ಸ್ಥಳೀಯ
Hassan-ಮಗುವಿನ ಅನಾರೋಗ್ಯ ಹಿನ್ನಲೆ : ಹಾಸನದಲ್ಲಿ ಆಸ್ಪತ್ರೆಯ ಮೇಲೇರಿ ಆತ್ಮಹತ್ಯೆಗೆ ಯತ್ನಿಸಿದ ತಂದೆ
ಹಾಸನ : ಇಲ್ಲಿನ ಹಿಮ್ಸ್ ಮಹಿಳೆ ಮತ್ತು ಮಕ್ಕಳ ಆಸ್ಪತ್ರೆಯ ಕಟ್ಟಡದ ಮೇಲೇರಿ ವ್ಯಕ್ತಿಯೊಬ್ಬರು ಐದನೇ ಮಹಡಿಯ ತುದಿಯಲ್ಲಿ ನಿಂತು ಆತ್ಮಹತ್ಯೆ ಬೆದರಿಕೆ ಹಾಕಿದ ಘಟನೆ ಹಾಸನ ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನ ಹಳೆಬೀಡು ಸಮೀಪದ ಬಸವರಾಯನಪುರ ಗ್ರಾಮದ ಗಂಗಸ್ವಾಮಿ ಆತ್ಮಹತ್ಯೆಗೆ ಯತ್ನಿಸಿದವರು.
ಗಂಗಸ್ವಾಮಿ ತನ್ನ ಎರಡು ತಿಂಗಳ ಮಗುವಿಗೆ ಅನಾರೋಗ್ಯ ಹಿನ್ನೆಲೆಯಲ್ಲಿ ಮಗುವಿನ ಚಿಕಿತ್ಸೆಗಾಗಿ ಹಿಮ್ಸ್ ಗೆ ದಾಖಲು ಮಾಡಿದ್ದರು. ಮಗುವಿನ ಅರೋಗ್ಯ ಬಿಗಡಾಯಿಸಿದ ಹಿನ್ನೆಲೆಯಲ್ಲಿ ಅವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಆಸ್ಪತ್ರೆಯ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದ ಅನಾಹುತ ತಪ್ಪಿದ್ದು ಗಂಗಸ್ವಾಮಿಯನ್ನು ಮನವೊಲಿಸಿ ಕಟ್ಟಡದಿಂದ ಕೆಳಗಿಳಿಸಿಳಾಗಿದೆ. ಅನಂತರ ಅವರನ್ನು ಆಸ್ಪತ್ರೆ ಸಿಬ್ಬಂದಿ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ.
ಸ್ಥಳೀಯ
Bail-ಬೆಳ್ತಂಗಡಿ: ಯತೀಶ್ ಗೌಡ ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ರಿಲೀಫ್; ಮತ್ತಿಬ್ಬರಿಗೆ ಜಾಮೀನು
ಗುರುವಾಯನಕೆರೆಯ ಅಲಾದಿಕೊಟ್ಟಿಗೆಯಲ್ಲಿ ಕಳೆದ ಜೂನ್ 1ರಂದು ನಡೆದ ಪೆರ್ನೆ ಮೂಲದ ಯತೀಶ್ ಗೌಡ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ಉಳಿದ ಇಬ್ಬರು ಆರೋಪಿಗಳಿಗೂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಇದರೊಂದಿಗೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಮೂವರು ಆರೋಪಿಗಳಿಗೂ ಜಾಮೀನು ದೊರೆತಂತಾಗಿದೆ.
ಬೆಳ್ತಂಗಡಿ: ಗುರುವಾಯನಕೆರೆಯ ಅಲಾದಿಕೊಟ್ಟಿಗೆಯಲ್ಲಿ ಕಳೆದ ಜೂನ್ 1ರಂದು ನಡೆದ ಪೆರ್ನೆ ಮೂಲದ ಯತೀಶ್ ಗೌಡ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ಉಳಿದ ಇಬ್ಬರು ಆರೋಪಿಗಳಿಗೂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಇದರೊಂದಿಗೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಮೂವರು ಆರೋಪಿಗಳಿಗೂ ಜಾಮೀನು ದೊರೆತಂತಾಗಿದೆ.
ಪ್ರಕರಣದ ಆರೋಪಿಗಳಾದ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲಿನ ಯಶೋಧರ ಹಾಗೂ ಕಡಬ ತಾಲೂಕಿನ ಚಾರ್ವಾಕದ ಮೋಹನ್ ಅವರಿಗೆ ಮಂಗಳೂರಿನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜಾಮೀನು ನೀಡಿದೆ.
ಕೆಲ ದಿನಗಳ ಹಿಂದೆಯಷ್ಟೇ ಇದೇ ಪ್ರಕರಣದ ಮತ್ತೊಬ್ಬ ಆರೋಪಿ, ಬೆಳ್ತಂಗಡಿ ತಾಲೂಕಿನ ಪಡಂಗಡಿಯ ಇಬ್ರಾಹಿಂ ಅವರಿಗೂ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು.
ಪ್ರಕರಣದ ಹಿನ್ನೆಲೆ:
ಜೂನ್ 1ರಂದು ಬೆಳಗ್ಗೆ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯ ಅಲಾದಿಕೊಟ್ಟಿಗೆ ಎಂಬಲ್ಲಿ ಅಪರಿಚಿತ ಯುವಕನ ಮೃತದೇಹ ಪತ್ತೆಯಾಗಿತ್ತು. ಈ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅನುಮಾನಾಸ್ಪದ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿತ್ತು.
ಬಳಿಕ ಮೃತ ವ್ಯಕ್ತಿ ಪೆರ್ನೆ ಮೂಲದ ಯತೀಶ್ ಗೌಡ ಎಂಬುದು ಗುರುತಿಸಲ್ಪಟ್ಟಿತ್ತು. ಅವರ ಸಹೋದರ ನಿತಿನ್ ಹಾಗೂ ಸಂಬಂಧಿಕರು ಸ್ಥಳಕ್ಕೆ ಭೇಟಿ ನೀಡಿ ಮೃತದೇಹದ ಗುರುತು ಪತ್ತೆಹಚ್ಚಿದ್ದರು.
ಪ್ರಕರಣದ ತನಿಖೆ ನಡೆಸಿದ ಬೆಳ್ತಂಗಡಿ ಪೊಲೀಸರು ಕೊಲೆ ಆರೋಪದಡಿ ಯಶೋಧರ, ಮೋಹನ್ ಹಾಗೂ ಇಬ್ರಾಹಿಂ ಎಂಬ ಮೂವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಇದೀಗ ಪ್ರಕರಣದ ಮೂವರು ಆರೋಪಿಗಳಿಗೂ ನ್ಯಾಯಾಲಯದಿಂದ ಜಾಮೀನು ದೊರೆತಿದೆ.
ನಿಧನ ವಾರ್ತೆ
Mudbidri-ಮಂಗಳೂರಿನಲ್ಲಿ ಮೇಲ್ಛಾವಣಿ ಕೆಲಸದ ವೇಳೆ ಅವಘಡ: ಮೂಡುಬಿದಿರೆ ತಾ.ಪಂ. ಮಾಜಿ ಉಪಾಧ್ಯಕ್ಷ ಸಾವು
ಮೂಡುಬಿದಿರೆ ತಾಲೂಕು ಪಂಚಾಯತ್ನ ಮಾಜಿ ಉಪಾಧ್ಯಕ್ಷ ಸಂತೋಷ್ ಅವರು ಮಂಗಳೂರಿನಲ್ಲಿ ಮನೆಯ ಮೇಲ್ಛಾವಣಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಗುರುವಾರ ಸಂಭವಿಸಿದ ಈ ದುರಂತ ಘಟನೆ ದುಃಖಕ್ಕೆ ಕಾರಣವಾಗಿದೆ.
ಮೂಡುಬಿದಿರೆ, ನ.20: ಮೂಡುಬಿದಿರೆ ತಾಲೂಕು ಪಂಚಾಯತ್ನ ಮಾಜಿ ಉಪಾಧ್ಯಕ್ಷ ಸಂತೋಷ್ ಅವರು ಮಂಗಳೂರಿನಲ್ಲಿ ಮನೆಯ ಮೇಲ್ಛಾವಣಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಗುರುವಾರ ಸಂಭವಿಸಿದ ಈ ದುರಂತ ಘಟನೆ ದುಃಖಕ್ಕೆ ಕಾರಣವಾಗಿದೆ.
ಮೂಡುಬಿದಿರೆ ತಾಲೂಕಿನ ಬೆಳುವಾಯಿ ನಿವಾಸಿಯಾಗಿದ್ದ ಸಂತೋಷ್ ಅವರು ಬೆಳುವಾಯಿ ಕ್ಷೇತ್ರದಿಂದ ತಾಲೂಕು ಪಂಚಾಯತ್ ಸದಸ್ಯರಾಗಿ ಆಯ್ಕೆಯಾಗಿದ್ದರು. ಹೊಸದಾಗಿ ರಚನೆಯಾಗಿದ್ದ ಮೂಡುಬಿದಿರೆ ತಾಲೂಕು ಪಂಚಾಯತ್ನ ಮೊದಲ ಅವಧಿಯಲ್ಲಿ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.
ಸಂತೋಷ್ ಅವರು ಪ್ರತಿದಿನ ಕೆಲಸದ ನಿಮಿತ್ತ ಮಂಗಳೂರಿಗೆ ತೆರಳುತ್ತಿದ್ದರು. ಗುರುವಾರ ಬೇರೆ ಸ್ಥಳದಲ್ಲಿ ಬದಲಿ ಕೆಲಸಗಾರನಾಗಿ ಕೆಲಸಕ್ಕೆ ತೆರಳಿದ್ದ ಅವರು, ಮನೆಯೊಂದರ ಮೇಲ್ಛಾವಣಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಕೆಳಕ್ಕೆ ಬಿದ್ದಿದ್ದಾರೆ ಎನ್ನಲಾಗಿದೆ.
ಘಟನೆಯಲ್ಲಿ ಗಂಭೀರ ಗಾಯಗೊಂಡ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.
ನಿಧನ ವಾರ್ತೆ
Heart attack-ಸಾಲಿಗ್ರಾಮ: ಕಚೇರಿಯಲ್ಲೇ ಹೃದಯಾಘಾತ; ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ ನಿಧನ
ಫೋಟೋಗ್ರಫಿ, ಕಂಪ್ಯೂಟರ್ ತಂತ್ರಜ್ಞಾನ, ವೆಬ್ಡಿಸೈನಿಂಗ್ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಪರಿಣತಿ ಹೊಂದಿದ್ದ ಸಾಲಿಗ್ರಾಮದ ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ (52) ಅವರು ಗುರುವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಸಾಲಿಗ್ರಾಮ: ಫೋಟೋಗ್ರಫಿ, ಕಂಪ್ಯೂಟರ್ ತಂತ್ರಜ್ಞಾನ, ವೆಬ್ಡಿಸೈನಿಂಗ್ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಪರಿಣತಿ ಹೊಂದಿದ್ದ ಸಾಲಿಗ್ರಾಮದ ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ (52) ಅವರು ಗುರುವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಗುರುವಾರ ಬೆಳಿಗ್ಗೆ ಸಾಲಿಗ್ರಾಮದಲ್ಲಿರುವ ತಮ್ಮ ಕಚೇರಿಯಲ್ಲಿ ಕುಳಿತಿದ್ದ ವೇಳೆ ಅವರಿಗೆ ತೀವ್ರ ಹೃದಯಾಘಾತ ಸಂಭವಿಸಿದ್ದು, ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಅವರ ಅಕಾಲಿಕ ನಿಧನದ ಸುದ್ದಿ ಬಂಧುಮಿತ್ರರು ಹಾಗೂ ಸ್ಥಳೀಯರಲ್ಲಿ ತೀವ್ರ ದುಃಖಕ್ಕೆ ಕಾರಣವಾಗಿದೆ.
ದಿನೇಶ್ ಹೊಳ್ಳ ಅವರು ಫೋಟೋಗ್ರಫಿ, ಕಂಪ್ಯೂಟರ್ ತಂತ್ರಜ್ಞಾನ, ವೆಬ್ಡಿಸೈನಿಂಗ್, ವ್ಯಂಗ್ಯಚಿತ್ರ ರಚನೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ತಮ್ಮ ಪ್ರತಿಭೆ ಹಾಗೂ ಪರಿಣತಿಯಿಂದ ಗುರುತಿಸಿಕೊಂಡಿದ್ದರು. ಇದರ ಜೊತೆಗೆ ಚಪ್ಪಲಿ ಉದ್ಯಮದಲ್ಲಿಯೂ ತೊಡಗಿಸಿಕೊಂಡು ಹಲವು ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.
ಬಹುಮುಖ ಪ್ರತಿಭೆ ಹಾಗೂ ವಿವಿಧ ಕ್ಷೇತ್ರಗಳ ಜ್ಞಾನ ಹೊಂದಿದ್ದ ಅವರು ಸ್ನೇಹಜೀವಿಯಾಗಿದ್ದು, ಎಲ್ಲರೊಂದಿಗೆ ಆತ್ಮೀಯ ಒಡನಾಟ ಹೊಂದಿದ್ದರು.
-
ಅಪರಾಧ19 hours agoMangalore-ಕಣಚೂರು ಮೆಡಿಕಲ್ ಕಾಲೇಜು ಆವರಣದಲ್ಲೇ ವಿದ್ಯಾರ್ಥಿನಿ ಅಪಹರಣ..! ಹಿಂದೂ ಯುವಕ ಲವ್ ಆರೋಪ – ವಿಡಿಯೋ ವೈರಲ್ : ತನಿಖೆಗೆ ಕಮಿಷನರ್ ಸೂಚನೆ
-
ರಾಜಕೀಯ19 hours agoBJP leaders-ಗಡಿಪಾರಿಗೊಳಗಾದ ನರಸಿಂಹ ಮಾಣಿ ಮನೆಗೆ ಬಿಜೆಪಿ ಮುಖಂಡರ ಭೇಟಿ; ಕುಟುಂಬಕ್ಕೆ ಆತ್ಮಸ್ಥೈರ್ಯ
-
ಬಿಗ್ ನ್ಯೂಸ್18 hours agoHigh Court-Social Media ಅಕೌಂಟ್ ಇದ್ದ ಮಾತ್ರಕ್ಕೆ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡುವ Free Licence ಇಲ್ಲ : ಬೆಳ್ತಂಗಡಿಯ ಮೋಹನ್ ಬೋಳಂಗಡಿ – ಶುಭಾ ರೈ ವಿರುದ್ಧ ದಾಖಲಾದ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ಎಚ್ಚರಿಕೆ
-
ಸಿನೆಮಾ24 hours agoArjun Sarja-ಪುತ್ರಿ ಐಶ್ವರ್ಯಾ ವಿರುದ್ಧ ಅವಹೇಳನಕಾರಿ ವರದಿ: ಮಾಧ್ಯಮಗಳ ವಿರುದ್ಧ ಸಿಡಿದೆದ್ದ ಅರ್ಜುನ್ ಸರ್ಜಾ; ಅಧಿಕೃತ ದೂರು ದಾಖಲು
-
ನಿಧನ ವಾರ್ತೆ18 hours agoSavitri Devi-ಸಿಎಂ ಯೋಗಿ ಆದಿತ್ಯನಾಥ್ ತಾಯಿ ಸಾವಿತ್ರಿ ದೇವಿ ನಿಧನ
-
ದಕ್ಷಿಣ ಕನ್ನಡ16 hours ago
Ashok janamana 2026 : ಪುತ್ತೂರಿನಲ್ಲಿ ಅದ್ದೂರಿ ‘ಅಶೋಕ ಜನಮನ-2026’ ಸಂಭ್ರಮಕ್ಕೆ ಕ್ಷಣಗಣನೆ ! ಬಿ.ಕೆ. ಹರಿಪ್ರಸಾದ್, ಕೃಷ್ಣ ಬೈರೇಗೌಡ, ಯು.ಟಿ. ಖಾದರ್ ಸಹಿತ ರಾಜಕೀಯ, ಧಾರ್ಮಿಕ ಗಣ್ಯರ ಸಮಾಗಮ
-
ಅಪರಾಧ17 hours agoMangalore-ಮಂಗಳೂರು: ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಮನೆ ಮಾಲೀಕನ ಕೊಲೆ; ಆರೋಪಿಗೆ ಜೀವಾವಧಿ ಶಿಕ್ಷೆ, ಮತ್ತೊಬ್ಬ ಖುಲಾಸೆ
-
ಬಿಗ್ ನ್ಯೂಸ್22 hours agoMuraleedhar Rai-ಮೆಸ್ಕಾಂ ನಿರ್ದೇಶಕರಾಗಿ ಮುರಳೀಧರ ರೈ ಮಠಂತಬೆಟ್ಟು ಸರ್ಕಾರದಿಂದ ನೇಮಕ















