Connect with us

ದಕ್ಷಿಣ ಕನ್ನಡ

Kargil Vijayotsava ಅಖಂಡ ಭಾರತದ ಕನಸಿಗೆ ಕಾರ್ಗಿಲ್‌ ವಿಜಯೋತ್ಸವ ಬುನಾದಿಯಾಗಲಿ: ಖ್ಯಾತ ವಾಗ್ಮಿಶ್ರೀಕಾಂತ್‌ ಶೆಟ್ಟಿ – ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ʼಕಾರ್ಗಿಲ್‌ವಿಜಯ – ಯೋಧ ನಮನʼ

Published

on

Ad Widget

Ad Widget

Ad Widget

Ad Widget
Ad Widget

Ad Widget

Ad Widget

Ad Widget

ಪುತ್ತೂರು : ಜು 23 : “ಸಾವಿರ ವರ್ಷಗಳ ಹೋರಾಟದ ಬಳಿಕವೂ ತನ್ನತನವನ್ನು ಉಳಿಸಿಕೊಂಡ ಏಕೈಕ ದೇಶವೆಂದರೆ ಭಾರತ. ಈ ಜಗತ್ತಿನಲ್ಲಿ ಹೊನ್ನಿಗಾಗಿ, ಹೆಣ್ಣಿಗಾಗಿ, ಅಧಿಕಾರಕ್ಕಾಗಿ ಯುದ್ಧಗಳು ನಡೆದಿದೆ. ಆದರೆ ತನ್ನ ಸಂಸ್ಕೃತಿ, ತನ್ನ ಸಭ್ಯತೆಯ ಉಳಿವಿಗಾಗಿ ಒಂದು ಸಾವಿರ ವರ್ಷಗಳ ನಿರಂತರ ಯುದ್ಧವೇನಾದರೂ ನಡೆದಿದ್ದರೆ, ಅದು ಈ ಪುಣ್ಯಭೂಮಿ ಭಾರತದಲ್ಲಿ ಮಾತ್ರ” ಎಂದು ಖ್ಯಾತ ವಾಗ್ಮಿಗಳಾದ ಶ್ರೀಕಾಂತ್‌ಶೆಟ್ಟಿ ಅವರು ಹೇಳಿದರು.

Ad Widget

Ad Widget alt="Ad Widget"/>

Ad Widget

ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ 25 ನೇ ಕಾರ್ಗಿಲ್‌ ವಿಜಯೋತ್ಸವದ ಅಂಗವಾಗಿ ನಡೆದ ʼಕಾರ್ಗಿಲ್‌ವಿಜಯ – ಯೋಧ ನಮನʼ ಕಾರ್ಯಕ್ರಮದಲ್ಲಿ ಭಾಗಿಯಾಗಿ ಅವರು ಮಾತನಾಡಿದರು.

Ad Widget

Ad Widget <> Ad Widget

“ಈ ದೇಶ ಇಂದು ಪ್ರಜಾಸತ್ತಾತ್ಮಕ ದೇಶವಾಗಿ ಉಳಿದಿದೆ ಎಂದಾದರೆ ಅದಕ್ಕೆ ಹಿಂದು ಬಹುಸಂಖ್ಯಾತವಾಗಿರುವಂತಹ ನಮ್ಮ ಸಾಂಸ್ಕೃತಿಕ ಬುನಾದಿಯೇ ಕಾರಣ. ದೇಶ ಎಂದರೆ ನಮ್ಮ ಸಂಸ್ಕೃತಿ, ನಮ್ಮ ಪರಂಪರೆ. ದೇಶಕ್ಕೆ ಅಪಾಯ ಒದಗಿದಾಗಲೆಲ್ಲಾ ಜಾತಿ, ನೀತಿ, ಮತ, ಪಂಥವನ್ನು ಬಿಟ್ಟು ಈ ದೇಶ ಒಂದಾಗಿದೆ. ಒಬ್ಬೊಬ್ಬ ಯೋಧನ ರಾಷ್ಟ್ರ ಪ್ರೇಮ ಹಾಗೂ ಈ ನೆಲದ ಋಣ ಭಾವದಿಂದಲೇ ಇಂದು ದೇಶ ಸುಭದ್ರವಾಗಿದೆ ಎಂದರು

ಈ ದೇಶವನ್ನು ಅಖಂಡ ಭಾರತವನ್ನಾಗಿ ಮಾಡಬೇಕು ಎನ್ನುವ ಹಂಬಲಕ್ಕೆ ಕಾರ್ಗಿಲ್ ವಿಜಯ ಸಂಭ್ರಮಾಚರಣೆ ಬುನಾದಿಯಾಗಬೇಕಾಗಿದೆ. ನಮ್ಮ ಪೂರ್ವಜರು ಮಾಡಿದಂತಹ ತ್ಯಾಗ, ಬಲಿದಾನಗಳು ನಮ್ಮ ಮಕ್ಕಳಿಗೆ ಪ್ರೇರಣೆಯನ್ನು ನೀಡಲಿ. ಭಾರತವನ್ನು ವಿಶ್ವಗುರುವನ್ನಾಗಿ ಅಲಂಕರಿಸಲು ಬೇಕಾದ ಕೆಲಸ ಕಾರ್ಯಗಳು ನಮ್ಮಿಂದ ಸಾಧ್ಯವಾಗಲಿ” ಎಂದು ಅವರು ಈ ಸಂದರ್ಭದಲ್ಲಿ ಆಶಿಸಿದರು.

Ad Widget

Ad Widget

ಮರಣೋತ್ತರ ಶೌರ್ಯ ಚಕ್ರ ಪುರಸ್ಕೃತ ಯೋಧ ಕ್ಯಾಪ್ಟನ್‌ ಎಂ. ವಿ. ಪ್ರಾಂಜಲ್‌ ತಂದೆ ಎಂ. ವೆಂಕಟೇಶ್‌ ಮಾತನಾಡಿ, “ದೇಶಸೇವೆಯನ್ನು ಬೇರೆ ಬೇರೆ ರೀತಿಯಲ್ಲಿ ಮಾಡಬಹುದು. ಮುಂದಿನ ಜನಾಂಗವನ್ನು ಸ್ಪಷ್ಟ ಗುರಿಯೆಡೆಗೆ ಬೆಳೆಸುವ, ಅಂತೆಯೇ ದೇಶಪ್ರೇಮವನ್ನು ಮೂಡಿಸುವ ಜವಾಬ್ದಾರಿ ಹೊತ್ತಿರುವ ಶಿಕ್ಷಣ ಸಂಸ್ಥೆಯನ್ನು ನಡೆಸುವುದು ಕೂಡ ಒಂದು ಅತ್ಯುತ್ತಮ ದೇಶಸೇವೆಯಾಗಿದೆ” ಎಂದರು.

ಪ್ರಾಂಜಲ್‌ ತಾಯಿ ಅನುರಾಧಾ ವೆಂಕಟೇಶ್‌ ಮಾತನಾಡಿ “ದೇಶದ ಸಾರ್ವಭೌಮತ್ವವನ್ನು ಕಾಪಾಡುವ ಮಹತ್ತರವಾದ ಜವಾಬ್ದಾರಿಯನ್ನು ನಮ್ಮ ಯೋಧರು ನಿಭಾಯಿಸುತ್ತಿದ್ದಾರೆ. ಗಡಿಯನ್ನು ಕಾಯುವ ಯೋಧ, ವಿದ್ಯಾರ್ಥಿಗಳ ಪಾಲಿಗೆ ಆದರ್ಶ ಮಾದರಿಯಾಗಬೇಕು. ಅತ್ಯಂತ ವಿಷಮಕರ ಪರಿಸ್ಥಿತಿಯಲ್ಲೂ ಎದೆಗುಂದದೆ ಹೋರಾಡುವವನೇ ಯೋಧನಾಗಿರುತ್ತಾನೆ. ಅದೇ ರೀತಿ ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಯಾವುದೇ ಅನಿಶ್ಚಿತತೆಗೆ ಹೆದರಿ ಜೀವನವನ್ನು ಬಲಿಕೊಡದೆ, ಆತ್ಮವಿಶ್ವಾಸದಿಂದ ಮುನ್ನಡೆಯುತ್ತಾ ಬದುಕೆಂಬ ಕುರುಕ್ಷೇತ್ರದ ಯೋಧರಾಗಬೇಕು” ಎನ್ನುತ್ತಾ ಸೈನಿಕನ ಬಗೆಗಿನ ಸ್ವರಚಿತ ಕವನವನ್ನು ವಾಚನ ಮಾಡಿದರು.

ಕಾರ್ಯಕ್ರಮದ ಆರಂಭದಲ್ಲಿ ಕಾರ್ಗಿಲ್‌ ಯುದ್ಧದಲ್ಲಿ ಭಾರತದ ಸಶಸ್ತ್ರ ಪಡೆಗಳ ವೀರಗಾಥೆಯನ್ನು ಕಾಲೇಜು ವಿದ್ಯಾರ್ಥಿಗಳು ತಯಾರಿಸಿದ ಸಾಕ್ಷ್ಯಚಿತ್ರದ ಮೂಲಕ ಪ್ರದರ್ಶಿಸಲಾಯಿತು. ಬಳಿಕ ದೇಶಕ್ಕಾಗಿ ಪ್ರಾಣಾರ್ಪಣೆಯನ್ನು ಮಾಡಿದ ವೀರಯೋಧರ ಭಾವಚಿತ್ರಕ್ಕೆ ಪುಷ್ಪಾರ್ಚನೆಯ ಮೂಲಕ ಗೌರವ ನಮನ ಸಲ್ಲಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿವೇಕಾನಂದ ವಿದ್ಯಾವರ್ಧಕ ಸಂಘದ ಆಡಳಿತ ಮಂಡಳಿ ಕಾರ್ಯದರ್ಶಿ ಡಾ. ಕೆ. ಎಂ. ಕೃಷ್ಣ ಭಟ್‌ ರವರು ಮಾತನಾಡಿ “ಯೋಧರ ಬದುಕಿನಲ್ಲಿ ರಾಷ್ಟ್ರದ ಭದ್ರತೆ ಪ್ರಮುಖವಾಗಿರುತ್ತದೆ. ಇಂದಿನ ವಿದ್ಯಾರ್ಥಿಗಳು ದೇಶದ ಒಳಿತಿನ ಚಿಂತನೆಯನ್ನು ಮಾಡಬೇಕು. ಗಡಿಯನ್ನು ಕಾಯುವ ಯೋಧರು ನಮಗೆ ಪ್ರೇರಣೆಯಾಗಲಿ” ಎಂದು ಆಶಿಸಿದರು.

ಪ್ರಾರ್ಥನೆಯೊಂದಿಗೆ ಆರಂಭಗೊಂಡ ಕಾರ್ಯಕ್ರಮ ಪ್ರೇರಣಾ ಗೀತೆಯೊಂದಿಗೆ ಸಮಾಪನಗೊಂಡಿತು.. ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರಾದ ರವೀಂದ್ರ.ಪಿ ಪ್ರಾಸ್ತಾವಿಕ ನುಡಿಗಳೊಂದಿಗೆ ಸ್ವಾಗತಿಸಿ, ಪ್ರಾಂಶುಪಾಲರಾದ ಮಹೇಶ್‌ ನಿಟಿಲಾಪುರ ಅವರು ವಂದಿಸಿದರು. ಉಪನ್ಯಾಸಕಿ ಭಾಗ್ಯಶ್ರೀ ಕಾರ್ಯಕ್ರಮವನ್ನು ನಿರೂಪಿಸಿದರು.

ಕಾರ್ಯಕ್ರಮದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಆಡಳಿತಮಂಡಳಿ ಸದಸ್ಯರು, ಪುತ್ತೂರಿನ ವಿವೇಕಾನಂದ ವಿದ್ಯಾಸಂಸ್ಥೆಗಳ ಆಡಳಿತಮಂಡಳಿ ಸದಸ್ಯರು, ಉಪನ್ಯಾಸಕರು, ಹಾಗೂ ಎನ್.ಸಿ.ಸಿ ಕೆಡೆಟ್ ಗಳು ಭಾಗವಹಿಸಿದರು. ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರು, ಉಪಪ್ರಾಂಶುಪಾಲರಾದ ದೇವಿಚರಣ್‌ ರೈ ಎಂ, ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳು ಭಾಗಿಯಾದರು.

ಯೋಧ ನಮನ


ಕಾರ್ಗಿಲ್‌ ಯುದ್ಧದಲ್ಲಿ ಭಾರತ ವಿಜಯ ಸಾಧಿಸಿ 25 ವರ್ಷಗಳು ಪೂರೈಸಿದ ಹಿನ್ನಲೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ನಡೆದ ʼಕಾರ್ಗಿಲ್‌ವಿಜಯ – ಯೋಧ ನಮನʼ ಕಾರ್ಯಕ್ರಮದಲ್ಲಿ ಸುಮಾರು 30 ಕ್ಕೂ ಹೆಚ್ಚು ನಿವೃತ್ತ ಯೋಧರು ಪಾಲ್ಗೊಂಡಿದ್ದರು. ಭಾರತೀಯ ಸೇನೆಯಲ್ಲಿ ಸಲ್ಲಿಸಿದ ಸೇವೆಯ ಗೌರವಾರ್ಥವಾಗಿ ಇವರಿಗೆ ಸ್ಮರಣಿಕೆಯನ್ನು ನೀಡಿ ಸನ್ಮಾನಿಸಲಾಯಿತು.

Ad Widget
Click to comment

Leave a Reply

ಬಿಗ್ ನ್ಯೂಸ್

Neralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ

Published

on

Ad Widget

Ad Widget

Ad Widget

Ad Widget

ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ. ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ.

Ad Widget

Ad Widget

Ad Widget

Ad Widget

ವಿಟ್ಲ: ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ.

Ad Widget

Ad Widget alt="Ad Widget"/>

Ad Widget

ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ. ಈಕೆ ಕಂಬಳಬೆಟ್ಟು ಶಾಲೆಯ ವಿದ್ಯಾರ್ಥಿನಿಯಾಗಿದ್ದಳು ಎಂದು ತಿಳಿದುಬಂದಿದೆ.

Ad Widget

Ad Widget <> Ad Widget

ಬಾಲಕಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಲಾರಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬಾಲಕಿ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾಳೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Continue Reading

ಆರೋಗ್ಯ

Puttur-ಪುತ್ತೂರು: ಸಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರ

Published

on

Ad Widget

Ad Widget

Ad Widget

Ad Widget

ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.

Ad Widget

Ad Widget

Ad Widget

Ad Widget

ಪುತ್ತೂರು: ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.

Ad Widget

Ad Widget alt="Ad Widget"/>

Ad Widget

ಬೆನ್ನು ನೋವು, ಮೊಣಕಾಲು ನೋವು, ಸೊಂಟ ನೋವು ಹಾಗೂ ಸ್ನಾಯು ನೋವು ಮುಂತಾದ ಸಮಸ್ಯೆಗಳು ಮೂಳೆ ಸವೆತ ಅಥವಾ ಮುಂದಿನ ದಿನಗಳಲ್ಲಿ ಮೂಳೆ ಮುರಿತಕ್ಕೆ ಕಾರಣವಾಗುವ ಸಾಧ್ಯತೆಯಿದೆ. ಇಂತಹ ಲಕ್ಷಣಗಳನ್ನು ನಿರ್ಲಕ್ಷಿಸದೆ ಆರಂಭದಲ್ಲೇ ತಪಾಸಣೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆಯುವುದು ಅಗತ್ಯ. ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಉಚಿತ BMD ಶಿಬಿರವನ್ನು ಆಯೋಜಿಸಲಾಗಿತ್ತು. ಆರೋಗ್ಯ ಸೇವಾ ವಿಭಾಗದ ಇಂಡ್‌ಕೆಮಿ ಹೆಲ್ತ್ ಸ್ಪೆಷಾಲಿಟಿ ಪ್ರೈವೇಟ್ ಲಿಮಿಟೆಡ್ ಪ್ರಾಯೋಜಕತ್ವದಲ್ಲಿ ಶಿಬಿರ ನಡೆಯಿತು.

Ad Widget

Ad Widget <> Ad Widget

ಶಿಬಿರದಲ್ಲಿ ಮೂಳೆ ತಜ್ಞರಾದ ಡಾ. ಭಾಸ್ಕರ್ ಎಸ್. (D’Ortho), ಆಡಳಿತ ನಿರ್ದೇಶಕರು, ಪುತ್ತೂರು ಸಿಟಿ ಆಸ್ಪತ್ರೆ ಇವರು ತಪಾಸಣೆ ಹಾಗೂ ಸಲಹೆ ನೀಡಿದರು.

ಇನ್ನರ್‌ ವೀಲ್‌ ಕ್ಲಬ್ ನ ನಿರ್ದೇಶಕಿ ಮಂಜುಳ ಭಾಸ್ಕರ್, ಅಧ್ಯಕ್ಷೆ ಮನೋರಮಾ ಸೂರ್ಯ, ಖಜಾಂಜಿ ಕವಿತಾ ಕೊಳತ್ತಾಯ, ಕಾರ್ಯದರ್ಶಿ ಶ್ರುತಿ ಎಸ್.‌ ಬಂಗೇರ ಶಿಬಿರದಲ್ಲಿ ಉಪಸ್ಥಿತರಿದ್ದರು.

Continue Reading

ಬಿಗ್ ನ್ಯೂಸ್

Puttur-ಎಸ್‌ಡಿಪಿಐ ನಿರಂತರ ಪ್ರಯತ್ನ: ಪುತ್ತೂರಿನ ಅಲ್ಪಸಂಖ್ಯಾತರ ಸೇವಾ ಕೇಂದ್ರ ಪುನರಾರಂಭ

Published

on

Ad Widget

Ad Widget

Ad Widget

Ad Widget

ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ. ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು.

Ad Widget

Ad Widget

Ad Widget

Ad Widget

ಪುತ್ತೂರು: ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ.

Ad Widget

Ad Widget alt="Ad Widget"/>

Ad Widget

ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು. ಸಾರ್ವಜನಿಕರಿಗೆ ಅನುಕೂಲವಾಗುವ ಈ ಸೇವಾ ಕೇಂದ್ರವನ್ನು ಮತ್ತೆ ಆರಂಭಿಸಬೇಕೆಂದು ಸಮಿತಿಯು ಒತ್ತಾಯಿಸಿತ್ತು.

Ad Widget

Ad Widget <> Ad Widget

ಈ ನಡುವೆ, ಕೇಂದ್ರಕ್ಕೆ ಸಂಬಂಧಿಸಿದ ಕಟ್ಟಡವನ್ನು ಹಾಸ್ಟೆಲ್ ಬಳಕೆಗೆ ಪರಿವರ್ತಿಸಲು ಪುತ್ತೂರು ಶಾಸಕರು ಪ್ರಯತ್ನಿಸಿದ್ದರು ಎಂಬ ವಿಚಾರ ವಿವಾದಕ್ಕೆ ಕಾರಣವಾಗಿತ್ತು.

ಇದೀಗ ಮೂರು ವರ್ಷಗಳ ಬಳಿಕ ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಮತ್ತೆ ಕಾರ್ಯಾರಂಭ ಮಾಡಿದ್ದು, ಸಾರ್ವಜನಿಕರಿಗೆ ಸೇವೆ ಲಭ್ಯವಾಗಿರುವುದಾಗಿ ಎಸ್‌ಡಿಪಿಐ ಪುತ್ತೂರು ನಗರ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!