ಕಾರ್ಯಕ್ರಮಗಳು
Kargil Vijay Diwas-ಕಾರ್ಗಿಲ್ ವಿಜಯೋತ್ಸವದ ಇಪ್ಪತ್ತೈದನೆಯ ವರ್ಷಾಚರಣೆ; ಪುತ್ತೂರಿನ ಇತಿಹಾಸದಲ್ಲಿ ಅಭೂತಪೂರ್ವ ಕಾರ್ಯಕ್ರಮ; ಪರಮವೀರ ಚಕ್ರ ಪುರಸ್ಕೃತ ಕ್ಯಾ.ಯೋಗೀಂದ್ರ ಸಿಂಗ್ ಯಾದವ್ ಹಾಗೂ ಸೇನಾಪದಕ ಪುರಸ್ಕೃತ ಕ್ಯಾಪ್ಟನ್ ನವೀನ್ ನಾಗಪ್ಪ ಅವರಿಗೆ ಗೌರವಾರ್ಪಣೆ
ಪುತ್ತೂರು: ಪಾಕಿಸ್ಥಾನದ ಸೈನಿಕರು ನಮ್ಮ ಮೇಲೆರಗಿ ಒಂದೇ ಸಮನೆ ಗುಂಡಿನ ದಾಳಿಗೈದುಬಿಟ್ಟರು. ಜತೆಗಿದ್ದ ಅಷ್ಟೂ ಮಂದಿ ಸ್ಥಳದಲ್ಲೇ ಮೃತಪಟ್ಟರೆ ತಾನು ಸತ್ತಂತೆ ನಟಿಸುತ್ತಾ ಬಿದ್ದಿದ್ದೆ. ಸತ್ತವರ ಮೇಲೆ ಮತ್ತೆ ಮತ್ತೆ ಗುಂಡಿನ ಸುರಿಮಳೆಯಾಗುತ್ತಿತ್ತು. ಆ ದಾಳಿಯಲ್ಲಿ ಕಾಲುಗಳು ಛಿದ್ರವಾದವು. ಆದರೂ ತುಟಿಪಿಟಕ್ಕೆನ್ನದೆ ಸಾವನ್ನು ಹತ್ತಿರದಿಂದ ಕಂಡು ಮನಸ್ಸು ಗಟ್ಟಿ ಮಾಡಿ ಕೈಯಲ್ಲಿದ್ದ ಗ್ರೆನೇಡ್ ಎಸೆದು ಪಾಕಿಸ್ಥಾನದ ಸೈನಿಕರನ್ನು ಸುಟ್ಟುಹಾಕಿದೆ. ಇದ್ದಕ್ಕಿದ್ದಂತೆ ದಾಳಿಯಾದದ್ದನ್ನು ಕಂಡ ಪಾಕಿಸ್ಥಾನಿ ಸೈನಿಕರು ಭಾರತದ ಮತ್ತೊಂದು ಸೇನಾ ತುಕಡಿ ತಮ್ಮನ್ನು ಆಕ್ರಮಿಸುತ್ತಿದೆ ಎಂದು ಭಾವಿಸಿ ಓಡತೊಡಗಿದರು. ಹಾಗೋ ಹೀಗೋ ರೈಫಲ್ ತೆಗೆದು ಮತ್ತೆ ಐದು ಜನ ಪಾಕಿಸ್ಥಾನದ ಸೈನಿಕರನ್ನು ಹೊಡೆದುಹಾಕಿದೆ…

ಅತಿ ಕಿರಿಯ ವಯಸ್ಸಿನಲ್ಲಿ ಭಾರತೀಯ ಸೈನ್ಯದಿಂದ ಕೊಡಮಾಡುವ ಅತ್ಯುಚ್ಚ ಪ್ರಶಸ್ತಿಯಾದ ಪರಮವೀರ ಚಕ್ರವನ್ನು ಮುಡಿಗೇರಿಸಿಕೊಂಡ ಕ್ಯಾಪ್ಟನ್ ಯೋಗೀಂದ್ರ ಸಿಂಗ್ ಯಾದವ್ ಮೇಲಿನ ಮಾತುಗಳನ್ನು ಹೇಳುತ್ತಿದ್ದರೆ ನೆರೆದಿದ್ದ ಜನಸ್ತೋಮದ ಕಣ್ಣಂಚಿನಲ್ಲಿ ನೀರು ಜಿನುಗುತ್ತಿತ್ತು.

ಇಂತಹ ಒಂದು ಭಾವುಕ ಕ್ಷಣಕ್ಕೆ ಸಾಕ್ಷಿಯಾದದ್ದು ಪುತ್ತೂರಿನ ಕಿಲ್ಲೆ ಮೈದಾನ. ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳು, ಪುತ್ತೂರಿನ ಮಾಜಿ ಸೈನಿಕರ ಸಂಘ ಹಾಗೂ ಅಮರ್ ಜವಾನ್ ಜ್ಯೋತಿ ಸಂರಕ್ಷಣಾ ಸಮಿತಿಗಳು ಅನ್ಯಾನ್ಯ ಸಂಘಟನೆಗಳ ಸಹಕಾರದೊಂದಿಗೆ ಶುಕ್ರವಾರ ಕಾರ್ಗಿಲ್ ವಿಜಯೋತ್ಸವದ ಇಪ್ಪತ್ತೈದನೆಯ ವರ್ಷಾಚರಣೆಯನ್ನು ಇತಿಹಾಸದ ಪುಟದಲ್ಲಿ ದಾಖಲಾಗುವಂತೆ ಆಯೋಜಿಸಿದವು.

ದೇಶಕ್ಕಾಗಿ ಈ ದೇಹ ಸಮರ್ಪಣೆಯಾಗಬೇಕೆಂಬ ಒಂದೇ ಕನಸಿನೊಂದಿಗೆ ಸೇನೆಗೆ ಸೇರಿ ಸೇವೆ ಸಲ್ಲಿಸುವುದಕ್ಕೆ ಸಾಧ್ಯವಾಯಿತು. ಅಕ್ಷರಶಃ ತೆವಳಿಕೊಂಡು ಕಡಿದಾದ ಬೆಟ್ಟವನ್ನೇರುತ್ತಾ ವಿರೋಧಿಗಳೊಂದಿಗೆ ಹೋರಾಡಬೇಕಿತ್ತು. ಆದರೆ ರಾಷ್ಟç ಎಂಬ ಭಾವನೆ ಬಂದಾಗ ಎಲ್ಲವೂ ಸಾಧ್ಯವಾಗುತ್ತದೆ. ದೇಶದ ಒಳಗಿನ ವ್ಯವಸ್ಥೆ ಸದೃಢವಾಗಿ ಬೆಳೆಯಬೇಕಾದರೆ ಸೈನ್ಯ ಗಡಿ ಭಾಗದಲ್ಲಿ ಸದಾ ಸನ್ನದ್ಧವಾಗಿರಬೇಕು ಎಂದು ನುಡಿದರು.

ಇಂದು ನಾವು ಸಿನೆಮಾ ನಟರನ್ನು, ಕ್ರಿಕೆಟಿಗರನ್ನು ಹೀರೋಗಳಾಗಿ ಕಾಣುತ್ತಿದ್ದೇವೆ. ಆದರೆ ನಮಗಾಗಿ ಪ್ರಾಣತೆತ್ತ ಯೋಧರನ್ನು ನಿರ್ಲಕ್ಷಿಸುತ್ತಿದ್ದೇವೆ. ನಮ್ಮನ್ನು ಕಾಪಾಡುವ ಹಾದಿಯಲ್ಲಿ ಜೀವ ಅರ್ಪಿಸಿದ ಯೋಧರನ್ನು ನಮ್ಮ ಆದರ್ಶವಾಗಿ ಸ್ವೀಕರಿಸಬೇಕು. ಸ್ಪಷ್ಟ ಗುರಿಯೊಂದಿಗೆ ಬದುಕನ್ನು ರೂಪಿಸಿಕೊಳ್ಳಬೇಕು ಎಂದರಲ್ಲದೆ ಜೀವನ ತುಚ್ಚವಾದದ್ದಲ್ಲ, ಅದು ಅಮೂಲ್ಯವಾದದ್ದು. ಈ ಬದುಕನ್ನು ರೀಲ್ಸ್ ಮಾಡುತ್ತಾ, ರಾತ್ರಿ ನಿದ್ದೆಗೆಡುತ್ತಾ ಹಾಳುಮಾಡಿಕೊಳ್ಳಬಾರದು ಎಂದು ವಿದ್ಯಾರ್ಥಿಗಳಿಗೆ ಕರೆಯಿತ್ತರು.

ಮತ್ತೋರ್ವ ಅತಿಥಿ ಕಾರ್ಗಿಲ್ ಯುದ್ಧದಲ್ಲಿ ಭಾಗಿಯಾಗಿ ತನ್ನ ಕಾಲುಗಳನ್ನು ಕಳೆದುಕೊಂಡ ಹುಬ್ಬಳ್ಳಿಯ ಯೋಧ ಕ್ಯಾಪ್ಟನ್ ನವೀನ್ ನಾಗಪ್ಪ ಮಾತನಾಡಿ ಕಾರ್ಗಿಲ್ ಯುದ್ಧದ ಆರಂಭಿಕ ದಿನಗಳಲ್ಲಿ ಬೆಟ್ಟದ ಮೇಲೆ ಏನಾಗುತ್ತಿದೆ ಎಂಬುದೇ ಅರಿವಾಗುತ್ತಿರಲಿಲ್ಲ. ಬಂದಿದ್ದವರು ಪಾಕಿಸ್ಥಾನದ ಸೈನಿಕರೇ, ಉಗ್ರಗಾಮಿಗಳೇ ಯಾರು ಎಂಬುದೇ ಅರ್ಥವಾಗಿರಲಿಲ್ಲ. ಪಾಕಿಸ್ಥಾನ ಆಕ್ರಮಣ ನಡೆಸುತ್ತಿದೆ ಎಂದು ಖಾತ್ರಿಯಾಗುವ ವೇಳೆಗಾಗಲೇ ನಮ್ಮ ಇಪ್ಪತ್ತೇಳು ಸೈನಿಕರು ಪಾಕಿಸ್ಥಾನದ ಸೈನಿಕರಿಂದ ಹತ್ಯೆಗೊಳಗಾಗಿದ್ದರು. ಆದರೆ ಅನಂತರ ಭಾರತೀಯ ಸೈನ್ಯ ಪ್ರತಿ ಹಂತದಲ್ಲೂ ಗೆಲುವನ್ನು ಸಾಧಿಸುತ್ತಲೇ ಬಂದಿತು ಎಂದರು.

ಪಾಕಿಸ್ಥಾನಕ್ಕೆ ಕಾರ್ಗಿಲ್ ಯುದ್ಧದಲ್ಲಿ ಭಾರತೀಯ ಸೈನ್ಯ ಕೊಟ್ಟ ಹೊಡೆದ ಎಷ್ಟು ತೀವ್ರವಾಗಿತ್ತೆಂದರೆ ಅನಂತರದ ಈ ಇಪ್ಪತ್ತೆöÊದು ವರ್ಷಗಳಲ್ಲಿ ಪಾಕಿಸ್ಥಾನ ಯುದ್ಧಕ್ಕೆ ಬರುವ ಧೈರ್ಯವನ್ನೇ ತೋರಿಸಿಲ್ಲ. ಭಾರತೀಯ ಸೈನಿಕರು ನೈತಿಕ ಹಾದಿಯಲ್ಲೇ ಮುಂದುವರೆಯುತ್ತಾರೆAಬುದೇ ಬಹುದೊಡ್ಡ ಆತ್ಮಶಕ್ತಿ. ಪಾಕಿಸ್ಥಾನ ತನ್ನ ಯೋಧರು ಸತ್ತಾಗ ಹೆಣವನ್ನೂ ಸ್ವೀಕರಿಸಲಿಲ್ಲ. ಆಗ ಭಾರತೀಯ ಸೈನಿಕರೇ ಆ ಸೈನಿಕರನ್ನು ಅವರ ಧರ್ಮಕ್ಕನುಗುಣವಾಗಿ, ಅವರ ರಾಷ್ಟçಧ್ವಜ ಹೊದೆಸಿ ದಫನ ಮಾಡಿದ್ದು ಇಲ್ಲಿಯ ಸಂಸ್ಕಾರದ ಪ್ರತಿರೂಪ ಎಂದರು.

ಕ್ಯಾಪ್ಟನ್ ಯೋಗೀಂದ್ರ ಸಿಂಗ್ ಯಾದವ್ ಹಾಗೂ ಕ್ಯಾಪ್ಟನ್ ನವೀನ್ ನಾಗಪ್ಪ ಅವರನ್ನು ಅಂಬಿಖಾ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು. ಸೇನಾ ಪದಕದ ಚಿನ್ನದ ಪ್ರತಿರೂಪಗಳನ್ನು ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಕಾರ್ಗಿಲ್ ವಿಜಯ ದಿವಸದ ಪ್ರಯುಕ್ತ ಆಯೋಜಿಸಲಾದ ಇಂಗ್ಲಿಷ್ ಭಾಷಣ, ಕನ್ನಡ ಭಾಷಣ ಹಾಗೂ ದೇಶಭಕ್ತಿಗೀತೆಗಳಲ್ಲಿ ವಿಜೇತರಾದವರಿಗೆ ಬಹುಮಾನ ನೀಡಿ ಅಭಿನಂದಿಸಲಾಯಿತು.

ಮಾಜಿ ಸೈನಿಕರ ಸಂಘದ ಅಧ್ಯಕ್ಷ ಎಂ.ಕೆ.ನಾರಾಯಣ ಭಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಶಾಸಕರಾದ ಸಂಜೀವ ಮಠಂದೂರು, ಶಕುಂತಲಾ ಶೆಟ್ಟಿ, ನಗರ ಸಭಾ ಆಯುಕ್ತ ಮಧು ಎಸ್ ಮನೋಹರ್, ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ ಸ್ವಾಗತಿಸಿದರು. ನ್ಯಾಯವಾದಿ ಮಹೇಶ್ ಕಜೆ ವಂದಿಸಿದರು. ಉಪನ್ಯಾಸಕ ಆದರ್ಶ ಗೋಖಲೆ ಕಾರ್ಯಕ್ರಮ ನಿರ್ವಹಿಸಿದರು. ಸಭಾ ಕಾರ್ಯಕ್ರಮಕ್ಕೂ ಪೂರ್ವದಲ್ಲಿ ದರ್ಬೆ ವೃತ್ತದ ಬಳಿಯಿಂದ ಕಿಲ್ಲೆ ಮೈದಾನದವರೆಗೆ ಬೃಹತ್ ಮೆರವಣಿಗೆ ನಡೆಯಿತು. ಇಬ್ಬರೂ ಕಾರ್ಗಿಲ್ ಯೋಧರನ್ನು ತೆರೆದ ವಾಹನದಲ್ಲಿ ಅಪಾರ ಹಾರಾರ್ಪಣೆಗಳ ಮೂಲಕ ಕರೆತರಲಾಯಿತು. ಮಾಜಿ ಸೈನಿಕರ ಸಂಘದಿಂದ ಗೌರವ ಕಾರ್ಗಿಲ್ ಯೋಧರಿಗೆ ಸಮರ್ಪಣೆ ನಡೆಯಿತು. ಬಳಿಕ ಅಮರ್ ಜವಾನ್ ಜ್ಯೋತಿಯಲ್ಲಿ ರೀತ್ ಸಮರ್ಪಣೆ ನೆರವೇರಿತು.
ಸ್ಥಳೀಯ
Dharmasthala-ಅ. 11 ರಿಂದ 19 : ಧರ್ಮಸ್ಥಳದಲ್ಲಿ ನವರಾತ್ರಿ ವೈಭವ
ನವರಾತ್ರಿ ಪ್ರಯುಕ್ತ ಧರ್ಮಸ್ಥಳದಲ್ಲಿ ಇದೇ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು ನಡೆಯಲಿವೆ. ಪ್ರತಿ ದಿನ ರಾತ್ರಿ ಅಮ್ಮನವರ ಸನ್ನಿಧಿಯಲ್ಲಿ ವಿಶೇಷ ಪೂಜೆ ನಡೆಯುತ್ತದೆ.
ಉಜಿರೆ: ನವರಾತ್ರಿ ಪ್ರಯುಕ್ತ ಧರ್ಮಸ್ಥಳದಲ್ಲಿ ಇದೇ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು ನಡೆಯಲಿವೆ. ಪ್ರತಿ ದಿನ ರಾತ್ರಿ ಅಮ್ಮನವರ ಸನ್ನಿಧಿಯಲ್ಲಿ ವಿಶೇಷ ಪೂಜೆ ನಡೆಯುತ್ತದೆ.
ದೇವಸ್ಥಾನದ ಎದುರು ಇರುವ ಪ್ರವಚನಮಂಟಪದಲ್ಲಿ ಸಂಜೆ ಆರು ಗಂಟೆಯಿಂದ ಒಂಭತ್ತು ಗಂಟೆ ವರೆಗೆ ನಾಡಿನ ಖ್ಯಾತ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ.
ಅ. 11: ಭಾನುವಾರ: ಕುಮಾರಿ ಪ್ರಾಪ್ತಿ ಶೆಟ್ಟಿ, ಧರ್ಮಸ್ಥಳ ಮತ್ತು ಕುಮಾರಿ ಆದ್ವಿ, ನಿಡಿಗಲ್ (ಭಕ್ತಿಸಂಗೀತ), ಅ. 12: ಸೋಮವಾರ: ಪವಿತ್ರವಿನಯ್ ಮಯ್ಯ ಅರ್ಕುಳ, ಮಂಗಳೂರು (ಸುಗಮ ಸಂಗೀತ), ಅ. 13: ಮಂಗಳವಾರ: ಕುಮಾರಿ ಮಾನ್ಸಿ, ಮೈಸೂರು (ಭಕ್ತಿಸಂಗೀತ), ಅ. 14: ಬುಧವಾರ: ಮಾಸ್ಟರ್ ಆಗಮ, ಪೆರ್ಲ, ಮಂಗಳೂರು (ಕರ್ನಾಟಕ ಶಾಸ್ತ್ರೀಯ ಸಂಗೀತ), ಅ. 15: ಗುರುವಾರ: ಕುಮಾರಿ ಧೃತಿ ಬಿ. ಆತ್ರೇಯಾಸ್, ಕುಮಾರಿ ಧನ್ವಿ ಬಿ. ಆತ್ರೇಯಾಸ್ ಮತ್ತು ಮಾಸ್ಟರ್ ಅಸ್ರಮೇಯ ಗುರುಪ್ರಸಾದ್, ಬೆಂಗಳೂರು (ನೃತ್ಯ, ಗಾನಲಹರಿ), ಅ. 16: ಶುಕ್ರವಾರ: ಸನತ್‌ಕುಮಾರ್, ಬೆಂಗಳೂರು (ವಯಲಿನ್ ವಾದನ), ಅ. 17: ಶನಿವಾರ: ಕುಮಾರಿ ಮಯೂರಿ ಭಟ್ ಪೊಳಲಿ, ಬಂಟ್ವಾಳ (ಕರ್ನಾಟಕ ಶಾಸ್ತ್ರೀಯ ಸಂಗೀತ), ಅ. 18: ಆದಿತ್ಯವಾರ: ಕುಮಾರಿ ಐಶ್ವರ್ಯ ಜೋಗಿ ಮತ್ತು ತಂಡ, ಕುಂದಾಪುರ (ಸುಮಧುರ ಗಾನವೈಭವ), ಅ. 19: ಸೋಮವಾರ: ಕುಮಾರಿ ಅರ್ಚಿಷಾ ರಾವ್ ಮತ್ತು ಬಳಗ, ಬೆಂಗಳೂರು (ಸಂಜೆ ಗಂಟೆ 6.30 ರಿಂದ 8.30). ಮಲ್ಲಿಕಾಮಟ್ಟಿ ಮತ್ತು ಬಳಗ, ಪೊಳಲಿ (ರಾತ್ರಿ ಗಂಟೆ 9 ರಿಂದ 11.30) ಭಕ್ತಿ ಸಂಗೀತ.
ಸ್ಥಳೀಯ
Excel-ಎಕ್ಸೆಲ್ ಗುರು ನಮನ 2026: ಸಾಮರಸ್ಯವೇ ಸಮಾಜದ ಉನ್ನತಿಗೆ ತಳಪಾಯ: ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ
ಎಕ್ಸೆಲ್ ಗುರುವಾಯನ ಕೆರೆಯಲ್ಲಿ ನಡೆದ ಗುರು ನಮನ 2026 ಕಾರ್ಯಕ್ರಮದಲ್ಲಿ ಮಾಣಿಲ ಶ್ರೀ ದುರ್ಗಾ ಮಹಾಲಕ್ಷ್ಮೀ ಕ್ಷೇತ್ರದ ಪರಮ ಪೂಜ್ಯ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರು ಮಾತನಾಡಿದರು.
ಗುರುವಾಯನಕೆರೆ, ಅ.4 : “ಸಮಾಜದಲ್ಲಿ ಎಲ್ಲರಿಗೂ ಬದುಕುವ ಅವಕಾಶವಿದೆ. ಪ್ರತಿಯೊಂದು ವರ್ಗ, ಸಮುದಾಯಕ್ಕೂ ಈ ಸಮಾಜ ಆಶ್ರಯ ನೀಡಿದೆ. ಪ್ರತಿಯೊಬ್ಬರ ನಂಬಿಕೆ ಆಚರಣೆಗಳು ಬೇರೆ ಬೇರೆಯಾಗಿರುತ್ತವೆ. ಅವರವರ ನಂಬಿಕೆ ಮತ್ತು ಆಚರಣೆಗಳನ್ನು ತಿರಸ್ಕರಿಸಿದಾಗ ಸಮಾಜದಲ್ಲಿ ಘರ್ಷಣೆಗಳು ಏರ್ಪಡುತ್ತವೆ. ಪ್ರತಿಯೊಬ್ಬರನ್ನೂ ಸಾಮರಸ್ಯದಿಂದ ನೋಡುವ ಗುಣ ನಮ್ಮದಾಗಬೇಕು. ಸಾಮರಸ್ಯವೇ ಸಮಾಜದ ಉನ್ನತಿಗೆ ಅಡಿಪಾಯವಿದ್ದಂತೆ” ಎಂದು ಎಕ್ಸೆಲ್ ಗುರುವಾಯನ ಕೆರೆಯಲ್ಲಿ ನಡೆದ ಗುರು ನಮನ 2026 ಕಾರ್ಯಕ್ರಮದಲ್ಲಿ ಮಾಣಿಲ ಶ್ರೀ ದುರ್ಗಾ ಮಹಾಲಕ್ಷ್ಮೀ ಕ್ಷೇತ್ರದ ಪರಮ ಪೂಜ್ಯ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರು ಹೇಳಿದರು.
ಸ್ವಾಮೀಜಿಯವರು ಮಾತನಾಡುತ್ತಾ ಎಕ್ಸೆಲ್ ವಿದ್ಯಾಸಂಸ್ಥೆಯು ಸುಂದರ ಪರಿಸರದಲ್ಲಿ ನಿರ್ಮಾಣಗೊಂಡಿದೆ. ಈ ವಿದ್ಯಾಸಂಸ್ಥೆಯಿಂದ ವಿದ್ಯಾರ್ಥಿಗಳ ಭವಿಷ್ಯ ರೂಪಗೊಳ್ಳುತ್ತದೆ. ವಿದ್ಯಾರ್ಥಿಗಳು ಪರಸ್ಪರ ಗೌರವಿಸಿರಿ. ಈ ಸಮಾಜಕ್ಕೆ ಒಳ್ಳೆಯದನ್ನು ಬಯಸಿ. ನೀವು ಓದಿದ ವಿದ್ಯಾ ಸಂಸ್ಥೆಗೆ ಚಿರಋಣಿಯಾಗಿರಬೇಕೆಂದು, ಈ ಸಂಸ್ಥೆಯು ಸಾವಿರಾರು ಶಿಕ್ಷಕರನ್ನು ನಿರಂತರವಾಗಿ ಗೌರವಿಸುತ್ತಾ ಬಂದಿರುವುದು ನಿಜವಾಗಿಯೂ ಅತ್ಯುತ್ತಮ ಬೆಳವಣಿಗೆಯಾಗಿದೆ. ಇದು ಸುಮಂತ್ ಕುಮಾರ್ ಅವರ ಈ ನಿಸ್ವಾರ್ಥ ಸೇವೆಗೆ ಸಾಕ್ಷಿಯಾಗಿದೆ ಎಂದರು.
ಸುಬ್ರಮಣ್ಯದ ಶ್ರೀ ಕುಕ್ಕೆ ಸುಬ್ರಹ್ಮಣ್ಯ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯರಾದ ಸೋಮಶೇಖರ್ ನಾಯಕ್ ಇವರು ಮಾತನಾಡುತ್ತಾ ” ವಿದ್ಯಾರ್ಥಿಗಳು ಕಷ್ಟಕರ ವಿಷಯಗಳ ಕಡೆಗೆ ಹೆಚ್ಚು ಗಮನ ಕೊಡಬೇಕು. ನೀವೆಲ್ಲ ಎಕ್ಸೆಲ್ ವಿದ್ಯಾಸಂಸ್ಥೆಯಲ್ಲಿ ಓದುತ್ತಿರುವುದು ನಿಮ್ಮೆಲ್ಲರ ಅದೃಷ್ಟವೇ ಸರಿ. ಈ ಸಂಸ್ಥೆಯ ಅಧ್ಯಕ್ಷರಾದ ನುಮಂತ್ ಕುಮಾರ್ ಜೈನ್ ಇವರು ಉದಾರ ವ್ಯಕ್ತಿತ್ವದ ವ್ಯಕ್ತಿ. ಅವರ ಸೇವಾ ಮನೋಭಾವದಿಂದಲೇ ಈ ಶಿಕ್ಷಣ ಸಂಸ್ಥೆಯು ಎತ್ತರಕ್ಕೆ ಬೆಳೆಯುತ್ತಿದೆ. ಜಿಲ್ಲೆಯ ಯಾವುದೇ ಶೈಕ್ಷಣಿಕ ಸಾಮಾಜಿಕ ಧಾರ್ಮಿಕ ಕಾರ್ಯಕ್ರಮಗಳಿಗೆ ಸುಮಂತ್ ಅವರ ಕೊಡುಗೆ ಅಪಾರವಾದದ್ದು. ಈ ಸಂಸ್ಥೆಗೆ ನನ್ನನ್ನು ಆಹ್ವಾನಿಸಿ ಸನ್ಮಾನಿಸಿದ್ದೀರಿ. ನನ್ನಲ್ಲಿ ಕೃತಾರ್ಥತೆ ಭಾವ ಮೂಡುತ್ತಿದೆ. ಎಕ್ಸೆಲ್ ವಿದ್ಯಾಸಂಸ್ಥೆಗೆ ನಾನು ಚಿರಋಣಿ” ಎಂದು ಸಂತಸ ವ್ಯಕ್ತಪಡಿಸಿದರು.
ಮೂಲ್ಕಿಯ ವಿಜಯ ಕಾಲೇಜಿನ ವಿಶ್ರಾಂತ ಪಾಚಾರ್ಯರಾದ ಡಾ .ನಾರಾಯಣ ಪೂಜಾರಿ ಮತ್ತು ಸಾಮಾಜಿಕ ಮತ್ತು ಧಾರ್ಮಿಕ ಮುಖಂಡರಾದ ಸಂತೋಷ್ ಕುಮಾರ್ ಕಾಪಿನಡ್ಕ ಇವರು ವಿದ್ಯಾರ್ಥಿಗಳ ಭವಿಷ್ಯಕ್ಕೆ ಶುಭ ಕೋರಿದರು.
ಎಕ್ಸೆಲ್ ವಿದ್ಯಾ ಸಂಸ್ಥೆಯ ಹಿತೈಷಿಗಳಾದ ರತ್ನರಾಜ್ ಜೈನ್ ಮತ್ತು ಪತ್ರಿಕೋದ್ಯಮಿಗಳಾದ ಸಂತೋಷ್ ಕೋಟ್ಯಾನ್ ಇವರು ಈ ಕಾರ್ಯಕ್ರಮದ ಭಾಗವಾಗಿ ಸನ್ಮಾನ ಸ್ವೀಕರಿಸಿದರು.
ಸಂಸ್ಥೆಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರು ಅಧ್ಯಕ್ಷೀಯ ಭಾಷಣವನ್ನು ಮಾಡುತ್ತಾ “ನಮ್ಮ ಎಕ್ಸೆಲ್ ಸಂಸ್ಥೆಯ ವಿದ್ಯಾರ್ಥಿಗಳು ದೇಶವಿದೇಶಗಳಲ್ಲಿ ಉನ್ನತ ಶಿಕ್ಷಣವನ್ನು ಮಾಡುತ್ತಿದ್ದಾರೆ . ಇಲ್ಲಿ ಓದಿದ ವಿದ್ಯಾರ್ಥಿಗಳು ಆದರ್ಶ ವ್ಯಕ್ತಿಗಳಾಗಿ ರೂಪಗೊಳ್ಳುತ್ತಿದ್ದಾರೆ. ಈ ಕಾರ್ಯಕ್ರಮದಲ್ಲಿ ಗುರುಗಳನ್ನು ಗೌರವಿಸುವ ಮೂಲಕ ನಮ್ಮಲ್ಲಿ ಧನ್ಯತಾಭಾವ ಮೂಡಿದೆ. ಶಿಕ್ಷಕರು ಜಗತ್ತಿನ ಪ್ರಥಮ ಪೂಜ್ಯರು . ಅಂತಹ ಶಿಕ್ಷಕರನ್ನು ಸನ್ಮಾನಿಸುವುದು ನಮ್ಮ ಸೌಭಾಗ್ಯ” ಎಂದು ಹೇಳಿದರು.
ಕಾಲೇಜಿನ ಬ್ರೋಚರ್ಸ್ ಅನ್ನು ಈ ಸಂದರ್ಭದಲ್ಲಿ ಲೋಕಾರ್ಪಣೆ ಮಾಡಲಾಯಿತು.ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆ, ತಾಲೂಕು ಗ್ರಾಮಗಳಲ್ಲಿ ಶಿಕ್ಷಕ ವೃತ್ತಿಯನ್ನು ಮಾಡುತ್ತ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುತ್ತಿರುವ 300 ಹೆಚ್ಚು ಶಿಕ್ಷಕರನ್ನು ಗೌರವಿಸಿದ್ದು ಅತ್ಯಂತ ವಿರಳ ಮತ್ತು ಸೃಜನಾತ್ಮಕ ಕಾರ್ಯಕ್ರಮವಾಗಿತ್ತು. ಎಲ್ಲ ಶಿಕ್ಷಕರಿಗೆ ಹಾರ , ಶಾಲು, ಪೇಟ ಮತ್ತು ಸ್ಮರಣಿಕೆ, ಉಡುಗೊರೆಗಳನ್ನು ನೀಡಿ ಸನ್ಮಾನಿಸಲಾಯಿತು. ಪ್ರಾಂಶುಪಾಲರಾದ ಡಾ ನವೀನ್ ಕುಮಾರ್ ಮರಿಕೆ ಸ್ವಾಗತಿಸಿದರು. ಎಕ್ಸೆಲ್ ಟೆಕ್ನೋ ಸ್ಕೂಲ್ ವೇಣೂರಿನ ಮುಖ್ಯೋಪಾಧ್ಯಯರಾದ ಶಾಂತಿರಾಜ್ ಜೈನ್ ವಂದಿಸಿದರು.
ಉಪನ್ಯಾಸಕರಾದ ಪ್ರಸನ್ನ ಭೋಜ, ತಿಪ್ಪೇಸ್ವಾಮಿ, ಪ್ರಜ್ವಿತ್ ರೈ, ಅನನ್ಯ ಜೈನ್, ವೈಷ್ಣವಿಯವರು ಕಾರ್ಯಕ್ರಮವನ್ನು ನಿರೂಪಿಸಿದರು. ದ್ವಿತೀಯ ಪಿಯು ವಿದ್ಯಾರ್ಥಿಗಳು ಪ್ರಾರ್ಥನೆ ಹಾಡುವ ಮೂಲಕ ಈ ಕಾರ್ಯಕ್ರಮಕ್ಕೆ ಆರಂಭವನ್ನು ಒದಗಿಸಿದರು.
ಪ್ರಾಂಶುಪಾಲರಾದ ಡಾ. ನವೀನ್ ಕುಮಾರ್ ಮರಿಕೆ, ಡಾ. ಪ್ರಜ್ವಲ್, ಉಪ ಪ್ರಾಚಾರ್ಯರಾದ ರೋಹಿತ್, ಹರೀಶ್ ಕುಮಾರ್ ಗುರುವಾಯನಕೆರೆ ಟೆಕ್ನೋ ಸ್ಕೂಲಿನ ಮುಖ್ಯ ಶಿಕ್ಷಕಿ ಸುಮಿತ್ರ, ವೇಣೂರು ಶಾಲೆಯ ಮುಖ್ಯೋಪಾಧ್ಯಾಯರಾದ ಶಾಂತಿರಾಜ್ ಜೈನ್, ವಿದ್ಯಾರ್ಥಿಗಳು, ಪೋಷಕರು, ಬೋಧಕ ಬೋಧಕೇತರ ಸಿಬ್ಬಂದಿಯವರು ಭಾಗವಹಿಸಿದ್ದರು.
ಎಕ್ಸೆಲ್ ಸಿಬ್ಬಂದಿಯಿಂದ ಸಾಂಸ್ಕೃತಿಕ ವೈಭವ: ಗಿರಿಜಾ ಕಲ್ಯಾಣ ಹಾಗೂ ತಾರಕಾಸುರ ವಧೆ ಯಕ್ಷಗಾನ ಪ್ರದರ್ಶನ
ಗುರು ನಮನ ಕಾರ್ಯಕ್ರಮದ ಅಂಗವಾಗಿ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯವರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಆಯೋಜನೆಗೊಂಡಿದ್ದವು. ಎಕ್ಸೆಲ್ ಪಿಯು ಕಾಲೇಜಿನ ಸಿಬ್ಬಂದಿಯ ಜೊತೆಗೆ ಎಕ್ಸೆಲ್ ಟೆಕ್ನೋ ಸ್ಕೂಲ್ ಗುರುವಾಯನಕೆರೆ ಮತ್ತು ವೇಣೂರು ಶಾಲೆಗಳ ಸಿಬ್ಬಂದಿಯವರು ಭಾಗವಹಿಸಿದ್ದರು.
ಈ ಕಾರ್ಯಕ್ರಮದಲ್ಲಿ ಸಿಬ್ಬಂದಿ ವರ್ಗದವರು ವಿವಿಧ ನೃತ್ಯ,ಹಾಡು, ರೂಪಕ, ಭರತನಾಟ್ಯ ವೈವಿಧ್ಯಮಯ ಕಾರ್ಯಕ್ರಮಗಳನ್ನು ನಡೆಸಿಕೊಡುವ ಮೂಲಕ ಸರ್ವರನ್ನು ರೋಮಾಂಚನಗೊಳಿಸಿದರು. ಗಿರಿಜಾ ಕಲ್ಯಾಣ ಮತ್ತು ತಾರಕಾಸುರ ವಧೆ ಎನ್ನುವ ಯಕ್ಷಗಾನ ಪ್ರಸಂಗವನ್ನು ಪ್ರದರ್ಶಿಸಿದರು.
ಸ್ಥಳೀಯ
Dharmasthala-ಧರ್ಮಸ್ಥಳದಲ್ಲಿ 28ನೇ ವರ್ಷದ ಭಜನಾ ಕಮ್ಮಟ; ಶಿಬಿರಾರ್ಥಿಗಳಿಗೆ ಭಜನಾ ತರಬೇತಿ
ಶ್ರೀ ಕ್ಷೇತ್ರ ಧರ್ಮಸ್ಥಳದ ಮಹೋತ್ಸವ ಸಭಾಭವನದಲ್ಲಿ ಅ.02, ಶುಕ್ರವಾರದಂದು, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ವತಿಯಿಂದ ಆಯೋಜಿಸಲಾದ 28ನೇ ವರ್ಷದ ಭಜನಾ ಕಮ್ಮಟ ದ ಐದನೇ ದಿನದ ಅಂಗವಾಗಿ ಶಿಬಿರದಲ್ಲಿ ಉಪ್ಪುಂದ ರಾಜೇಶ್ ಪಡಿಯಾರ್ ಗಾಯಕರು, ಮೈಸೂರು ಇವರು ಎಲ್ಲಾ ಶಿಬಿರಾರ್ಥಿಗಳಿಗೆ ಭಜನಾ ತರಬೇತಿಯನ್ನು ನೀಡಿದರು.
ಶ್ರೀ ಕ್ಷೇತ್ರ ಧರ್ಮಸ್ಥಳದ ಮಹೋತ್ಸವ ಸಭಾಭವನದಲ್ಲಿ ಅ.02, ಶುಕ್ರವಾರದಂದು, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ವತಿಯಿಂದ ಆಯೋಜಿಸಲಾದ 28ನೇ ವರ್ಷದ ಭಜನಾ ಕಮ್ಮಟ ದ ಐದನೇ ದಿನದ ಅಂಗವಾಗಿ ಶಿಬಿರದಲ್ಲಿ ಉಪ್ಪುಂದ ರಾಜೇಶ್ ಪಡಿಯಾರ್ ಗಾಯಕರು, ಮೈಸೂರು ಇವರು ಎಲ್ಲಾ ಶಿಬಿರಾರ್ಥಿಗಳಿಗೆ ಭಜನಾ ತರಬೇತಿಯನ್ನು ನೀಡಿದರು.
ದಾಸ ಸಾಹಿತ್ಯದ ‘ಇಟ್ಹಾಂಗೆ ಇರುವೆನೋ ಹರಿಯೇ’, ಏಸು ಕಾಯಂಗಳ ಕಳೆದು’ ಹಾಗೂ ಇನ್ನಿತರ ಭಜನಾ ಕೀರ್ತನೆಗಳನ್ನು ತರಬೇತುದಾರರು ಅಭ್ಯಾಸ ಮಾಡಿಸಿದರು.
ಈ ಸಂದರ್ಭದಲ್ಲಿ ಸುಪ್ರಿಯಾ ಹರ್ಷೇಂದ್ರ ಕುಮಾರ್, ಐಶ್ವರ್ಯ ನಿಶ್ಚಲ್ ಜೈನ್ ಹಾಗೂ ಭಜನಾ ಕಮ್ಮಟ ಪರಿಷತ್ ನ ಸಂಚಾಲಕ ಸುಬ್ರಹ್ಮಣ್ಯ ಪ್ರಸಾದ್ ಉಪಸ್ಥಿತರಿದ್ದರು.
-
ಅಪರಾಧ24 hours agoSomasekhar-ನಕಲಿ ದಾಖಲೆ ಸೃಷ್ಟಿಸಿ ಕೈದಿಯ ಬಿಡುಗಡೆ..! ಪ್ರತಿಯಾಗಿ ಆತನ ಪತ್ನಿಯನ್ನು ಲೈಂಗಿಕವಾಗಿ ಬಳಸಿಕೊಳ್ಳುವ ಒಪ್ಪಂದ ಮಾಡಿಕೊಂಡಿದ್ದ ಡಿಐಜಿ ಎಂ. ಸೋಮಶೇಖರ್
-
ಬಿಗ್ ನ್ಯೂಸ್18 hours agoಡಿಕೆಶಿ ಸರ್ಕಾರದಿಂದ ಜನತೆಗೆ ಬಿಗ್ ಶಾಕ್ – ರೈತರಿಗೆ ಬಂಪರ್ ಗಿಫ್ಟ್..! ಹಾಲಿನ ದರ 8 ರೂ. ಏರಿಕೆ : 6 ರೂ. ರೈತರಿಗೆ..! ನ.1 ರಿಂದ ಬಹುತೇಕ ಜಾರಿ
-
ನಿಧನ ವಾರ್ತೆ23 hours agoPuttur-ಪುತ್ತೂರು: ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಪಡೆಯುತ್ತಿದ್ದ ಸ್ಕೂಟರ್ ಸವಾರ ಮೃತ್ಯು
-
ಶಿಕ್ಷಣ22 hours agoPhilomena-ಸಂತ ಫಿಲೋಮಿನಾ ಕಾಲೇಜು : 35 ವರ್ಷಗಳ ಬಳಿಕ ಮತ್ತೆ ಒಂದಾದ 1991ರ ಬಿ.ಎಸ್ಸಿ. ಬ್ಯಾಚ್; ನೆನಪು, ನಂಟು ಮತ್ತು ಗುರು-ಗೌರವದ ಭಾವಪೂರ್ಣ ಸಂಗಮ
-
ನಿಧನ ವಾರ್ತೆ23 hours agoDead body-ಹುಲಿವೇಷ ತರಬೇತಿಗೆಂದು ಮಂಗಳೂರಿಗೆ ಬಂದಿದ್ದ ಬೆಳ್ತಂಗಡಿ ಬಾಲಕ ಸಮುದ್ರ ಪಾಲು; ಮೃತದೇಹ ಪತ್ತೆ
-
ನಿಧನ ವಾರ್ತೆ22 hours agoKerala-ಕೇರಳ: ಸಿಡಿಲು ಬಡಿದು ಖ್ಯಾತ ‘ಪಲ್ಲಟ್ಟು ಬ್ರಹ್ಮದತ್ತನ್’ ಆನೆ ದಾರುಣ ಸಾವು
-
ರಾಜಕೀಯ24 hours agoDK Shivakumar-ಏಷ್ಯನ್ ಗೇಮ್ಸ್ ಪದಕ ವಿಜೇತರಿಗೆ ಭರ್ಜರಿ ಬಹುಮಾನ: 8 ಕ್ರೀಡಾಪಟುಗಳಿಗೆ ₹8 ಕೋಟಿ ಘೋಷಿಸಿದ ಡಿಕೆಶಿ – ಭಾಗವಹಿಸಿದವರಿಗೆ 5 ಲಕ್ಷ
-
ಬಿಗ್ ನ್ಯೂಸ್23 hours agoPuttur-ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ: ‘ಭಕ್ತರನ್ನು ಕಡೆಗಣಿಸಿ ಜೀರ್ಣೋದ್ಧಾರ ಸಮಿತಿ ರಚನೆ’ – ವಿಹಿಂಪ ಆಕ್ಷೇಪ


















