Connect with us

ಪುತ್ತೂರು

Kargil Vijaya Divas ಪುತ್ತೂರಿನಲ್ಲಿ ಅಭೂತಪೂರ್ವವಾಗಿ ಅನಾವರಣಗೊಂಡು, ದೇಶಪ್ರೇಮದ ಕಿಚ್ಚು ಹಚಿದ ಕಾರ್ಗಿಲ್‌ ವಿಜಯೋತ್ಸವ -25ರ ಸಂಭ್ರಮ; ಅತ್ಯಾಪೂರ್ವ ಕಾರ್ಯದಲ್ಲೂ ಹುಳುಕು ಸೃಷ್ಟಿಸಿ ಅಪಪ್ರಚಾರ; ʼಯಶಸ್ಸನ್ನು ಅರಗಿಸಿಕೊಳ್ಳಲಾಗದ ದೇಶ ದ್ರೋಹಿಗಳ ಕೃತ್ಯʼ : ಮಾಜಿ ಸೈನಿಕರ ಆಕ್ರೋಶ

Published

on

Ad Widget

Ad Widget

Ad Widget

Ad Widget

ಅಭೂತಪೂರ್ವ ಕಾರ್ಯಕ್ರಮನ್ನು ಕಣ್ತುಂಬಿಸುವ ಬದಲು ಪುತ್ತೂರಿನ ಕೆಲ ಕಿಡಿಗೇಡಿಗಳು, ಸುಖಾಸುಮ್ಮನೇ ಈ ಕಾರ್ಯಕ್ರಮದ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ ಮಾಡುತ್ತಿವೆ . ಇದು ದೇಶಕ್ಕಾಗಿ ಸರ್ವಸ್ವವನ್ನು ತ್ಯಾಗ ಮಾಡಿದ ಸೈನಿಕರ ಬೇಸರ ನೋವು ಮೂಡಿಸಿದೆ. ಯುದ್ದದಲ್ಲಿ ಪಾಕಿಸ್ತಾನದ ಸೈನಿಕರನ್ನು ಸದೆ ಬಡಿದ ಇಬ್ಬರು ಸಾಹಸಿ ಯೋಧರನ್ನು ಗೌರವಿಸಿ ನಗರದಲ್ಲಿ ಮೆರವಣಿಗೆ ಮಾಡಿದರೇ, ಅದರಲ್ಲೂ ತಪ್ಪು ಹುಡುಕುವ ಕೃತಘ್ನರು ಇದ್ದಾರೆಯೇ ? ಎನ್ನುವ ಪ್ರಶ್ನೆಗಳು ಅವರ ಮನ:ಪಟಲದಲ್ಲಿ ಮೂಡಿದೆ. ಈ ಅಪಪ್ರಚಾರದ ಕುರಿತು ಒಂದಷ್ಟು ಮಾಜಿ ಸೈನಿಕರು ಕನಲಿದ್ದು, ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Kargil Vijaya Divas ಪುತ್ತೂರು :, 25 ವರ್ಷಗಳ ಹಿಂದೆ ಹಿಮದ ಬಿರುಗಾಳಿ, ಮೈ ಕೊರೆಯುವ ಚಳಿ ರಣ ಭೀಕರ ಮಳೆ  ಹಾಗೂ ವಿರೋಧಿ ಎಸೆದ ಕಾಡುತೂಸುಗಳನ್ನು ಲೆಕ್ಕಿಸದೇ, ದೇಶದ ಸರಹದ್ದಿನಲ್ಲಿ ಕಾದಾಡಿ ಭಾರತಕ್ಕೆ  ಅತ್ಯಾಪೂರ್ವ  ಗೆಲುವನ್ನು ತಂದು ಕೊಟ್ಟ ಧೀರ ಯೋಧರ ಸಾಹಸಗಾಥೆಯನ್ನು ನೆನೆಯುವ.  ಅವರ ತ್ಯಾಗ ಬಲಿದಾನಗಳನ್ನು ಯುವ ಪೀಳೀಗೆಗೆ ನೆನಪಿಸುವ, ಆ ಮೂಲಕ ನವ ತರುಣ ತರುಣಿಯರಲ್ಲಿ ಸೇನೆ ಕುರಿತಾಗಿ ಗೌರವ ಆದರ ಬೆಳೆಸುವ, ಅವರ ಧಮನಿ ಧಮನಿಯಲ್ಲಿ  ದೇಶ ಪ್ರೇಮ , ರಾಷ್ಟ್ರ ಭಕ್ತಿಯನ್ನು ಉದ್ದೀಪನ ಗೊಳಿಸುವ ಹಾಗೂ ಆ ಯುದ್ದದಲ್ಲಿ ನೇರವಾಗಿ ಭಾಗಿಯಾದ ಇಬ್ಬರು ಧೀರ ಸೇನಾನಿಗಳನ್ನು ಕೊಂಡಾಡುವ, ಅವರಿಗೆ ನಮಿಸುವ ಚಾರಿತ್ರಿಕ ಅವರನ್ನು ಗೌರವಿಸಿ ನಮಸ್ಕರಿಸುವ ಅತ್ಯಾಪರೂಪದ  ಕಾರ್ಯಕ್ರಮವೊಂದು ಪುತ್ತೂರಿನಲ್ಲಿ ಕಾರ್ಗಿಲ್‌ ವಿಜಯೋತ್ಸವದ ದಿನದಂದು ಪುತ್ತೂರಿನ ಪ್ರತಿಷ್ಟಿತ ಅಂಬಿಕಾ ವಿದ್ಯಾಲಯದ ಸಾರಥ್ಯದಲ್ಲಿ ಜರುಗಿತ್ತು.

Ad Widget

Ad Widget

Ad Widget

Ad Widget

 ಈ  ಅಮೋಘ ಕಾರ್ಯಕ್ರಮ  ಪುತ್ತೂರಿನ ಪ್ರತಿ ದೇಶ ಪ್ರೇಮಿಯನ್ನು ಬಾವುಕವಾಗಿಸಿತ್ತು. ಊರಿಗೆ ಊರೇ ಸಂಭ್ರಮಿಸಿತು. ಮಳೆಯನ್ನು ಲೆಕ್ಕಿಸದೇ ವಿದ್ಯಾರ್ಥಿಗಳು ಮಾಜಿ ಸೈನಿಕರು, ಊರ ನಾಗರೀಕರು ಇಬ್ಬರು ಮಾಜಿ ಸೇನಾನಿಗಳನ್ನು ಮೆರವಣಿಗೆಯಲ್ಲಿ ಕರೆದುಕೊಂಡು ಬಂದ ಕ್ಷಣ ಇಲ್ಲಿನ ನಾಗರೀಕರನ್ನು ಭಾವುಕರನ್ನಾಗಿಸಿತು, ಸೈನಿಕರ ಅಪ್ರತಿಮ ಸಾಹಸ, ತ್ಯಾಗ ಬಲಿದಾನಗಳ ನೆನೆದು ಎದೆ ಭಾರವಾಗಿಸಿತು.  ಸುರಿದ ಮಳೆ ಗಡಿಯಲ್ಲಿ ಸೈನಿಕರು ಎದಿರುಸುವ ಹಲವಾರು ಸವಾಲುಗಳ, ಕಿರು ಪರಿಚಯವನ್ನು ಆ ಮೆರವಣಿಗೆಯಲ್ಲಿ  ಸಾಗಿದವರಿಗೆ ಮಾಡಿಸಿತ್ತು. ಮೆರವಣಿಗೆಯಲ್ಲಿ ಸಾಗಿದ ಬಹುತೇಕರು ವಿದ್ಯಾರ್ಥಿಗಳೇ ಆಗಿದ್ದರಿಂದ  ಅವರಿಗೂ ಸೈನಿಕನೊಬ್ಬ ಎದುರಿಸುವ ಕಷ್ಟಗಳ ಅಗಾಧತೆಯ ಅರಿವು ಸಿಕ್ಕಿತ್ತು . ಇಂತಹ ಸಣ್ಣ ಸಣ್ನ  ಅನುಭವಗಳು ನವ ಪೀಳಿಗೆಗೆ ಅಗತ್ಯವು ಇದೆ. ಈ ಮಳೆಯ ನೂರು ಪಾಲು ಹೆಚ್ಚಿನ ಸವಾಲನ್ನು ಗಡಿ ಕಾಯುವ ಯೋಧ ಎದುರಿಸುತ್ತೇನೆ ಅನ್ನುವಾಗ ಸೈನಿಕನ ತ್ಯಾಗದ ಆಳ ಆಗಲ ವಿಸ್ತಾರ ಆ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಅನುಭವಕ್ಕೆ ಬಂದಿರುತ್ತದೆ.  ಮತ್ತೆಂದೂ ಆತ ಸೈನ್ಯದೆಡೆಗೆ ದೇಶದೆಡೆಗೆ ಅನಾದರ ಬೆಳೆಸಿಕೊಳ್ಳವುದು ಬಿಡಿ, ಕನಸ್ಸಿನಲ್ಲೂ ಯೋಚಿಸಲು ಸಾಧ್ಯವಿಲ್ಲ

Ad Widget

Ad Widget alt="Ad Widget"/>

Ad Widget

 ಅಭೂತಪೂರ್ವ ಕಾರ್ಯಕ್ರಮನ್ನು ಕಣ್ತುಂಬಿಸುವ ಬದಲು ಪುತ್ತೂರಿನ ಕೆಲ ಕಿಡಿಗೇಡಿಗಳು, ಸುಖಾಸುಮ್ಮನೇ ಈ ಕಾರ್ಯಕ್ರಮದ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ ಮಾಡುತ್ತಿವೆ . ಇದು ದೇಶಕ್ಕಾಗಿ ಸರ್ವಸ್ವವನ್ನು ತ್ಯಾಗ ಮಾಡಿದ ಸೈನಿಕರ ಬೇಸರ ನೋವು ಮೂಡಿಸಿದೆ. ಯುದ್ದದಲ್ಲಿ ಪಾಕಿಸ್ತಾನದ ಸೈನಿಕರನ್ನು ಸದೆ ಬಡಿದ ಇಬ್ಬರು ಸಾಹಸಿ ಯೋಧರನ್ನು ಗೌರವಿಸಿ ನಗರದಲ್ಲಿ ಮೆರವಣಿಗೆ ಮಾಡಿದರೇ, ಅದರಲ್ಲೂ ತಪ್ಪು ಹುಡುಕುವ ಕೃತಘ್ಣರು ಇದ್ದಾರೆಯೇ ? ಎನ್ನುವ ಪ್ರಶ್ನೆಗಳು ಅವರ ಮನ:ಪಟಲದಲ್ಲಿ ಮೂಡಿದೆ. ಈ ಅಪಪ್ರಚಾರದ ಕುರಿತು ಒಂದಷ್ಟು ಮಾಜಿ ಸೈನಿಕರು ಕನಲಿದ್ದು, ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Ad Widget

Ad Widget <> Ad Widget

  ಜು 19 ರಂದು ನಡೆದ ಐತಿಹಾಸಿಕ  ಕಾರ್ಯಕ್ರಮದಲ್ಲಿ ಧರ್ಮದ ಲೇಪನವಿರಲಿಲ್ಲ, ರಾಜಕೀಯದ ವಾಸನೆ ಬರಲಿಲ್ಲ, ಸ್ವಾರ್ಥದ ಬಯಕೆ ಕಾಣಿಸಲಿಲ್ಲ. ಕೇವಲ ರಾಷ್ಟ್ರಭಕ್ತಿ, ದೇಶಕ್ಕಾಗಿ ಬದುಕನ್ನು ಮುಡಿಪಾಗಿಟ್ಟವರನ್ನು ಗೌರವಿಸುವ ಭಾವವಷ್ಟೇ ವಿರಾಜಿಸುತ್ತಿತ್ತು.

 ಈ ರಾಷ್ಟ್ರೀಯತೆಯ  ನೇತೃತ್ವ ವಹಿಸಿದ್ದು ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳು. ಪುತ್ತೂರಿನ ಮಾಜಿ ಸೈನಿಕರ ಸಂಘ, ಅಮರ್ ಜವಾನ್ ಜ್ಯೋತಿ ಸಂರಕ್ಷಣಾ ಸಮಿತಿ ಹಾಗೂ ಇವರಿಗೆ ಹೆಗಲೆಣೆಯಾಗಿ ಪುತ್ತೂರಿನ   ಅನ್ಯಾನ್ಯ ಸಂಘ ಸಂಸ್ಥೆಗಳು. ಕಾರ್ಗಿಲ್ ವಿಜಯೋತ್ಸವಕ್ಕೆ ಇಪ್ಪತ್ತೈದು ವರ್ಷ ತುಂಬಿದ್ದ ಸಂಭ್ರಮಕ್ಕೆ  ಈ  ಅಪರೂಪದಲ್ಲಿ ಅಪರೂಪ ಎನ್ನುವ  ಕಾರ್ಯಕ್ರಮ ಆಯೋಜಿಸಲ್ಪಟ್ಟದ್ದು ಅಂಬಿಕಾ ಸಂಸ್ಥೆಗಳಿಂದಲೇ ರೂಪಿಸಲ್ಪಟ್ಟ ಅಮರ್ ಜವಾನ್ ಜ್ಯೋತಿ ಸ್ಮಾರಕ ಹಾಗೂ ಎದುರಿನ ಕಿಲ್ಲೆ ಮೈದಾನದಲ್ಲಿ.  

Ad Widget

Ad Widget

ಇಡಿಯ ಕಾರ್ಯಕ್ರಮದಲ್ಲಿ ಗಮನಸೆಳೆದದ್ದು ಭವ್ಯ ಮೆರವಣಿಗೆ. ಒಂದೆಡೆ ತನ್ನ ವಿರಾಟ್ ರೂಪ‌ಪ್ರದರ್ಶಿಸುತ್ತಿದ್ದ ಪ್ರಚಂಡ ಮಳೆ. ಇನ್ನೊಂದೆಡೆ ‘ಮಳೆಯೇನು‌ ಮಹಾ’ ಎಂಬಂತೆ ಭಾರತ ಮಾತೆಗೆ, ವೀರ ಸೈನಿಕರಿಗೆ ಜಯಘೋಷದ ಗುಡುಗಿನ ಸಹಿತ ಅಂಬಿಕಾದ ಸಹಸ್ರ ಸಹಸ್ರ ವಿದ್ಯಾರ್ಥಿಗಳು.‌ಜತೆಗೆ ಪುತ್ತೂರಿನ ಇನ್ನೂ ಕೆಲವು ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳು ಬೆಂಬಲವಾಗಿ ಬಂದಿದ್ದರು. ನಮಗಾಗಿ ಬದುಕನ್ನು ಕೊಡುವವರಿಗೆ, ನಿತ್ಯ ಘೋರ ಚಳಿ ಮಳೆ ಅನುಭವಿಸುವವರಿಗಾಗಿ ನಾವೊಂದು ದಿನ ಒದ್ದೆಯಾದರೆ ಅಡ್ಡಿಯಿಲ್ಲ ಎಂಬ ಭಾವ ಪ್ರತಿಯೊಬ್ಬ ವಿದ್ಯಾರ್ಥಿ ವಿದ್ಯಾರ್ಥಿನಿಯ ಮುಖದಲ್ಲಿ ಎದ್ದು ಕಾಣುತ್ತಿತ್ತು. ಅನೇಕ ಮಂದಿ ವಿದ್ಯಾರ್ಥಿಗಳು ಜಡಿ ಮಳೆಗೆ ಕೊಡೆಯನ್ನೂ ಹಿಡಿಯದೆ ದರ್ಬೆ ವೃತ್ತದಿಂದ ಕಿಲ್ಲೆಮೈದಾನದವರೆಗೂ ನಡೆದು ಬಂದದ್ದು ಪುತ್ತೂರಿನ ಇತಿಹಾಸದಲ್ಲೊಂದು ಮೈಲಿಗಲ್ಲೆನಿಸಿತು.

ಕಾರ್ಗಿಲ್ ಕದನದ ಇಬ್ಬರು‌ ಮಹಾಯೋಧರನ್ನು ತೆರೆದ ವಾಹನದಲ್ಲಿ ಅದ್ದೂರಿ‌ ಮೆರವಣಿಗೆ ಮಾಡಿ ಸೈನಿಕರೇ ನಮ್ಮ ಆದರ್ಶ ಎಂಬ ಸಂದೇಶವನ್ನು ಮೆರವಣಿಗೆ ಮೂಲಕ  ಇಡಿಯ ನಗರದಲ್ಲಿ ಸಾರಲಾಯಿತು.   ಕಾಂಗ್ರೆಸ್, ಬಿ.ಜೆ.ಪಿ ಎಂಬ ರಾಜಕೀಯದ ಹಂಗಿಲ್ಲದೆ ಎಲ್ಲಾ ಪಕ್ಷೀಯರೂ ವೀರಯೋಧರಿಗೆ ಹಾರಾರ್ಪಣೆ ಮಾಡಿ, ಪುತ್ತೂರಿನ ಸಾಂಘಿಕ ಸ್ವಾಗತವನ್ನು ನೀಡಿ ಪುತ್ತೂರಿನ ಗೌರವವನ್ನು ಹೆಚ್ಚಿಸಿದರು. ಅತಿಕಿರಿಯ ವಯಸ್ಸಿನಲ್ಲಿಯೇ ಸೈನ್ಯದ ಅತ್ಯುಚ್ಚ ಪ್ರಶಸ್ತಿ ಪರಮವೀರ ಚಕ್ರ ಪಡೆದ ಕ್ಯಾ.ಯೋಗೀಂದ್ರ ಸಿಂಗ್ ಯಾದವ್, ಸೇನಾಪದಕ ಪುರಸ್ಕೃತ ಕ್ಯಾ.ನವೀನ್ ನಾಗಪ್ಪ ಪುತ್ತೂರಿನಾದ್ಯಂತ ಹೀರೋಗಳಾಗಿ ಮಿಂಚಿದರು.  ‘ಕಾರ್ಗಿಲ್ ಕದನದ ನಂತರ ಎಷ್ಟೋ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದೇನೆ. ಆದರೆ ಇಂಥಹದ್ದೊಂದು ಕಾರ್ಯಕ್ರಮದಲ್ಲಿ ಭಾಗಿಯಾಗುವುದಕ್ಕೆ ಇಪ್ಪತ್ತೈದು ವರ್ಷ ಕಾಯಬೇಕಾಗಿ ಬಂದಿತು. ನನಗಿನ್ನೇನೂ ಬೇಡ. ಸಾಕು ಈ ಪ್ರೀತಿಯೊಂದೇ. ದೇಶಕ್ಕಾಗಿ ಈ ಬದುಕು ಮೀಸಲಾದದ್ದು ಸಾರ್ಥಕವಾಯಿತು’ ಎಂಬ  ಕ್ಯಾಪ್ಟನ್ ನವೀನ್ ನಾಗಪ್ಪರ ಇಡೀ ಕಾರ್ಯಕ್ರಮದ ಯಶಸ್ಸಿಗೆ ಕೈ ಗನ್ನಡಿ.

ಈ ದೇಶದಲ್ಲಿ ಇದುವರೆಗೆ ಕೇವಲ ಇಪ್ಪತ್ತೊಂದು ಮಂದಿ ಮಾತ್ರ ಪರಮವೀರ ಚಕ್ರ ಪಡೆದಿದ್ದಾರೆ. ಅದರಲ್ಲಿ ಒಬ್ಬರು   ಕ್ಯಾಪ್ಟನ್ ಯೋಗೀಂದ್ರ ಸಿಂಗ್ ಯಾದವ್ . ಇವರು ಪುತ್ತೂರಿಗೆ ಆಗಮಿಸಿದ್ದು ಪುತ್ತೂರಿಗರಲ್ಲಿ ನವರೋಮಾಂಚನ ಮೂಡಿಸಿತು. ಕಾರ್ಗಿಲ್ ಕಥಾನಕವನ್ನು ಕ್ಯಾಪ್ಟನ್ ನವೀನ್ ನಾಗಪ್ಪ ವಿವರಿಸಿ, ನಿಮ್ಮಿಂದ ಯಾವ ನಿರೀಕ್ಷೆಯೂ ಇಲ್ಲ, ಕಾರ್ಗಿಲ್ ಯುದ್ಧದಲ್ಲಿ ನಮ್ಮ ತಂಡಕ್ಕೆ ದುರ್ಗಾ ಎಂದು ಹೆಸರಿಟ್ಟಿದ್ದೆವು. ಒಮ್ಮೆ ಎಲ್ಲರೂ ಆ ದುರ್ಗೆಗೆ ಜಯಕಾರ ಮಾಡಿಬಿಡಿ ಎಂದು ಮಾ ದುರ್ಗಾ ಕೀ ಎನ್ನುತ್ತಿದ್ದರೆ ಜೈ ಎನ್ನುವವರ ಗಂಟಲು ಗದ್ಗದಿತವಾಗಿತ್ತು…

ಒಟ್ಟಿನಲ್ಲಿ ಇಂತಹ ಕಾರ್ಯಕ್ರಮವೊಂದನ್ನು ಖರ್ಚುವೆಚ್ಚದ ಮುಖ ನೋಡದೆ ಆಯೋಜನೆ ಮಾಡಿದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳು ನಿಜಕ್ಕೂ ಮಾದರಿಯೆನಿಸಿವೆ. ಸ್ವಾಗತ ಭಾಷಣದಲ್ಲಿ ಯೋಧರನ್ನು ನೆನೆಯುತ್ತಾ ಕಣ್ಣೀರ್ಗರೆದ ಸಂಸ್ಥೆಯ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ ನೆರೆದವರ ಮನಗೆದ್ದರು.

ಅಪಪ್ರಚಾರ

ಆದರೇ ಇಂತಹ ಜನ ಮೆಚ್ಚುಗೆಯ ಕಾರ್ಯಕ್ರಮ ಭರಪೂರ ಯಶಸ್ವಿಯಾದದ್ದನ್ನು ಗಮಿನಿಸಿದ ಕೆಲ ವಿಘ್ನ ಸಂತೋಷಿಗಳು ವಿದ್ಯಾರ್ಥಿಗಳು ಮಳೆಯಲ್ಲಿ ನೆನೆಯುವ ಮೂಲಕ ಸೈನಿಕರಿಗೆ ತೋರಿಸಿದ ಗೌರವದಲ್ಲಿ ಹುಳುಕು ಹುಡುಕಿ ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ ನಡೆಸಿದ್ದಾರೆ. ಈ ಅಪಪ್ರಚಾರವನ್ನು ಪುತ್ತೂರಿನ ದೇಶ ಭಕ್ತ ನಾಗರೀಕರು  ಖಂಡತುಂಡವಾಗಿ ವಿರೋಧಿಸಿದ್ದಾರೆ. ಆದರ ಒಂದು ಸ್ಯಾಂಪಲನ್ನು ಕೆಳಗೆ ನೀಡಿದ್ದೇವೆ.

 ಇನ್ನು ಮಾಜಿ ಸೈನಿಕರುಗಳು ಕೂಡ ಅಪಪ್ರಚಾರವನ್ನು ತೀಕ್ಷ್ಣ ಶಬ್ಧಗಳಿಂದ ಖಂಡಿಸಿದ್ದಾರೆ.

Ad Widget
Click to comment

Leave a Reply

ಬಿಗ್ ನ್ಯೂಸ್

Virupaksha Bhat-ಮಹಾಲಿಂಗೇಶ್ವರ ದೇವಸ್ಥಾನದ ಕಾಮಗಾರಿಗಳಿಗೆ ಹೈಕೋರ್ಟ್ ತಡೆಯಾಜ್ಞೆ: ಅನುಮತಿಯಿಲ್ಲದ ಕಾಮಗಾರಿ, ಟೆಂಡರ್ ಪ್ರಕ್ರಿಯೆ ಮುಂದುವರಿಸದಂತೆ ಮಧ್ಯಂತರ ಆದೇಶ; ದೇವಸ್ಥಾನದ ಅಭಿವೃದ್ಧಿಗೆ ನಮ್ಮ ವಿರೋಧವಿಲ್ಲ, ನಿಯಮಬದ್ಧ ಆಡಳಿತಕ್ಕೆ ಆಗ್ರಹ : ದೂರುದಾರ ವಿರೂಪಾಕ್ಷ ಭಟ್ ಪತ್ರಿಕಾಗೋಷ್ಟಿ

Published

on

Ad Widget

Ad Widget

Ad Widget

Ad Widget

ಪುತ್ತೂರಿನ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಧಾರ್ಮಿಕ ದತ್ತಿ ಇಲಾಖೆಯ ಪೂರ್ವಾನುಮತಿ ಪಡೆಯದೆ ಕೈಗೊಳ್ಳಲಾಗುತ್ತಿದೆ ಎನ್ನಲಾದ ವಿವಿಧ ಅಭಿವೃದ್ಧಿ ಕಾಮಗಾರಿಗಳು ಹಾಗೂ ಟೆಂಡರ್ ಪ್ರಕ್ರಿಯೆಗಳಿಗೆ ಕರ್ನಾಟಕ ಉಚ್ಚ ನ್ಯಾಯಾಲಯ ಮಧ್ಯಂತರ ತಡೆಯಾಜ್ಞೆ ನೀಡಿದೆ. ನ.23ರಂದು ನೀಡಿರುವ ಈ ಆದೇಶವು ಮುಂದಿನ ವಿಚಾರಣೆಯವರೆಗೆ ಜಾರಿಯಲ್ಲಿರಲಿದ್ದು, ಇಲಾಖಾ ನಿಯಮಗಳನ್ನು ಉಲ್ಲಂಘಿಸಿ ಯಾವುದೇ ಕಾಮಗಾರಿ ನಡೆಸದಂತೆ ದೇವಸ್ಥಾನದ ಆಡಳಿತ ಸಮಿತಿ ಹಾಗೂ ಸರಕಾರಕ್ಕೆ ನ್ಯಾಯಾಲಯ ನಿರ್ದೇಶನ ನೀಡಿದೆ ಎಂದು ಮಚ್ಚಿಮಲೆ ವಿರೂಪಾಕ್ಷ ಭಟ್ ತಿಳಿಸಿದ್ದಾರೆ.

Ad Widget

Ad Widget

Ad Widget

Ad Widget

ಪುತ್ತೂರು: ಪುತ್ತೂರಿನ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಧಾರ್ಮಿಕ ದತ್ತಿ ಇಲಾಖೆಯ ಪೂರ್ವಾನುಮತಿ ಪಡೆಯದೆ ಕೈಗೊಳ್ಳಲಾಗುತ್ತಿದೆ ಎನ್ನಲಾದ ವಿವಿಧ ಅಭಿವೃದ್ಧಿ ಕಾಮಗಾರಿಗಳು ಹಾಗೂ ಟೆಂಡರ್ ಪ್ರಕ್ರಿಯೆಗಳಿಗೆ ಕರ್ನಾಟಕ ಉಚ್ಚ ನ್ಯಾಯಾಲಯ ಮಧ್ಯಂತರ ತಡೆಯಾಜ್ಞೆ ನೀಡಿದೆ. ನ.23ರಂದು ನೀಡಿರುವ ಈ ಆದೇಶವು ಮುಂದಿನ ವಿಚಾರಣೆಯವರೆಗೆ ಜಾರಿಯಲ್ಲಿರಲಿದ್ದು, ಇಲಾಖಾ ನಿಯಮಗಳನ್ನು ಉಲ್ಲಂಘಿಸಿ ಯಾವುದೇ ಕಾಮಗಾರಿ ನಡೆಸದಂತೆ ದೇವಸ್ಥಾನದ ಆಡಳಿತ ಸಮಿತಿ ಹಾಗೂ ಸರಕಾರಕ್ಕೆ ನ್ಯಾಯಾಲಯ ನಿರ್ದೇಶನ ನೀಡಿದೆ ಎಂದು ಮಚ್ಚಿಮಲೆ ವಿರೂಪಾಕ್ಷ ಭಟ್ ತಿಳಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ಪುತ್ತೂರು ವಾರ್ತಾಭವನದಲ್ಲಿ ನ.25ರಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೇವಸ್ಥಾನದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಗಳ ಹೆಸರಿನಲ್ಲಿ ಧಾರ್ಮಿಕ ದತ್ತಿ ಇಲಾಖೆಯ ನಿಯಮಾವಳಿಗಳನ್ನು ಉಲ್ಲಂಘಿಸಲಾಗಿದೆ. ಸಮರ್ಪಕ ಅನುಮೋದನೆ ಪಡೆಯದೆ ಕಾಮಗಾರಿಗಳನ್ನು ನಡೆಸಿರುವುದು, ಹಣಕಾಸಿನ ನಿರ್ವಹಣೆಯಲ್ಲಿ ಲೋಪದೋಷಗಳು ಹಾಗೂ ದೇವಸ್ಥಾನದ ದೈನಂದಿನ ಆಡಳಿತದಲ್ಲಿ ಪಾರದರ್ಶಕತೆಯ ಕೊರತೆ ಕಂಡುಬಂದಿರುವ ಹಿನ್ನೆಲೆಯಲ್ಲಿ ಕಾನೂನು ಹೋರಾಟಕ್ಕೆ ಮುಂದಾಗಿದ್ದೇವೆ ಎಂದರು.

Ad Widget

Ad Widget <> Ad Widget

ಈ ಸಂಬಂಧ ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರು ಹಾಗೂ ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಸಲಾಗಿದ್ದು, ಇಲಾಖಾ ಮಟ್ಟದಲ್ಲಿ ತನಿಖೆ ನಡೆಯುತ್ತಿದೆ. ಇದೇ ವಿಚಾರವಾಗಿ ಮಚ್ಚಿಮಲೆ ವಿರೂಪಾಕ್ಷ ಭಟ್ ಮತ್ತು ದಿನೇಶ್ ಜೈನ್ ಅವರು ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ W.P. No. 32628/2026ರಡಿ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿದಾರರು ಸಲ್ಲಿಸಿದ ದಾಖಲೆಗಳು ಮತ್ತು ಮನವಿಯನ್ನು ಪರಿಗಣಿಸಿರುವ ನ್ಯಾಯಾಲಯವು ನ.23ರಂದು ಮುಂದಿನ ವಿಚಾರಣೆಯವರೆಗೆ ಮಧ್ಯಂತರ ತಡೆಯಾಜ್ಞೆ ನೀಡಿದೆ ಎಂದು ಅವರು ವಿವರಿಸಿದರು.

ಅಭಿವೃದ್ಧಿ ಸಮಿತಿ ರಚನೆ ಬಗ್ಗೆಯೂ ಆಕ್ಷೇಪ

Ad Widget

Ad Widget

ದೇವಸ್ಥಾನದಲ್ಲಿ ರಚಿಸಲಾಗಿರುವ ಅಭಿವೃದ್ಧಿ ಸಮಿತಿಯ ರಚನೆಯೇ ಧಾರ್ಮಿಕ ದತ್ತಿ ಇಲಾಖೆಯ ನಿಯಮಗಳಿಗೆ ಅನುಗುಣವಾಗಿಲ್ಲ ಎಂಬುದು ಅರ್ಜಿದಾರರ ಪ್ರಮುಖ ಆಕ್ಷೇಪವಾಗಿದೆ. ಇಲಾಖೆಯಿಂದ ಅನುಮೋದನೆ ಪಡೆಯದ ಜೀರ್ಣೋದ್ಧಾರ ಅಥವಾ ಅಭಿವೃದ್ಧಿ ಸಮಿತಿಯ ಹೆಸರಿನಲ್ಲಿ ಭಕ್ತರಿಂದ ಹಣ ಸಂಗ್ರಹಿಸುವುದು, ಕಾಮಗಾರಿಗಳನ್ನು ಕೈಗೊಳ್ಳುವುದು ಹಾಗೂ ಅನಧಿಕೃತ ಸಭೆಗಳನ್ನು ನಡೆಸುವುದು ನಿಯಮಬಾಹಿರವಾಗಿದೆ ಎಂದು ವಿರೂಪಾಕ್ಷ ಭಟ್ ಆರೋಪಿಸಿದರು.

ಅನುಮೋದನೆ ಪಡೆಯದ ಸಮಿತಿಯ ಹೆಸರಿನಲ್ಲಿ ಟೆಂಡರ್ ಪ್ರಕ್ರಿಯೆ ನಡೆಸಿರುವುದು ಮತ್ತು ಪತ್ರಿಕೆಗಳಲ್ಲಿ ಟೆಂಡರ್ ಪ್ರಕಟಣೆಗಳನ್ನು ನೀಡಿರುವುದಕ್ಕೂ ಅವರು ಆಕ್ಷೇಪ ವ್ಯಕ್ತಪಡಿಸಿದರು. ಇಲಾಖೆಯ ಅಧಿಕೃತ ಅನುಮೋದನೆ ಹಾಗೂ ನಿಗದಿತ ಪ್ರಕ್ರಿಯೆಗಳನ್ನು ಪಾಲಿಸದೆ ಇಂತಹ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ದೂರಿದರು.

ಉತ್ತರ ಭಾಗದ ಜಮೀನಿನಲ್ಲಿ ರಸ್ತೆ ನಿರ್ಮಾಣಕ್ಕೆ ಆಕ್ಷೇಪ

ದೇವಸ್ಥಾನದ ಉತ್ತರ ಭಾಗದ ಜಮೀನಿನಲ್ಲಿ ರಸ್ತೆ ನಿರ್ಮಾಣಕ್ಕೆ ಮುಂದಾಗಿರುವುದರ ಬಗ್ಗೆಯೂ ನ್ಯಾಯಾಲಯದಲ್ಲಿ ಪ್ರಶ್ನಿಸಲಾಗಿದೆ. ಈ ಕಾಮಗಾರಿಗೆ ಧಾರ್ಮಿಕ ದತ್ತಿ ಇಲಾಖೆಯ ಪೂರ್ವಾನುಮತಿ ಪಡೆದಿಲ್ಲ. ಅಲ್ಲದೆ, ಇದೇ ಜಮೀನಿಗೆ ಸಂಬಂಧಿಸಿದಂತೆ ಬೇರೆ ಬೇರೆ ನ್ಯಾಯಾಲಯಗಳಲ್ಲಿ ಪ್ರಕರಣಗಳು ಬಾಕಿಯಿದ್ದು, ತಡೆಯಾಜ್ಞೆಗಳಿದ್ದರೂ ಕಾಮಗಾರಿ ಮುಂದುವರಿಸಲಾಗಿದೆ ಎಂಬುದು ಅರ್ಜಿದಾರರ ಆರೋಪವಾಗಿದೆ.

ಐದು ಕಟ್ಟೆಗಳ ತೆರವು, ನೂತನ ಶಿಲಾಮಯ ಕಟ್ಟಡ ನಿರ್ಮಾಣ

ದೇವಸ್ಥಾನದ ಹೊರಾಂಗಣದಲ್ಲಿದ್ದ ಐದು ಹಳೆಯ ಕಟ್ಟೆಗಳನ್ನು ತೆರವುಗೊಳಿಸಿ, ಧಾರ್ಮಿಕ ದತ್ತಿ ಇಲಾಖೆಯ ಅನುಮತಿ ಪಡೆಯದೆ ನೂತನ ಶಿಲಾಮಯ ಕಟ್ಟಡ ನಿರ್ಮಿಸಲಾಗಿದೆ ಎಂದು ವಿರೂಪಾಕ್ಷ ಭಟ್ ಆರೋಪಿಸಿದರು. ಈ ಕಾಮಗಾರಿಗೆ ಸಂಬಂಧಿಸಿದಂತೆ ಅನಧಿಕೃತವಾಗಿ ಹಣ ಸಂಗ್ರಹಿಸಲಾಗಿದ್ದು, ಯಾವುದೇ ಟೆಂಡರ್ ಪ್ರಕ್ರಿಯೆ ನಡೆಸದೆ ಸರಕಾರದ ನಿಯಮಾವಳಿಗಳನ್ನು ಪಾಲಿಸದೆ ನಿರ್ಮಾಣ ಕಾರ್ಯ ಕೈಗೊಳ್ಳಲಾಗಿದೆ ಎಂದು ದೂರಿದರು.

ಇದಲ್ಲದೆ, ದೇವಸ್ಥಾನಕ್ಕೆ ಸಂಬಂಧಿಸಿದ ನವಗ್ರಹ ಗುಡಿ, ಅಯ್ಯಪ್ಪ ಸನ್ನಿಧಿ ಹಾಗೂ ನಟರಾಜ ವೇದಿಕೆ ಸಭಾಂಗಣವನ್ನು ತೆರವುಗೊಳಿಸುವ ಸಂದರ್ಭದಲ್ಲಿಯೂ ಸರಕಾರದ ನಿಯಮದಂತೆ ಟೆಂಡರ್ ಪ್ರಕ್ರಿಯೆ ಮತ್ತು ಮೌಲ್ಯಮಾಪನ ನಡೆಸಿಲ್ಲ. ಅಗತ್ಯ ಇಲಾಖಾ ಅನುಮೋದನೆಯನ್ನೂ ಪಡೆದಿಲ್ಲ ಎಂದು ಅವರು ಆರೋಪಿಸಿದರು.

ಚಿನ್ನದ ಮುಖವಾಡಕ್ಕೆ ಚಿನ್ನ ಸಂಗ್ರಹ: ಸಮರ್ಪಕ ಮಾಹಿತಿ ಇಲ್ಲವೆಂಬ ಆರೋಪ

ಶ್ರೀ ದೇವರಿಗೆ ಚಿನ್ನದ ಮುಖವಾಡ ನಿರ್ಮಿಸುವ ಉದ್ದೇಶದಿಂದ ಭಕ್ತರಿಂದ ಕಾಣಿಕೆ ರೂಪದಲ್ಲಿ ಚಿನ್ನ ಸಂಗ್ರಹಿಸಲಾಗುತ್ತಿದೆ. ಆದರೆ ಈ ಸಂಬಂಧ ಧಾರ್ಮಿಕ ದತ್ತಿ ಇಲಾಖೆಯ ಸಮರ್ಪಕ ಅನುಮತಿ ಪಡೆಯಲಾಗಿದೆಯೇ, ಆಗಮ ಪಂಡಿತರ ಅಭಿಪ್ರಾಯ ಹಾಗೂ ವರದಿ ಪಡೆಯಲಾಗಿದೆಯೇ ಎಂಬ ಬಗ್ಗೆ ಸ್ಪಷ್ಟತೆ ಇಲ್ಲ. ಸಂಗ್ರಹಿಸಲಾದ ಚಿನ್ನದ ನಿರ್ವಹಣೆ ಮತ್ತು ಅದರ ಲೆಕ್ಕಪತ್ರಗಳ ಕುರಿತು ದೇವಸ್ಥಾನದಲ್ಲಿ ಸಮರ್ಪಕ ಮಾಹಿತಿ ಲಭ್ಯವಿಲ್ಲ ಎಂಬ ವಿಚಾರವನ್ನೂ ನ್ಯಾಯಾಲಯದ ಗಮನಕ್ಕೆ ತರಲಾಗಿದೆ ಎಂದು ತಿಳಿಸಿದರು.

ದೇವಸ್ಥಾನದ ಆಡಳಿತ ಸಮಿತಿ ನೇಮಕಗೊಂಡ ಬಳಿಕ ನಿರ್ವಹಿಸಲಾದ ವಾರ್ಷಿಕ ಲೆಕ್ಕಪತ್ರಗಳಲ್ಲಿನ ಲೋಪದೋಷಗಳ ಬಗ್ಗೆಯೂ ಅರ್ಜಿಯಲ್ಲಿ ಪ್ರಶ್ನಿಸಲಾಗಿದೆ. ದೇವಸ್ಥಾನದ ಆಡಳಿತದಲ್ಲಿ ಇಲಾಖಾ ನಿಯಮಗಳ ಉಲ್ಲಂಘನೆ ಹಾಗೂ ಕಾರ್ಯನಿರ್ವಹಣಾಧಿಕಾರಿಗಳ ಅಧಿಕಾರ ಬಳಕೆಯಲ್ಲಿನ ಲೋಪಗಳ ಬಗ್ಗೆಯೂ ಕಾನೂನು ಹೋರಾಟ ನಡೆಸಲಾಗುತ್ತಿದೆ ಎಂದು ಹೇಳಿದರು.

ನ್ಯಾಯಾಲಯದ ಆದೇಶ ಪಾಲನೆಗೆ ಆಗ್ರಹ

ನ್ಯಾಯಾಲಯ ನೀಡಿರುವ ಮಧ್ಯಂತರ ತಡೆಯಾಜ್ಞೆಯ ಪ್ರಕಾರ, ಮುಂದಿನ ವಿಚಾರಣೆಯವರೆಗೆ ಇಲಾಖೆಯ ಅನುಮತಿ ಇಲ್ಲದ ಕಾಮಗಾರಿಗಳನ್ನು ನಡೆಸುವಂತಿಲ್ಲ. ಈಗಾಗಲೇ ಕರೆಯಲಾಗಿರುವ ನಿಯಮಬಾಹಿರ ಟೆಂಡರ್ ಪ್ರಕ್ರಿಯೆಗಳನ್ನು ಮುಂದುವರಿಸುವಂತಿಲ್ಲ. ಅನುಮೋದನೆ ಪಡೆಯದ ಜೀರ್ಣೋದ್ಧಾರ ಸಮಿತಿಯ ಹೆಸರಿನಲ್ಲಿ ಕಾಮಗಾರಿಗಳನ್ನು ನಡೆಸಲು ಅಥವಾ ಸಭೆಗಳನ್ನು ಆಯೋಜಿಸಿ ಕಾಮಗಾರಿಗಳನ್ನು ಮುಂದುವರಿಸಲು ಅವಕಾಶವಿಲ್ಲ. ಕಾಮಗಾರಿಗಳ ಹೆಸರನ್ನು ಬದಲಾಯಿಸಿ ಆದೇಶದ ವ್ಯಾಪ್ತಿಯಿಂದ ಹೊರಬಂದು ಮುಂದುವರಿಸುವ ಪ್ರಯತ್ನವೂ ಮಾಡಬಾರದು ಎಂಬುದು ನ್ಯಾಯಾಲಯದ ಆದೇಶದ ಆಶಯವಾಗಿದೆ ಎಂದು ವಿರೂಪಾಕ್ಷ ಭಟ್ ತಿಳಿಸಿದರು.

ನ್ಯಾಯಾಲಯದ ಆದೇಶವನ್ನು ಪ್ರತಿವಾದಿಗಳು ಗೌರವಿಸಬೇಕು. ಆದೇಶದ ವ್ಯಾಪ್ತಿಗೆ ಒಳಪಡುವ ಕಾಮಗಾರಿಗಳನ್ನು ತಕ್ಷಣ ಸ್ಥಗಿತಗೊಳಿಸಿ, ಮುಂದಿನ ದಿನಗಳಲ್ಲಿ ಎಲ್ಲ ಅಭಿವೃದ್ಧಿ ಕಾರ್ಯಗಳನ್ನು ಧಾರ್ಮಿಕ ದತ್ತಿ ಇಲಾಖೆಯ ಕಾನೂನುಬದ್ಧ ಅನುಮೋದನೆ ಮತ್ತು ಪಾರದರ್ಶಕ ಟೆಂಡರ್ ಪ್ರಕ್ರಿಯೆಯ ಮೂಲಕವೇ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.

ದೇವಸ್ಥಾನದ ಅಭಿವೃದ್ಧಿಗೆ ವಿರೋಧವಿಲ್ಲ

ದೇವಸ್ಥಾನದ ಅಭಿವೃದ್ಧಿಗೆ ನಮ್ಮ ಯಾವುದೇ ವಿರೋಧವಿಲ್ಲ. ದೇವಸ್ಥಾನ ಇನ್ನಷ್ಟು ಅಭಿವೃದ್ಧಿಯಾಗಬೇಕು, ಭಕ್ತರಿಗೆ ಉತ್ತಮ ಸೌಲಭ್ಯಗಳು ದೊರೆಯಬೇಕು ಎಂಬುದೇ ನಮ್ಮ ಆಶಯ. ಆದರೆ ಅಭಿವೃದ್ಧಿಯ ಹೆಸರಿನಲ್ಲಿ ಇಲಾಖಾ ನಿಯಮಗಳನ್ನು ಮೀರಿ, ಕಾನೂನುಬಾಹಿರವಾಗಿ ಕಾಮಗಾರಿಗಳನ್ನು ನಡೆಸುವುದನ್ನು ಒಪ್ಪಲು ಸಾಧ್ಯವಿಲ್ಲ. ದೇವಸ್ಥಾನದ ಆಡಳಿತದಲ್ಲಿ ಗೊಂದಲ ಸೃಷ್ಟಿಯಾಗದೆ ಪಾರದರ್ಶಕ ವ್ಯವಸ್ಥೆ ಇರಬೇಕು. ಭಕ್ತರ ಧಾರ್ಮಿಕ ಶ್ರದ್ಧೆ ಮತ್ತು ನಂಬಿಕೆಗೆ ಧಕ್ಕೆಯಾಗದಂತೆ ದೇವಸ್ಥಾನದ ಆಡಳಿತ ನಡೆಯಬೇಕು. ಕಾನೂನುಬದ್ಧ ಅನುಮೋದನೆ, ನಿಯಮಾನುಸಾರ ಹಣಕಾಸಿನ ನಿರ್ವಹಣೆ ಹಾಗೂ ಪಾರದರ್ಶಕತೆಯೊಂದಿಗೆ ಅಭಿವೃದ್ಧಿ ಕಾರ್ಯಗಳು ನಡೆಯಬೇಕು ಎಂದು ಮಚ್ಚಿಮಲೆ ವಿರೂಪಾಕ್ಷ ಭಟ್ ಒತ್ತಾಯಿಸಿದರು.

Ad Widget
Continue Reading

ಶಿಕ್ಷಣ

Narendra-ನ.28 : ನರೇಂದ್ರ ಪ.ಪೂ.ಕಾಲೇಜಿನ ವಾರ್ಷಿಕೋತ್ಸವ ಸಂಭ್ರಮ “ಪ್ರತಿಭಾ ಪರ್ವ”

Published

on

Ad Widget

Ad Widget

Ad Widget

Ad Widget

2026-27 ನೇ ಶೈಕ್ಷಣಿಕ ಸಾಲಿನ ವಾರ್ಷಿಕೋತ್ಸವ ಸಂಭ್ರಮ “ ಪ್ರತಿಭಾ ಪರ್ವ” ಕಾರ‍್ಯಕ್ರಮವು ನವೆಂಬರ್ 28 , ಶನಿವಾರದಂದು ತೆಂಕಿಲದ ನರೇಂದ್ರ ಪ.ಪೂ. ಕಾಲೇಜಿನ ಹಂಸಧ್ವನಿ ಸಭಾಂಗಣದಲ್ಲಿ ಅಪರಾಹ್ನ 2 ಗಂಟೆಯಿಂದ ಪ್ರಾರಂಭಗೊಳ್ಳಲಿದೆ. ಅಪರಾಹ್ನ 3 ಗಂಟೆಯಿಂದ ಸಭಾ ಕಾರ‍್ಯಕ್ರಮ ನಡೆಯಲಿದ್ದು ಕಾರ‍್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ರವೀಶ ನಾಯಕ್ ಬಿ.ಸಿ. ಇವರು ವಹಿಸಿಕೊಳ್ಳಲಿದ್ದಾರೆ.

Ad Widget

Ad Widget

Ad Widget

Ad Widget

ಶಿಕ್ಷಣದ ಮೂಲಕ ಸಾಮಾಜಿಕ ಬದಲಾವಣೆಯ ಮಹತ್ತರ ಉದ್ದೇಶವನ್ನಿಟ್ಟುಕೊಂಡು ಕಾರ್ಯ ನಿರ್ವಹಿಸುತ್ತಿರುವ ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಘಟಕವಾದ ನರೇಂದ್ರ ಪದವಿ ಪೂರ್ವ ಕಾಲೇಜು ಶಿಕ್ಷಣದ ಮೂಲಕ ವಿದ್ಯಾರ್ಥಿಯ ಬೌಧ್ಧಿಕ, ಸಾಮಾಜಿಕ, ಭೌತಿಕ, ಆರ್ಥಿಕ, ಧಾರ್ಮಿಕ, ಸಾಂಸ್ಕೃತಿಕ, ನೈತಿಕ,ಆಧ್ಯಾತ್ಮಿಕ ಮೌಲ್ಯಗಳಿಂದ ಪ್ರಬಲವಾಗಿರುವ ಬುದ್ಧಿಶಕ್ತಿಯನ್ನು ಉತ್ತೇಜಿಸಿ ಸದೃಢರನ್ನಾಗಿ ಬೆಳೆಸುವ ಉದ್ದೇಶವನ್ನು ಹೊಂದಿದೆ.

Ad Widget

Ad Widget alt="Ad Widget"/>

Ad Widget

2017ರಲ್ಲಿ ತೆಂಕಿಲದ ವಿವೇಕನಗರದಲ್ಲಿ ಸ್ಥಾಪನೆಗೊಂಡ ಸಂಸ್ಥೆ ನರೇಂದ್ರ ಪದವಿ ಪೂರ್ವ ಕಾಲೇಜು ಇದೀಗ ಒಂಬತ್ತು ವರ್ಷಗಳ ಯಶಸ್ವಿ ಪಯಣವನ್ನು ಪೂರೈಸಿ, ಹತ್ತನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಶುಭ ಸಂಭ್ರಮದಲ್ಲಿದೆ.

Ad Widget

Ad Widget <> Ad Widget

2026-27 ನೇ ಶೈಕ್ಷಣಿಕ ಸಾಲಿನ ವಾರ್ಷಿಕೋತ್ಸವ ಸಂಭ್ರಮ “ ಪ್ರತಿಭಾ ಪರ್ವ” ಕಾರ‍್ಯಕ್ರಮವು ನವೆಂಬರ್ 28 , ಶನಿವಾರದಂದು ತೆಂಕಿಲದ ನರೇಂದ್ರ ಪ.ಪೂ. ಕಾಲೇಜಿನ ಹಂಸಧ್ವನಿ ಸಭಾಂಗಣದಲ್ಲಿ ಅಪರಾಹ್ನ 2 ಗಂಟೆಯಿಂದ ಪ್ರಾರಂಭಗೊಳ್ಳಲಿದೆ. ಅಪರಾಹ್ನ 3 ಗಂಟೆಯಿಂದ ಸಭಾ ಕಾರ‍್ಯಕ್ರಮ ನಡೆಯಲಿದ್ದು ಕಾರ‍್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ರವೀಶ ನಾಯಕ್ ಬಿ.ಸಿ. ಇವರು ವಹಿಸಿಕೊಳ್ಳಲಿದ್ದಾರೆ.

ಮುಖ್ಯಅತಿಥಿಯಾಗಿ ಕರ್ನಾಟಕ ಹೈಕೋರ್ಟ್ನ ಹಿರಿಯ ವಕೀಲರು, ಕರ್ನಾಟಕದ ಮಾಜಿ ಹೆಚ್ಚುವರಿ ಅಡ್ವೊಕೇಟ್ ಜನರಲ್ ಮತ್ತು ಕರ್ನಾಟಕ ಬ್ಯಾಂಕ್ ಲಿಮಿಟೆಡ್ ನ ಸ್ವತಂತ್ರ ನಿರ್ದೇಶಕರು ಮತ್ತು ಪುತ್ತೂರಿನ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ನೂತನ ಆಡಳಿತ ಮಂಡಳಿಯ ಸದಸ್ಯರಾದ ಡಾ. ಎಮ್. ಅರುಣ್ ಶ್ಯಾಮ್ ರವರು ಭಾಗವಹಿಸಲಿದ್ದಾರೆ. ಇನ್ನೋರ್ವ ಅತಿಥಿಯಾಗಿ ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ನಿರ್ದೇಶಕರಾದ ರವೀಂದ್ರ ಪಿ. ಇವರು ಭಾಗವಹಿಸಲಿದ್ದಾರೆ.

Ad Widget

Ad Widget

ನವೆಂಬರ್ 28 ರಂದು ಅಪರಾಹ್ನ 2 ಗಂಟೆಯಿಂದ ವಿದ್ಯಾರ್ಥಿ ಸಾಧಕರಿಗೆ ಅಭಿನಂದನಾ ಸಮಾರಂಭ ಮತ್ತು ಪ್ರಸಕ್ತ ಸಾಲಿನಲ್ಲಿ ಶೈಕ್ಷಣಿಕವಾಗಿ, ಸಾಂಸ್ಕೃತಿಕ ,ಕ್ರೀಡೆ ಮತ್ತು ಇನ್ನಿತರ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದವರಿಗೆ ಬಹುಮಾನ ವಿತರಣಾ ಕಾರ‍್ಯಕ್ರಮ“ ಪ್ರತಿಭಾ ಪುರಸ್ಕಾರ” ನಡೆಯಲಿದೆ. ಈ ಕಾರ‍್ಯಕ್ರಮದ ಅಧ್ಯಕ್ಷತೆಯನ್ನು ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ನಿರ್ದೇಶಕರಾದ ಮಹಾಲಕ್ಷ್ಮೀ ಕೆ. ಇವರು ವಹಿಸಿಕೊಳ್ಳಲಿದ್ದಾರೆ.

ಮುಖ್ಯಅತಿಥಿಗಳಾಗಿ ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಗಳು ನರಿಮೊಗರು ಪುತ್ತೂರು ಇಲ್ಲಿನ ಮುಖ್ಯಗುರುಗಳಾದ ಪ್ರಸನ್ನ ಕೆ. ಅವರು ಭಾಗವಹಿಸಲಿದ್ದಾರೆ. ನರೇಂದ್ರ ಪ.ಪೂ. ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ರವೀಶ ನಾಯಕ್ ಬಿ.ಸಿ. , ಸದಸ್ಯರಾದ ಸತ್ಯನಾರಾಯಣ ಬಿ., ರಮೇಶ ನಾಯಕ್ ಕೆ., ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾದ ಗುಣಪಾಲ, ಪ್ರಾಂಶುಪಾಲರಾದ ಪ್ರಸಾದ್ ಶ್ಯಾನಭಾಗ್, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ತೀರ್ಥರಾಜ್ ಕೆ. ಉಪಸ್ಥಿತಿ ಇರಲಿದ್ದಾರೆ. ಮತ್ತು ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಾದ ದ್ವಿತೀಯ ವಿಜ್ಞಾನ ವಿಭಾಗದ ಶ್ರೀಶಾನ್ ಡಿ.ಕೆ., ಕನ್ನಿಕಾ ಕೆ.ಆರ್., ಪ್ರಥಮ ವಿಜ್ಞಾನ ವಿಭಾಗದ ಜೆ.ಶೃಜಾ ಭಾಗವಹಿಸಲಿದ್ದಾರೆ.ಸಭಾಕರ‍್ಯಕ್ರಮದ ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕರ‍್ಯಕ್ರಮಗಳು ನಡೆಯಲಿದೆ. ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

Ad Widget
Continue Reading

ಶಿಕ್ಷಣ

Philomena-ನ 27 ಮತ್ತು 28 ರಂದು ಸಂತ ಪಿಲೋಮಿನಾ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ

Published

on

Ad Widget

Ad Widget

Ad Widget

Ad Widget

ಸಂತ ಪಿಲೋಮಿನಾ ಪದವಿ ಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಮತ್ತು ವಾರ್ಷಿಕೋತ್ಸವವು ನ 27 ಹಾಗೂ 28 ರಂದು ಕಾಲೇಜಿನ ಪ್ರಾಂಗಣದಲ್ಲಿ ನಡೆಯಲಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಸಂತ ಪಿಲೋಮಿನಾ ಪದವಿ ಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಮತ್ತು ವಾರ್ಷಿಕೋತ್ಸವವು ನ 27 ಹಾಗೂ 28 ರಂದು ಕಾಲೇಜಿನ ಪ್ರಾಂಗಣದಲ್ಲಿ ನಡೆಯಲಿದೆ.

Ad Widget

Ad Widget alt="Ad Widget"/>

Ad Widget

ಡಿ 27 ರಂದು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ಕಡಬ ಸೈಂಟ್ ಆ್ಯನ್ಸ್ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರಾದ ರೆ. ಫಾ. ಸುನಿಲ್ ಪಿಂಟೋ ವಹಿಸಲಿದ್ದಾರೆ. ನ 28 ರಂದು ಕಾಲೇಜಿನ ವಾರ್ಷಿಕೋತ್ಸವವು ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ಮಂಗಳೂರು ಫಾದರ್ ಮುಲ್ಲರ್ಸ್ ವೈದ್ಯಕೀಯ ಕಾಲೇಜಿನ ಮಕ್ಕಳ ವಿಭಾಗ (ಪೀಡಿಯಾಟ್ರಿಕ್ಸ್) ನ
ಸಹಾಯಕ ಪ್ರಾಧ್ಯಾಪಕರಾದ ಡಾ. ಪ್ರೀತಮ್ ಫಿಲಿಪ್ ತಾವ್ರೋ ವಹಿಸಲಿದ್ದಾರೆ.

Ad Widget

Ad Widget <> Ad Widget

ಮಾಯಿದೆ ದೇವುಸ್ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ರೆ. ಡಾ. ಜಾನ್ ಬ್ಯಾಪ್ಟಿಸ್ಟ್ ಸಲ್ದಾನ್ಹಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.

ಗೌರವ ಅತಿಥಿಗಳಾಗಿ ಪದವಿ ಕಾಲೇಜಿನ ಪ್ರಾಂಶುಪಾಲರಾದ ರೆ. ಡಾ. ಆಂಟೋನಿ ಪ್ರಕಾಶ್ ಮೊಂತೇರೋ ಹಾಗೂ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷರಾದ ರೋಷನ್ ಲಾಸ್ರಾದೋ, ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷರಾದ ಅ್ಯಂಟೋನಿ ಒಲಿವೆರಾ ಹಾಗೂ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಡಾ. ಶ್ರೀಪ್ರಕಾಶ್ ಬಿ, ವಹಿಸಲಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ, ವಿದ್ಯಾರ್ಥಿ ಸಂಘದ ನಿರ್ದೇಶಕರಾದ ಗೋವಿಂದ ಪ್ರಕಾಶ್ ಸಿ. ಎಚ್, ಕವಿತಾ ಕೆ ಹಾಗೂ ಪಿಲೋಮಿನಾ ಮೊಂತೇರೋ, ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ  ನಾಯಕ್ ಗುಣಿಕ ಗುರುಪ್ರಸಾದ್, ಕಾರ್ಯದರ್ಶಿ ಲಯ ತೇಜ ಎ, ಹಾಗೂ ಜೊತೆ ಕಾರ್ಯದರ್ಶಿ ಸಂದೇಶ್ ಗೌಡ ಎಸ್ ಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!