ನಿಧನ ವಾರ್ತೆ
Bantwal-ಬಂಟ್ವಾಳ : ಭಾರೀ ಗಾಳಿ ಮಳೆಗೆ ಕುಸಿದ ಕೋಳಿಶೆಡ್-1500 ಕೋಳಿಗಳು ಸಾವು
ಬಂಟ್ವಾಳ : ಇಲ್ಲಿನ ಕುಳ ಗ್ರಾಮದ ಸೇಕೆಹಿತ್ಲು ಎಂಬಲ್ಲಿ ಭಾರೀ ಗಾಳಿ ಮಳೆಯಿಂದಾಗಿ ಕೋಳಿ ಸಾಕಾಣೆ ಮಾಡುವ ಶೆಡ್ ನೆಲಕ್ಕುರುಳಿದೆ. ಇದರಿಂದಾಗಿ ಸುಮಾರು ಒಂದೂವರೆ ಸಾವಿರ ಕೋಳಿಗಳು ಮೃತಪಟ್ಟಿವೆ.
ಬಂಟ್ವಾಳ ತಾಲೂಕು ಕುಳ ಗ್ರಾಮದ ಸೇಕೆಹಿತ್ಲು ನಿವಾಸಿ ರಾಘವರವರ ಮಾಲಕತ್ವದ ಶೆಡ್ ಇದಾಗಿದ್ದು, ಸುಮಾರು 2200 ಕೋಳಿಗಳನ್ನು ಅವರು ಸಾಕಾಣೆ ಮಾಡುತ್ತಿದ್ದರು. ಸುಮಾರು 700 ಕೋಳಿಗಳು ದೊಡ್ಡದಾಗಿರುವ ಹಿನ್ನೆಲೆಯಲ್ಲಿ ಮಾರಾಟವಾಗಿದ್ದವು.
ಜು.18ರ ತಡರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಈ ದುರ್ಘಟನೆ ಸಂಭವಿಸಿದ್ದು ಶೆಡ್ಡಿನ ಮೇಲ್ಛಾವಣಿ ಒಮ್ಮೆಲೆ ಕುಸಿದು ಬಿದ್ದಿದೆ. ಕುಸಿದು ಬಿದ್ದ ಛಾವಣಿಯಡಿ ಸಿಲುಕಿ ಸುಮಾರು 1500 ಕೋಳಿಗಳು ಸತ್ತುಹೋಗಿವೆ. ಘಟನೆಯಿಂದಾಗಿ ಶೆಡ್ ಸಂಪೂರ್ಣ ನಾಶವಾಗಿರುವ ಕಾರಣ ಸಾವಿರಾರು ರೂಪಾಯಿ ನಷ್ಟ ಸಂಭವಿಸಿದೆನ್ನಲಾಗಿದೆ.
ನಿಧನ ವಾರ್ತೆ
Uppinangadi-ಉಪ್ಪಿನಂಗಡಿ: ಸೇತುವೆ ಮೇಲೆ ಬೈಕ್, ಮೊಬೈಲ್ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ನದಿಯಲ್ಲಿ ಶವವಾಗಿ ಪತ್ತೆ
ಕುಮಾರಧಾರ ಹಳೆ ಸೇತುವೆ ಮೇಲೆ ಬೈಕ್ ಹಾಗೂ ಮೊಬೈಲ್ ಇಟ್ಟು ನಾಪತ್ತೆಯಾಗಿದ್ದ ಹಿರೇಬಂಡಾಡಿ ಗ್ರಾಮದ ಪೆರಾಬೆ ನಿವಾಸಿ ಮಾಧವ ಗೌಡ (44) ಅವರ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ. ಅವರು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ.
ಉಪ್ಪಿನಂಗಡಿ: ಕುಮಾರಧಾರ ಹಳೆ ಸೇತುವೆ ಮೇಲೆ ಬೈಕ್ ಹಾಗೂ ಮೊಬೈಲ್ ಇಟ್ಟು ನಾಪತ್ತೆಯಾಗಿದ್ದ ಹಿರೇಬಂಡಾಡಿ ಗ್ರಾಮದ ಪೆರಾಬೆ ನಿವಾಸಿ ಮಾಧವ ಗೌಡ (44) ಅವರ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ. ಅವರು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ.
ಆತೂರಿನಲ್ಲಿ ಇತ್ತೀಚೆಗಷ್ಟೇ ಟಯರ್ ಪಂಕ್ಚರ್ ಅಂಗಡಿ ಆರಂಭಿಸಿದ್ದ ಮಾಧವ ಗೌಡ ಅವರು ಅ.2ರಂದು ಮನೆಯಿಂದ ಅಂಗಡಿಗೆ ತೆರಳಿದ್ದರು. ಆದರೆ ಬಳಿಕ ಮನೆಗೆ ವಾಪಸ್ ಆಗದೆ ನಾಪತ್ತೆಯಾಗಿದ್ದರು. ಈ ಹಿನ್ನೆಲೆಯಲ್ಲಿ ಕುಟುಂಬಸ್ಥರು ಹಾಗೂ ಸ್ಥಳೀಯರು ಹುಡುಕಾಟ ನಡೆಸಿದಾಗ, ಅವರ ಬೈಕ್ ಮತ್ತು ಮೊಬೈಲ್ ಉಪ್ಪಿನಂಗಡಿಯ ಕುಮಾರಧಾರ ನದಿಯ ಹಳೆ ಸೇತುವೆ ಮೇಲೆ ಪತ್ತೆಯಾಗಿತ್ತು.
ಅವರು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದೆಂಬ ಶಂಕೆ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಅ.4ರಂದು ಪುತ್ತೂರು ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಮುಳುಗು ತಜ್ಞರು ದೋಣಿಯ ಮೂಲಕ ನದಿಯಲ್ಲಿ ಹುಡುಕಾಟ ನಡೆಸಿದ್ದರು. ಮಧ್ಯಾಹ್ನದಿಂದ ಸಂಜೆಯವರೆಗೆ ಶೋಧ ಕಾರ್ಯ ನಡೆಸಿದರೂ ಯಾವುದೇ ಸುಳಿವು ಪತ್ತೆಯಾಗಿರಲಿಲ್ಲ.
ಇದೀಗ ಎರಡು ದಿನಗಳ ಬಳಿಕ ನೆಕ್ಕಿಲಾಡಿ ಗ್ರಾಮದ ಬೊಳ್ಳಾರ್ ಸಮೀಪ ನೇತ್ರಾವತಿ ನದಿಯಲ್ಲಿ ಮಾಧವ ಗೌಡ ಅವರ ಮೃತದೇಹ ಪತ್ತೆಯಾಗಿದೆ. ಅವರ ನಾಪತ್ತೆ ಕುರಿತು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ನಿಧನ ವಾರ್ತೆ
Accident-ಹುತಾತ್ಮ ಸೈನಿಕನ ಮೃತದೇಹ ಕೊಂಡೊಯ್ಯುತ್ತಿದ್ದ ಆಂಬ್ಯುಲೆನ್ಸ್ ಅಪಘಾತ: ಸೈನಿಕನ ಮಗ, ಸಹೋದರ ಸೇರಿ ನಾಲ್ವರು ಸಾವು
ಇತ್ತೀಚೆಗೆ ನಿಧನರಾಗಿದ್ದ ಸೈನಿಕ ಸುಬೇದಾರ್ ಮೇಜರ್ ಸತ್ಯವಾನ್ ಅವರ ಮೃತದೇಹವನ್ನು ಸ್ವಗ್ರಾಮಕ್ಕೆ ಕೊಂಡೊಯ್ಯುತ್ತಿದ್ದ ಆಂಬ್ಯುಲೆನ್ಸ್ ಭೀಕರ ಅಪಘಾತಕ್ಕೀಡಾಗಿ ನಾಲ್ವರು ಮೃತಪಟ್ಟಿರುವ ದಾರುಣ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಮೃತರಲ್ಲಿ ಸೈನಿಕನ ಮಗ, ಸಹೋದರ, ಸೋದರಳಿಯ ಹಾಗೂ ಆಂಬ್ಯುಲೆನ್ಸ್ ಚಾಲಕ ಸೇರಿದ್ದಾರೆ.
ಸುಲ್ತಾನ್‌ಪುರ (ಉತ್ತರ ಪ್ರದೇಶ): ಇತ್ತೀಚೆಗೆ ನಿಧನರಾಗಿದ್ದ ಸೈನಿಕ ಸುಬೇದಾರ್ ಮೇಜರ್ ಸತ್ಯವಾನ್ ಅವರ ಮೃತದೇಹವನ್ನು ಸ್ವಗ್ರಾಮಕ್ಕೆ ಕೊಂಡೊಯ್ಯುತ್ತಿದ್ದ ಆಂಬ್ಯುಲೆನ್ಸ್ ಭೀಕರ ಅಪಘಾತಕ್ಕೀಡಾಗಿ ನಾಲ್ವರು ಮೃತಪಟ್ಟಿರುವ ದಾರುಣ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಮೃತರಲ್ಲಿ ಸೈನಿಕನ ಮಗ, ಸಹೋದರ, ಸೋದರಳಿಯ ಹಾಗೂ ಆಂಬ್ಯುಲೆನ್ಸ್ ಚಾಲಕ ಸೇರಿದ್ದಾರೆ.
ಅಯೋಧ್ಯೆ-ಸುಲ್ತಾನ್‌ಪುರ ಗಡಿಯಲ್ಲಿರುವ ಹಲಿಯಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಪೂರ್ವಾಂಚಲ ಎಕ್ಸ್‌ಪ್ರೆಸ್‌ವೇಯ 79.6ನೇ ಕಿಲೋಮೀಟರ್ ಬಳಿ ಭಾನುವಾರ ಬೆಳಗ್ಗೆ ಈ ಅಪಘಾತ ಸಂಭವಿಸಿದೆ.
ಡಿಯೋರಿಯಾ ಜಿಲ್ಲೆಯ ರುದ್ರಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗಲಿಯಾ ದುದೈಲಾ ಗ್ರಾಮದ ನಿವಾಸಿ ಸುಬೇದಾರ್ ಮೇಜರ್ ಸತ್ಯವಾನ್ ಅವರು ಚಂಡೀಗಢದಲ್ಲಿ ನಿಯೋಜನೆಗೊಂಡಿದ್ದರು. ಇತ್ತೀಚೆಗೆ ಅವರು ಮೃತಪಟ್ಟಿದ್ದು, ಅವರ ಮೃತದೇಹವನ್ನು ಆಂಬ್ಯುಲೆನ್ಸ್ ಮೂಲಕ ಸ್ವಗ್ರಾಮಕ್ಕೆ ಕೊಂಡೊಯ್ಯಲಾಗುತ್ತಿತ್ತು.
ಆಂಬ್ಯುಲೆನ್ಸ್‌ನಲ್ಲಿ ಸತ್ಯವಾನ್ ಅವರ ಮಗ ಗೌರವ್ ಸಿಂಗ್, ಸಹೋದರ ರಾಜನ್ ಚೌಧರಿ, ಸೋದರಳಿಯ ರಾಮ್ ಸಂಜು ಸಿಂಗ್ ಹಾಗೂ ಚಾಲಕ ಜಸ್ಪಾಲ್ ಪ್ರಯಾಣಿಸುತ್ತಿದ್ದರು.
ಪೂರ್ವಾಂಚಲ ಎಕ್ಸ್‌ಪ್ರೆಸ್‌ವೇಯಲ್ಲಿ ತೆರಳುತ್ತಿದ್ದ ಆಂಬ್ಯುಲೆನ್ಸ್‌ಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದಿದೆ. ಪರಿಣಾಮ ನಿಯಂತ್ರಣ ತಪ್ಪಿದ ಆಂಬ್ಯುಲೆನ್ಸ್ ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಆಂಬ್ಯುಲೆನ್ಸ್ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಗೌರವ್ ಸಿಂಗ್ ಹಾಗೂ ಚಾಲಕ ಜಸ್ಪಾಲ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ತೀವ್ರವಾಗಿ ಗಾಯಗೊಂಡಿದ್ದ ರಾಜನ್ ಚೌಧರಿ ಹಾಗೂ ರಾಮ್ ಸಂಜು ಸಿಂಗ್ ಅವರನ್ನು ಅಯೋಧ್ಯೆಯ ಕುಮಾರ್‌ಗಂಜ್‌ನ ಸಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಬ್ಬರೂ ಮೃತಪಟ್ಟಿದ್ದಾರೆ. ಇದರೊಂದಿಗೆ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.
ಸುಬೇದಾರ್ ಮೇಜರ್ ಸತ್ಯವಾನ್ ಅವರ ಮೃತದೇಹವನ್ನು ಪೊಲೀಸ್ ಠಾಣೆ ಆವರಣದಲ್ಲಿ ಯೋಧರ ಪೂರ್ಣ ಗೌರವದೊಂದಿಗೆ ಇರಿಸಲಾಗಿದ್ದು, ಅಪಘಾತಕ್ಕೆ ಕಾರಣವಾದ ಅಪರಿಚಿತ ವಾಹನದ ಪತ್ತೆಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಘಟನೆಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಸ್ಥರಿಗೆ ಸಾಂತ್ವನ ತಿಳಿಸಿರುವುದರ ಜೊತೆಗೆ ಅಗತ್ಯ ನೆರವು ಒದಗಿಸುವಂತೆ ಜಿಲ್ಲಾಡಳಿತಕ್ಕೆ ಸೂಚಿಸಿದ್ದಾರೆ.
ನಿಧನ ವಾರ್ತೆ
Lalitamma-ಸುಂಟರಗಾಳಿ’, ‘ಜಂಗ್ಲಿ’ ಖ್ಯಾತಿಯ ಹಿರಿಯ ನಟಿ ಲಲಿತಮ್ಮ ನಿಧನ
ನ್ನಡ ಚಿತ್ರರಂಗ ಹಾಗೂ ಕಿರುತೆರೆಯ ಹಿರಿಯ ನಟಿ ಲಲಿತಮ್ಮ (65) ಅವರು ಭಾನುವಾರ ನಿಧನರಾಗಿದ್ದಾರೆ. ಕಳೆದ ಎರಡೂವರೆ ತಿಂಗಳಿಂದ ಪಾರ್ಶ್ವವಾಯುವಿನಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ಬೆಂಗಳೂರು, ಅ.4: ಕನ್ನಡ ಚಿತ್ರರಂಗ ಹಾಗೂ ಕಿರುತೆರೆಯ ಹಿರಿಯ ನಟಿ ಲಲಿತಮ್ಮ (65) ಅವರು ಭಾನುವಾರ ನಿಧನರಾಗಿದ್ದಾರೆ. ಕಳೆದ ಎರಡೂವರೆ ತಿಂಗಳಿಂದ ಪಾರ್ಶ್ವವಾಯುವಿನಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ಹಲವು ದಶಕಗಳಿಂದ ಕನ್ನಡ ಚಿತ್ರರಂಗ, ಕಿರುತೆರೆ ಹಾಗೂ ರಂಗಭೂಮಿಯಲ್ಲಿ ಸಕ್ರಿಯರಾಗಿದ್ದ ಲಲಿತಮ್ಮ ಅವರು ಇತ್ತೀಚಿನ ದಿನಗಳಲ್ಲಿ ಅನಾರೋಗ್ಯದ ಜೊತೆಗೆ ಆರ್ಥಿಕ ಸಂಕಷ್ಟವನ್ನೂ ಎದುರಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ ‘ಅಮ್ಮನ ಮಡಿಲು ಟ್ರಸ್ಟ್’ ಅವರ ನೆರವಿಗೆ ನಿಂತು ಆಸರೆ ನೀಡಿತ್ತು.
ನಟ ದರ್ಶನ್ ಅಭಿನಯದ ‘ಸುಂಟರಗಾಳಿ’ ಸಿನಿಮಾದಲ್ಲಿ ಖಳನಾಯಕಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ಲಲಿತಮ್ಮ ಅವರು ತಮ್ಮ ನೈಜ ಅಭಿನಯದ ಮೂಲಕ ಪ್ರೇಕ್ಷಕರ ಗಮನ ಸೆಳೆದಿದ್ದರು. ಈ ಸಿನಿಮಾದ ಪಾತ್ರ ಅವರಿಗೆ ಕನ್ನಡ ಚಿತ್ರರಂಗದಲ್ಲಿ ಅಪಾರ ಜನಪ್ರಿಯತೆ ತಂದುಕೊಟ್ಟಿತ್ತು.
ಬಳಿಕ ‘ಜಂಗ್ಲಿ’, ‘ಲೈಫ್ ಇಷ್ಟೇನೆ’ ಸೇರಿದಂತೆ ಹಲವು ಸಿನಿಮಾಗಳಲ್ಲಿ ಅಭಿನಯಿಸಿದ್ದ ಅವರು, ತಮ್ಮ ವಿಭಿನ್ನ ನಟನಾ ಶೈಲಿಯಿಂದ ಗುರುತಿಸಿಕೊಂಡಿದ್ದರು. ಸಿನಿಮಾ ಮಾತ್ರವಲ್ಲದೆ ‘ರಂಗೋಲಿ’ ಸೇರಿದಂತೆ ಹಲವು ಜನಪ್ರಿಯ ಧಾರಾವಾಹಿಗಳು ಹಾಗೂ ನಾಟಕಗಳಲ್ಲಿಯೂ ಅಭಿನಯಿಸಿ ಮೆಚ್ಚುಗೆ ಗಳಿಸಿದ್ದರು.
-
ನಿಧನ ವಾರ್ತೆ16 hours agoUppinangadi-ಉಪ್ಪಿನಂಗಡಿ: ಸೇತುವೆ ಮೇಲೆ ಬೈಕ್, ಮೊಬೈಲ್ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ನದಿಯಲ್ಲಿ ಶವವಾಗಿ ಪತ್ತೆ
-
ಬಿಗ್ ನ್ಯೂಸ್21 hours agoBantwal-Big Breaking-ದ.ಕ. ಜಿಲ್ಲೆಯಲ್ಲಿ ಗುಡುಗು-ಮಿಂಚಿನ ಮಳೆ: ಸಿಡಿಲು ಬಡಿದು ಮನೆ ಜಖಂ-ಮಹಿಳೆ ಅಸ್ವಸ್ಥ
-
ಅಪರಾಧ21 hours agoPuttur-ಪುತ್ತೂರು: ಹಿಂಸಾತ್ಮಕ ರೀತಿಯಲ್ಲಿ 11 ಗೋವುಗಳ ಸಾಗಾಟ; ವಾಹನ ಪತ್ತೆ, ಇಬ್ಬರು ಪರಾರಿ
-
ಅಂತರ ರಾಜ್ಯ20 hours agoMurder-ಆಸ್ತಿಗಾಗಿ ಬೆಲ್ಟ್ನಿಂದ ಕುತ್ತಿಗೆ ಬಿಗಿದು ಪತಿಯ ಕೊಲೆ: ಆಕಸ್ಮಿಕ ಸಾವೆಂದು ನಂಬಿಸಿದ್ದ ಪತ್ನಿ ಅರೆಸ್ಟ್
-
ಸ್ಥಳೀಯ21 hours agoCrop insurance-ಬೆಳೆ ವಿಮೆಯಲ್ಲಿ ಭಾರೀ ಇಳಿಕೆ – ದ.ಕ. ಜಿಲ್ಲೆಯ ಅಡಿಕೆ, ಕಾಳುಮೆಣಸು ಬೆಳೆಗಾರರು ಶಾಕ್..!; ಬೇಗನೆ ಜಮೆಯಾದರೂ ಪರಿಹಾರ ಮೊತ್ತದಲ್ಲಿ ಭಾರೀ ಇಳಿಕೆ; ಲೆಕ್ಕಾಚಾರ ಬಹಿರಂಗಕ್ಕೆ ಆಗ್ರಹ
-
ನಿಧನ ವಾರ್ತೆ19 hours agoAccident-ಹುತಾತ್ಮ ಸೈನಿಕನ ಮೃತದೇಹ ಕೊಂಡೊಯ್ಯುತ್ತಿದ್ದ ಆಂಬ್ಯುಲೆನ್ಸ್ ಅಪಘಾತ: ಸೈನಿಕನ ಮಗ, ಸಹೋದರ ಸೇರಿ ನಾಲ್ವರು ಸಾವು
-
Uncategorized10 hours ago
ಪುತ್ತೂರು : ಪರವಾನಿಗೆ ರಹಿತವಾಗಿ ಹಿಂಸಾತ್ಮಕವಾಗಿ 11 ಗೋವುಗಳ ಸಾಗಾಟ; ಶಿವಪ್ರಸಾದ್ ಬಂಧನ
-
ರಾಜಕೀಯ15 hours agoPuttur-ಪುತ್ತೂರು: ಅಲ್ಪಸಂಖ್ಯಾತ ಸೇವಾ ಕೇಂದ್ರ ಉದ್ಘಾಟನೆಗೆ ಬಿಜೆಪಿ ಮೋರ್ಚಾದಿಂದ ಆಗ್ರಹ


















