ಬಿಗ್ ನ್ಯೂಸ್
Chaddi Gang | ಮಂಗಳೂರು ದರೋಡೆ : ಸಿನಿಮೀಯ ರೀತಿ ಚಡ್ಡಿ ಗ್ಯಾಂಗ್ ವಶಕ್ಕೆ ಪಡೆದ ಮಂಗಳೂರು ಪೊಲೀಸರು – ಕಾರ್ಯಾಚರಣೆಗೆ KSRTC ಸಾಥ್ – ಕೇವಲ 5 ಗಂಟೆಯ ಕಾರ್ಯಾಚರಣೆಯ ಸಂಪೂರ್ಣ ವಿವರ ಇಲ್ಲಿದೆ
ಕಮಿಷನರೇಟ್ ನ ಉರ್ವಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಿನಾಂಕ 09-07-2024 ರಂದು ಬೆಳಗ್ಗಿನ ಜಾವ ಸಮಯ ಸುಮಾರು 4-೦೦ ಗಂಟೆಗೆ ಬರ್ಮುಡಾ ಚಡ್ಡಿ ಮತ್ತು ಬನಿಯನ್ ಧರಿಸಿದ ಸುಮಾರು 30 ರಿಂದ 40 ವರ್ಷ ಪ್ರಾಯದ 4 ಜನ ಯುವಕರು (ಚಡ್ಡಿ ಗ್ಯಾಂಗ್) (Chaddi Gang) ದೇರೆಬೈಲು ಗ್ರಾಮದ ಕೋಟೆಕಣಿ ರಸ್ತೆಯ ಶ್ರೀ ವಿಕ್ಟರ್ ಮೆಂಡೋನ್ಸಾ ಎನ್ನುವವರ ಮನೆಯ ಕಿಟಕಿಯ ಗ್ರಿಲ್ ಅನ್ನು ತುಂಡರಿಸಿ ಒಳ ಪ್ರವೇಶಿಸಿ ವಿಕ್ಟರ್ ಮೆಂಡೋನ್ಸಾ ರವರಿಗೆ ಕಬ್ಬಿಣದ ರಾಡಿನಿಂದ ಹಲ್ಲೆ ಮಾಡಿ ತೀವ್ರ ಗಾಯವನ್ನುಂಟು ಮಾಡಿ ಅವರ ಪತ್ನಿ ಶ್ರೀಮತಿ ಪ್ಯಾಟ್ರಿಸಿಯಾ ಮೆಂಡೋನ್ಸ ರವರಿಗೆ ಕೂಡಾ ಸ್ಕ್ರೂ ಡ್ರೈವರ್ ನಿಂದ ಹೊಡೆದು ಬೊಬ್ಬೆ ಹಾಕದಂತೆ ಹಾಗೂ ಫೋನ್ ಮಾಡದಂತೆ ಬೆದರಿಸಿ ಮನೆಯಲ್ಲಿದ್ದ 3 ಮೊಬೈಲ್ ಫೋನ್ ಗಳನ್ನು ನೆಲಕ್ಕೆ ಬಡಿದು ಜಖಂಗೊಳಿಸಿ ಕಪಾಟಿನ ಲಾಕರ್ ಒಳಗೆ ಇರಿಸಿದ್ದ ಸುಮಾರು 12 ಲಕ್ಷ ರೂ ಮೌಲ್ಯದ ಚಿನ್ನ ಮತ್ತು ವಜ್ರದ ಆಭರಣ, ಸ್ಯಾಮ್ ಸಂಗ್ ಮೊಬೈಲ್ ಫೋನ್ ಮತ್ತು ರೂ 1 ಲಕ್ಷ ಮೌಲ್ಯದ 10 ಬ್ರಾಂಡೆಡ್ ವಾಚ್ ಗಳು, ರೂ 3000 ನಗದು ಹಣವನ್ನು ಸುಲಿಗೆ ಮಾಡಿ, ಸದ್ರಿ ಮನೆಯ ವೆರಾಂಡದಲ್ಲಿದ್ದ ಕಾರಿನ ಸಮೇತ ಪರಾರಿಯಾಗಿದ್ದು, ಈ ಬಗ್ಗೆ ಶ್ರೀಮತಿ ಪ್ಯಾಟ್ರಿಸಿಯಾ ಮೆಂಡೊನ್ಸಾ ರವರು ನೀಡಿದ ದೂರಿನಂತೆ ಉರ್ವಾ ಪೊಲೀಸ್ ಠಾಣೆಯಲ್ಲಿ ಬೆಳಗ್ಗೆ 7-೦೦ ಗಂಟೆಗೆ ಅ.ಕ್ರ 69/2024 ಕಲಂ 309(6), 331(7), 311, 305, 3(5) ಬಿ.ಎನ್.ಎಸ್ ರಂತೆ ಪ್ರಕರಣ ದಾಖಲಾಗಿರುತ್ತದೆ.
ಪ್ರಕರಣ ನಡೆದ ಮಾಹಿತಿ ಬಂದ ಕೂಡಲೇ ಉರ್ವಾ ಠಾಣೆಯ ಪೊಲೀಸ್ ನಿರೀಕ್ಷಕರು ಹಾಗೂ ಸಿಬ್ಬಂದಿಯವರು ತಕ್ಷಣ ಕೃತ್ಯ ನಡೆದ ಸ್ಥಳಕ್ಕೆ ಭೇಟಿ ನೀಡಿ ಆರೋಪಿಗಳು ಕಾರಿನೊಂದಿಗೆ ಪರಾರಿಯಾಗಿದ್ದ ಮಾಹಿತಿಯನ್ನು ನಗರ ನಿಸ್ತಂತು ಕೊಠಡಿಗೆ ನೀಡಿದ್ದು, ಮುಲ್ಕಿ ಬಸ್ಸು ನಿಲ್ದಾಣದ ಸಮೀಪ ನಿಲ್ಲಿಸಿದ್ದ ಕಳವು ಮಾಡಲ್ಪಟ್ಟ ಸದರಿ ಕಾರನ್ನು ಪತ್ತೆಮಾಡಿ ವಶಕ್ಕೆ ಪಡೆದು ಸ್ಥಳದ ಆಸುಪಾಸಿನಲ್ಲಿದ್ದ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಿದಾಗ ಕೆ.ಎಸ್.ಅರ್.ಟಿ.ಸಿ ಬಸ್ಸಿನಲ್ಲಿ ಗುಮಾನಿ ವ್ಯಕ್ತಿಗಳು ಮಂಗಳೂರು ಕಡೆಗೆ ಪ್ರಯಾಣಿಸಿದ್ದು ಕಂಡು ಬಂದಿತ್ತು.
ಕೆ.ಎಸ್.ಅರ್.ಟಿ.ಸಿ ಅಧಿಕಾರಿಗಳನ್ನು ಸಂಪರ್ಕಿಸಿ, ಬೆಳಗಿನ ಜಾವ ಮುಲ್ಕಿ ಕಡೆಯಿಂದ ಮಂಗಳೂರಿಗೆ ಬಂದ ಕೆ.ಎಸ್.ಅರ್.ಟಿ.ಸಿ ಬಸ್ಸುಗಳ ಮಾಹಿತಿ ಪಡೆಯಲಾಗಿ ಬಾಗಲಕೋಟೆ ಕಡೆಯಿಂದ ಮಂಗಳೂರಿಗೆ ಬಂದ ಒಂದು ಕೆ.ಎಸ್.ಅರ್.ಟಿ.ಸಿ ಬಸ್ಸಿನ ನಿರ್ವಾಹಕರು ಅವರ ಬಸ್ಸಿನಲ್ಲಿ ಮುಲ್ಕಿಯಿಂದ 4 ಜನರು ಒಟ್ಟಿಗೆ ಪ್ರಯಾಣಿಸಿದ ಮಾಹಿತಿ ತಿಳಿಸಿ, ಸದರಿ ವ್ಯಕ್ತಿಗಳು ಅವರಲ್ಲಿ ಬೆಂಗಳೂರಿಗೆ ಹೋಗುವ ಬಸ್ಸಿನ ಬಗ್ಗೆ ಮಾಹಿತಿ ಕೇಳಿದ ಬಗ್ಗೆ ತಿಳಿಸಿದ್ದು, ಅವರ ಮಾಹಿತಿಯಂತೆ ಸದರಿ ಸಮಯ ಮಂಗಳೂರಿನಿಂದ ಬೆಂಗಳೂರಿಗೆ ಹೋದ ಬಸ್ಸಿನ ಬಗ್ಗೆ ವಿವರ ಪಡೆದು, ಬಸ್ಸು ನಂಬ್ರ ಕೆಎ-19-ಎಫ್-3575 ದ ನಿರ್ವಾಹಕರನ್ನು ಸಂಪರ್ಕಿಸಿ ಅವರು ತಿಳಿಸಿದ ಮಾಹಿತಿಯಂತೆ ವಿಷಯವನ್ನು ಹಾಸನ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ತಿಳಿಸಲಾಗಿ, ಸಕಲೇಶಪುರ ಡಿವೈಎಸ್ಪಿ, ಸಿಪಿಸಿ ಹಾಗೂ ಸಿಬ್ಬಂದಿಗಳ ತಂಡ ಸಕಲೇಶಪುರ ಸಮೀಪ ಸದರಿ ಬಸ್ಸನ್ನು ತಡೆದು ನಿಲ್ಲಿಸಿ ಅದರಲ್ಲಿ ಪ್ರಯಾಣಿಸುತ್ತಿದ್ದ 4 ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿ ಅವರುಗಳು ಕೃತ್ಯವೆಸಗಿದ ಬಗ್ಗೆ ಒಪ್ಪಿದ್ದು, ಅವರ ವಶದಲ್ಲಿದ್ದ ಮಂಗಳೂರು ನಗರದಲ್ಲಿ ಸುಲಿಗೆ ಮಾಡಿದ್ದ ಎಲ್ಲಾ ಚಿನ್ನ ಹಾಗೂ ವಜ್ರದ ಆಭರಣಗಳು, ವಾಚ್ ಗಳು ಹಾಗೂ ಹಣವನ್ನು ಅಮಾನತ್ತು ಪಡಿಸಿ ಉರ್ವಾ ಪೊಲೀಸ್ ಅಧಿಕಾರಿಗಳಿಗೆ ವಶಕ್ಕೆ ನೀಡಿರುತ್ತಾರೆ.
ಪ್ರಕರಣದಲ್ಲಿ ವಶಕ್ಕೆ ಪಡೆದುಕೊಂಡಿರುವ ಆರೋಪಿಗಳ ವಿವರ:1) ರಾಜು ಸಿಂಗ್ವಾನಿಯ (24 ವರ್ಷ), ತಂದೆ: ಕೋಮಲ್ ಸಿಂಗ್ವಾನಿಯ, ವಾಸ: ವಿಶ್ವನಗರ, ಧನ್ಯವಾದ್ ಪಿ.ಎಸ್, ರಗೋಗರ್ ತಾಲೂಕು, ಗುಣಾ ಜಿಲ್ಲೆ, ಮಧ್ಯ ಪ್ರದೇಶ.2) ಮಯೂರ್ (30 ವರ್ಷ), ತಂದೆ: ಮನೋಹರ್, ವಾ: ಗುಲಾಬ್ಗಂಜ್, ಭೂಪಾಲ್, ಮಧ್ಯಪ್ರದೇಶ.3) ಬಾಲಿ (22 ವರ್ಷ), ತಂದೆ: ವಿಷ್ಣು, ವಾಸ: ಮಾಧವ್ಗಡ್, ಆಶೋಕನಗರ, ಮಧ್ಯ ಪ್ರದೇಶ4) ವಿಕ್ಕಿ (21 ವರ್ಷ), ತಂದೆ: ವಿಕ್ರಂ, ವಾಸ: ಜಗನ್ಪುರ್ ಚಾಕ್, ಕೋತ್ವಾಲಿ ಪಿ.ಎಸ್, ಗುಣಾ ಜಿಲ್ಲೆ, ಮಧ್ಯ ಪ್ರದೇಶ.
ಈ ಮಿಂಚಿನ ಕಾರ್ಯಾಚರಣೆಯನ್ನು ಕೃತ್ಯ ನಡೆದ ಕೇವಲ 5 ಗಂಟೆ ಗಳ ಒಳಗೆ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದು ಈ ಕಾರ್ಯಾಚರಣೆಯನ್ನು ಮಂಗಳೂರು ನಗರದ ಮಾನ್ಯ ಪೊಲೀಸ್ ಆಯುಕ್ತರಾದ ಶ್ರೀ ಅನುಪಮ್ ಅಗ್ರವಾಲ್ ಐಪಿಎಸ್ ರವರ ಮಾರ್ಗದರ್ಶನದಂತೆ, ಕಾನೂನು ಸುವ್ಯವಸ್ಥೆ ವಿಭಾಗದ ಡಿಸಿಪಿ ಶ್ರೀ ಸಿದ್ದಾರ್ಥ್ ಗೋಯಲ್ ಐಪಿಎಸ್ ಹಾಗೂ ಅಪರಾಧ ವಿಭಾಗದ ಡಿಸಿಪಿ ಶ್ರೀ.ಬಿ.ಪಿ ದಿನೇಶ್ ಕುಮಾರ್ ರವರ ನಿರ್ದೇಶನದಂತೆ, ಮಂಗಳೂರು ಕೇಂದ್ರ ವಿಭಾಗದ ಎಸಿಪಿ ಶ್ರೀ ಪ್ರತಾಪ್ ಸಿಂಗ್ ತೋರಟ್, ಉರ್ವಾ ಠಾಣೆಯ ನಿರೀಕ್ಷಕರಾದ ಶ್ರೀಮತಿ ಭಾರತೀ ಜಿ. ರವರ ನೇತೃತ್ವದಲ್ಲಿ ಉರ್ವಾ ಪೊಲೀಸ್ ಠಾಣೆಯ ಎಸ್.ಐ ಹರೀಶ ಹೆಚ್.ವಿ , ಅನಿತಾ ಹೆಚ್.ಬಿ, ಎ.ಎಸ್.ಐ ವಿನಯ್ ಕುಮಾರ್, ವೇಣುಗೋಪಾಲ್ ಸಿಬ್ಬಂದಿಗಳಾದ ಪುಷ್ಪರಾಜ್, ಪ್ರಮೋದ್, ನಾರಾಯಣ, ಸತೀಶ್, ಪೀಟರ್, ರಾಮಚಂದ್ರ ವೆಂಕಟೇಶ್, ಅಭಿಷೇಕ್, ಪ್ರಜ್ವಲ್ ರವರು ನಡೆಸಿರುತ್ತಾರೆ. ಈ ಶೀಘ್ರ ಪತ್ತೆ ಕಾರ್ಯಕ್ಕೆ ಹಾಸನ ಜಿಲ್ಲೆಯ ಪೊಲೀಸ್ ಅಧೀಕ್ಷಕರು ಶ್ರೀಮತಿ ಮಹಮ್ಮದ್ ಸುಜೀತಾ ಐ.ಪಿ.ಎಸ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಶ್ರೀ ತಮ್ಮಯ್ಯ ಎಮ್ .ಕೆ , ಸಕಲೇಶಪುರ ಉಪ ವಿಭಾಗದ ಡಿವೈಎಸ್ಪಿ ಶ್ರೀ ಪ್ರಮೋದ್ ಬಿ., ಸಕಲೇಶಪುರ ನಗರ ಪಿ.ಎಸ್.ಐ ಶ್ರೀ ಪ್ರಮೋದ್ ಕೆ.ಎಸ್ ಮತ್ತು ಗ್ರಾಮಾಂತರ ಠಾಣೆಯ ಪಿ.ಎಸ್.ಐ ಸದಾಶಿವ ತಿಪ್ಪರೆಡ್ಡಿ, ಸಿಬ್ಬಂದಿಗಳಾದ ಖಾದರ್ ಆಲಿ, ಸುನಿಲ್, ಜಗದೀಶ್, ಯೋಗಿಶ್, ಮೂಲ್ಕಿ ಪೊಲೀಸ್ ಠಾಣೆಯ ಪಿ.ಎಸ್.ಐ ಶ್ರೀ ವಿನಾಯಕ್ ಬಾವಿಕಟ್ಟೆ, ಸಿಬ್ಬಂದಿಗಳಾದ ಹರೀಶೇಖರ್ ಎ.ಎಸ್.ಐ ಕಿಶೋರ್ ಕೋಟ್ಯಾನ್ , ಚಂದ್ರಶೇಖರ್ ಹಾಗೂ ಶಶಿಧರ್ ಸಹಕರಿಸಿರುತ್ತಾರೆ.
ಮಂಗಳೂರು
Soujanya case: Big Breaking: ಸೌಜನ್ಯ ಪ್ರಕರಣದಲ್ಲಿ ಯೂಟ್ಯೂಬ್ ಚಾನೆಲ್‌ಗಳ ಮಸಾಲಾ ಸುದ್ದಿಗೆ ಖರ್ಗೆ ಗರಂ! ವೈಜ್ಞಾನಿಕ ದಾಖಲೆಗಳ ಆಧಾರದಲ್ಲೆ ತನಿಖೆ
ಸೌಜನ್ಯ ಪ್ರಕರಣ ಅತ್ಯಂತ ಸೂಕ್ಷ್ಮ ವಿಚಾರವಾಗಿದ್ದು, ಪ್ರಕರಣದ ಮರುತನಿಖೆ ಸೇರಿದಂತೆ ಯಾವುದೇ ಕ್ರಮ ಕೈಗೊಳ್ಳುವಾಗ ವೈಜ್ಞಾನಿಕ ದಾಖಲೆಗಳು ಹಾಗೂ ಸಾಕ್ಷ್ಯಗಳ ಆಧಾರದಲ್ಲೇ ಮುಂದುವರಿಯಬೇಕು. ಯಾರಿಗೂ ಅನ್ಯಾಯವಾಗಬಾರದು ಎಂಬುದು ಸರ್ಕಾರದ ಉದ್ದೇಶ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಮಂಗಳೂರು: ಸೌಜನ್ಯ ಪ್ರಕರಣ ಅತ್ಯಂತ ಸೂಕ್ಷ್ಮ ವಿಚಾರವಾಗಿದ್ದು, ಪ್ರಕರಣದ ಮರುತನಿಖೆ ಸೇರಿದಂತೆ ಯಾವುದೇ ಕ್ರಮ ಕೈಗೊಳ್ಳುವಾಗ ವೈಜ್ಞಾನಿಕ ದಾಖಲೆಗಳು ಹಾಗೂ ಸಾಕ್ಷ್ಯಗಳ ಆಧಾರದಲ್ಲೇ ಮುಂದುವರಿಯಬೇಕು. ಯಾರಿಗೂ ಅನ್ಯಾಯವಾಗಬಾರದು ಎಂಬುದು ಸರ್ಕಾರದ ಉದ್ದೇಶ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಸೌಜನ್ಯ ಪ್ರಕರಣದ ಮರುತನಿಖೆಗೆ ಸಂಬಂಧಿಸಿದಂತೆ ಮಾತನಾಡಿದ ಅವರು, ಪ್ರಕರಣದ ಸೂಕ್ಷ್ಮತೆ ಹಾಗೂ ಸಾರ್ವಜನಿಕರ ಭಾವನೆಗಳನ್ನು ಗಮನದಲ್ಲಿಟ್ಟುಕೊಂಡು ತನಿಖಾಧಿಕಾರಿಗಳ ಬದಲಾವಣೆ ಮಾಡಲಾಗಿದೆ ಎಂದು ತಿಳಿಸಿದರು.
ಪ್ರಕರಣ ನಡೆದು ಸುಮಾರು 14 ವರ್ಷಗಳಾಗಿವೆ. ಇಂತಹ ಸಂದರ್ಭದಲ್ಲಿ ಸತ್ಯವನ್ನು ಹೊರತರುವುದಕ್ಕೆ ವೈಜ್ಞಾನಿಕ ದಾಖಲೆಗಳು ಹಾಗೂ ಸಾಕ್ಷ್ಯಗಳ ಆಧಾರ ಅಗತ್ಯವಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಮಂದಿ ಪತ್ರ ಬರೆದು ಕೆಲವು ವಿಚಾರಗಳನ್ನು ನನ್ನ ಗಮನಕ್ಕೆ ತಂದಿದ್ದಾರೆ. ಆ ಮಾಹಿತಿಗಳನ್ನು ತನಿಖೆಗೆ ನೀಡಲಾಗಿದೆ ಎಂದು ಹೇಳಿದರು.
ಇದೇ ವೇಳೆ, ಕೆಲವು ಯೂಟ್ಯೂಬ್ ಚಾನೆಲ್‌ಗಳು ಪ್ರಕರಣದ ಕುರಿತು ತಾವೇ ತೀರ್ಮಾನಗಳನ್ನು ಪ್ರಕಟಿಸುತ್ತಿರುವಂತೆ ಕಾಣುತ್ತಿದೆ. ಅವರಿಗೆ ಮಾಹಿತಿ ಎಲ್ಲಿಂದ ಬರುತ್ತಿದೆ ಎಂಬುದು ತಿಳಿದಿಲ್ಲ. ಕೆಲವು ಚಾನೆಲ್‌ಗಳು ಸುದ್ದಿಗಳಿಗೆ ಮಿರ್ಚಿ ಮಸಾಲೆ ಸೇರಿಸಿ ಪ್ರಸಾರ ಮಾಡುತ್ತಿವೆ ಎಂದು ಅವರು ಟೀಕಿಸಿದರು.
ಸ್ಥಳೀಯ
Valaalu toll plaza-ವಳಾಲು ಟೋಲ್ ಪ್ಲಾಜಾ ಕಾಮಗಾರಿ ಪೂರ್ಣ; ವಾರದೊಳಗೆ ಅಧಿಕೃತ ಘೋಷಣೆ ಸಾಧ್ಯ; ಬ್ರಹ್ಮರಕೂಟ್ಲು ಟೋಲ್‌ನಿಂದ ‘ಡಬಲ್ ಟೋಲ್’ ಆತಂಕ..!
ರಾಷ್ಟ್ರೀಯ ಹೆದ್ದಾರಿ 75ರ ಬಿ.ಸಿ.ರೋಡ್‌ನಿಂದ ಅಡ್ಡಹೊಳೆವರೆಗಿನ ಚತುಷ್ಪಥ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಸಂಬಂಧಿಸಿದಂತೆ ಉಪ್ಪಿನಂಗಡಿ ಸಮೀಪದ ಬಜತ್ತೂರು ಗ್ರಾಮದ ವಳಾಲು-ನೀರಕಟ್ಟೆ ಬಳಿ ನಿರ್ಮಿಸಿರುವ ಟೋಲ್ ಪ್ಲಾಜಾ ಕಾಮಗಾರಿ ಪೂರ್ಣಗೊಂಡಿದೆ. ಇದೀಗ ಪ್ರಾಯೋಗಿಕವಾಗಿ ಸೇವೆ ಆರಂಭಗೊಂಡಿದ್ದು, ಮುಂದಿನ ಒಂದು ವಾರದೊಳಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಅಧಿಕೃತ ಪ್ರಕಟಣೆ ಹೊರಬೀಳುವ ಸಾಧ್ಯತೆ ಇದೆ. ಬಳಿಕ ಟೋಲ್ ಶುಲ್ಕ ಸಂಗ್ರಹ ಅಧಿಕೃತವಾಗಿ ಆರಂಭವಾಗುವ ನಿರೀಕ್ಷೆಯಿದೆ.
ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿ 75ರ ಬಿ.ಸಿ.ರೋಡ್‌ನಿಂದ ಅಡ್ಡಹೊಳೆವರೆಗಿನ ಚತುಷ್ಪಥ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಸಂಬಂಧಿಸಿದಂತೆ ಉಪ್ಪಿನಂಗಡಿ ಸಮೀಪದ ಬಜತ್ತೂರು ಗ್ರಾಮದ ವಳಾಲು-ನೀರಕಟ್ಟೆ ಬಳಿ ನಿರ್ಮಿಸಿರುವ ಟೋಲ್ ಪ್ಲಾಜಾ ಕಾಮಗಾರಿ ಪೂರ್ಣಗೊಂಡಿದೆ. ಇದೀಗ ಪ್ರಾಯೋಗಿಕವಾಗಿ ಸೇವೆ ಆರಂಭಗೊಂಡಿದ್ದು, ಮುಂದಿನ ಒಂದು ವಾರದೊಳಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಅಧಿಕೃತ ಪ್ರಕಟಣೆ ಹೊರಬೀಳುವ ಸಾಧ್ಯತೆ ಇದೆ. ಬಳಿಕ ಟೋಲ್ ಶುಲ್ಕ ಸಂಗ್ರಹ ಅಧಿಕೃತವಾಗಿ ಆರಂಭವಾಗುವ ನಿರೀಕ್ಷೆಯಿದೆ.
ಬಿ.ಸಿ.ರೋಡ್‌ನಿಂದ ಪೆರಿಯಶಾಂತಿವರೆಗಿನ ಸುಮಾರು 46 ಕಿ.ಮೀ. ಹೆದ್ದಾರಿ ಕಾಮಗಾರಿಯಲ್ಲಿ ಈಗಾಗಲೇ ಶೇ.95ರಷ್ಟು ಕಾಮಗಾರಿ ಪೂರ್ಣಗೊಂಡಿದೆ. ಉಪ್ಪಿನಂಗಡಿಯಿಂದ ಸುಮಾರು 8 ಕಿ.ಮೀ. ದೂರದಲ್ಲಿರುವ ಬಜತ್ತೂರು ಗ್ರಾಮದ ವಳಾಲು-ನೀರಕಟ್ಟೆ ನಡುವೆ ಇದೀಗ ಟೋಲ್ ಪ್ಲಾಜಾ ನಿರ್ಮಾಣಗೊಂಡಿದೆ.
ಟೋಲ್ ಪ್ಲಾಜಾ ನಿರ್ಮಾಣದ ಗುತ್ತಿಗೆ ಪಡೆದಿದ್ದ ಕೆಎನ್‌ಆರ್ ಕನ್ಸ್ಟ್ರಕ್ಷನ್ ಸಂಸ್ಥೆಯು ಕಾಮಗಾರಿ ಪೂರ್ಣಗೊಳಿಸಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಹಸ್ತಾಂತರಿಸಿದೆ. ಇತ್ತ ಶುಲ್ಕ ಸಂಗ್ರಹ ನಿರ್ವಹಣೆಗೆ ಸಂಬಂಧಿಸಿದ ಟೆಂಡರ್ ಪ್ರಕ್ರಿಯೆಯೂ ಮುಗಿದಿದ್ದು, ಮಂಗಳೂರಿನ ‘ಕೋರಲ್’ ಸಂಸ್ಥೆಯು ಗುತ್ತಿಗೆಯನ್ನು ಪಡೆದುಕೊಂಡಿದೆ.
8 ಲೇನ್‌ಗಳಲ್ಲಿ ಸಂಚಾರ ವ್ಯವಸ್ಥೆ
ಚತುಷ್ಪಥ ಹೆದ್ದಾರಿಯಲ್ಲಿ ಒಟ್ಟು 8 ಲೇನ್‌ಗಳಲ್ಲಿ ವಾಹನ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ. ಎರಡೂ ಬದಿಗಳಲ್ಲಿ ತಲಾ ನಾಲ್ಕು ಲೇನ್‌ಗಳಿದ್ದು, ಅವುಗಳಲ್ಲಿ 6 ಲೇನ್‌ಗಳು ಡೆಡಿಕೇಟೆಡ್ ಲೇನ್‌ಗಳಾಗಿರಲಿವೆ. ಈ ಲೇನ್‌ಗಳಲ್ಲಿ ಫಾಸ್ಟ್‌ಟ್ಯಾಗ್ ಹೊಂದಿರುವ ವಾಹನಗಳಿಗೆ ಮಾತ್ರ ಸಂಚಾರಕ್ಕೆ ಅವಕಾಶವಿರಲಿದೆ.
ಉಳಿದ ಎರಡು ಲೇನ್‌ಗಳಲ್ಲಿ ಫಾಸ್ಟ್‌ಟ್ಯಾಗ್ ಮೂಲಕ ಪಾವತಿಗೆ ಅವಕಾಶವಿದ್ದರೂ, ನಗದು ಪಾವತಿಗೆ ಅವಕಾಶ ಇರುವುದಿಲ್ಲ. ಬದಲಾಗಿ ಯುಪಿಐ ಅಥವಾ ಸ್ಕ್ಯಾನ್ ಮೂಲಕ ಡಿಜಿಟಲ್ ಪಾವತಿ ಮಾಡಬೇಕಾಗುತ್ತದೆ. ದ್ವಿಚಕ್ರ ವಾಹನಗಳು ಹಾಗೂ ರಿಕ್ಷಾಗಳ ಸುಗಮ ಸಂಚಾರಕ್ಕಾಗಿ ಎರಡೂ ಬದಿಗಳಲ್ಲಿ ಪ್ರತ್ಯೇಕ ಲೇನ್‌ಗಳನ್ನು ವ್ಯವಸ್ಥೆ ಮಾಡಲಾಗಿದೆ.
ಟೋಲ್ ಶುಲ್ಕ ವಸೂಲಾತಿ ಕೇಂದ್ರದಿಂದ 20 ಕಿ.ಮೀ. ವ್ಯಾಪ್ತಿಯಲ್ಲಿ ವಾಸಿಸುವ ಸ್ಥಳೀಯ ನಿವಾಸಿಗಳಿಗೆ 360 ರೂ. ಮಾಸಿಕ ಪಾಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಅಲ್ಲದೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೋಂದಣಿಯಾಗಿರುವ ವಾಹನಗಳಿಗೆ ಶೇ.50ರಷ್ಟು ಶುಲ್ಕ ವಿನಾಯಿತಿ ನಿಗದಿಪಡಿಸಲಾಗಿದೆ ಎಂದು ಮಂಗಳೂರಿನ ಕೋರಲ್ ಸಂಸ್ಥೆಯ ಆಡಳಿತ ಪಾಲುದಾರ ಯಜೇಶ್ ತಿಳಿಸಿದ್ದಾರೆ.
ಬ್ರಹ್ಮರಕೂಟ್ಲು ಟೋಲ್‌ನಿಂದ 38 ಕಿ.ಮೀ. ಅಂತರ..!
ರಾಷ್ಟ್ರೀಯ ಹೆದ್ದಾರಿ 75ರ ಬೆಂಗಳೂರು-ಮಂಗಳೂರು ಮಾರ್ಗದಲ್ಲಿ ಒಟ್ಟು 7 ಟೋಲ್ ಪ್ಲಾಜಾಗಳಲ್ಲಿ ವಾಹನ ಸವಾರರು ಶುಲ್ಕ ಪಾವತಿಸಬೇಕಾಗುತ್ತದೆ. ಬೆಂಗಳೂರಿನ ನೆಲಮಂಗಲದಿಂದ ಸಕಲೇಶಪುರದವರೆಗೆ 5 ಟೋಲ್ ಪ್ಲಾಜಾಗಳಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಗುಂಡ್ಯದಿಂದ ಮಂಗಳೂರಿನ ಪಂಪ್‌ವೆಲ್ ನಡುವಿನ ಮಾರ್ಗದಲ್ಲಿ ಬಿ.ಸಿ.ರೋಡ್ ಸಮೀಪದ ಬ್ರಹ್ಮರಕೂಟ್ಲು ಟೋಲ್ ಈಗಾಗಲೇ ಕಾರ್ಯನಿರ್ವಹಿಸುತ್ತಿದೆ. ಇದೀಗ ವಳಾಲು ಟೋಲ್ ಸೇರ್ಪಡೆಯಾದರೆ ಈ ಭಾಗದಲ್ಲಿ ಶುಲ್ಕ ಸಂಗ್ರಹಿಸುವ ಟೋಲ್ ಪ್ಲಾಜಾಗಳ ಸಂಖ್ಯೆ ಎರಡಕ್ಕೇರಲಿದೆ.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ನಿಯಮಾವಳಿಗಳ ಪ್ರಕಾರ ಒಂದು ಟೋಲ್ ಪ್ಲಾಜಾದಿಂದ ಮತ್ತೊಂದು ಟೋಲ್ ಪ್ಲಾಜಾಕ್ಕೆ ಕನಿಷ್ಠ 60 ಕಿ.ಮೀ. ಅಂತರ ಇರಬೇಕಿದೆ. ಆದರೆ, ಬ್ರಹ್ಮರಕೂಟ್ಲು ಟೋಲ್ ಪ್ಲಾಜಾದಿಂದ ಬಜತ್ತೂರು ವಳಾಲು ಟೋಲ್ ಪ್ಲಾಜಾಕ್ಕೆ ಇರುವ ಅಂತರ ಕೇವಲ 38 ಕಿ.ಮೀ. ಮಾತ್ರ. ಹೀಗಾಗಿ, ವಳಾಲು ಟೋಲ್‌ನಲ್ಲಿ ಶುಲ್ಕ ಸಂಗ್ರಹ ಆರಂಭವಾದರೆ ಸ್ಥಳೀಯರು ಹಾಗೂ ಸಾರ್ವಜನಿಕರಿಗೆ ಹೆಚ್ಚಿನ ಆರ್ಥಿಕ ಹೊರೆ ಬೀಳಲಿದೆ ಎಂದು ಮಾಹಿತಿ ಹಕ್ಕು ಕಾರ್ಯಕರ್ತ ಶಬೀರ್ ಅಹ್ಮದ್ ನೆಕ್ಕಿಲಾಡಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಬ್ರಹ್ಮರಕೂಟ್ಲು ಟೋಲ್ ತೆರವಿಗೆ ಹೋರಾಟ ತೀವ್ರಗೊಳ್ಳುವ ಸಾಧ್ಯತೆ
ಬಿ.ಸಿ.ರೋಡ್ ಸಮೀಪದ ಬ್ರಹ್ಮರಕೂಟ್ಲು ಟೋಲ್ ಪ್ಲಾಜಾ ಅನಧಿಕೃತವಾಗಿದ್ದು, ನಿಗದಿತ ಅವಧಿ ಮುಗಿದಿದ್ದರೂ ಶುಲ್ಕ ಸಂಗ್ರಹ ಮುಂದುವರಿಸಲಾಗುತ್ತಿದೆ ಎಂಬ ಆರೋಪ ಕೇಳಿಬರುತ್ತಿದೆ. ಈ ಟೋಲ್ ಪ್ಲಾಜಾವನ್ನು ತೆರವುಗೊಳಿಸಬೇಕೆಂದು ಆಗ್ರಹಿಸಿ ವಿವಿಧ ಸಂಘಟನೆಗಳು ಹಾಗೂ ಸಾರ್ವಜನಿಕರು ಈಗಾಗಲೇ ನಿರಂತರ ಹೋರಾಟ ನಡೆಸುತ್ತಿದ್ದಾರೆ.
ಬ್ರಹ್ಮರಕೂಟ್ಲು ಟೋಲ್ ಪ್ಲಾಜಾವನ್ನು ತೆರವುಗೊಳಿಸದೆ ವಳಾಲು ಟೋಲ್ ಪ್ಲಾಜಾದಲ್ಲಿ ಶುಲ್ಕ ಸಂಗ್ರಹ ಆರಂಭಿಸಿದರೆ ವಾಹನ ಸವಾರರಿಗೆ ಒಂದೇ ಮಾರ್ಗದಲ್ಲಿ ಎರಡು ಬಾರಿ ಟೋಲ್ ಪಾವತಿಸುವ ಪರಿಸ್ಥಿತಿ ಎದುರಾಗುವ ಆತಂಕ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಬ್ರಹ್ಮರಕೂಟ್ಲು ಟೋಲ್ ವಿರುದ್ಧ ನಡೆಯುತ್ತಿರುವ ಪ್ರತಿಭಟನೆ ಹಾಗೂ ಹೋರಾಟಗಳು ಮುಂದಿನ ದಿನಗಳಲ್ಲಿ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ.
ಬಿಗ್ ನ್ಯೂಸ್
Heavy rain-ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಅಬ್ಬರ: ಚಿಂತಾಮಣಿಯಲ್ಲಿ 54 ಮಿ.ಮೀ. ಮಳೆ ದಾಖಲು; ಕೋಲಾರ, ಬೆಂಗಳೂರು ಭಾಗದಲ್ಲೂ ವರ್ಷಧಾರೆ..!
ರಾಜ್ಯದ ರಾಜಧಾನಿ ಬೆಂಗಳೂರು ಸೇರಿದಂತೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳ ವಿವಿಧ ಭಾಗಗಳಲ್ಲಿ ಕಳೆದ 24 ಗಂಟೆಗಳಲ್ಲಿ ಉತ್ತಮ ಮಳೆಯಾಗಿದೆ. ಹಲವು ಕಡೆ 20ರಿಂದ 50 ಮಿ.ಮೀ.ಗೂ ಅಧಿಕ ಮಳೆ ದಾಖಲಾಗಿದ್ದು, ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನಲ್ಲಿ ಅತಿ ಹೆಚ್ಚು ಮಳೆಯಾಗಿದೆ.
ಬೆಂಗಳೂರು: ರಾಜ್ಯದ ರಾಜಧಾನಿ ಬೆಂಗಳೂರು ಸೇರಿದಂತೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳ ವಿವಿಧ ಭಾಗಗಳಲ್ಲಿ ಕಳೆದ 24 ಗಂಟೆಗಳಲ್ಲಿ ಉತ್ತಮ ಮಳೆಯಾಗಿದೆ. ಹಲವು ಕಡೆ 20ರಿಂದ 50 ಮಿ.ಮೀ.ಗೂ ಅಧಿಕ ಮಳೆ ದಾಖಲಾಗಿದ್ದು, ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನಲ್ಲಿ ಅತಿ ಹೆಚ್ಚು ಮಳೆಯಾಗಿದೆ.
ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರ ಬಿಡುಗಡೆ ಮಾಡಿರುವ ಅಂಕಿಅಂಶಗಳ ಪ್ರಕಾರ, ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನ ದೊಡ್ಡ ಗಂಜೂರಿನಲ್ಲಿ ಗರಿಷ್ಠ 54 ಮಿ.ಮೀ. ಮಳೆಯಾಗಿದೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರದಲ್ಲಿ 51 ಮಿ.ಮೀ. ಹಾಗೂ ಚಿಂತಾಮಣಿ ತಾಲ್ಲೂಕಿನ ಮುಂಗನಹಳ್ಳಿಯಲ್ಲಿ 47.5 ಮಿ.ಮೀ. ಮಳೆ ದಾಖಲಾಗಿದೆ.
ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿ ತಾಲ್ಲೂಕಿನ ಬಿಸ್ಕೂರಿನಲ್ಲಿ 47 ಮಿ.ಮೀ., ಹುಲ್ಲೇನಹಳ್ಳಿಯಲ್ಲಿ 46 ಮಿ.ಮೀ. ಹಾಗೂ ಅದರಂಗಿಯಲ್ಲಿ 42.5 ಮಿ.ಮೀ. ಮಳೆಯಾಗಿದೆ. ಬೆಂಗಳೂರು ಪಶ್ಚಿಮ ಭಾಗದ ಕೋನೇನ ಅಗ್ರಹಾರ ಮತ್ತು ಚಿಂತಾಮಣಿ ತಾಲ್ಲೂಕಿನ ಚಿನ್ನಸಂದ್ರದಲ್ಲಿ ತಲಾ 40 ಮಿ.ಮೀ. ಮಳೆ ಸುರಿದಿದೆ.
ಮಾಗಡಿ ತಾಲ್ಲೂಕಿನ ತಿಪ್ಪಸಂದ್ರ ಹಾಗೂ ಚಿಂತಾಮಣಿ ತಾಲ್ಲೂಕಿನ ಪೆರಮಂಚನಹಳ್ಳಿಯಲ್ಲಿ ತಲಾ 35.5 ಮಿ.ಮೀ., ಸಂಕಿಘಟ್ಟದಲ್ಲಿ 35 ಮಿ.ಮೀ. ಮಳೆಯಾಗಿದೆ. ಆನೇಕಲ್ ತಾಲ್ಲೂಕಿನ ನೇರಿಗದಲ್ಲಿ 33.5 ಮಿ.ಮೀ., ಚಿಂತಾಮಣಿ ತಾಲ್ಲೂಕಿನ ಕೈವಾರದಲ್ಲಿ 33 ಮಿ.ಮೀ. ಹಾಗೂ ಚಿಂತಾಮಣಿಯಲ್ಲಿ 32.8 ಮಿ.ಮೀ. ಮಳೆ ದಾಖಲಾಗಿದೆ.
ಬೆಂಗಳೂರು ನಗರದ ದಾಸನಪುರದಲ್ಲಿ 29 ಮಿ.ಮೀ., ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಜೆ.ತಿಮ್ಮಸಂದ್ರದಲ್ಲಿ 28.5 ಮಿ.ಮೀ., ಅರಿಕುಂಟೆಯಲ್ಲಿ 27.5 ಮಿ.ಮೀ. ಹಾಗೂ ಮಾಗಡಿ ತಾಲ್ಲೂಕಿನ ಕುದೂರಿನಲ್ಲಿ 27.25 ಮಿ.ಮೀ. ಮಳೆಯಾಗಿದೆ.
ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ವಿರುಪಸಮುದ್ರದಲ್ಲಿ 26 ಮಿ.ಮೀ. ಹಾಗೂ ಮಧುಗಿರಿ ತಾಲ್ಲೂಕಿನ ಬೇಡತೂರಿನಲ್ಲಿ 25.5 ಮಿ.ಮೀ. ಮಳೆ ದಾಖಲಾಗಿದೆ. ಬೆಂಗಳೂರಿನ ದೊಮ್ಮಲೂರು ಮತ್ತು ಚಿಂತಾಮಣಿ ತಾಲ್ಲೂಕಿನ ಮಾಸ್ತೇನಹಳ್ಳಿಯಲ್ಲಿ ತಲಾ 24.5 ಮಿ.ಮೀ. ಮಳೆಯಾಗಿದೆ.
ಇನ್ನು ಚಿಂತಾಮಣಿ ತಾಲ್ಲೂಕಿನ ತಳಗವಾರದಲ್ಲಿ 23.5 ಮಿ.ಮೀ., ಮುರುಗಮಲೆಯಲ್ಲಿ 23.25 ಮಿ.ಮೀ. ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ವೆಂಕಟಾಪುರದಲ್ಲಿ 23 ಮಿ.ಮೀ. ಮಳೆಯಾಗಿದೆ.
ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಪುಳಗುರುಕೋಟೆ ಹಾಗೂ ಗೌರಿಬಿದನೂರು ತಾಲ್ಲೂಕಿನ ಮೆಲ್ಯಾದಲ್ಲಿ ತಲಾ 22.75 ಮಿ.ಮೀ. ಮಳೆ ಸುರಿದಿದೆ. ಬೆಂಗಳೂರಿನ ಚಿಕ್ಕಬಾಣಾವರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ಅರಿಶಿನಕುಂಟೆಯಲ್ಲಿ ತಲಾ 22.5 ಮಿ.ಮೀ. ಮಳೆಯಾಗಿದೆ.
ಶ್ರೀನಿವಾಸಪುರ ತಾಲ್ಲೂಕಿನ ನಂಬಿಹಳ್ಳಿ ಮತ್ತು ಶಿಡ್ಲಘಟ್ಟದಲ್ಲಿ ತಲಾ 22 ಮಿ.ಮೀ., ಬೆಂಗಳೂರಿನ ಲಕ್ಕಸಂದ್ರ, ವನ್ನಾರಪೇಟೆ ಹಾಗೂ ನೆಲಮಂಗಲ ತಾಲ್ಲೂಕಿನ ಶ್ರೀನಿವಾಸಪುರದಲ್ಲಿ ತಲಾ 21.5 ಮಿ.ಮೀ. ಮಳೆಯಾಗಿದೆ.
ಆನೇಕಲ್ ತಾಲ್ಲೂಕಿನ ಮುಗಳೂರು ಮತ್ತು ನೆಲಮಂಗಲ ತಾಲ್ಲೂಕಿನ ವಿಶ್ವೇಶ್ವರಪುರದಲ್ಲಿ ತಲಾ 21 ಮಿ.ಮೀ. ಮಳೆಯಾಗಿದ್ದರೆ, ಮಾಗಡಿ ತಾಲ್ಲೂಕಿನ ಲಕ್ಕೇನಹಳ್ಳಿಯಲ್ಲಿ 20.75 ಮಿ.ಮೀ. ಮಳೆ ದಾಖಲಾಗಿದೆ.
ನೆಲಮಂಗಲ ತಾಲ್ಲೂಕಿನ ಅರೆಬೊಮ್ಮನಹಳ್ಳಿ ಹಾಗೂ ಚಿಂತಾಮಣಿ ತಾಲ್ಲೂಕಿನ ಬುರುದಗುಂಟೆಯಲ್ಲಿ ತಲಾ 20.5 ಮಿ.ಮೀ., ಚಿಕ್ಕಬಳ್ಳಾಪುರ ತಾಲ್ಲೂಕಿನ ದೊಡ್ಡಪೈಲಗುರ್ಕಿಯಲ್ಲಿ 20 ಮಿ.ಮೀ. ಹಾಗೂ ಮಾಗಡಿ ತಾಲ್ಲೂಕಿನ ಬಾಣವಾಡಿಯಲ್ಲಿ 19.5 ಮಿ.ಮೀ. ಮಳೆಯಾಗಿದೆ.
-
Uncategorized21 hours ago
ಫುತ್ತೂರು : ಗುತ್ತಿಗೆದಾರರ ಸಹಾಯಕಿಗೆ ಲೈಂಗಿಕ ದೌರ್ಜನ್ಯ, ವಿಡಿಯೋ ಚಿತ್ರೀಕರಣ , ಕಾರು ಹತ್ತಿಸಲು ಯತ್ನ ಆರೋಪ; ಮೆಸ್ಕಾಂ ಸಿಬ್ಬಂದಿ ವಿರುದ್ಧ ಕೇಸ್
-
ಕ್ರೈಂ8 hours agoMurder-ಕನ್ಯಾನ: ಚಿಕ್ಕಪ್ಪನ ಎದೆಗೆ ಕತ್ತಿಯಿಂದ ಇರಿದು ಹತ್ಯೆಗೈದ ಯುವತಿ ಅರೆಸ್ಟ್
-
ನಿಧನ ವಾರ್ತೆ8 hours agoAccident-ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇನಲ್ಲಿ ಭೀಕರ ಅಪಘಾತ: 8 ವರ್ಷದ ಬಾಲಕಿ ಸೇರಿ ಇಬ್ಬರು ಸ್ಥಳದಲ್ಲೇ ಸಾವು; ನಾಲ್ವರ ಸ್ಥಿತಿ ಗಂಭೀರ
-
ಕಾರ್ಯಕ್ರಮಗಳು7 hours agoPuttur-ಪುತ್ತೂರು: ನ.27ರಂದು ಅತ್ಯಾಧುನಿಕ ಬಹುಮಹಡಿ ವಾಣಿಜ್ಯ ಸೌಧ ‘ದ್ವಾರಕಾ ಕಮರ್ಶಿಯಲ್ಸ್’ ಲೋಕಾರ್ಪಣೆ; ಒಂದೇ ಸೂರಿನಡಿ ಹೈಪರ್ ಮಾರ್ಕೆಟ್ ಸಹಿತ ಹಲವು ಸೇವೆಗಳು
-
ಬಿಗ್ ನ್ಯೂಸ್8 hours agoRakesh Shetty-ಸ್ಟಿಂಗ್ ಆಪರೇಷನ್ ಪ್ರಕರಣ: ಜಾಮೀನು ಅರ್ಜಿ ವಾಪಸ್ ಪಡೆದ ರಾಕೇಶ್ ಶೆಟ್ಟಿ
-
ಅಪರಾಧ6 hours agoExcise raid-ಬಾಳ್ತಿಲ, ಮೆಲ್ಕಾರ್ನಲ್ಲಿ ಅಬಕಾರಿ ದಾಳಿ: ₹20.37 ಲಕ್ಷ ಮೌಲ್ಯದ ಗೋವಾ ಮದ್ಯ, 2 ಕಾರುಗಳು ವಶ
-
ಕ್ರೀಡೆ6 hours agoVaibhav Suryavamshi-52 ಎಸೆತಗಳಲ್ಲಿ ದ್ವಿಶತಕ, 28 ಸಿಕ್ಸರ್ಗಳ ಅಬ್ಬರ; ಒಂದೇ ಪಂದ್ಯದಲ್ಲಿ ಎರಡು ವಿಶ್ವದಾಖಲೆ ಬರೆದ ಭಾರತದ ಯುವ ಆಟಗಾರ ವೈಭವ್ ಸೂರ್ಯವಂಶಿ
-
ಸಿನೆಮಾ6 hours agoAakasham Lo Ok Tara-ಬಾಕ್ಸ್ ಆಫೀಸ್ನಲ್ಲಿ ದುಲ್ಕರ್ ಸಲ್ಮಾನ್ ಅಬ್ಬರ: 4 ದಿನಕ್ಕೆ 20 ಕೋಟಿ ರೂ. ಗಳಿಸಿದ ‘ಆಕಾಶಮ್ ಲೋ ಒಕ ತಾರ’















