ಅಪರಾಧ
Puttur-ಪುತ್ತೂರು : Facebook ನಲ್ಲಿ Trading ಜಾಹೀರಾತು; ಹೂಡಿಕೆ ಮಾಡಿ ಮೋಸ ಹೋದ ವ್ಯಕ್ತಿ
ಪುತ್ತೂರು : ಇಲ್ಲಿನ ನಿವಾಸಿಯೊಬ್ಬರು Facebook ನಲ್ಲಿ Trading ಬಗ್ಗೆ ಬಂದ ಜಾಹೀರಾತು ನೋಡಿ ಹಣ ಹೂಡಿಕೆ ಮಾಡಿ ಲಕ್ಷಾಂತರ ರೂಪಾಯಿ ಕಳೆದುಕೊಂಡು ಮೊಸ ಹೋದ ಘಟನೆ ನಡೆದಿದ್ದು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪುತ್ತೂರಿನ ಜಾನ್ ಪ್ರವೀಣ್ ಮಾಡ್ತಾ (46) ರವರು ಮೋಸ ಹೋದವರು. ಇವರು ಜೂ. 13ರಂದು Facebook ನಲ್ಲಿ trading ಬಗ್ಗೆ ಬಂದ ಜಾಹಿರಾತಿನಲ್ಲಿದ್ದ ಲಿಂಕ್ ಮೂಲಕ Accel S tudent Group C851 ಎಂಬ Whatsapp group ಗೆ Join ಆಗಿರುತ್ತಾರೆ. ಅದೇ ವಾಟ್ಸಾಪ್ ಗ್ರೂಪ್ ನಿಂದ ಅವರಿಗೆ trading ಬಗ್ಗೆ ಆರೋಪಿಗಳು ಮಾಹಿತಿ ಕಳುಹಿಸಿರುತ್ತಾರೆ. ಅದರಂತೆ ಅವರು ACVVL online APP ನ್ನು Install ಮಾಡಿದ್ದು ನಂತರ ACVVL online App ನಲ್ಲಿ ಹಣ Investment ಮಾಡಲು ಹೇಳಿ ಆರೋಪಿಗಳು ವಿವಿಧ ಬ್ಯಾಂಕ್ ಖಾತೆಗಳನ್ನು ನೀಡಿದ್ದಾರೆ.
ಆರೋಪಿಗಳು ನೀಡಿದ ಬ್ಯಾಂಕ್ ಖಾತೆಗಳಿಗೆ ಮಾಡ್ತಾ ಹಾಗೂ ಅವರ ಪತ್ನಿಯ ಬ್ಯಾಂಕ್ ಖಾತೆಯಿಂದ ಹಂತಹಂತವಾಗಿ ಹಣ ವರ್ಗಾವಣೆ ಮಾಡಿದ್ದು, ಅದರಲ್ಲಿ ಅವರಿಗೆ ರೂ.21,000/- ಹಣ ವಾಪಾಸ್ ಬಂದಿದೆ. APP ನಲ್ಲಿ ಮಾಡ್ತಾರವರು Investment ಮಾಡಿದ ಹಣ Display ಯಲ್ಲಿ ತೋರಿಸುತ್ತಿದ್ದರಿಂದ ಅವರು ಹಣ ಹಾಕಿದ್ದು, ನಂತರ ಯಾವುದೇ ಹಣ ವಾಪಾಸ್ ಬಂದಿರುವುದಿಲ್ಲ.
Facebook ನಲ್ಲಿ Trading ಬಗ್ಗೆ ಬಂದ ಜಾಹೀರಾತು ನೋಡಿ ರೂ.22,35,000/- ಹಣ Investment ಮಾಡಿ ಮಾಡ್ತಾರವರು ಮೋಸ ಹೋಗಿದ್ದು ಅವರು ನೀಡಿದ ದೂರಿನ ಮೇರೆಗೆ ಸಿಇಎನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಅ.ಕ್ರ: 26/2024 ಕಲಂ: 66 (C) 66 (D) IT Act ರಂತೆ ಪ್ರಕರಣ ದಾಖಲಾಗಿರುತ್ತದೆ.
ಅಂತರ ರಾಜ್ಯ
Premananda Ashram-ಪ್ರೇಮಾನಂದ ಆಶ್ರಮದ ಶಿಷ್ಯನ ಸಾವು ಪ್ರಕರಣಕ್ಕೆ ಟ್ವಿಸ್ಟ್: ರಕ್ತದ ಕಲೆ, ಸಿಸಿಟಿವಿ ದೃಶ್ಯಗಳ ಪರಿಶೀಲನೆ
ಪ್ರೇಮಾನಂದ ಮಹಾರಾಜರ ಆಶ್ರಮದಲ್ಲಿ ಶಿಷ್ಯ ರಸಿಕ್ ದುಲಾರಿ ನಾಲ್ಕನೇ ಮಹಡಿಯಿಂದ ಬಿದ್ದು ಮೃತಪಟ್ಟ ಪ್ರಕರಣದ ತನಿಖೆಯನ್ನು ಮಥುರಾ ಪೊಲೀಸರು ಚುರುಕುಗೊಳಿಸಿದ್ದಾರೆ. ಸೆ.25ರಂದು ನಡೆದ ಈ ಘಟನೆ ಆರಂಭದಲ್ಲಿ ಆತ್ಮಹತ್ಯೆ ಎಂದು ಪೊಲೀಸರು ಪರಿಗಣಿಸಿದ್ದರು. ಆದರೆ, ಸಿಸಿಟಿವಿ ದೃಶ್ಯಗಳು ಹಾಗೂ ತನಿಖೆಯಲ್ಲಿ ಸಿಕ್ಕಿರುವ ಕೆಲವು ಮಾಹಿತಿಗಳಿಂದ ಪ್ರಕರಣವು ಅನೂಹ್ಯ ತಿರುವು ಪಡೆದಿದೆ.
ಮಥುರಾ: ಪ್ರೇಮಾನಂದ ಮಹಾರಾಜರ ಆಶ್ರಮದಲ್ಲಿ ಶಿಷ್ಯ ರಸಿಕ್ ದುಲಾರಿ ನಾಲ್ಕನೇ ಮಹಡಿಯಿಂದ ಬಿದ್ದು ಮೃತಪಟ್ಟ ಪ್ರಕರಣದ ತನಿಖೆಯನ್ನು ಮಥುರಾ ಪೊಲೀಸರು ಚುರುಕುಗೊಳಿಸಿದ್ದಾರೆ. ಸೆ.25ರಂದು ನಡೆದ ಈ ಘಟನೆ ಆರಂಭದಲ್ಲಿ ಆತ್ಮಹತ್ಯೆ ಎಂದು ಪೊಲೀಸರು ಪರಿಗಣಿಸಿದ್ದರು. ಆದರೆ, ಸಿಸಿಟಿವಿ ದೃಶ್ಯಗಳು ಹಾಗೂ ತನಿಖೆಯಲ್ಲಿ ಸಿಕ್ಕಿರುವ ಕೆಲವು ಮಾಹಿತಿಗಳಿಂದ ಪ್ರಕರಣವು ಅನೂಹ್ಯ ತಿರುವು ಪಡೆದಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ 85 ಮಂದಿಯನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ. ರಸಿಕ್ ಅವರ ಕುಟುಂಬಸ್ಥರು, ಸ್ನೇಹಿತರು ಹಾಗೂ ಹಳೆಯ ಪರಿಚಯಸ್ಥರಿಂದಲೂ ಮಾಹಿತಿ ಪಡೆಯಲಾಗುತ್ತಿದೆ. ಆಶ್ರಮಕ್ಕೆ ಸೇರುವ ಮುನ್ನ ಅವರ ಜೀವನ ಹೇಗಿತ್ತು, ಬಳಿಕ ಅವರ ನಡೆ-ನುಡಿಯಲ್ಲಿ ಯಾವುದೇ ಬದಲಾವಣೆಯಾಗಿತ್ತೇ ಎಂಬುದನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.
ಆಶ್ರಮಕ್ಕೆ ಸೇರುವವರ ವೈಯಕ್ತಿಕ ಮೊಬೈಲ್‌ಗಳನ್ನು ಪಡೆದುಕೊಂಡು, ಬದಲಿಗೆ ಆಶ್ರಮದ ವ್ಯವಸ್ಥೆಯಲ್ಲಿರುವ ಮೊಬೈಲ್ ಮತ್ತು ಸಿಮ್ ನೀಡಲಾಗುತ್ತಿತ್ತು ಎನ್ನಲಾಗಿದೆ. ಹೀಗೆ ಮೊಬೈಲ್ ಬದಲಾಯಿಸುವ ಅಗತ್ಯ ಏನಿತ್ತು, ಆ ಮೊಬೈಲ್‌ಗಳ ಬಳಕೆಯ ಮೇಲೆ ಯಾರಾದರೂ ನಿಗಾ ಇಡುತ್ತಿದ್ದರೇ ಎಂಬುದನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.
ಆಶ್ರಮದಲ್ಲಿದ್ದವರು ಕುಟುಂಬದವರು ಹಾಗೂ ಸ್ನೇಹಿತರನ್ನು ಎಷ್ಟು ಬಾರಿ ಸಂಪರ್ಕಿಸುತ್ತಿದ್ದರು ಎಂಬುದನ್ನೂ ತನಿಖೆ ನಡೆಸಲಾಗುತ್ತಿದೆ. ರಸಿಕ್ ಅವರ ಹಳೆಯ ಮೊಬೈಲ್, ಹೊಸ ಸಿಮ್, ಕರೆಗಳ ವಿವರ ಹಾಗೂ ಸಂದೇಶಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.
ಸಾವಿಗೂ ಮುನ್ನ ಏನಾಗಿತ್ತು?
ರಸಿಕ್ ಕೊಠಡಿಯಿಂದ ಹೊರಬಂದಾಗಲೇ ಅವರ ಬಟ್ಟೆಯಲ್ಲಿ ರಕ್ತದ ಕಲೆಗಳು ಕಾಣಿಸಿಕೊಂಡಿದ್ದವು ಎಂದು ಸಿಸಿಟಿವಿ ದೃಶ್ಯಗಳಿಂದ ತಿಳಿದುಬಂದಿದೆ ಎನ್ನಲಾಗಿದೆ. ನಂತರ ಅವರು ನಾಲ್ಕನೇ ಮಹಡಿಯ ಮೇಲ್ಛಾವಣಿಗೆ ತೆರಳಿದ್ದಾರೆ. ಅಲ್ಲಿ ಕೆಲಕಾಲ ಕುಳಿತುಕೊಂಡು, ಬಳಿಕ ಮಲಗಿದ್ದರು. ನಂತರ ಎದ್ದು ನಿಂತ ಕೆಲವೇ ಕ್ಷಣಗಳಲ್ಲಿ ಮೇಲಿನಿಂದ ಕೆಳಗೆ ಬಿದ್ದಿದ್ದಾರೆ.
ರಸಿಕ್ ಅವರ ದೇಹದಲ್ಲಿ, ವಿಶೇಷವಾಗಿ ತೊಡೆಸಂಧಿ ಭಾಗದಲ್ಲಿ ಗಂಭೀರ ಗಾಯವಾಗಿರುವುದು ತನಿಖೆಯಲ್ಲಿ ಗಮನಕ್ಕೆ ಬಂದಿದೆ. ಈ ಗಾಯ ಹೇಗೆ ಉಂಟಾಯಿತು ಎಂಬುದನ್ನೂ ಪೊಲೀಸರು ಪರಿಶೀಲಿಸುತ್ತಿದ್ದಾರೆ.
ಅವರು ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು ಯಾವುದೇ ಮಾನಸಿಕ ಒತ್ತಡ ಅಥವಾ ಖಿನ್ನತೆಯಿಂದ ಬಳಲುತ್ತಿದ್ದರೇ ಎಂಬ ಬಗ್ಗೆಯೂ ತನಿಖೆ ನಡೆಯುತ್ತಿದೆ. ಈ ಕುರಿತು ಅವರು ಕುಟುಂಬದವರು ಅಥವಾ ಸ್ನೇಹಿತರ ಬಳಿ ಏನಾದರೂ ಹೇಳಿಕೊಂಡಿದ್ದರೇ ಎಂಬುದನ್ನು ಪೊಲೀಸರು ತಿಳಿದುಕೊಳ್ಳುತ್ತಿದ್ದಾರೆ.
ಇದಲ್ಲದೆ, ಸಾವಿಗೂ ಮುನ್ನ ಅವರು ಮದ್ಯ, ಮಾದಕ ವಸ್ತು ಅಥವಾ ಇತರ ಯಾವುದೇ ಮನಸ್ಸಿನ ಮೇಲೆ ಪರಿಣಾಮ ಬೀರುವ ವಸ್ತು ಸೇವಿಸಿದ್ದರೇ ಎಂಬುದನ್ನು ತಿಳಿಯಲು ಅವರ ರಕ್ತದ ಮಾದರಿಯನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.
ಸಿಸಿಟಿವಿ ದೃಶ್ಯಗಳು, ಮೊಬೈಲ್ ದಾಖಲೆ, ವೈದ್ಯಕೀಯ ವರದಿ ಹಾಗೂ ವಿಚಾರಣೆ ವೇಳೆ ಸಿಕ್ಕ ಮಾಹಿತಿಗಳನ್ನು ಆಧರಿಸಿ ರಸಿಕ್ ಅವರ ಸಾವಿಗೆ ನಿಖರ ಕಾರಣವೇನು ಎಂಬುದನ್ನು ಪೊಲೀಸರು ಪತ್ತೆಹಚ್ಚಲು ಮುಂದಾಗಿದ್ದಾರೆ.
ಅಂತರ ರಾಜ್ಯ
Fire truck-ಬಿಜೆಪಿ ಶಾಸಕನ ಬಂಗಲೆ ತೊಳೆಯಲು ಅಗ್ನಿಶಾಮಕ ವಾಹನ ಬಳಕೆ; ವಿಡಿಯೋ ವೈರಲ್ ಬಳಿಕ ₹2,700 ದಂಡ
ಗುಜರಾತ್‌ನ ದಾಹೋದ್ ಜಿಲ್ಲೆಯಲ್ಲಿ ಬಿಜೆಪಿ ಶಾಸಕರೊಬ್ಬರ ಬಂಗಲೆಯನ್ನು ಸ್ವಚ್ಛಗೊಳಿಸಲು ಅಗ್ನಿಶಾಮಕ ದಳದ ವಾಹನ ಬಳಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸಾರ್ವಜನಿಕರಿಂದಲೂ ಆಕ್ಷೇಪ ವ್ಯಕ್ತವಾಗಿದೆ.
ದಾಹೋದ್: ಗುಜರಾತ್‌ನ ದಾಹೋದ್ ಜಿಲ್ಲೆಯಲ್ಲಿ ಬಿಜೆಪಿ ಶಾಸಕರೊಬ್ಬರ ಬಂಗಲೆಯನ್ನು ಸ್ವಚ್ಛಗೊಳಿಸಲು ಅಗ್ನಿಶಾಮಕ ದಳದ ವಾಹನ ಬಳಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸಾರ್ವಜನಿಕರಿಂದಲೂ ಆಕ್ಷೇಪ ವ್ಯಕ್ತವಾಗಿದೆ.
ದೇವಗಢ್ ಬಾರಿಯಾ ಪುರಸಭೆಯ ಅಗ್ನಿಶಾಮಕ ವಾಹನವು ಧನ್‌ಪುರ್ ತಾಲೂಕಿನಲ್ಲಿರುವ ಬಿಜೆಪಿ ಶಾಸಕ ಬಚುಭಾಯ್ ಖಬಾದ್ ಅವರ ನಿವಾಸದ ಬಳಿ ನಿಂತಿದ್ದು, ಸಿಬ್ಬಂದಿ ಬಂಗಲೆಯ ಆವರಣ ಹಾಗೂ ಗೋಡೆಗಳಿಗೆ ಪೈಪ್ ಮೂಲಕ ನೀರು ಸಿಂಪಡಿಸುತ್ತಿರುವುದು ವಿಡಿಯೋದಲ್ಲಿ ಕಂಡುಬಂದಿದೆ.
ವಿಡಿಯೋ ವೈರಲ್ ಆದ ಬಳಿಕ ತುರ್ತು ಸೇವೆಗೆ ಮೀಸಲಾಗಿರುವ ಅಗ್ನಿಶಾಮಕ ವಾಹನವನ್ನು ವೈಯಕ್ತಿಕ ಬಳಕೆಗೆ ಬಳಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಶಾಸಕ ಖಬಾದ್ ಅವರಿಂದ ₹2,700 ದಂಡ ವಸೂಲಿ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಕುರಿತು ಎಎನ್‌ಐ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ದೇವಗಢ್ ಬಾರಿಯಾ ಪುರಸಭೆ ಅಧ್ಯಕ್ಷ ಘಮೇಶ್ ಕಲಾಲ್, ಅಗ್ನಿಶಾಮಕ ವಾಹನ ಕಳುಹಿಸುವಂತೆ ಶಾಸಕರು ಕರೆ ಮಾಡಿದ್ದರು. ಯಾವುದಾದರೂ ಗಂಭೀರ ಘಟನೆ ಸಂಭವಿಸಿರಬಹುದು ಎಂದು ಭಾವಿಸಿ ತಕ್ಷಣ ಅಗ್ನಿಶಾಮಕ ದಳವನ್ನು ಸಂಪರ್ಕಿಸಿ ವಾಹನ ಕಳುಹಿಸಿದ್ದಾಗಿ ತಿಳಿಸಿದ್ದಾರೆ.
ಆದರೆ, ಬಂಗಲೆ ಸ್ವಚ್ಛಗೊಳಿಸುವ ಉದ್ದೇಶಕ್ಕಾಗಿ ಅಗ್ನಿಶಾಮಕ ವಾಹನವನ್ನು ಬಳಸಲಾಗುತ್ತಿದೆ ಎಂಬುದು ತಮಗೆ ತಿಳಿದಿರಲಿಲ್ಲ ಎಂದು ಅಗ್ನಿಶಾಮಕ ಅಧಿಕಾರಿ ಸ್ಪಷ್ಟಪಡಿಸಿದ್ದಾರೆ.
ಬಂಗಲೆ ತೊಳೆಯಲು ವಾಹನ ಬಳಸಲಾಗುತ್ತದೆ ಎಂಬ ಮಾಹಿತಿ ಮುಂಚಿತವಾಗಿ ನೀಡಲಾಗಿರಲಿಲ್ಲ. ಈ ಕಾರಣದಿಂದ ಅಚಾತುರ್ಯ ಸಂಭವಿಸಿದೆ. ಇದೀಗ ತಪ್ಪಿತಸ್ಥರಿಂದ ದಂಡ ವಸೂಲಿ ಮಾಡಲಾಗಿದೆ ಎಂದು ಅಗ್ನಿಶಾಮಕ ಇಲಾಖೆ ತಿಳಿಸಿದೆ.
ವಿಡಿಯೋದಲ್ಲಿ ಏನಿದೆ?
ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ ಬೃಹತ್ ಬಂಗಲೆಯೊಂದರ ಮುಂಭಾಗ ಅಗ್ನಿಶಾಮಕ ವಾಹನ ನಿಂತಿರುವುದು ಕಾಣಿಸುತ್ತದೆ. ಅಗ್ನಿಶಾಮಕ ಸಿಬ್ಬಂದಿ ಪೈಪ್‌ಗಳ ಮೂಲಕ ಬಂಗಲೆಯ ಕಂಪೌಂಡ್ ಹಾಗೂ ಗೋಡೆಗಳಿಗೆ ನೀರು ಸಿಂಪಡಿಸಿ ಸ್ವಚ್ಛಗೊಳಿಸುತ್ತಿರುವ ದೃಶ್ಯಗಳು ವಿಡಿಯೋದಲ್ಲಿವೆ.
ಅಪರಾಧ
FIR-ಮತದಾರರ ಹೆಸರು ಅಳಿಸಲು ಫಾರಂ-7 ಅರ್ಜಿ ದುರ್ಬಳಕೆ; ಬೆಂಗಳೂರಿನಲ್ಲಿ ಐವರ ವಿರುದ್ಧ FIR
ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಫಾರಂ-7 ಅರ್ಜಿಗಳನ್ನು ದುರ್ಬಳಕೆ ಮಾಡಿಕೊಂಡು 5,698 ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಅಳಿಸಲು ಯತ್ನಿಸಲಾಗಿದೆ ಎಂಬ ಆರೋಪದಡಿ ಜಯನಗರ ಪೊಲೀಸ್ ಠಾಣೆಯಲ್ಲಿ ಐವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಬೆಂಗಳೂರು: ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಫಾರಂ-7 ಅರ್ಜಿಗಳನ್ನು ದುರ್ಬಳಕೆ ಮಾಡಿಕೊಂಡು 5,698 ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಅಳಿಸಲು ಯತ್ನಿಸಲಾಗಿದೆ ಎಂಬ ಆರೋಪದಡಿ ಜಯನಗರ ಪೊಲೀಸ್ ಠಾಣೆಯಲ್ಲಿ ಐವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಹಾಗೂ ಮಾಜಿ ಶಾಸಕಿ ಸೌಮ್ಯಾ ರೆಡ್ಡಿ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಜಯನಗರ ಕ್ಷೇತ್ರದ ವಿವಿಧ ಭಾಗಗಳಲ್ಲಿನ 5,698 ಮತದಾರರ ಹೆಸರುಗಳನ್ನು ಅಳಿಸುವಂತೆ ಫಾರಂ-7 ಅರ್ಜಿಗಳನ್ನು ಸಲ್ಲಿಸಲಾಗಿದೆ ಎಂದು ಅವರು ದೂರಿನಲ್ಲಿ ಆರೋಪಿಸಿದ್ದಾರೆ.
ಪ್ರಕರಣದಲ್ಲಿ ಬಿಜೆಪಿ ಸಂಪರ್ಕ ಹೊಂದಿರುವ ಬೂತ್ ಮಟ್ಟದ ಏಜೆಂಟ್‌ಗಳಾದ ರಾಮಕೃಷ್ಣ ಹಾಗೂ ಯೋಗೇಶ್ ಸೇರಿದಂತೆ ಇತರರ ವಿರುದ್ಧ ಪ್ರಕರಣ ದಾಖಲಾಗಿದೆ. ಅರ್ಜಿಗಳಲ್ಲಿ ಕೆಲವರ ವೈಯಕ್ತಿಕ ವಿವರಗಳನ್ನು ಅವರ ಅನುಮತಿಯಿಲ್ಲದೆ ಬಳಸಲಾಗಿದೆ ಹಾಗೂ ಕೆಲವು ಅರ್ಜಿಗಳಲ್ಲಿನ ಸಹಿಗಳ ಬಗ್ಗೆಯೂ ಅನುಮಾನ ವ್ಯಕ್ತವಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಫಾರಂ-7 ಅರ್ಜಿಗಳನ್ನು ಯಾರು ಸಲ್ಲಿಸಿದ್ದಾರೆ, ಅರ್ಜಿಗಳಲ್ಲಿನ ಸಹಿಗಳು ನಕಲಿಯಾಗಿವೆಯೇ ಹಾಗೂ ಮತದಾರರ ವೈಯಕ್ತಿಕ ಮಾಹಿತಿಯನ್ನು ದುರ್ಬಳಕೆ ಮಾಡಲಾಗಿದೆಯೇ ಎಂಬುದನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆರೋಪಗಳು ತನಿಖೆಯ ಹಂತದಲ್ಲಿದ್ದು, ಪ್ರಕರಣದ ಸತ್ಯಾಸತ್ಯತೆ ತನಿಖೆಯ ಬಳಿಕ ಸ್ಪಷ್ಟವಾಗಬೇಕಿದೆ.
-
ಅಪರಾಧ24 hours agoSomasekhar-ನಕಲಿ ದಾಖಲೆ ಸೃಷ್ಟಿಸಿ ಕೈದಿಯ ಬಿಡುಗಡೆ..! ಪ್ರತಿಯಾಗಿ ಆತನ ಪತ್ನಿಯನ್ನು ಲೈಂಗಿಕವಾಗಿ ಬಳಸಿಕೊಳ್ಳುವ ಒಪ್ಪಂದ ಮಾಡಿಕೊಂಡಿದ್ದ ಡಿಐಜಿ ಎಂ. ಸೋಮಶೇಖರ್
-
ಬಿಗ್ ನ್ಯೂಸ್18 hours agoಡಿಕೆಶಿ ಸರ್ಕಾರದಿಂದ ಜನತೆಗೆ ಬಿಗ್ ಶಾಕ್ – ರೈತರಿಗೆ ಬಂಪರ್ ಗಿಫ್ಟ್..! ಹಾಲಿನ ದರ 8 ರೂ. ಏರಿಕೆ : 6 ರೂ. ರೈತರಿಗೆ..! ನ.1 ರಿಂದ ಬಹುತೇಕ ಜಾರಿ
-
ನಿಧನ ವಾರ್ತೆ23 hours agoPuttur-ಪುತ್ತೂರು: ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಪಡೆಯುತ್ತಿದ್ದ ಸ್ಕೂಟರ್ ಸವಾರ ಮೃತ್ಯು
-
ಶಿಕ್ಷಣ22 hours agoPhilomena-ಸಂತ ಫಿಲೋಮಿನಾ ಕಾಲೇಜು : 35 ವರ್ಷಗಳ ಬಳಿಕ ಮತ್ತೆ ಒಂದಾದ 1991ರ ಬಿ.ಎಸ್ಸಿ. ಬ್ಯಾಚ್; ನೆನಪು, ನಂಟು ಮತ್ತು ಗುರು-ಗೌರವದ ಭಾವಪೂರ್ಣ ಸಂಗಮ
-
ನಿಧನ ವಾರ್ತೆ23 hours agoDead body-ಹುಲಿವೇಷ ತರಬೇತಿಗೆಂದು ಮಂಗಳೂರಿಗೆ ಬಂದಿದ್ದ ಬೆಳ್ತಂಗಡಿ ಬಾಲಕ ಸಮುದ್ರ ಪಾಲು; ಮೃತದೇಹ ಪತ್ತೆ
-
ನಿಧನ ವಾರ್ತೆ22 hours agoKerala-ಕೇರಳ: ಸಿಡಿಲು ಬಡಿದು ಖ್ಯಾತ ‘ಪಲ್ಲಟ್ಟು ಬ್ರಹ್ಮದತ್ತನ್’ ಆನೆ ದಾರುಣ ಸಾವು
-
ಬಿಗ್ ನ್ಯೂಸ್23 hours agoPuttur-ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ: ‘ಭಕ್ತರನ್ನು ಕಡೆಗಣಿಸಿ ಜೀರ್ಣೋದ್ಧಾರ ಸಮಿತಿ ರಚನೆ’ – ವಿಹಿಂಪ ಆಕ್ಷೇಪ
-
ರಾಜಕೀಯ24 hours agoDK Shivakumar-ಏಷ್ಯನ್ ಗೇಮ್ಸ್ ಪದಕ ವಿಜೇತರಿಗೆ ಭರ್ಜರಿ ಬಹುಮಾನ: 8 ಕ್ರೀಡಾಪಟುಗಳಿಗೆ ₹8 ಕೋಟಿ ಘೋಷಿಸಿದ ಡಿಕೆಶಿ – ಭಾಗವಹಿಸಿದವರಿಗೆ 5 ಲಕ್ಷ


















