Connect with us

ಕಾರ್ಯಕ್ರಮಗಳು

Silver jubilee-ಕಾರ್ಗಿಲ್ ವಿಜಯೋತ್ಸವಕ್ಕೆ ಬೆಳ್ಳಿಹಬ್ಬ – ಜು 19ರಂದು ದೇಶ ಭಕ್ತಿ ಉದ್ದೀಪನಗೊಳಿಸುವ ಕಾರ್ಯಕ್ರಮಗಳಿಗೆ ಹೆಸರುವಾಸಿಯಾಗಿರುವ ಅಂಬಿಕಾ ವಿದ್ಯಾಲಯದಲ್ಲಿ ಅದ್ದೂರಿ ಸಂಭ್ರಮಾಚರಣೆ; ಪರಮವೀರ ಚಕ್ರ ಪುರಸ್ಕೃತ ಯೋಗೀಂದ್ರ ಯಾದವ್ ಅಪ್ರತಿಮ ಸಾಹಸಿ ನವೀನ್ ನಾಗಪ್ಪ ಆಗಮನ

Published

on

Ad Widget

Ad Widget

Ad Widget

Ad Widget

ಪುತ್ತೂರು: ಅಮರ್ ಜವಾನ್ ಜ್ಯೋತಿ ಸ್ಮಾರಕದ ಸಂರಕ್ಷಣಾ ಸಮಿತಿ ಹಾಗೂ ಮಾಜಿ ಸೈನಿಕರ ಸಂಘದ ಸಹಯೋಗದಲ್ಲಿ ಪ್ರತಿವರ್ಷ ಅನ್ಯಾನ್ಯ ಸಂಘಟನೆಗಳ ಸಹಕಾರದೊಂದಿಗೆ ಪುತ್ತೂರಿನ ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿ ಪುತ್ತೂರಿನ ಅಂಬಿಕಾ ಸಮೂಹ ಸಂಸ್ಥೆಯಿಂದ ಶಿಕ್ಷಣ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಕಾರ್ಗಿಲ್ ವಿಜಯೋತ್ಸವದ ಬೆಳ್ಳಿ ಹಬ್ಬ ಸಂಭ್ರಮನ್ನು ಜು.19ರಂದು ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಅದ್ಧೂರಿಯಾಗಿ ಹಮ್ಮಿಕೊಳ್ಳಲಾಗಿದೆ ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ ಹೇಳಿದರು.

Ad Widget

Ad Widget

Ad Widget

Ad Widget

ಉತ್ತರ ಪ್ರದೇಶ ಮೂಲದ ಪರಮವೀರ ಚಕ್ರ ಪುಸ್ಕಾರ ಪಡೆದ ಸಾಹಸಿ ಕ್ಯಾಪ್ಟನ್ ಯೋಗೀಂದ್ರ ಸಿಂಗ್ ಯಾದವ್ ಮಡಿಕೇರಿಯ ಅಪ್ರತಿಮ ಸಾಹಸಿ ನವೀನ್ ನಾಗಪ್ಪ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಅವರನ್ನು ದರ್ಬೆ ವೃತ್ತದಿಂದ ಮೆರವಣಿಗೆಯ ಮೂಲಕ ತೆರೆದ ವಾಹನದಲ್ಲಿ ಕಿಲ್ಲೆ ಮೈದಾನದವರೆಗೆ ಕರೆತರಲಾಗುತ್ತಿದೆ. ಸಾರ್ವಜನಿಕರಿಗೆ ಇಬ್ಬರು ಯೋಧರನ್ನು ಹಾರಾರ್ಪಣೆಯ ಮೂಲಕ ಗೌರವಿಸುವುದಕ್ಕೆ ಅವಕಾಶ ಕಲ್ಪಿಸಲಾಗಿದೆ. ಅಂಗಡಿ ಮುಂಗಟ್ಟುಗಳ ಮಾಲಿಕರು ಕಾರ್ಯಕ್ರಮ ಮುಗಿಯುವವರೆಗೆ ವ್ಯವಹಾರವನ್ನು ಸ್ಥಗಿತಗೊಳಿಸಿ ಕಾರ್ಗಿಲ್ ವಿಜಯೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗುವಂತೆ ವಿನಂತಿಸಲಾಗುತ್ತಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

Ad Widget

Ad Widget alt="Ad Widget"/>

Ad Widget

ಮಕ್ಕಳಲ್ಲಿ ದೇಶ ಪ್ರೇಮವನ್ನು ಬೆಳೆಸುವ ನಿಟ್ಟಿನಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಾಕಿಕೊಂಡು ಬರಲಾಗುತ್ತಿದ್ದು, ಕಾರ್ಗಿಲ್ ಬೆಳ್ಳಿ ಹಬ್ಬ ಕಾರ್ಯಕ್ರಮದ ಅಂಗವಾಗಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳು, ಶಾಲಾ ಶಿಕ್ಷಣ ಇಲಾಖೆ ಹಾಗೂ ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿ ಜಂಟಿಯಾಗಿ ದಕ್ಷಿಣ ಕನ್ನಡ, ಕೊಡಗು ಹಾಗೂ ಕಾಸರಗೋಡು ಜಿಲ್ಲೆಗಳ ಹೈಸ್ಕೂಲ್ ವಿದ್ಯಾರ್ಥಿಗಳಿಗಾಗಿ ಭಾಷಣ ಸ್ಪರ್ಧೆ ಹಾಗೂ ದೇಶಭಕ್ತಿ ಗೀತೆ ಸ್ಪರ್ಧೆಗಳನ್ನು ಆಯೋಜನೆ ಮಾಡಿದೆ. ಎರಡೂ ಸ್ಪರ್ಧೆಗಳಲ್ಲಿ ಪ್ರಥಮ ಬಹುಮಾನ ರೂಪಾಯಿ ಐದು ಸಾವಿರ ಹಾಗೂ ದ್ವಿತೀಯ ಬಹುಮಾನ ರೂಪಾಯಿ ಮೂರು ಸಾವಿರವನ್ನು ಸಮಾರಂಭದಲ್ಲಿ ನೀಡಲಾಗುವುದು. ದಕ್ಷಿಣ ಕನ್ನಡ ಜಿಲ್ಲೆ ಎಲ್ಲಾ ಮಾಜಿ ಸೈನಿಕರು ಕಾರ್ಯಕ್ರಮದಲ್ಲಿ ಯುನಿಫಾರಂ ಸಹಿತ ಬ್ಯಾಜ್ ನಲ್ಲಿ ಭಾಗವಹಿಸುವ ಮೂಲಕ ಇನ್ನಷ್ಟು ಮೆರುಗು ತುಂಬುವ ಕೆಲಸವಾಗಬೇಕು ಎಂದು ತಿಳಿಸಿದರು.

Ad Widget

Ad Widget <> Ad Widget

ಪೂರ್ವ ಸೈನಿಕ ಸಂಘದ ಅಧ್ಯಕ್ಷ ಎಂ. ಕೆ. ನಾರಾಯಣ ಭಟ್ ಮಾತನಾಡಿ ಕಾರ್ಗಿಲ್ ವಿಜಯೋತ್ಸವವನ್ನು ದಾಖಲಾರ್ಹ ಚರಿತ್ರೆಯಾಗಿ ರೂಪಿಸಬೇಕೆಂಬ ಇರಾದೆ ಅಂಬಿಕಾ ಶಿಕ್ಷಣ ಸಂಸ್ಥೆಗಳದ್ದು. ಈ ನೆಲೆಯಲ್ಲಿ ಜನಪ್ರತಿನಿಧಿಗಳು, ಅಧಿಕಾರಿ ವರ್ಗ, ವಿವಿಧ ಸರ್ಕಾರಿ ಇಲಾಖೆಗಳು, ಖಾಸಗಿ ಶಿಕ್ಷಣ ಸಂಸ್ಥೆಗಳು, ಪುತ್ತೂರಿನ ನಿವೃತ್ತ ಯೋಧರ ಸಂಘ, ವರ್ತಕರ ಸಂಘ, ಅಮರ್ ಜವಾನ್ ಜ್ಯೋತಿ ಸಂಕ್ಷರಣಾ ಸಮಿತಿ ಪುತ್ತೂರು, ರೋಟರಿ, ಲಯನ್ಸ್, ಜೇಸೀ ಮೊದಲಾದ ಸಮಾಜಸೇವಾ ಸಂಘಟನೆಗಳು ಮಾತ್ರವಲ್ಲದೆ ವಿವಿಧ ಸಂಘ ಸಂಸ್ಥೆಗಳನ್ನೊಳಗೊಂಡಂತೆ ಇಡಿಯ ಸಮಾಜವನ್ನು ಸೇರಿಸಿಕೊಂಡು ಕಾರ್ಯಕ್ರಮವನ್ನು ಕಿಲ್ಲೆ ಮೈದಾನದಲ್ಲಿ ಆಯೋಜಿಸಲಾಗಿದೆ. ಪುತ್ತೂರಿನ ಮಾಜಿ ಶಾಸಕರಾದ ಸಂಜೀವ ಮಠಂದೂರು, ಶಕುಂತಳಾ ಟಿ. ಶೆಟ್ಟಿ, ಸಹಾಯಕ ಆಯುಕ್ತ ಜುಬಿನ್ ಮೊಹಾಪಾತ್ರ, ನಗರಸಭಾ ಆಯುಕ್ತ ಮಧು ಎಸ್. ಮನೋಹರ್ ಭಾಗವಹಿಸಲಿದ್ದಾರೆ ಎಂದರು.

ಅAಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ರಾಜಶ್ರೀ ಎಸ್. ನಟ್ಟೋಜ, ಆಡಳಿತ ಮಂಡಳಿ ಸದಸ್ಯ ಸುರೇಶ್ ಶೆಟ್ಟಿ, ಸೈನಿಕ ಭವನ ಟ್ರಸ್ಟ್ ಅಧ್ಯಕ್ಷ ಜೋ ಡಿಸೋಜ ಉಪಸ್ಥಿತರಿದ್ದರು.

Click to comment

Leave a Reply

ಕಾರ್ಯಕ್ರಮಗಳು

Silver Jubilee-ಸವಣೂರು ವಿದ್ಯಾರಶ್ಮಿ ವಿದ್ಯಾಲಯಕ್ಕೆ 25ನೇ ವರ್ಷದ ಸಂಭ್ರಮ: ಡಿ.26ರಂದು ಬೆಳ್ಳಿಹಬ್ಬ ʻರಜತ ರಶ್ಮಿʼ; ಜ ಸಮಾಲೋಚನಾ ಸಭೆಯಲ್ಲಿ ಸವಣೂರು ಸೀತಾರಾಮ ರೈ ಘೋಷಣೆ

Published

on

Ad Widget

Ad Widget

Ad Widget

Ad Widget

ರಾಜ್ಯದಲ್ಲಿಯೇ ಶಿಕ್ಷಣ ಕ್ಷೇತ್ರದಲ್ಲಿ ಹೆಸರನ್ನು ಮಾಡಿರುವ ವಿದ್ಯಾಕಾಶಿ ಎಂದೇ ಪ್ರಸಿದ್ಧಿ ಪಡೆದಿರುವ ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಬೆಳ್ಳಿಹಬ್ಬ ಆಚರಣೆಯ ಸಮಾರಂಭ ರಜತ ರಶ್ಮಿ ದ. 26 ರಂದು ಅದ್ದೂರಿಯಾಗಿ ನಡೆಯಲಿದೆ ಎಂದು ಸಂಸ್ಥೆಯ ಸಂಚಾಲಕ ಸಹಕಾರರತ್ನ ಸವಣೂರು ಸೀತಾರಾಮ ರೈ ಹೇಳಿದರು.

Ad Widget

Ad Widget

Ad Widget

Ad Widget

ಪುತ್ತೂರು: ರಾಜ್ಯದಲ್ಲಿಯೇ ಶಿಕ್ಷಣ ಕ್ಷೇತ್ರದಲ್ಲಿ ಹೆಸರನ್ನು ಮಾಡಿರುವ ವಿದ್ಯಾಕಾಶಿ ಎಂದೇ ಪ್ರಸಿದ್ಧಿ ಪಡೆದಿರುವ ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಬೆಳ್ಳಿಹಬ್ಬ ಆಚರಣೆಯ ಸಮಾರಂಭ ರಜತ ರಶ್ಮಿ ದ. 26 ರಂದು ಅದ್ದೂರಿಯಾಗಿ ನಡೆಯಲಿದೆ ಎಂದು ಸಂಸ್ಥೆಯ ಸಂಚಾಲಕ ಸಹಕಾರರತ್ನ ಸವಣೂರು ಸೀತಾರಾಮ ರೈ ಹೇಳಿದರು.

Ad Widget

Ad Widget alt="Ad Widget"/>

Ad Widget

ನ. 24 ರಂದು ಸಂಸ್ಥೆಯ ಸಭಾಂಗಣದಲ್ಲಿ ಬೆಳ್ಳಿಹಬ್ಬ ಆಚರಣೆಯ ಸಮಾಲೋಚನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ನಮ್ಮ ಸಂಸ್ಥೆಯು 2001 ಮೇ 23 ರಂದು ಪ್ರಾರಂಭಗೊಂಡಿತು. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಅಂಗ್ಗಮಾಧ್ಯಮ ಶಿಕ್ಷಣದೊಂದಿಗೆ ಸಕಲ ಸೌಲಭ್ಯಗಳನ್ನು ಒಳಗೊಂಡ ವ್ಯವಸ್ಥೆಯನ್ನು ನೀಡುವುದರ ಜೊತೆಗೆ ರಾಜ್ಯದ ನಾನಾ ಜಿಲ್ಲೆಗಳ ವಿದ್ಯಾರ್ಥಿಗಳು ಕಲಿಕೆಗೆ ಇಲ್ಲಿಗೆ ಆಗಮಿಸಿ, ಉತ್ತಮ ಶಿಕ್ಷಣ ಪಡೆದು, ಇಂದು ದೇಶ-ವಿದೇಶಗಳಲ್ಲಿ ಉನ್ನತವಾದ ಹುದ್ದೆಗಳಲ್ಲಿ ಇದ್ದಾರೆ. ಇದು ನಮಗೆ ತುಂಬಾ ಸಂತೋಷದ ವಿಚಾರ, ಸಂಸ್ಥೆಯ ಬೆಳ್ಳಿಹಬ್ಬವನ್ನು ಅರ್ಥಪೂರ್ಣ ಕಾರ್‍ಯಕ್ರಮವಾಗಿ ರೂಪಿಸುವ ನಿಟ್ಟಿನಲ್ಲಿ ದ. 26 ರಂದು ಬೆಳಿಗ್ಗೆ ಸವಣೂರು ಬಸದಿ ವಠಾರದಿಂದ ಮುಖ್ಯರಸ್ತೆಯಾಗಿ ಸಂಸ್ಥೆಯ ವಠಾರಕ್ಕೆ ಅದ್ದೂರಿಯಾದ ಮೆರವಣಿಗೆಯನ್ನು ಆಯೋಜಿಸಲಿವೆ.

Ad Widget

Ad Widget <> Ad Widget

ಬಳಿಕ ಸಭಾ ಕಾರ್‍ಯಕ್ರಮ, ಸಾಂಸ್ಕೃತಿಕ ವೈವಿಧ್ಯಮಯ ಕಾರ್‍ಯಕ್ರಮವನ್ನು ಹಮ್ಮಿಕೊಳ್ಳಲಿವೆ ಎಂದು ಹೇಳಿದರು.

ವೈವಿಧ್ಯಮಯ 40 ಸ್ಟಾಲ್‌ಗಳು: ರಜತ ಸಂಭ್ರಮದ ನಿಟ್ಟಿನಲ್ಲಿ ನಾವು ಸಂಸ್ಥೆಯ ಅವರಣದಲ್ಲಿ 40 ಬಗೆಯ ವಿವಿಧ ಸ್ಟಾಲ್‌ಗಳನ್ನು ಹಾಕಲಿವೆ. ಈ ಸ್ಟಾಲ್‌ನಲ್ಲಿ ಜಿಲ್ಲೆಯ ವಿವಿಧ ಕಡೆಯಿಂದ ಅನೇಕ ಬಗೆಯ ವಸ್ತುಗಳ ಮಾರಾಟ, ಪ್ರದರ್ಶನ ಇರಲಿದೆ ಎಂದು ಸೀತಾರಾಮ ರೈ ತಿಳಿಸಿದರು.

Ad Widget

Ad Widget

ಮಾದರಿ ಕಾರ್‍ಯಕ್ರಮ ಆಗಬೇಕು-ಬಾಲ್ಯೊಟ್ಟು: `ರಜತರಶ್ಮಿ’ ಕಾರ್‍ಯಕ್ರಮದ ಗೌರವಾಧ್ಯಕ್ಷ ಎಸ್‌ಸಿಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿರುವ ಶಶಿಕುಮಾರ್ ರೈ ಬಾಲ್ಯೊಟ್ಟು ಅವರು ಮಾತನಾಡಿ ಕಾರ್‍ಯಕ್ರಮ ಸಂಘಟಿಸುವುದರಲ್ಲಿ ಸೀತಾರಾಮ ರೈ ಅವರು ಬಹಳಷ್ಟು ಹೆಸರನ್ನು ಪಡೆದಿದ್ದಾರೆ, ವಿದ್ಯಾರಶ್ಮಿ ವಿದ್ಯಾಲಯ ಮತ್ತು ಆದರ್ಶ ವಿವಿಧೋzಶ ಸಹಕಾರ ಸಂಸ್ಥೆಗಳನ್ನು ಸ್ಥಾಪಿಸಿರುವ ಸೀತಾರಾಮ ರೈ ಅವರನ್ನು ವಿದ್ಯಾರಶ್ಮಿ ಸಂಸ್ಥೆಯ ರಜತ ಸಂಭ್ರಮ ಕಾರ್‍ಯಕ್ರಮದಲ್ಲಿ ಸವಣೂರು ಬಸದಿ ವಠಾರದಿಂದ ವಿದ್ಯಾರಶ್ಮಿ ವಿದ್ಯಾಲಯದ ತನಕ ರಥದ ಮೂಲಕ ವೈಭವಯುತವಾದ ಮೆರವಣಿಗೆಯಲ್ಲಿ ಕರೆತರಲಾಗುವುದು, ಮೆರವಣಿಗೆಯನ್ನು ವಿಶೇಷ ರೀತಿಯಲ್ಲಿ ಆಯೋಜಿಸಲಾಗುವುದು.

ಕಲ್ಲಡ್ಕಗೊಂಬೆಗಳ ಕುಣಿತದೊಂದಿಗೆ ಮೆರವಣಿಗೆಯ ಮೆರಗು ಹೆಚ್ಚಲಿದೆ ಎಂದರು. ಸೀತಾರಾಮ ರೈ ಓರ್ವ ಸಾಧಕರು, ಅವರ ನೇತೃತೃದಲ್ಲಿ ನಡೆಯುವ ಸಂಸ್ಥೆಯ ಬೆಳ್ಳಿಹಬ್ಬ ಮಾದರಿ ಕಾರ್‍ಯಕ್ರಮವಾಗಬೇಕು ಎಂದು ಬಾಲ್ಯೊಟ್ಟು ಹೇಳಿದರು.

ನ್ಯಾಯವಾದಿ ಎನ್.ಜಯಪ್ರಕಾಶ್ ರೈ ಸುಳ್ಯ, ಪುತ್ತೂರು ಎಪಿಎಂಸಿ ಮಾಜಿ ಅಧ್ಯಕ್ಷ ದಿನೇಶ್ ಮೆದು, ಪ್ರಮುಖರಾದ ಪಿ.ಡಿ. ಕೃಷ್ಣಕುಮಾರ್ ರೈ ದೇವಸ್ಯ, ಸುದರ್ಶನ್ ನಾಕ್ ಕಂಪ, ಕುಸುಮಾ ಶೆಟ್ಟಿ ಕೆರೆಕ್ಕೋಡಿ, ಸುರೇಶ್ ರೈ ಸೂಡಿಮುಳ್ಳು, ಪತ್ರಕರ್ತ ದುರ್ಗಾಕುಮಾರ್ ನಾಯರ್‌ಕೆರೆ ವಿವಿಧ ಸಲಹೆ-ಸೂಚನೆಗಳನ್ನು ನೀಡಿದರು. ವೇದಿಕೆಯಲ್ಲಿ ವಿದ್ಯಾರಶ್ಮಿ ವಿದ್ಯಾಲಯದ ಟ್ರಸ್ಟಿಗಳಾದ ಎನ್.ಸುಂದರ ರೈ ಸವಣೂರು, ರಶ್ಮಿ ಅಶ್ವಿನ್ ಶೆಟ್ಟಿ ಸವಣೂರು, ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಡಾ| ರಾಜಲಕ್ಷ್ಮಿ ಎಸ್ ರೈ, ಸಂಸ್ಥೆಯ ರಕ್ಷಕ-ಶಿಕ್ಷಕ ಅಧ್ಯಕ್ಷ ಡಾ. ಜೀವನ್ ಪ್ರಕಾಶ್ ರೈ ಉಪಸ್ಥಿತರಿದ್ದರು.

ವಿದ್ಯಾರಶ್ಮಿ ವಿದ್ಯಾಲಯದ ಪ್ರಾಂಶುಪಾಲೆ ಶಶಿಕಲಾ ಎಸ್ ಆಳ್ವ ಸ್ವಾಗತಿಸಿ, ಉಪನ್ಯಾಸಕಿ ಕಸ್ತೂರಿ ವಂದಿಸಿದರು. ಶಿಕ್ಷಕಿ ಚೇತನಾ ಕಾರ್‍ಯಕ್ರಮ ನಿರೂಪಿಸಿದರು. ಉಪನ್ಯಾಸಕಿ ಪ್ರತಿಭಾ ಸ್ಮರಣ ಸಂಚಿಕೆ ತಯಾರಿಯ ಬಗ್ಗೆ ಮಾಹಿತಿ ನೀಡಿದರು. ಸಮಾರಂಭದಲ್ಲಿ ಜಿ.ಪಂ, ಮಾಜಿ ಸದಸ್ಯ ಶಿವಣ್ಣ ಗೌಡ ಇಡ್ಯಾಡಿ, ಸವಣೂರು ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಪ್ರಭಾಕರ್ ಶೆಟ್ಟಿ ನಡುಬೈಲು, ಸವಣೂರು ಬೊಳ್ಳಿಬೊಲ್ಪು ತುಳುಕೂಟದ ಅಧ್ಯಕ್ಷ ಸತೀಶ್ ಬಲ್ಯಾಯ ಕನ್ನಡಕುಮೇರು, ಸವಣೂರು ಗ್ರಾ.ಪಂ, ಮಾಜಿ ಅಧ್ಯಕ್ಷೆ ರಾಜೀವಿ ವಿ.ಶೆಟ್ಟಿ ಕೆಡೆಂಜಿ, ಸಂಗೀತ ಪ್ರತಿಭೆ ಅಖಿಲಾ ನೆಕ್ರಾಜೆ, ಶಾಲಾ ಎಸ್‌ಡಿಎಂಸಿ ಪದಾಧಿಕಾರಿಗಳು, ಶಿಕ್ಷಕರು ಹಾಗೂ ಪೋಷಕರು ಉಪಸ್ಥಿತರಿದ್ದರು.

ರಜತ ರಶ್ಮಿ ಊರಿನ ಹಬ್ಬ
ವಿದ್ಯಾರಶ್ಮಿ ವಿದ್ಯಾಲಯದ ರಜತ ಸಂಭ್ರಮದ ಬೆಳ್ಳಿಹಬ್ಬ `ರಜತ ರಶ್ಮಿ’ ದ. 26 ರಂದು ದಿನಪೂರ್ತಿ ಅದ್ದೂರಿಯಾಗಿ ನಡೆಯಲಿದೆ. ಈ ಸುಂದರವಾದ ಕಾರ್‍ಯಕ್ರಮ ಅರ್ಥಪೂರ್ಣ ರೀತಿಯಲ್ಲಿ ನಡೆಯುವಲ್ಲಿ ಸಂಸ್ಥೆಯಲ್ಲಿ ಕಲಿತ ಹಿರಿಯ ವಿದ್ಯಾರ್ಥಿಗಳು, ಊರ-ಪರವೂರ ಹಿತೈಷಿಗಳ ಪೂರ್ಣ ಸಹಕಾರ ಅಗತ್ಯ ಇದೆ. ರಜತ ರಶ್ಮಿ ಕಾರ್‍ಯಕ್ರಮ ಊರಿನ ಹಬ್ಬದಂತೆ ಆಗಲಿದೆ.
-ಸವಣೂರು ಸೀತಾರಾಮ ರೈ, ಸಂಚಾಲಕರು, ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳು ಸವಣೂರು

Ad Widget
Continue Reading

ಕಾರ್ಯಕ್ರಮಗಳು

Puttur-ಪುತ್ತೂರು: ನ.27ರಂದು ಅತ್ಯಾಧುನಿಕ ಬಹುಮಹಡಿ ವಾಣಿಜ್ಯ ಸೌಧ ‘ದ್ವಾರಕಾ ಕಮರ್ಶಿಯಲ್ಸ್’ ಲೋಕಾರ್ಪಣೆ; ಒಂದೇ ಸೂರಿನಡಿ ಹೈಪರ್ ಮಾರ್ಕೆಟ್‌ ಸಹಿತ ಹಲವು ಸೇವೆಗಳು

Published

on

Ad Widget

Ad Widget

Ad Widget

Ad Widget

ನಿರ್ಮಾಣ ಕ್ಷೇತ್ರದಲ್ಲಿ ಕಳೆದ 22 ವರ್ಷಗಳಿಂದ ತನ್ನದೇ ಆದ ಛಾಪು ಮೂಡಿಸಿರುವ ದ್ವಾರಕಾ ಸಂಸ್ಥೆಯು ಪುತ್ತೂರಿನ ದರ್ಬೆಯಲ್ಲಿ ಸ್ವಂತ ನಿವೇಶನದಲ್ಲಿ ನಿರ್ಮಿಸಿರುವ ಅತ್ಯಾಧುನಿಕ ವಾಣಿಜ್ಯ ಸೌಧ ‘ದ್ವಾರಕಾ ಕಮರ್ಶಿಯಲ್ಸ್’ ನ.27ರಂದು ಲೋಕಾರ್ಪಣೆಗೊಳ್ಳಲಿದೆ. ಬೆಳಿಗ್ಗೆ 10 ಗಂಟೆಗೆ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಒಂದೇ ಸೂರಿನಡಿ ವಿವಿಧ ಸಂಸ್ಥೆಗಳ ಸೇವೆಗಳನ್ನು ಸಾರ್ವಜನಿಕರಿಗೆ ಒದಗಿಸುವ ಪರಿಕಲ್ಪನೆಯೊಂದಿಗೆ ಈ ವಾಣಿಜ್ಯ ಸೌಧ ರೂಪುಗೊಂಡಿದೆ.

Ad Widget

Ad Widget

Ad Widget

Ad Widget

ಪುತ್ತೂರು: ನಿರ್ಮಾಣ ಕ್ಷೇತ್ರದಲ್ಲಿ ಕಳೆದ 22 ವರ್ಷಗಳಿಂದ ತನ್ನದೇ ಆದ ಛಾಪು ಮೂಡಿಸಿರುವ ದ್ವಾರಕಾ ಸಂಸ್ಥೆಯು ಪುತ್ತೂರಿನ ದರ್ಬೆಯಲ್ಲಿ ಸ್ವಂತ ನಿವೇಶನದಲ್ಲಿ ನಿರ್ಮಿಸಿರುವ ಅತ್ಯಾಧುನಿಕ ವಾಣಿಜ್ಯ ಸೌಧ ‘ದ್ವಾರಕಾ ಕಮರ್ಶಿಯಲ್ಸ್’ ನ.27ರಂದು ಲೋಕಾರ್ಪಣೆಗೊಳ್ಳಲಿದೆ. ಬೆಳಿಗ್ಗೆ 10 ಗಂಟೆಗೆ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಒಂದೇ ಸೂರಿನಡಿ ವಿವಿಧ ಸಂಸ್ಥೆಗಳ ಸೇವೆಗಳನ್ನು ಸಾರ್ವಜನಿಕರಿಗೆ ಒದಗಿಸುವ ಪರಿಕಲ್ಪನೆಯೊಂದಿಗೆ ಈ ವಾಣಿಜ್ಯ ಸೌಧ ರೂಪುಗೊಂಡಿದೆ ಎಂದು ದ್ವಾರಕಾ ಕಾರ್ಪೊರೇಷನ್ ಪ್ರೈವೇಟ್ ಲಿಮಿಟೆಡ್‌ನ ಆಡಳಿತ ನಿರ್ದೇಶಕ ಗೋಪಾಲಕೃಷ್ಣ ಭಟ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

Ad Widget

Ad Widget alt="Ad Widget"/>

Ad Widget

ನಿರ್ಮಾಣ ಕ್ಷೇತ್ರದಲ್ಲಿ ಎರಡು ದಶಕಗಳಿಗೂ ಅಧಿಕ ಪಯಣ ನಡೆಸಿರುವ ಸಂಸ್ಥೆಯು ಆರಂಭದಲ್ಲಿ ಪಡೀಲು ಬಾಳಪ್ಪ ಕಾಂಪ್ಲೆಕ್ಸ್, ಬೊಳುವಾರು, ಕಬಕ ಹಾಗೂ ಸರ್ಕಾರಿ ನೌಕರರ ಕಟ್ಟಡದಲ್ಲಿ ಕಚೇರಿ ಹೊಂದಿ ಕಾರ್ಯಾಚರಿಸುತ್ತಿತ್ತು. ಇದೀಗ ಸ್ವಂತ ಕಟ್ಟಡದಲ್ಲಿ ಸಂಸ್ಥೆಯ ಕಚೇರಿ ಆರಂಭವಾಗುತ್ತಿರುವುದು ಸಂತಸದ ವಿಚಾರ. ಗ್ರಾಹಕರು ಹಾಗೂ ಸಾರ್ವಜನಿಕರಿಗೆ ಒಂದೇ ಸೂರಿನಡಿ ವಿವಿಧ ಸೇವೆಗಳನ್ನು ಒದಗಿಸುವುದು ನಮ್ಮ ಪ್ರಮುಖ ಉದ್ದೇಶವಾಗಿದೆ ಎಂದು ಅವರು ಹೇಳಿದರು.

Ad Widget

Ad Widget <> Ad Widget

ಗಣ್ಯರ ಉಪಸ್ಥಿತಿಯಲ್ಲಿ ಉದ್ಘಾಟನೆ
ನೂತನ ವಾಣಿಜ್ಯ ಸೌಧದ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ದ್ವಾರಕಾ ಪ್ರತಿಷ್ಠಾನದ ಗೌರವಾಧ್ಯಕ್ಷ ಹರಿಕೃಷ್ಣ ಭಟ್ ಅರ್ತ್ಯಡ್ಕ ವಹಿಸಲಿದ್ದಾರೆ. ಶಾಸಕ ಅಶೋಕ್ ಕುಮಾರ್ ರೈ, ವಿಧಾನಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು, ಶಿಕ್ಷಣ ಕರ್ಮಯೋಗಿ ಪದ್ಮಶ್ರೀ ಡಾ. ಹರೇಕಳ ಹಾಜಬ್ಬ, ರಾಜ್ಯ ಸಹಕಾರ ಮಹಾಮಂಡಲದ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು, ವಿದ್ಯಾರಶ್ಮಿ ಸಮೂಹ ವಿದ್ಯಾಸಂಸ್ಥೆಗಳ ಸಂಚಾಲಕ ಸವಣೂರು ಕೆ. ಸೀತಾರಾಮ ರೈ, ಮಾಸ್ಟರ್ ಪ್ಲಾನರಿ ಸಂಸ್ಥೆಯ ಎಸ್.ಕೆ. ಆನಂದ ಕುಮಾರ್, ಹಿರಿಯ ಉದ್ಯಮಿ ಮಂಜುನಾಥ್ ನಾಯಕ್, ಐಶ್ವರ್ಯ ಕನ್‌ಸ್ಟ್ರಕ್ಷನ್‌ನ ರಘುರಾಮ ಭಟ್ ಉಪ್ಪಂಗಳ, ಸಂತ ಫಿಲೋಮಿನಾ ಕಾಲೇಜಿನ ಪ್ರಾಂಶುಪಾಲ ರೆ. ಡಾ. ಆ್ಯಂಟನಿ ಪ್ರಕಾಶ್ ಮೊಂತೇರೋ, ಹಿಂದೂ ಸಂಘಟನೆ ಮುಖಂಡ ಅರುಣ್ ಕುಮಾರ್ ಪುತ್ತಿಲ, ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಜಯಂತ ನಡುಬೈಲು, ಪುತ್ತೂರು ನಗರ ಅಭಿವೃದ್ಧಿ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಅಮಳ ರಾಮಚಂದ್ರ, ಮಹತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ, ನಗರಸಭೆ ಪೌರಾಯುಕ್ತೆ ವಿದ್ಯಾ ಎಂ. ಕಾಳೆ, ಪುತ್ತೂರು ನಗರ ಯೋಜನಾ ಪ್ರಾಧಿಕಾರದ ಕಾರ್ಯದರ್ಶಿ ಗುರುಪ್ರಸಾದ್ ಎ.ಬಿ. ಹಾಗೂ ಹೋಟೆಲ್ ಅಶ್ವಿನಿ ಮಾಲಕ ಕರುಣಾಕರ ರೈ ದೇರ್ಲ ಅಭ್ಯಾಗತರಾಗಿ ಭಾಗವಹಿಸಲಿದ್ದಾರೆ ಎಂದು ಗೋಪಾಲಕೃಷ್ಣ ಭಟ್ ವಿವರಿಸಿದರು.

‘ದ್ವಾರಕಾ ಮಂಗಲ್ ಹೈಪರ್ ಮಾರ್ಕೆಟ್’ ಪ್ರಮುಖ ಆಕರ್ಷಣೆ
ನಾಲ್ಕು ಅಂತಸ್ತಿನ ಈ ವಾಣಿಜ್ಯ ಸೌಧದ ನೆಲಹಂತ ಹಾಗೂ ಮೊದಲ ಮಹಡಿಯಲ್ಲಿ ದ್ವಾರಕಾ ಮಂಗಲ್ ಹೈಪರ್ ಮಾರ್ಕೆಟ್ ಕಾರ್ಯಾಚರಿಸಲಿದೆ. ಇಲ್ಲಿ ದ್ವಾರಕಾ ಹಾಲಿನ ಉತ್ಪನ್ನಗಳು, ತರಕಾರಿ, ದಿನಸಿ ಸಾಮಗ್ರಿಗಳು, ಹಣ್ಣು, ಚಾಟ್ಸ್, ಜ್ಯೂಸ್, ಕೂಲ್‌ಝೋನ್, ಬೇಕರಿ ತಿನಿಸುಗಳು, ಸ್ಟೇಶನರಿ ಸೇರಿದಂತೆ ಗ್ರಾಹಕರ ನಿತ್ಯ ಬಳಕೆಯ ನೂರಾರು ವಸ್ತುಗಳು ಮಿತದರದಲ್ಲಿ ಲಭ್ಯವಾಗಲಿವೆ.

Ad Widget

Ad Widget

ಎರಡನೇ ಮಹಡಿಯಲ್ಲಿ ಹಾರ್ಡ್‌ವೇರ್, ಸ್ಯಾನಿಟರಿ, ಟೈಲ್ಸ್, ಪೇಂಟ್ಸ್, ಯುನಿಸೆಕ್ಸ್ ಸಲೂನ್, ಡೆಂಟಲ್ ಕ್ಲಿನಿಕ್, ಸಾಫ್ಟ್‌ವೇರ್ ಸಂಸ್ಥೆ, ಚಾರ್ಟರ್ಡ್ ಅಕೌಂಟೆಂಟ್ ಕಚೇರಿ ಹಾಗೂ ಟೆಕ್ಸ್‌ಟೈಲ್ಸ್ ಮಳಿಗೆಗಳು ಕಾರ್ಯನಿರ್ವಹಿಸಲಿವೆ.

ಮೂರನೇ ಮಹಡಿಯಲ್ಲಿ ದ್ವಾರಕಾ ಸಮೂಹ ಸಂಸ್ಥೆಗಳ ಪ್ರಧಾನ ಕಚೇರಿ ಇರಲಿದ್ದು, ನಾಲ್ಕನೇ ಮಹಡಿಯಲ್ಲಿ ಸುಮಾರು 200 ಮಂದಿ ಆಸೀನರಾಗಬಹುದಾದ ಸುಸಜ್ಜಿತ ಸಭಾಂಗಣ ನಿರ್ಮಿಸಲಾಗಿದೆ.

ಆಧುನಿಕ ಸೌಲಭ್ಯಗಳೊಂದಿಗೆ ಸುಸಜ್ಜಿತ ಕಟ್ಟಡ
ಗ್ರಾಹಕರು ಹಾಗೂ ಸಾರ್ವಜನಿಕರ ಅನುಕೂಲಕ್ಕಾಗಿ ಕಟ್ಟಡದ ಬೇಸ್‌ಮೆಂಟ್‌ನಲ್ಲಿ ವಿಶಾಲ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದ್ದು, ಸುಮಾರು 20 ಕಾರುಗಳನ್ನು ನಿಲುಗಡೆ ಮಾಡಬಹುದಾಗಿದೆ. ಕಟ್ಟಡದಲ್ಲಿ ಲಿಫ್ಟ್ ವ್ಯವಸ್ಥೆ ಸೇರಿದಂತೆ ವಿವಿಧ ಆಧುನಿಕ ಸೌಲಭ್ಯಗಳನ್ನು ಒದಗಿಸಲಾಗಿದೆ.

Ad Widget
Continue Reading

ಕಾರ್ಯಕ್ರಮಗಳು

Puttur-ಡಿ.8ರಂದು ಪುತ್ತೂರು ದೀಪೋತ್ಸವ: ನಾಳೆ ದೇವಸ್ಥಾನ ವಠಾರದಲ್ಲಿ ಕಾರ್ಯಾಲಯ ಉದ್ಘಾಟನೆ

Published

on

Ad Widget

Ad Widget

Ad Widget

Ad Widget

ಧಾರ್ಮಿಕತೆ, ಸಂಸ್ಕೃತಿ ಹಾಗೂ ಸಾಮಾಜಿಕ ಸಾಮರಸ್ಯದ ಸಂದೇಶ ಸಾರುವ ಉದ್ದೇಶದಿಂದ ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದಲ್ಲಿ ಡಿ.8ರಂದು ದೇವರಮಾರು ಗದ್ದೆಯಲ್ಲಿ ನಡೆಯಲಿರುವ ‘ಪುತ್ತೂರು ದೀಪೋತ್ಸವ-2026’ ಕಾರ್ಯಕ್ರಮದ ಕಾರ್ಯಾಲಯ ಉದ್ಘಾಟನೆ ನ.25ರಂದು ಬೆಳಗ್ಗೆ 10.10ಕ್ಕೆ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಧಾರ್ಮಿಕತೆ, ಸಂಸ್ಕೃತಿ ಹಾಗೂ ಸಾಮಾಜಿಕ ಸಾಮರಸ್ಯದ ಸಂದೇಶ ಸಾರುವ ಉದ್ದೇಶದಿಂದ ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದಲ್ಲಿ ಡಿ.8ರಂದು ದೇವರಮಾರು ಗದ್ದೆಯಲ್ಲಿ ನಡೆಯಲಿರುವ ‘ಪುತ್ತೂರು ದೀಪೋತ್ಸವ-2026’ ಕಾರ್ಯಕ್ರಮದ ಕಾರ್ಯಾಲಯ ಉದ್ಘಾಟನೆ ನ.25ರಂದು ಬೆಳಗ್ಗೆ 10.10ಕ್ಕೆ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ.

Ad Widget

Ad Widget alt="Ad Widget"/>

Ad Widget

ಮಂಗಳೂರಿನ ಕಟೀಲ್ ಲಾಜಿಸ್ಟಿಕ್ಸ್ ಉದ್ಯಮಿ ಜನಾರ್ದನ ಪೂಜಾರಿ ಪದಡ್ಕ ಅವರು ಕಾರ್ಯಾಲಯವನ್ನು ಉದ್ಘಾಟಿಸಲಿದ್ದು, ಉದ್ಯಮಿಗಳಾದ ರಾಧಾಸ್‌ನ ಪ್ರಕಾಶ್ ಕಾಮತ್, ಶಿವರಾಮ ಆಳ್ವ ಬಳ್ಳಮಜಲುಗುತ್ತು ಹಾಗೂ ದರ್ಬೆ ಕಾರ್ತಿಕ್ ಮೆಡಿಕಲ್ಸ್‌ನ ವೇಣುಗೋಪಾಲ್ ಪಿ.ಎಲ್. ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

Ad Widget

Ad Widget <> Ad Widget

ವಿಜಯ ಬ್ಯಾಂಕ್‌ನ ನಿವೃತ್ತ ಎ.ಜಿ.ಎಂ. ಜಗಜೀವನದಾಸ್ ರೈ, ವಿಜಯ ಬ್ಯಾಂಕ್‌ನ ನಿವೃತ್ತ ಪ್ರಬಂಧಕ ಜೈರಾಜ್ ಭಂಡಾರಿ ನೋಣಾಲು ಹಾಗೂ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮಾಜಿ ವ್ಯವಸ್ಥಾಪನಾ ಸಮಿತಿ ಸದಸ್ಯ ರವೀಂದ್ರನಾಥ ರೈ ಬಳ್ಳಮಜಲು ಗೌರವ ಉಪಸ್ಥಿತರಿರುವರು.

ಕಾರ್ಯಕ್ರಮದಲ್ಲಿ ಸಮಿತಿಯ ಎಲ್ಲಾ ಸದಸ್ಯರು ಭಾಗವಹಿಸುವಂತೆ ಪುತ್ತೂರು ದೀಪೋತ್ಸವ ಸಮಿತಿ ಅಧ್ಯಕ್ಷ ಎನ್. ರವೀಂದ್ರ ಶೆಟ್ಟಿ ನುಳಿಯಾಲು ಹಾಗೂ ಸ್ವಾಗತ ಸಮಿತಿ ಅಧ್ಯಕ್ಷ ಪದ್ಮನಾಭ ಶೆಟ್ಟಿ ವಿನಂತಿಸಿದ್ದಾರೆ.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!