ಕ್ರೈಂ
Murder-ಕುಟುಂಬದ ಎದುರೇ ಶ್ರೀಲಂಕಾದ ಅಂಡರ್19 ನಾಯಕನ ಭೀಕರ ಹತ್ಯೆ; ಯಾರು ಗೊತ್ತಾ ಈ ಖ್ಯಾತ ಕ್ರಿಕೆಟಿಗ?
ನಿಖರ ನ್ಯೂಸ್ : ಇತ್ತೀಚೆಗಷ್ಟೇ ಅಮೆರಿಕಾದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ಆಗುಂತಕನೊಬ್ಬ ಗುಂಡಿನ ದಾಳಿ ನಡೆಸಿದ್ದ. ಇದೀಗ ನರೆಯ ರಾಷ್ಟ್ರ ಶ್ರೀಲಂಕಾದ ಅಂಡರ್ 19 ಕ್ರಿಕೆಟ್ ತಂಡದ ನಾಯಕ ದಮ್ಮಿಕಾ ನಿರೋಶನ ಅವರನ್ನು ಕುಟುಂಬದ ಎದುರೇ ದುಷ್ಕರ್ಮಿಗಳು ಭೀಕರವಾಗಿ ಹತ್ಯೆ ನಡೆಸಿದ್ದು, ಕ್ರೀಡಾ ಜಗತ್ತು ಬೆಚ್ಚಿ ಬೀಳುವಂತೆ ಮಾಡಿದೆ.ಈ ಖ್ಯಾತ ಕ್ರಿಕೆಟಿಗ ಯಾರು?, ಹತ್ಯೆಯ ಭೀಕರತೆ ಹೇಗಿತ್ತು? ಅನ್ನೋದನ್ನೆಲ್ಲ ಈ ವರದಿಯಲ್ಲಿ ಓದಿ.
ಕುಟುಂಬದ ಎದುರೇ ಭೀಕರ ಹತ್ಯೆ!
ವರದಿಗಳ ಪ್ರಕಾರ, ಮಂಗಳವಾರ ರಾತ್ರಿ ಏಕಾಏಕಿ ಮನೆ ಪ್ರವೇಶಿಸಿದ ಅನಾಮಿಕ ವ್ಯಕ್ತಿಯೊಬ್ಬ ಪತ್ನಿ ಹಾಗೂ ಮಕ್ಕಳ ಎದುರೇ ನಿರೋಶನ ಅವರ ಮೇಲೆ ಗುಂಡಿನ ಸುರಿಮಳೆಗೈದಿದ್ದಾನೆ . ಗುಂಡಿನ ದಾಳಿಯಿಂದ ಗಂಭೀರವಾಗಿ ಗಾಯಗೊಂಡ ಕ್ರಿಕೆಟಿಗ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಹತ್ಯೆಗೆ ಕಾರಣವೇನು?, ಕೊನೆ ನಡೆಸಿದ ಆರೋಪಿ ಯಾರು? ಎಂಬೆಲ್ಲ ಬಗ್ಗೆ ಸದ್ಯ, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಯಾರು ಈ ದಮ್ಮಿಕಾ ನಿರೋಶನ?
ಬಲಗೈ ವೇಗದ ಬೌಲರ್ ಆಗಿದ್ದ ಅವರು ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಕೂಡ ಆಗಿದ್ದ ನಿರೋಶನ ಅವರು 2001 ಮತ್ತು 2004 ರ ನಡುವೆ ಗಾಲೆ ಕ್ರಿಕೆಟ್ ಕ್ಲಬ್ ಪರ 12 ಪ್ರಥಮ ದರ್ಜೆ ಪಂದ್ಯಗಳನ್ನು ಮತ್ತು 8 ಲಿಸ್ಟ್ ಎ ಪಂದ್ಯಗಳನ್ನು ಆಡಿ ಅನುಭವ ಹೊಂದಿದ್ದರು. 2000 ರಲ್ಲಿ ಶ್ರೀಲಂಕಾದ ಅಂಡರ್-19 ತಂಡಕ್ಕೆ ಪಾದಾರ್ಪಣೆ ಮಾಡಿದ ನಿರೋಶನ ಅವರು 2 ವರ್ಷಗಳ ಕಾಲ ತಂಡವನ್ನು ನಾಯಕನಾಗಿ ಮುನ್ನಡೆಸಿದ್ದರು. ನಿರೋಶನ ಡಿಸೆಂಬರ್ 2004 ರಲ್ಲಿ ಸ್ಪರ್ಧಾತ್ಮಕ ಕ್ರಿಕೆಟ್‌ನಿಂದ ನಿವೃತ್ತರಾಗಿದ್ದರು. ಇಂತಹ ಪ್ರತಿಭಾನ್ವಿತ ಕ್ರಿಕೆಟಿಗ ಇದೀಗ ಹತ್ಯೆಯಾಗಿದ್ದು, ಕ್ರೀಡಾ ಜಗತ್ತು ಸಂತಾಪ ಸೂಚಿಸುತ್ತಿದೆ.
ಸ್ಥಳೀಯ
Kalaburagi-ಕಲಬುರಗಿ: ಪತ್ನಿಯ ಕತ್ತು ಹಿಸುಕಿ ಹತ್ಯೆ; ಆತ್ಮಹತ್ಯೆಯಂತೆ ಬಿಂಬಿಸಲು ಯತ್ನಿಸಿದ ಪತಿ ಬಂಧನ
ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿ, ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬಂತೆ ಬಿಂಬಿಸಲು ಯತ್ನಿಸಿದ ಆರೋಪದ ಮೇಲೆ ಪತಿಯನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕಲಬುರಗಿ: ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿ, ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬಂತೆ ಬಿಂಬಿಸಲು ಯತ್ನಿಸಿದ ಆರೋಪದ ಮೇಲೆ ಪತಿಯನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ಪ್ರಿಯಾಂಕಾ ಹಡಪದ್ (30) ಎಂದು ಗುರುತಿಸಲಾಗಿದೆ.
ಆಕೆಯ ಪತಿ ಸೂರ್ಯಕಾಂತ್ ಹಡಪದ್ ಕೊಲೆ ಆರೋಪಿಯಾಗಿದ್ದು, ವಕೀಲ ವೃತ್ತಿ ಮಾಡಿಕೊಂಡಿದ್ದ ಎನ್ನಲಾಗಿದೆ.
ಮಕ್ಕಳಾಗದಿರುವ ವಿಚಾರ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಸಂಬಂಧಿಸಿ ಸೂರ್ಯಕಾಂತ್ ಪತ್ನಿಗೆ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಇದೇ ವಿಚಾರವಾಗಿ ದಂಪತಿ ನಡುವೆ ಗಲಾಟೆ ನಡೆದಿದ್ದು, ಬಳಿಕ ಸೂರ್ಯಕಾಂತ್ ಪತ್ನಿಯ ಕತ್ತು ಹಿಸುಕಿ ಹತ್ಯೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.
ಅಂತರ ರಾಜ್ಯ
Murder-ಆಸ್ತಿಗಾಗಿ ಬೆಲ್ಟ್‌ನಿಂದ ಕುತ್ತಿಗೆ ಬಿಗಿದು ಪತಿಯ ಕೊಲೆ: ಆಕಸ್ಮಿಕ ಸಾವೆಂದು ನಂಬಿಸಿದ್ದ ಪತ್ನಿ ಅರೆಸ್ಟ್
ಆಕಸ್ಮಿಕ ಸಾವು ಎಂದು ದಾಖಲಾಗಿದ್ದ 53 ವರ್ಷದ ವ್ಯಕ್ತಿಯೊಬ್ಬರ ಪ್ರಕರಣ ತನಿಖೆ ವೇಳೆ ಕೊಲೆಯಾಗಿ ಬಯಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿ ಅವರ ಪತ್ನಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೊಲ್ಲಂನ ಚೆರುಮೂಡು ಮೂಲದ ರಾಜು ಕೊಲೆಯಾದ ವ್ಯಕ್ತಿ.
ಕೊಲ್ಲಂ: ಆಕಸ್ಮಿಕ ಸಾವು ಎಂದು ದಾಖಲಾಗಿದ್ದ 53 ವರ್ಷದ ವ್ಯಕ್ತಿಯೊಬ್ಬರ ಪ್ರಕರಣ ತನಿಖೆ ವೇಳೆ ಕೊಲೆಯಾಗಿ ಬಯಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿ ಅವರ ಪತ್ನಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕೊಲ್ಲಂನ ಚೆರುಮೂಡು ಮೂಲದ ರಾಜು (53) ಅವರು ಬಣ್ಣ ಬಳಿಯುವ ಕೆಲಸ ಮಾಡುತ್ತಿದ್ದರು. ರಾಜು ಹಾಗೂ ಅವರ ಪತ್ನಿ ಲೇಖಾ ಮೇರಿ ನಡುವೆ ಆಸ್ತಿ ವಿಚಾರವಾಗಿ ಆಗಾಗ್ಗೆ ಜಗಳ ನಡೆಯುತ್ತಿತ್ತು ಎನ್ನಲಾಗಿದೆ. ಆಸ್ತಿ ಮೂಲತಃ ರಾಜು ಕುಟುಂಬಕ್ಕೆ ಸೇರಿದ್ದಾಗಿದ್ದು, ಬಳಿಕ ರಾಜು ಅವರ ಹೆಸರಿಗೆ ವರ್ಗಾವಣೆಯಾಗಿತ್ತು. ಆದರೆ ಸಂಪೂರ್ಣ ಆಸ್ತಿಯ ಮಾಲೀಕತ್ವ ತನಗೇ ಬೇಕೆಂದು ಲೇಖಾ ಪಟ್ಟು ಹಿಡಿದಿದ್ದರಿಂದ ದಂಪತಿ ನಡುವೆ ನಿರಂತರವಾಗಿ ಮನಸ್ತಾಪ ಉಂಟಾಗುತ್ತಿತ್ತು.
ಈ ಹಿನ್ನೆಲೆಯಲ್ಲಿ ಕೆಲಕಾಲ ಬೇರೆ ಬೇರೆಯಾಗಿದ್ದ ದಂಪತಿ, ಕಳೆದ ಒಂದು ವರ್ಷದಿಂದ ಮತ್ತೆ ಒಟ್ಟಿಗೆ ವಾಸಿಸುತ್ತಿದ್ದರು.
ಅ.2ರಂದು ಬೆಳಗ್ಗೆ ಸುಮಾರು 5.30ಕ್ಕೆ ರಾಜು ಮನೆಯಲ್ಲಿ ದಿಢೀರ್ ಕುಸಿದುಬಿದ್ದಿದ್ದಾರೆ ಎಂದು ಹೇಳಲಾಗಿತ್ತು. ತಕ್ಷಣ ಸಹೋದರ ಹಾಗೂ ನೆರೆಹೊರೆಯವರ ನೆರವಿನಿಂದ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಪರೀಕ್ಷಿಸಿದ ವೈದ್ಯರು ರಾಜು ಮೃತಪಟ್ಟಿರುವುದಾಗಿ ಘೋಷಿಸಿದರು.
ಆದರೆ ಮರಣೋತ್ತರ ಪರೀಕ್ಷೆ ವೇಳೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ. ರಾಜು ಸಾಮಾನ್ಯವಾಗಿ ಕುಸಿದುಬಿದ್ದು ಮೃತಪಟ್ಟಿಲ್ಲ ಎಂದು ಶಂಕಿಸಿರುವ ವೈದ್ಯರು, ಅವರ ಕುತ್ತಿಗೆಯ ಭಾಗದಲ್ಲಿ ಅನುಮಾನಾಸ್ಪದ ಗುರುತುಗಳು ಕಂಡುಬಂದಿರುವುದಾಗಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಈ ಹಿನ್ನೆಲೆಯಲ್ಲಿ ಪೊಲೀಸರು ರಾಜು ಅವರ ಪತ್ನಿ ಲೇಖಾ ಮೇರಿಯನ್ನು ವಿಚಾರಣೆ ನಡೆಸಿದಾಗ, ಆಸ್ತಿ ವಿಚಾರವಾಗಿ ಅ.2ರಂದು ಮತ್ತೆ ಜಗಳ ನಡೆದಿತ್ತು ಎಂದು ಆಕೆ ಒಪ್ಪಿಕೊಂಡಿದ್ದಾಳೆ ಎನ್ನಲಾಗಿದೆ. ಜಗಳದ ವೇಳೆ ಕೋಪಗೊಂಡು ಬೆಲ್ಟ್‌ನಿಂದ ಪತಿಯ ಕುತ್ತಿಗೆಯನ್ನು ಬಿಗಿದು ಕೊಲೆ ಮಾಡಿದ್ದಾಗಿ ಆಕೆ ಪೊಲೀಸರಿಗೆ ತಿಳಿಸಿದ್ದಾಳೆ ಎಂದು ಮೂಲಗಳು ಹೇಳಿವೆ.
ಬಳಿಕ ರಾಜು ಪ್ರಜ್ಞೆ ತಪ್ಪಿ ಬಿದ್ದಿರುವುದಾಗಿ ಅವರ ಸಹೋದರನಿಗೆ ಕರೆ ಮಾಡಿ ತಿಳಿಸಿದ್ದಳು ಎನ್ನಲಾಗಿದೆ.
ಕೊಲ್ಲಿ ರಾಷ್ಟ್ರದಲ್ಲಿ ಕೆಲಸ ಮಾಡಿ ಬಳಿಕ ವಾಪಸ್ ಬಂದಿದ್ದ ಲೇಖಾ ಮೇರಿ ಸದ್ಯ ಗೃಹಿಣಿಯಾಗಿದ್ದು, ದಂಪತಿಗೆ ಒಬ್ಬ ಮಗಳಿದ್ದಾಳೆ. ಪ್ರಕರಣದಲ್ಲಿ ಬೇರೆಯವರ ಕೈವಾಡವಿದೆಯೇ ಎಂಬ ಬಗ್ಗೆಯೂ ಕುಂದರ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಕ್ರೈಂ
Honeytrap-ಹಳೆಯ ದ್ವೇಷಕ್ಕೆ ಇನ್‌ಸ್ಟಾಗ್ರಾಂ ಹನಿಟ್ರ್ಯಾಪ್ ಅಸ್ತ್ರ: ಯುವಕನ ಕೊಲೆ ಪ್ರಕರಣ ಭೇದಿಸಿದ ಪೊಲೀಸರು; ನಾಲ್ವರ ಬಂಧನ
ಕಾಣೆಯಾಗಿದ್ದ ಯುವಕನೊಬ್ಬನ ಕೊಲೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದ್ದು, ಇನ್‌ಸ್ಟಾಗ್ರಾಂ ಮೂಲಕ ‘ಹನಿಟ್ರ್ಯಾಪ್’ ಮಾಡಿ ಯುವಕನನ್ನು ಬಲೆಗೆ ಬೀಳಿಸಿ ಕೊಲೆ ಮಾಡಿದ ಆರೋಪದ ಮೇಲೆ ನಾಲ್ವರನ್ನು ಬೆಳಗಾವಿ ನಗರ ಪೊಲೀಸರು ಬಂಧಿಸಿದ್ದಾರೆ. ಮೃತ ಯುವಕನನ್ನು ಬೆಳಗಾವಿಯ ಗಾಂಧಿನಗರ ನಿವಾಸಿ ಸರ್ವೇಶ ಕಂಗ್ರಾಳಕರ ಎಂದು ಗುರುತಿಸಲಾಗಿದೆ.
ಬೆಳಗಾವಿ: ಕಾಣೆಯಾಗಿದ್ದ ಯುವಕನೊಬ್ಬನ ಕೊಲೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದ್ದು, ಇನ್‌ಸ್ಟಾಗ್ರಾಂ ಮೂಲಕ ‘ಹನಿಟ್ರ್ಯಾಪ್’ ಮಾಡಿ ಯುವಕನನ್ನು ಬಲೆಗೆ ಬೀಳಿಸಿ ಕೊಲೆ ಮಾಡಿದ ಆರೋಪದ ಮೇಲೆ ನಾಲ್ವರನ್ನು ಬೆಳಗಾವಿ ನಗರ ಪೊಲೀಸರು ಬಂಧಿಸಿದ್ದಾರೆ.
ಮೃತ ಯುವಕನನ್ನು ಬೆಳಗಾವಿಯ ಗಾಂಧಿನಗರ ನಿವಾಸಿ ಸರ್ವೇಶ ಕಂಗ್ರಾಳಕರ ಎಂದು ಗುರುತಿಸಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಶಶಿ ಜಾಲಗಾರ, ರಾಹುಲ್ ಜಾಲಗಾರ, ದಶರತ ರಜಪೂತ ಹಾಗೂ ಅರುಣ ಹುಲ್ಲೋಳಿ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಬೆಳಗಾವಿ ನಗರ ಪೊಲೀಸ್ ಆಯುಕ್ತ ಪ್ರಕಾಶ್ ನಿಕಮ್ ಅವರ ಮಾರ್ಗದರ್ಶನದಲ್ಲಿ ಮಾಳಮಾರುತಿ ಠಾಣೆ ಸಿಪಿಐ ಬಿ.ಆರ್. ಗಡೇಕರ್ ನೇತೃತ್ವದ ತಂಡ ತನಿಖೆ ನಡೆಸಿ ಪ್ರಕರಣವನ್ನು ಭೇದಿಸಿದೆ.
ಹಣಕಾಸಿನ ವಿಚಾರದ ದ್ವೇಷವೇ ಕೊಲೆಗೆ ಕಾರಣ?
ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, 2025ರಲ್ಲಿ ನಡೆದ ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದ ಜಗಳವೇ ಕೊಲೆಗೆ ಪ್ರಮುಖ ಕಾರಣ ಎನ್ನಲಾಗಿದೆ. ಈ ಸಂದರ್ಭದಲ್ಲಿ ಸರ್ವೇಶ ಹಾಗೂ ಶಶಿ ಜಾಲಗಾರ ನಡುವೆ ಗಲಾಟೆ ನಡೆದಿದ್ದು, ಸರ್ವೇಶ ಅವರು ಶಶಿ ಮೇಲೆ ಹಲ್ಲೆ ನಡೆಸಿದ್ದರು ಎನ್ನಲಾಗಿದೆ. ಇದರಿಂದ ಇಬ್ಬರ ನಡುವೆ ವೈಷಮ್ಯ ಬೆಳೆದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಈ ಹಳೆಯ ದ್ವೇಷವನ್ನೇ ಮುಂದಿಟ್ಟುಕೊಂಡು ಶಶಿ ಜಾಲಗಾರ ತನ್ನ ಸಹಚರರೊಂದಿಗೆ ಸೇರಿ ಸರ್ವೇಶನ ಕೊಲೆಗೆ ಸಂಚು ರೂಪಿಸಿದ್ದಾನೆ ಎನ್ನುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಯುವತಿಯ ಹೆಸರಿನಲ್ಲಿ ನಕಲಿ ಖಾತೆ
ಕೊಲೆಗೆ ಆರೋಪಿಗಳು ಇನ್‌ಸ್ಟಾಗ್ರಾಂ ಬಳಸಿಕೊಂಡಿದ್ದಾರೆ ಎನ್ನಲಾಗಿದೆ. ಯುವತಿಯ ಹೆಸರಿನಲ್ಲಿ ನಕಲಿ ಇನ್‌ಸ್ಟಾಗ್ರಾಂ ಖಾತೆ ಸೃಷ್ಟಿಸಿ, ಅದರ ಮೂಲಕ ಸರ್ವೇಶನಿಗೆ ಸಂದೇಶ ಕಳುಹಿಸಿ ಆತನೊಂದಿಗೆ ಆತ್ಮೀಯತೆ ಬೆಳೆಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಬಳಿಕ ಇದೇ ಪರಿಚಯವನ್ನು ಬಳಸಿಕೊಂಡು ಸರ್ವೇಶನನ್ನು ನಿರ್ದಿಷ್ಟ ಸ್ಥಳಕ್ಕೆ ಕರೆಸಿಕೊಂಡು ಕೊಲೆ ಮಾಡಲಾಗಿದೆ ಎನ್ನಲಾಗಿದೆ.
-
ಸ್ಥಳೀಯ9 hours agoGanja-ಸಾಗರದ ಲಾಡ್ಜ್ನಲ್ಲಿ ಗಾಂಜಾ ಸೇವನೆ: ಯುವತಿ ಸೇರಿ ನಾಲ್ವರು ವಶಕ್ಕೆ – ಗಾಂಜಾ ಸಾಗಾಟಗಾರನ ಮಾಹಿತಿ ಬಿಚ್ಚಿಟ್ಟ ಯುವತಿ..!
-
ಮಂಗಳೂರು4 hours agoMangalore-ಮಂಗಳೂರು : 2 ತಿಂಗಳ ಬಳಿಕ ಸಮಾಧಿಯಿಂದ ಹೊರಬರಲಿದೆ ಆಲ್ಬರ್ಟ್ ರೇಗೋ ಶವ..!; ಮಗಳಿಂದಲೇ ತಂದೆಯ ಕೊಲೆ : ಸ್ನೇಹಿತನ ಆರೋಪ – ತನಿಖೆಗೆ ಸಿಗಲಿದೆ ಮಹತ್ವದ ತಿರುವು
-
ಅಪರಾಧ7 hours agoRaid-ರಾಜ್ಯದ 45 ಐಸ್ಕ್ರೀಂ ಘಟಕಗಳ ಮೇಲೆ ದಾಳಿ: 4 ಕಡೆ ನಿಯಮ ಉಲ್ಲಂಘನೆ, ಅವಧಿ ಮೀರಿದ ಪದಾರ್ಥ ಪತ್ತೆ..!
-
ಬಿಗ್ ನ್ಯೂಸ್9 hours agoAYUSH Federation-ಡಾ. ಪ್ರದೀಪ್ ನಾವೂರು ಅವರ ಆರೋಗ್ಯ ಕ್ಲಿನಿಕ್ ಗೆ ಬೆಂಕಿ : ಆಯುಷ್ ಫೆಡರೇಶನ್ ತೀವ್ರ ಖಂಡನೆ
-
ಸಿನೆಮಾ8 hours agoNana Patekar-ನಾನಾ ಪಾಟೇಕರ್ ಸಾವಿಗೆ ನಿಖರ ಕಾರಣವೇನು? ಗೋವಾ ಪೊಲೀಸರಿಂದ ಅಸಹಜ ಸಾವು ಪ್ರಕರಣ ದಾಖಲು
-
ಅಪರಾಧ9 hours agoUdupi-ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಿನಲ್ಲಿ ಬೆದರಿಕೆ ಕರೆ : ಉಡುಪಿ, ಮೂಲ್ಕಿಯಲ್ಲಿ 4 ಪ್ರಕರಣ ದಾಖಲು
-
ಬಿಗ್ ನ್ಯೂಸ್8 hours agoGreen card-ಇನ್ಫೋಸಿಸ್, ಟಿಸಿಎಸ್ ಸೇರಿ 8 ಐಟಿ ಕಂಪನಿಗಳಿಗೆ ಅಮೆರಿಕದ ಗ್ರೀನ್ ಕಾರ್ಡ್ ಪ್ರಕ್ರಿಯೆ ಸ್ಥಗಿತ
-
ಅಪರಾಧ4 hours agoMangalore-ವಾಟರ್ ಪ್ಯೂರಿಫೈಯರ್ ಒಳಗೆ ಕೋಟ್ಯಾಂತರ ರೂ ಮೌಲ್ಯದ ಡ್ರಗ್ಸ್- ಕೋರಿಯರ್ ಮೂಲಕ ಸಾಗಾಟ | ಪೊಲೀಸರ ಕಣ್ಣಿಗೆ ಮಣ್ಣೆರೆಚುವ ಯತ್ನ ಮಂಗಳೂರಿನಲ್ಲಿ ವಿಫಲ – ಮೂವರ ಬಂಧನ..!


















