ಸುಳ್ಯ
Sullia-ʻಚಿಕಿತ್ಸೆಗೆ ನೆರವು ನೀಡಲಾಗದಿದ್ದಲ್ಲಿ ದಯಾಮರಣ ನೀಡಿʼ- ಸರ್ಕಾರಕ್ಕೆ ಸುಳ್ಯದ ಬಡ ಮಹಿಳೆಯ ಕೋರಿಕೆ
ಮಂಗಳೂರು: ‘ಹೈಪರ್ ಐಜಿಇ ಸಿಂಡೋಮ್’ ಎಂಬ ಅಪರೂಪದ ಕಾಯಿಲೆಯಿಂದ ಬಳಲುತ್ತಿರುವ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲ್ಲೂಕಿನ ನಾವೂರು ಗ್ರಾಮದ ಬಡ ಕುಟುಂಬದ ಚಾಂದಿನಿ ಜಿ.ಡಿ. (33) ಎಂಬುವರು ಚಿಕಿತ್ಸೆ ವೆಚ್ಚ ಭರಿಸಲು ಸರ್ಕಾರದ ನೆರವು ಕೋರಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಚಾಂದಿನಿಯವರು “ಚಿಕಿತ್ಸೆಗೆ ನೆರವು ನೀಡಲು ಸಾಧ್ಯವಾಗದಿದ್ದರೆ ದಯಾಮರಣವನ್ನಾದರೂ ನೀಡಿ’ ಎಂದು ಕೋರಿ ಇ- ಮೇಲ್ ಕಳುಹಿಸಿದ್ದಾರೆ.
‘ನನ್ನ ಕಾಯಿಲೆಗೆ ಊರಿನಲ್ಲಿ ಚಿಕಿತ್ಸೆ ಪಡೆದರೂ ಪ್ರಯೋಜನವಾಗಿರಲಿಲ್ಲ. ಹೆಚ್ಚಿನ ಚಿಕಿತ್ಸೆಗೆ ಹೈದರಾಬಾದ್‌ನ ಎಐಜಿ ಆಸ್ಪತ್ರೆಗೆ ದಾಖಲಾಗುವಂತೆ ಊರಿನ ವೈದ್ಯರು ಸಲಹೆ ನೀಡಿದ್ದರು. ನನಗೆ ಅತ್ಯಂತ ಅಪರೂಪವಾದ ‘ಹೈಪರ್ ಐಜಿಇ ಮೆಡಿಕೇಟೆಡ್ ಸೆಲ್ ಆಕ್ಟಿವೇಷನ್ ಸಿಂಡೋಮ್’ ಕಾಯಿಲೆ ಇರುವುದನ್ನು ಆ ಆಸ್ಪತ್ರೆಯವರು ಪತ್ತೆ ಹಚ್ಚಿದ್ದರು. ತೀವ್ರ ತರವಾದ ಅಲರ್ಜಿಯನ್ನುಂಟು ಮಾಡುವ (ಅನಫಿಲ್ಯಾಕ್ಸಿಸ್) ಈ ಕಾಯಿಲೆಗೆ ಅಲ್ಲಿ ಒಮ್ಮೆ ಚಿಕಿತ್ಸೆ ಪಡೆದು ಬಳಿಕ ಮಂಗಳೂರಿನ ಸರ್ಕಾರಿ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ತೆರಳಿದ್ದೆ. ಅಲ್ಲಿ ಈ ಕಾಯಿಲೆಗೆ ಚಿಕಿತ್ಸೆ ಲಭ್ಯವಿಲ್ಲ ಎಂದು ವೈದ್ಯರು ತಿಳಿಸಿದ್ದರು. ಬೆಂಗಳೂರಿನ ಕೆಲವು ಆಸ್ಪತ್ರೆಯಲ್ಲಿ ಇದಕ್ಕೆ ಚಿಕಿತ್ಸೆ ಲಭ್ಯವಿದೆ ಎಂದು ತಿಳಿದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹಾಗೂ ಆರೋಗ್ಯ ಇಲಾಖೆಯ ಉನ್ನತ ಅಧಿಕಾರಿಗಳಿಗೆ ಪತ್ರ ಬರೆದಿದ್ದೆ. ಅಲ್ಲಿಂದ ಉತ್ತರ ಬಂದಿರಲಿಲ್ಲ’ ಎಂದು ಚಾಂದಿನಿ ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಈ ನಡುವೆ ಆರೋಗ್ಯ ಏರುಪೇರಾಗಿದ್ದರಿಂದ ಮಂಗಳೂರಿನ ಕೆಎಂಸಿ ಆಸ್ಪತ್ರೆಯ ವೈದ್ಯರ ಸಲಹೆಯಂತೆ ಹೈದರಾಬಾದ್‌ನ ಎಐಜಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದೆ. ಊರಿನವರು ಆಂಬುಲೆನ್ಸ್ ಮಾಡಿಕೊಡುವ ಮೂಲಕ ನೆರವಾಗಿದ್ದರು. ಚಿಕಿತ್ಸೆ ವೆಚ್ಚ ಭರಿಸುವ ಬಗ್ಗೆ ಆರೋಗ್ಯ ಇಲಾಖೆಯಿಂದ ಪತ್ರ ಬಾರದ ಕಾರಣಕ್ಕೆ ಎಐಜಿ ಆಸ್ಪತ್ರೆಯವರು ಎರಡು ಸಲ ಚಿಕಿತ್ಸೆ ನಿಲ್ಲಿಸಿದ್ದರು. ಸರ್ಕಾರದಿಂದ ಭರವಸೆ ಸಿಗುತ್ತಿದೆಯಾದರೂ, ಚಿಕಿತ್ಸೆಗೆ ಹಣದ ನೆರವು ಸಿಗುತ್ತಿಲ್ಲ. ಹಾಗಾಗಿ ದಯಾಮರಣ ಕೋರಿ ಈ ಪತ್ರ ಬರೆಯುತ್ತಿದ್ದೇನೆ’ ಎಂದು ಅವರು ಉಲ್ಲೇಖಿಸಿದ್ದಾರೆ.
ಜಿಲ್ಲಾಧಿಕಾರಿ ಮುಲೈ ಮುಗಿಲನ್ ಎಂಪಿ ಈ ಬಗ್ಗೆ ಪ್ರತಿಕ್ರಿಯಿಸಿದ್ದು ‘ಈ ವಿಚಾರವನ್ನು ಸರ್ಕಾರದ ಗಮನಕ್ಕೆ ತರಲು ಡಿಎಚ್‌ಒ ಈಗಾಗಲೇ ಕ್ರಮವಹಿಸಿದ್ದಾರೆ’ ಎಂದರು. ಪರಿಶಿಷ್ಟ ಪಂಗಡಕ್ಕೆ ಸೇರಿದ ಧನಂಜಯ ನಾಯ್ಕ ಅವರ ಮಗಳಾದ ಚಾಂದಿನಿ ಅವರಿಗೆ ಮದುವೆಯಾಗಿದ್ದು, ಒಂದು ಮಗುವಿದೆ.
ನೆರವಾದ ದಾರಿ ಸಂಘಟನೆ:
ಆರೋಗ್ಯ ಇಲಾಖೆ ತಕ್ಷಣ ಸ್ಪಂದಿಸಿ ಚಾಂದಿನಿ ಅವರ ಚಿಕಿತ್ಸೆಗೆ ನೆರವಾಗುವ ಮೂಲಕ ಅವರನ್ನು ಬದುಕಿಸಬೇಕು’ ಎಂದು ದಾರಿ ಸಂಘಟನೆಯ ರವಿ ಬಂಗೇರ ತಿಳಿಸಿದರು. ದಾರಿ ಸಂಘಟನೆಯು ಚಾಂದಿನಿ ಅವರ ಹೋರಾಟಕ್ಕೆ ನೆರವಾಗುತ್ತಿದೆ.
‘ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವಾಟ್ಸ್‌ಆ್ಯಪ್‌ನಲ್ಲಿ ಸಂದೇಶ’
ಡಿಎಚ್‌ಒ ಡಾ.ಎಚ್.ಆರ್.ತಿಮ್ಮಯ್ಯ ಅವರಿಗೆ ಚಾಂದಿನಿ ಅವರು ಜೂ. 21ರಂದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವಾಟ್ಸ್‌ಆ್ಯಪ್‌ನಲ್ಲಿ ಸಂದೇಶ ಕಳುಹಿಸಿದ್ದರು. ‘ನನ್ನ ಸಾವಿಗೆ ಆರೋಗ್ಯ ಸಚಿವರು ಸುಳ್ಯ ಕ್ಷೇತ್ರದ ಶಾಸಕರು ಡಿಎಚ್ ಒ ಹೊಣೆ’ ಎಂದು ತಿಳಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ಡಿಎಚ್‌ಒ ‘ದುಡುಕಿನ ನಿರ್ಧಾರ ಕೈಗೊಳ್ಳಬೇಡಿ. ಚಿಕಿತ್ಸೆಗೆ ನೆರವಾಗುವ ಬಗ್ಗೆ ಈಗಾಗಲೇ ರಾಜ್ಯ ಸರ್ಕಾರ ಉನ್ನತ ಅಧಿಕಾರಿಗಳ ಜೊತೆ ಚರ್ಚಿಸಿದ್ದೇವೆ’ ಎಂದು ಪತ್ರ ಬರೆದಿದ್ದರು.
ಸುಳ್ಯ
Sevaratna-ಕಲ್ಪವೃಕ್ಷದ ಕಾಯಕಯೋಗಿಗೆ ‘ಸೇವಾರತ್ನ’ ಗೌರವ; 20 ವರ್ಷಗಳ ನಿರಂತರ ಕಾಯಕಕ್ಕೆ ಅಚ್ಚುತ ನಾಯಕ್ ಕಿಲಂಗೋಡಿಯವರಿಗೆ ಜಿಲ್ಲಾಮಟ್ಟದ ಪ್ರಶಸ್ತಿ
ಕಲ್ಪವೃಕ್ಷವೆಂದೇ ಕರೆಯಲ್ಪಡುವ ತೆಂಗಿನ ಮರವನ್ನು ಏರಿ, ಕಳೆದ ಎರಡು ದಶಕಗಳಿಂದ ರೈತರು ಹಾಗೂ ಸಾರ್ವಜನಿಕರಿಗೆ ನಿರಂತರ ಸೇವೆ ಸಲ್ಲಿಸುತ್ತಿರುವ ಕಳಂಜ ಗ್ರಾಮದ ಶ್ರೀ ಅಚ್ಚುತ ನಾಯಕ್ ಕಿಲಂಗೋಡಿಯವರು ತಮ್ಮ ಕಾಯಕನಿಷ್ಠೆ ಹಾಗೂ ಸೇವೆಯಿಂದ ಇದೀಗ ಜಿಲ್ಲಾಮಟ್ಟದ ಗೌರವಕ್ಕೆ ಪಾತ್ರರಾಗಿದ್ದಾರೆ.
ಸುಳ್ಯ: ಕಲ್ಪವೃಕ್ಷವೆಂದೇ ಕರೆಯಲ್ಪಡುವ ತೆಂಗಿನ ಮರವನ್ನು ಏರಿ, ಕಳೆದ ಎರಡು ದಶಕಗಳಿಂದ ರೈತರು ಹಾಗೂ ಸಾರ್ವಜನಿಕರಿಗೆ ನಿರಂತರ ಸೇವೆ ಸಲ್ಲಿಸುತ್ತಿರುವ ಕಳಂಜ ಗ್ರಾಮದ ಶ್ರೀ ಅಚ್ಚುತ ನಾಯಕ್ ಕಿಲಂಗೋಡಿಯವರು ತಮ್ಮ ಕಾಯಕನಿಷ್ಠೆ ಹಾಗೂ ಸೇವೆಯಿಂದ ಇದೀಗ ಜಿಲ್ಲಾಮಟ್ಟದ ಗೌರವಕ್ಕೆ ಪಾತ್ರರಾಗಿದ್ದಾರೆ.
ಆಕ್ಸಿಸ್ ಬ್ಯಾಂಕ್ ಹಾಗೂ ಮ್ಯಾಕ್ಸ್ ಲೈಫ್ ಇನ್ಶೂರೆನ್ಸ್ ವತಿಯಿಂದ ಕೊಡಮಾಡುವ ಜಿಲ್ಲಾಮಟ್ಟದ ‘ಸೇವಾರತ್ನ ಪ್ರಶಸ್ತಿ’ಗೆ ಅಚ್ಚುತ ನಾಯಕ್ ಕಿಲಂಗೋಡಿಯವರನ್ನು ಆಯ್ಕೆ ಮಾಡಲಾಗಿದೆ.
ಒಕ್ಟೊಬರ್ 9ರಂದು ಸಂಜೆ 4.30ಕ್ಕೆ ಮoಗಳೂರಿನಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ತೆಂಗಿನ ಮರವೇರುವುದು ಸುಲಭದ ಕೆಲಸವಲ್ಲ. ಮರದ ಎತ್ತರ, ಗಾಳಿಯ ವೇಗ, ಹವಾಮಾನ ವೈಪರೀತ್ಯ ಸೇರಿದಂತೆ ಹಲವು ಸವಾಲುಗಳ ನಡುವೆಯೂ ಮರದ ತುದಿಗೆ ಏರಿ ತೆಂಗಿನಕಾಯಿಗಳನ್ನು ಕೊಯ್ದು ಕೆಳಗಿಳಿಸುವ ಈ ಕಾಯಕಕ್ಕೆ ಧೈರ್ಯ, ದೈಹಿಕ ಸಾಮರ್ಥ್ಯ, ಕೌಶಲ್ಯ ಹಾಗೂ ಅಪಾರ ಅನುಭವದ ಅಗತ್ಯವಿದೆ. ಇಂತಹ ಅಪಾಯಭರಿತ ಕಾಯಕವನ್ನು ಅಚ್ಚುತ ನಾಯಕ್ ಅವರು ಕಳೆದ 20 ವರ್ಷಗಳಿಂದ ಅತ್ಯಂತ ಪ್ರಾಮಾಣಿಕತೆ ಮತ್ತು ಕಾಯಕನಿಷ್ಠೆಯಿಂದ ಮಾಡಿಕೊಂಡು ಬರುತ್ತಿದ್ದಾರೆ.
ಕಳಂಜ ಗ್ರಾಮಕ್ಕೆ ಮಾತ್ರ ಸೀಮಿತವಾಗದೆ ಸುಳ್ಯ ತಾಲೂಕು ಹಾಗೂ ಹೊರ ತಾಲೂಕುಗಳ ವಿವಿಧ ಪ್ರದೇಶಗಳಿಗೆ ತೆರಳಿ, ರೈತರು ಮತ್ತು ಸಾರ್ವಜನಿಕರ ತೆಂಗಿನ ಮರಗಳಿಂದ ತೆಂಗಿನಕಾಯಿಗಳನ್ನು ಕೊಯ್ದು ತೆಗೆದು ಕೊಡುವ ಸೇವೆಯನ್ನು ಅವರು ನಿರಂತರವಾಗಿ ಸಲ್ಲಿಸುತ್ತಿದ್ದಾರೆ. ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅತ್ಯಗತ್ಯವಾಗಿರುವ ಈ ಸೇವೆಯನ್ನು ಯಾವುದೇ ಪ್ರಚಾರದ ನಿರೀಕ್ಷೆಯಿಲ್ಲದೆ ಮಾಡುತ್ತಿರುವುದು ಅವರ ಕಾಯಕದ ವಿಶೇಷತೆಯಾಗಿದೆ.
ಮೌನ ಸಾಧಕರ ಸೇವೆಗೆ ಮತ್ತೊಂದು ಗೌರವ
ಅಚ್ಚುತ ನಾಯಕ್ ಅವರ ಸೇವೆಯನ್ನು ಈಗಾಗಲೇ ಹಲವು ಸಂಸ್ಥೆಗಳು ಗುರುತಿಸಿವೆ. ರೋಟರಿ ಕ್ಲಬ್ ಬೆಳ್ಳಾರೆ ಸಂಸ್ಥೆಯು 2018–19ನೇ ಸಾಲಿನಲ್ಲಿ ಅವರ ಸೇವೆಯನ್ನು ಗುರುತಿಸಿ ಗೌರವಿಸಿತ್ತು.
ಅದೇ ರೀತಿ ಜೆಸಿಐ ಬೆಳ್ಳಾರೆ ಸಂಸ್ಥೆಯು 2025ರಲ್ಲಿ ಅವರ ನಿರಂತರ ಹಾಗೂ ಶ್ರಮದಾಯಕ ಸೇವೆಯನ್ನು ಗುರುತಿಸಿ ‘ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್’ ಪ್ರಶಸ್ತಿ ನೀಡಿ ಗೌರವಿಸಿತ್ತು.
ಯಾವುದೇ ಪ್ರಚಾರದ ಹಿಂದೆ ಹೋಗದೆ, ತನ್ನ ಶ್ರಮವನ್ನೇ ಬಂಡವಾಳವನ್ನಾಗಿ ಮಾಡಿಕೊಂಡು ಪ್ರತಿದಿನವೂ ದುಡಿಯುತ್ತಿರುವ ಅಚ್ಚುತ ನಾಯಕ್ ಅವರು ನಿಜವಾದ ಮೌನ ಕಾಯಕಯೋಗಿ. ತೆಂಗಿನ ಮರದ ತುದಿಯಲ್ಲಿ ನಿಂತು ಅವರು ಮಾಡುವ ಪ್ರತಿಯೊಂದು ಕೆಲಸದ ಹಿಂದೆಯೂ ಧೈರ್ಯ, ಪರಿಶ್ರಮ, ಕೌಶಲ್ಯ ಮತ್ತು ಕುಟುಂಬದ ಬದುಕಿಗಾಗಿ ನಡೆಸುವ ಪ್ರಾಮಾಣಿಕ ಹೋರಾಟವಿದೆ.
ಕಲ್ಪವೃಕ್ಷದೊಂದಿಗೆ ಎರಡು ದಶಕಗಳ ಕಾಲ ನಂಟು ಬೆಳೆಸಿಕೊಂಡಿರುವ ಅಚ್ಚುತ ನಾಯಕ್ ಅವರ ಕಾಯಕವು ಗ್ರಾಮೀಣ ಶ್ರಮಜೀವಿಗಳ ಬದುಕಿನ ಪ್ರತೀಕವಾಗಿದೆ. ರೈತರ ಅಗತ್ಯಕ್ಕೆ ಸ್ಪಂದಿಸುತ್ತಾ, ಅಪಾಯವನ್ನು ಲೆಕ್ಕಿಸದೆ ತಮ್ಮ ವೃತ್ತಿಯನ್ನು ಮುಂದುವರಿಸಿಕೊಂಡು ಬಂದಿರುವ ಅವರ ಸೇವೆಗೆ ‘ಸೇವಾರತ್ನ’ ಪ್ರಶಸ್ತಿ ಮತ್ತೊಂದು ಸಾರ್ಥಕ ಗೌರವವಾಗಿದೆ.
ಕಾಯಕಕ್ಕೆ ಸಂದ ಸಾರ್ಥಕ ಗೌರವ
ಕಳೆದ 20 ವರ್ಷಗಳಿಂದ ತೆಂಗಿನ ಮರದ ತುದಿಯಲ್ಲಿ ಬೆವರು ಸುರಿಸಿ, ರೈತರು ಮತ್ತು ಸಾರ್ವಜನಿಕರಿಗೆ ಅಗತ್ಯವಾದ ಸೇವೆಯನ್ನು ಸಲ್ಲಿಸುತ್ತಿರುವ ಅಚ್ಚುತ ನಾಯಕ್ ಕಿಲಂಗೋಡಿಯವರಿಗೆ ದೊರೆಯುತ್ತಿರುವ ‘ಸೇವಾರತ್ನ’ ಪ್ರಶಸ್ತಿ, ಅವರ ಕಾಯಕನಿಷ್ಠೆಗೆ ಸಂದ ಗೌರವ ಮಾತ್ರವಲ್ಲದೆ, ಗ್ರಾಮೀಣ ಶ್ರಮಜೀವಿಗಳ ಪರಿಶ್ರಮಕ್ಕೂ ಸಂದ ಗೌರವವಾಗಿದೆ.
ಕಲ್ಪವೃಕ್ಷದ ಕಾಯಕಯೋಗಿಯ ಎರಡು ದಶಕಗಳ ನಿರಂತರ ಸೇವೆಗೆ ಇದೀಗ ‘ಸೇವಾರತ್ನ’ದ ಗೌರವದ ಕಿರೀಟ ದೊರೆತಿದೆ.
ಸುಳ್ಯ
ಸುಳ್ಯ :ಗ್ಯಾರೇಜ್‌ನಲ್ಲಿ ಬೈಕ್‌ಗೆ ಬೆಂಕಿ: ಇಬ್ಬರ ಬಂಧನ

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ ಹಚ್ಚಿ ಸುಟ್ಟುಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಆರೋಪಿಗಳನ್ನು ಸುಳ್ಯ ಐವರ್ನಾಡು ನಿವಾಸಿ ದಯಾನಂದ (30) ಹಾಗೂ ಸುಳ್ಯ ಕಸಬಾ ನಿವಾಸಿ ದರ್ಶನರಾಜು (23) ಎಂದು ಗುರುತಿಸಲಾಗಿದೆ.
ಸುಳ್ಯ ಕಸಬಾ ಗ್ರಾಮದ ಅಂಬೆಟಡ್ಕದಲ್ಲಿ ಆ.26ರ ರಾತ್ರಿ ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದರು. ಘಟನೆಗೆ ಸಂಬಂಧಿಸಿದಂತೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಅ.ಕ್ರ.120/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 326(g) ಅಡಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ ಸುಳ್ಯ ಠಾಣೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.
ಸುಳ್ಯ
Dr. Deviprasad Kanattur-ಪಂಜ ದೇಗುಲದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರ ಮೇಲೆ ಅವ್ಯವಹಾರದ ಆರೋಪ; ಸತ್ಯ ಪ್ರಮಾಣಕ್ಕೆ ಡಾ. ದೇವಿಪ್ರಸಾದ್ ಕಾನತ್ತೂರ್ ನಿರ್ಧಾರ
ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಕಾನತ್ತೂರ್ ಅವರು ತನ್ನ ಮೇಲಿನ ಅವ್ಯವಹಾರದ ಆರೋಪಕ್ಕೆ ಸತ್ಯಪ್ರಮಾಣಕ್ಕೆ ನಿರ್ಧರಿಸಿದ್ದು ಆರೋಪ ಹೊರಿಸಿದವರು, ಪ್ರಮಾಣಕ್ಕೆ ಬರುವಂತೆ ಸವಾಲು ಹಾಕಿದ್ದಾರೆ.
ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಕಾನತ್ತೂರ್ ಅವರು ತನ್ನ ಮೇಲಿನ ಅವ್ಯವಹಾರದ ಆರೋಪಕ್ಕೆ ಸತ್ಯಪ್ರಮಾಣಕ್ಕೆ ನಿರ್ಧರಿಸಿದ್ದು ಆರೋಪ ಹೊರಿಸಿದವರು, ಪ್ರಮಾಣಕ್ಕೆ ಬರುವಂತೆ ಸವಾಲು ಹಾಕಿದ್ದಾರೆ.
ಆಗಸ್ಟ್ 31 ರಂದು ಸೋಮವಾರ ಪೂರ್ವಾಹ್ನ ಶ್ರೀ ದೇವರು ಜಳಕ ಮಾಡುವ ಪವಿತ್ರ ನಾಗತೀರ್ಥ ನದಿಯಲ್ಲಿ ಸ್ನಾನಮಾಡಿ ದೇಗುಲದ ನಡೆಯಲ್ಲಿ ಬೆಳಗ್ಗಿನ ಮಹಾಪೂಜೆಯ ನಂತರ ನಾನು ಯಾವ ಅವ್ಯವಹಾರ ಮಾಡಿಲ್ಲ ಎಂದು ಸತ್ಯ ಪ್ರಮಾಣ ಮಾಡುತ್ತೇನೆ. ನನ್ನ ಮೇಲೆ ಸುಳ್ಳು ಆರೋಪ ಮಾಡಿದವರಿಗೆ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವರು ಹಾಗೂ ಪರಿವಾರ ದೈವಗಳು ಉತ್ತರ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಯಾರು ನನ್ನ ಮೇಲೆ ಆರೋಪ ಮಾಡಿದ್ದಾರೆ. ಅವರೂ ಪ್ರಮಾಣಕ್ಕೆ ಬರಲಿ ಎಂದು ಅವರು ತಿಳಿಸಿದ್ದಾರೆ.
-
Uncategorized16 hours ago
Naana Paatekar No More : ವ್ಯವಸ್ಥೆಯ ವಿರುದ್ಧದ ಧ್ವನಿಗೆ ರೂಪ ನೀಡಿದ, ತನ್ನ ಡೈಲಾಗ್ ನಿಂದಲೇ ಅಸಂಖ್ಯಾತ ಅಭಿಮಾನಿಗಳನ್ನು ಗಳಿಸಿದ್ದ ಅಭಿಜಾತ ಕಲಾವಿದ ನಾನಾಪಾಟೇಕರ್ ಇನ್ನಿಲ್ಲ
-
ಬಿಗ್ ನ್ಯೂಸ್10 hours agoSting Operation | ಸ್ಟಿಂಗ್ ಆಪರೇಷನ್ ಚರ್ಚೆ: ಪುತ್ತೂರಿಗೂ ವ್ಯಾಪಿಸಿದೆಯೇ ರಾಜಕೀಯದ ‘ಸ್ಟಿಂಗ್’ ಸದ್ದು..?
-
ಮಂಗಳೂರು13 hours agoMangalore-ರಿಕ್ಷಾದಲ್ಲಿ ಬಿಟ್ಟುಹೋದ 48 ಗ್ರಾಂ ಚಿನ್ನದ ನೆಕ್ಲೇಸ್ ವಾಪಸ್ ನೀಡಿ ಪ್ರಾಮಾಣಿಕತೆ ಮೆರೆದ ಚಾಲಕ
-
Uncategorized14 hours agoAshok Rai-ಬದ್ಯಾರ್ನಲ್ಲಿ 50 ವರ್ಷದ ರಸ್ತೆ ವಿವಾದಕ್ಕೆ ತೆರೆ ಎಳೆದ ಶಾಸಕ ಅಶೋಕ್ ರೈ
-
ನಿಧನ ವಾರ್ತೆ14 hours agoBeltangadi-ಬೆಳ್ತಂಗಡಿ: ಅಡಿಕೆ ಕೊಯ್ಯುವ ವೇಳೆ ವಿದ್ಯುತ್ ತಂತಿಗೆ ದೋಟಿ ತಾಗಿ ವ್ಯಕ್ತಿ ಸಾವು
-
ಅಪರಾಧ15 hours agoUppinangadi-ಉಪ್ಪಿನಂಗಡಿ: ತೋಟದ ಕೆಲಸಕ್ಕೆ ಬರುತ್ತೇನೆಂದು ಹಣ ಪಡೆದು ನಾಪತ್ತೆ
-
ನಿಧನ ವಾರ್ತೆ14 hours agoAccident-ಮೂಡುಬಿದಿರೆ: ಸ್ಕೂಟರ್ ನಿಯಂತ್ರಣ ತಪ್ಪಿ ಬಿದ್ದು ಕಾಲೇಜು ವಿದ್ಯಾರ್ಥಿ ಸಾವು
-
ಬಿಗ್ ನ್ಯೂಸ್15 hours agoHalf helmet-ಕರ್ನಾಟಕದಲ್ಲಿ ಹಾಫ್ ಹೆಲ್ಮೆಟ್ ಸಂಪೂರ್ಣ ನಿಷೇಧ


















