Connect with us

ರಾಜಕೀಯ

Fake-ಕಾರ್ಕಳದಲ್ಲಿ ನಕಲಿ ಪರಶುರಾಮ ಮೂರ್ತಿ ಹಗರಣ : ಸುನೀಲ್ ಕುಮಾರ್ ರಾಜೀನಾಮೆಗೆ ಬೆಂಗಳೂರಿನಲ್ಲಿ ಕಾಂಗ್ರೇಸ್ ಪ್ರತಿಭಟನೆ

Published

on



Ad Widget

Ad Widget

Ad Widget

Ad Widget

ಬೆಂಗಳೂರು: ಕಾಂಗ್ರೆಸ್‌ ನಾಯಕರು ಕಾರ್ಕಳ ಥೀಮ್ ಪಾರ್ಕ್ ಹಗರಣ, ನಕಲಿ ಪರಶುರಾಮ ಮೂರ್ತಿ ಪ್ರತಿಷ್ಠಾಪನೆ ಹಾಗೂ ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡುತ್ತಿರುವ ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ಸುನೀಲ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು.

Ad Widget

Ad Widget

Ad Widget

Ad Widget

ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೆಸ್ ನಾಯಕರು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬಿಜೆಪಿ ಶಾಸಕ ಸುನೀಲ್ ಕುಮಾರ್ ಕಾರ್ಕಳ ಥೀಮ್ ಪಾರ್ಕ್ ನಲ್ಲಿ ನಕಲಿ ಪರಶುರಾಮ ಮೂರ್ತಿ ಪ್ರತಿಷ್ಠಾಪಿಸಿ ಹಿಂದೂಗಳ ಭಾವನೆಗೆ ಧಕ್ಕೆ ತಂದಿದ್ದಾರೆ. ತಕ್ಷಣ ರಾಜೀನಾಮೆ ಕೊಡಬೇಕು ಎಂದು ಒತ್ತಾಯಿಸಿದರು. ಅಲ್ಲದೇ ಶಾಸಕರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.

Ad Widget

Ad Widget

Ad Widget alt="Ad Widget"/>

Ad Widget

ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾತನಾಡಿ ಸುನೀಲ್ ಕುಮಾರ್ ಸುಳ್ಳನ್ನ ನೂರು ಬಾರಿ ಹೇಳಿ ನಿಜ ಮಾಡಲು ಹೊರಟಿದ್ದಾರೆ. ಉಡುಪಿಯ ಕಾರ್ಕಳದಲ್ಲಿ ನಕಲಿ ಪರಶುರಾಮ ಮೂರ್ತಿ ಪ್ರತಿಷ್ಠಾಪಿಸಿದ್ದಾರೆ. ಒಂದು ಮೂರ್ತಿ ನಿರ್ಮಾಣಕ್ಕೆ ಎಷ್ಟು ಸಮಯಬೇಕೆಂಬುದು ನನಗೂ ಗೊತ್ತು. ನಾನು ಬೆಳಗಾವಿಯಲ್ಲಿ ಶಿವಾಜಿ ಪ್ರತಿಮೆ ನಿರ್ಮಿಸಿದ್ದೇನೆ. ಶಾಸಕ ಸುನೇಲ್ ಕುಮಾರ್ ಕೇವಲ 3 ತಿಂಗಳಲ್ಲಿ 12 ಕೋಟಿ ರೂಪಾಯಿ ವೆಚ್ಚದಲ್ಲಿ ಕಂಚಿನ ಪರಶುರಾಮ ಪ್ರತಿಮೆ ನಿರ್ಮಿಸಿದ್ದಾರೆ. ಇಂಥ ಪ್ರತಿಮೆಗಳನ್ನು ನಿರ್ಮಿಸುವಾಗ ವರ್ಷಾನುಗಟ್ಟಲೆ ಸಮಯ ಹಿಡಿಯುತ್ತದೆ. ಚುನಾವಣೆಗಾಗಿ ಕೇವಲ ಮೂರು ತಿಂಗಳಲ್ಲಿ ಪ್ರತಿಮೆ ನಿರ್ಮಾಣ ಕಾರ್ಯ ಮುಗಿಸಿದ್ದು ಅಚ್ಚರಿಯಾಗಿದೆ. ಪರಶುರಾಮನ ನಕಲಿ ಪ್ರತಿಮೆ ಸ್ಥಾಪಿಸಿ ಜನರ ದಿಕ್ಕು ತಪ್ಪಿಸುತ್ತಿದ್ದಾರೆ. ಈ ಬಗ್ಗೆ ಸೂಕ್ತ ತನಿಖೆಯಾಗಬೇಕು ಎಂದು ಹೇಳಿದರು.

Ad Widget

Ad Widget <> Ad Widget

ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಮಂಜುನಾಥ ಬಂಡಾರಿ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರಾದ ವಿನಯ್ ಕುಮಾ‌ರ್ ಸೊರಕೆ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಮಾಜಿ ಸಚಿವ ರಮಾನಾಥ ರೈ, ಮಾಜಿ ಸಂಸದ ಜಯಪ್ರಕಾಶ್ ಹೆಗಡೆ, ವಿಧಾನ ಪರಿಷತ್ ಸದಸ್ಯರಾದ ಐವಾನ್ ಡಿಸೋಜ, ಮುಖಂಡರಾದ ಉದಯ್ ಕುಮಾರ್ ಶೆಟ್ಟಿ, ಮಿಥುನ್ ರೈ, ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.



Ad Widget
Ad Widget
Click to comment

Leave a Reply

ರಾಜಕೀಯ

Ashok Rai-ಪಕ್ಷ ಸಂಘಟನೆಗೆ ಅಶೋಕ್ ರೈ ಹೊಸ ಹೆಜ್ಜೆ: ಪುತ್ತೂರು ಬ್ಲಾಕ್ ಕಾಂಗ್ರೆಸ್‌ಗೆ ಬೊಲೆರೋ

Published

on



Ad Widget

Ad Widget

Ad Widget

Ad Widget

ಪಕ್ಷದ ಸಂಘಟನೆ ಮತ್ತು ಅಭಿವೃದ್ಧಿಯ ದೃಷ್ಟಿಯಿಂದ ಪುತ್ತೂರು ಬ್ಲಾಕ್ ಕಾಂಗ್ರೆಸ್‌ಗೆ ಹೊಸ ಬೊಲೆರೋ ವಾಹನವನ್ನು ಒದಗಿಸಲಾಗಿದೆ. ಕಾಂಗ್ರೆಸ್ ಭವನ ನಿರ್ಮಾಣ ಹಂತದಲ್ಲಿರುವಾಗಲೇ ಬ್ಲಾಕ್ ಅಧ್ಯಕ್ಷರಿಗೆ ಮೊದಲ ಬಾರಿಗೆ ವಾಹನ ನೀಡಲಾಗಿದ್ದು, ಪಕ್ಷದ ಸಂಘಟನೆ ಹಾಗೂ ವಿವಿಧ ಕಾರ್ಯಕ್ರಮಗಳಿಗೆ ಇದನ್ನು ಬಳಸಿಕೊಳ್ಳಲಾಗುವುದು ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.

Ad Widget

Ad Widget

Ad Widget

Ad Widget

ಪುತ್ತೂರು: ಪಕ್ಷದ ಸಂಘಟನೆ ಮತ್ತು ಅಭಿವೃದ್ಧಿಯ ದೃಷ್ಟಿಯಿಂದ ಪುತ್ತೂರು ಬ್ಲಾಕ್ ಕಾಂಗ್ರೆಸ್‌ಗೆ ಹೊಸ ಬೊಲೆರೋ ವಾಹನವನ್ನು ಒದಗಿಸಲಾಗಿದೆ. ಕಾಂಗ್ರೆಸ್ ಭವನ ನಿರ್ಮಾಣ ಹಂತದಲ್ಲಿರುವಾಗಲೇ ಬ್ಲಾಕ್ ಅಧ್ಯಕ್ಷರಿಗೆ ಮೊದಲ ಬಾರಿಗೆ ವಾಹನ ನೀಡಲಾಗಿದ್ದು, ಪಕ್ಷದ ಸಂಘಟನೆ ಹಾಗೂ ವಿವಿಧ ಕಾರ್ಯಕ್ರಮಗಳಿಗೆ ಇದನ್ನು ಬಳಸಿಕೊಳ್ಳಲಾಗುವುದು ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.

Ad Widget

Ad Widget

Ad Widget alt="Ad Widget"/>

Ad Widget

ಪುತ್ತೂರಿಗೆ ಆಗಮಿಸಿದ ಬೊಲೆರೋ ವಾಹನವನ್ನು ‘ಬ್ಲಾಕ್ ಕಾಂಗ್ರೆಸ್ ವಾಹನ’ ಎಂದು ನಾಮಕರಣ ಮಾಡಿ, ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ ಹಾಗೂ ವಿಟ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪದ್ಮನಾಭ ಪೂಜಾರಿ ಸಣ್ಣಗುತ್ತು ಅವರಿಗೆ ಶಾಸಕ ಅಶೋಕ್ ಕುಮಾರ್ ರೈ ಹಸ್ತಾಂತರಿಸಿದರು.

Ad Widget

Ad Widget <> Ad Widget

ಮೂರು ಬ್ಲಾಕ್‌ಗಳಿಗೆ ಒಂದೇ ವಾಹನ
ಪುತ್ತೂರು, ವಿಟ್ಲ ಹಾಗೂ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್‌ಗಳ ಸಂಘಟನಾ ಚಟುವಟಿಕೆಗಳಿಗೆ ಈ ವಾಹನವನ್ನು ಬಳಸಲಾಗುತ್ತದೆ. ಶಾಸಕರು ಯಾವ ಕ್ಷೇತ್ರ ವ್ಯಾಪ್ತಿಗೆ ಭೇಟಿ ನೀಡುತ್ತಾರೋ, ಆ ಸಂದರ್ಭ ಆಯಾ ಬ್ಲಾಕ್‌ನ ಅಧ್ಯಕ್ಷರು ವಾಹನವನ್ನು ಬಳಸಿಕೊಂಡು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.



Ad Widget

ಪಕ್ಷದ ಸಂಘಟನೆ ಮತ್ತು ಅಭಿವೃದ್ಧಿಯ ದೃಷ್ಟಿಯಿಂದ ರಾಜ್ಯದಲ್ಲೇ ಮಾದರಿಯಾಗುವ ರೀತಿಯಲ್ಲಿ ಈ ಬ್ಲಾಕ್ ಕಾಂಗ್ರೆಸ್ ವಾಹನವನ್ನು ತರಿಸಲಾಗಿದೆ ಎಂದು ಅಶೋಕ್ ಕುಮಾರ್ ರೈ ತಿಳಿಸಿದರು.

Ad Widget

Ad Widget

ಕಾರ್ಯಕ್ರಮದಲ್ಲಿ ಪುತ್ತೂರು ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಮಹಮ್ಮದ್ ಬಡಗನ್ನೂರು ಹಾಗೂ ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ ಮಾತನಾಡಿದರು.

ವಿಟ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪದ್ಮನಾಭ ಪೂಜಾರಿ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಮುರಳೀಧರ್ ರೈ ಮಠಂತಬೆಟ್ಟು, ಪುಡಾ ಸದಸ್ಯ ನಿಹಾಲ್ ಪಿ. ಶೆಟ್ಟಿ, ಪುತ್ತೂರು ಕ್ಷೇತ್ರ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಡಾ. ರಾಜಾರಾಂ ಕೆ.ಬಿ., ಇಂಟಕ್ ಅಧ್ಯಕ್ಷ ಜಯಪ್ರಕಾಶ್ ಬದಿನಾರ್, ಎನ್‌ಎಸ್‌ಯುಐ ರಾಜ್ಯ ಉಪಾಧ್ಯಕ್ಷ ಫಾರೂಕ್ ಬಾಯಬ್ಬೆ, ಉದ್ಯಮಿ ಸಿಯಾನ್ ದರ್ಬೆ, ವಿಕ್ರಂ ರೈ ಸಾಂತ್ಯ ಮೊದಲಾದವರು ಉಪಸ್ಥಿತರಿದ್ದರು.

Ad Widget
Continue Reading

ಮಂಗಳೂರು

Chouta-ಫಾರಂ 7 ಕೊಟ್ಟ ಮಾತ್ರಕ್ಕೆ ಮತ ಡಿಲೀಟ್ ಆಗಲ್ಲ; ಅಕ್ರಮ ಡಿಲೀಷನ್‌ಗೆ ದಾಖಲೆ ತೋರಿಸಿ: ಕಾಂಗ್ರೆಸ್‌ಗೆ ಚೌಟ ಸವಾಲು

Published

on



Ad Widget

Ad Widget

Ad Widget

Ad Widget

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ಕುರಿತು ಕಾಂಗ್ರೆಸ್‌ ಜನರಲ್ಲಿ ಗೊಂದಲ ಸೃಷ್ಟಿಸುತ್ತಿದ್ದು, ಇದರ ನೆಪದಲ್ಲಿ ದೇಶಾದ್ಯಂತ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಆರೋಪಿಸಿದ್ದಾರೆ.

Ad Widget

Ad Widget

Ad Widget

Ad Widget

ಮಂಗಳೂರು, ಅ.6: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ಕುರಿತು ಕಾಂಗ್ರೆಸ್‌ ಜನರಲ್ಲಿ ಗೊಂದಲ ಸೃಷ್ಟಿಸುತ್ತಿದ್ದು, ಇದರ ನೆಪದಲ್ಲಿ ದೇಶಾದ್ಯಂತ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಆರೋಪಿಸಿದ್ದಾರೆ. ಫಾರಂ 7 ಸಲ್ಲಿಸಿದ ಮಾತ್ರಕ್ಕೆ ಮತದಾರರ ಹೆಸರನ್ನು ಅಳಿಸಲು ಸಾಧ್ಯವಿಲ್ಲ. ಅಕ್ರಮವಾಗಿ ಮತಗಳನ್ನು ಡಿಲೀಟ್‌ ಮಾಡಲಾಗಿದೆ ಎಂಬ ಆರೋಪಕ್ಕೆ ಕಾಂಗ್ರೆಸ್‌ ಬಳಿ ದಾಖಲೆಗಳಿದ್ದರೆ ಬಹಿರಂಗಪಡಿಸಲಿ ಎಂದು ಅವರು ಸವಾಲು ಹಾಕಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಮಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮತದಾರರ ಪಟ್ಟಿಯ ಪರಿಷ್ಕರಣೆ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಅಗತ್ಯವಾದ ಪ್ರಕ್ರಿಯೆ. ಇದಕ್ಕೆ ರಾಜಕೀಯ ಪಕ್ಷಗಳ ಬೂತ್‌ ಮಟ್ಟದ ಏಜೆಂಟರು (ಬಿಎಲ್‌ಎ–2) ಸಹಕರಿಸಬೇಕು. ಆದರೆ, ಕಾಂಗ್ರೆಸ್‌ ಈ ಪ್ರಕ್ರಿಯೆಯಲ್ಲಿ ತೊಡಗಿರುವ ಏಜೆಂಟರನ್ನು ಬೆದರಿಸುವ ಹಾಗೂ ಅಧಿಕಾರಿಗಳ ಕಾರ್ಯಕ್ಕೆ ಅಡ್ಡಿಪಡಿಸುವ ಪ್ರಯತ್ನ ಮಾಡುತ್ತಿದೆ ಎಂದು ದೂರಿದರು.

Ad Widget

Ad Widget <> Ad Widget

ಫಾರಂ 7 ಸಲ್ಲಿಸಿದ ತಕ್ಷಣ ಹೆಸರು ಡಿಲೀಟ್‌ ಆಗಲ್ಲ



Ad Widget

ಮತದಾರರು ಸ್ಥಳಾಂತರಗೊಂಡಿರುವುದು, ಮೃತಪಟ್ಟಿರುವುದು ಅಥವಾ ಭಾರತೀಯ ಪ್ರಜೆಯಲ್ಲ ಎಂಬ ಆಕ್ಷೇಪಣೆಗಳಿದ್ದಲ್ಲಿ ಫಾರಂ 7 ಮೂಲಕ ಅರ್ಜಿ ಸಲ್ಲಿಸಬಹುದು. ಆದರೆ, ಅರ್ಜಿ ಸಲ್ಲಿಕೆಯಾದ ಮಾತ್ರಕ್ಕೆ ಮತದಾರರ ಹೆಸರನ್ನು ಏಕಪಕ್ಷೀಯವಾಗಿ ಅಳಿಸಲು ಸಾಧ್ಯವಿಲ್ಲ. ಚುನಾವಣಾಧಿಕಾರಿಗಳು ಆಕ್ಷೇಪಣೆಯನ್ನು ಪರಿಶೀಲಿಸಿ, ಸೂಕ್ತ ದೃಢೀಕರಣದ ಬಳಿಕವೇ ನಿಯಮಾನುಸಾರ ಕ್ರಮ ಕೈಗೊಳ್ಳಲು ಸಾಧ್ಯ ಎಂದು ಚೌಟ ವಿವರಿಸಿದರು.

Ad Widget

Ad Widget

ಫಾರಂ 7 ಮೂಲಕ ಅಲ್ಪಸಂಖ್ಯಾತ ಮತದಾರರನ್ನು ಗುರಿಯಾಗಿಸಲಾಗುತ್ತಿದೆ ಎಂಬ ಕಾಂಗ್ರೆಸ್‌ ಆರೋಪವನ್ನು ಅವರು ತಳ್ಳಿಹಾಕಿದರು. ಅಕ್ರಮವಾಗಿ ಮತದಾರರ ಹೆಸರುಗಳನ್ನು ಅಳಿಸಲಾಗಿದೆ ಎಂಬುದಕ್ಕೆ ನಿರ್ದಿಷ್ಟ ದಾಖಲೆಗಳಿದ್ದರೆ ಚುನಾವಣಾ ಆಯೋಗದ ಮುಂದೆ ಸಲ್ಲಿಸಲಿ. ಅಂತಹ ಮತದಾರರನ್ನೇ ಕರೆತಂದು ತೋರಿಸಲಿ ಎಂದು ಸವಾಲು ಹಾಕಿದರು.

5.54 ಕೋಟಿ ಮತದಾರರ ಲೆಕ್ಕ ಮುಂದಿಟ್ಟು ಗೊಂದಲ ಎಂದ ಚೌಟ

ಕರ್ನಾಟಕದಲ್ಲಿ 5.54 ಕೋಟಿಗೂ ಅಧಿಕ ಮತದಾರರಿದ್ದರೂ ಕರಡು ಮತದಾರರ ಪಟ್ಟಿಯಲ್ಲಿ ಸುಮಾರು 4.46 ಕೋಟಿ ಮತದಾರರಿದ್ದಾರೆ ಎಂದು ಕಾಂಗ್ರೆಸ್‌ ಹೇಳುವ ಮೂಲಕ ಜನರಲ್ಲಿ ಗೊಂದಲ ಮೂಡಿಸುತ್ತಿದೆ ಎಂದು ಅವರು ಆರೋಪಿಸಿದರು.

ಕರಡು ಮತದಾರರ ಪಟ್ಟಿ ಅಂತಿಮವಲ್ಲ. ಕರಡು ಪಟ್ಟಿ ಪ್ರಕಟವಾದ ಬಳಿಕವೂ ಹೆಸರು ಸೇರ್ಪಡೆ, ತಿದ್ದುಪಡಿ ಹಾಗೂ ಆಕ್ಷೇಪಣೆ ಸಲ್ಲಿಸಲು ಅವಕಾಶವಿದೆ. ಇಂತಹ ಪ್ರಕ್ರಿಯೆಯ ವಿರುದ್ಧವೇ ಜನರನ್ನು ಎತ್ತಿಕಟ್ಟುವುದು ಸರಿಯಲ್ಲ ಎಂದು ಹೇಳಿದರು.

ಮುಖ್ಯಮಂತ್ರಿಯ ವಿರುದ್ಧ ಎಫ್‌ಐಆರ್‌ಗೆ ಆಗ್ರಹ

ಕಾಂಗ್ರೆಸ್‌ಗೆ ಸಂವಿಧಾನ ಮತ್ತು ಕಾನೂನಿನ ಬಗ್ಗೆ ಗೌರವವಿಲ್ಲ ಎಂದು ಆರೋಪಿಸಿದ ಚೌಟ, ಮುಖ್ಯಮಂತ್ರಿಯೊಬ್ಬರು ಚುನಾವಣಾ ಆಯೋಗದ ಕಚೇರಿ ಎದುರು ಪ್ರತಿಭಟನೆ ನಡೆಸುವುದು ಸರಿಯೇ ಎಂದು ಪ್ರಶ್ನಿಸಿದರು. ಸಾಂವಿಧಾನಿಕ ಸಂಸ್ಥೆಗಳ ಕಾರ್ಯವಿಧಾನ ಹಾಗೂ ಪ್ರತಿಭಟನೆಗೆ ಸಂಬಂಧಿಸಿದ ನಿಯಮಗಳ ಬಗ್ಗೆ ಅರಿವು ಇರಬೇಕು. ಚುನಾವಣಾ ಆಯೋಗದ ಕಾರ್ಯದಲ್ಲಿ ರಾಜಕೀಯ ಹಸ್ತಕ್ಷೇಪ ಮಾಡಬಾರದು. ಈ ವಿಚಾರದಲ್ಲಿ ಮುಖ್ಯಮಂತ್ರಿಯ ವಿರುದ್ಧ ಎಫ್‌ಐಆರ್‌ ದಾಖಲಿಸಬೇಕು ಎಂದು ಆಗ್ರಹಿಸಿದರು.

ಬಿಜೆಪಿ ಕಾರ್ಯಕರ್ತರಿಗೆ ಬೆದರಿಕೆ ಹಾಕಿದರೆ ಸುಮ್ಮನಿರಲ್ಲ

ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಬಿಜೆಪಿ ಕಾರ್ಯಕರ್ತರು ಕಾನೂನುಬದ್ಧವಾಗಿ ಪಾಲ್ಗೊಳ್ಳುತ್ತಿದ್ದಾರೆ. ಅವರನ್ನು ಬೆದರಿಸುವ ಅಥವಾ ಒತ್ತಡಕ್ಕೆ ಒಳಪಡಿಸುವ ಪ್ರಯತ್ನಗಳನ್ನು ಸಹಿಸುವುದಿಲ್ಲ ಎಂದು ಚೌಟ ಎಚ್ಚರಿಸಿದರು. ಆಕ್ಷೇಪಣೆಗಳಿಗೆ ಬೆದರಿಕೆ ಮೂಲಕ ಉತ್ತರಿಸುವ ಬದಲು ನಿಗದಿತ ಕಾನೂನು ಪ್ರಕ್ರಿಯೆಯ ಮೂಲಕವೇ ಮತದಾರರ ಪಟ್ಟಿಯನ್ನು ಪರಿಷ್ಕರಿಸಬೇಕು ಎಂದರು.

ಮತದಾರರ ಪಟ್ಟಿಯಲ್ಲಿ ಅನರ್ಹರ ಹೆಸರುಗಳು ಉಳಿದರೆ ಅರ್ಹ ಮತದಾರರ ಹಕ್ಕಿಗೆ ಧಕ್ಕೆಯಾಗಬಹುದು. ಹೀಗಾಗಿ ಶುದ್ಧ ಮತದಾರರ ಪಟ್ಟಿ ಪ್ರತಿಯೊಬ್ಬ ಮತದಾರನ ಹಕ್ಕು ಎಂದು ಪ್ರತಿಪಾದಿಸಿದ ಅವರು, ಎಸ್‌ಐಆರ್‌ಗೆ ಕೋಮು ಬಣ್ಣ ನೀಡುವ ಬದಲು ವಾಸ್ತವಾಂಶಗಳ ಆಧಾರದಲ್ಲಿ ಚರ್ಚೆ ನಡೆಯಬೇಕು ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಪೂಜಾ ಪೈ, ಪೂರ್ಣಿಮಾ, ಸುಜಿತ್‌ ಪ್ರತಾಪ್‌, ರಾಜಗೋಪಾಲ ರೈ, ವಸಂತ ಜೆ. ಪೂಜಾರಿ, ಜೀವನ್‌ ಕುಮಾರ್‌ ತೊಕ್ಕೊಟ್ಟು ಹಾಗೂ ಸಂಜಯ ಪ್ರಭು ಉಪಸ್ಥಿತರಿದ್ದರು.

Ad Widget
Continue Reading

ರಾಜಕೀಯ

2027ರ ಜನವರಿ ಮೊದಲ ವಾರದಲ್ಲೇ ಜಿ.ಪಂ ಮತ್ತು ತಾ.ಪಂ ಚುನಾವಣೆ : ಸಚಿವ ಸಂಪುಟದಲ್ಲಿ ಚರ್ಚೆ..!

Published

on



Ad Widget

Ad Widget

Ad Widget

Ad Widget

ಬೆಂಗಳೂರು : 2027 ಹೊಸ ವರ್ಷ ಆರಂಭದಲ್ಲಿಯೇ ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಚುನಾವಣೆ ನಡೆಸಲು ರಾಜ್ಯ ಸರಕಾರ ಮುಂದಾಗಿದೆ ಎನ್ನಲಾಗಿದೆ.

Ad Widget

Ad Widget

Ad Widget

Ad Widget

ಮಂಗಳವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾ‌ರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ವಿಷಯ ಚರ್ಚೆ ನಡೆಸಲಾಗಿದ್ದು, ಚುನಾವಣಾ ಆಯೋಗ ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಮೀಸಲಾತಿ ಪಟ್ಟಿಗೆ ಒಪ್ಪಿಗೆ ಸೂಚಿಸಿದರೆ ಜನವರಿ ಮೊದಲ ವಾರದಲ್ಲಿ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಚುನಾವಣೆ ನಡೆಸಲು ಸರಕಾರ ಮುಂದಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಎರಡು ದಿನಗಳ ಹಿಂದೆ ರಾಜ್ಯ ಚುನಾವಣಾ ಆಯೋಗಕ್ಕೆ ಜಿಲ್ಲಾ ಮತ್ತು ತಾಲೂಕು ಪಂಚಾಯತ್ ವಾರ್ಡುವಾರು ಮೀಸಲಾತಿ ಪಟ್ಟಿಗೆ ಒಪ್ಪಿಗೆ ಕೋರಿ ರಾಜ್ಯ ಸರಕಾರ ಮನವಿ ಸಲ್ಲಿಸಿತ್ತು. ರಾಜ್ಯದಲ್ಲಿ ಪರಿಷತ್‌ ಚುನಾವಣೆ ನೀತಿ ಸಂಹಿತೆ ಹಿನ್ನೆಲೆ ರಾಜ್ಯ ಚುನಾವಣಾ ಆಯೋಗ ಮೀಸಲಾತಿ ಪಟ್ಟಿಯನ್ನು ಕೇಂದ್ರ ಚುನಾವಣಾ ಆಯೋಗಕ್ಕೆ ಕಳುಹಿಸಿದೆ.ಚುನಾವಣಾ ಆಯೋಗ ಮೀಸಲಾತಿ ಪಟ್ಟಿಗೆ ಒಪ್ಪಿಗೆ ಸೂಚಿಸಿದ ಬಳಿಕ ಆ ಸಂಬಂಧ ಕರಡು ಅಧಿಸೂಚನೆ ಹೊರಬೀಳಲಿದೆ.

Ad Widget

Ad Widget <> Ad Widget

ಸಾರ್ವಜನಿಕ ಆಕ್ಷೇಪ ಪರಿಗಣಿಸಿದ ಬಳಿಕ ಡಿಸೆಂಬರ್ ಮಧ್ಯದಲ್ಲಿ ವಾರ್ಡುವಾರು ಮೀಸಲಾತಿ ಪಟ್ಟಿಯ ಅಂತಿಮ ಅಧಿಸೂಚನೆ ಪ್ರಕಟವಾಗಲಿದ್ದು. ಜನವರಿ ಮೊದಲ ವಾರದಲ್ಲಿ ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಚುನಾವಣೆ ನಡೆಸಲು ರಾಜ್ಯ ಮುಂದಾಗಿದ್ದೇವೆ. ಈ ಚುನಾವಣೆಯ 15 ದಿನಗಳ ಬಳಿಕ ಗ್ರಾಮ ಪಂಚಾಯಿತಿ ಚುನಾವಣೆ ನಡೆಸಲು ಉದ್ದೇಶಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರ್ ಖಂಡ್ರೆ ಮಾಹಿತಿ ಹಂಚಿಕೊಂಡಿದ್ದಾರೆ.



Ad Widget
Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading