ಮಹಿಳೆ ಧರಿಸಿದ್ದ ಬಳೆ ಗುರುತು ಆಧರಿಸಿ ಸಣ್ಣಿ ಅವರದ್ದೇ ಮೃತದೇಹ ಇದು ಎಂದು ಗುರುತಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ದುರಂತದಲ್ಲಿ ಸಾವಿಗೀಡಾದವರ ಸಂಖ್ಯೆ ಎಂಟಕ್ಕೆ […]" /> ಮಹಿಳೆ ಧರಿಸಿದ್ದ ಬಳೆ ಗುರುತು ಆಧರಿಸಿ ಸಣ್ಣಿ ಅವರದ್ದೇ ಮೃತದೇಹ ಇದು ಎಂದು ಗುರುತಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ದುರಂತದಲ್ಲಿ ಸಾವಿಗೀಡಾದವರ ಸಂಖ್ಯೆ ಎಂಟಕ್ಕೆ […]"> Ankola-ಅಂಕೋಲಾ ದುರಂತ : ನದಿ ಅಳಿವೆಯಲ್ಲಿ 8ನೇ ಮೃತದೇಹ ಪತ್ತೆ - Nikhara News | Kannada News Website
Connect with us

ಸ್ಥಳೀಯ

Ankola-ಅಂಕೋಲಾ ದುರಂತ : ನದಿ ಅಳಿವೆಯಲ್ಲಿ 8ನೇ ಮೃತದೇಹ ಪತ್ತೆ

Published

on

Ad Widget

Ad Widget

Ad Widget

Ad Widget

ಕಾರವಾರ: ಮಂಗಳವಾರ ನಸುಕಿನ ಜಾವ ಗಂಗಾವಳಿ ನದಿಯ ಅಳಿವೆ ಪ್ರದೇಶವಾದ ಗಂಗೆಕೊಳ್ಳದಲ್ಲಿ ಮಹಿಳೆಯೊಬ್ಬರ ಮೃತದೇಹ ಪತ್ತೆಯಾಗಿದೆ.

Ad Widget

Ad Widget

Ad Widget

Ad Widget

ಅಂಕೋಲಾ ತಾಲ್ಲೂಕಿನ ಶಿರೂರಿನಲ್ಲಿ ಗುಡ್ಡ ಕುಸಿದ ಬಳಿಕ ಗಂಗಾವಳಿ ನದಿಯಲ್ಲಿ ಸೃಷ್ಟಿಯಾದ ಪ್ರವಾಹದಿಂದ ಕಣ್ಮರೆಯಾಗಿದ್ದ ಉಳುವರೆ ಗ್ರಾಮದ ಸಣ್ಣಿ ಹನುಮಂತ ಗೌಡ ಅವರ ಮೃತದೇಹ ಇದು ಎಂದು ಪೊಲೀಸರು ಶಂಕಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ಮಹಿಳೆ ಧರಿಸಿದ್ದ ಬಳೆ ಗುರುತು ಆಧರಿಸಿ ಸಣ್ಣಿ ಅವರದ್ದೇ ಮೃತದೇಹ ಇದು ಎಂದು ಗುರುತಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Ad Widget

Ad Widget <> Ad Widget

ದುರಂತದಲ್ಲಿ ಸಾವಿಗೀಡಾದವರ ಸಂಖ್ಯೆ ಎಂಟಕ್ಕೆ ಏರಿಕೆಯಾದಂತಾಗಿದ್ದು, ಮಹಿಳೆಯ ಮೃತದೇಹದ ಕುರಿತು ಜಿಲ್ಲಾಡಳಿತ ಇನ್ನಷ್ಟೆ ಮಾಹಿತಿ ಖಚಿತಪಡಿಸಬೇಕಿದೆ.

Ad Widget
Click to comment

Leave a Reply

ಕಾರ್ಯಕ್ರಮಗಳು

Puttur-ಪುತ್ತೂರಿನಲ್ಲಿ ‘ಸಾಮರಸ್ಯದ ತುಡರ್’ ಕಾರ್ಯಕ್ರಮ: ಮಹಾಲಿಂಗೇಶ್ವರ ದೇವಸ್ಥಾನದಿಂದ ಮನೆಮನೆಗೆ ದೀಪದ ಬೆಳಕು

Published

on

Ad Widget

Ad Widget

Ad Widget

Ad Widget

ಸಾಮರಸ್ಯ ವೇದಿಕೆ ಪುತ್ತೂರು ಜಿಲ್ಲೆ ಹಾಗೂ ಸಾಮರಸ್ಯ ವೇದಿಕೆ ಪುತ್ತೂರು ನಗರ ಘಟಕದ ವತಿಯಿಂದ ‘ಸಾಮರಸ್ಯದ ತುಡರ್’ ಕಾರ್ಯಕ್ರಮ ನಡೆಯಿತು. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗರ್ಭಗುಡಿಯಲ್ಲಿ ಉರಿಯುತ್ತಿದ್ದ ದೀಪದಿಂದ ಉರ್ಲಾಂಡಿ, ಮಣ್ಣಾಪು, ಶೇವಿರೆ ಹಾಗೂ ಬ್ರಹ್ಮನಗರ ಪ್ರದೇಶದ ಉಪೇಕ್ಷಿತ ಬಂಧುಗಳು ತಂದ ದೀಪಗಳನ್ನು ದೇವಸ್ಥಾನದ ಅರ್ಚಕರು ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

Ad Widget

Ad Widget

Ad Widget

Ad Widget

ಪುತ್ತೂರು: ಸಾಮರಸ್ಯ ವೇದಿಕೆ ಪುತ್ತೂರು ಜಿಲ್ಲೆ ಹಾಗೂ ಸಾಮರಸ್ಯ ವೇದಿಕೆ ಪುತ್ತೂರು ನಗರ ಘಟಕದ ವತಿಯಿಂದ ‘ಸಾಮರಸ್ಯದ ತುಡರ್’ ಕಾರ್ಯಕ್ರಮ ನಡೆಯಿತು.

Ad Widget

Ad Widget alt="Ad Widget"/>

Ad Widget

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗರ್ಭಗುಡಿಯಲ್ಲಿ ಉರಿಯುತ್ತಿದ್ದ ದೀಪದಿಂದ ಉರ್ಲಾಂಡಿ, ಮಣ್ಣಾಪು, ಶೇವಿರೆ ಹಾಗೂ ಬ್ರಹ್ಮನಗರ ಪ್ರದೇಶದ ಉಪೇಕ್ಷಿತ ಬಂಧುಗಳು ತಂದ ದೀಪಗಳನ್ನು ದೇವಸ್ಥಾನದ ಅರ್ಚಕರು ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

Ad Widget

Ad Widget <> Ad Widget

ಬಳಿಕ ದೇವಸ್ಥಾನದಲ್ಲಿ ಬೆಳಗಿಸಿದ ದೀಪವನ್ನು ಮೆರವಣಿಗೆಯ ಮೂಲಕ ಕೊಂಡೊಯ್ದು ಉರ್ಲಾಂಡಿ, ಮಣ್ಣಾಪು, ಶೇವಿರೆ ಹಾಗೂ ಬ್ರಹ್ಮನಗರ ಪ್ರದೇಶಗಳ ಸುತ್ತಮುತ್ತಲಿನ ಮನೆಗಳಲ್ಲಿ ದೀಪ ಬೆಳಗಿಸಲಾಯಿತು.

ಕಾರ್ಯಕ್ರಮದಲ್ಲಿ ಮಂಗಳೂರು ವಿಭಾಗದ ಸಾಮರಸ್ಯ ಸಂಯೋಜಕ ರವೀಂದ್ರ, ಜಿಲ್ಲಾ ಸಾಮರಸ್ಯ ಸಂಯೋಜಕ ಶ್ರೀಕುಮಾರ್ ಸುಬ್ರಹ್ಮಣ್ಯ, ದಾಮೋದರ ಪಾಟಲಿ, ಅಪ್ಪಯ್ಯ ಮಣಿಯಾಣಿ, ರಮೇಶ್ ಪ್ರಭು, ಸಂತೋಷ್ ಬೊನಂತಾಯ, ರಮೇಶ್ ನೆಗಳಗುಳಿ, ದಯಾನಂದ ಬೋಲ್ವಾರ್, ಸಚಿನ್ ಶೆಣೈ, ರಮೇಶ್ ಉರ್ಲಾಂಡಿ, ಅಶೋಕ್ ಬ್ರಹ್ಮನಗರ ಸೇರಿದಂತೆ ಪ್ರಮುಖರು ಹಾಗೂ ಮಾತೆಯರು ಉಪಸ್ಥಿತರಿದ್ದರು.

Continue Reading

ಶಿಕ್ಷಣ

Ambika-ಅಂಬಿಕಾ ಸಿಬಿಎಸ್‌ಇ ಸಂಸ್ಥೆಯ ವಿದ್ಯಾರ್ಥಿಗಳಿಗೆ ಬಹುಮಾನ

Published

on

Ad Widget

Ad Widget

Ad Widget

Ad Widget

ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ ಸಂಸ್ಥೆಯ ವಿದ್ಯಾರ್ಥಿಗಳು ತೆಂಕಿಲದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ (ರಿ) ವತಿಯಿಂದ ‘ಜ್ಞಾನ ಚಂದನ’ ಹಾಗೂ ‘ಜ್ಞಾನ ನಂದನ’ ಪುಸ್ತಕಗಳ ಆಧಾರಿತವಾಗಿ ನಡೆದ ತಾಲೂಕು ಮಟ್ಟದ ವಿವಿಧ ಸ್ಪರ್ಧೆಗಳಲ್ಲಿ ಬಹುಮಾನ ಗಳಿಸಿದ್ದಾರೆ.

Ad Widget

Ad Widget

Ad Widget

Ad Widget

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ ಸಂಸ್ಥೆಯ ವಿದ್ಯಾರ್ಥಿಗಳು ತೆಂಕಿಲದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ (ರಿ) ವತಿಯಿಂದ ‘ಜ್ಞಾನ ಚಂದನ’ ಹಾಗೂ ‘ಜ್ಞಾನ ನಂದನ’ ಪುಸ್ತಕಗಳ ಆಧಾರಿತವಾಗಿ ನಡೆದ ತಾಲೂಕು ಮಟ್ಟದ ವಿವಿಧ ಸ್ಪರ್ಧೆಗಳಲ್ಲಿ ಬಹುಮಾನ ಗಳಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ಹಿರಿಯ ಪ್ರಾಥಮಿಕ ವಿಭಾಗದ ಭಾಷಣ ಸ್ಪರ್ಧೆಯಲ್ಲಿ ನರಿಮೊಗರು ನಿವಾಸಿ ಎಮ್ ಅರ್ಜುನ್ ಕಾಮತ್ ಮತ್ತು ನೀತಾ ಕಾಮತ್ ಎನ್ ದಂಪತಿಯ ಪುತ್ರ 5ನೇ ತರಗತಿಯ ಎಮ್ ಅನ್ಶ್ ಕಾಮತ್ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ.

Ad Widget

Ad Widget <> Ad Widget

ಹಿರಿಯ ಪ್ರಾಥಮಿಕ ವಿಭಾಗದ ಶ್ಲೋಕ ಕಂಠಪಾಠ ಸ್ಪರ್ಧೆಯಲ್ಲಿ ಕೆಮ್ಮಾಯಿ ನಿವಾಸಿ ಪ್ರಸನ್ನ ಹೆಚ್ ಎಸ್ ಮತ್ತು ಗೀತಾ ಡಿ ದಂಪತಿಯ ಪುತ್ರಿ 5ನೇ ತರಗತಿಯ ಅಕ್ಷರ ಹೆಚ್ ಪಿ ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ.

ಇವರಿಬ್ಬರೂ ಮುಂದೆ ಪುಂಜಾಲಕಟ್ಟೆಯಲ್ಲಿ ನಡೆಯಲಿರುವ ಜಿಲ್ಲಾಮಟ್ಟದ ಭಾಷಣ ಹಾಗೂ ಶ್ಲೋಕ ಕಂಠಪಾಠ ಸ್ಪರ್ಧೆಗೆ ಆಯ್ಕೆಗೊಂಡಿರುತ್ತಾರೆ.

Continue Reading

ಶಿಕ್ಷಣ

Philomena-ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ನೂತನ ಹೆಚ್ಚುವರಿ ಕಟ್ಟಡದ ಉದ್ಘಾಟನೆ

Published

on

Ad Widget

Ad Widget

Ad Widget

Ad Widget

ನ.20 ರಂದು ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ನೂತನ ಸಭಾಂಗಣದಲ್ಲಿ ನಡೆದ ನೂತನ ಹೆಚ್ಚುವರಿ ಕಟ್ಟಡದ ಉದ್ಘಾಟನೆಯನ್ನು ನೆರವೇರಿಸಿ ಸಮಾಜ ಸೇವಕರು ಮತ್ತು ಉದ್ಯಮಿಗಳಾದ ಮೈಕಲ್ ಡಿ’ ಸೋಜಾ ಮಾತನಾಡಿದರು.

Ad Widget

Ad Widget

Ad Widget

Ad Widget

ಪುತ್ತೂರು: ಸಂತ ಫಿಲೋಮಿನಾ ಕಾಲೇಜು ಸಾವಿರಾರು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು
ನೀಡಿದ್ದು, ದೇಶದ ಶೈಕ್ಷಣಿಕ, ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆಯಲ್ಲಿ ತನ್ನದೇ ಕೊಡುಗೆಯನ್ನು ನೀಡಿದೆ ಎಂದು ಸಮಾಜ ಸೇವಕರು ಮತ್ತು ಉದ್ಯಮಿಗಳಾದ ಮೈಕಲ್ ಡಿ’ ಸೋಜಾ ಹೇಳಿದರು.

Ad Widget

Ad Widget alt="Ad Widget"/>

Ad Widget

ಅವರು ನವೆಂಬರ್ 20 ರಂದು ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ನೂತನ ಸಭಾಂಗಣದಲ್ಲಿ ನಡೆದ ನೂತನ ಹೆಚ್ಚುವರಿ ಕಟ್ಟಡದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡುತ್ತ,
ರೆ. ಫಾ. ಪತ್ರವೋ ಇವರ ದೂರದರ್ಶಿ ಚಿಂತನೆಯ ಫಲವಾಗಿ ಈ ಕಾಲೇಜು ಜನ್ಮತಾಳಿದ್ದು, ಇಂದು ಮತ್ತಷ್ಟು ಮೂಲ ಸೌಕರ್ಯಗಳ ವಿಸ್ತರಣೆಯೊಂದಿಗೆ ಸಂಸ್ಥೆಯು ಇನ್ನಷ್ಟು ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣವನ್ನು ನೀಡಲು ಅಣಿಯಾಗಿದೆ. ಸುಸಜ್ಜಿತ ಮೂಲ ಸೌಕರ್ಯಗಳ ವಿಸ್ತರಣೆಗೆ ಕಾರಣೀಕರ್ತರಾದ ಎಲ್ಲರನ್ನೂ ಅಭಿನಂದಿಸಿ, ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆಯಬೇಕೆಂದು ತಿಳಿಸಿದರು.

Ad Widget

Ad Widget <> Ad Widget

ಇನ್ನೋರ್ವ ಮುಖ್ಯ ಅತಿಥಿಗಳಾದ ಕ್ಯಾಥೋಲಿಕ್ ಬೋರ್ಡ್ ಆಫ್ ಎಜುಕೇಷನ್(CBE) ನ ಕಾರ್ಯದರ್ಶಿಗಳಾದ ರೆ. ಡಾ. ಪ್ರವೀಣ್ ಲಿಯೋ ಲಸ್ರದೋ ಮಾತನಾಡಿ
ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಕಳೆದ ಹಲವಾರು ದಶಕಗಳಿಂದ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣವನ್ನು ನೀಡಿದೆ. ಇಂದು ಬದಲಾದ ಪರಿಸ್ಥಿತಿಯಲ್ಲಿ ಮೂಲ ಸೌಕರ್ಯಗಳ ವಿಸ್ತರಣೆಯನ್ನು ಮನಗಂಡು ದಾನಿಗಳ ಸಹಾಯದಿಂದ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರಿಗೆ ಉತ್ತಮ ಸೌಕರ್ಯಗಳನ್ನು ನಿರ್ಮಿಸಿದ್ದೇವೆ. ಎಲ್ಲರೂ ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕ್ಯಾಥೋಲಿಕ್ ಬೋರ್ಡ್ ಆಫ್ ಎಜುಕೇಷನ್(CBE) ನ ಉಪಾಧ್ಯಕ್ಷರಾದ ಮೊನ್ಸಿಂಜೋರ್ ಮ್ಯಾಕ್ಸಿಮ್ ಎಲ್ ನೋರೋನ್ಹ ಮಾತನಾಡಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಬೆಳವಣಿಗೆಗಳು ತುಂಬಾ ಸಂತೋಷವನ್ನು ನೀಡುತ್ತಿದ್ದು, ಇಂದು ವಿದ್ಯಾರ್ಥಿಗಳಿಗೆ ನೀಡಿದ ಹೆಚ್ಚುವರಿ ಸೌಲಭ್ಯಗಳು ಸಂಸ್ಥೆಯ ಬೆಳವಣಿಗೆಗೆ ಹಿಡಿದ ಕನ್ನಡಿಯಾಗಿದೆ. ಕಾಲೇಜಿನ ಪ್ರಾಂಶುಪಾಲರು ಮತ್ತು ಆಡಳಿತ ಮಂಡಳಿಯನ್ನು ಅಭಿನಂದಿಸಿ, ಮುಂದಿನ ದಿನಗಳಲ್ಲೂ ಕಾಲೇಜು ಉತ್ತಮ ವಿದ್ಯಾರ್ಥಿಗಳನ್ನು ಸಮಾಜಕ್ಕೆ ನೀಡಲಿ ಎಂದು ಆಶಿಸಿದರು.

Ad Widget

Ad Widget

ಮಾಯಿದೆ ದೇವುಸ್ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ರೆ. ಡಾ. ಜಾನ್ ಬ್ಯಾಪ್ಟಿಸ್ಟ್ ಸಲ್ದಾನ್ಹಾ ಪ್ರಾಸ್ತಾವಿಕವಾಗಿ ಮಾತನಾಡಿದರು.

ಇದೇ ಸಂದರ್ಭದಲ್ಲಿ ಕಟ್ಟಡ ಕಾಮಗಾರಿಯ ಮೇಲ್ವಿಚಾರಣೆಯನ್ನು ನಿರ್ವಹಿಸಿದ ಓಸ್ವಾಡ್ಡ್ ಲೂಯಿಸ್ ಹಾಗೂ ಜೋಸೆಫ್ ಸೆರವೋರನ್ನು ಸನ್ಮಾನಿಸಲಾಯಿತು.

ಮಾಯಿದೆ ದೇವುಸ್ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ರೋಷನ್ ಲಾಸ್ರಾದೋ, ಕಾಲೇಜಿನ ರಕ್ಷಕ – ಶಿಕ್ಷಕ ಸಂಘದ ಉಪಾಧ್ಯಕ್ಷ ಅ್ಯಂಟೋನಿ ಒಲಿವೆರಾ, ಪ ಪೂ ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಡಾ. ಶ್ರೀ ಪ್ರಕಾಶ್ ಬಿ, ಸಂತ ಫಿಲೋಮಿನಾ ಪ್ರೌಢ ಶಾಲೆಯ ಮುಖ್ಯೋಪಾಧ್ಯಯರಾದ ರೆ. ಫಾ. ಮ್ಯಾಕ್ಸಿಮ್ ಡಿ’ ಸೋಜಾ, ಮಾಯಿದೆ ದೇವುಸ್ ಚರ್ಚ್ ನ ಸಹಾಯಕ ಪ್ಯಾರಿಸ್ ಧರ್ಮ ಗುರುಗಳಾದ ರೆ.ಫಾ ಮಾರ್ವಿನ್ ಪ್ರವೀಣ್ ಲೋಬೋ ಹಾಗೂ ಚ್ಯಾರಿಟಿ ಟೀಮ್ ನ ಸದಸ್ಯರಾದ ಸ್ಟೀಫನ್ ಪಿಂಟೋ, ಓಸ್ವಾಲ್ಡ್ ರೋಡ್ರಿಗಸ್ ವೇದಿಕೆಯಲ್ಲಿ ಉಪಸ್ಥಿತರಿದ್ದು, ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ವಿವಿಧ ಸಂಸ್ಥೆಗಳ ಮುಖ್ಯಸ್ಥರು, ದಾನಿಗಳು, ಗಣ್ಯರು, ಬೋಧಕ ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಈ ನೂತನ ಕಟ್ಟಡದಲ್ಲಿ ವಿಸ್ತೃತ ಸಭಾಂಗಣ, ವಿಜ್ಞಾನ ಪ್ರಯೋಗಾಲಯಗಳು, ಉಪನ್ಯಾಸಕರ ಕೊಠಡಿಗಳು, ತರಗತಿ ಕೋಣೆಗಳು ಹಾಗೂ ಸುಸಜ್ಜಿತ ಶೌಚಾಲಯಗಳು ವಿಧ್ಯಾರ್ಥಿಗಳ ಉಪಯೋಗಕ್ಕೆ ಲಭ್ಯವಿದೆ.

ಕಾಲೇಜಿನ ವಿದ್ಯಾರ್ಥಿಗಳು ಪ್ರಾರ್ಥಿಸಿ, ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ ಸ್ವಾಗತಿಸಿ, ಉಪನ್ಯಾಸಕರಾದ ಸುಮಾ ಡಿ ವಂದಿಸಿ, ಡಾ. ಆಶಾ ಸಾವಿತ್ರಿ ಕಾರ್ಯಕ್ರಮವನ್ನು ನಿರೂಪಿಸಿದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!