ಶಿಕ್ಷಣ
Deviprasad K. N.-ಹಸಿರು ವಾತಾವರಣ ನಮ್ಮದಾಗಬೇಕು-ಡಾ. ದೇವಿಪ್ರಸಾದ್ ಕೆ. ಎನ್.
ಪುತ್ತೂರು.ಜು,15: ಶುದ್ಧವಾದ ಗಾಳಿ,ಒಳ್ಳೆಯ ವಾತಾವರಣ ನಮಗೆ ದೊರಕಬೇಕೆಂದರೆ ಅಲ್ಲಿ ಸಸ್ಯಗಳ ಸಂಖ್ಯೆ ಹೆಚ್ಚಾಗಿರಬೇಕು.ಕಾಲೇಜು ಆವರಣ ಹಸಿರು ಸಸ್ಯಗಳಿಂದ ಕೂಡಿರಬೇಕು ಹಾಗೂ ಜ್ಞಾನದ ಜೊತೆಗೆ ಸಸ್ಯ ಸಂಪತ್ತನ್ನು ಬೆಳೆಸುವ ಜವಾಬ್ದಾರಿ ನಮ್ಮದಾಗಬೇಕು.ಹಸಿರಾದ ಪರಿಸರ ಕಣ್ಣಿಗೆ ಹೇಗೆ ಹಿತವೋ ಹಾಗೆಯೇ ಆರೋಗ್ಯಕ್ಕೂ ಒಳ್ಳೆಯದು , ಇದರಿಂದ ವಾಯುಮಾಲಿನ್ಯವನ್ನು ತಡೆಯಬಹುದು ಎಂದು ವಿವೇಕಾನಂದ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಡಾ.ದೇವಿಪ್ರಸಾದ್ ಕೆ.ಎನ್ ಹೇಳಿದರು.

ಇವರು ಪುತ್ತೂರಿನ ವಿವೇಕಾನಂದ ಸಮೂಹ ಸಂಸ್ಥೆಗಳ ಸಹಯೋಗದೊಂದಿಗೆ ನಡೆದ ವಿವೇಕ ಸಂಜೀವಿನಿ ಹಸಿರು ಆವರಣ ಅಭಿಯಾನ ಉದ್ಘಾಟನಾ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮಾತನಾಡಿದರು.
ಈ ಸಂದರ್ಭದಲ್ಲಿ ವಿವೇಕಾನಂದ ಪದವಿ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಎ.ವಿ. ನಾರಾಯಣ್ ಮಾತನಾಡಿ,ಗಿಡಗಳನ್ನು ನೆಡುವುದರ ಮೂಲಕ ಪರಿಸರವನ್ನು ಸಂರಕ್ಷಿಸಬೇಕೇ ಹೊರತು ಅದನ್ನು ತಮ್ಮ ಸ್ವಾರ್ಥಕ್ಕಾಗಿ ಬಳಸಿಕೊಂಡು ಪರಿಸರವನ್ನು ಹಾಳುಮಾಡಬಾರದು. ಮಾನವ ಜೀವ ಸಂಕುಲಗಳನ್ನು ನಾಶ ಮಾಡುವುದರ ಜೊತೆಗೆ ಭೂಮಿಯ ವಿಕೋಪಕ್ಕೂ ಬಲಿಯಾಗುತ್ತಿದ್ದಾನೆ ಆದುದರಿಂದ ಗಿಡಗಳನ್ನು ಬೆಳೆಸಿ ನಾಡನ್ನು ಉಳಿಸಿ ಎಂದು ವಿದ್ಯಾರ್ಥಿಗಳಿಗೆ ಸಲಹೆಯನ್ನು ನೀಡಿದರು.
ಕಾರ್ಯಕ್ರಮವನ್ನು ಗಿಡನೆಡುವುದರ ಮೂಲಕ ಉದ್ಘಾಟಿಸಲಾಯಿತು. ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ. ಕೆ ಎಂ.ಕೃಷ್ಣ ಭಟ್ ಪ್ರಾಸ್ತಾವಿಕ ನುಡಿಗಳನ್ನಾಡಿದರು.
ಕಾರ್ಯಕ್ರಮವನ್ನು ವಿವೇಕಾನಂದ ಫಾರ್ಮಸಿ ಕಾಲೇಜಿನ ಪ್ರಾಂಶುಪಾಲ ಡಾ.ಗುರುರಾಜ್ ಸ್ವಾಗತಿಸಿ, ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಎನ್ಎಸ್ಎಸ್ ಘಟಕದ ಸಂಯೋಜಕಿ ಪ್ರೊ.ನಿಶಾ ಜಿ.ಆರ್ ವಂದಿಸಿ, ಇಂಜಿನಿಯರಿAಗ್ ಕಾಲೇಜಿನ ಪ್ರಯೋಗಾಲಯ ಬೋಧಕ ಹರಿಪ್ರಸಾದ್ . ಡಿ ನಿರ್ವಹಿಸಿದರು. ಕಾಲೇಜಿನ ಆಡಳಿತ ಮಂಡಳಿ ಸದಸ್ಯರು ಪ್ರಾಂಶುಪಾಲರು,ಉಪನ್ಯಾಸಕ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು
ಶಿಕ್ಷಣ
Vivekananda-ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ – ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ
ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಬೆಟ್ಟಂಪಾಡಿ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣ ದಲ್ಲಿ ನಡೆಯಿತು. ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಬೆಟ್ಟಂಪಾಡಿ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣ ದಲ್ಲಿ ನಡೆಯಿತು. ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ತಂಡದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ ಧನುಷ್ ಎಸ್, ಯಶಸ್ ಎಚ್ . ಸಿ ದ್ವಿತೀಯ ಪಿಯುಸಿ ಗಗನ್ ಕೆ.ಎನ್, ತೇಜಸ್ ಟಿ. ಆರ್, ಜಶ್ವಂತ್ ಗೌಡ, ಧನುಷ್ ಕೆ . ಎಚ್, ಆಕಾಶ್ ಭಾಗವಹಿಸಿರುತ್ತಾರೆ.
ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್ ,ಡಾ .ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ .ಇವರನ್ನು ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗೂ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.
ಶಿಕ್ಷಣ
Taekwondo Competition-ಟೇಕ್ವಾಂಡೋ ಸ್ಪರ್ಧೆ: ಸಂತ ಫಿಲೋಮಿನಾ ಪ ಪೂ ಕಾಲೇಜಿನ ಮೊಹಮ್ಮದ್ ಶಾಜ್ ಗೆ ಪ್ರಶಸ್ತಿ
ಸೆ 30 ರಂದು ಚಿಕ್ಕಮಗಳೂರು ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣ ಜ್ಯೋತಿನಗರದಲ್ಲಿ ನಡೆದ ‘ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ 2026 – 27’ ಟೇಕ್ವಾಂಡೋ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಮೊಹಮ್ಮದ್ ಶಾಜ್ ಕಂಚಿನ ಪದಕವನ್ನು ಪಡೆದುಕೊಂಡಿರುತ್ತಾರೆ.
ಪುತ್ತೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಚಿಕ್ಕಮಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಚಿಕ್ಕಮಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ಸೆ 30 ರಂದು ಚಿಕ್ಕಮಗಳೂರು ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣ ಜ್ಯೋತಿನಗರದಲ್ಲಿ ನಡೆದ ‘ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ 2026 – 27’ ಟೇಕ್ವಾಂಡೋ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಮೊಹಮ್ಮದ್ ಶಾಜ್ ಕಂಚಿನ ಪದಕವನ್ನು ಪಡೆದುಕೊಂಡಿರುತ್ತಾರೆ.
ಇವರು ಉಪ್ಪಿನಂಗಡಿ ನಿವಾಸಿ ಮೊಹಮ್ಮದ್ ಮುಸ್ತಫಾ ಮತ್ತು ಸೌಧ ದಂಪತಿಗಳ ಪುತ್ರ.
ಇವರಿಗೆ ಶಿಹಾಬ್ ಟಿ ತರಬೇತಿ ನೀಡಿರುತ್ತಾರೆ.
ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ. ಅಶೋಕ್ ರಾಯನ್ ಕ್ರಾಸ್ತಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ದೈಹಿಕ ಶಿಕ್ಷಣ ನಿರ್ದೇಶಕರಾದ ರಾಜೇಶ್ ಮೂಲ್ಯ ಉಪಸ್ಥಿತರಿದ್ದರು.
ಶಿಕ್ಷಣ
Vivekananda-ರಾಷ್ಟ್ರಮಟ್ಟದ ಭೌತಶಾಸ್ತ್ರ ಸ್ಪರ್ಧೆಯಲ್ಲಿ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿಯ ಸಾಧನೆ..!
ಪುತ್ತೂರು: ವಿವೇಕಾನಂದ ಮಹಾವಿದ್ಯಾಲಯ (ಸ್ವಾಯತ್ತ) ಇದರ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿ ಶ್ರೀಹರಿ ಶರ್ಮಾ ನೋಯ್ಡಾದ ಆಮಿಟಿ ಯುನಿವರ್ಸಿಟಿಯಲ್ಲಿ ಇಂಡಿಯನ್ ಅಸೋಸಿಯೇಷನ್ ಆಫ್ ಫಿಸಿಕ್ಸ್ ಟೀರ‍್ಸ್ (ಐಎಪಿಟಿ) ಸಂಸ್ಥೆಯ ಸಹಯೋಗದೊಂದಿಗೆ ನಡೆದ ರಾಷ್ಟ್ರಮಟ್ಟದ ಭೌತಶಾಸ್ತ್ರ ಸ್ಪರ್ಧೆ National Competition for Innovative Experiments in Physics (NCIEP)ನಲ್ಲಿ “Electromagnetic Shock-Absorber for the Real-Time Landing of Reusable Spacecraft” ಎಂಬ ಭೌತಶಾಸ್ತ್ರದ ಮಾದರಿಯನ್ನು ಸ್ಪರ್ಧೆಯಲ್ಲಿ ಪ್ರಸ್ತುತಪಡಿಸುವ ಮೂಲಕ ಗಮನಾರ್ಹ ಸಾಧನೆ ಮಾಡಿದ್ದಾರೆ.

ಅಕ್ಟೋಬರ್ 4ರಿಂದ 6ರವರೆಗೆ ನಡೆದ 40ನೇ IAPT Annual Conventionನಲ್ಲಿ ಇವರು ಪದವಿ ಮತ್ತು ಸ್ನಾತಕೋತ್ತರ ವಿಭಾಗದಲ್ಲಿ ಭಾಗವಹಿಸಿದ್ದರು. ದೇಶದ ವಿವಿಧ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳು, ಐಐಟಿಗಳು ಹಾಗೂ ವಿಶ್ವವಿದ್ಯಾಲಯಗಳ ಒಟ್ಟು 118 ಮಾದರಿಗಳ ಪೈಕಿ 12ಮಾದರಿಗಳು ಸ್ಪರ್ಧೆಗೆ ಆಯ್ಕೆಯಾಗಿದ್ದವು.
ಕರ್ನಾಟಕದಿಂದ ಪ್ರಸ್ತುತಪಡಿಸಲು ಆಯ್ಕೆಯಾದ ಏಕೈಕ ಮಾದರಿ ಇವರದ್ದಾಗಿತ್ತು. ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೋ. ಶಿವಪ್ರಸಾದ್ ಕೆ.ಎಸ್. ಈ ಮಾದರಿ ತಯಾರಿಕೆಯಲ್ಲಿ ಮಾರ್ಗದರ್ಶನ ನೀಡಿರುದ್ದಾರೆ. ಈ ಸಾಧನೆಗೆ ಆಡಳಿತ ಮಂಡಳಿ, ಪ್ರಾಂಶುಪಾಲರು, ಶಿಕ್ಷಕ ಮತ್ತು ಶಿಕ್ಷಕೇತರ ವೃಂದ ಮತ್ತು ವಿದ್ಯಾರ್ಥಿಗಳು ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.
-
ಬಿಗ್ ನ್ಯೂಸ್21 hours agoKaavu-BIG BREAKING: ಕಾವು ಬಳಿ ಹೆದ್ದಾರಿಗೆ ಉರುಳಿದ ಮರಗಳು, ಹೈಟೆನ್ಷನ್ ವಿದ್ಯುತ್ ಕಂಬ : ಮಾಣಿ – ಮೈಸೂರು ಹೈವೆಯಲ್ಲಿ ವಾಹನ ಸಂಚಾರ ಸ್ಥಗಿತ
-
ಮಂಗಳೂರು23 hours agoMangalore-ಮಂಗಳೂರು : 2 ತಿಂಗಳ ಬಳಿಕ ಸಮಾಧಿಯಿಂದ ಹೊರಬರಲಿದೆ ಆಲ್ಬರ್ಟ್ ರೇಗೋ ಶವ..!; ಮಗಳಿಂದಲೇ ತಂದೆಯ ಕೊಲೆ : ಸ್ನೇಹಿತನ ಆರೋಪ – ತನಿಖೆಗೆ ಸಿಗಲಿದೆ ಮಹತ್ವದ ತಿರುವು
-
ಅಪರಾಧ21 hours agoPuttur-ಪುತ್ತೂರು: ಅಕ್ರಮ ಗೋ ಸಾಗಾಟ ಪ್ರಕರಣ; ಪರಾರಿಯಾಗಿದ್ದ ಇಬ್ಬರು ವಶಕ್ಕೆ, ಆರೋಪಿ ಶಿವಪ್ರಸಾದ್ ಮನೆ ಮಹಜರು?
-
ಮಂಗಳೂರು22 hours agoMRPL accident-MRPL ಅವಘಡದಲ್ಲಿ ಮೃತಪಟ್ಟ ಕರ್ಕಡ ಕುಟುಂಬಕ್ಕೆ EPFO ಕ್ಲೈಮ್ ಸಂದಾಯ
-
ಅಪರಾಧ23 hours agoMangalore-ವಾಟರ್ ಪ್ಯೂರಿಫೈಯರ್ ಒಳಗೆ ಕೋಟ್ಯಾಂತರ ರೂ ಮೌಲ್ಯದ ಡ್ರಗ್ಸ್- ಕೋರಿಯರ್ ಮೂಲಕ ಸಾಗಾಟ | ಪೊಲೀಸರ ಕಣ್ಣಿಗೆ ಮಣ್ಣೆರೆಚುವ ಯತ್ನ ಮಂಗಳೂರಿನಲ್ಲಿ ವಿಫಲ – ಮೂವರ ಬಂಧನ..!
-
ಸ್ಥಳೀಯ23 hours agoNavoor clinic-ನಾವೂರು ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ: ಘಟನಾ ಸ್ಥಳಕ್ಕೆ ಎಎಸ್ಪಿ ಭೇಟಿ, ಪರಿಶೀಲನೆ
-
ಶಿಕ್ಷಣ22 hours agoVivekananda-ರಾಷ್ಟ್ರಮಟ್ಟದ ಭೌತಶಾಸ್ತ್ರ ಸ್ಪರ್ಧೆಯಲ್ಲಿ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿಯ ಸಾಧನೆ..!
-
ನಿಧನ ವಾರ್ತೆ4 hours agoMumbai-ಪ್ರೀತಿಸಿ ಮದುವೆಯಾಗಿದ್ದ ಜೋಡಿಯ ದುರಂತ ಅಂತ್ಯ? ಸರಪಳಿಯಿಂದ ಕಾಲು ಕಟ್ಟಿದ ಸ್ಥಿತಿಯಲ್ಲಿ ಶವ ಪತ್ತೆ




















