Connect with us

ನಿಧನ ವಾರ್ತೆ

BC Patil’s son-in-law-ಮಾಜಿ ಸಚಿವ, ನಟ ಬಿಸಿ ಪಾಟೀಲ್ ಅಳಿಯ ವಿಷ ಸೇವಿಸಿ ಆತ್ಮಹತ್ಯೆ!

Published

on

Ad Widget

Ad Widget

Ad Widget

Ad Widget

ದಾವಣೆಗೆರೆ (ಜು.8): ಮಾಜಿ ಸಚಿವ, ನಟ ಬಿ ಸಿ ಪಾಟೀಲ್ ಅಳಿಯ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಬಿ ಸಿ ಪಾಟೀಲ್ ದೊಡ್ಡ‌ ಮಗಳ ಗಂಡ ಪ್ರತಾಪ್ ಕುಮಾರ್ (41) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು, ಹೊನ್ನಾಳಿ ತಾಲ್ಲೂಕ್ ಅರಕೆರೆ ಸಮೀಪದ ಫಾರೆಸ್ಟ್ ಸಮೀಪ ಕಾರಿನಲ್ಲಿ ವಿಷಸೇವನೆ ಮಾಡಿದ್ದು ವಿಷಯ ತಿಳಿದ ತಕ್ಷಣ ಮೆಗ್ಗಾನ್ ಆಸ್ಪತ್ರೆಯಲ್ಲಿ ದಾಖಲಿಸಲಾಯಿತು. ಆದರೆ ಅವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

Ad Widget

Ad Widget

Ad Widget

Ad Widget

ನಾನು ವಿಷ ಸೇವಿಸುವುದಾಗಿ ಮನೆಯವರಿಗೆ ಪೋನ್ ಮಾಡಿ ಪ್ರತಾಪ್ ಕುಮಾರ್ ಹೇಳಿದ್ದರು. 3.30 ರ ಸುಮಾರಿಗೆ ಕಾರಿನಲ್ಲಿ ವಿಷ ಸೇವನೆ ಮಾಡಿದ್ದರು. ವಿಷಯ ತಿಳಿದ ತಕ್ಷಣ ಪೊಲೀಸರು ಹೊನ್ನಾಳಿ ಆಸ್ಪತ್ರೆಗೆ ದಾಖಲು ಮಾಡಿದರು. ನಂತರ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ದಾಖಲಿಸಲಾಯಿತು. ಆದರೆ ಅಷ್ಟರಲ್ಲಾಗಲೇ ಅವರ ಸ್ಥಿತಿ ಗಂಭೀರವಾಗಿ ಮೃತಪಟ್ಟಿದ್ದಾರೆ.

Ad Widget

Ad Widget alt="Ad Widget"/>

Ad Widget
Ad Widget
Click to comment

Leave a Reply

ನಿಧನ ವಾರ್ತೆ

Accident-ಯುಎಇಯಲ್ಲಿ ಭೀಕರ ಬಸ್–ಲಾರಿ ಅಪಘಾತ; ಕಾಸರಗೋಡಿನ ಅಶ್ರಫ್ ಸೇರಿ ನಾಲ್ವರು ಕೇರಳಿಗರು ಸಾವು

Published

on

Ad Widget

Ad Widget

Ad Widget

Ad Widget

ಯುನೈಟೆಡ್ ಅರಬ್ ಎಮಿರೇಟ್ಸ್‌ನ (ಯುಎಇ) ರಾಸ್ ಅಲ್ ಖೈಮಾದಲ್ಲಿ ಬಸ್ ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರಲ್ಲಿ ಕಾಸರಗೋಡು ಜಿಲ್ಲೆಯ ಅಟ್ಟೆಂಗಾನ ನಿವಾಸಿ ಅಶ್ರಫ್ (53) ಕೂಡ ಸೇರಿದ್ದಾರೆ. ಅಲ್ಲದೇ ಕಣ್ಣೂರು ಜಿಲ್ಲೆಯ ಮಟ್ಟನ್ನೂರು ನಿವಾಸಿ ಹೇಮಂತ್ ಪುದಿಯಕಾವಿಲ್ (29), ತಲಕ್ಕೇರಿ ನಿವಾಸಿ ಸಂಕೀರ್ತಾ ಸುರೇಶ್ (26) ಹಾಗೂ ಪಾಲಕ್ಕಾಡ್ ನಿವಾಸಿ ಮುಹಮ್ಮದ್ ಆಶಿಕ್ (29) ಕೂಡ ಮೃತಪಟ್ಟಿದ್ದಾರೆ.

Ad Widget

Ad Widget

Ad Widget

Ad Widget

ಕಾಸರಗೋಡು: ಯುನೈಟೆಡ್ ಅರಬ್ ಎಮಿರೇಟ್ಸ್‌ನ (ಯುಎಇ) ರಾಸ್ ಅಲ್ ಖೈಮಾದಲ್ಲಿ ಬಸ್ ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರಲ್ಲಿ ಕಾಸರಗೋಡು ಜಿಲ್ಲೆಯ ಅಟ್ಟೆಂಗಾನ ನಿವಾಸಿ ಅಶ್ರಫ್ (53) ಕೂಡ ಸೇರಿದ್ದಾರೆ.

Ad Widget

Ad Widget alt="Ad Widget"/>

Ad Widget

ನ. 24ರಂದು ಮುಂಜಾನೆ ರಾಸ್ ಅಲ್ ಖೈಮಾದ ಅಲ್ ವತನ್ ರಸ್ತೆಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಓಮನ್‌ಗೆ ವೀಸಾ ನವೀಕರಣಕ್ಕಾಗಿ ತೆರಳಿ ವಾಪಸಾಗುತ್ತಿದ್ದ 41 ಪ್ರಯಾಣಿಕರಿದ್ದ ಬಸ್, ತಾಂತ್ರಿಕ ದೋಷದಿಂದ ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಲಾರಿಗೆ ಹಿಂದಿನಿಂದ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.

Ad Widget

Ad Widget <> Ad Widget

ಅಪಘಾತದ ತೀವ್ರತೆಗೆ ಒಟ್ಟು 13 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಮೃತಪಟ್ಟವರಲ್ಲಿ 11 ಮಂದಿ ಭಾರತೀಯರು ಎಂದು ವರದಿಯಾಗಿದೆ.

ಅಶ್ರಫ್ ಅವರೊಂದಿಗೆ ಕಣ್ಣೂರು ಜಿಲ್ಲೆಯ ಮಟ್ಟನ್ನೂರು ನಿವಾಸಿ ಹೇಮಂತ್ ಪುದಿಯಕಾವಿಲ್ (29), ತಲಕ್ಕೇರಿ ನಿವಾಸಿ ಸಂಕೀರ್ತಾ ಸುರೇಶ್ (26) ಹಾಗೂ ಪಾಲಕ್ಕಾಡ್ ನಿವಾಸಿ ಮುಹಮ್ಮದ್ ಆಶಿಕ್ (29) ಕೂಡ ಮೃತಪಟ್ಟಿದ್ದಾರೆ

Continue Reading

ನಿಧನ ವಾರ್ತೆ

ಮಂಗಳೂರು: ಬೈಕ್ ಢಿಕ್ಕಿಯಿಂದ ಗಾಯಗೊಂಡಿದ್ದ ನರ್ಸಿಂಗ್ ವಿದ್ಯಾರ್ಥಿನಿ ಸಾವು

Published

on

Ad Widget

Ad Widget

Ad Widget

Ad Widget

ರಾಷ್ಟ್ರೀಯ ಹೆದ್ದಾರಿ-66ರ ಪಂಪ್‌ವೆಲ್ ಸಮೀಪದ ಉಜ್ಯೋಡಿ ಗೋರಿಗುಡ್ಡ ಬಳಿ ಬೈಕ್ ಢಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ 19 ವರ್ಷದ ನರ್ಸಿಂಗ್ ವಿದ್ಯಾರ್ಥಿನಿ ಜ್ಯೋತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

Ad Widget

Ad Widget

Ad Widget

Ad Widget

ಮಂಗಳೂರು: ರಾಷ್ಟ್ರೀಯ ಹೆದ್ದಾರಿ-66ರ ಪಂಪ್‌ವೆಲ್ ಸಮೀಪದ ಉಜ್ಯೋಡಿ ಗೋರಿಗುಡ್ಡ ಬಳಿ ಬೈಕ್ ಢಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ 19 ವರ್ಷದ ನರ್ಸಿಂಗ್ ವಿದ್ಯಾರ್ಥಿನಿ ಜ್ಯೋತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

Ad Widget

Ad Widget alt="Ad Widget"/>

Ad Widget

ನ. 14ರಂದು ಬೆಳಗ್ಗೆ ಜ್ಯೋತಿ ಹಾಗೂ ಅವರ ಸಂಬಂಧಿ ನಂದಿನಿ (19) ಗೋರಿಗುಡ್ಡ ಬಳಿ ರಸ್ತೆ ವಿಭಜಕ ದಾಟಿ ನಡೆದುಕೊಂಡು ಹೋಗುತ್ತಿದ್ದ ವೇಳೆ ತೊಕ್ಕೊಟ್ಟು ಕಡೆಯಿಂದ ನಂತೂರು ಕಡೆಗೆ ಸಂಚರಿಸುತ್ತಿದ್ದ ಬೈಕ್ ಢಿಕ್ಕಿ ಹೊಡೆದಿತ್ತು. ಅಪಘಾತದಲ್ಲಿ ಇಬ್ಬರೂ ಗಾಯಗೊಂಡಿದ್ದು, ಬೈಕ್‌ನಲ್ಲಿದ್ದವರಿಗೂ ಗಾಯಗಳಾಗಿದ್ದವು. ಗಂಭೀರ ಗಾಯಗೊಂಡಿದ್ದ ಜ್ಯೋತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

Ad Widget

Ad Widget <> Ad Widget

ಜ್ಯೋತಿ ನಗರದ ಖಾಸಗಿ ಕಾಲೇಜೊಂದರಲ್ಲಿ ಜಿಎನ್‌ಎಂ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದರು.

ಮೂಲತಃ ಚಿಕ್ಕಮಗಳೂರಿನ ಶಿಳ್ಳೆಕ್ಯಾತ ಅಲೆಮಾರಿ ಸಮುದಾಯಕ್ಕೆ ಸೇರಿದ ಜ್ಯೋತಿಯ ಕುಟುಂಬ ಹಲವು ವರ್ಷಗಳಿಂದ ಮಂಗಳೂರಿನ ಕಣ್ಣೂರಿನಲ್ಲಿ ವಾಸವಾಗಿತ್ತು. ನೇತ್ರಾವತಿ ನದಿಯಲ್ಲಿ ತೆಪ್ಪದ ಮೂಲಕ ಮೀನು ಹಿಡಿಯುವ ವೃತ್ತಿಯನ್ನು ಕುಟುಂಬ ನಡೆಸುತ್ತಿತ್ತು. ಕುಟುಂಬದ ಹಿರಿಯ ಮಗಳಾಗಿದ್ದ ಜ್ಯೋತಿ ತಂದೆ, ತಾಯಿ, ಇಬ್ಬರು ಸಹೋದರರು ಹಾಗೂ ಸಹೋದರಿಯನ್ನು ಅಗಲಿದ್ದಾರೆ.

Ad Widget

Ad Widget

ಕಮರಿದ ಕುಟುಂಬಕ್ಕೆ ಆಧಾರವಾಗುವ ಕನಸು
ಕಷ್ಟದ ಪರಿಸ್ಥಿತಿಯಲ್ಲಿ ಬೆಳೆದು ಬಂದಿದ್ದ ಜ್ಯೋತಿ ನರ್ಸ್ ಆಗಿ ಕುಟುಂಬಕ್ಕೆ ಆಸರೆಯಾಗಬೇಕೆಂಬ ಕನಸು ಕಂಡಿದ್ದರು. ಆದರೆ, ರಸ್ತೆ ಅಪಘಾತ ಆಕೆಯ ಕನಸನ್ನು ನುಚ್ಚುನೂರಾಗಿಸಿದ್ದು, ಕುಟುಂಬಸ್ಥರು ದುಃಖದಲ್ಲಿ ಮುಳುಗಿದ್ದಾರೆ.

Ad Widget
Continue Reading

ನಿಧನ ವಾರ್ತೆ

Accident-ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ: 8 ವರ್ಷದ ಬಾಲಕಿ ಸೇರಿ ಇಬ್ಬರು ಸ್ಥಳದಲ್ಲೇ ಸಾವು; ನಾಲ್ವರ ಸ್ಥಿತಿ ಗಂಭೀರ

Published

on

Ad Widget

Ad Widget

Ad Widget

Ad Widget

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಎಂಟು ವರ್ಷದ ಬಾಲಕಿ ಸೇರಿದಂತೆ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ನಗುವಿನಹಳ್ಳಿ ಗೇಟ್ ಬಳಿ ನಡೆದಿದೆ.

Ad Widget

Ad Widget

Ad Widget

Ad Widget

ಮಂಡ್ಯ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಎಂಟು ವರ್ಷದ ಬಾಲಕಿ ಸೇರಿದಂತೆ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ನಗುವಿನಹಳ್ಳಿ ಗೇಟ್ ಬಳಿ ನಡೆದಿದೆ.

Ad Widget

Ad Widget alt="Ad Widget"/>

Ad Widget

ಮಂಡ್ಯದ ಗುತ್ತಲು ಬಡಾವಣೆಯ ಮಹದೇವು ಹಾಗೂ ತೈಲೂರು ಗ್ರಾಮದ ಎಂಟು ವರ್ಷದ ಬಾಲಕಿ ರಿತ್ವಿಕಾ ಮೃತಪಟ್ಟವರು. ಕುಟುಂಬದ ಸದಸ್ಯರು ಕಾರಿನಲ್ಲಿ ನಂಜನಗೂಡಿನ ದೇವಸ್ಥಾನಕ್ಕೆ ತೆರಳಿ ವಾಪಸಾಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

Ad Widget

Ad Widget <> Ad Widget

ನಗುವಿನಹಳ್ಳಿ ಗೇಟ್ ಬಳಿಯ ಫ್ಲೈಓವರ್ ಮೇಲೆ ಚಲಿಸುತ್ತಿದ್ದ ಸರಕು ಸಾಗಣೆ ಲಾರಿಗೆ ಹಿಂದಿನಿಂದ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಮಹದೇವು ಹಾಗೂ ಬಾಲಕಿ ರಿತ್ವಿಕಾ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಅಪಘಾತದಲ್ಲಿ ಗೌರಿ, ಲತಾ, ಶಿವರಾಜು ಹಾಗೂ ಪ್ರಾರ್ಥನಾ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ.

Ad Widget

Ad Widget

ಕುಟುಂಬದ ಸದಸ್ಯರು ನಂಜನಗೂಡಿನ ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ ಪಡೆದ ಬಳಿಕ ರೀಲ್ಸ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಆದರೆ, ದೇವರ ದರ್ಶನ ಪಡೆದು ಮನೆಗೆ ಮರಳುತ್ತಿದ್ದ ಕುಟುಂಬದ ಪ್ರಯಾಣ ಕೆಲವೇ ಸಮಯದಲ್ಲಿ ಭೀಕರ ದುರಂತದಲ್ಲಿ ಅಂತ್ಯಗೊಂಡಿರುವುದು ಸಂಬಂಧಿಕರು ಹಾಗೂ ಸ್ಥಳೀಯರಲ್ಲಿ ತೀವ್ರ ದುಃಖವನ್ನುಂಟುಮಾಡಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!