Connect with us

ನಿಧನ ವಾರ್ತೆ

Uppinangady-ಉಪ್ಪಿನಂಗಡಿ : ವಿದ್ಯುತ್ ಸಂಪರ್ಕ ಕಡಿತಗೊಂಡು 3 ದಿನಗಳಿಂದ ನೀರಿಲ್ಲದೆ ತತ್ವಾರ- ಸ್ವತ: ವಿದ್ಯುತ್ ಪರಿವರ್ತಕಕ್ಕೆ ಪ್ಯೂಸ್ ಅಳವಡಿಸಲು ಯತ್ನಿಸಿದ ಯುವಕ ಮೃತ್ಯು

Published

on

Ad Widget

Ad Widget

Ad Widget

Ad Widget

ಉಪ್ಪಿನಂಗಡಿ: ಮೂರು ದಿನಗಳಿಂದ ಮನೆಗೆ ವಿದ್ಯುತ್ ಇಲ್ಲದೇ, ಕುಡಿಯಲು ನೀರಿಗೆ ತತ್ವಾರ ಅನುಭವಿಸುತ್ತಿದ್ದ ಯುವಕನೊಬ್ಬ, ವಿದ್ಯುತ್ ಪರಿವರ್ತಕಕ್ಕೆ ಅಕ್ರಮವಾಗಿ ಪ್ಯೂಸ್ ಅಳವಡಿಸಲು ಯತ್ನಿಸಿದ ವೇಳೆ ವಿದ್ಯುತ್ ಸ್ಪರ್ಶಗೊಂಡು ಮೃತಪಟ್ಟ ಘಟನೆ ಸೋಮವಾರ ಸಂಭವಿಸಿದೆ.

Ad Widget

Ad Widget

Ad Widget

Ad Widget

ಬೆಳ್ತಂಗಡಿ ತಾಲೂಕು ಇಳಂತಿಲ ಗ್ರಾಮದ ಗೋಳಿತ್ತಡಿ ಮನೆ ನಿವಾಸಿ ತಿಮ್ಮಪ್ಪ ಗೌಡ ಎಂಬವರ ಪುತ್ರ ಹರೀಶ್ ಗೌಡ (35) ಮೃತರು. ಅವಿವಾಹಿತರಾಗಿದ್ದ ಮೃತರು ಅಡಕೆ ಸುಲಿಯುವ ಹಾಗೂ ಕೂಲಿ ಕೆಲಸ ನಿರ್ವಹಿಸುತ್ತಾ ಜೀವನ ನಡೆಸುತ್ತಿದ್ದರು. ಇವರು ಸೋಮವಾರ ಮನೆ ಸಮೀಪ ಇರುವ ಪನ್ಯ ವಿದ್ಯುತ್ ಪರಿವರ್ತಕಕ್ಕೆ ನಿಯಮಬಾಹಿರವಾಗಿ ಹತ್ತಿ ಪ್ಯೂಸ್ ಅಳವಡಿಸಲು ಯತ್ನಿಸಿದ ವೇಳೆ ವಿದ್ಯುತ್ ಸ್ಪರ್ಶಗೊಂಡು ಕೆಳಗೆ ಬಿದ್ದಿದ್ದರೆನ್ನಲಾಗಿದೆ. ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತ್ತಾದರೂ ಆ ವೇಳೆ ಅವರು ಮೃತಪಟ್ಟಿದ್ದಾರೆಂದು ವರದಿಯಾಗಿದೆ.

Ad Widget

Ad Widget alt="Ad Widget"/>

Ad Widget

ಹರೀಶ್ ವಿವಾಹಿತರಾಗಿದ್ದು, ಉತ್ತಮ ಕಬಡ್ಡಿ ಕ್ರೀಡಾಪಟುವಾಗಿದ್ದರು. ಪ್ರಕರಣಕ್ಕೆ ಸಂಬಂಧಿಸಿ ಮೆಸ್ಕಾಂ ಇಲಾಖಾಧಿಕಾರಿಗಳು ನೀಡಿದ ದೂರಿನ ಮೇರೆಗೆ ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ವಿದ್ಯುತ್ ಪರಿವರ್ತಿತಕ್ಕೆ ಅನಧಿಕೃತವಾಗಿ ಮತ್ತು ನಿಯಮಬಾಹಿರವಾಗಿ ಏರಿ, ಪ್ಯೂಸ್ ಅಳವಡಿಸಲು ಪ್ರಯತ್ನಿಸಿದಾಗ ವಿದ್ಯುತ್ ಸ್ಪರ್ಶಗೊಂಡು ಹರೀಶ್ ಮೃತಪಟ್ಟಿರುವುದಾಗಿ ಕಾರ್ಯ ಮತ್ತು ಪಾಲನಾ ಶಾಖೆ, ಮೆಸ್ಕಾಂ ಕಲ್ಲೇರಿ, ಬೆಳ್ತಂಗಡಿ ಇಲ್ಲಿನ ಪ್ರಭಾರ ಕಿರಿಯ ಇಂಜಿನಿಯರ್ ಬೂಬ ಶೆಟ್ಟಿ (54 ವ)ಯವರು ದೂರು ನೀಡಿದ್ದು ಕಲಂ: 106 BNS 2023 ರಂತೆ ಪ್ರಕರಣ ದಾಖಲಾಗಿದೆ.

Ad Widget

Ad Widget <> Ad Widget

ಹರೀಶ್ ಗೌಡರವರ ಮನೆಗೆ ಕಳೆದ ಮೂರು ದಿನಗಳಿಂದ ವಿದ್ಯುತ್ ಸಂಪರ್ಕ ಕಡಿತಗೊಂಡಿತ್ತು. ಹೀಗಾಗಿ ಮನೆಯಲ್ಲಿ ಕುಡಿಯಲು ನೀರೂ ಇರಲಿಲ್ಲವೆನ್ನಲಾಗಿದೆ. ಹೀಗಾಗಿ ಅವರು ಸ್ವತ: ವಿದ್ಯುತ್ ಪರಿವರ್ತಕದ ಕಂಬವನ್ನೇರಿ ಪ್ಯೂಸ್ ಅಳವಡಿಸುವ ದುಸ್ಸಾಹಸಕ್ಕೆ ಮುಂದಾಗಿದ್ದರು ಎನ್ನಲಾಗಿದೆ.

ಆದರೇ ಹೀಗೆ ಮಾಡುವುದು ನಿಯಮಬಾಹಿರ ಕೃತ್ಯವಾಗಿದೆ. ಇದರಿಂದ 35ರ ಹರೆಯದ ಯುವಕ ಜೀವವನ್ನೆ ಕಳೆದು ಕೊಳ್ಳಬೇಕಾಗಿ ಬಂದಿದೆ. ಇಂತಹ ಸಂದರ್ಭದಲ್ಲಿ ಗ್ರಾಹಕರು ಮೆಸ್ಕಾಂ ಅಥಾವ ತತ್ಸಂಬಂಧಿತ ಇಲಾಖೆಯ ಮೊರೆ ಹೋಗಬೇಕೆ ಹೊರತು ಸ್ವತ: ದುರಸ್ತಿ ಮುಂದಾಗಬಾರದು. ವಿದ್ಯುತ್ ಪರಿವರ್ತಕವನ್ನು ಹತ್ತಿ ಪ್ಯೂಸ್ ಅಳವಡಿಸಲು ಮುಂದಾಗಿರುವುದು ಮೆಸ್ಕಾಂ ನಿಯಮಾವಳಿಯ ಪ್ರಕಾರ ಶಿಕ್ಷಾರ್ಹ ಅಪರಾಧವಾಗಿದೆ.

Click to comment

Leave a Reply

ನಿಧನ ವಾರ್ತೆ

One-sided love-ಇನ್‌ಸ್ಟಾಗ್ರಾಮ್ ಇನ್‌ಫ್ಲುಯೆನ್ಸರ್ ಮೇಲಿನ ಒನ್‌ಸೈಡೆಡ್ ಲವ್; ಹಲ್ಲೆಗೊಳಗಾದ ಯುವಕ ಸಾವು

Published

on

Ad Widget

Ad Widget

Ad Widget

Ad Widget

ಸೋಶಿಯಲ್ ಮೀಡಿಯಾದಲ್ಲಿ ಖ್ಯಾತಿ ಪಡೆದಿದ್ದ ಮಹಿಳಾ ಇನ್‌ಫ್ಲುಯೆನ್ಸರ್ ಮೇಲಿನ ಏಕಪಕ್ಷೀಯ ಪ್ರೀತಿಯ ಹಿನ್ನೆಲೆಯಲ್ಲಿ ಯುವಕನೊಬ್ಬನ ದುರಂತ ಅಂತ್ಯವಾಗಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್‌ನಲ್ಲಿ 6 ಲಕ್ಷಕ್ಕೂ ಅಧಿಕ ಫಾಲೋವರ್ಸ್ ಹೊಂದಿರುವ ಕಂಟೆಂಟ್ ಕ್ರಿಯೇಟರ್ ನೇಹಾ ಬಿಷ್ಟ್ ಅವರ ಮನೆಯಲ್ಲೇ ಈ ಘಟನೆ ನಡೆದಿದೆ.

Ad Widget

Ad Widget

Ad Widget

Ad Widget

ನವದೆಹಲಿ: ಸೋಶಿಯಲ್ ಮೀಡಿಯಾದಲ್ಲಿ ಖ್ಯಾತಿ ಪಡೆದಿದ್ದ ಮಹಿಳಾ ಇನ್‌ಫ್ಲುಯೆನ್ಸರ್ ಮೇಲಿನ ಏಕಪಕ್ಷೀಯ ಪ್ರೀತಿಯ ಹಿನ್ನೆಲೆಯಲ್ಲಿ ಯುವಕನೊಬ್ಬನ ದುರಂತ ಅಂತ್ಯವಾಗಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್‌ನಲ್ಲಿ 6 ಲಕ್ಷಕ್ಕೂ ಅಧಿಕ ಫಾಲೋವರ್ಸ್ ಹೊಂದಿರುವ ಕಂಟೆಂಟ್ ಕ್ರಿಯೇಟರ್ ನೇಹಾ ಬಿಷ್ಟ್ ಅವರ ಮನೆಯಲ್ಲೇ ಈ ಘಟನೆ ನಡೆದಿದೆ.

Ad Widget

Ad Widget alt="Ad Widget"/>

Ad Widget

ನೇಹಾ ಬಿಷ್ಟ್ ಇತ್ತೀಚೆಗೆ ತಮ್ಮ ನಿಶ್ಚಿತಾರ್ಥ ಹಾಗೂ ಮುಂಬರುವ ವಿವಾಹದ ಸಿದ್ಧತೆಗಳ ಕುರಿತು ಇನ್‌ಸ್ಟಾಗ್ರಾಮ್ ಮತ್ತು ಯೂಟ್ಯೂಬ್‌ನಲ್ಲಿ ನಿರಂತರವಾಗಿ ವಿಡಿಯೋಗಳನ್ನು ಹಂಚಿಕೊಳ್ಳುತ್ತಿದ್ದರು. ಈ ವಿಚಾರದಿಂದ ಅಸಮಾಧಾನಗೊಂಡಿದ್ದ ಉತ್ತರ ಪ್ರದೇಶದ ಗಾಜಿಪುರ ಮೂಲದ ಅಭಿನವ್ ಎಂಬ ಯುವಕ ಚೆನ್ನೈನಿಂದ ದೆಹಲಿಗೆ ಬಂದಿದ್ದಾನೆ.

Ad Widget

Ad Widget <> Ad Widget

ಚೆನ್ನೈನ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಅಭಿನವ್, ನವೆಂಬರ್ 7ರಂದು ಪೂರ್ವ ದೆಹಲಿಯ ಮಧು ವಿಹಾರ್‌ನಲ್ಲಿರುವ ನೇಹಾ ಬಿಷ್ಟ್ ಅವರ ಮನೆಗೆ ಬಲವಂತವಾಗಿ ಪ್ರವೇಶಿಸಿದ್ದಾನೆ. ಈ ವೇಳೆ ನೇಹಾ ಅವರನ್ನೇ ಮದುವೆಯಾಗಬೇಕೆಂದು ಪಟ್ಟು ಹಿಡಿದು ಗಲಾಟೆ ನಡೆಸಿದ್ದಾನೆ ಎನ್ನಲಾಗಿದೆ. ಮರುದಿನ ದಾಖಲಾದ ಎಫ್‌ಐಆರ್‌ನಲ್ಲಿ ಆತ ಮದ್ಯಪಾನ ಮಾಡಿದ್ದನೆಂದು ಉಲ್ಲೇಖಿಸಲಾಗಿದೆ.

ಯುವಕನ ವರ್ತನೆಯಿಂದ ಆಕ್ರೋಶಗೊಂಡ ನೇಹಾ ಅವರ ಕುಟುಂಬದ ಸದಸ್ಯರು ಹಾಗೂ ಕೆಲವು ನೆರೆಹೊರೆಯವರು ಆತನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಬೆನ್ನು ಹಾಗೂ ಬಲಗಾಲಿಗೆ ಗಂಭೀರ ಗಾಯಗಳಾಗಿ ರಕ್ತಸ್ರಾವವಾಗುತ್ತಿದ್ದ ಅಭಿನವ್‌ನನ್ನು ತಕ್ಷಣ ರಾಜೀವ್ ಗಾಂಧಿ ಆಸ್ಪತ್ರೆಗೆ ದಾಖಲಿಸಿದ್ದರು.

Ad Widget

Ad Widget

ಸುಮಾರು ಒಂದು ವಾರ ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಭಿನವ್, ಚಿಕಿತ್ಸೆ ಫಲಕಾರಿಯಾಗದೆ ನವೆಂಬರ್ 15ರಂದು ಮೃತಪಟ್ಟಿದ್ದಾನೆ.

ಪೊಲೀಸರ ತನಿಖೆಯ ವೇಳೆ ಅಭಿನವ್ ನಿರಂತರವಾಗಿ ನೇಹಾ ಬಿಷ್ಟ್ ಅವರ ವಿಡಿಯೋಗಳನ್ನು ವೀಕ್ಷಿಸುತ್ತಿದ್ದು, ಅವರ ಮೇಲೆ ಏಕಪಕ್ಷೀಯ ಪ್ರೀತಿ ಬೆಳೆಸಿಕೊಂಡಿದ್ದ ಎಂಬ ವಿಚಾರ ಬೆಳಕಿಗೆ ಬಂದಿದೆ ಎನ್ನಲಾಗಿದೆ. ಕೆಲವು ತಿಂಗಳ ಹಿಂದೆಯೂ ಅಭಿಮಾನಿಯ ಸೋಗಿನಲ್ಲಿ ನೇಹಾ ಅವರ ಮನೆಗೆ ಭೇಟಿ ನೀಡಿದ್ದ ಎಂದು ತಿಳಿದುಬಂದಿದೆ.

ನೇಹಾ ಬೇರೊಬ್ಬರೊಂದಿಗೆ ವಿವಾಹವಾಗುತ್ತಿರುವ ವಿಚಾರ ತಿಳಿದ ಬಳಿಕ ಅಭಿನವ್ ಅಸಮಾಧಾನಗೊಂಡಿದ್ದ ಎನ್ನಲಾಗಿದೆ. ಆದರೆ, ಅಭಿನವ್ ಯಾರೆಂಬುದೇ ನೇಹಾ ಅವರಿಗೆ ತಿಳಿದಿರಲಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ಯುವಕನ ಸಾವಿನ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ನೇಹಾ ಬಿಷ್ಟ್ ಅವರ ತಂದೆ ವೀರೇಂದ್ರ ಬಿಷ್ಟ್ ಹಾಗೂ ಓರ್ವ ನೆರೆಹೊರೆಯ ವ್ಯಕ್ತಿಯನ್ನು ಬಂಧಿಸಿದ್ದಾರೆ. ಪ್ರಕರಣದಲ್ಲಿ ಭಾಗಿಯಾಗಿರುವ ಇತರ ಆರೋಪಿಗಳ ಪತ್ತೆಗಾಗಿ ಪೊಲೀಸರು ತನಿಖೆ ಮುಂದುವರಿಸಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ.

Ad Widget
Continue Reading

ನಿಧನ ವಾರ್ತೆ

Mudbidri-ಮಂಗಳೂರಿನಲ್ಲಿ ಮೇಲ್ಛಾವಣಿ ಕೆಲಸದ ವೇಳೆ ಅವಘಡ: ಮೂಡುಬಿದಿರೆ ತಾ.ಪಂ. ಮಾಜಿ ಉಪಾಧ್ಯಕ್ಷ ಸಾವು

Published

on

Ad Widget

Ad Widget

Ad Widget

Ad Widget

ಮೂಡುಬಿದಿರೆ ತಾಲೂಕು ಪಂಚಾಯತ್‌ನ ಮಾಜಿ ಉಪಾಧ್ಯಕ್ಷ ಸಂತೋಷ್ ಅವರು ಮಂಗಳೂರಿನಲ್ಲಿ ಮನೆಯ ಮೇಲ್ಛಾವಣಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಗುರುವಾರ ಸಂಭವಿಸಿದ ಈ ದುರಂತ ಘಟನೆ ದುಃಖಕ್ಕೆ ಕಾರಣವಾಗಿದೆ.

Ad Widget

Ad Widget

Ad Widget

Ad Widget

ಮೂಡುಬಿದಿರೆ, ನ.20: ಮೂಡುಬಿದಿರೆ ತಾಲೂಕು ಪಂಚಾಯತ್‌ನ ಮಾಜಿ ಉಪಾಧ್ಯಕ್ಷ ಸಂತೋಷ್ ಅವರು ಮಂಗಳೂರಿನಲ್ಲಿ ಮನೆಯ ಮೇಲ್ಛಾವಣಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಗುರುವಾರ ಸಂಭವಿಸಿದ ಈ ದುರಂತ ಘಟನೆ ದುಃಖಕ್ಕೆ ಕಾರಣವಾಗಿದೆ.

Ad Widget

Ad Widget alt="Ad Widget"/>

Ad Widget

ಮೂಡುಬಿದಿರೆ ತಾಲೂಕಿನ ಬೆಳುವಾಯಿ ನಿವಾಸಿಯಾಗಿದ್ದ ಸಂತೋಷ್ ಅವರು ಬೆಳುವಾಯಿ ಕ್ಷೇತ್ರದಿಂದ ತಾಲೂಕು ಪಂಚಾಯತ್ ಸದಸ್ಯರಾಗಿ ಆಯ್ಕೆಯಾಗಿದ್ದರು. ಹೊಸದಾಗಿ ರಚನೆಯಾಗಿದ್ದ ಮೂಡುಬಿದಿರೆ ತಾಲೂಕು ಪಂಚಾಯತ್‌ನ ಮೊದಲ ಅವಧಿಯಲ್ಲಿ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.

Ad Widget

Ad Widget <> Ad Widget

ಸಂತೋಷ್ ಅವರು ಪ್ರತಿದಿನ ಕೆಲಸದ ನಿಮಿತ್ತ ಮಂಗಳೂರಿಗೆ ತೆರಳುತ್ತಿದ್ದರು. ಗುರುವಾರ ಬೇರೆ ಸ್ಥಳದಲ್ಲಿ ಬದಲಿ ಕೆಲಸಗಾರನಾಗಿ ಕೆಲಸಕ್ಕೆ ತೆರಳಿದ್ದ ಅವರು, ಮನೆಯೊಂದರ ಮೇಲ್ಛಾವಣಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಕೆಳಕ್ಕೆ ಬಿದ್ದಿದ್ದಾರೆ ಎನ್ನಲಾಗಿದೆ.

ಘಟನೆಯಲ್ಲಿ ಗಂಭೀರ ಗಾಯಗೊಂಡ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

Ad Widget

Ad Widget

ಮೃತ ಸಂತೋಷ್ ಅವರು ಪತ್ನಿ ಹಾಗೂ ಪುಟ್ಟ ಮಗುವನ್ನು ಅಗಲಿದ್ದಾರೆ. ಜನಪ್ರತಿನಿಧಿಯಾಗಿ ಸೇವೆ ಸಲ್ಲಿಸಿದ್ದ ಅವರ ಅಕಾಲಿಕ ನಿಧನಕ್ಕೆ ಸ್ಥಳೀಯರು ಹಾಗೂ ಗಣ್ಯರು ಸಂತಾಪ ಸೂಚಿಸಿದ್ದಾರೆ.

Ad Widget
Continue Reading

ನಿಧನ ವಾರ್ತೆ

Heart attack-ಸಾಲಿಗ್ರಾಮ: ಕಚೇರಿಯಲ್ಲೇ ಹೃದಯಾಘಾತ; ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ ನಿಧನ

Published

on

Ad Widget

Ad Widget

Ad Widget

Ad Widget

ಫೋಟೋಗ್ರಫಿ, ಕಂಪ್ಯೂಟರ್ ತಂತ್ರಜ್ಞಾನ, ವೆಬ್‌ಡಿಸೈನಿಂಗ್ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಪರಿಣತಿ ಹೊಂದಿದ್ದ ಸಾಲಿಗ್ರಾಮದ ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ (52) ಅವರು ಗುರುವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.

Ad Widget

Ad Widget

Ad Widget

Ad Widget

ಸಾಲಿಗ್ರಾಮ: ಫೋಟೋಗ್ರಫಿ, ಕಂಪ್ಯೂಟರ್ ತಂತ್ರಜ್ಞಾನ, ವೆಬ್‌ಡಿಸೈನಿಂಗ್ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಪರಿಣತಿ ಹೊಂದಿದ್ದ ಸಾಲಿಗ್ರಾಮದ ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ (52) ಅವರು ಗುರುವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.

Ad Widget

Ad Widget alt="Ad Widget"/>

Ad Widget

ಗುರುವಾರ ಬೆಳಿಗ್ಗೆ ಸಾಲಿಗ್ರಾಮದಲ್ಲಿರುವ ತಮ್ಮ ಕಚೇರಿಯಲ್ಲಿ ಕುಳಿತಿದ್ದ ವೇಳೆ ಅವರಿಗೆ ತೀವ್ರ ಹೃದಯಾಘಾತ ಸಂಭವಿಸಿದ್ದು, ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಅವರ ಅಕಾಲಿಕ ನಿಧನದ ಸುದ್ದಿ ಬಂಧುಮಿತ್ರರು ಹಾಗೂ ಸ್ಥಳೀಯರಲ್ಲಿ ತೀವ್ರ ದುಃಖಕ್ಕೆ ಕಾರಣವಾಗಿದೆ.

Ad Widget

Ad Widget <> Ad Widget

ದಿನೇಶ್ ಹೊಳ್ಳ ಅವರು ಫೋಟೋಗ್ರಫಿ, ಕಂಪ್ಯೂಟರ್ ತಂತ್ರಜ್ಞಾನ, ವೆಬ್‌ಡಿಸೈನಿಂಗ್, ವ್ಯಂಗ್ಯಚಿತ್ರ ರಚನೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ತಮ್ಮ ಪ್ರತಿಭೆ ಹಾಗೂ ಪರಿಣತಿಯಿಂದ ಗುರುತಿಸಿಕೊಂಡಿದ್ದರು. ಇದರ ಜೊತೆಗೆ ಚಪ್ಪಲಿ ಉದ್ಯಮದಲ್ಲಿಯೂ ತೊಡಗಿಸಿಕೊಂಡು ಹಲವು ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.

ಬಹುಮುಖ ಪ್ರತಿಭೆ ಹಾಗೂ ವಿವಿಧ ಕ್ಷೇತ್ರಗಳ ಜ್ಞಾನ ಹೊಂದಿದ್ದ ಅವರು ಸ್ನೇಹಜೀವಿಯಾಗಿದ್ದು, ಎಲ್ಲರೊಂದಿಗೆ ಆತ್ಮೀಯ ಒಡನಾಟ ಹೊಂದಿದ್ದರು.

Ad Widget

Ad Widget

ಮೃತರು ತಾಯಿ, ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!