Connect with us

ಬೆಂಗಳೂರು

DC ಗಳು ಎಂದರೆ ಮಹಾರಾಜರಲ್ಲ – ತಕ್ಷಣ ಡೆಂಗ್ಯು ನಿಯಂತ್ರಣಕ್ಕೆ ತನ್ನಿ: ಅಧಿಕಾರಿಗಳಿಗೆ ಸಿಎಂ ಸ್ಪಷ್ಟ ಸೂಚನೆ

Published

on

Ad Widget

Ad Widget

Ad Widget

Ad Widget

ಬೆಂಗಳೂರು ಜು 8 : ಜಿಲ್ಲಾಧಿಕಾರಿಗಳಿಗೆ ಮಹಾರಾಜರು ಎನ್ನುವ ಭಾವನೆ ಇದ್ದರೆ ಅಭಿವೃದ್ಧಿ ಮತ್ತು ಪ್ರಗತಿ ಸಾಧ್ಯವಿಲ್ಲ. ರಾಜಕಾರಣಿಗಳು ಮತ್ತು ಅಧಿಕಾರಿಗಳು ಇಬ್ಬರೂ ಜನ ಸೇವಕರು ಎನ್ನುವುದನ್ನು ನೆನಪಿನಲ್ಲಿಟ್ಟುಕೊಂಡು ಜನಸೇವೆ ಮಾಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ DC ಮತ್ತು CEO ಹಾಗೂ ಉಸ್ತುವಾರಿ ಕಾರ್ಯದರ್ಶಿಗಳ ಸಭೆಯಲ್ಲಿ ಈ ಸೂಚನೆ ನೀಡಿದರು.

Ad Widget

Ad Widget

Ad Widget

Ad Widget

ಸರ್ಕಾರದ ಕಾರ್ಯಕ್ರಮಗಳು, ಯೋಜನೆಗಳು ಪರಿಣಾಮಕಾರಿಯಾಗಿ ಜನ ಸಾಮಾನ್ಯರಿಗೆ ತಲುಪಿಸಲು DC-SP-CEO ಗಳು ಕ್ರಿಯಾಶೀಲತೆಯಿಂದ, ಸಮನ್ವಯತೆಯಿಂದ ಕೆಲಸ ಮಾಡಬೇಕು. ಆಗ ಮಾತ್ರ ಸರ್ಕಾರದ ಕಾಳಜಿಗಳು ಜನರಿಗೆ ತಲುಪಲು ಸಾಧ್ಯ ಎಂದರು. ರಾಜ್ಯದಲ್ಲಿ ಡೆಂಗ್ಯು ನಿಯಂತ್ರಣಕ್ಕೆ ಸಮರೋಪಾದಿಯಲ್ಲಿ ಕೆಲಸ ಮಾಡಿ.

Ad Widget

Ad Widget alt="Ad Widget"/>

Ad Widget

DC, DHO ಗಳು ತಾಲ್ಲೂಕು ಮಟ್ಟದ ಅಧಿಕಾರಿಗಳ ಜೊತೆ ಸಭೆ ಮಾಡಿ ಕ್ಷಿಪ್ರವಾಗಿ ಕೆಲಸ ಮಾಡಿ ಎಂದು ಸೂಚಿಸಿದರು.ಇಷ್ಟು ದಿನ ಉದಾಸೀನ, ನಿರ್ಲಕ್ಷ್ಯಕ್ಕೆ, ಕರ್ತವ್ಯಲೋಪಕ್ಕೆ ಕೆಳ ಹಂತದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಇವತ್ತಿನಿಂದ ಹಿರಿಯ ಅಧಿಕಾರಿಗಳನ್ನೂ ಹೊಣೆ ಮಾಡಿ ಕ್ರಮ ಕೈಗೊಳ್ಳುತ್ತೇನೆ ಎಂದು ಸ್ಪಷ್ಟ ಎಚ್ಚರಿಕೆ ನೀಡಿದರು.

Ad Widget

Ad Widget <> Ad Widget

ಮುಖ್ಯಮಂತ್ರಿಗಳ ಆರಂಭಿಕ ಮಾತಿನ ಹೈಲೈಟ್ಸ್ : DC-CEO ಗಳು, ತಮ್ಮ ಜಿಲ್ಲೆಯ ಸಮಗ್ರ ಮಾಹಿತಿಗಳನ್ನು ಅಂಗೈಯಲ್ಲಿ ಇಟ್ಟುಕೊಂಡು ಉತ್ಸಾಹದಿಂದ ಕೆಲಸ ಮಾಡಬೇಕು. ಆಗ ಮಾತ್ರ ಪ್ರಗತಿ ಮತ್ತು ಅಭಿವೃದ್ಧಿಯ ವೇಗ ಕಾಣಲು ಸಾಧ್ಯರಾಜಕಾರಣಿಗಳು, ಅಧಿಕಾರಿಗಳ ಅನುಭವದ ಮೇಲೆ ಆಡಳಿತ ಹೆಚ್ಚು ಪರಿಣಾಮಕಾರಿಯಾಗಿ ಆಗಬೇಕಿತ್ತು.‌ 40 ವರ್ಷಗಳ ಹಿಂದೆ ಅಧಿಕಾರಿಗಳು ಕೆಲಸ ನಿರ್ವಹಿಸುವ ರೀತಿಗೂ, ಇವತ್ತಿನ ಅಧಿಕಾರಿಗಳು ಕರ್ತವ್ಯ ನಿರ್ವಹಿಸುವ ರೀತಿಗೂ ಹೋಲಿಸಿದರೆ ಕಾರ್ಯಾಂಗ ಮತ್ತು ಶಾಸಕಾಂಗ ಈಗ ಹೆಚ್ಚು ಪರಿಣಾಮಕಾರಿಯಾಗಿ, ಗುಣಾತ್ಮಕವಾಗಿ ಕೆಲಸ ಮಾಡುತ್ತಿಲ್ಲ ಎನ್ನುವುದು ಗೊತ್ತಾಗುತ್ತಿದೆ.

ಇದು ಬಹಳ ಬೇಸರದ ಸಂಗತಿ ಅಭಿವೃದ್ಧಿ ಮತ್ತು ಕಾನೂನು ಸುವ್ಯವಸ್ಥೆ ಪರಸ್ಪರ ಪೂರಕ. ಒಂದು ಇಲ್ಲದಿದ್ದರೆ ಮತ್ತೊಂದು ಇರಲು ಸಾಧ್ಯವಿಲ್ಲಕರ್ನಾಟಕ ಗುಡ್ ಗೌರ್ನೆನ್ಸ್ ನಲ್ಲಿ ಮಾದರಿ ರಾಜ್ಯವಾಗಿದೆ ಎನ್ನುವುದನ್ನು ಮರೆಯಬಾರದು. ಈ ಹೆಗ್ಗಳಿಕೆಯನ್ನು ಮುಂದುವರೆಸಿಕೊಂಡು ಹೋಗುವ ಜವಾಬ್ದಾರಿ ನಿಮ್ಮಗಳ ಮೇಲಿದೆಜಿಲ್ಲಾಧಿಕಾರಿಗಳು ಯಾವುದೇ ಜಿಲ್ಲೆಗೆ ಹೋಗುವ ಮೊದಲು ಆಯಾ ಜಿಲ್ಲೆಗಳ ಮಾನವ ಅಭಿವೃದ್ಧಿ ಸೂಚ್ಯಂಕಗಳ ಜೊತೆಗೆ ಜಿಲ್ಲೆಯ ಸಮಗ್ರ ಮಾಹಿತಿ ತಿಳಿದುಕೊಳ್ಳಬೇಕು.SSLC ಫಲಿತಾಂಶದಲ್ಲಿ ಕೆಲವು ಜಿಲ್ಲೆಗಳಲ್ಲಿ ಕುಸಿತ ಕಂಡಿರುವುದನ್ನು ಪ್ರಸ್ತಾಪಿಸಿದ ಮುಖ್ಯಮಂತ್ರಿಗಳು, ಈ ಬಾರಿ ಕಾಪಿಯನ್ನು ಸಂಪೂರ್ಣ ನಿಲ್ಲಿಸಿದ್ದು ಶ್ಲಾಘನೀಯ. ಆದರೆ ಈ ಕಾರಣಕ್ಕೆ ಫಲಿತಾಂಶ ಕುಸಿತ ಆಯಿತು ಎನ್ನುವ ಸಮರ್ಥನೆ ಸರಿಯಲ್ಲ

Ad Widget

Ad Widget

DC, CEO, ಇಲಾಖಾ ಕಾರ್ಯದರ್ಶಿಗಳ ಜವಾಬ್ದಾರಿ ಇಲ್ಲವಾ ? ಆತ್ಮಾವಲೋಕನ ಮಾಡಿಕೊಂಡು ಪರಿಸ್ಥಿತಿ ಸುಧಾರಿಸಲು ಪ್ರಯತ್ನಿಸಲೇಬೇಕು. DDPI, DC, CEO ಗಳು ಒಟ್ಟಿಗೇ ಕುಳಿತು ಚರ್ಚಿಸಿ ಪರಿಸ್ಥಿತಿ ಸುಧಾರಿಸಬೇಕು ಎನ್ನುವ ಸೂಚನೆ ನೀಡಿದರು ಜನಸಂಪರ್ಕ, ಜನಸ್ಪಂದನ ಸಭೆಗಳಲ್ಲಿ 15-20 ಸಾವಿರ ಅರ್ಜಿಗಳು ಬರುತ್ತವೆ. ನೀವು ಸರಿಯಾಗಿ ಸ್ಥಳೀಯವಾಗಿ ಕೆಲಸ ಮಾಡಿದ್ದರೆ ಇಷ್ಟೊಂದು ಮಂದಿ ನನ್ನ ಬಳಿಗೆ ಏಕೆ ಬರುತ್ತಾರೆ ಎಂದು ಪ್ರಶ್ನಿಸಿ, DC, CEO ಗಳು ಇರೋದು ಜನಸಂಪರ್ಕ ಸಭೆಗಳಿಗೆ ಬಂದ ಅರ್ಜಿಗಳನ್ನು Forward ಮಾಡಿ ಮುಚ್ಚಳಿಕೆ ಕೊಟ್ಟು ಕೈತೊಳೆದುಕೊಳ್ಳೋಕಾ ಇರೋದು ?

ಪರಿಹಾರ ಕೊಡಿಸುವವರು ಯಾರು? ಇದಕ್ಕೇನಾ ನೀವು ಇರೋದು ಎಂದು ಖಾರವಾಗಿ ಪ್ರಶ್ನಿಸಿದರು. ನೀವು ಪರಿಹಾರ ಕೊಡಲಿಲ್ಲ ಅಂತ ನನ್ನ ತನಕ ಬಂದಿದ್ದಾರೆ. ಜನರ ಸಮಸ್ಯೆಗಳ ಅರ್ಜಿಗಳು ಸಕಾರಾತ್ಮಕವಾಗಿ ವಿಲೇವಾರಿ ಆಗಿಲ್ಲ, ಗುಣಾತ್ಮಕವಾಗಿ ವಿಲೇವಾರಿ ಆಗಿಲ್ಲ ಅಂದರೆ ನಿಮ್ಮ ವಿರುದ್ಧ ಕ್ರಮ ಖಚಿತ ಎಂದು ಎಚ್ಚರಿಸಿದರುತಹಶೀಲ್ದಾರ್, ಜಿಲ್ಲಾಧಿಕಾರಿಗಳ ಸಮೇತ ಜಿಲ್ಲಾ , ತಾಲ್ಲೂಕು ಮಟ್ಟದ ಅಧಿಕಾರಿಗಳು ಜನರನ್ನು ನೇರ ಭೇಟಿ ಮಾಡುತ್ತಿಲ್ಲ. ಅಧಿಕಾರಿಗಳು ಕರ್ತವ್ಯ ನಿರ್ವಹಿಸುವ ಕಡೆಯೇ ಉಳಿಯಬೇಕು ಎನ್ನುವ ನನ್ನ ಸೂಚನೆ ಸರಿಯಾಗಿ ಪಾಲನೆ ಆಗುತ್ತಿಲ್ಲ. PDO ಗಳು, VA ಗಳು ಕೆಲಸ ಮಾಡುವ ಜಾಗದಲ್ಲೇ ಉಳಿಯಬೇಕು. ಈ ಬಗ್ಗೆ DC, CEO ಗಳು ಗಮನ ಹರಿಸಬೇಕುಸಂಚಾರಿ ಕುರಿಗಾಹಿಗಳಿಗೆ ಗುರುತಿನ ಚೀಟಿ ನೀಡಬೇಕು, ಕುರಿ-ಮೇಕೆಗಳ ಟೆಂಟ್ ಹಾಕಿರುವ ಸ್ಥಳಕ್ಕೇ ಹೋಗಿ ಲಸಿಕೆ ಮತ್ತು ಚುಚ್ಚುಮದ್ದುಗಳನ್ನು ನೀಡಬೇಕು, ಸಂಚಾರಿ ಕುರಿಗಾಹಿಗಳಿಗೆ ಬಂದೂಕು ಲೈಸೆನ್ಸ್ ಕೊಡುವುದು ಕಡ್ಡಾಯ.

ಕುರಿ ಕಳ್ಳತನ ತಡೆಯಲು ಇದು ಅಗತ್ಯ ಎನ್ನುವ ಸ್ಪಷ್ಟ ಸೂಚನೆಗಳನ್ನು ನೀಡಿದರು ಮಣ್ಣಿನ ಫಲವತ್ತತೆ ಕಡಿಮೆ ಆಗುತ್ತಿದೆ. ಇದನ್ನು ಹೆಚ್ಚಿಸಲು ಅಗತ್ಯ ಕ್ರಮ ಕೈಗೊಳ್ಳುವ ಜೊತೆಗೆ ರೈತರಿಗೆ ಮಣ್ಣಿನ ಆರೋಗ್ಯ ಕಾರ್ಡ್ ಅನ್ನು ಕಡ್ಡಾಯವಾಗಿ ನೀಡಬೇಕು. ಪ್ರತೀ ಎರಡು ವರ್ಷಕ್ಕೊಮ್ಮೆ ಮಣ್ಣಿನ ಪರೀಕ್ಷೆ ನಡೆಸಬೇಕು ಎಂದು ಸ್ಪಷ್ಟ ಸೂಚನೆ ನೀಡಿದರುಈ ಎಲ್ಲಾ ಕೆಲಸಗಳನ್ನು ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ ಕೆಲಸ ಮಾಡಬೇಕು ಎನ್ನುವ ಸೂಚನೆ ನೀಡಿದರುತಹಶೀಲ್ದಾರ್ ನ್ಯಾಯಾಲಯಗಳಲ್ಲಿ 8234 ಪ್ರಕರಣಗಳು ಬಾಕಿ ಇವೆ.

ಉಪವಿಭಾಹಾಧಿಕಾರಿಗಳ ಬಳಿ RRT (ಹಕ್ಕು ಬದಲಾವಣೆ) ಪ್ರಕರಣಗಳು 37587 ಬಾಕಿ ಇವೆ. ಇವುಗಳಲ್ಲಿ 5 ವರ್ಷಕ್ಕೂ ಮೇಲ್ಪಟ್ಟವು 7522 ಪ್ರಕರಣಗಳಿವೆ, DC ಗಳ ಬಳಿ 10838 ಪ್ರಕರಣಗಳು ಬಾಕಿ ಇವೆ. 5 ವರ್ಷಕ್ಕೂ ಮೇಲ್ಪಟ್ಟವು 4207 ಪ್ರಕರಣಗಳಿವೆ. DC ಗಳೇ ಬಾಕಿ ಉಳಿಸಿಕೊಂಡರೆ ನೀವು AC ಮತ್ತು ತಹಶೀಲ್ದಾರ್ ಗಳಿಗೆ ಏನು ಸೂಚನೆ ಕೊಡ್ತೀರಿ ಎಂದು ಖಾರವಾಗಿ ಪ್ರಶ್ನಿಸಿದರುಕೆಲವು DC ಗಳ ಬಳಿ ಒಂದೂ ಪ್ರಕರಣಗಳೂ ಬಾಕಿ ಇಲ್ಲ.

ಉಳಿದ DC ಗಳಿಂದ ಏಕೆ ಸಾಧ್ಯವಾಗಿಲ್ಲ ಎಂದು ಪ್ರಶ್ನಿಸಿದರುಜನ DC, AC ತಹಶೀಲ್ದಾರ್ ಕಚೇರಿಗಳಿಗೆ ಅಲೆಯೋದು ಅಧಿಕಾರಿಗಳು ಜನರ ಕೈಗೆ ಸಿಗದೇ ಇದ್ದರೆ ಅವರು ಏನು ಮಾಡಬೇಕು ಎಂದು ಪ್ರಶ್ನಿಸಿದರು

Ad Widget
Click to comment

Leave a Reply

ರಾಜಕೀಯ

Rural election-ಗ್ರಾಮೀಣ ಚುನಾವಣೆ ಅಖಾಡ ಸಜ್ಜು: ಅಂತಿಮ ಮೀಸಲಾತಿ ಪಟ್ಟಿ ಪ್ರಕಟ; ಜನವರಿಯಲ್ಲಿ ಮತದಾನ ಸಾಧ್ಯತೆ..!

Published

on

Ad Widget

Ad Widget

Ad Widget

Ad Widget

ರಾಜ್ಯದ ಜಿಲ್ಲಾ ಪಂಚಾಯಿತಿ (ಜಿಪಂ) ಮತ್ತು ತಾಲೂಕು ಪಂಚಾಯಿತಿ (ತಾಪಂ) ಚುನಾವಣೆಗಳಿಗೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಕ್ಷೇತ್ರವಾರು ಅಂತಿಮ ಮೀಸಲಾತಿ ಪಟ್ಟಿಯನ್ನು ಅಧಿಕೃತ ರಾಜ್ಯಪತ್ರದಲ್ಲಿ ಪ್ರಕಟಿಸಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ರಾಜ್ಯದ ಜಿಲ್ಲಾ ಪಂಚಾಯಿತಿ (ಜಿಪಂ) ಮತ್ತು ತಾಲೂಕು ಪಂಚಾಯಿತಿ (ತಾಪಂ) ಚುನಾವಣೆಗಳಿಗೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಕ್ಷೇತ್ರವಾರು ಅಂತಿಮ ಮೀಸಲಾತಿ ಪಟ್ಟಿಯನ್ನು ಅಧಿಕೃತ ರಾಜ್ಯಪತ್ರದಲ್ಲಿ ಪ್ರಕಟಿಸಿದೆ.

Ad Widget

Ad Widget alt="Ad Widget"/>

Ad Widget

ಹಲವು ವರ್ಷಗಳಿಂದ ಬಾಕಿ ಉಳಿದಿರುವ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವ ಪ್ರಕ್ರಿಯೆಗೆ ಇದರಿಂದ ಮತ್ತಷ್ಟು ವೇಗ ಸಿಕ್ಕಿದೆ. ಈ ಹಿಂದೆ ಅಕ್ಟೋಬರ್‌ನಲ್ಲಿ ಸರ್ಕಾರ ಕರಡು ಮೀಸಲಾತಿ ಪಟ್ಟಿಯನ್ನು ಪ್ರಕಟಿಸಿ ಸಾರ್ವಜನಿಕರಿಂದ ಆಕ್ಷೇಪಣೆಗಳನ್ನು ಆಹ್ವಾನಿಸಿತ್ತು. ರಾಜ್ಯದ ವಿವಿಧ ಜಿಲ್ಲೆಗಳಿಂದ ಸಲ್ಲಿಕೆಯಾಗಿದ್ದ 2,900ಕ್ಕೂ ಅಧಿಕ ಆಕ್ಷೇಪಣೆಗಳನ್ನು ಪರಿಶೀಲಿಸಿ, ನಿಯಮಾನುಸಾರ ಇತ್ಯರ್ಥಪಡಿಸಿದ ಬಳಿಕ ಇದೀಗ ಅಂತಿಮ ಮೀಸಲಾತಿ ಪಟ್ಟಿಯನ್ನು ಪ್ರಕಟಿಸಲಾಗಿದೆ.

Ad Widget

Ad Widget <> Ad Widget

ಮುಂದಿನ ಹಂತದಲ್ಲಿ ಅಂತಿಮ ಮೀಸಲಾತಿ ಪಟ್ಟಿಯನ್ನು ರಾಜ್ಯ ಚುನಾವಣಾ ಆಯೋಗಕ್ಕೆ ಸಲ್ಲಿಸುವ ಪ್ರಕ್ರಿಯೆ ನಡೆಯಲಿದೆ. ಬಳಿಕ ಮತದಾರರ ಪಟ್ಟಿಯ ಪರಿಷ್ಕರಣೆ ಸೇರಿದಂತೆ ಚುನಾವಣೆಗೆ ಅಗತ್ಯವಾದ ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತದೆ.

ಈ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ್ ಖಂಡ್ರೆ ಮಾಹಿತಿ ನೀಡಿದ್ದು, ಡಿಸೆಂಬರ್ ಮಧ್ಯಭಾಗದಲ್ಲಿ ಚುನಾವಣಾ ವೇಳಾಪಟ್ಟಿ ಪ್ರಕಟವಾಗುವ ಸಾಧ್ಯತೆಯಿದೆ. 2027ರ ಜನವರಿ ಮೊದಲ ಅಥವಾ ಎರಡನೇ ವಾರದಲ್ಲಿ ಮತದಾನ ನಡೆಯುವ ನಿರೀಕ್ಷೆಯಿದೆ ಎಂದು ತಿಳಿದುಬಂದಿದೆ.

Ad Widget

Ad Widget

ಇನ್ನೊಂದೆಡೆ, ಈ ಬಾರಿಯ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳಲ್ಲಿ ಎಲೆಕ್ಟ್ರಾನಿಕ್ ಮತಯಂತ್ರಗಳ (EVM) ಬದಲಿಗೆ ಬ್ಯಾಲೆಟ್ ಪೇಪರ್ ಬಳಕೆ ಮಾಡಲು ರಾಜ್ಯ ಸಚಿವ ಸಂಪುಟ ಈಗಾಗಲೇ ಒಪ್ಪಿಗೆ ಸೂಚಿಸಿದೆ. ಹೀಗಾಗಿ ಮುಂಬರುವ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ಮತಪತ್ರಗಳ ಮೂಲಕ ನಡೆಯುವ ಸಾಧ್ಯತೆಯಿದೆ.

Ad Widget
Continue Reading

ಬಿಗ್ ನ್ಯೂಸ್

High Court notice-ಜಾರಿಯಾಗದ ಮಹೇಶ್ ಶೆಟ್ಟಿ ತಿಮರೋಡಿ ಗಡೀಪಾರು ಆದೇಶ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟಿಸ್

Published

on

Ad Widget

Ad Widget

Ad Widget

Ad Widget

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡೀಪಾರು ಮಾಡುವಂತೆ ಪುತ್ತೂರು ಉಪವಿಭಾಗಾಧಿಕಾರಿ ಹೊರಡಿಸಿರುವ ಆದೇಶ ಇದುವರೆಗೂ ಜಾರಿಯಾಗದ ಹಿನ್ನೆಲೆಯಲ್ಲಿ ಕರ್ನಾಟಕ ಹೈಕೋರ್ಟ್ ರಾಜ್ಯ ಸರಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡೀಪಾರು ಮಾಡುವಂತೆ ಪುತ್ತೂರು ಉಪವಿಭಾಗಾಧಿಕಾರಿ ಹೊರಡಿಸಿರುವ ಆದೇಶ ಇದುವರೆಗೂ ಜಾರಿಯಾಗದ ಹಿನ್ನೆಲೆಯಲ್ಲಿ ಕರ್ನಾಟಕ ಹೈಕೋರ್ಟ್ ರಾಜ್ಯ ಸರಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.

Ad Widget

Ad Widget alt="Ad Widget"/>

Ad Widget

ಧನಕೀರ್ತಿ ಅರಿಗ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್‌ನ ಏಕಸದಸ್ಯ ನ್ಯಾಯಪೀಠ ಈ ಆದೇಶ ನೀಡಿದೆ.

Ad Widget

Ad Widget <> Ad Widget

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಎನ್. ವಿನಯ್ ವಾದ ಮಂಡಿಸಿ, ಪ್ರಕರಣದ 10ನೇ ಪ್ರತಿವಾದಿಯಾಗಿರುವ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಈಗಾಗಲೇ ಗಡೀಪಾರು ಆದೇಶ ಹೊರಡಿಸಲಾಗಿದೆ. ಆದರೆ, ಈ ಆದೇಶವನ್ನು ಪ್ರಶ್ನಿಸಿ ಅರ್ಜಿಗಳು ಸಲ್ಲಿಕೆಯಾಗಿದ್ದರೂ ಅದನ್ನು ಇನ್ನೂ ಜಾರಿಗೊಳಿಸಿಲ್ಲ ಎಂದು ನ್ಯಾಯಾಲಯದ ಗಮನಕ್ಕೆ ತಂದರು.

ವಾದವನ್ನು ಆಲಿಸಿದ ನ್ಯಾಯಮೂರ್ತಿಗಳು, ಪ್ರಕರಣದ 1ರಿಂದ 9ನೇ ಪ್ರತಿವಾದಿಗಳಾಗಿರುವ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ, ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ರಾಜ್ಯ ಪೊಲೀಸ್ ಮಹಾನಿರ್ದೇಶಕರು (ಡಿಜಿಪಿ), ಎಡಿಜಿಪಿ, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಬಂಟ್ವಾಳ ಡಿವೈಎಸ್ಪಿ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ, ಪುತ್ತೂರು ಉಪವಿಭಾಗಾಧಿಕಾರಿ ಹಾಗೂ ಬೆಳ್ತಂಗಡಿ ಪೊಲೀಸ್ ಠಾಣಾಧಿಕಾರಿಗಳಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿದರು.

Ad Widget

Ad Widget

ಪ್ರತಿವಾದಿಗಳ ಪರವಾಗಿ ಸರಕಾರಿ ವಕೀಲರು ನೋಟಿಸ್ ಸ್ವೀಕರಿಸಿದರು. ಇನ್ನು ಮೂರು ದಿನಗಳೊಳಗೆ ನೋಟಿಸ್ ಜಾರಿಗೆ ಅಗತ್ಯ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಅರ್ಜಿದಾರರಿಗೆ ನ್ಯಾಯಾಲಯ ಸೂಚಿಸಿತು.

ನೋಟಿಸ್‌ಗೆ ಉತ್ತರ ಸಲ್ಲಿಸಲು ಡಿಸೆಂಬರ್ 16ರವರೆಗೆ ಕಾಲಾವಕಾಶ ನೀಡಿರುವ ನ್ಯಾಯಾಲಯ, ಪ್ರಕರಣದ ಮುಂದಿನ ವಿಚಾರಣೆಯನ್ನು ಡಿ.16ಕ್ಕೆ ನಿಗದಿಪಡಿಸಿದೆ.

Ad Widget
Continue Reading

ಬಿಗ್ ನ್ಯೂಸ್

Rakesh Shetty-ಸ್ಟಿಂಗ್ ಹೆಸರಿನಲ್ಲಿ ಜನಪ್ರತಿನಿಧಿಗಳ ಬ್ಲ್ಯಾಕ್‌ಮೇಲ್ ಆರೋಪ: ರಾಕೇಶ್ ಶೆಟ್ಟಿ ವಿರುದ್ಧ ಕ್ರಮಕ್ಕೆ ಒಳಾಡಳಿತ ಇಲಾಖೆಯಿಂದ ಡಿಜಿಪಿಗೆ ಪತ್ರ

Published

on

Ad Widget

Ad Widget

Ad Widget

Ad Widget

ಸ್ಟಿಂಗ್ ಆಪರೇಷನ್ ಹೆಸರಿನಲ್ಲಿ ಜನಪ್ರತಿನಿಧಿಗಳ ತೇಜೋವಧೆ ಮಾಡಿ, ಬ್ಲ್ಯಾಕ್‌ಮೇಲ್ ಮಾಡುತ್ತಿರುವ ಆರೋಪ ಎದುರಿಸುತ್ತಿರುವ ಖಾಸಗಿ ಸುದ್ದಿವಾಹಿನಿಯ ಮುಖ್ಯಸ್ಥ ರಾಕೇಶ್ ಶೆಟ್ಟಿ ಹಾಗೂ ಸಂಸ್ಥೆಯ ಸಿಬ್ಬಂದಿ ವಿರುದ್ಧ ಕಾನೂನು ಕ್ರಮ ಕೈಗೊಂಡು ವರದಿ ಸಲ್ಲಿಸುವಂತೆ ಒಳಾಡಳಿತ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಡಾ. ಎಂ.ಎ. ಸಲೀಂ ಅವರಿಗೆ ಸೂಚಿಸಿದ್ದಾರೆ.

Ad Widget

Ad Widget

Ad Widget

Ad Widget

ಬೆಂಗಳೂರು, ನ.23: ಸ್ಟಿಂಗ್ ಆಪರೇಷನ್ ಹೆಸರಿನಲ್ಲಿ ಜನಪ್ರತಿನಿಧಿಗಳ ತೇಜೋವಧೆ ಮಾಡಿ, ಬ್ಲ್ಯಾಕ್‌ಮೇಲ್ ಮಾಡುತ್ತಿರುವ ಆರೋಪ ಎದುರಿಸುತ್ತಿರುವ ಖಾಸಗಿ ಸುದ್ದಿವಾಹಿನಿಯ ಮುಖ್ಯಸ್ಥ ರಾಕೇಶ್ ಶೆಟ್ಟಿ ಹಾಗೂ ಸಂಸ್ಥೆಯ ಸಿಬ್ಬಂದಿ ವಿರುದ್ಧ ಕಾನೂನು ಕ್ರಮ ಕೈಗೊಂಡು ವರದಿ ಸಲ್ಲಿಸುವಂತೆ ಒಳಾಡಳಿತ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಡಾ. ಎಂ.ಎ. ಸಲೀಂ ಅವರಿಗೆ ಸೂಚಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಕೇಶ್ ಶೆಟ್ಟಿ ಹಾಗೂ ಸುದ್ದಿವಾಹಿನಿಯ ಸಿಬ್ಬಂದಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸಿ.ಬಿ. ಸುರೇಶ್‌ಬಾಬು ಸರ್ಕಾರಕ್ಕೆ ಪತ್ರ ಬರೆದು ಮನವಿ ಸಲ್ಲಿಸಿದ್ದರು. ಈ ಮನವಿಯ ಬೆನ್ನಲ್ಲೇ ಒಳಾಡಳಿತ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಡಿಜಿಪಿಗೆ ಪತ್ರ ಬರೆದಿದ್ದಾರೆ.

Ad Widget

Ad Widget <> Ad Widget

ಸ್ಟಿಂಗ್ ಆಪರೇಷನ್ ಹೆಸರಿನಲ್ಲಿ ಸಚಿವರು, ಆಡಳಿತ ಪಕ್ಷದ ಶಾಸಕರು ಹಾಗೂ ಪ್ರತಿಪಕ್ಷದ ಶಾಸಕರಿಗೆ ಹಣದ ಆಮಿಷವೊಡ್ಡಿ ಅಪರಾಧ ಕೃತ್ಯಗಳಿಗೆ ಪ್ರಚೋದನೆ ನೀಡುವ ಮೂಲಕ ಜನಪ್ರತಿನಿಧಿಗಳ ಗೌರವಕ್ಕೆ ಧಕ್ಕೆ ತಂದು ಬ್ಲ್ಯಾಕ್‌ಮೇಲ್ ಮಾಡಲಾಗುತ್ತಿದೆ ಎಂದು ಸುರೇಶ್‌ಬಾಬು ತಮ್ಮ ಪತ್ರದಲ್ಲಿ ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ರಾಕೇಶ್ ಶೆಟ್ಟಿ ಹಾಗೂ ಸುದ್ದಿವಾಹಿನಿಯ ಸಿಬ್ಬಂದಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಅವರು ಒತ್ತಾಯಿಸಿದ್ದರು.

ಸುರೇಶ್‌ಬಾಬು ಪತ್ರದಲ್ಲಿ ಉಲ್ಲೇಖಿಸಿರುವ ಅಂಶಗಳನ್ನು ನಿಯಮಾನುಸಾರ ಪರಿಶೀಲಿಸಿ, ಅಗತ್ಯ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಕೈಗೊಂಡ ಕ್ರಮಗಳ ಕುರಿತು ಸರ್ಕಾರಕ್ಕೆ ವರದಿ ಸಲ್ಲಿಸಬೇಕು ಎಂದು ಒಳಾಡಳಿತ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಡಿಜಿಪಿಗೆ ನಿರ್ದೇಶನ ನೀಡಿದ್ದಾರೆ.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!