ಅಪರಾಧ
Mangaluru-ಗುಟ್ಕಾ ತಯಾರಕ ಕಂಪೆನಿ ಮಾಲೀಕರ ಸೋಗಿನಲ್ಲಿ ಮಂಗಳೂರಿನ ಅಡಿಕೆ ವ್ಯಾಪಾರಿಗಳಿಗೆ ಕೋಟಿಗಟ್ಟಲೆ ವಂಚನೆ; ಹಣ ಕೇಳಿದ್ರೆ ಕೊಲ್ಲುವ ಬೆದರಿಕೆ
ಮಂಗಳೂರು: ಉತ್ತರ ಭಾರತದ ವ್ಯಾಪಾರಿಗಳಿಂದ ರಿಟೈಲ್ ಅಡಿಕೆ ವ್ಯಾಪಾರಿಗಳಿಗೆ ವಂಚಿಸುವ ಜಾಲವೊಂದು ದಕ್ಷಿಣ ಕನ್ನಡ ದಲ್ಲಿ ಸಕ್ರಿಯವಾಗಿದ್ದು , ಬರೋಬ್ಬರಿ 2 ಕೋ.ರೂ.ಗೂ ಅಧಿಕ ಹಣ ವಂಚಿಸಿರುವ ಬಗ್ಗೆ ಮಂಗಳೂರಿನಲ್ಲಿ ಪ್ರಕರಣ ದಾಖಲಾಗಿದೆ.ಕಳೆದ ವಾರವಷ್ಟೆ ಜಿಲ್ಲೆಯ ಗ್ರಾಮೀಣ ಭಾಗದ ಅಡಿಕೆ ವ್ಯಾಪಾರಿಗಳು ತಮಗೆ ಉತ್ತರ ಭಾರತ ಮೂಲದ ಕೆಲ ವ್ಯಾಪಾರಿಗಳು ಅಡಿಕೆ ಪಡೆದು ಹಣ ನೀಡದೆ ವಂಚಿಸಿ ಪರಾರಿಯಾಗಿರುವ ಬಗ್ಗೆ ಮೌಕಿಕವಾಗಿ ಹೇಳಿ ಕೊಂಡಿದ್ದರು.
ಗುಜರಾತ್ ನಲ್ಲಿ ತಮ್ಮ ಒಡೆತನದ ಪಾನ್ ಗುಟ್ಕಾ ತಯಾರಕ ಕಂಪೆನಿ ಇದೆಯೆಂದು ನಂಬಿಸಿ ಈ ವಂಚಕರು ಜಿಲ್ಲೆಯ ಹಲವಾರು ಚಿಲ್ಲರೆ ಅಡಿಕೆ ವ್ಯಾಪಾರಿಗಳಿಂದ ಲೋಡ್ ಗಟ್ಟಲೇ ಅಡಿಕೆ ಖರೀದಿಸಿದ್ದರು. ಆರಂಭದಲ್ಲಿ ಇವರು ಮಾಡಿದ ಹಲವು ಖರೀದಿಗಳಿಗೆ ಸೂಕ್ತ ಸಮಯದಲ್ಲಿ ಹಣ ಪಾವತಿಸಿದರು. ಇದರಿಂದ ವ್ಯಾಪಾರಿಗಳಿಗೆ ಇವರ ಕುರಿತಾಗಿ ವಿಶ್ವಾಸ ಮೂಡಿದೆ. ಇದರ ಲಾಭ ಪಡೆದ ವಂಚಕಕರು ಈ ಬಾರಿ ದೊಡ್ಡ ಪ್ರಮಾಣದಲ್ಲಿ ಅಡಿಕೆ ಪಡೆದು ಹಣ ನೀಡದೆ ಪರಾರಿಯಾಗಿದ್ದಾರೆ . ಈ ಎಲ್ಲ ವ್ಯವಹಾರಗಳು ಬಿಳಿ ಹಾಳೆ ಹಾಗೂ ವಿಶ್ವಾಸದ ಮೇಲೆ ನಡೆದಿದ್ದು, ಇದೀಗ ಮೋಸ ಹೋದ ವ್ಯಾಪಾರಸ್ಥರು ದೂರು ನೀಡಲಾಗದ ಸ್ಥಿತಿ ಉಧ್ಭವಿಸಿದೆ.
ಜಿಎಸ್ಟಿ ಜಾರಿಯಾದ ಬಳಿಕವು ಬಹುತೇಕ ಅಡಿಕೆ ವ್ಯವಹಾರವು ಹವಾಲ ಮಾದರಿ ಟ್ಯಾಕ್ಸ್ ತಪ್ಪಿಸಿ ನಡೆಯುತ್ತಿದೆ. ಹೀಗಾಗಿ ಬಹುತೇಕ ಚಿಲ್ಲರೆ ವ್ಯಾಪಾರಸ್ಥರು ಅಡಿಕೆ ಖರೀದಿಸಿದಕ್ಕಾಗಲಿ ಅಥಾವ ಮಾರಾಟ ಮಾಡಿದನ್ನು ಸೇಲ್ಸ್ ಬಿಲ್ ನಲ್ಲಿ ತೋರಿಸುವುದಿಲ್ಲ. ಇದರ ಭರಪೂರ ಲಾಭ ಎತ್ತಿದ ವಂಚಕರು ಯಾವುದೇ ಕಾಗದ ಪತ್ರ ಮಾಡಿಕೊಳ್ಳದೇ ಅಡಿಕೆ ಖರೀದಿಸಿ ಕಾಲ್ಕಿತ್ತಿದ್ದಾರೆ.
ಕೆಲವೇ ಕೆಲವು ವ್ಯಾಪಾರಸ್ಥರು ನಿಯಮ ಪ್ರಕಾರ ಅಡಿಕೆ ವ್ಯವಹಾರ ನಡೆಸುತ್ತಿದ್ದು, ಅವರು ಮಾತ್ರ ದೂರು ನೀಡಲು ಮುಂದಾಗಿದ್ದಾರೆ . ಹೀಗಾಗಿ ವಂಚನೆ ಬಗ್ಗೆ ಮಮಗಳೂರಿನಲ್ಲಿ ಕೇವಲ 3 ಕೇಸ್ ಅಷ್ಟೇ ದಾಖಲಾಗಿದೆ. ಮಾ. 29ರಂದು ರಾಹುಲ್ ಗುಪ್ತಾ ಅವರು ಕಪಿಲ್ ಮಟ್ಟಾನಿ ಎಂಬಾತನಿಗೆ 61 ಚೀಲ ಅಡಿಕೆ ಮಾರಾಟ ಮಾಡಿದ್ದು, ಆತ ಅದರ ಹಣ ಪಾವತಿಸಿದ್ದ.ಅದೇ ನಂಬಿಕೆಯ ಮೇಲೆ ಮೇ 17ರಿಂದ ಜೂ. 10ರ ನಡುವೆ ಆತನಿಗೆ ಅಡಿಕೆ ಮಾರಾಟ ಮಾಡಿದ್ದರು. ಆದರೆ 85,47,139 ರೂ. ಬಾಕಿ ಇರಿಸಿಕೊಂಡಿದ್ದ. ಹಣದ ಬಗ್ಗೆ ವಿಚಾರಿಸಿದಾಗ ಅವಾಚ್ಯ ಶಬ್ದದಿಂದ ಬೈದು ಕೊಲೆ ಬೆದರಿಕೆ ಹಾಕಿದ್ದಾನೆ ಎಂದು ದೂರಲಾಗಿದೆ
ಕಪಿಲ್ ಮಟ್ಟಾನಿ ಮತ್ತು ಕಮಲ್ ಮಟ್ಟಾನಿ ಸೇರಿಕೊಂಡು ಅಮಿತ್ ಶರ್ಮ, ವಿನಯ್ ಶರ್ಮ, ಸಿದ್ಧಾರ್ಥ ಶರ್ಮ ಅವರಿಂದ ಮತ್ತು ಇತರರಿಂದ ಖರೀದಿಸಿದ ಒಣ ಅಡಿಕೆಯ ಒಟ್ಟು 1,34,71,854 ರೂ.ಗಳನ್ನು ಬಾಕಿ ಇರಿಸಿಕೊಂಡು ವಂಚಿಸಿದ್ದಾರೆ. ಇನ್ನೊಂದು ಪ್ರಕರಣದಲ್ಲಿ ಹಬೀಬ್ ರಹಿಮಾನ್ ಕೆ. ಮತ್ತು ಸೂಫಿ ಇಬ್ರಾಹಿಂ ಅವರ ಕಂಪೆನಿಯಿಂದ ಒಣ ಅಡಿಕೆ ಪಡೆದುಕೊಂಡಿರುವ ಕಮಲೇಶ್ ಪಡಲಿಯಾ 59,61,973 ರೂ.ಗಳನ್ನು ಬಾಕಿ ಇರಿಸಿಕೊಂಡಿದ್ದಾನೆ. ಆತನ ಮೊಬೈಲ್ ಸ್ವಿಚ್ಆಫ್ ಆಗಿದೆ. ಇದೇ ರೀತಿ ಕೆ.ಎಸ್. ನಾರಾಯಣ ಭಟ್ ಅವರಿಗೆ 25,24,639 ರೂ. ಸೇರಿದಂತೆ ಹಲವು ವ್ಯಾಪಾರಿಗಳಿಗೆ ಒಟ್ಟು 1,21,25,362 ರೂ.ಗಳನ್ನು ಬಾಕಿ ಇರಿಸಿ ಆರೋಪಿ ವಂಚಿಸಿದ್ದಾನೆ ಎಂದು ಮಂಗಳೂರಿನ ಸೆನ್ ಅಪರಾಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುಳ್ಯ
Sullia-ಸುಳ್ಯ: ಕಳ್ಳತನಕ್ಕೆ ಬಂದವನು ಮಕ್ಕಳನ್ನು ಕಂಡು ಪರಾರಿ; ಕೇರಳ ಮೂಲದ ಆರೋಪಿ ಬಂಧನ
ಮನೆಯ ಬೀಗ ಮುರಿದು ಕಳ್ಳತನಕ್ಕೆಂದು ಒಳನುಗ್ಗಿದ ವ್ಯಕ್ತಿಯೊಬ್ಬ, ಮನೆಯೊಳಗಿದ್ದ ಮಕ್ಕಳನ್ನು ಕಂಡು ಗಾಬರಿಗೊಂಡು ಪರಾರಿಯಾದ ಘಟನೆ ಸುಳ್ಯದ ದೇವಸ್ಯ ಸಮೀಪ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿ ಕೇರಳ ಮೂಲದ ಆರೋಪಿಯನ್ನು ಸುಳ್ಯ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಸುಳ್ಯ, ಅ.11: ಮನೆಯ ಬೀಗ ಮುರಿದು ಕಳ್ಳತನಕ್ಕೆಂದು ಒಳನುಗ್ಗಿದ ವ್ಯಕ್ತಿಯೊಬ್ಬ, ಮನೆಯೊಳಗಿದ್ದ ಮಕ್ಕಳನ್ನು ಕಂಡು ಗಾಬರಿಗೊಂಡು ಪರಾರಿಯಾದ ಘಟನೆ ಸುಳ್ಯದ ದೇವಸ್ಯ ಸಮೀಪ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿ ಕೇರಳ ಮೂಲದ ಆರೋಪಿಯನ್ನು ಸುಳ್ಯ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಕೇರಳದ ಕೋಝಿಕ್ಕೋಡ್ ನಿವಾಸಿ ಮಹಮ್ಮದ್ ಅಲಿ (67) ಬಂಧಿತ ಆರೋಪಿ.
ಬಾಲಕೃಷ್ಣ ಎಂಬವರ ಮನೆಗೆ ಬೆಳಗ್ಗೆ ಬಂದ ಆರೋಪಿ, ಮನೆಯ ಬೀಗ ಮುರಿದು ಒಳನುಗ್ಗಿದ್ದಾನೆ. ಮನೆಯವರು ಕೆಲಸಕ್ಕೆ ತೆರಳುವಾಗ ಶಾಲೆಗೆ ರಜೆ ಇದ್ದ ಕಾರಣ ತಮ್ಮ ಮೂವರು ಮಕ್ಕಳನ್ನು ಮನೆಯೊಳಗೆ ಇರಿಸಿ ಹೊರಗಿನಿಂದ ಬೀಗ ಹಾಕಿ ಹೋಗಿದ್ದರು ಎನ್ನಲಾಗಿದೆ.
ಕಳ್ಳತನದ ಉದ್ದೇಶದಿಂದ ಮನೆಗೆ ನುಗ್ಗಿದ ವ್ಯಕ್ತಿಗೆ ಒಳಗಿದ್ದ ಮಕ್ಕಳು ಕಾಣಿಸಿಕೊಂಡಿದ್ದಾರೆ. ಇದರಿಂದ ಗಾಬರಿಗೊಂಡ ಆತ, ಮನೆಯ ಬಾಗಿಲಿನ ಚಿಲಕವನ್ನು ಹೊರಗಿನಿಂದ ಹಾಕಿ ಅಲ್ಲಿಂದ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.
ಘಟನೆಯ ಬಗ್ಗೆ ಮಕ್ಕಳು ತಕ್ಷಣ ತಂದೆ ಬಾಲಕೃಷ್ಣ ಅವರಿಗೆ ಫೋನ್ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಬಳಿಕ ಮನೆಗೆ ಬಂದ ಬಾಲಕೃಷ್ಣ ಅವರು ಮಕ್ಕಳಿಂದ ಸಂಪೂರ್ಣ ಮಾಹಿತಿ ಪಡೆದು ಸುಳ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಪ್ರಕರಣ ದಾಖಲಿಸಿಕೊಂಡ ಸುಳ್ಯ ಪೊಲೀಸರು ತನಿಖೆ ನಡೆಸಿ, ಆಲೆಟ್ಟಿ ಎಂಬಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ. ಬಳಿಕ ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಅಪರಾಧ
Udupi-ಉಡುಪಿ: ಹೇಮಂತ್ ಪೂಜಾರಿ ಬೇಟೆಗೆ ಪೊಲೀಸರ ಬಲೆ; ಗ್ಯಾಂಗ್‌ಸ್ಟರ್ ಅನುಜ್ ಪಾಟೀಲ್ ವಶಕ್ಕೆ..!
ಮುದರಂಗಡಿಯ ಗುತ್ತಿಗೆದಾರ ಡೇವಿಡ್ ಡಿಸೋಜಾ ಕೊಲೆ ಪ್ರಕರಣದ ಪ್ರಮುಖ ಆರೋಪಿ, ಭೂಗತ ಪಾತಕಿ ಹೇಮಂತ್ ಪೂಜಾರಿಯನ್ನು ಬಂಧಿಸಲು ಉಡುಪಿ ಜಿಲ್ಲಾ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ. ಉದ್ಯಮಿಗಳು ಹಾಗೂ ಗುತ್ತಿಗೆದಾರರಿಗೆ ಹಣಕ್ಕಾಗಿ ಜೀವ ಬೆದರಿಕೆ ಹಾಕಿದ ಪ್ರಕರಣಗಳಿಗೆ ಸಂಬಂಧಿಸಿ ತಾಂತ್ರಿಕ ಸಾಕ್ಷ್ಯಗಳನ್ನು ಸಂಗ್ರಹಿಸುತ್ತಿರುವ ಪೊಲೀಸರು, ಬೆದರಿಕೆ ಕರೆಗಳ ಹಿಂದೆ ಹೇಮಂತ್ ಪೂಜಾರಿಯ ಕೈವಾಡ ಇದೆಯೇ ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
ಉಡುಪಿ, ಅ.11: ಮುದರಂಗಡಿಯ ಗುತ್ತಿಗೆದಾರ ಡೇವಿಡ್ ಡಿಸೋಜಾ ಕೊಲೆ ಪ್ರಕರಣದ ಪ್ರಮುಖ ಆರೋಪಿ, ಭೂಗತ ಪಾತಕಿ ಹೇಮಂತ್ ಪೂಜಾರಿಯನ್ನು ಬಂಧಿಸಲು ಉಡುಪಿ ಜಿಲ್ಲಾ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ. ಉದ್ಯಮಿಗಳು ಹಾಗೂ ಗುತ್ತಿಗೆದಾರರಿಗೆ ಹಣಕ್ಕಾಗಿ ಜೀವ ಬೆದರಿಕೆ ಹಾಕಿದ ಪ್ರಕರಣಗಳಿಗೆ ಸಂಬಂಧಿಸಿ ತಾಂತ್ರಿಕ ಸಾಕ್ಷ್ಯಗಳನ್ನು ಸಂಗ್ರಹಿಸುತ್ತಿರುವ ಪೊಲೀಸರು, ಬೆದರಿಕೆ ಕರೆಗಳ ಹಿಂದೆ ಹೇಮಂತ್ ಪೂಜಾರಿಯ ಕೈವಾಡ ಇದೆಯೇ ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
ಉದ್ಯಮಿಗಳು ಹಾಗೂ ಗುತ್ತಿಗೆದಾರರಿಗೆ ಕರೆ ಮಾಡಿ ಹಣಕ್ಕಾಗಿ ಬೆದರಿಕೆ ಹಾಕಿದ ಪ್ರಕರಣಗಳಿಗೆ ಸಂಬಂಧಿಸಿ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಎರಡು, ಕಾಪು, ಶಿರ್ವ ಹಾಗೂ ಮಣಿಪಾಲ ಪೊಲೀಸ್ ಠಾಣೆಗಳಲ್ಲಿ ತಲಾ ಒಂದು ಪ್ರಕರಣ ದಾಖಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮೂಲ್ಕಿ ಪೊಲೀಸ್ ಠಾಣೆಯಲ್ಲೂ ಪ್ರಕರಣ ದಾಖಲಾಗಿದ್ದು, ಇನ್ನೂ ಎರಡು-ಮೂರು ಉದ್ಯಮಿಗಳು ಹಾಗೂ ಗುತ್ತಿಗೆದಾರರಿಗೆ ಬೆದರಿಕೆ ಕರೆಗಳು ಬಂದಿರುವ ಬಗ್ಗೆ ದೂರುಗಳು ಲಭಿಸಿವೆ ಎಂದು ತಿಳಿದುಬಂದಿದೆ.
ಈ ಪ್ರಕರಣಗಳ ತನಿಖೆ ಚುರುಕುಗೊಳಿಸಿರುವ ಪೊಲೀಸರು, ಸಂಬಂಧಪಟ್ಟ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ತಾಂತ್ರಿಕ ಸಾಕ್ಷ್ಯಗಳನ್ನು ಸಂಗ್ರಹಿಸುತ್ತಿದ್ದಾರೆ. ತನಿಖೆಯ ಪ್ರಗತಿ ಕುರಿತು ಉನ್ನತ ಪೊಲೀಸ್ ಅಧಿಕಾರಿಗಳಿಗೆ ವರದಿಗಳನ್ನು ಸಲ್ಲಿಸಲಾಗುತ್ತಿದೆ.
ಡೇವಿಡ್ ಡಿಸೋಜಾ ಕೊಲೆ ಪ್ರಕರಣದ ತನಿಖೆಯ ಭಾಗವಾಗಿ ಈ ಹಿಂದೆ ಉಡುಪಿ ಜಿಲ್ಲಾ ಪೊಲೀಸರು ಹೇಮಂತ್ ಪೂಜಾರಿಗಾಗಿ ಬಾಂಗ್ಲಾದೇಶದ ಗಡಿಯವರೆಗೂ ಶೋಧ ನಡೆಸಿದ್ದರು. ಆದರೆ, ಆ ಕಾರ್ಯಾಚರಣೆಯಲ್ಲಿ ಆತನ ಪತ್ತೆಯಾಗಿರಲಿಲ್ಲ. ಇದೀಗ ಬೆದರಿಕೆ ಕರೆಗಳ ಪ್ರಕರಣಗಳಲ್ಲಿನ ಸಾಕ್ಷ್ಯಗಳನ್ನು ಆಧರಿಸಿ ತನಿಖೆ ಮುಂದುವರಿಸಲಾಗಿದೆ.
ಕಾಪು ಪೊಲೀಸರ ವಶಕ್ಕೆ ಅನುಜ್ ಪಾಟೀಲ್
ಡೇವಿಡ್ ಡಿಸೋಜಾ ಕೊಲೆ ಪ್ರಕರಣದಲ್ಲಿ ಶಾರ್ಪ್ ಶೂಟರ್‌ಗಳನ್ನು ಕಳುಹಿಸಿದ್ದ ಆರೋಪ ಎದುರಿಸುತ್ತಿರುವ ಮುಂಬೈ ಮೂಲದ ಗ್ಯಾಂಗ್‌ಸ್ಟರ್, ಬಿಹಾರದ ನಳಂದ ಜಿಲ್ಲೆಯ ಅನುಜ್ ಪಾಟೀಲ್ (35)ನನ್ನು ಕಾಪು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಆರಂಭಿಸಿದ್ದಾರೆ.
ಈ ಹಿಂದೆ ಬೈಂದೂರು ಹಾಗೂ ಹೆಬ್ರಿ ಪೊಲೀಸರು ಆತನನ್ನು ಕಸ್ಟಡಿಗೆ ಪಡೆದು ವಿಚಾರಣೆ ನಡೆಸಿದ್ದರು. ಇದೀಗ ಕಾಪು ಪೊಲೀಸರು ವಶಕ್ಕೆ ಪಡೆದು, ಹೇಮಂತ್ ಪೂಜಾರಿಯೊಂದಿಗಿನ ಆತನ ಸಂಪರ್ಕ ಹಾಗೂ ಅಪರಾಧ ಚಟುವಟಿಕೆಗಳ ಕುರಿತು ಮಾಹಿತಿ ಕಲೆಹಾಕುತ್ತಿದ್ದಾರೆ.
ಉದ್ಯಮಿಗಳು ಹಾಗೂ ಗುತ್ತಿಗೆದಾರರಿಗೆ ಬಂದಿರುವ ಬೆದರಿಕೆ ಕರೆಗಳ ಆಡಿಯೋಗಳನ್ನು ಪರಿಶೀಲಿಸಲಾಗುತ್ತಿದೆ. ಈ ಕರೆಗಳನ್ನು ಹೇಮಂತ್ ಪೂಜಾರಿಯೇ ಮಾಡುತ್ತಿದ್ದಾನೆಯೇ ಅಥವಾ ಆತನ ಹೆಸರಿನಲ್ಲಿ ಬೇರೆ ಯಾರಾದರೂ ಬೆದರಿಕೆ ಹಾಕುತ್ತಿದ್ದಾರೆಯೇ ಎಂಬ ಆಯಾಮದಲ್ಲೂ ತನಿಖೆ ನಡೆಯುತ್ತಿದೆ.
ಪೊಲೀಸ್ ಆಯುಧ ಕಸಿದು ಗುಂಡು ಹಾರಿಸಲು ಯತ್ನಿಸಿದ್ದ ಆರೋಪ
2017ರಿಂದ ತಲೆಮರೆಸಿಕೊಂಡಿದ್ದ ಅನುಜ್ ಪಾಟೀಲ್ ಮುಂಬೈ ಕೇಂದ್ರವಾಗಿಸಿಕೊಂಡು ಕಾರ್ಯಾಚರಿಸುತ್ತಿದ್ದ ಎನ್ನಲಾಗಿದೆ. ಆತನ ವಿರುದ್ಧ ಮಹಾರಾಷ್ಟ್ರದಲ್ಲಿ ಮಹಾರಾಷ್ಟ್ರ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ (ಎಂಸಿಒಸಿಎ) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಒಟ್ಟು 11 ಕ್ರಿಮಿನಲ್ ಪ್ರಕರಣಗಳು ಆತನ ವಿರುದ್ಧ ದಾಖಲಾಗಿದ್ದು, ಅವುಗಳಲ್ಲಿ 10 ಪ್ರಕರಣಗಳು ಶಸ್ತ್ರಾಸ್ತ್ರ ಕಾಯ್ದೆಗೆ ಸಂಬಂಧಿಸಿದ್ದಾಗಿವೆ ಎಂದು ವರದಿಯಾಗಿದೆ. ಮಹಾರಾಷ್ಟ್ರದಲ್ಲಿ ನಾಲ್ಕು, ಗುಜರಾತ್‌ನಲ್ಲಿ ಐದು, ದಮನ್ ಮತ್ತು ದಿಯುನಲ್ಲಿ ಒಂದು ಹಾಗೂ ಕರ್ನಾಟಕದಲ್ಲಿ ಒಂದು ಪ್ರಕರಣ ದಾಖಲಾಗಿತ್ತು.
ಉಡುಪಿ ಜಿಲ್ಲಾ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ ಆತನನ್ನು ಬಂಧಿಸಿ ಕರೆತರುತ್ತಿದ್ದಾಗ, ಹೆಬ್ರಿ ತಾಲೂಕಿನ ಸೋಮೇಶ್ವರದಲ್ಲಿ ಮೂತ್ರ ವಿಸರ್ಜನೆಗೆಂದು ಪೊಲೀಸ್ ವಾಹನದಿಂದ ಕೆಳಗಿಳಿದಿದ್ದ ಅನುಜ್ ಪಾಟೀಲ್, ಕೊಲ್ಲೂರು ಪೊಲೀಸ್ ಠಾಣೆಯ ಪಿಎಸ್‌ಐ ವಿನಯ್ ಅವರ ಸೇವಾ ಆಯುಧವನ್ನು ಕಸಿದು ಗುಂಡು ಹಾರಿಸಲು ಯತ್ನಿಸಿದ್ದಾನೆ ಎಂದು ಆರೋಪಿಸಲಾಗಿದೆ.
ಈ ವೇಳೆ ಆತ್ಮರಕ್ಷಣೆಗಾಗಿ ಪಿಎಸ್‌ಐ ನಂಜ ನಾಯಕ್ ಅವರು ಆರೋಪಿಯ ಕಾಲಿಗೆ ಗುಂಡು ಹಾರಿಸಿದ್ದರು. ಗಾಯಗೊಂಡ ಆತನನ್ನು ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು.
ಚಿಕಿತ್ಸೆಯ ಬಳಿಕ ತನಿಖೆ ಮುಂದುವರಿಸಿರುವ ಪೊಲೀಸರು, ಬೈಂದೂರು ಮತ್ತು ಹೆಬ್ರಿ ಠಾಣೆಗಳ ನಂತರ ಇದೀಗ ಕಾಪು ಪೊಲೀಸರ ವಶದಲ್ಲಿ ವಿಚಾರಣೆ ನಡೆಸುತ್ತಿದ್ದಾರೆ. ಅನುಜ್ ಪಾಟೀಲ್‌ನ ಅಪರಾಧ ಚಟುವಟಿಕೆಗಳು, ಹೇಮಂತ್ ಪೂಜಾರಿಯೊಂದಿಗಿನ ಸಂಪರ್ಕ ಹಾಗೂ ಬೆದರಿಕೆ ಕರೆಗಳ ಹಿಂದಿನ ಜಾಲದ ಕುರಿತು ಹೆಚ್ಚಿನ ಮಾಹಿತಿ ಕಲೆಹಾಕಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ.
ಅಂತರ ರಾಜ್ಯ
Kasaragod-ಕಾಸರಗೋಡು: ಮದುವೆ ರದ್ದು, ₹7.57 ಲಕ್ಷದ ಉಡುಗೊರೆ ವಾಪಸ್ ನೀಡದೆ ವಂಚನೆ ಆರೋಪ; ಯುವತಿ ಸಹಿತ ಮೂವರ ವಿರುದ್ಧ ಪ್ರಕರಣ
ಮದುವೆಯಿಂದ ಹಿಂದೆ ಸರಿದ ಯುವತಿ ಹಾಗೂ ಆಕೆಯ ಕುಟುಂಬದವರ ವಿರುದ್ಧ ವರನ ಮನೆಯವರು ನೀಡಿದ ದೂರಿನ ಮೇರೆಗೆ ಹೊಸದುರ್ಗ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ನಿಶ್ಚಿತಾರ್ಥದ ಸಂದರ್ಭದಲ್ಲಿ ನೀಡಿದ್ದ ಚಿನ್ನಾಭರಣ, ಐಫೋನ್, ನಗದು ಸೇರಿದಂತೆ ಸುಮಾರು ₹7.57 ಲಕ್ಷ ಮೌಲ್ಯದ ಉಡುಗೊರೆಗಳನ್ನು ಹಿಂದಿರುಗಿಸದೆ ವಂಚಿಸಿದ್ದಾರೆ ಎಂಬುದು ಆರೋಪವಾಗಿದೆ.
ಕಾಸರಗೋಡು: ಮದುವೆಯಿಂದ ಹಿಂದೆ ಸರಿದ ಯುವತಿ ಹಾಗೂ ಆಕೆಯ ಕುಟುಂಬದವರ ವಿರುದ್ಧ ವರನ ಮನೆಯವರು ನೀಡಿದ ದೂರಿನ ಮೇರೆಗೆ ಹೊಸದುರ್ಗ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ನಿಶ್ಚಿತಾರ್ಥದ ಸಂದರ್ಭದಲ್ಲಿ ನೀಡಿದ್ದ ಚಿನ್ನಾಭರಣ, ಐಫೋನ್, ನಗದು ಸೇರಿದಂತೆ ಸುಮಾರು ₹7.57 ಲಕ್ಷ ಮೌಲ್ಯದ ಉಡುಗೊರೆಗಳನ್ನು ಹಿಂದಿರುಗಿಸದೆ ವಂಚಿಸಿದ್ದಾರೆ ಎಂಬುದು ಆರೋಪವಾಗಿದೆ.
ನ್ಯಾಯಾಲಯದ ಆದೇಶದ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ. ಮದುವೆ ರದ್ದಾದ ಬಳಿಕ ಉಡುಗೊರೆಗಳನ್ನು ಹಿಂದಿರುಗಿಸದ ಕಾರಣ ತಮ್ಮ ಕುಟುಂಬಕ್ಕೆ ₹7,57,037 ನಷ್ಟವಾಗಿದೆ ಎಂದು ವರನ ಕಡೆಯವರು ದೂರಿನಲ್ಲಿ ತಿಳಿಸಿದ್ದಾರೆ.
ಪಡನ್ನಕ್ಕಾಡ್ ಸಮೀಪದ ಯುವಕನಿಗೆ ಉದುಮ ಸಮೀಪದ ಯುವತಿಯೊಂದಿಗೆ ವಿವಾಹ ನಡೆಸಲು 2026ರ ಏಪ್ರಿಲ್‌ನಲ್ಲಿ ನಿಶ್ಚಯಿಸಲಾಗಿತ್ತು. ಈ ಸಂದರ್ಭದಲ್ಲಿ ನಿಶ್ಚಿತಾರ್ಥದ ಭಾಗವಾಗಿ ವಧುವಿಗೆ ಐಫೋನ್, ಚಿನ್ನಾಭರಣ, ವಿವಿಧ ಉಡುಗೊರೆಗಳು ಹಾಗೂ ನಗದು ಸೇರಿದಂತೆ ಸುಮಾರು ₹7.5 ಲಕ್ಷ ಮೌಲ್ಯದ ವಸ್ತುಗಳನ್ನು ವರನ ಕುಟುಂಬದವರು ನೀಡಿದ್ದರು ಎನ್ನಲಾಗಿದೆ.
ಆದರೆ, ಬಳಿಕ ಯುವತಿ ಮದುವೆಯಿಂದ ಹಿಂದೆ ಸರಿದಿದ್ದು, ಆಕೆಯ ತಾಯಿ ಹಾಗೂ ಮಾವನೊಂದಿಗೆ ಸೇರಿ ಮದುವೆ ರದ್ದುಗೊಳಿಸಲು ಸಂಚು ರೂಪಿಸಿದ್ದಾರೆ ಎಂದು ವರನ ಕಡೆಯವರು ಆರೋಪಿಸಿದ್ದಾರೆ. ಅಲ್ಲದೆ, ನಿಶ್ಚಿತಾರ್ಥದ ವೇಳೆ ನೀಡಿದ್ದ ಐಫೋನ್ ಸೇರಿದಂತೆ ಬೆಲೆಬಾಳುವ ವಸ್ತುಗಳನ್ನು ಹಿಂದಿರುಗಿಸಲು ನಿರಾಕರಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
-
ಅಂತರ ರಾಜ್ಯ22 hours agoKasaragod-ಕಾಸರಗೋಡು: ಮದುವೆ ರದ್ದು, ₹7.57 ಲಕ್ಷದ ಉಡುಗೊರೆ ವಾಪಸ್ ನೀಡದೆ ವಂಚನೆ ಆರೋಪ; ಯುವತಿ ಸಹಿತ ಮೂವರ ವಿರುದ್ಧ ಪ್ರಕರಣ
-
ಮಂಗಳೂರು16 hours agoMangalore-ಮಂಗಳೂರು: ಅನೈತಿಕ ಸಂಬಂಧ ಶಂಕೆ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ
-
ಬಿಗ್ ನ್ಯೂಸ್17 hours agoGolithottu-ಗೋಳಿತ್ತೊಟ್ಟು: ತೋಡಿನ ನೀರಿನಲ್ಲಿ ಮೀನುಗಳ ಮಾರಣಹೋಮ; ತನಿಖೆಗೆ ಸ್ಥಳೀಯರ ಆಗ್ರಹ
-
ಸುಳ್ಯ20 hours agoSullia-ಸುಳ್ಯ: ಕಳ್ಳತನಕ್ಕೆ ಬಂದವನು ಮಕ್ಕಳನ್ನು ಕಂಡು ಪರಾರಿ; ಕೇರಳ ಮೂಲದ ಆರೋಪಿ ಬಂಧನ
-
ಬಿಗ್ ನ್ಯೂಸ್22 hours agoPuttur-ಪುತ್ತೂರು : ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಬಳಿಯ ಒಳಚರಂಡಿ ಕಾಮಗಾರಿ ಟೆಂಡರ್ ಸ್ಥಗಿತಗೊಳಿಸಿ : ನಗರಸಭೆಗೆ ಮನವಿ
-
ಅಪರಾಧ20 hours agoUdupi-ಉಡುಪಿ: ಹೇಮಂತ್ ಪೂಜಾರಿ ಬೇಟೆಗೆ ಪೊಲೀಸರ ಬಲೆ; ಗ್ಯಾಂಗ್‌ಸ್ಟರ್ ಅನುಜ್ ಪಾಟೀಲ್ ವಶಕ್ಕೆ..!
-
ಸ್ಥಳೀಯ23 hours agoSharavuru-ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಂದ ಶರವೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಭೇಟಿ
-
ಅಂತರ ರಾಜ್ಯ20 hours agoElon Musk-ಅಂಬಾನಿ ಮತ್ತು ಅವರ ಬೆಂಬಲಿಗರ ವಾದ ಹಾಸ್ಯಾಸ್ಪದವಾಗಿದೆ : ಸ್ಟಾರ್ ಲಿಂಕ್ ಕುರಿತು ಇಲಾನ್ ಮಸ್ಕ್


















