Connect with us

ರಾಜಕೀಯ

America-ಅಮೇರಿಕಾ ಅಧ್ಯಕ್ಷೀಯ ಚುನಾವಣೆ : ಕಣದಿಂದ ಹಿಂದೆ ಸರಿದ ಜೋ ಬೈಡನ್: ಟ್ರಂಪ್ – ಕಮಲಾ ಹ್ಯಾರಿಸ್ ನಡುವೆ ಸ್ಪರ್ಧೆ : ಅಮೇರಿಕಾ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸುತ್ತಿರುವ ಮೊಟ್ಟ ಮೊದಲ ಭಾರತೀಯ ಮಹಿಳೆ ಕಮಲಾ

Published

on



Ad Widget

Ad Widget

Ad Widget

Ad Widget

ವಾಷಿಂಗ್ಟನ್: ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ಕೇವಲ ನಾಲ್ಕು ತಿಂಗಳು ಇರುವಂತೆಯೇ ಅಧ್ಯಕ್ಷ ಜೋ ಬೈಡನ್ ಅವರು ಸ್ಪರ್ಧೆಯಿಂದ ಹಿಂದೆ ಸರಿಯುವುದಾಗಿ ಘೋಷಿಸಿದ್ದಾರೆ. ಇದರೊಂದಿಗೆ 81 ವರ್ಷ ವಯಸ್ಸಿನ ಬೈಡನ್ ಅವರ ಅರ್ಧ ಶತಮಾನದ ರಾಜಕೀಯ ವೃತ್ತಿ ಕೊನೆಗೊಳ್ಳುವುದು ನಿಶ್ಚಿತ ಎಂಬ ತೀರ್ಮಾನಕ್ಕೆ ರಾಜಕೀಯ ವಿಶ್ಲೇಷಕರು ಬಂದಿದ್ದಾರೆ.

Ad Widget

Ad Widget

Ad Widget

Ad Widget

ಕಮಲಾ ಹ್ಯಾರಿಸ್ ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯುವುದು ಖಚಿತವಾಗಿದೆ. ಕಮಲಾ ಹ್ಯಾರಿಸ್ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸುತ್ತಿರುವ ಮೊಟ್ಟಮೊದಲ ಭಾರತೀಯ ಮೂಲದ ಮಹಿಳೆಯಾಗಿದ್ದಾರೆ. ಮುಂದಿನ ದಿನಗಳಲ್ಲಿ ಪಕ್ಷದ 300 ಪ್ರತಿನಿಧಿಗಳು ಕಮಲಾ ಹ್ಯಾರಿಸ್ ಆಯ್ಕೆಯನ್ನು ಅಧಿಕೃತವಾಗಿ ಘೋಷಿಸುವ ಸಾಧ್ಯತೆ ಇದೆ.

Ad Widget

Ad Widget

Ad Widget alt="Ad Widget"/>

Ad Widget

ಹ್ಯಾರಿಸ್ ಅವರ ಉಮೇದುವಾರಿಕೆಯನ್ನು ಮಾಜಿ ಸ್ಪೀಕರ್ ನ್ಯಾನ್ಸಿ ಪೆಲೋಸಿ ಹಾಗೂ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಸೇರಿದಂತೆ ಬೈಡನ್ ಅವರನ್ನು ಹೊರ ಕಳುಹಿಸಲು ತೆರೆಮರೆಯಲ್ಲಿ ಕೆಲಸ ಮಾಡಿದ ಹಿರಿಯ ಮುಖಂಡರು ಬೆಂಬಲಿಸಲಿದ್ದಾರೆ ಎಂದು ತಿಳಿದು ಬಂದಿದೆ.

Ad Widget

Ad Widget <> Ad Widget

ಇದು ಟ್ರಂಪ್ ಮತ್ತು ಹ್ಯಾರಿಸ್ ನಡುವಿನ ಕದನಕ್ಕೆ ವೇದಿಕೆ ಸಜ್ಜುಗೊಳಿಸಲಿದೆ. ಮಾಜಿ ಅಧ್ಯಕ್ಷ ಟ್ರಂಪ್ ಮಹಿಳೆಯರ ಬಗ್ಗೆ ಅದರಲ್ಲೂ ಪ್ರಮುಖವಾಗಿ ಅಲ್ಪಸಂಖ್ಯಾತ ಮಹಿಳೆಯರ ಬಗ್ಗೆ ಸಿಡುಕಿನ ಮನೋಭಾವ ಹೊಂದಿರುವ ಹಿನ್ನೆಲೆಯಲ್ಲಿ ಈ ಸ್ಪರ್ಧೆ ಹೆಚ್ಚಿನ ಕುತೂಹಲ ಮೂಡಿಸಿದೆ.



Ad Widget

ಹ್ಯಾರಿಸ್ ಕಣಕ್ಕಿಳಿಯುವ ಮುನ್ಸೂಚನೆಯನ್ನು ಅರಿತಿರುವ ಟ್ರಂಪ್ ಈಗಾಗಲೇ ಅವರ ವಿರುದ್ಧ ವಾಗ್ದಾಳಿ ಆರಂಭಿಸಿದ್ದಾರೆ. ಶನಿವಾರ ಮಿಚಿಗನ್ ನಲ್ಲಿ ನಡೆದ ರ್‍ಯಾಲಿಯಲ್ಲಿ ಟ್ರಂಪ್, ಹ್ಯಾರಿಸ್ ಅವರ ಹಸನ್ಮುಖದ ಬಗ್ಗೆ ‘ಲಾಫಿನ್ ಕಮಲಾ’ ಎಂದು ಉಲ್ಲೇಖಿಸಿ, ಕ್ರೇಝಿ ಮಹಿಳೆ ಎಂದು ಹೇಳಿದ್ದರು.

Click to comment

Leave a Reply

ಸ್ಥಳೀಯ

Mysuru-ಮೈಸೂರು ಕಂಬಳಕ್ಕೆ ಆಗಮಿಸಲಿರುವ ಕೋಣಗಳಿಗೆ ಕುಶಾಲನಗರದಲ್ಲಿ ವಿಶ್ರಾಂತಿಗೆ ವ್ಯವಸ್ಥೆ – ಶಾಸಕರಾದ ಅಶೋಕ್ ರೈ ಮಂಥರ್ ಗೌಡ ನೇತೃತ್ವದಲ್ಲಿ ಸಭೆ

Published

on



Ad Widget

Ad Widget

Ad Widget

Ad Widget

ಮೈಸೂರಿನಲ್ಲಿ ನಡೆಯಲಿರುವ ಕಂಬಳಕ್ಕೆ ಆಗಮಿಸುವ ಕೋಣಗಳಿಗೆ ಕುಶಾಲನಗರದಲ್ಲಿ ಸೂಕ್ತ ವಿಶ್ರಾಂತಿ ಹಾಗೂ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ನಿಟ್ಟಿನಲ್ಲಿ ಪೂರ್ವಸಿದ್ಧತಾ ಸಭೆ ನಡೆಯಿತು.

Ad Widget

Ad Widget

Ad Widget

Ad Widget

ಕುಶಾಲನಗರ: ಮೈಸೂರಿನಲ್ಲಿ ನಡೆಯಲಿರುವ ಕಂಬಳಕ್ಕೆ ಆಗಮಿಸುವ ಕೋಣಗಳಿಗೆ ಕುಶಾಲನಗರದಲ್ಲಿ ಸೂಕ್ತ ವಿಶ್ರಾಂತಿ ಹಾಗೂ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ನಿಟ್ಟಿನಲ್ಲಿ ಪೂರ್ವಸಿದ್ಧತಾ ಸಭೆ ನಡೆಯಿತು.

Ad Widget

Ad Widget

Ad Widget alt="Ad Widget"/>

Ad Widget

ಕುಶಾಲನಗರ ಪುರಸಭೆ ಸಭಾಂಗಣದಲ್ಲಿ ನಡೆದ ಸಭೆಯು ಮೈಸೂರು ಕಂಬಳದ ಅಧ್ಯಕ್ಷ ಹಾಗೂ ಶಾಸಕ ಅಶೋಕ್ ಕುಮಾರ್ ರೈ ಮತ್ತು ಮಡಿಕೇರಿ ಶಾಸಕ ಮಂಥರ್ ಗೌಡ ಅವರ ನೇತೃತ್ವದಲ್ಲಿ ನಡೆಯಿತು.

Ad Widget

Ad Widget <> Ad Widget

ಕಂಬಳ ಕೋಣಗಳಿಗೆ ಪ್ರಯಾಣದ ಬಳಿಕ ವಿಶ್ರಾಂತಿ, ಆರೈಕೆ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಒದಗಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.



Ad Widget

ಸಭೆಯಲ್ಲಿ ರಾಜ್ಯ ಕಂಬಳ ಅಧ್ಯಕ್ಷ ಬೆಳಪು ದೇವಿಪ್ರಸಾದ್ ಶೆಟ್ಟಿ ಹಾಗೂ ಮುರಳೀಧರ ರೈ ಮಠಂತಬೆಟ್ಟು ಉಪಸ್ಥಿತರಿದ್ದರು.

Ad Widget

Ad Widget

ತುಳುನಾಡಿನ ಸಾಂಪ್ರದಾಯಿಕ ಕ್ರೀಡೆಯಾದ ಕಂಬಳಕ್ಕೆ ಮೈಸೂರಿನಲ್ಲಿ ಭರ್ಜರಿ ಸಿದ್ಧತೆ ನಡೆಯುತ್ತಿದ್ದು, ವಿವಿಧ ಭಾಗಗಳಿಂದ ಕಂಬಳ ಕೋಣಗಳು ಮೈಸೂರಿನತ್ತ ಪ್ರಯಾಣ ಬೆಳೆಸಲಿವೆ.

Ad Widget
Continue Reading

ರಾಜಕೀಯ

U.T. Khader-₹86ರ ಔಷಧಕ್ಕೆ ₹4,528; ಆಸ್ಪತ್ರೆಗಳಲ್ಲಿ ದುಬಾರಿ ದರಕ್ಕೆ ಔಷಧಗಳ ಮಾರಾಟ – ಆಸ್ಪತ್ರೆಗಳಲ್ಲಿ ಲ್ಯಾಂಡಿಂಗ್ ಮತ್ತು ಮಾರಾಟ ದರ ಪಟ್ಟಿ ಪ್ರಕಟಿಸಲು ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕು : ಯು.ಟಿ ಖಾದರ್

Published

on



Ad Widget

Ad Widget

Ad Widget

Ad Widget

ಆಸ್ಪತ್ರೆಗಳಲ್ಲಿ ಮಾರಾಟವಾಗುತ್ತಿರುವ ಕ್ಯಾನ್ಸರ್ ಸೇರಿದಂತೆ ವಿವಿಧ ಕ್ರಿಟಿಕಲ್‌ ಔಷಧಗಳ ಲ್ಯಾಂಡಿಂಗ್ ದರ ಮತ್ತು ಮಾರಾಟ ದರದ ನಡುವೆ ಭಾರೀ ವ್ಯತ್ಯಾಸ ಕಂಡುಬಂದಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.

Ad Widget

Ad Widget

Ad Widget

Ad Widget

ಬೆಂಗಳೂರು: ಆಸ್ಪತ್ರೆಗಳಲ್ಲಿ ಮಾರಾಟವಾಗುತ್ತಿರುವ ಕ್ಯಾನ್ಸರ್ ಸೇರಿದಂತೆ ವಿವಿಧ ಕ್ರಿಟಿಕಲ್‌ ಔಷಧಗಳ ಲ್ಯಾಂಡಿಂಗ್ ದರ ಮತ್ತು ಮಾರಾಟ ದರದ ನಡುವೆ ಭಾರೀ ವ್ಯತ್ಯಾಸ ಕಂಡುಬಂದಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಬರೊಬ್ಬರಿ ಶೇ.5000 ರಷ್ಟು ದುಬಾರಿ ದರಕ್ಕೆ ಮಾರಾಟ ಮಾಡಲಾಗುತ್ತಿದೆ ಎಂಬ ಆಘಾತಕಾರಿ ಅಂಕಿ-ಅಂಶಗಳನ್ನು ಆರೋಗ್ಯ ಸಚಿವ ಯು.ಟಿ. ಖಾದರ್‌ ಬಿಚ್ಚಿಟ್ಟಿದ್ದಾರೆ

Ad Widget

Ad Widget <> Ad Widget

ಆಹಾರ ಸುರಕ್ಷತೆ ಹಾಗೂ ಔಷಧ ನಿಯಂತ್ರಣ ಅಧಿಕಾರಿಗಳು ವಿವಿಧ ಆಸ್ಪತ್ರೆಗಳಲ್ಲಿ ನಡೆಸಿದ ಪರಿಶೀಲನೆ ವೇಳೆ ಔಷಧಗಳನ್ನು ಲ್ಯಾಂಡಿಂಗ್ ದರಕ್ಕಿಂತ ಹಲವು ಪಟ್ಟು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ ಎಂದು ಸಚಿವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.



Ad Widget

ಪ್ರತಿ ಆಸ್ಪತ್ರೆ, ಫಾರ್ಮಾಸಿಗಳು ಔಷಧಗಳ ಲ್ಯಾಂಡಿಂಗ್ ದರ ಹಾಗೂ ಮಾರಾಟ ದರವನ್ನು ಪ್ರತ್ಯೇಕವಾಗಿ ಪಟ್ಟಿ ಮಾಡಿ ಬಹಿರಂಗ ಮಾಡಬೇಕು. ಈ ಬಗ್ಗೆ ಕೇಂದ್ರ ಸರ್ಕಾರ ಕಾನೂನು ರೂಪಿಸಬೇಕು. ದರ ನಿಯಂತ್ರಿಸಲು ರಾಜ್ಯಕ್ಕೆ ಅಧಿಕಾರ ಇಲ್ಲ. ಹೀಗಾಗಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದರು.

Ad Widget

Ad Widget

ಅಜಗಜಾಂತರ ವ್ಯತ್ಯಾಸ (ರೂಗಳಲ್ಲಿ)
ಔಷಧ- ಲ್ಯಾಂಡಿಂಗ್ ದರ – ಎಂಆರ್‌ಪಿ

ಗುಫೋಲ್-86- 4,528
ಗುಫಿಸೈಕ್ಲೈನ್-50 ಇಂಜೆಕ್ಷನ್ – 160-7,110
ಟೆರ್ಲಿಟಿಸ್-118-4,416
ಟ್ಯಾಕ್ಸೋಕೇರ್-120 ಎಂಜಿ-1,000-21,617
ಕ್ಯಾನ್‌ಮ್ಯಾಬ್ 440 ಎಂಜಿ-6,600-57,457
ಬೆವಾಟಸ್ 400 ಎಂಜಿ-5,850-62,690
ಸೈಟ್ಯಾಕ್ಸ್ 100 (ಕ್ಯಾನ್ಸರ್ ಔಷಧ)-342-3,836
ನೆಬ್ಯುಲೈಸರ್ ಮಾಸ್ಕ್-44.50-950
ಐವಿಸೆಟ್-14.75-295
ಪಾಲಿಸೇಫಿಟಿ ಪಿಆರ್‌ಒ ಕ್ಯಾನುಲಾ-33.21-548

Ad Widget
Continue Reading

ಅಂತರ ರಾಜ್ಯ

Shivraj Singh Chauhan-ಕರ್ನಾಟಕ ಸೇರಿ 5 ರಾಜ್ಯಗಳು ಬರಪೀಡಿತವೆಂದು ಘೋಷಣೆ : ಅ.3ಕ್ಕೆ ರಾಜ್ಯಕ್ಕೆ ಕೇಂದ್ರ ತಂಡ ಭೇಟಿ – ಶಿವರಾಜ್ ಸಿಂಗ್ ಚೌಹಾಣ್

Published

on



Ad Widget

Ad Widget

Ad Widget

Ad Widget

ಕೇಂದ್ರ ಸರಕಾರವು ಈವರೆಗೆ ಕರ್ನಾಟಕ ಸೇರಿದಂತೆ ಐದು ರಾಜ್ಯಗಳು ಬರಪೀಡಿತವೆಂದು ಘೋಷಣೆ ಮಾಡಿದೆ ಹಾಗೂ ದೇಶದ ವಿವಿಧೆಡೆ ಅತಿಯಾದ ಮಳೆ ಹಾಗೂ ಪ್ರವಾಹದಿಂದಾಗಿ 6.11 ಲಕ್ಷ ಹೆಕ್ಟೇರ್ ಪ್ರದೇಶದ ಕೃಷಿಭೂಮಿ ಹಾನಿಯಾಗಿದೆ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ತಿಳಿಸಿದ್ದಾರೆ.

Ad Widget

Ad Widget

Ad Widget

Ad Widget

ಹೊಸದಿಲ್ಲಿ: ಕೇಂದ್ರ ಸರಕಾರವು ಈವರೆಗೆ ಕರ್ನಾಟಕ ಸೇರಿದಂತೆ ಐದು ರಾಜ್ಯಗಳು ಬರಪೀಡಿತವೆಂದು ಘೋಷಣೆ ಮಾಡಿದೆ ಹಾಗೂ ದೇಶದ ವಿವಿಧೆಡೆ ಅತಿಯಾದ ಮಳೆ ಹಾಗೂ ಪ್ರವಾಹದಿಂದಾಗಿ 6.11 ಲಕ್ಷ ಹೆಕ್ಟೇರ್ ಪ್ರದೇಶದ ಕೃಷಿಭೂಮಿ ಹಾನಿಯಾಗಿದೆ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ತಿಳಿಸಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಹೊಸದಿಲ್ಲಿಯಲ್ಲಿ ನಡೆದ ‘ರಬಿ (ಹಿಂಗಾರು ಬೆಳೆ) 2026-27’ ರಾಷ್ಟ್ರೀಯ ಕೃಷಿ ಸಮ್ಮೇಳನದ ವೇಳೆ ಮಾತನಾಡಿದ ಅವರು, ಕರ್ನಾಟಕ, ಮಹಾರಾಷ್ಟ್ರ, ತೆಲಂಗಾಣ, ಆಂಧ್ರಪ್ರದೇಶದ ಕೆಲವು ಭಾಗಗಳು ಹಾಗೂ ರಾಜಸ್ಥಾನದ ಪ್ರದೇಶಗಳಲ್ಲಿ ಬರ ಪರಿಸ್ಥಿತಿ ಕುರಿತು ಕಳವಳ ವ್ಯಕ್ತಪಡಿಸಿದರು.

Ad Widget

Ad Widget <> Ad Widget

ಕರ್ನಾಟಕ ಸರ್ಕಾರದ ಮನವಿ ಹಿನ್ನೆಲೆಯಲ್ಲಿ ರಾಜ್ಯದಲ್ಲಿನ ಬರ ಪರಿಸ್ಥಿತಿ ಹಾಗೂ ಬೆಳೆ ಹಾನಿಯ ವಾಸ್ತವ ಸ್ಥಿತಿಯನ್ನು ಪರಿಶೀಲಿಸಲು ಕೇಂದ್ರ ತಂಡವು ಅಕ್ಟೋಬರ್ 3ರಂದು ಕರ್ನಾಟಕಕ್ಕೆ ಭೇಟಿ ನೀಡಲಿದೆ ಎಂದು ಚೌಹಾಣ್ ತಿಳಿಸಿದರು.



Ad Widget

ದೇಶದ ಇತರ ಭಾಗಗಳಲ್ಲಿನ ಬರ ಪರಿಸ್ಥಿತಿಯನ್ನೂ ಶೀಘ್ರದಲ್ಲೇ ಪರಿಶೀಲಿಸಲಾಗುವುದು. ಬರಪೀಡಿತ ಪ್ರದೇಶಗಳಿಗೆ ತಾವು ವೈಯಕ್ತಿಕವಾಗಿ ಭೇಟಿ ನೀಡುವುದರ ಜೊತೆಗೆ, ಆಯಾ ರಾಜ್ಯ ಸರ್ಕಾರಗಳೊಂದಿಗೆ ನಿರಂತರ ಸಂಪರ್ಕದಲ್ಲಿರುವುದಾಗಿ ಸಚಿವರು ಹೇಳಿದರು.

Ad Widget

Ad Widget

ರೈತರಿಗೆ ನೆರವಿನ ಭರವಸೆ
ಬರ ಪರಿಸ್ಥಿತಿಯ ನಡುವೆಯೂ ಕೃಷಿ ಚಟುವಟಿಕೆ ಮುಂದುವರಿಸುತ್ತಿರುವ ರೈತರಿಗೆ ಕೇಂದ್ರ ಸರ್ಕಾರ ನೆರವು ನೀಡಲಿದೆ ಎಂದು ಚೌಹಾಣ್ ಭರವಸೆ ನೀಡಿದರು. ಕೃಷಿಭೂಮಿ ಪಾಳು ಬೀಳದಂತೆ ನೋಡಿಕೊಳ್ಳುವುದು ಸರ್ಕಾರದ ತಕ್ಷಣದ ಉದ್ದೇಶವಾಗಿದೆ ಎಂದರು.

ನೀರಿನ ಲಭ್ಯತೆ ಹಾಗೂ ಮಣ್ಣಿನ ತೇವಾಂಶಕ್ಕೆ ಅನುಗುಣವಾಗಿ ಬೆಳೆ ಆಯ್ಕೆ ಮಾಡುವಂತೆ ರಾಜ್ಯಗಳಿಗೆ ಸೂಚಿಸಲಾಗಿದ್ದು, ಕಡಿಮೆ ನೀರು ಅಗತ್ಯವಿರುವ ಬೆಳೆಗಳು ಹಾಗೂ ಕಡಿಮೆ ಅವಧಿಯಲ್ಲಿ ಕಟಾವಿಗೆ ಬರುವ ತಳಿಗಳಿಗೆ ಆದ್ಯತೆ ನೀಡುವಂತೆ ಸಲಹೆ ನೀಡಲಾಗಿದೆ.

ಶೇ.12.3ರಷ್ಟು ಮಳೆ ಕೊರತೆ
ಎಲ್‌ನೀನೊ ಪರಿಣಾಮ ಸೇರಿದಂತೆ ಹವಾಮಾನ ವೈಪರೀತ್ಯಗಳಿಂದಾಗಿ ದೇಶದಲ್ಲಿ ಮುಂಗಾರು ಮಳೆಯ ಕೊರತೆ ಉಂಟಾಗಿದೆ. ಮುಂಗಾರು ಋತುವಿನ ಅಂತ್ಯದ ವೇಳೆಗೆ ದೇಶದಲ್ಲಿ ಸಾಮಾನ್ಯಕ್ಕಿಂತ ಸುಮಾರು ಶೇ.12.3ರಷ್ಟು ಮಳೆ ಕಡಿಮೆಯಾಗಿದೆ ಎಂದು ಸಚಿವರು ತಿಳಿಸಿದರು.

ಮಳೆ ಕೊರತೆಯ ಪರಿಣಾಮ 2026-27ರ ಖಾರಿಫ್‌ ಬೆಳೆಗಳ ಒಟ್ಟು ಬಿತ್ತನೆ ಪ್ರದೇಶದಲ್ಲಿ ಸುಮಾರು ಶೇ.1ರಷ್ಟು ಇಳಿಕೆ ಕಂಡುಬಂದಿದೆ. ಭತ್ತದ ಬಿತ್ತನೆ ಪ್ರದೇಶದಲ್ಲಿ 16.32 ಲಕ್ಷ ಹೆಕ್ಟೇರ್‌ಗಳಷ್ಟು ಇಳಿಕೆಯಾಗಿದ್ದು, ಜೋಳ, ಸೋಯಾಬೀನ್ ಮತ್ತು ಹತ್ತಿ ಬೆಳೆಗಳ ವಿಸ್ತೀರ್ಣದಲ್ಲೂ ಕುಸಿತವಾಗಿದೆ.

ಇದಕ್ಕೆ ವಿರುದ್ಧವಾಗಿ ಉದ್ದು, ಬಾಜ್ರಾ, ಜೋಳ, ಎಳ್ಳು, ಸೂರ್ಯಕಾಂತಿ, ಹೆಸರು ಮತ್ತು ತೊಗರಿ ಸೇರಿದಂತೆ ಕೆಲವು ದ್ವಿದಳ ಧಾನ್ಯಗಳು ಹಾಗೂ ಸಿರಿಧಾನ್ಯಗಳ ಬಿತ್ತನೆ ಪ್ರದೇಶದಲ್ಲಿ ಏರಿಕೆ ಕಂಡುಬಂದಿದೆ.

ಕೇಂದ್ರ ಸರ್ಕಾರವು ರಬಿ ಹಂಗಾಮಿಗೆ ಅಗತ್ಯವಿರುವ ರಸಗೊಬ್ಬರ ಮತ್ತು ಬೀಜಗಳ ಲಭ್ಯತೆ ಖಚಿತಪಡಿಸಿಕೊಳ್ಳಲು ಕ್ರಮ ಕೈಗೊಂಡಿದ್ದು, ಬರಪೀಡಿತ ಪ್ರದೇಶಗಳಲ್ಲಿ ಪರಿಸ್ಥಿತಿಗೆ ಅನುಗುಣವಾಗಿ ಬೆಳೆ ಯೋಜನೆ ರೂಪಿಸುವಂತೆ ರಾಜ್ಯಗಳಿಗೆ ಸೂಚಿಸಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading