Connect with us

ಸ್ಥಳೀಯ

Urban company-ಅರ್ಬನ್‌ ಕಂಪನಿಯಲ್ಲಿ ರೂ. 57 ಲಕ್ಷ ಹೂಡಿಕೆಯಿಂದ ರೂ. 111 ಕೋಟಿ ಲಾಭ – ಕಂಪೆನಿ ತೊರೆದ ಬಹ್ಲ್‌-ಬನ್ಸಾಲ್‌ ಜೋಡಿ

Published

on



Ad Widget

Ad Widget

Ad Widget

Ad Widget

ಅರ್ಬನ್‌ ಕಂಪನಿಗೆ ಆರಂಭಿಕ ಬಂಡವಾಳ ಹೂಡಿದ್ದ ಇ-ಕಾಮರ್ಸ್ ಸಂಸ್ಥೆ ಸ್ನಾಪ್‌ಡೀಲ್ ಮತ್ತು ಇನ್ವೆಸ್ಟ್‌ಮೆಂಟ್ ಫಂಡ್ ಟೈಟಾನ್ ಕ್ಯಾಪಿಟಲ್‌ನ ಸಂಸ್ಥಾಪಕರಾದ ಕುನಾಲ್ ಬಹ್ಲ್ ಮತ್ತು ರೋಹಿತ್ ಬನ್ಸಾಲ್ ಇದೀಗ ಸಂಸ್ಥೆಯಿಂದ ಹೊರಬಿದ್ದಿದ್ದಾರೆ. ಆದರೆ, ಖಾಲಿ ಕೈಯಲ್ಲಿ ಹೊರ ಹೋಗಿಲ್ಲ. ಬಂಪರ್ ಲಾಭದೊಂದಿಗೆ ಇವರು ಕಂಪನಿ ತೊರೆದಿದ್ದಾರೆ.

Ad Widget

Ad Widget

Ad Widget

Ad Widget

ಮನೆಗೇ ಬಂದು ಎಲೆಕ್ಟ್ರಿಕ್‌, ಪ್ಲಂಬಿಕ್‌, ಕ್ಲೀನಿಂಗ್‌ ಸೇವೆಗಳನ್ನು ನೀಡುವ ಅರ್ಬನ್‌ ಕಂಪನಿ ಮೇಲಿನ ಹೂಡಿಕೆಯಿಂದ ಇಬ್ಬರೂ ಬರೋಬ್ಬರಿ 200 ಪಟ್ಟಿಗೂ ಹೆಚ್ಚು ಲಾಭ ಪಡೆದುಕೊಂಡಿದ್ದಾರೆ. 9 ವರ್ಷಗಳ ಹಿಂದೆ ಅಂದರೆ 2015ರಲ್ಲಿ ಕಂಪನಿಯಲ್ಲಿ 57 ಲಕ್ಷ ರೂ. ಹೂಡಿಕೆ ಮಾಡಿದ್ದವರು, ಇದೀಗ ಅದೇ ಷೇರುಗಳನ್ನು 111 ಕೋಟಿ ರೂ.ಗೆ ಮಾರಿ ಕಂಪನಿ ಬಿಟ್ಟಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ತಮ್ಮ ಷೇರನ್ನು ಇವರು ವೈ ಕ್ಯಾಪಿಟಲ್‌ನ ಧರಣಾ ಕ್ಯಾಪಿಟಲ್‌ಗೆ ಮಾರಾಟ ಮಾಡಿದ್ದಾರೆ. ಟೈಟಾನ್ ಕ್ಯಾಪಿಟಲ್ ಸಂಸ್ಥಾಪಕರಲ್ಲದೆ, ಕೆಲವು ಉದ್ಯೋಗಿಗಳು ಕೂಡ ಸೆಕೆಂಡರಿ ಡೀಲ್‌ ಮೂಲಕ ತಮ್ಮ ಷೇರುಗಳನ್ನು ಮಾರಾಟ ಮಾಡಿದ್ದಾರೆ ಎಂದು ಈ ವಹಿವಾಟಿನ ಬಗ್ಗೆ ತಿಳಿದಿರುವ ಜನರು ಹೇಳಿದ್ದಾರೆ.

Ad Widget

Ad Widget <> Ad Widget

ವಂಶಿ ದುವ್ವೂರಿ ಅರ್ಬನ್ ಕಂಪನಿಗೆ ಪ್ರವೇಶ
ಇವರ ಷೇರುಗಳನ್ನು ಖರೀದಿಸುವ ಮೂಲಕ ಧರಣಾ ಕ್ಯಾಪಿಟಲ್‌ನ ಸಂಸ್ಥಾಪಕ ಮತ್ತು ವ್ಯವಸ್ಥಾಪಕ ಪಾಲುದಾರರಾದ ವಂಶಿ ದುವ್ವೂರಿ ಅರ್ಬನ್ ಕಂಪನಿ ಆಡಳಿತ ಮಂಡಳಿ ಪ್ರವೇಶಿಸಿದ್ದಾರೆ. ಕಾರ್ಯನಿರ್ವಾಹಕೇತರ ನಿರ್ದೇಶಕರಾಗಿ ಇವರು ಕಂಪನಿಗೆ ಎಂಟ್ರಿಯಾಗಿದ್ದಾರೆ.



Ad Widget

ಅರ್ಬನ್ ಕಂಪನಿಯಿಂದ ನಿರ್ಗಮಿಸಿರುವುದನ್ನು ಕುನಾಲ್ ಬಹ್ಲ್ ‘ಇಟಿ’ಗೆ ದೃಢಪಡಿಸಿದ್ದು, ಹೆಚ್ಚಿನ ವಿವರಗಳನ್ನು ಮಾತ್ರ ನೀಡಿಲ್ಲ.

Ad Widget

Ad Widget

ಟೈಟಾನ್ ಕ್ಯಾಪಿಟಲ್ ಈ ರೀತಿ ಲಾಭ ಪಡೆದಿರುವುದು ಇದೇ ಮೊದಲಲ್ಲ. ಈ ಹಿಂದೆಯೂ ಹಲವು ಹೂಡಿಕೆಗಳಿಂದ 100 ಪಟ್ಟು ಅಥವಾ ಅದಕ್ಕಿಂತ ಹೆಚ್ಚಿನ ಆದಾಯವನ್ನು ಗಳಿಸಿದೆ. ಅವುಗಳಲ್ಲಿ ಓಲಾ ಕ್ಯಾಬ್ಸ್‌, ಆಫ್‌ಬಿಸಿನೆಸ್ ಮತ್ತು ಕ್ರೆಡ್ಜೆನಿಕ್ಸ್ ಸೇರಿವೆ. ಇಬ್ಬರೂ ಓಲಾ ಕ್ಯಾಬ್ಸ್‌ನಿಂದ ಸಂಪೂರ್ಣವಾಗಿ ನಿರ್ಗಮಿಸಿದ್ದರೆ, ಕ್ರೆಡ್ಜೆನಿಕ್‌ನಿಂದ ಭಾಗಶಃ ಹೊರಬಿದ್ದಿದ್ದಾರೆ. ಆಫ್‌ಬಿಸಿನೆಸ್‌ನಲ್ಲಿ ಇನ್ನೂ ತಮ್ಮ ಷೇರುಗಳನ್ನು ಹೊಂದಿದ್ದಾರೆ.

ಅರ್ಬನ್ ಕಂಪನಿಯ ಹೂಡಿಕೆಯಿಂದ ಗಳಿಸಿದ ಶೇ. 100ರಷ್ಟು ಲಾಭವನ್ನು ಮುಂದಿನ ಪೀಳಿಗೆಯ ಸ್ಟಾರ್ಟಪ್‌ಗಳ ಸಂಸ್ಥಾಪಕರಿಗೆ ಧನಸಹಾಯ ಮಾಡಲು ಬಳಸಲಿದ್ದೇವೆ ಎಂದು ಬಹ್ಲ್‌ ಮತ್ತು ಬನ್ಸಾಲ್ ಹೇಳಿದ್ದಾರೆ.

300 ಸ್ಟಾರ್ಟಪ್‌ಗಳಲ್ಲಿ ಹೂಡಿಕೆ
ಈ ಸ್ನ್ಯಾಪ್‌ಡೀಲ್ ಸಂಸ್ಥಾಪಕರು ಏಂಜೆಲ್ ಹೂಡಿಕೆದಾರರಾಗಿ 300 ಸ್ಟಾರ್ಟ್‌ಅಪ್‌ಗಳಲ್ಲಿ ಹೂಡಿಕೆ ಮಾಡಿದ್ದಾರೆ. ಟೈಟಾನ್ ಕ್ಯಾಪಿಟಲ್ ಮೂಲಕ ತಮ್ಮ ವೈಯಕ್ತಿಕ ಹಣವನ್ನು ಹೂಡಿಕೆ ಮಾಡಿದ್ದು, ಇತ್ತೀಚೆಗೆ, ಹೂಡಿಕೆ ಹೆಚ್ಚಿಸಲು ಸೀಮಿತ ಪಾಲುದಾರರು ಅಥವಾ ಪ್ರಾಯೋಜಕರಿಂದ 200 ಕೋಟಿ ರೂ.ಗಳನ್ನು ಸಂಗ್ರಹಿಸಿದ್ದಾರೆ.

ಕಳೆದ ವರ್ಷ, ಮಮಾಅರ್ಥ್‌ನ ಮೂಲ ಕಂಪನಿ ಹೊನಾಸ ಕನ್ಸ್ಯೂಮರ್‌ನ ಐಪಿಒದಲ್ಲಿ ಇಬ್ಬರೂ ಸುಮಾರು 78 ಕೋಟಿ ರೂ. ಮೌಲ್ಯದ ಷೇರುಗಳನ್ನು ಮಾರಾಟ ಮಾಡಿದ್ದರು. ಜುಜುಬಿ 3.21 ರೂ. ದರದಲ್ಲಿ ಖರೀದಿಸಿದ್ದ ಷೇರನ್ನು 324 ರೂ. ಲೆಕ್ಕದಲ್ಲಿ ಮಾರಿ 100 ಪಟ್ಟಿಗೂ ಹೆಚ್ಚಿನ ಲಾಭ ಗಳಿಸಿದ್ದರು.

ಟೈಟಾನ್ ಕ್ಯಾಪಿಟಲ್ ಕಾರ್ಯನಿರ್ವಾಹಕ ತಂಡವಿದ್ದು ಇದು ಆರಂಭಿಕ ಹಂತದ ಸ್ಟಾರ್ಟ್‌ಅಪ್‌ಗಳಲ್ಲಿ ಹೂಡಿಕೆಗಾಗಿ ಶೋಧ ನಡೆಸುತ್ತಿರುತ್ತದೆ. ಬಹ್ಲ್ ಮತ್ತು ಬನ್ಸಾಲ್ ಇಬ್ಬರೂ ಇ-ಕಾಮರ್ಸ್ ಎಂಟರ್‌ಪ್ರೈಸ್ ಸಾಫ್ಟ್‌ವೇರ್ ಡೆವಲಪರ್ ಸಂಸ್ಥೆ ಯೂನಿಕಾಮರ್ಸ್‌ನ ಮಾಲೀಕರೂ ಆಗಿದ್ದಾರೆ. ಇದು ಮಾರುಕಟ್ಟೆ ನಿಯಂತ್ರಕ ಸಂಸ್ಥೆಯ ಸೆಬಿಯ ಅನುಮೋದನೆಯನ್ನು ಪಡೆದುಕೊಂಡಿದ್ದು, ಐಪಿಒ ಆರಂಭಿಸಲು ಸಿದ್ಧವಾಗಿದೆ.

ಟೈಟಾನ್ ಕ್ಯಾಪಿಟಲ್ ಇತ್ತೀಚೆಗೆ ತ್ವರಿತ ಸೇವಾ ರೆಸ್ಟೋರೆಂಟ್ ಬ್ರ್ಯಾಂಡ್ ಬೊಬಾ ಭಾಯಿ, ಸ್ಮಾರ್ಟ್ ಉಪಕರಣಗಳ ಸ್ಟಾರ್ಟಪ್ ಕಾರ್ಬನ್ ಎನ್ವಿರೋಟೆಕ್ ಮತ್ತು ಭಕ್ತಿ ವೇದಿಕೆ ದೇವಧಾಮ್‌ನಂತಹ ಸ್ಟಾರ್ಟ್‌ಅಪ್‌ಗಳಲ್ಲಿಯೂ ಹೂಡಿಕೆ ಮಾಡಿದೆ.

ಅರ್ಬನ್ ಕಂಪನಿಯು ಈ ವರ್ಷದ ಮೊದಲ ತ್ರೈಮಾಸಿಕದಲ್ಲಿ 282-283 ಕೋಟಿ ರೂ. ಆದಾಯ ಗಳಿಸಿದ್ದು, ತೆರಿಗೆ ಪೂರ್ವ ಲಾಭ ದಾಖಲಿಸಿದೆ ಎಂದು ಕುನಾಲ್‌ ಬಹ್ಲ್‌ ಹೇಳಿದ್ದಾರೆ. ಸಂಸ್ಥೆಯು 2025ನೇ ಆರ್ಥಿಕ ವರ್ಷದಲ್ಲಿ ನಿವ್ವಳ ಲಾಭ ಗಳಿಕೆಗೆ ಮರಳುವ ನಿರೀಕ್ಷೆಯಿದೆ.

ಇದಕ್ಕೂ ಮೊದಲು 2023ನೇ ಆರ್ಥಿಕ ವರ್ಷದಲ್ಲಿ ಕಂಪನಿ 637 ಕೋಟಿ ರೂ. ಲಾಭ ಗಳಿಸಿತ್ತು. ಅಲ್ಲದೆ 308 ಕೋಟಿ ರೂ. ತೆರಿಗೆ ಪೂರ್ವ ನಷ್ಟ ದಾಖಲಿಸಿತ್ತು. ಇದಕ್ಕೂ ಹಿಂದಿನ 2022ನೇ ಆರ್ಥಿಕ ವರ್ಷದ 514 ಕೋಟಿ ರೂ.ಗೆ ಹೋಲಿಸಿದರೆ ನಷ್ಟ ಇಳಿಕೆಯಾಗಿತ್ತು. ಇನ್ನು ಮಾರ್ಚ್ 2024 ಕ್ಕೆ ಕೊನೆಗೊಂಡ ಆರ್ಥಿಕ ವರ್ಷಕ್ಕೆ ಕಂಪನಿಯು ಇನ್ನೂ ತನ್ನ ಹಣಕಾಸು ವರದಿಯನ್ನು ಸಲ್ಲಿಸಿಲ್ಲ.

Ad Widget
Click to comment

Leave a Reply

ರಾಜಕೀಯ

Ashok Rai-ಪಕ್ಷ ಸಂಘಟನೆಗೆ ಅಶೋಕ್ ರೈ ಹೊಸ ಹೆಜ್ಜೆ: ಪುತ್ತೂರು ಬ್ಲಾಕ್ ಕಾಂಗ್ರೆಸ್‌ಗೆ ಬೊಲೆರೋ

Published

on



Ad Widget

Ad Widget

Ad Widget

Ad Widget

ಪಕ್ಷದ ಸಂಘಟನೆ ಮತ್ತು ಅಭಿವೃದ್ಧಿಯ ದೃಷ್ಟಿಯಿಂದ ಪುತ್ತೂರು ಬ್ಲಾಕ್ ಕಾಂಗ್ರೆಸ್‌ಗೆ ಹೊಸ ಬೊಲೆರೋ ವಾಹನವನ್ನು ಒದಗಿಸಲಾಗಿದೆ. ಕಾಂಗ್ರೆಸ್ ಭವನ ನಿರ್ಮಾಣ ಹಂತದಲ್ಲಿರುವಾಗಲೇ ಬ್ಲಾಕ್ ಅಧ್ಯಕ್ಷರಿಗೆ ಮೊದಲ ಬಾರಿಗೆ ವಾಹನ ನೀಡಲಾಗಿದ್ದು, ಪಕ್ಷದ ಸಂಘಟನೆ ಹಾಗೂ ವಿವಿಧ ಕಾರ್ಯಕ್ರಮಗಳಿಗೆ ಇದನ್ನು ಬಳಸಿಕೊಳ್ಳಲಾಗುವುದು ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.

Ad Widget

Ad Widget

Ad Widget

Ad Widget

ಪುತ್ತೂರು: ಪಕ್ಷದ ಸಂಘಟನೆ ಮತ್ತು ಅಭಿವೃದ್ಧಿಯ ದೃಷ್ಟಿಯಿಂದ ಪುತ್ತೂರು ಬ್ಲಾಕ್ ಕಾಂಗ್ರೆಸ್‌ಗೆ ಹೊಸ ಬೊಲೆರೋ ವಾಹನವನ್ನು ಒದಗಿಸಲಾಗಿದೆ. ಕಾಂಗ್ರೆಸ್ ಭವನ ನಿರ್ಮಾಣ ಹಂತದಲ್ಲಿರುವಾಗಲೇ ಬ್ಲಾಕ್ ಅಧ್ಯಕ್ಷರಿಗೆ ಮೊದಲ ಬಾರಿಗೆ ವಾಹನ ನೀಡಲಾಗಿದ್ದು, ಪಕ್ಷದ ಸಂಘಟನೆ ಹಾಗೂ ವಿವಿಧ ಕಾರ್ಯಕ್ರಮಗಳಿಗೆ ಇದನ್ನು ಬಳಸಿಕೊಳ್ಳಲಾಗುವುದು ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.

Ad Widget

Ad Widget

Ad Widget alt="Ad Widget"/>

Ad Widget

ಪುತ್ತೂರಿಗೆ ಆಗಮಿಸಿದ ಬೊಲೆರೋ ವಾಹನವನ್ನು ‘ಬ್ಲಾಕ್ ಕಾಂಗ್ರೆಸ್ ವಾಹನ’ ಎಂದು ನಾಮಕರಣ ಮಾಡಿ, ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ ಹಾಗೂ ವಿಟ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪದ್ಮನಾಭ ಪೂಜಾರಿ ಸಣ್ಣಗುತ್ತು ಅವರಿಗೆ ಶಾಸಕ ಅಶೋಕ್ ಕುಮಾರ್ ರೈ ಹಸ್ತಾಂತರಿಸಿದರು.

Ad Widget

Ad Widget <> Ad Widget

ಮೂರು ಬ್ಲಾಕ್‌ಗಳಿಗೆ ಒಂದೇ ವಾಹನ
ಪುತ್ತೂರು, ವಿಟ್ಲ ಹಾಗೂ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್‌ಗಳ ಸಂಘಟನಾ ಚಟುವಟಿಕೆಗಳಿಗೆ ಈ ವಾಹನವನ್ನು ಬಳಸಲಾಗುತ್ತದೆ. ಶಾಸಕರು ಯಾವ ಕ್ಷೇತ್ರ ವ್ಯಾಪ್ತಿಗೆ ಭೇಟಿ ನೀಡುತ್ತಾರೋ, ಆ ಸಂದರ್ಭ ಆಯಾ ಬ್ಲಾಕ್‌ನ ಅಧ್ಯಕ್ಷರು ವಾಹನವನ್ನು ಬಳಸಿಕೊಂಡು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.



Ad Widget

ಪಕ್ಷದ ಸಂಘಟನೆ ಮತ್ತು ಅಭಿವೃದ್ಧಿಯ ದೃಷ್ಟಿಯಿಂದ ರಾಜ್ಯದಲ್ಲೇ ಮಾದರಿಯಾಗುವ ರೀತಿಯಲ್ಲಿ ಈ ಬ್ಲಾಕ್ ಕಾಂಗ್ರೆಸ್ ವಾಹನವನ್ನು ತರಿಸಲಾಗಿದೆ ಎಂದು ಅಶೋಕ್ ಕುಮಾರ್ ರೈ ತಿಳಿಸಿದರು.

Ad Widget

Ad Widget

ಕಾರ್ಯಕ್ರಮದಲ್ಲಿ ಪುತ್ತೂರು ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಮಹಮ್ಮದ್ ಬಡಗನ್ನೂರು ಹಾಗೂ ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ ಮಾತನಾಡಿದರು.

ವಿಟ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪದ್ಮನಾಭ ಪೂಜಾರಿ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಮುರಳೀಧರ್ ರೈ ಮಠಂತಬೆಟ್ಟು, ಪುಡಾ ಸದಸ್ಯ ನಿಹಾಲ್ ಪಿ. ಶೆಟ್ಟಿ, ಪುತ್ತೂರು ಕ್ಷೇತ್ರ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಡಾ. ರಾಜಾರಾಂ ಕೆ.ಬಿ., ಇಂಟಕ್ ಅಧ್ಯಕ್ಷ ಜಯಪ್ರಕಾಶ್ ಬದಿನಾರ್, ಎನ್‌ಎಸ್‌ಯುಐ ರಾಜ್ಯ ಉಪಾಧ್ಯಕ್ಷ ಫಾರೂಕ್ ಬಾಯಬ್ಬೆ, ಉದ್ಯಮಿ ಸಿಯಾನ್ ದರ್ಬೆ, ವಿಕ್ರಂ ರೈ ಸಾಂತ್ಯ ಮೊದಲಾದವರು ಉಪಸ್ಥಿತರಿದ್ದರು.

Ad Widget
Continue Reading

ಮಂಗಳೂರು

Chouta-ಫಾರಂ 7 ಕೊಟ್ಟ ಮಾತ್ರಕ್ಕೆ ಮತ ಡಿಲೀಟ್ ಆಗಲ್ಲ; ಅಕ್ರಮ ಡಿಲೀಷನ್‌ಗೆ ದಾಖಲೆ ತೋರಿಸಿ: ಕಾಂಗ್ರೆಸ್‌ಗೆ ಚೌಟ ಸವಾಲು

Published

on



Ad Widget

Ad Widget

Ad Widget

Ad Widget

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ಕುರಿತು ಕಾಂಗ್ರೆಸ್‌ ಜನರಲ್ಲಿ ಗೊಂದಲ ಸೃಷ್ಟಿಸುತ್ತಿದ್ದು, ಇದರ ನೆಪದಲ್ಲಿ ದೇಶಾದ್ಯಂತ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಆರೋಪಿಸಿದ್ದಾರೆ.

Ad Widget

Ad Widget

Ad Widget

Ad Widget

ಮಂಗಳೂರು, ಅ.6: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ಕುರಿತು ಕಾಂಗ್ರೆಸ್‌ ಜನರಲ್ಲಿ ಗೊಂದಲ ಸೃಷ್ಟಿಸುತ್ತಿದ್ದು, ಇದರ ನೆಪದಲ್ಲಿ ದೇಶಾದ್ಯಂತ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಆರೋಪಿಸಿದ್ದಾರೆ. ಫಾರಂ 7 ಸಲ್ಲಿಸಿದ ಮಾತ್ರಕ್ಕೆ ಮತದಾರರ ಹೆಸರನ್ನು ಅಳಿಸಲು ಸಾಧ್ಯವಿಲ್ಲ. ಅಕ್ರಮವಾಗಿ ಮತಗಳನ್ನು ಡಿಲೀಟ್‌ ಮಾಡಲಾಗಿದೆ ಎಂಬ ಆರೋಪಕ್ಕೆ ಕಾಂಗ್ರೆಸ್‌ ಬಳಿ ದಾಖಲೆಗಳಿದ್ದರೆ ಬಹಿರಂಗಪಡಿಸಲಿ ಎಂದು ಅವರು ಸವಾಲು ಹಾಕಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಮಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮತದಾರರ ಪಟ್ಟಿಯ ಪರಿಷ್ಕರಣೆ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಅಗತ್ಯವಾದ ಪ್ರಕ್ರಿಯೆ. ಇದಕ್ಕೆ ರಾಜಕೀಯ ಪಕ್ಷಗಳ ಬೂತ್‌ ಮಟ್ಟದ ಏಜೆಂಟರು (ಬಿಎಲ್‌ಎ–2) ಸಹಕರಿಸಬೇಕು. ಆದರೆ, ಕಾಂಗ್ರೆಸ್‌ ಈ ಪ್ರಕ್ರಿಯೆಯಲ್ಲಿ ತೊಡಗಿರುವ ಏಜೆಂಟರನ್ನು ಬೆದರಿಸುವ ಹಾಗೂ ಅಧಿಕಾರಿಗಳ ಕಾರ್ಯಕ್ಕೆ ಅಡ್ಡಿಪಡಿಸುವ ಪ್ರಯತ್ನ ಮಾಡುತ್ತಿದೆ ಎಂದು ದೂರಿದರು.

Ad Widget

Ad Widget <> Ad Widget

ಫಾರಂ 7 ಸಲ್ಲಿಸಿದ ತಕ್ಷಣ ಹೆಸರು ಡಿಲೀಟ್‌ ಆಗಲ್ಲ



Ad Widget

ಮತದಾರರು ಸ್ಥಳಾಂತರಗೊಂಡಿರುವುದು, ಮೃತಪಟ್ಟಿರುವುದು ಅಥವಾ ಭಾರತೀಯ ಪ್ರಜೆಯಲ್ಲ ಎಂಬ ಆಕ್ಷೇಪಣೆಗಳಿದ್ದಲ್ಲಿ ಫಾರಂ 7 ಮೂಲಕ ಅರ್ಜಿ ಸಲ್ಲಿಸಬಹುದು. ಆದರೆ, ಅರ್ಜಿ ಸಲ್ಲಿಕೆಯಾದ ಮಾತ್ರಕ್ಕೆ ಮತದಾರರ ಹೆಸರನ್ನು ಏಕಪಕ್ಷೀಯವಾಗಿ ಅಳಿಸಲು ಸಾಧ್ಯವಿಲ್ಲ. ಚುನಾವಣಾಧಿಕಾರಿಗಳು ಆಕ್ಷೇಪಣೆಯನ್ನು ಪರಿಶೀಲಿಸಿ, ಸೂಕ್ತ ದೃಢೀಕರಣದ ಬಳಿಕವೇ ನಿಯಮಾನುಸಾರ ಕ್ರಮ ಕೈಗೊಳ್ಳಲು ಸಾಧ್ಯ ಎಂದು ಚೌಟ ವಿವರಿಸಿದರು.

Ad Widget

Ad Widget

ಫಾರಂ 7 ಮೂಲಕ ಅಲ್ಪಸಂಖ್ಯಾತ ಮತದಾರರನ್ನು ಗುರಿಯಾಗಿಸಲಾಗುತ್ತಿದೆ ಎಂಬ ಕಾಂಗ್ರೆಸ್‌ ಆರೋಪವನ್ನು ಅವರು ತಳ್ಳಿಹಾಕಿದರು. ಅಕ್ರಮವಾಗಿ ಮತದಾರರ ಹೆಸರುಗಳನ್ನು ಅಳಿಸಲಾಗಿದೆ ಎಂಬುದಕ್ಕೆ ನಿರ್ದಿಷ್ಟ ದಾಖಲೆಗಳಿದ್ದರೆ ಚುನಾವಣಾ ಆಯೋಗದ ಮುಂದೆ ಸಲ್ಲಿಸಲಿ. ಅಂತಹ ಮತದಾರರನ್ನೇ ಕರೆತಂದು ತೋರಿಸಲಿ ಎಂದು ಸವಾಲು ಹಾಕಿದರು.

5.54 ಕೋಟಿ ಮತದಾರರ ಲೆಕ್ಕ ಮುಂದಿಟ್ಟು ಗೊಂದಲ ಎಂದ ಚೌಟ

ಕರ್ನಾಟಕದಲ್ಲಿ 5.54 ಕೋಟಿಗೂ ಅಧಿಕ ಮತದಾರರಿದ್ದರೂ ಕರಡು ಮತದಾರರ ಪಟ್ಟಿಯಲ್ಲಿ ಸುಮಾರು 4.46 ಕೋಟಿ ಮತದಾರರಿದ್ದಾರೆ ಎಂದು ಕಾಂಗ್ರೆಸ್‌ ಹೇಳುವ ಮೂಲಕ ಜನರಲ್ಲಿ ಗೊಂದಲ ಮೂಡಿಸುತ್ತಿದೆ ಎಂದು ಅವರು ಆರೋಪಿಸಿದರು.

ಕರಡು ಮತದಾರರ ಪಟ್ಟಿ ಅಂತಿಮವಲ್ಲ. ಕರಡು ಪಟ್ಟಿ ಪ್ರಕಟವಾದ ಬಳಿಕವೂ ಹೆಸರು ಸೇರ್ಪಡೆ, ತಿದ್ದುಪಡಿ ಹಾಗೂ ಆಕ್ಷೇಪಣೆ ಸಲ್ಲಿಸಲು ಅವಕಾಶವಿದೆ. ಇಂತಹ ಪ್ರಕ್ರಿಯೆಯ ವಿರುದ್ಧವೇ ಜನರನ್ನು ಎತ್ತಿಕಟ್ಟುವುದು ಸರಿಯಲ್ಲ ಎಂದು ಹೇಳಿದರು.

ಮುಖ್ಯಮಂತ್ರಿಯ ವಿರುದ್ಧ ಎಫ್‌ಐಆರ್‌ಗೆ ಆಗ್ರಹ

ಕಾಂಗ್ರೆಸ್‌ಗೆ ಸಂವಿಧಾನ ಮತ್ತು ಕಾನೂನಿನ ಬಗ್ಗೆ ಗೌರವವಿಲ್ಲ ಎಂದು ಆರೋಪಿಸಿದ ಚೌಟ, ಮುಖ್ಯಮಂತ್ರಿಯೊಬ್ಬರು ಚುನಾವಣಾ ಆಯೋಗದ ಕಚೇರಿ ಎದುರು ಪ್ರತಿಭಟನೆ ನಡೆಸುವುದು ಸರಿಯೇ ಎಂದು ಪ್ರಶ್ನಿಸಿದರು. ಸಾಂವಿಧಾನಿಕ ಸಂಸ್ಥೆಗಳ ಕಾರ್ಯವಿಧಾನ ಹಾಗೂ ಪ್ರತಿಭಟನೆಗೆ ಸಂಬಂಧಿಸಿದ ನಿಯಮಗಳ ಬಗ್ಗೆ ಅರಿವು ಇರಬೇಕು. ಚುನಾವಣಾ ಆಯೋಗದ ಕಾರ್ಯದಲ್ಲಿ ರಾಜಕೀಯ ಹಸ್ತಕ್ಷೇಪ ಮಾಡಬಾರದು. ಈ ವಿಚಾರದಲ್ಲಿ ಮುಖ್ಯಮಂತ್ರಿಯ ವಿರುದ್ಧ ಎಫ್‌ಐಆರ್‌ ದಾಖಲಿಸಬೇಕು ಎಂದು ಆಗ್ರಹಿಸಿದರು.

ಬಿಜೆಪಿ ಕಾರ್ಯಕರ್ತರಿಗೆ ಬೆದರಿಕೆ ಹಾಕಿದರೆ ಸುಮ್ಮನಿರಲ್ಲ

ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಬಿಜೆಪಿ ಕಾರ್ಯಕರ್ತರು ಕಾನೂನುಬದ್ಧವಾಗಿ ಪಾಲ್ಗೊಳ್ಳುತ್ತಿದ್ದಾರೆ. ಅವರನ್ನು ಬೆದರಿಸುವ ಅಥವಾ ಒತ್ತಡಕ್ಕೆ ಒಳಪಡಿಸುವ ಪ್ರಯತ್ನಗಳನ್ನು ಸಹಿಸುವುದಿಲ್ಲ ಎಂದು ಚೌಟ ಎಚ್ಚರಿಸಿದರು. ಆಕ್ಷೇಪಣೆಗಳಿಗೆ ಬೆದರಿಕೆ ಮೂಲಕ ಉತ್ತರಿಸುವ ಬದಲು ನಿಗದಿತ ಕಾನೂನು ಪ್ರಕ್ರಿಯೆಯ ಮೂಲಕವೇ ಮತದಾರರ ಪಟ್ಟಿಯನ್ನು ಪರಿಷ್ಕರಿಸಬೇಕು ಎಂದರು.

ಮತದಾರರ ಪಟ್ಟಿಯಲ್ಲಿ ಅನರ್ಹರ ಹೆಸರುಗಳು ಉಳಿದರೆ ಅರ್ಹ ಮತದಾರರ ಹಕ್ಕಿಗೆ ಧಕ್ಕೆಯಾಗಬಹುದು. ಹೀಗಾಗಿ ಶುದ್ಧ ಮತದಾರರ ಪಟ್ಟಿ ಪ್ರತಿಯೊಬ್ಬ ಮತದಾರನ ಹಕ್ಕು ಎಂದು ಪ್ರತಿಪಾದಿಸಿದ ಅವರು, ಎಸ್‌ಐಆರ್‌ಗೆ ಕೋಮು ಬಣ್ಣ ನೀಡುವ ಬದಲು ವಾಸ್ತವಾಂಶಗಳ ಆಧಾರದಲ್ಲಿ ಚರ್ಚೆ ನಡೆಯಬೇಕು ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಪೂಜಾ ಪೈ, ಪೂರ್ಣಿಮಾ, ಸುಜಿತ್‌ ಪ್ರತಾಪ್‌, ರಾಜಗೋಪಾಲ ರೈ, ವಸಂತ ಜೆ. ಪೂಜಾರಿ, ಜೀವನ್‌ ಕುಮಾರ್‌ ತೊಕ್ಕೊಟ್ಟು ಹಾಗೂ ಸಂಜಯ ಪ್ರಭು ಉಪಸ್ಥಿತರಿದ್ದರು.

Ad Widget
Continue Reading

ಶಿಕ್ಷಣ

Philomena-ಸಂತ ಫಿಲೋಮಿನಾ ಕಾಲೇಜು : 35 ವರ್ಷಗಳ ಬಳಿಕ ಮತ್ತೆ ಒಂದಾದ 1991ರ ಬಿ.ಎಸ್ಸಿ. ಬ್ಯಾಚ್; ನೆನಪು, ನಂಟು ಮತ್ತು ಗುರು-ಗೌರವದ ಭಾವಪೂರ್ಣ ಸಂಗಮ

Published

on



Ad Widget

Ad Widget

Ad Widget

Ad Widget

ಕಾಲ ಐದು ದಶಕಗಳತ್ತ ಸಾಗಿದರೂ, ಕಾಲೇಜಿನ ಆವರಣದಲ್ಲಿ ಕಳೆದ ಯೌವನದ ದಿನಗಳ ನೆನಪುಗಳು ಮಾತ್ರ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿಯುತ್ತವೆ. ಅಂತಹ ಸುವರ್ಣ ನೆನಪುಗಳನ್ನು ಮತ್ತೊಮ್ಮೆ ಜೀವಂತಗೊಳಿಸಿದ ಅಪೂರ್ವ ಕ್ಷಣಕ್ಕೆ ಸಂತ ಫಿಲೋಮಿನಾ ಕಾಲೇಜು ಸಾಕ್ಷಿಯಾಯಿತು. 1991ರ ಬಿ.ಎಸ್ಸಿ. ಬ್ಯಾಚ್‌ನ ಹಿರಿಯ ವಿದ್ಯಾರ್ಥಿಗಳು 35 ವರ್ಷಗಳ ಬಳಿಕ ತಮ್ಮ ಎರಡನೇ ಪುನರ್ಮಿಲನ ಹಾಗೂ ಗುರುವಂದನಾ ಕಾರ್ಯಕ್ರಮಕ್ಕಾಗಿ ರವಿವಾರ ಪಿಜಿ ಸೆಮಿನಾರ್ ಹಾಲ್‌ನಲ್ಲಿ ಸೇರಿ, ಹಳೆಯ ಸ್ನೇಹ, ಗೌರವ ಮತ್ತು ಆತ್ಮೀಯತೆಯನ್ನು ಮರುಕಳಿಸಿದರು.

Ad Widget

Ad Widget

Ad Widget

Ad Widget

ಪುತ್ತೂರು, ಅ.4: ಕಾಲ ಐದು ದಶಕಗಳತ್ತ ಸಾಗಿದರೂ, ಕಾಲೇಜಿನ ಆವರಣದಲ್ಲಿ ಕಳೆದ ಯೌವನದ ದಿನಗಳ ನೆನಪುಗಳು ಮಾತ್ರ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿಯುತ್ತವೆ. ಅಂತಹ ಸುವರ್ಣ ನೆನಪುಗಳನ್ನು ಮತ್ತೊಮ್ಮೆ ಜೀವಂತಗೊಳಿಸಿದ ಅಪೂರ್ವ ಕ್ಷಣಕ್ಕೆ ಸಂತ ಫಿಲೋಮಿನಾ ಕಾಲೇಜು ಸಾಕ್ಷಿಯಾಯಿತು. 1991ರ ಬಿ.ಎಸ್ಸಿ. ಬ್ಯಾಚ್‌ನ ಹಿರಿಯ ವಿದ್ಯಾರ್ಥಿಗಳು 35 ವರ್ಷಗಳ ಬಳಿಕ ತಮ್ಮ ಎರಡನೇ ಪುನರ್ಮಿಲನ ಹಾಗೂ ಗುರುವಂದನಾ ಕಾರ್ಯಕ್ರಮಕ್ಕಾಗಿ ರವಿವಾರ ಪಿಜಿ ಸೆಮಿನಾರ್ ಹಾಲ್‌ನಲ್ಲಿ ಸೇರಿ, ಹಳೆಯ ಸ್ನೇಹ, ಗೌರವ ಮತ್ತು ಆತ್ಮೀಯತೆಯನ್ನು ಮರುಕಳಿಸಿದರು.

Ad Widget

Ad Widget

Ad Widget alt="Ad Widget"/>

Ad Widget

ಅತ್ಯಂತ ಸುಂದರ ಹಾಗೂ ಮನೋಜ್ಞವಾಗಿ ನಡೆದ ಈ ಪುನರ್ಮಿಲನ ಕಾರ್ಯಕ್ರಮದಲ್ಲಿ 1991ರ ಬ್ಯಾಚ್‌ನ ಹಳೆ ವಿದ್ಯಾರ್ಥಿಗಳು ತಮ್ಮ ಕಾಲೇಜು ದಿನಗಳ ನೆನಪುಗಳನ್ನು ಮೆಲುಕು ಹಾಕುತ್ತಾ, ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು. ವೃತ್ತಿ ಹಾಗೂ ಸಾಮಾಜಿಕ ಬದುಕಿನಲ್ಲಿ ವಿವಿಧ ಉನ್ನತ ಸ್ಥಾನಗಳನ್ನು ಅಲಂಕರಿಸಿರುವ ಅವರು, ಕಾಲೇಜಿನ ಆವರಣದಲ್ಲಿ ಮತ್ತೆ ವಿದ್ಯಾರ್ಥಿಗಳಂತೆಯೇ ಬೆರೆತು, ತಮ್ಮ ಸುವರ್ಣ ದಿನಗಳನ್ನು ನೆನಪಿಸಿಕೊಂಡರು.

Ad Widget

Ad Widget <> Ad Widget

ಕಾಲೇಜಿನ ಪ್ರಾಂಶುಪಾಲರಾದ ರೆ.ಡಾ. ಆಂಟನಿ ಪ್ರಕಾಶ್ ಮೊಂತೆರೋ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.



Ad Widget

ಅವರು ಮಾತನಾಡಿ, “ಕಾಲೇಜು ಬದುಕಿತ್ತು; ಬದುಕುತ್ತಿದೆ; ಮುಂದೆಯೂ ಬದುಕಲಿದೆ. ಆದರೆ ಅದಕ್ಕಿಂತ ಮುಖ್ಯವಾದುದು ಪ್ರೀತಿ, ಗೌರವ ಮತ್ತು ಸದ್ಭಾವನೆ. ನಿಮ್ಮಂತಹ ಹಿರಿಯ ವಿದ್ಯಾರ್ಥಿಗಳ ಹಾಗೂ ಸಾರ್ವಜನಿಕರ ಸದ್ಭಾವನೆಯಿಂದಲೇ ಕಾಲೇಜು ನಿರಂತರವಾಗಿ ಬೆಳೆಯುತ್ತಿದೆ,” ಎಂದು ಹೇಳಿ, ಹಿರಿಯ ವಿದ್ಯಾರ್ಥಿಗಳು ಕಾರ್ಯಕ್ರಮವನ್ನು ಅತ್ಯಂತ ಶಿಸ್ತಿನಿಂದ ಹಾಗೂ ಸಮಯಪಾಲನೆಯೊಂದಿಗೆ ಸಂಘಟಿಸಿರುವುದನ್ನು ಶ್ಲಾಘಿಸಿದ ಅವರು, ಅವರ ಶಿಸ್ತು ಮತ್ತು ಸಮಯ ನಿರ್ವಹಣೆಯ ಸೂಕ್ಷ್ಮತೆಯು ಯಾರಿಗಾದರೂ ಮಾದರಿಯಾಗಬಲ್ಲದು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

Ad Widget

Ad Widget

ಕಾಲೇಜಿನ ಅಭಿವೃದ್ಧಿಗೆ ₹2 ಲಕ್ಷ ಕೊಡುಗೆ- ನೆನಪಿನಿಂದ ನಂಟಿಗೆ, ನಂಟಿನಿಂದ ಕೊಡುಗೆಗೆ
ಪುನರ್ಮಿಲನವು ಕೇವಲ ಹಳೆಯ ನೆನಪುಗಳನ್ನು ಮೆಲುಕು ಹಾಕುವ ಕಾರ್ಯಕ್ರಮವಾಗಿ ಉಳಿಯದೆ, ತಾವು ಕಲಿತ ಸಂಸ್ಥೆಯ ಮೇಲಿನ ಋಣ ತೀರಿಸುವ ಸಾರ್ಥಕ ಸಂದರ್ಭವಾಗಿಯೂ ಪರಿಣಮಿಸಿತು.ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ 1991ರ ಬ್ಯಾಚ್‌ನ ಹಿರಿಯ ವಿದ್ಯಾರ್ಥಿಗಳು ಒಟ್ಟಾಗಿ ₹2 ಲಕ್ಷವನ್ನು ಕಾಲೇಜಿನ ಅಭಿವೃದ್ಧಿ ಕಾರ್ಯಗಳಿಗಾಗಿ ದೇಣಿಗೆಯಾಗಿ ನೀಡಿದರು.ತಾವು ವಿದ್ಯಾಭ್ಯಾಸ ಪಡೆದ ಸಂಸ್ಥೆಯ ಅಭಿವೃದ್ಧಿಗೆ ದಶಕಗಳ ಬಳಿಕವೂ ಕೈಜೋಡಿಸಿದ ಹಿರಿಯ ವಿದ್ಯಾರ್ಥಿಗಳ ಈ ಕೊಡುಗೆ ಕಾಲೇಜಿನ ಮೇಲಿನ ಅವರ ಪ್ರೀತಿ, ಕೃತಜ್ಞತೆ ಹಾಗೂ ಸದ್ಭಾವನೆಯ ಪ್ರತೀಕವಾಗಿ ಮೂಡಿಬಂತು.

ವೃತ್ತಿ ಸಾಧನೆಗೆ ಗೌರವ
ಹಿರಿಯ ವಿದ್ಯಾರ್ಥಿಗಳ ವೃತ್ತಿಪರ ಸಾಧನೆಗಳನ್ನೂ ಕಾರ್ಯಕ್ರಮದಲ್ಲಿ ಗುರುತಿಸಲಾಯಿತು. ಡಾ. ಗಿರೀಶ್ ಭಟ್ ಅಜಕ್ಕಳ ಹಾಗೂ ಶ್ರೀ ನವೀನ್ ಕುಮಾರ್ ಅವರನ್ನು ಅವರ ವೃತ್ತಿಪರ ಸಾಧನೆಗಳಿಗಾಗಿ ಗೌರವಿಸಲಾಯಿತು. ವೃತ್ತಿಜೀವನದಲ್ಲಿನ ಸಾಧನೆಗಳು ಹಾಗೂ ಪ್ರಗತಿಯನ್ನು ಗುರುತಿಸಿ ವಿವಿಧ ಗೌರವಗಳನ್ನು ನೀಡಿ ಅಭಿನಂದಿಸಲಾಯಿತು. ರೈಲ್ವೆ ಉದ್ಯೋಗದಲ್ಲಿನ ಪದೋನ್ನತಿಯೂ ಸೇರಿದಂತೆ ವೃತ್ತಿಪರ ಕ್ಷೇತ್ರದಲ್ಲಿ ಸಾಧನೆ ಮಾಡಿದ ಹಿರಿಯ ವಿದ್ಯಾರ್ಥಿಗಳ ಯಶಸ್ಸನ್ನು ಕಾರ್ಯಕ್ರಮದಲ್ಲಿ ಮೆಚ್ಚುಗೆಯಿಂದ ಸ್ಮರಿಸಲಾಯಿತು.

ಕಾರ್ಯಕ್ರಮದ ಆರಂಭದಲ್ಲಿ ವಾಣಿ ಹಾಗೂ ಡಾ. ಚಂದ್ರಶೇಖರ್ ಕೆ ಜಿ ಪ್ರಾರ್ಥನೆ ನೆರವೇರಿಸಿದರು. ಡಾ. ಕೃಷ್ಣಪ್ರಭಾ ಕಾರ್ಯಕ್ರಮ ನಿರ್ವಹಿಸಿದರು. ಶಿವಕುಮಾರ್ ಸ್ವಾಗತಿಸಿದರು. ಶಿವನಾಥ ರೈ ಮೆಗಿನಗುತ್ತು ಪ್ರಾಸ್ತಾವಿಕ ನುಡಿಗಳ ಮೂಲಕ ಕಾರ್ಯಕ್ರಮದ ಆಶಯವನ್ನು ವಿವರಿಸಿದರು.

ಡಾ. ಗಿರೀಶ್ ಭಟ್ ಅಜಕ್ಕಳ ವಂದಿಸಿದರು.

ನೆನಪುಗಳೊಂದಿಗೆ ಮತ್ತೆ ವಿದ್ಯಾರ್ಥಿಗಳಾದ ಹಿರಿಯ ವಿದ್ಯಾರ್ಥಿಗಳು
ಇತ್ತೀಚಿನ ವರ್ಷಗಳಲ್ಲಿ ಕಾಲೇಜಿನ ವಿವಿಧ ಬ್ಯಾಚ್‌ಗಳ ಹಿರಿಯ ವಿದ್ಯಾರ್ಥಿಗಳು ತಮ್ಮ ಸಹಪಾಠಿಗಳನ್ನು ಒಗ್ಗೂಡಿಸಿಕೊಂಡು ಕಾಲೇಜಿಗೆ ಭೇಟಿ ನೀಡುತ್ತಿರುವುದು ಗಮನಾರ್ಹವಾಗಿದೆ. ಇಂತಹ ಪುನರ್ಮಿಲನಗಳು ಕೇವಲ ಭೇಟಿಗೆ ಸೀಮಿತವಾಗದೆ, ಹಳೆಯ ಸುವರ್ಣ ನೆನಪುಗಳನ್ನು ಮರುಕಳಿಸುವ, ಸ್ನೇಹದ ನಂಟನ್ನು ಗಟ್ಟಿಗೊಳಿಸುವ ಹಾಗೂ ತಾವು ಬೆಳೆದ ಸಂಸ್ಥೆಯೊಂದಿಗೆ ಭಾವನಾತ್ಮಕ ಸಂಬಂಧವನ್ನು ಪುನಃ ಜೋಡಿಸುವ ವೇದಿಕೆಗಳಾಗಿವೆ.

ವೃತ್ತಿ ಮತ್ತು ಸಾಮಾಜಿಕ ಜೀವನದಲ್ಲಿ ಎಷ್ಟೇ ಉನ್ನತ ಸ್ಥಾನದಲ್ಲಿದ್ದರೂ, ಕಾಲೇಜಿನ ಆವರಣಕ್ಕೆ ಕಾಲಿಟ್ಟ ಕ್ಷಣ ಅವರು ತಮ್ಮ ಹುದ್ದೆ, ಸ್ಥಾನಮಾನಗಳನ್ನು ಮರೆತು ಮತ್ತೆ ತಮ್ಮ ಕಾಲೇಜು ದಿನಗಳ ವಿದ್ಯಾರ್ಥಿಗಳಾಗಿ, ಸ್ನೇಹಿತರಾಗಿ, ಸಹಪಾಠಿಗಳಾಗಿ ಬೆರೆತದ್ದು ಕಾರ್ಯಕ್ರಮದ ವಿಶೇಷತೆಯಾಗಿತ್ತು.

ಒಂದು ಋಣಸ್ಮರಣೆ; ಗುರುಗಳಿಗೆ ಭಾವಪೂರ್ಣ ಗುರುವಂದನೆ
ಪ್ರೊ. ಅಣ್ಣಾಜಿರಾವ್ | ಪ್ರೊ. ಹರಿನಾರಾಯಣ ಮಾಡಾವು | ಪ್ರೊ. ವಿಷ್ಣು ಭಟ್ | ಡಾ. ಎ.ಪಿ. ರಾಧಾಕೃಷ್ಣ | ಡಾ. ಕೃಷ್ಣಕುಮಾರ್ | ಪ್ರೊ. ಗಣೇಶ್ ಭಟ್ | ಪ್ರೊ. ಬಾಲಕೃಷ್ಣ | ಪ್ರೊ. ವಸಂತಿ | ಪ್ರೊ. ಇಟಾ ಡಿಸೋಜಾ
1991ರ ಬಿ.ಎಸ್ಸಿ. ಬ್ಯಾಚ್‌ನ ಹಳೆಯ ವಿದ್ಯಾರ್ಥಿಗಳು ತಮ್ಮ ಬದುಕಿಗೆ ಜ್ಞಾನ ಮತ್ತು ದಿಕ್ಕು ನೀಡಿದ ಈ ಗುರುಗಳನ್ನು ಏಲಕ್ಕಿ ಹಾರ, ಸರಸ್ವತಿ ವಿಗ್ರಹ, ಶಾಲು ಹಾಗೂ ಹಣ್ಣುಗಳನ್ನು ನೀಡಿ ಗುರುವಂದನೆಯೊಂದಿಗೆ ಸನ್ಮಾನಿಸಿದರು.

ಗುರುವಂದನೆ ಸ್ವೀಕರಿಸಲು ಅನಾರೋಗ್ಯ ಮತ್ತು ವಯೋಸಹಜ ಕಾರಣಗಳಿಗೆ ಸಮಾರಂಭಕ್ಕೆ ಬರಲಾಗದ ಪ್ರೊ. ಲಕ್ಷ್ಮಿನಾರಾಯಣ ಕಡಂಬಳಿತ್ತಾಯ, ಪ್ರೊ.ಕೇಶವ ಭಟ್,ಪ್ರೊ.ಕಾನ್ಸೆಪ್ಟ ಲೋಬೋ, ಪ್ರೊಸಿರಿಲ್ ಮಥಿಯಾಸ್ ಅವರ ನಿವಾಸಗಳಿಗೇ ಹುಡುಕಿಕೊಂಡು ಹೋದ ಹಿರಿಯ ವಿದ್ಯಾರ್ಥಿಗಳು ಅಲ್ಲಿಯೇ ಗುರುವಂದನೆ ಸಲ್ಲಿಸಿ ಕೃತಾರ್ಥರಾದದ್ದು ವಿಶೇಷವಾಗಿತ್ತು.

ಇದು ಕೇವಲ ಸನ್ಮಾನವಾಗಿರದೆ, ತಮ್ಮ ಬದುಕಿಗೆ ಜ್ಞಾನ, ಶಿಸ್ತು, ಮೌಲ್ಯ ಮತ್ತು ದಿಕ್ಕು ನೀಡಿದ ಗುರುಗಳೆಡೆಗೆ ಹಳೆಯ ವಿದ್ಯಾರ್ಥಿಗಳು ಸಲ್ಲಿಸಿದ ಕೃತಜ್ಞತೆಯ ಸಂಕೇತವಾಗಿತ್ತು. ಕಾಲೇಜು ದಿನಗಳಲ್ಲಿ ಶಿಕ್ಷಕರಿಂದ ಪಡೆದ ಮಾರ್ಗದರ್ಶನವನ್ನು ಹಲವು ದಶಕಗಳ ಬಳಿಕವೂ ಸ್ಮರಿಸಿ ಗೌರವ ಸಲ್ಲಿಸಿದ ಕ್ಷಣವು ಕಾರ್ಯಕ್ರಮಕ್ಕೆ ವಿಶೇಷ ಭಾವನಾತ್ಮಕ ಸ್ಪರ್ಶ ನೀಡಿತು.

ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಲ್ಲಿ ಡಾ ಕೃಷ್ಣಪ್ರಭಾ, ರಾಜ್ಯ ಮಾಹಿತಿ ಆಯುಕ್ತ ಬದ್ರುದ್ದೀನ್ ಮಾಣಿ, ಶಿವನಾಥ ರೈ ಮೆಗಿನಗುತ್ತು, ಲಕ್ಷ್ಮೀನಾರಾಯಣ ಕಡಂಬಳಿತ್ತಾಯ ಹಾಗೂ ವಾಲೇರಿಯನ್ ಡಿಸೋಜಾ ಪ್ರಮುಖ ಪಾತ್ರ ವಹಿಸಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಹಿರಿಯ ವಿದ್ಯಾರ್ಥಿ ಪೊನ್ನಪ್ಪ ಅಡ್ಲ್ಯಾಬ್ಸ್, ಕಾಲೇಜಿನ ಪಿಆರ್‌ಒ ಡಾ. ಭಾರತಿ ಎಸ್. ರೈ, ಉಪಕುಲಸಚಿವ (ಶೈಕ್ಷಣಿಕ) ವಿಪಿನ್ ನಾಯಕ್, ಎನ್‌ಸಿಸಿ ನೌಕಾ ವಿಭಾಗದ ಸಬ್ ಲೆಫ್ಟಿನೆಂಟ್ ತೇಜಸ್ವಿ ಭಟ್, ಉಪಕುಲಸಚಿವ (ಮೌಲ್ಯಮಾಪನ) ಅಭಿಷೇಕ್ ಸುವರ್ಣ ಹಾಗೂ ಸ್ನಾತಕೋತ್ತರ ವಾಣಿಜ್ಯ ವಿಭಾಗದ ಸಂಯೋಜಕ ಹರ್ಷಿತ್ ಕುಮಾರ್ ಉಪಸ್ಥಿತರಿದ್ದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading