ಮಂಗಳೂರು
LokaYukta Raid ಮಂಗಳೂರು : ಲೋಕಾಯುಕ್ತ ಬಲೆಗೆ ಬಿದ್ದ ಕೆ.ಎಸ್.ಆರ್.ಪಿ. ಇನ್ಸ್ ಪೆಕ್ಟರ್ ಮೊಹಮ್ಮದ್ ಆರೀಸ್
ಉಳ್ಳಾಲ: ಕಿರಿಯ ಪೊಲೀಸ್ ಅಧಿಕಾರಿಗಳಿಂದ ಲಂಚ ಸ್ವೀಕರಿಸುತ್ತಿದ್ದ ಕೆ.ಎಸ್.ಆರ್.ಪಿ. ಇನ್ಸ್ ಪೆಕ್ಟರ್ ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಕೊಣಾಜೆ ಠಾಣಾ ವ್ಯಾಪ್ತಿಯ ಅಸೈಗೋಳಿ ಎಂಬಲ್ಲಿ ನಡೆದಿದೆ. ಕೆ.ಎಸ್.ಆರ್.ಪಿ. ಇನ್ಸ್ ಪೆಕ್ಟರ್ ಮೊಹಮ್ಮದ್ ಆರೀಸ್ ಲೋಕಾಯುಕ್ತ ಬಲೆಗೆ ಬಿದ್ದವ.
ಗೆಸ್ಟ್ ಹೌಸ್ ಡ್ಯೂಟಿ ಹಾಕಲು ಲಂಚಕ್ಕೆ ಡಿಮಾಂಡ್ ಮಾಡಿದ್ದ ಆರೀಸ್ ರೂ ೧೮ ಸಾವಿರ ಲಂಚದ ರೂಪದಲ್ಲಿ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಪೊಲೀಸರು ಖೆಡ್ಡಾಕ್ಕೆ ಕೆಡವಿದ್ದಾರೆ. . ಗೆಸ್ಟ್ ಹೌಸ್ ಡ್ಯೂಟಿ ಹಾಕಬೇಕಿದ್ದರೇ ಪ್ರತಿ ತಿಂಗಳು 6 ಸಾವಿರ ರೂ. ಲಂಚ ನೀಡಲು ಆರೀಸ್ ಡಿಮ್ಯಾಂಡ್ ಮಾಡಿದ್ದರು.
ಅದರಂತೆ ಇಂದು ಆರೀಸ್ 18 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದಾರೆ. ಲೋಕಾಯುಕ್ತ ಎಸ್.ಪಿ. ನಟರಾಜ್ , ಡಿವೈಎಸ್ಪಿ ಚೆಲುವರಾಜ್ ನೇತೃತ್ವದಲ್ಲಿ ದಾಳಿ ನಡೆದಿತ್ತು
ಮಂಗಳೂರು
D.K. Shivakumar-ಅ.15ರಂದು ಮಂಗಳೂರು, ಉಡುಪಿ ಜಿಲ್ಲೆಗೆ ಡಿ.ಕೆ. ಶಿವಕುಮಾರ್ ಭೇಟಿ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಕ್ಟೋಬರ್ 15ರ ಗುರುವಾರ ಮಂಗಳೂರು ಹಾಗೂ ಉಡುಪಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಗುರುವಾರ ಮಧ್ಯಾಹ್ನ 4.10ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಅವರು, ಸಂಜೆ 4.40ಕ್ಕೆ ಕಾಪು ಉಚ್ಚಿಲದಲ್ಲಿ ನಡೆಯುವ ದಸರಾ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ, ಮಹಿಳಾ ದಸರಾವನ್ನು ಉದ್ಘಾಟಿಸಲಿದ್ದಾರೆ.
ಮಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಕ್ಟೋಬರ್ 15ರ ಗುರುವಾರ ಮಂಗಳೂರು ಹಾಗೂ ಉಡುಪಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಗುರುವಾರ ಮಧ್ಯಾಹ್ನ 4.10ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಅವರು, ಸಂಜೆ 4.40ಕ್ಕೆ ಕಾಪು ಉಚ್ಚಿಲದಲ್ಲಿ ನಡೆಯುವ ದಸರಾ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ, ಮಹಿಳಾ ದಸರಾವನ್ನು ಉದ್ಘಾಟಿಸಲಿದ್ದಾರೆ.
ಬಳಿಕ ಸಂಜೆ 6.30ಕ್ಕೆ ಮಂಗಳೂರಿನಲ್ಲಿ ನಡೆಯುವ ಮಂಗಳೂರು ದಸರಾ ನವರಾತ್ರಿ ಮಹೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ. ರಾತ್ರಿ 8 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ತೆರಳಲಿರುವ ಅವರು, ಅಲ್ಲಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ತಿಳಿದುಬಂದಿದೆ.
ಮಂಗಳೂರು
Dakshina Kannada-ದಕ್ಷಿಣ ಕನ್ನಡ ಜಿಲ್ಲೆಗೆ ‘ಮಂಗಳೂರು ಜಿಲ್ಲೆ’ ಎಂದು ಮರುನಾಮಕರಣ ಪ್ರಸ್ತಾವ: ಸಾರ್ವಜನಿಕ ಅಭಿಪ್ರಾಯ ಆಹ್ವಾನಿಸಿದ ಸರ್ಕಾರ
ದಕ್ಷಿಣ ಕನ್ನಡ ಜಿಲ್ಲೆಯನ್ನು ‘ಮಂಗಳೂರು ಜಿಲ್ಲೆ’ ಎಂದು ಮರುನಾಮಕರಣ ಮಾಡಲು ರಾಜ್ಯ ಸರ್ಕಾರ ಉದ್ದೇಶಿಸಿದ್ದು, ಈ ಕುರಿತು ಸಾರ್ವಜನಿಕರಿಂದ ಸಲಹೆ ಹಾಗೂ ಅಭಿಪ್ರಾಯಗಳನ್ನು ಆಹ್ವಾನಿಸಿದೆ. ಅಧಿಸೂಚನೆ ರಾಜ್ಯ ಪತ್ರದಲ್ಲಿ ಪ್ರಕಟಗೊಂಡ ದಿನಾಂಕದಿಂದ 30 ದಿನಗಳೊಳಗೆ ಸಾರ್ವಜನಿಕರು ತಮ್ಮ ಅಭಿಪ್ರಾಯಗಳನ್ನು ಸಲ್ಲಿಸಬಹುದಾಗಿದೆ.
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯನ್ನು ‘ಮಂಗಳೂರು ಜಿಲ್ಲೆ’ ಎಂದು ಮರುನಾಮಕರಣ ಮಾಡಲು ರಾಜ್ಯ ಸರ್ಕಾರ ಉದ್ದೇಶಿಸಿದ್ದು, ಈ ಕುರಿತು ಸಾರ್ವಜನಿಕರಿಂದ ಸಲಹೆ ಹಾಗೂ ಅಭಿಪ್ರಾಯಗಳನ್ನು ಆಹ್ವಾನಿಸಿದೆ. ಅಧಿಸೂಚನೆ ರಾಜ್ಯ ಪತ್ರದಲ್ಲಿ ಪ್ರಕಟಗೊಂಡ ದಿನಾಂಕದಿಂದ 30 ದಿನಗಳೊಳಗೆ ಸಾರ್ವಜನಿಕರು ತಮ್ಮ ಅಭಿಪ್ರಾಯಗಳನ್ನು ಸಲ್ಲಿಸಬಹುದಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಗೆ ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವಂತೆ ರಾಜಕಾರಣಿಗಳು, ಸಾಮಾಜಿಕ ಚಿಂತಕರು, ಸರ್ವಧರ್ಮಗಳ ಹಿರಿಯರು ಹಾಗೂ ಜಿಲ್ಲೆಯ ವಿವಿಧ ಸಂಘಟನೆಗಳಿಂದ ಸರ್ಕಾರಕ್ಕೆ ಹಲವು ಮನವಿಗಳು ಸಲ್ಲಿಕೆಯಾಗಿವೆ. ಸಾರ್ವಜನಿಕರ ಬೇಡಿಕೆ ಹಾಗೂ ಆಡಳಿತಾತ್ಮಕ ಅನುಕೂಲತೆಗಳನ್ನು ಪರಿಗಣಿಸಿ ಈ ಪ್ರಸ್ತಾವವನ್ನು ಸರ್ಕಾರ ಮುಂದಿಟ್ಟಿದೆ.
ಭಾರತ ಸರ್ಕಾರದ ಗೃಹ ಸಚಿವಾಲಯದ 1953ರ ಸೆಪ್ಟೆಂಬರ್ 11ರ ಮಾರ್ಗಸೂಚಿಗಳು ಹಾಗೂ ಕರ್ನಾಟಕ ಭೂ ಕಂದಾಯ ಅಧಿನಿಯಮ, 1964ರ ಸೆಕ್ಷನ್ 4(4A) ಅಡಿಯಲ್ಲಿ ಲಭ್ಯವಿರುವ ಅಧಿಕಾರಗಳನ್ವಯ ಮರುನಾಮಕರಣ ಪ್ರಕ್ರಿಯೆ ಕೈಗೊಳ್ಳಲು ಉದ್ದೇಶಿಸಲಾಗಿದೆ.
ಈ ಸಂಬಂಧ ಸಾರ್ವಜನಿಕರು ತಮ್ಮ ಸಲಹೆ ಮತ್ತು ಆಕ್ಷೇಪಣೆಗಳನ್ನು ಲಿಖಿತ ರೂಪದಲ್ಲಿ ಅಥವಾ ಇ-ಮೇಲ್ ಮೂಲಕ ಸರ್ಕಾರಕ್ಕೆ ಸಲ್ಲಿಸಬಹುದು. ಸ್ವೀಕೃತವಾಗುವ ಅಭಿಪ್ರಾಯಗಳನ್ನು ಪರಿಶೀಲಿಸಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಅಭಿಪ್ರಾಯ ಸಲ್ಲಿಸಬೇಕಾದ ವಿಳಾಸಗಳು
- ಮುಖ್ಯಮಂತ್ರಿಯವರ ಸಚಿವಾಲಯ, ಕೊಠಡಿ ಸಂಖ್ಯೆ: 235, 2ನೇ ಮಹಡಿ, ವಿಧಾನಸೌಧ, ಬೆಂಗಳೂರು – 560001; ಇ-ಮೇಲ್: cm.kar@nic.in
- ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ, ಕಂದಾಯ ಇಲಾಖೆ, ಕೊಠಡಿ ಸಂಖ್ಯೆ: 711, 7ನೇ ಮಹಡಿ, ಬಹುಮಹಡಿಗಳ ಕಟ್ಟಡ, ಡಾ. ಬಿ.ಆರ್. ಅಂಬೇಡ್ಕರ್ ವೀದಿ, ಬೆಂಗಳೂರು – 560001; ಇ-ಮೇಲ್: Prs.revenue@gmail.com
- ಗಮನಿಸಿ: ಸಾರ್ವಜನಿಕರು ತಮ್ಮ ಅಭಿಪ್ರಾಯಗಳನ್ನು ಅಧಿಸೂಚನೆ ರಾಜ್ಯ ಪತ್ರದಲ್ಲಿ ಪ್ರಕಟಗೊಂಡ ದಿನಾಂಕದಿಂದ 30 ದಿನಗಳೊಳಗೆ ಸಲ್ಲಿಸಬೇಕು.
ಮಂಗಳೂರು
Raghupti Bhat-2028ರ ಚುನಾವಣೆಯಲ್ಲಿ ಸ್ಪರ್ಧೆ ಖಚಿತ; ಕಾಂಗ್ರೆಸ್ ಸೇರ್ಪಡೆ ಬಗ್ಗೆ ಏನು ಹೇಳಿದ್ರು ರಘುಪತಿ ಭಟ್
ಕಾಂಗ್ರೆಸ್ ಸೇರ್ಪಡೆಯ ಕುರಿತು ಇನ್ನೂ ಯಾವುದೇ ಅಂತಿಮ ನಿರ್ಧಾರ ಕೈಗೊಂಡಿಲ್ಲ. ಆದರೆ 2028ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ ಎಂದು ಉಡುಪಿ ಮಾಜಿ ಶಾಸಕ ರಘುಪತಿ ಭಟ್ ತಿಳಿಸಿದ್ದಾರೆ.
ಮಂಗಳೂರು: ಕಾಂಗ್ರೆಸ್ ಸೇರ್ಪಡೆಯ ಕುರಿತು ಇನ್ನೂ ಯಾವುದೇ ಅಂತಿಮ ನಿರ್ಧಾರ ಕೈಗೊಂಡಿಲ್ಲ. ಆದರೆ 2028ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ ಎಂದು ಉಡುಪಿ ಮಾಜಿ ಶಾಸಕ ರಘುಪತಿ ಭಟ್ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ನಿಂದ ಈಗಾಗಲೇ ಆಹ್ವಾನ ಬಂದಿರುವುದು ನಿಜ. ಈ ಬಗ್ಗೆ ಯೋಚನೆ ಮಾಡುತ್ತಿದ್ದೇನೆ. ನನ್ನ ಬೆಂಬಲಿಗರೊಂದಿಗೆ ಚರ್ಚಿಸಿ, ಅವರ ಅಭಿಪ್ರಾಯ ಪಡೆದುಕೊಂಡ ಬಳಿಕವೇ ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ ಎಂದು ಹೇಳಿದರು.
“ಬಿಜೆಪಿಯವರು ಕರೆಯುತ್ತಾರೆ ಎಂದು ಕಾಯುತ್ತಿದ್ದೇನೆ. ಬಿಜೆಪಿ ಸೇರುವ ಬಗ್ಗೆಯೂ ಯೋಚಿಸಬಹುದು. ಆದರೆ ಕಾಂಗ್ರೆಸ್ ಸೇರುವ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ” ಎಂದು ಸ್ಪಷ್ಟಪಡಿಸಿದರು.
ಬಾಲ್ಯದಿಂದಲೂ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕರ್ತನಾಗಿ ಬೆಳೆದು, ಬಿಜೆಪಿಯಲ್ಲಿ ಯುವ ಮೋರ್ಚಾ ಜಿಲ್ಲಾ ಘಟಕ ಹಾಗೂ ಜಿಲ್ಲಾಧ್ಯಕ್ಷನಾಗಿ ಕೆಲಸ ಮಾಡಿದ್ದೇನೆ. ಮೂರು ಬಾರಿ ಶಾಸಕನಾಗಿದ್ದೇನೆ. ಹೀಗಿರುವಾಗ ಏಕಾಏಕಿ ಪಕ್ಷ ಬದಲಿಸುವ ನಿರ್ಧಾರ ಕೈಗೊಳ್ಳಲು ನನ್ನ ಮನಸ್ಸು ಒಪ್ಪುತ್ತಿಲ್ಲ. ನನ್ನ ಬೆಂಬಲಿಗರ ವಿಶ್ವಾಸ ಪಡೆದುಕೊಂಡೇ ಮುಂದಿನ ಹೆಜ್ಜೆ ಇಡುತ್ತೇನೆ ಎಂದು ತಿಳಿಸಿದರು.
ಕಳೆದ ಚುನಾವಣೆಯ ಸಂದರ್ಭ ತಮಗೆ ಅನ್ಯಾಯವಾಗಿದೆ ಎಂಬ ಅಸಮಾಧಾನ ವ್ಯಕ್ತಪಡಿಸಿದ ರಘುಪತಿ ಭಟ್, ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ತಪ್ಪಿದ್ದಕ್ಕಿಂತಲೂ ವಿಧಾನ ಪರಿಷತ್ ಸ್ಥಾನ ನೀಡುವುದಾಗಿ ಹೇಳಿ, ಕೊನೆಗೆ ಅವಕಾಶ ನೀಡದಿರುವುದು ನೋವು ತಂದಿದೆ ಎಂದರು.
ತಮ್ಮದೇ ಪಕ್ಷದ ಕೆಲವು ಶಾಸಕರಿಂದ ವೈಯಕ್ತಿಕ ದಬ್ಬಾಳಿಕೆ ಎದುರಿಸಬೇಕಾಯಿತು ಎಂದು ಆರೋಪಿಸಿದ ಅವರು, ಈ ವಿಚಾರದಲ್ಲಿ ಸಂಘದ ಹಿರಿಯರು ಹಾಗೂ ಬಿಜೆಪಿಯ ನಾಯಕರು ತಮ್ಮೊಂದಿಗೆ ಮಾತನಾಡದಿರುವುದು ಬೇಸರ ತಂದಿದೆ ಎಂದು ಹೇಳಿದರು.
“ನನ್ನ ಹತ್ತಿರದ ಕ್ಷೇತ್ರಗಳ ಮಾಜಿ ಶಾಸಕರನ್ನು ಗೌರವದಿಂದ ಕಾಣಲಾಗುತ್ತದೆ. ನನಗೆ ವಿಶೇಷ ಗೌರವ ಬೇಡ. ಕನಿಷ್ಠ ಬಹುವಚನದಲ್ಲಿ ಮಾತನಾಡಿದ್ದರೂ ಸಾಕಿತ್ತು. ಈ ಎಲ್ಲ ಘಟನೆಗಳು ಮಾನಸಿಕವಾಗಿ ನೋವುಂಟುಮಾಡಿವೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.
2028ರ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತು ಮಾತನಾಡಿದ ಅವರು, ಕ್ಷೇತ್ರದ ಜನರು ನನ್ನನ್ನು ಸೋಲಿಸಿಲ್ಲ. ಪಕ್ಷವೇ ನನಗೆ ಟಿಕೆಟ್ ತಪ್ಪಿಸಿದೆ ಎಂಬ ಭಾವನೆ ಜನರಲ್ಲಿದೆ. ಜನರು ಸ್ಪರ್ಧಿಸುವಂತೆ ಒತ್ತಾಯಿಸುತ್ತಿದ್ದಾರೆ. ಜನರು ಬೇಡ, ನೀವು ಚುನಾವಣೆಗೆ ನಿಲ್ಲಬೇಡಿ ಎಂದು ಹೇಳಿದರೆ ಮನೆಯಲ್ಲೇ ಕುಳಿತುಕೊಳ್ಳುತ್ತೇನೆ. ಜನರ ಕೆಲಸ ಮಾಡಲು ಜನಪ್ರತಿನಿಧಿಯಾಗಲೇಬೇಕೆಂದಿಲ್ಲ. ಚುನಾವಣಾ ರಾಜಕೀಯದಿಂದ ದೂರವಿದ್ದರೂ ಜನರಿಗೆ ಸಹಾಯ ಮಾಡಬಹುದು ಎಂದು ರಘುಪತಿ ಭಟ್ ಹೇಳಿದರು
-
ನಿಧನ ವಾರ್ತೆ20 hours agoKalmadka-ಸುಳ್ಯ ಕಲ್ಮಡ್ಕದಲ್ಲಿ ದುರಂತ: ವಿದ್ಯುತ್ ಸ್ಪರ್ಶಿಸಿ ಮೀನು ಹಿಡಿಯಲು ಹೋದ ಬಾವ–ಬಾಮೈದ ಸಾವು
-
ಸ್ಥಳೀಯ24 hours agoArrested-1,000 ಅಡಿ ಆಳದ ಪ್ರಪಾತದಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ಶವ ಪತ್ತೆ; ಆತ್ಮಹತ್ಯೆ ಕತೆ ಕಟ್ಟಿದ ಪ್ರಿಯಕರ ಅರೆಸ್ಟ್..!
-
ಮಂಗಳೂರು22 hours agoSoujanya Case-BIG BREAKING NEWS: ಸೌಜನ್ಯ ಪ್ರಕರಣ: ಮಂಗಳೂರಿನಲ್ಲಿ ಎಸ್ಐಟಿ ಮಹತ್ವದ ಸಭೆ; ಸೌಜನ್ಯ ದೇಹ ಸಿಕ್ಕ ಸ್ಥಳಕ್ಕೆ ಭೇಟಿ ಸಾಧ್ಯತೆ
-
Uncategorized17 hours agoLawyer Amrutesh-ಸೌಜನ್ಯ ಪ್ರಕರಣ ಮರುತನಿಖೆ : ಸಂತೋಷ್ ರಾವ್ ವಿರುದ್ಧ ಬಲವಾದ ಸಾಕ್ಷ್ಯಗಳಿವೆ: ಧಾರ್ಮಿಕ ಕ್ಷೇತ್ರದ ಮೇಲೆ ಷಡ್ಯಂತ್ರ ನಡೆಯುತ್ತಿದೆ : ಹೈಕೋರ್ಟ್ ವಕೀಲ ಅಮೃತೇಶ್
-
ಶಿಕ್ಷಣ19 hours agoVivekananda-ಪುತ್ತೂರಿನ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಇಬ್ಬರು ಉಪನ್ಯಾಸಕರಿಗೆ ಡಾಕ್ಟರೇಟ್ ಪದವಿ
-
ಬಿಗ್ ನ್ಯೂಸ್19 hours agoVitla-ವಿಟ್ಲ: ಕಾರು–ಆಕ್ಟಿವಾ ಡಿಕ್ಕಿ; ಸವಾರನಿಗೆ ಗಂಭೀರ ಗಾಯ
-
ಮಂಗಳೂರು19 hours agoRaghupti Bhat-2028ರ ಚುನಾವಣೆಯಲ್ಲಿ ಸ್ಪರ್ಧೆ ಖಚಿತ; ಕಾಂಗ್ರೆಸ್ ಸೇರ್ಪಡೆ ಬಗ್ಗೆ ಏನು ಹೇಳಿದ್ರು ರಘುಪತಿ ಭಟ್
-
ರಾಜಕೀಯ24 hours agoSudha Yadav-ಆರು ರಾಜ್ಯಗಳಿಗೆ ರಾಜ್ಯಪಾಲರ ಬದಲಾವಣೆ: ಕರ್ನಾಟಕಕ್ಕೆ ನೂತನ ರಾಜ್ಯಪಾಲರಾಗಿ ಸುಧಾ ಯಾದವ್


















