ಸ್ಥಳೀಯ
Chikkaballapura-ಟೊಮೆಟೊ ತೋಟದಲ್ಲಿ ನಟಿಯರ ದೃಷ್ಟಿಬೊಂಬೆ ನೇತುಹಾಕಿದ ರೈತ
ಚಿಕ್ಕಬಳ್ಳಾಪುರ, ಜು 16: ದೃಷ್ಟಿ ದೋಷ ಹೆಚ್ಚಾಗಿ ನಮ್ಮ ಗ್ರಾಮೀಣ ಭಾಗಗಳಲ್ಲಿ ಕಂಡು ಬರುತ್ತದೆ. ಅದರಂತೆ ಕಟ್ಟಡಗಳ ಮುಂದೆ, ರಸ್ತೆ, ತೋಟಕ್ಕೆ ಯಾರ ದೃಷ್ಟಿಯಾಗಬಾರದು ಎಂದು ವಿಕಾರವಾದ ದೃಷ್ಟಿಗೊಂಬೆ ಹಾಕಲಾಗುತ್ತದೆ. ಪ್ರಾಣಿಗಳು ಬಂದು ಬೆಳೆ ಹಾಳು ಮಾಡಬಾರದು ಎಂದು ಕೆಲವರು ಹೊಲ, ಗದ್ದೆಗಳಲ್ಲಿ ಮನುಷ್ಯ ರೀತಿ ಇರುವ ಪ್ರತಿಕೃತಿಯನ್ನು ತಯಾರಿಸಿ ಹಾಕುತ್ತಾರೆ.
ಆದರೆ ಚಿಕ್ಕಬಳ್ಳಾಪುರದ ರೈತರೊಬ್ಬರು ತಮ್ಮ ಟೊಮೆಟೊ ತೋಟದ ಮೇಲೆ ಯಾರ ವಕ್ರ ದೃಷ್ಟಿಯೂ ಬೀಳಬಾರದು ಎಂದು ದೃಷ್ಟಿ ದೋಷ ನಿವಾರಣೆಗೆ ರಚಿತಾ ರಾಮ್ ಹಾಗೂ ಮಾದಕ ನಟಿ ಸನ್ನಿ ಲಿಯೋನ್ ಫೋಟೋ ನೇತುಹಾಕಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಹಂಡಿಗನಾಳ ಗ್ರಾಮದ ಯುವ ರೈತ ದೀಪಕ್ ಎನ್ನುವರು ತಮ್ಮ 5 ಎಕರೆ ಭೂಮಿಯಲ್ಲಿ ಟೊಮೆಟೊ ಬೆಳೆದಿದ್ದು, ಇನ್ನೇನು ಕಾಯಿ ಬಿಡುವ ಸಮಯವಿದೆ. ಹೀಗಾಗಿ ಟೊಮೆಟೊ ಬೆಳೆ ಮೇಲೆ ಯಾರ ಕೆಟ್ಟ ಕಣ್ಣು ಬೀಳದಿರಲಿ, ಒಳ್ಳೆಯ ಫಸಲು ಬಂದು ಒಳ್ಳೆ ಲಾಭ ಸಿಗಲಿ ಎನ್ನುವ ಕಾರಣಕ್ಕೆ ದೃಷ್ಟಿ ಬೊಂಬೆ ಬದಲು ನಟಿಯರ ಭಾವಚಿತ್ರದ ಅಳವಡಿಸಿದ್ದಾರೆ.
ಟೊಮೆಟೊ ಪ್ರತಿ ಕ್ವಿಂಟಲ್ ಸುಮಾರು 3,500 ರೂ.ಗೆ ಚಿಕ್ಕಬಳ್ಳಾಪುರದಲ್ಲಿ ಮಾರಾಟವಾಗುತ್ತಿದೆ. ಹೀಗಾಗಿ ಯುವ ರೈತ ಒಳ್ಳೆ ಫಸಲು ಬರುವ ವಿಶ್ವಾಸದಲ್ಲಿದ್ದು, ಯಾರ ಕೆಟ್ಟ ಕಣ್ಣ ಬೀಳದಂತೆ ನಟಿಯರ ಫೋಟೋಗಳನ್ನು ನೇತಾಕಿದ್ದಾನೆ. ಇದು ನೋಡಗರ ಅಚ್ಚರಿಗೆ ಕಾರಣವಾಗಿದೆ.
ಕರ್ನಾಟಕದಲ್ಲಿ ಸನ್ನಿ ಲಿಯೋನ್ಗೆ ಅಭಿಮಾನಿಗಳು ಹಾಗೂ ಅಭಿಮಾನಿಗಳ ಸಂಘಗಳು ಇವೆ. ಜಾತ್ರೆ, ಹಬ್ಬಕ್ಕೆ ಸನ್ನಿ ಲಿಯೋನ್ ಅಭಿಮಾನಿಗಳ ಸಂಘವು ಸಹ ಬ್ಯಾನರ್ ಹಾಕಿದ್ದನ್ನು ಇಲ್ಲಿ ಸ್ಮರಿಸಬಹುದು.
ಆರೋಗ್ಯ
Puttur-ಪುತ್ತೂರು: ಸಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರ
ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.
ಪುತ್ತೂರು: ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.
ಬೆನ್ನು ನೋವು, ಮೊಣಕಾಲು ನೋವು, ಸೊಂಟ ನೋವು ಹಾಗೂ ಸ್ನಾಯು ನೋವು ಮುಂತಾದ ಸಮಸ್ಯೆಗಳು ಮೂಳೆ ಸವೆತ ಅಥವಾ ಮುಂದಿನ ದಿನಗಳಲ್ಲಿ ಮೂಳೆ ಮುರಿತಕ್ಕೆ ಕಾರಣವಾಗುವ ಸಾಧ್ಯತೆಯಿದೆ. ಇಂತಹ ಲಕ್ಷಣಗಳನ್ನು ನಿರ್ಲಕ್ಷಿಸದೆ ಆರಂಭದಲ್ಲೇ ತಪಾಸಣೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆಯುವುದು ಅಗತ್ಯ. ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಉಚಿತ BMD ಶಿಬಿರವನ್ನು ಆಯೋಜಿಸಲಾಗಿತ್ತು. ಆರೋಗ್ಯ ಸೇವಾ ವಿಭಾಗದ ಇಂಡ್ಕೆಮಿ ಹೆಲ್ತ್ ಸ್ಪೆಷಾಲಿಟಿ ಪ್ರೈವೇಟ್ ಲಿಮಿಟೆಡ್ ಪ್ರಾಯೋಜಕತ್ವದಲ್ಲಿ ಶಿಬಿರ ನಡೆಯಿತು.
ಶಿಬಿರದಲ್ಲಿ ಮೂಳೆ ತಜ್ಞರಾದ ಡಾ. ಭಾಸ್ಕರ್ ಎಸ್. (D’Ortho), ಆಡಳಿತ ನಿರ್ದೇಶಕರು, ಪುತ್ತೂರು ಸಿಟಿ ಆಸ್ಪತ್ರೆ ಇವರು ತಪಾಸಣೆ ಹಾಗೂ ಸಲಹೆ ನೀಡಿದರು.
ಇನ್ನರ್ ವೀಲ್ ಕ್ಲಬ್ ನ ನಿರ್ದೇಶಕಿ ಮಂಜುಳ ಭಾಸ್ಕರ್, ಅಧ್ಯಕ್ಷೆ ಮನೋರಮಾ ಸೂರ್ಯ, ಖಜಾಂಜಿ ಕವಿತಾ ಕೊಳತ್ತಾಯ, ಕಾರ್ಯದರ್ಶಿ ಶ್ರುತಿ ಎಸ್. ಬಂಗೇರ ಶಿಬಿರದಲ್ಲಿ ಉಪಸ್ಥಿತರಿದ್ದರು.
ಬಿಗ್ ನ್ಯೂಸ್
Puttur-ಎಸ್ಡಿಪಿಐ ನಿರಂತರ ಪ್ರಯತ್ನ: ಪುತ್ತೂರಿನ ಅಲ್ಪಸಂಖ್ಯಾತರ ಸೇವಾ ಕೇಂದ್ರ ಪುನರಾರಂಭ
ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ. ಕೇಂದ್ರವನ್ನು ಪುನರಾರಂಭಿಸುವಂತೆ ಎಸ್ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು.
ಪುತ್ತೂರು: ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ.
ಕೇಂದ್ರವನ್ನು ಪುನರಾರಂಭಿಸುವಂತೆ ಎಸ್ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು. ಸಾರ್ವಜನಿಕರಿಗೆ ಅನುಕೂಲವಾಗುವ ಈ ಸೇವಾ ಕೇಂದ್ರವನ್ನು ಮತ್ತೆ ಆರಂಭಿಸಬೇಕೆಂದು ಸಮಿತಿಯು ಒತ್ತಾಯಿಸಿತ್ತು.
ಈ ನಡುವೆ, ಕೇಂದ್ರಕ್ಕೆ ಸಂಬಂಧಿಸಿದ ಕಟ್ಟಡವನ್ನು ಹಾಸ್ಟೆಲ್ ಬಳಕೆಗೆ ಪರಿವರ್ತಿಸಲು ಪುತ್ತೂರು ಶಾಸಕರು ಪ್ರಯತ್ನಿಸಿದ್ದರು ಎಂಬ ವಿಚಾರ ವಿವಾದಕ್ಕೆ ಕಾರಣವಾಗಿತ್ತು.
ಇದೀಗ ಮೂರು ವರ್ಷಗಳ ಬಳಿಕ ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಮತ್ತೆ ಕಾರ್ಯಾರಂಭ ಮಾಡಿದ್ದು, ಸಾರ್ವಜನಿಕರಿಗೆ ಸೇವೆ ಲಭ್ಯವಾಗಿರುವುದಾಗಿ ಎಸ್ಡಿಪಿಐ ಪುತ್ತೂರು ನಗರ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.
ಶಿಕ್ಷಣ
RTE-ಆರ್ಟಿಇ ಅಡಿ ಉಚಿತ ಶಿಕ್ಷಣಕ್ಕೆ ಆದಾಯ ಮಿತಿ ಹೆಚ್ಚಿಸಿದ ರಾಜ್ಯ ಸರಕಾರ: 3.5 ಲಕ್ಷ ರೂ.ನಿಂದ 8 ಲಕ್ಷ ರೂ.ಗೆ ಏರಿಕೆ
ಶಿಕ್ಷಣ ಹಕ್ಕು ಕಾಯ್ದೆ (ಆರ್ಟಿಇ) ಅಡಿಯಲ್ಲಿ ಖಾಸಗಿ ಶಾಲೆಗಳಲ್ಲಿ ಉಚಿತ ಪ್ರವೇಶ ಪಡೆಯಲು ಪೋಷಕರ ವಾರ್ಷಿಕ ಆದಾಯದ ಮಿತಿಯನ್ನು ರಾಜ್ಯ ಸರಕಾರ ಹೆಚ್ಚಿಸಿದೆ. ಈ ಹಿಂದೆ ಇದ್ದ 3.5 ಲಕ್ಷ ರೂ. ಆದಾಯ ಮಿತಿಯನ್ನು ಇದೀಗ 8 ಲಕ್ಷ ರೂ.ಗೆ ಏರಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ.
ಬೆಂಗಳೂರು: ಶಿಕ್ಷಣ ಹಕ್ಕು ಕಾಯ್ದೆ (ಆರ್ಟಿಇ) ಅಡಿಯಲ್ಲಿ ಖಾಸಗಿ ಶಾಲೆಗಳಲ್ಲಿ ಉಚಿತ ಪ್ರವೇಶ ಪಡೆಯಲು ಪೋಷಕರ ವಾರ್ಷಿಕ ಆದಾಯದ ಮಿತಿಯನ್ನು ರಾಜ್ಯ ಸರಕಾರ ಹೆಚ್ಚಿಸಿದೆ. ಈ ಹಿಂದೆ ಇದ್ದ 3.5 ಲಕ್ಷ ರೂ. ಆದಾಯ ಮಿತಿಯನ್ನು ಇದೀಗ 8 ಲಕ್ಷ ರೂ.ಗೆ ಏರಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ.
ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆಯಡಿ ಆರ್ಥಿಕವಾಗಿ ದುರ್ಬಲ ಹಾಗೂ ಹಿಂದುಳಿದ ವರ್ಗಗಳ ಮಕ್ಕಳಿಗೆ ಖಾಸಗಿ ಶಾಲೆಗಳಲ್ಲಿ ಪ್ರವೇಶ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಆದರೆ, ಪೋಷಕರ ವಾರ್ಷಿಕ ಆದಾಯದ ಮಿತಿ 3.5 ಲಕ್ಷ ರೂ.ಗೆ ಸೀಮಿತವಾಗಿದ್ದ ಕಾರಣ ಹಲವು ಕುಟುಂಬಗಳು ಈ ಯೋಜನೆಯ ಪ್ರಯೋಜನದಿಂದ ವಂಚಿತರಾಗುತ್ತಿದ್ದರು.
ಈ ಹಿನ್ನೆಲೆಯಲ್ಲಿ ಹೆಚ್ಚಿನ ಕುಟುಂಬಗಳ ಮಕ್ಕಳಿಗೂ ಆರ್ಟಿಇ ಸೌಲಭ್ಯ ದೊರೆಯುವಂತೆ ಮಾಡಲು ಆದಾಯದ ಮಿತಿಯನ್ನು 8 ಲಕ್ಷ ರೂ.ಗೆ ಹೆಚ್ಚಿಸುವ ನಿರ್ಧಾರ ಕೈಗೊಳ್ಳಲಾಗಿದೆ. ಈ ಮೂಲಕ ಆರ್ಟಿಇ ಪ್ರವೇಶಕ್ಕೆ ದೇಶದಲ್ಲೇ ಅತ್ಯಧಿಕ ವಾರ್ಷಿಕ ಆದಾಯ ಮಿತಿಯನ್ನು ನಿಗದಿಪಡಿಸಿದ ರಾಜ್ಯವಾಗಿ ಕರ್ನಾಟಕ ಹೊರಹೊಮ್ಮಿದೆ.
ಆರ್ಟಿಇ ಕಾಯ್ದೆಯ ಪ್ರಕಾರ ಖಾಸಗಿ ಅನುದಾನರಹಿತ ಶಾಲೆಗಳಲ್ಲಿ ಶೇ.25ರಷ್ಟು ಸೀಟುಗಳನ್ನು ಆರ್ಥಿಕವಾಗಿ ದುರ್ಬಲ ಹಾಗೂ ಹಿಂದುಳಿದ ವರ್ಗಗಳ ಮಕ್ಕಳಿಗೆ ಮೀಸಲಿಡುವುದು ಕಡ್ಡಾಯವಾಗಿದೆ. ಈ ಮೀಸಲು ಸೀಟುಗಳಲ್ಲಿ ಪ್ರವೇಶ ಪಡೆಯುವ ಅರ್ಹ ಮಕ್ಕಳ ಶಿಕ್ಷಣದ ಶುಲ್ಕವನ್ನು ಸರಕಾರವೇ ಭರಿಸುತ್ತದೆ.
-
ಬಿಗ್ ನ್ಯೂಸ್8 hours agoPuttur-ಪುತ್ತೂರು: ದರ್ಬೆಯಲ್ಲಿ ಭೀಕರ ಕಾರು ಅಪಘಾತ: ಓರ್ವ ಮೃತ್ಯು, ಮತ್ತೊಬ್ಬರಿಗೆ ಗಂಭೀರ ಗಾಯ
-
Uncategorized7 hours agoPuttur-ಪುತ್ತೂರು: ಕೃಷ್ಣನಗರದಲ್ಲಿ ಮನೆ ಕಳ್ಳತನ- 2.19 ಲಕ್ಷ ರೂ. ಮೌಲ್ಯದ ಸೊತ್ತು ಕಳವು
-
ಬಿಗ್ ನ್ಯೂಸ್8 hours agoTransfer-ರಾಜ್ಯ ಪೊಲೀಸ್ ಇಲಾಖೆಯಲ್ಲಿ ಭಾರಿ ಬದಲಾವಣೆ: 32 ಐಪಿಎಸ್ ಅಧಿಕಾರಿಗಳ ವರ್ಗಾವಣೆ – ಪಶ್ಚಿಮ ವಲಯ ಐಜಿಪಿಯಾಗಿ ಶಶಿಕುಮಾರ್
-
ಮಂಗಳೂರು8 hours agoFarmers-ಕೋಳಿ ಫಾರಂಗಳಿಂದ ಹೆಚ್ಚುತ್ತಿರುವ ನೊಣಗಳು : ಕಂಪನಿಗಳ ವಿರುದ್ಧ ಹೋರಾಟಕ್ಕೆ ರೈತರು ಸಜ್ಜು
-
ರಾಜಕೀಯ6 hours agoPuttur-ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ: ಬೂಡಿಯಾರು; ಶಾಸಕರು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆಯುವುದು ಮಾತ್ರ : ಸಾಜ
-
ಶಿಕ್ಷಣ24 hours agoNarendra-ನರೇಂದ್ರ ಪ.ಪೂ. ಕಾಲೇಜಿನಲ್ಲಿ ಕರ್ನಾಟಕದ ಏಕೀಕರಣ ಕುರಿತಾಗಿ ವಿದ್ಯಾರ್ಥಿಗಳಿಂದ ವಿಚಾರಗೋಷ್ಠಿ
-
ಅಂತರ ರಾಜ್ಯ5 hours agoToll Plaza-ವಾಹನ ಸವಾರರೇ ಗಮನಿಸಿ; ಇನ್ಮುಂದೆ ಟೋಲ್ನಲ್ಲೇ ವಾಹನ ವಿಮೆ ಪರಿಶೀಲನೆ: ಅವಧಿ ಮುಗಿದಿದ್ದರೆ ಮೊಬೈಲ್ಗೆ SMS, 10 ಸಾವಿರ ರೂ.ವರೆಗೆ ದಂಡ..!
-
ಬಿಗ್ ನ್ಯೂಸ್6 hours agoPuttur-ಪುತ್ತೂರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘಕ್ಕೆ ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿ

















