್ಯಕ್ತಿಯೊಬ್ಬರ ಪ್ರಕರಣ ತನಿಖೆ ವೇಳೆ ಕೊಲೆಯಾಗಿ ಬಯಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿ ಅವರ ಪತ್ನಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕೊಲ್ಲಂನ ಚೆರುಮೂಡು ಮೂಲದ ರಾಜು (53) ಅವರು ಬಣ್ಣ ಬಳಿಯುವ ಕೆಲಸ ಮಾಡುತ್ತಿದ್ದರು. ರಾಜು ಹಾಗೂ ಅವರ ಪತ್ನಿ ಲೇಖಾ ಮೇರಿ ನಡುವೆ ಆಸ್ತಿ ವಿಚಾರವಾಗಿ ಆಗಾಗ್ಗೆ ಜಗಳ ನಡೆಯುತ್ತಿತ್ತು ಎನ್ನಲಾಗಿದೆ. ಆಸ್ತಿ ಮೂಲತಃ ರಾಜು ಕುಟುಂಬಕ್ಕೆ ಸೇರಿದ್ದಾಗಿದ್ದು, ಬಳಿಕ ರಾಜು ಅವರ ಹೆಸರಿಗೆ ವರ್ಗಾವಣೆಯಾಗಿತ್ತು. ಆದರೆ ಸಂಪೂರ್ಣ ಆಸ್ತಿಯ ಮಾಲೀಕತ್ವ ತನಗೇ ಬೇಕೆಂದು ಲೇಖಾ ಪಟ್ಟು ಹಿಡಿದಿದ್ದರಿಂದ ದಂಪತಿ ನಡುವೆ ನಿರಂತರವಾಗಿ ಮನಸ್ತಾಪ ಉಂಟಾಗುತ್ತಿತ್ತು.
ಈ ಹಿನ್ನೆಲೆಯಲ್ಲಿ ಕೆಲಕಾಲ ಬೇರೆ ಬೇರೆಯಾಗಿದ್ದ ದಂಪತಿ, ಕಳೆದ ಒಂದು ವರ್ಷದಿಂದ ಮತ್ತೆ ಒಟ್ಟಿಗೆ ವಾಸಿಸುತ್ತಿದ್ದರು.
ಅ.2ರಂದು ಬೆಳಗ್ಗೆ ಸುಮಾರು 5.30ಕ್ಕೆ ರಾಜು ಮನೆಯಲ್ಲಿ ದಿಢೀರ್ ಕುಸಿದುಬಿದ್ದಿದ್ದಾರೆ ಎಂದು ಹೇಳಲಾಗಿತ್ತು. ತಕ್ಷಣ ಸಹೋದರ ಹಾಗೂ ನೆರೆಹೊರೆಯವರ ನೆರವಿನಿಂದ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಪರೀಕ್ಷಿಸಿದ ವೈದ್ಯರು ರಾಜು ಮೃತಪಟ್ಟಿರುವುದಾಗಿ ಘೋಷಿಸಿದರು.
ಆದರೆ ಮರಣೋತ್ತರ ಪರೀಕ್ಷೆ ವೇಳೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ. ರಾಜು ಸಾಮಾನ್ಯವಾಗಿ ಕುಸಿದುಬಿದ್ದು ಮೃತಪಟ್ಟಿಲ್ಲ ಎಂದು ಶಂಕಿಸಿರುವ ವೈದ್ಯರು, ಅವರ ಕುತ್ತಿಗೆಯ ಭಾಗದಲ್ಲಿ ಅನುಮಾನಾಸ್ಪದ ಗುರುತುಗಳು ಕಂಡುಬಂದಿರುವುದಾಗಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಈ ಹಿನ್ನೆಲೆಯಲ್ಲಿ ಪೊಲೀಸರು ರಾಜು ಅವರ ಪತ್ನಿ ಲೇಖಾ ಮೇರಿಯನ್ನು ವಿಚಾರಣೆ ನಡೆಸಿದಾಗ, ಆಸ್ತಿ ವಿಚಾರವಾಗಿ ಅ.2ರಂದು ಮತ್ತೆ ಜಗಳ ನಡೆದಿತ್ತು ಎಂದು ಆಕೆ ಒಪ್ಪಿಕೊಂಡಿದ್ದಾಳೆ ಎನ್ನಲಾಗಿದೆ. ಜಗಳದ ವೇಳೆ ಕೋಪಗೊಂಡು ಬೆಲ್ಟ್‌ನಿಂದ ಪತಿಯ ಕುತ್ತಿಗೆಯನ್ನು ಬಿಗಿದು ಕೊಲೆ ಮಾಡಿದ್ದಾಗಿ ಆಕೆ ಪೊಲೀಸರಿಗೆ ತಿಳಿಸಿದ್ದಾಳೆ ಎಂದು ಮೂಲಗಳು ಹೇಳಿವೆ.
ಬಳಿಕ ರಾಜು ಪ್ರಜ್ಞೆ ತಪ್ಪಿ ಬಿದ್ದಿರುವುದಾಗಿ ಅವರ ಸಹೋದರನಿಗೆ ಕರೆ ಮಾಡಿ ತಿಳಿಸಿದ್ದಳು ಎನ್ನಲಾಗಿದೆ.
ಕೊಲ್ಲಿ ರಾಷ್ಟ್ರದಲ್ಲಿ ಕೆಲಸ ಮಾಡಿ ಬಳಿಕ ವಾಪಸ್ ಬಂದಿದ್ದ ಲೇಖಾ ಮೇರಿ ಸದ್ಯ ಗೃಹಿಣಿಯಾಗಿದ್ದು, ದಂಪತಿಗೆ ಒಬ್ಬ ಮಗಳಿದ್ದಾಳೆ. ಪ್ರಕರಣದಲ್ಲಿ ಬೇರೆಯವರ ಕೈವಾಡವಿದೆಯೇ ಎಂಬ ಬಗ್ಗೆಯೂ ಕುಂದರ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಕ್ರೈಂ
Honeytrap-ಹಳೆಯ ದ್ವೇಷಕ್ಕೆ ಇನ್‌ಸ್ಟಾಗ್ರಾಂ ಹನಿಟ್ರ್ಯಾಪ್ ಅಸ್ತ್ರ: ಯುವಕನ ಕೊಲೆ ಪ್ರಕರಣ ಭೇದಿಸಿದ ಪೊಲೀಸರು; ನಾಲ್ವರ ಬಂಧನ
ಕಾಣೆಯಾಗಿದ್ದ ಯುವಕನೊಬ್ಬನ ಕೊಲೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದ್ದು, ಇನ್‌ಸ್ಟಾಗ್ರಾಂ ಮೂಲಕ ‘ಹನಿಟ್ರ್ಯಾಪ್’ ಮಾಡಿ ಯುವಕನನ್ನು ಬಲೆಗೆ ಬೀಳಿಸಿ ಕೊಲೆ ಮಾಡಿದ ಆರೋಪದ ಮೇಲೆ ನಾಲ್ವರನ್ನು ಬೆಳಗಾವಿ ನಗರ ಪೊಲೀಸರು ಬಂಧಿಸಿದ್ದಾರೆ. ಮೃತ ಯುವಕನನ್ನು ಬೆಳಗಾವಿಯ ಗಾಂಧಿನಗರ ನಿವಾಸಿ ಸರ್ವೇಶ ಕಂಗ್ರಾಳಕರ ಎಂದು ಗುರುತಿಸಲಾಗಿದೆ.
ಬೆಳಗಾವಿ: ಕಾಣೆಯಾಗಿದ್ದ ಯುವಕನೊಬ್ಬನ ಕೊಲೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದ್ದು, ಇನ್‌ಸ್ಟಾಗ್ರಾಂ ಮೂಲಕ ‘ಹನಿಟ್ರ್ಯಾಪ್’ ಮಾಡಿ ಯುವಕನನ್ನು ಬಲೆಗೆ ಬೀಳಿಸಿ ಕೊಲೆ ಮಾಡಿದ ಆರೋಪದ ಮೇಲೆ ನಾಲ್ವರನ್ನು ಬೆಳಗಾವಿ ನಗರ ಪೊಲೀಸರು ಬಂಧಿಸಿದ್ದಾರೆ.
ಮೃತ ಯುವಕನನ್ನು ಬೆಳಗಾವಿಯ ಗಾಂಧಿನಗರ ನಿವಾಸಿ ಸರ್ವೇಶ ಕಂಗ್ರಾಳಕರ ಎಂದು ಗುರುತಿಸಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಶಶಿ ಜಾಲಗಾರ, ರಾಹುಲ್ ಜಾಲಗಾರ, ದಶರತ ರಜಪೂತ ಹಾಗೂ ಅರುಣ ಹುಲ್ಲೋಳಿ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಬೆಳಗಾವಿ ನಗರ ಪೊಲೀಸ್ ಆಯುಕ್ತ ಪ್ರಕಾಶ್ ನಿಕಮ್ ಅವರ ಮಾರ್ಗದರ್ಶನದಲ್ಲಿ ಮಾಳಮಾರುತಿ ಠಾಣೆ ಸಿಪಿಐ ಬಿ.ಆರ್. ಗಡೇಕರ್ ನೇತೃತ್ವದ ತಂಡ ತನಿಖೆ ನಡೆಸಿ ಪ್ರಕರಣವನ್ನು ಭೇದಿಸಿದೆ.
ಹಣಕಾಸಿನ ವಿಚಾರದ ದ್ವೇಷವೇ ಕೊಲೆಗೆ ಕಾರಣ?
ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, 2025ರಲ್ಲಿ ನಡೆದ ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದ ಜಗಳವೇ ಕೊಲೆಗೆ ಪ್ರಮುಖ ಕಾರಣ ಎನ್ನಲಾಗಿದೆ. ಈ ಸಂದರ್ಭದಲ್ಲಿ ಸರ್ವೇಶ ಹಾಗೂ ಶಶಿ ಜಾಲಗಾರ ನಡುವೆ ಗಲಾಟೆ ನಡೆದಿದ್ದು, ಸರ್ವೇಶ ಅವರು ಶಶಿ ಮೇಲೆ ಹಲ್ಲೆ ನಡೆಸಿದ್ದರು ಎನ್ನಲಾಗಿದೆ. ಇದರಿಂದ ಇಬ್ಬರ ನಡುವೆ ವೈಷಮ್ಯ ಬೆಳೆದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಈ ಹಳೆಯ ದ್ವೇಷವನ್ನೇ ಮುಂದಿಟ್ಟುಕೊಂಡು ಶಶಿ ಜಾಲಗಾರ ತನ್ನ ಸಹಚರರೊಂದಿಗೆ ಸೇರಿ ಸರ್ವೇಶನ ಕೊಲೆಗೆ ಸಂಚು ರೂಪಿಸಿದ್ದಾನೆ ಎನ್ನುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಯುವತಿಯ ಹೆಸರಿನಲ್ಲಿ ನಕಲಿ ಖಾತೆ
ಕೊಲೆಗೆ ಆರೋಪಿಗಳು ಇನ್‌ಸ್ಟಾಗ್ರಾಂ ಬಳಸಿಕೊಂಡಿದ್ದಾರೆ ಎನ್ನಲಾಗಿದೆ. ಯುವತಿಯ ಹೆಸರಿನಲ್ಲಿ ನಕಲಿ ಇನ್‌ಸ್ಟಾಗ್ರಾಂ ಖಾತೆ ಸೃಷ್ಟಿಸಿ, ಅದರ ಮೂಲಕ ಸರ್ವೇಶನಿಗೆ ಸಂದೇಶ ಕಳುಹಿಸಿ ಆತನೊಂದಿಗೆ ಆತ್ಮೀಯತೆ ಬೆಳೆಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಬಳಿಕ ಇದೇ ಪರಿಚಯವನ್ನು ಬಳಸಿಕೊಂಡು ಸರ್ವೇಶನನ್ನು ನಿರ್ದಿಷ್ಟ ಸ್ಥಳಕ್ಕೆ ಕರೆಸಿಕೊಂಡು ಕೊಲೆ ಮಾಡಲಾಗಿದೆ ಎನ್ನಲಾಗಿದೆ.
-
ಅಂತರ ರಾಜ್ಯ11 hours agoಕಾಸರಗೋಡು: ಆರ್ಎಸ್ಎಸ್ ವಕ್ತಾರರ ಭಾಗವಹಿಸುವಿಕೆ ವಿರೋಧಿಸಿ ಪ್ರತಿಭಟನೆ; ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳಿಗೆ ಗಾಯ
-
ಮಂಗಳೂರು13 hours agoChouta-ಫಾರಂ 7 ಕೊಟ್ಟ ಮಾತ್ರಕ್ಕೆ ಮತ ಡಿಲೀಟ್ ಆಗಲ್ಲ; ಅಕ್ರಮ ಡಿಲೀಷನ್ಗೆ ದಾಖಲೆ ತೋರಿಸಿ: ಕಾಂಗ್ರೆಸ್ಗೆ ಚೌಟ ಸವಾಲು
-
ಮಂಗಳೂರು7 hours agoAuto passengers-ದಕ್ಷಿಣ ಕನ್ನಡದಲ್ಲಿ ಆಟೊ ಪ್ರಯಾಣಿಕರಿಗೆ ಮತ್ತೊಂದು ದರ ಏರಿಕೆ ಶಾಕ್: ಇಲ್ಲಿದೆ ಪರಿಷ್ಕೃತ ರೇಟ್ ಕಾರ್ಡ್
-
ಸ್ಥಳೀಯ11 hours agoBeltangadi-ಬೆಳ್ತಂಗಡಿ: ಚಾಲಕನ ಸಮಯಪ್ರಜ್ಞೆ; ಬಸ್ನಲ್ಲಿ ಅಸ್ವಸ್ಥಗೊಂಡ ಮಹಿಳೆ ಅಪಾಯದಿಂದ ಪಾರು
-
ರಾಜಕೀಯ13 hours agoAshok Rai-ಪಕ್ಷ ಸಂಘಟನೆಗೆ ಅಶೋಕ್ ರೈ ಹೊಸ ಹೆಜ್ಜೆ: ಪುತ್ತೂರು ಬ್ಲಾಕ್ ಕಾಂಗ್ರೆಸ್ಗೆ ಬೊಲೆರೋ
-
ಅಂತರ ರಾಜ್ಯ11 hours agoFire truck-ಬಿಜೆಪಿ ಶಾಸಕನ ಬಂಗಲೆ ತೊಳೆಯಲು ಅಗ್ನಿಶಾಮಕ ವಾಹನ ಬಳಕೆ; ವಿಡಿಯೋ ವೈರಲ್ ಬಳಿಕ ₹2,700 ದಂಡ
-
Uncategorized12 hours agoKural Tulu Touch-ತುಳು ಭಾಷೆಗೆ ಡಿಜಿಟಲ್ ಬಲ; ಆಂಡ್ರಾಯ್ಡ್ಗೆ ಬಂತು ‘ಕುರಲ್ ತುಳು ಟಚ್’ ಕೀಬೋರ್ಡ್
-
ಉದ್ಯೋಗ7 hours agoPuttur-Salesನಿಂದ Technicianವರೆಗೆ; ಪುತ್ತೂರಿನ ಶ್ರೀ ತಿರುಮಲಾ TVSನಲ್ಲಿ ಭರ್ಜರಿ Job Opening


















