Connect with us

ಶಿಕ್ಷಣ

Dr. H. Madhava Bhat-ಅಂಬಿಕಾದಲ್ಲಿ ಅಂತರ್ ಜಿಲ್ಲಾ ಮಟ್ಟದ ದೇಶಭಕ್ತಿ ಹಾಗೂ ಭಾಷಣ ಸ್ಪರ್ಧೆ; ಉತ್ತಮರ ಸಹವಾಸದಿಂದ ವ್ಯಕ್ತಿತ್ವ ನಿರ್ಮಾಣ ಸಾಧ್ಯ : ಡಾ.ಎಚ್.ಮಾಧವ ಭಟ್

Published

on



Ad Widget

Ad Widget

Ad Widget

Ad Widget

ಪುತ್ತೂರು : ಪ್ರತಿಯೊಬ್ಬರ ಬದುಕಿನಲ್ಲಿಯೂ ಸ್ಮೃತಿ ಮತ್ತು ವಿಸ್ಮೃತಿಗಳು ಬರುವುದು ಸಹಜ. ಒಳ್ಳೆಯ ವಿಚಾರಗಳನ್ನು ಸದಾ ಮನಸ್ಸಿಟ್ಟು ಕೇಳಿ ಅದನ್ನು ನೆನಪಿಟ್ಟುಕೊಳ್ಳುವುದು ಹಾಗೆಯೇ ಋಣಾತ್ಮಕ ಅಂಶಗಳನ್ನು ಮರೆತುಬಿಡುವುದನ್ನು ಮಾಡಲೇಬೇಕು. ಒಳ್ಳೆಯ ನಡೆ ನುಡಿ ಆಚಾರ ವಿಚಾರ ಬಲ್ಲವನ ಸಹವಾಸ ಮಾಡುವುದರಿಂದ ನಮ್ಮ ವ್ಯಕ್ತಿತ್ವ ಬೆಳಗುತ್ತದೆ ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಯ ಸದಸ್ಯ, ವಿಶ್ರಾಂತ ಪ್ರಾಚಾರ್ಯ ಡಾ. ಎಚ್ ಮಾಧವ ಭಟ್ ಹೇಳಿದರು.

Ad Widget

Ad Widget

Ad Widget

Ad Widget

ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ಮಹಾವಿದ್ಯಾಲಯದಲ್ಲಿ ಅಂಬಿಕಾ ಪದವಿಪೂರ್ವ ವಿದ್ಯಾಲಯಗಳ ವತಿಯಿಂದ ಕಾರ್ಗಿಲ್ ವಿಜಯೋತ್ಸವದ ೨೫ನೆಯ ವರ್ಷಾಚರಣೆ ಹಿನ್ನೆಲೆಯಲ್ಲಿ ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲಾ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ ಭಾಷಣ ಹಾಗೂ ದೇಶಭಕ್ತಿ ಗೀತೆಯ ಸ್ಪರ್ಧೆಗಳನ್ನು ಉದ್ಘಾಟಿಸಿ ಸೋಮವಾರ ಮಾತನಾಡಿದರು.

Ad Widget

Ad Widget

Ad Widget alt="Ad Widget"/>

Ad Widget

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಆಡಳಿತ ಮಂಡಳಿಯ ಮತ್ತೋರ್ವ ಸದಸ್ಯ ಸುರೇಶ್ ಶೆಟ್ಟಿ ಮಾತನಾಡಿ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ ಬೆಳೆಯಬೇಕು. ಯಾವುದೇ ಸ್ಪರ್ಧೆಯಲ್ಲಿ ವಿಜಯಿಯಾಗುವುದು ಮುಖ್ಯವಲ್ಲ ಹೊರತಾಗಿ ಭಾಗವಹಿಸುವುದು ಮುಖ್ಯ. ಸಮಾನತೆಯ ಭಾವವನ್ನಿರಿಸಿ ಧನಾತ್ಮಕ ಚಿಂತನೆಯೊAದಿಗೆ ಎಲ್ಲರೂ ಭಾಗವಹಿಸಿದಾಗ ಅತ್ಯುತ್ತಮ ಅನುಭವ ನಮ್ಮದಾಗುತ್ತದೆ ಎಂದರು.

Ad Widget

Ad Widget <> Ad Widget

ಅಧ್ಯಕ್ಷತೆ ವಹಿಸಿದ್ದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ ಮಾತನಾಡಿ ನಮ್ಮಲ್ಲಿ ರಾಷ್ಟಿçÃಯ ಚಿಂತನೆಗಳು ಬೆಳೆಯಬೇಕು. ಈ ನಿಟ್ಟಿನಲ್ಲಿ ಅಂಬಿಕಾ ಹೊಸ ಯೋಚನೆ – ಯೋಜನೆಗಳ ಮೂಲಕ ದೇಶಭಕ್ತಿಯನ್ನು ಸಾರುವ ಕೆಲಸವನ್ನು ನಿರಂತರವಾಗಿ ಮಾಡಿಕೊಂಡು ಬಂದಿದೆ ಎಂದರು.



Ad Widget

ವೇದಿಕೆಯಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ರಾಜಶ್ರೀ ಎಸ್ ನಟ್ಟೋಜ ಉಪಸ್ಥಿತರಿದ್ದರು. ನೆಲ್ಲಿಕಟ್ಟೆ ಅಂಬಿಕಾ ಪದವಿ ಪೂರ್ವ ಕಾಲೇಜಿನ ಪ್ರಾಶುಪಾಲ ಸತ್ಯಜಿತ್ ಉಪಾಧ್ಯಾಯ ಪ್ರಸ್ತಾವನೆಗೈದು ಸ್ವಾಗತಿಸಿದರು. ಭೌತಶಾಸ್ತ್ರ ಉಪನ್ಯಾಸಕ ಸುಬ್ರಮಣ್ಯ ಪ್ರಾರ್ಥಿಸಿದರು. ಕನ್ನಡ ಉಪನ್ಯಾಸಕ ಸತೀಶ್ ಇರ್ದೆ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಸಭಾ ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳಿಗೆ ಸ್ಪರ್ಧೆಗಳನ್ನು ನಡೆಸಲಾಯಿತು.

Click to comment

Leave a Reply

ಶಿಕ್ಷಣ

Vivekananda-ವಿವೇಕಾನಂದ ಪಾಲಿಟೆಕ್ನಿಕ್‌ನಲ್ಲಿ “ಯೂನಿಮೆಕ್ ಏರೋಸ್ಪೇಸ್” ಸಂಸ್ಥೆ ವತಿಯಿಂದ ಕ್ಯಾಂಪಸ್ ಸಂದರ್ಶನ

Published

on



Ad Widget

Ad Widget

Ad Widget

Ad Widget

ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮೆಕ್ಯಾನಿಕಲ್ ಮತ್ತು ಆಟೋಮೊಬೈಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಿಗಾಗಿ ಬೆಂಗಳೂರಿನ “ಯೂನಿಮೆಕ್ ಏರೋಸ್ಪೇಸ್” ಸಂಸ್ಥೆಯ ವತಿಯಿಂದ ಕ್ಯಾಂಪಸ್ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿತ್ತು. ಈ ಪ್ರಕ್ರಿಯೆಯಲ್ಲಿ 14 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.

Ad Widget

Ad Widget

Ad Widget

Ad Widget

ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮೆಕ್ಯಾನಿಕಲ್ ಮತ್ತು ಆಟೋಮೊಬೈಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಿಗಾಗಿ ಬೆಂಗಳೂರಿನ “ಯೂನಿಮೆಕ್ ಏರೋಸ್ಪೇಸ್” ಸಂಸ್ಥೆಯ ವತಿಯಿಂದ ಕ್ಯಾಂಪಸ್ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿತ್ತು. ಈ ಪ್ರಕ್ರಿಯೆಯಲ್ಲಿ 14 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಲಿಖಿತ ಪರೀಕ್ಷೆ ಹಾಗೂ ನೇರ ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಯಿತು. ಕಂಪನಿಯ ಹೆಚ್.ಆರ್. ಅಧಿಕಾರಿ ಸುನಿಲ್ ಹಾಗೂ ನೇಮಕಾತಿ ಅಧಿಕಾರಿ ಸಂತೋಷ್.ವಿ.ಜೋಸ್ ಸಂದರ್ಶನ ಪ್ರಕ್ರಿಯೆಯನ್ನು ನಡೆಸಿಕೊಟ್ಟರು.

Ad Widget

Ad Widget <> Ad Widget

ಕಾಲೇಜಿನ ಹಿರಿಯ ವಿದ್ಯಾರ್ಥಿಯೂ ಆಗಿರುವ ಸಂತೋಷ್.ವಿ.ಜೋಸ್ ಅವರು ವಿದ್ಯಾರ್ಥಿಗಳಿಗೆ ಉತ್ತಮ ವೃತ್ತಿ ಜೀವನ ರೂಪಿಸಿಕೊಳ್ಳುವ ಕುರಿತು ಮತ್ತು ಭವಿಷ್ಯದ ಅವಕಾಶಗಳ ಬಗ್ಗೆ ವಿವರಿಸಿದರು.



Ad Widget

ಈ ಸಂದರ್ಭದಲ್ಲಿ ಸಂಸ್ಥೆಯ ಪ್ಲೇಸ್‌ಮೆಂಟ್ ವಿಭಾಗದ ಅಧಿಕಾರಿ ಉಷಾಕಿರಣ್ ಹಾಗೂ ಮೆಕ್ಯಾನಿಕಲ್ ಮತ್ತು ಆಟೋಮೊಬೈಲ್ ಇಂಜಿನಿಯರಿಂಗ್ ವಿಭಾಗದ ಬೋಧಕ, ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

Continue Reading

ಶಿಕ್ಷಣ

Ambika-ಅಂಬಿಕಾ ವಿದ್ಯಾಲಯದ ಸಿಬಿಎಸ್‌ಇ ಸಂಸ್ಥೆಯಲ್ಲಿ ಯೋಧ ಗೌರವ ಕಾರ್ಯಕ್ರಮ; ಸೈನಿಕರ ಪ್ರಾಣರಕ್ಷಣೆಗೆ ಆಧುನಿಕ ತಂತ್ರಜ್ಞಾನಗಳಿವೆ – ಸುಂದರ ಪೂಜಾರಿ

Published

on



Ad Widget

Ad Widget

Ad Widget

Ad Widget

ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ. ಸಂಸ್ಥೆಯಲ್ಲಿ ಶನಿವಾರ ಆಯೋಜಿಸಲಾದ ಗೌರವ ಕಾರ್ಯಕ್ರಮದಲ್ಲಿ ಭಾಗವಹಿಸಿ ಸನ್ಮಾನ ಸ್ವೀಕರಿಸಿದ ದೇಶದ ಗಡಿ ಭದ್ರತಾ ಪಡೆಯಲ್ಲಿ ಸತತವಾಗಿ 34 ವರ್ಷಗಳ ಸೇವೆಯನ್ನು ಸಲ್ಲಿಸಿ ನಿವೃತ್ತಿ ಹೊಂದಿ ಮರಳಿ ಊರಿಗೆ ಆಗಮಿಸಿದ ಸುಂದರ ಪೂಜಾರಿ ಅವರು ಮಾತನಾಡಿದರು.

Ad Widget

Ad Widget

Ad Widget

Ad Widget

ಪುತ್ತೂರು: ಈಗಿನ ದಿನಮಾನಗಳಲ್ಲಿ ಸೈನ್ಯದ ಎಲ್ಲಾ ವಿಭಾಗಗಳಲ್ಲೂ ಸೈನಿಕರ ಪ್ರಾಣಕ್ಕೆ ಅಪಾಯವಾಗದಂತೆ ತಡೆಯಲು ತಂತ್ರಜ್ಞಾನ ಸಹಾಯಕವಾಗಿದೆ. ಸೈನಿಕರ ಪ್ರಾಣಕ್ಕೆ ತೊಂದರೆಯಾಗಬಾರದೆನ್ನುವ ಕಾರಣದಿಂದ ಕರ್ತವ್ಯದ ಸಮಯದಲ್ಲಿ ಸೈನಿಕರು ಎಲ್ಲಿದ್ದರೂ ಮಿಲಿಟರಿ ವ್ಯವಸ್ಥೆಗೆ ಸೂಚನೆ ಸಿಗುವ ತಂತ್ರಜ್ಞಾನವಿದೆ ಎಂದು ದೇಶದ ಗಡಿ ಭದ್ರತಾ ಪಡೆಯಲ್ಲಿ ಸತತವಾಗಿ 34 ವರ್ಷಗಳ ಸೇವೆಯನ್ನು ಸಲ್ಲಿಸಿ ಜುಲೈ 31ರಂದು ನಿವೃತ್ತಿ ಹೊಂದಿ ಮರಳಿ ಊರಿಗೆ ಆಗಮಿಸಿದ ಸುಂದರ ಪೂಜಾರಿ ಹೇಳಿದರು.

Ad Widget

Ad Widget

Ad Widget alt="Ad Widget"/>

Ad Widget

ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ. ಸಂಸ್ಥೆಯಲ್ಲಿ ಶನಿವಾರ ಆಯೋಜಿಸಲಾದ ಗೌರವ ಕಾರ್ಯಕ್ರಮದಲ್ಲಿ ಭಾಗವಹಿಸಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.

Ad Widget

Ad Widget <> Ad Widget

ದೇಶಸೇವೆ ಮಾಡಲು ಸೈನ್ಯಕ್ಕೆ ಸೇರುವುದು ಒಂದು ಉತ್ತಮ ಸಾಧ್ಯತೆ. ಹಾಗೆಂದು ಸೈನ್ಯಕ್ಕೆ ಸೈನಿಕರಾಗಿಯೇ ಸೇರಬೇಕೆಂದಿಲ್ಲ. ವೈದ್ಯರಾಗಿಯೂ, ಅಭಿಯಂತರರಾಗಿಯೂ, ತಂತ್ರಜ್ಞರಾಗಿಯೂ ಕೂಡ ಸೇವೆಯನ್ನು ಸಲ್ಲಿಸಲು ಅವಕಾಶಗಳಿವೆ ಎಂದರಲ್ಲದೆ ತಮ್ಮ ದೀರ್ಘಕಾಲದ ಅನುಭವದ ಸಾರವನ್ನು ವಿದ್ಯಾಥಿಗಳೊಂದಿಗೆ ಹಂಚಿಕೊಂಡರು.



Ad Widget

ಅಧ್ಯಕ್ಷತೆ ವಹಿಸಿದ್ದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜ ಮಾತನಾಡಿ ಸೈನಿಕರು ಕೇವಲ ಯುದ್ಧದ ಸಂದರ್ಭದಲ್ಲಿ ಮಾತ್ರವಲ್ಲದೆ ಪ್ರಾಕೃತಿಕ ವಿಕೋಪಗಳ ಸಂದರ್ಭದಲ್ಲಿಯೂ ಜನರನ್ನು ರಕ್ಷಿಸುವ ಕಾರ್ಯದಲ್ಲಿ ನಿರತರಾಗುತ್ತಾರೆ. ತಮ್ಮ ಕುಟುಂಬವನ್ನು ಬಿಟ್ಟು ಸಮಾಜದ ವಿವಿಧ ಕುಟುಂಬಗಳ ರಕ್ಷಣೆಗಾಗಿ ತಮ್ಮನ್ನು ಮುಡಿಪಾಗಿಟ್ಟುಕೊಳ್ಳುತ್ತಾರೆ. ಹಾಗಾಗಿ ನಾವು ಎಲ್ಲೇ ಹೋಗಲಿ, ಎಷ್ಟೇ ದೂರ ಪ್ರಯಾಣಿಸಲಿ ನಮ್ಮ ಹೆಮ್ಮೆಯ ಸೈನಿಕರನ್ನು ಗೌರವಿಸುವುದು ನಮ್ಮೆಲ್ಲರ ಕರ್ತವ್ಯ ಹಾಗೂ ಜವಾಬ್ದಾರಿಯಾಗಿದೆ. ಆದ್ದರಿಂದ ಅಂಬಿಕಾ ವಿದ್ಯಾಸಂಸ್ಥೆಯು ಕೇವಲ ಆಡಳಿತ ಮಂಡಳಿ, ಶಿಕ್ಷಕರು, ಪೋಷಕರು ಹಾಗೂ ವಿದ್ಯಾರ್ಥಿಗಳನ್ನು ಒಳಗೊಂಡಿಲ್ಲ. ನಮ್ಮ ದೇಶದ ಸೈನಿಕರನ್ನೂ ಒಡಗೂಡಿ ಅಂಬಿಕಾ ಪರಿವಾರವೆನಿಸಿಕೊಂಡಿದೆ ಎಂದು ನುಡಿದರು.
ಸುಂದರ ಪೂಜಾರಿ ದಂಪತಿಯನ್ನು ಅಂಬಿಕಾ ಸಂಸ್ಥೆಗಳ ಪರವಾಗಿ ಸನ್ಮಾನಿಸಲಾಯಿತು.

Ad Widget

Ad Widget

ಕಾರ್ಯಕ್ರಮದಲ್ಲಿ ವಿದ್ಯಾಲಯದ ಪ್ರಾಂಶುಪಾಲೆ ಮಾಲತಿ ಡಿ. ಹಾಗೂ ಉಪಪ್ರಾಂಶುಪಾಲೆ ಸುಜನಿ ಬೋರ್ಕರ್ ಉಪಸ್ಥಿತರಿದ್ದರು.

6ನೇ ತರಗತಿಯ ಆರಾಧ್ಯ ಸ್ವಾಗತಿಸಿದರು. 9ನೇ ತರಗತಿಯ ಮಾನ್ಯಲಕ್ಷೀ ಎನ್ ಪಿ ಯೋಧರ ಪರಿಚಯಗೈದರು. 9ನೇ ತರಗತಿಯ ಕುವೀರ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು. ವಿದ್ಯಾರ್ಥಿನಿ ದೀಪ್ತಿ ಬಿ ಪಿ ಸಹಕರಿಸಿದರು.

Ad Widget
Continue Reading

ಶಿಕ್ಷಣ

Vivekananda-ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಜಾಗೃತಿ ಕಾರ್ಯಕ್ರಮ

Published

on



Ad Widget

Ad Widget

Ad Widget

Ad Widget

ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಕಾಲೇಜು ಆಂತರಿಕ ದೂರು ಸಮಿತಿ, ಡಾಟಾ ಸೈನ್ಸ್ ಎಂಜಿನಿಯರಿಂಗ್ ವಿಭಾಗ, ಡಾಟಾ ಸೈನ್ಸ್ ವಿದ್ಯಾರ್ಥಿ ಸಂಘ, ಪೇರೆಂಟ್ ರಿಲೇಶನ್ ಸೆಲ್ ಮತ್ತು ಗ್ರೀವೆನ್ಸ್ ರೆಡ್ರೆಸ್ಸಲ್ ಸೆಲ್ ಇದರ ಸಂಯುಕ್ತ ಆಶ್ರಯದಲ್ಲಿ ಪರದೆಯಿಂದ ಆತ್ಮದ ಕಡೆಗೆ: ಜೆನ್-ಜೀ ನಡವಳಿಕೆಗಳು, ಮಿತಿಗಳು ಮತ್ತು ಅದರಾಚೆಗಿನ ಆಯಾಮಗಳು ಈ ವಿಷಯದ ಬಗ್ಗೆ ನಡೆದ ಜಾಗೃತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಪುತ್ತೂರಿನ ಪ್ರಗತಿ ಸ್ಪೆಶಾಲಿಟಿ ಆಸ್ಪತ್ರೆಯ ವೃದ್ಧಾಪ್ಯ ರೋಗ ಮತ್ತು ಮಧುಮೇಹ ತಜ್ಞರಾದ ಡಾ. ಅನನ್ಯಲಕ್ಷ್ಮೀ ಸಂದೀಪ್ ಮಾತಾಡಿದರು.

Ad Widget

Ad Widget

Ad Widget

Ad Widget

ಪುತ್ತೂರು: ಲೈಂಗಿಕ ಕಿರುಕುಳ ಎನ್ನುವುದು ಕೇವಲ ದೈಹಿಕ ಸ್ಪರ್ಶಕ್ಕೆ ಸೀಮಿತವಾಗಿಲ್ಲ ಬದಲಾಗಿ ಆಶ್ಲೀಲ ಸಂದೇಶಗಳನ್ನು ಕಳುಹಿಸುವುದು, ಮಾತುಗಳನ್ನಾಡುವುದು ಅಥವಾ ಅಂತಹ ಯಾವುದೇ ರೀತಿಯ ವರ್ತನೆಗಳೂ ಕೂಡಾ ಇದರಲ್ಲಿ ಸೇರಿವೆ ಎಂದು ಪುತ್ತೂರಿನ ಪ್ರಗತಿ ಸ್ಪೆಶಾಲಿಟಿ ಆಸ್ಪತ್ರೆಯ ವೃದ್ಧಾಪ್ಯ ರೋಗ ಮತ್ತು ಮಧುಮೇಹ ತಜ್ಞರಾದ ಡಾ. ಅನನ್ಯಲಕ್ಷ್ಮೀ ಸಂದೀಪ್ ಹೇಳಿದರು.

Ad Widget

Ad Widget

Ad Widget alt="Ad Widget"/>

Ad Widget

ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಕಾಲೇಜು ಆಂತರಿಕ ದೂರು ಸಮಿತಿ, ಡಾಟಾ ಸೈನ್ಸ್ ಎಂಜಿನಿಯರಿಂಗ್ ವಿಭಾಗ, ಡಾಟಾ ಸೈನ್ಸ್ ವಿದ್ಯಾರ್ಥಿ ಸಂಘ, ಪೇರೆಂಟ್ ರಿಲೇಶನ್ ಸೆಲ್ ಮತ್ತು ಗ್ರೀವೆನ್ಸ್ ರೆಡ್ರೆಸ್ಸಲ್ ಸೆಲ್ ಇದರ ಸಂಯುಕ್ತ ಆಶ್ರಯದಲ್ಲಿ ಪರದೆಯಿಂದ ಆತ್ಮದ ಕಡೆಗೆ: ಜೆನ್-ಜೀ ನಡವಳಿಕೆಗಳು, ಮಿತಿಗಳು ಮತ್ತು ಅದರಾಚೆಗಿನ ಆಯಾಮಗಳು ಈ ವಿಷಯದ ಬಗ್ಗೆ ನಡೆದ ಜಾಗೃತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತಾಡಿದರು.

Ad Widget

Ad Widget <> Ad Widget

ಇಂದಿನ ಪೀಳಿಗೆ, ಅವರ ಪೋಷಕರು, ಶಿಕ್ಷಕರ ನಡುವಿನ ವ್ಯತ್ಯಾಸ ಮತ್ತು ಜವಾಬ್ಧಾರಿಗಳ ಬಗ್ಗೆ ವಾಸ್ತವಿಕ ಉದಾಹರಣೆಗಳನ್ನು ಉಲ್ಲೇಖಿಸಿದ ಅವರು ಯುವಜನತೆ ಪಾಲಿಸಬೇಕಾದ ಮತ್ತು ಪಾಲಿಸಬಾರದ ವಿಷಯಗಳ ಬಗ್ಗೆ ತಿಳಿಸಿದರು. ಒಬ್ಬರ ಸಾಮರ್ಥ್ಯವನ್ನು, ದೇಹದ ಆಕಾರವನ್ನು ಟೀಕಿಸುವುದು ಕೂಡಾ ಅಪರಾಧ. ಅಂತಹ ಸಂದರ್ಭದಲ್ಲಿ ಅದನ್ನು ಎದುರಿಸುವ, ಪ್ರತಿಕ್ರಿಯಿಸುವ ಬಗೆ ಮತ್ತು ದೂರು ಸಲ್ಲಿಸಬೇಕಾದ ಪ್ರಾಧಿಕಾರಗಳ ಬಗ್ಗೆ ತಿಳಿಸಿದರು. ನೀವು ಕೋಪಗೊಂಡಿದ್ದರೆ, ಅತಿಯಾದ ಉತ್ಸಾಹದಲ್ಲಿದ್ದರೆ ಅಥವಾ ಒತ್ತಡದಲ್ಲಿದ್ದರೆ ಯಾವುದೇ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವುದನ್ನು 10 ನಿಮಿಷಗಳ ಕಾಲ ಮುಂದೂಡಿ. ಸಾಧ್ಯವಾದರೆ ಆ ಬಗ್ಗೆ ತೀರ್ಮಾನ ತೆಗೆದುಕೊಳ್ಳುವ ಮೊದಲು ಒಂದು ರಾತ್ರಿ ಚೆನ್ನಾಗಿ ಯೋಚಿಸಿ ಎಂದು ಹೇಳಿದರು.



Ad Widget

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾಲೇಜು ಆಡಳಿತ ಮಂಡಳಿಯ ನಿರ್ದೇಶಕಿ ರಕ್ಷ.ಎಸ್.ಆರ್ ಮಾತನಾಡಿ ಮೊದಲು ಆಲಿಸಿ ನಂತರ ಮಾತನಾಡಿ, ಕೆಲವೊಮ್ಮೆ ಅಲ್ಲಿ ಉಪಸ್ಥಿತರಿದ್ದು ಮೌನವಾಗಿ ಆಲಿಸುವುದರಿಂದ ಜೀವನದಲ್ಲಿ ಹೆಚ್ಚಿನ ಪ್ರಯೋಜನಗಳಾಗುತ್ತದೆ ಎಂದರು. ಒಬ್ಬ ಉತ್ತಮ ಇಂಜಿನಿಯರ್ ಆಗುವ ಜತೆಯಲ್ಲಿ ದೇಶದ ಪ್ರಜ್ಞಾವಂತ ಪ್ರಜೆಯಾಗಿ ಎಂದು ನುಡಿದರು.
ಕಾಲೇಜು ಆಂತರಿಕ ದೂರು ಸಮಿತಿಯ ಅಧ್ಯಕ್ಷೆ ಡಾ.ಜೋತಿಮಣಿ.ಕೆ, ಡಾಟಾಸೈನ್ಸ್ ವಿಭಾಗ ಮುಖ್ಯಸ್ಥೆ ಪ್ರೊ.ರೂಪಾ.ಜಿ.ಕೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.

Ad Widget

Ad Widget

ಡಾಟಾಸೈನ್ಸ್ ವಿಭಾಗದ ವಿದ್ಯಾರ್ಥಿಗಳಾದ ಗಗನ್‌ದೀಪ್ ಸ್ವಾಗತಿಸಿ, ನಿಹಾರಿಕಾ ಅತಿಥಿಗಳನ್ನು ಪರಿಚಯಿಸಿದರು. ಆಶ್ಲೇಷ್ ವಂದನಾರ್ಪಣೆಗೈದರು. ಶ್ರೇಯಾ ಎಮ್. ಕಾರ್ಯಕ್ರಮ ನಿರ್ವಹಿಸಿದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading