ಆರೋಗ್ಯ
Mansoon-ಮಳೆಗಾಲದ ಅಲರ್ಜಿ ಸಮಸ್ಯೆಗಳಿಂದ ಹೀಗೆ ಪಾರಾಗಿ; ಆರೋಗ್ಯಕ್ಕಾಗಿ ಒಂದಿಷ್ಟು ಹೆಲ್ತ್ ಟಿಪ್ಸ್..
ನಿಖರ ನ್ಯೂಸ್ : ಮಳಗಾಲಕ್ಕೂ ರೋಗಗಳಿಗೂ ಅವಿನಾಭಾವ ಸಂಬಂಧ ಇದ್ದಂತೆ. ಮಳೆಗಾಲ ಶುರುವಾಗುತ್ತಿದ್ದಂತೆ ಸಾಂಕ್ರಾಮಿಕ ರೋಗಗಳು, ಅಲರ್ಜಿ ಸಮಸ್ಯೆಗಳು ಸೇರಿದಂತೆ ಹಲವು ಆರೋಗ್ಯ ಸಮಸ್ಯೆಗಳು ಮಕ್ಕಳು ಸೇರಿದಂತೆ ಎಲ್ಲಾ ವಯೋಮಾನದವರಲ್ಲೂ ಕಾಣಿಸಿಕೊಳ್ಳಲು ಆರಂಭಿಸುತ್ತದೆ. ಕೆಲವೊಮ್ಮೆ ಇವು ಜೋರಾಗಿ ಪ್ರಾಣ ಹಾನಿಯೂ ಸಂಭವಿಸುತ್ತದೆ. ಆದರೆ ಈ ಮಳೆಗಾಲದಲ್ಲಿ ನಾವೊಂದಿಷ್ಟು ಹೆಲ್ತ್ ಟಿಪ್ಸ್ ಫಾಲೋ ಮಾಡಿದಾಗ, ಅವುಗಳ ಲಕ್ಷಣಗಳನ್ನು ಮೊದಲೇ ತಿಳಿದುಕೊಂಡಾಗ ಆರೋಗ್ಯ ಸಮಸ್ಯೆಗಳಿಂದ ಪಾರಾಗಬಹುದು. ಹೀಗಾಗಿ ನೀವು ಈ ಆರೋಗ್ಯಕರ ವರದಿ ಓದುವುದು ಉತ್ತಮ.

ಮಳೆಗಾಲದ ಅನಾರೋಗ್ಯಕ್ಕೆ ಕಾರಣ?
ಮಳೆಗಾಲದಲ್ಲಿ ಪ್ರಕೃತಿ ಹಚ್ಚ ಹಸಿರಾಗಿತ್ತದೆ. ಹೀಗೆ ಹಸಿರಾದ ಹುಲ್ಲು ಹಾಗೂ ಗಿಡಗಂಟಿಗಳಿಂದ ಅಲರ್ಜಿಕಾರಕಗಳು ಗಾಳಿಗೆ ಹಾರಿ ವಾತಾವರಣ ಸೇರುತ್ತದೆ.ಜೊತೆಗೆ ಗೋಡೆ ಹಾಗೂ ಬಾಗಿಲುಗಳಲ್ಲಿ ಫಂಗಸ್ ಹಿಡಿಯುವುದರಿಂದ ಅಸ್ತಮಾ ಸಮಸ್ಯೆ ಹೆಚ್ಚುತ್ತದೆ. ಮಳೆ ನೀರು ನಿಲ್ಲುವಲ್ಲಿ ಸೊಳ್ಳೆಗಳು ಉತ್ಪತ್ತಿಯಾಗುವ ಕಾರಣ ಇದರಿಂದ ಸಾಂಕ್ರಾಮಿಕ ರೋಗಗಳು ಹೆಚ್ಚುತ್ತದೆ. ಹಾಗೆಯೇ ಮಳೆಗಾಲದಲ್ಲಿ ವಾತಾವರಣದ ಬದಲಾವಣೆಯಿಂದಾಗಿ ಅಲರ್ಜಿ ಸಮಸ್ಯೆಗಳು ಹೆಚ್ಚಿರುತ್ತದೆ.
ಲಕ್ಷಣಗಳೇನು?
ಮಳೆಗಾಲದಲ್ಲಿ ಅಲರ್ಜಿ ಅಥವಾ ಇನ್ಯಾವುದೇ ಆರೋಗ್ಯ ಸಮಸ್ಯೆ ದೇಹಕ್ಕೆ ಬಾದಿಸುತ್ತಿದೆ ಎನ್ನುವುದಕ್ಕೆ ಕೆಲವೊಂದು ಲಕ್ಷಣಗಳು ಸೂಚನೆ ನೀಡುತ್ತದೆ. ಅವುಗಳೆಂದರೆ ,ಸೀನುಗಳ ಸರಮಾಲೆ, ಮೂಗು ಸೋರುವುದು, ಒಣ ಕೆಮ್ಮು, ಉಸಿರಾಡಲು ಕಷ್ಟವಾಗುವುದು, ಉಸಿರಾಡುವಾಗ ಸಿಳ್ಳೆ ಹಾಕಿದಂತೆ ಪುಪ್ಪುಸಗಳಿಂದ ಶಬ್ದ ಬರುವುದು, ಸುಸ್ತು-ಆಯಾಸ, ಕಣ್ಣು ಕೆಂಪಾಗುವುದು, ಕಣ್ಣಿನಲ್ಲಿ ತುರಿಕೆ, ಕಣ್ಣು ಊದಿಕೊಂಡು ನೀರು ಬರುವುದು, ತಲೆನೋವು, ಮೈ ಮೇಲೆ ಗುಳ್ಳೆಗಳು ಬಂದು ಕೆಂಪಾಗುವುದು ಹಾಗೂ ಇತ್ಯಾದಿ.

ಪಾರಾಗುವುದು ಹೇಗೆ?
ಮಳೆಗಾಲದಲ್ಲಿ ಉಂಟಾಗುವ ಆರೋಗ್ಯ ಸಮಸ್ಯೆಗಳಿಂದ ಪಾರಾಗಳು ವೈದ್ಯರು ನೀಡುವ ಔಷಧಿಗಳನ್ನು ಸೇವಿಸುವುದರ ಜೊತೆಗೆ ವೈಯಕ್ತಿಕವಾಗಿಯೂ ದೇಹದ ಮೇಲೆ ಕಾಳಜಿ ವಹಿಸಬೇಕು.
ಉದಾ: ಮನೆಯೊಳಗೆ ಹೆಚ್ಚಿನ ತೇವ ನಿಲ್ಲದಂತೆ ಜಾಗ್ರತೆ ಮಾಡಿ. ಸಾಕಷ್ಟು ಗಾಳಿ-ಬೆಳಕು ಆಡುವಂತಿರಲಿ. ಮಳೆ ಇಲ್ಲದ ಸಮಯದಲ್ಲಿ, ಬಿಸಿಲಿದ್ದಾಗ ಕಿಟಕಿಗಳನ್ನು ತೆರೆದಿಡುವುದು ಸಹಕಾರಿ. ಹಾಗಿಲ್ಲದಿದ್ದರೆ ಎಕ್ಸಾಸ್ಟ್ ಫ್ಯಾನ್‌ಗಳನ್ನು ಅಳವಡಿಸಿಕೊಳ್ಳಿ. ಮನೆಯೊಳಗೆ ದೂಳು, ಕಸ ಉಳಿಯದಂತೆ ನೋಡಿಕೊಳ್ಳಿ. ಮನೆಯಿಂದ ಹೊರಗೆ ಹೋಗುವಾಗ ಬೆಚ್ಚಗಿನ ವಸ್ತ್ರಗಳು ಅಗತ್ಯ. ಗಾಳಿ ಹೆಚ್ಚಿದ್ದರೆ ಮುಖಕ್ಕೆ ಮಾಸ್ಕ್ ಹಾಕಿ. ಹೊರಗಿನಿಂದ ಬಂದಾಕ್ಷಣ ಆ ಬಟ್ಟೆಗಳನ್ನು ಬದಲಿಸಿ, ಕೈ-ಕಾಲು ತೊಳೆದುಕೊಳ್ಳಿ. ಇದರಿಂದ ಸೋಂಕು ಮತ್ತು ಅಲರ್ಜಿಕಾರಕಗಳನ್ನು ನಿಯಂತ್ರಿಸಬಹುದಾಗಿದೆ.
ಮಳೆಗಾಲದಲ್ಲಿ ಆಹಾರ ಹೇಗಿರಬೇಕು!
‘ಉತ್ತಮ ಆಹಾರ ಉತ್ತಮ ಆರೋಗ್ಯ’ ಎನ್ನುವ ಮಾತಿದೆ. ಮಳೆಗಾಲದಲ್ಲೂ ಕೂಡ ಒಳ್ಳೆಯ ಆಹಾರ ಸೇವಿಸುವುದರಿಂದ ಅಲರ್ಜಿ, ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಬಹುದಾಗಿದೆ. ಈ ಸಮಯದಲ್ಲಿ ಬೆಣ್ಣೆ ಹಣ್ಣು ಅಥವಾ ಅವಕಾಡೊಗಳನ್ನು ಹೆಚ್ಚು ಸೇವಿಸಬೇಕು. ಜೊತೆಗೆ ವಿಟಮಿನ್ ಸಿ ಹೆಚ್ಚಿರುವ ಕಿತ್ತಳೆ, ಬೆರ್ರಿಗಳು, ಪಾಲಕ್ ಸೊಪ್ಪು, ಕ್ಯಾಪ್ಸಿಕಂಗಳನ್ನು ತಿನ್ನುವುದು ಉತ್ತಮ. ಹಾಗೆಯೇ ಮಳೆಗಾಲದಲ್ಲಿ ಬಾಯಾರಿಕೆ ಇಲ್ಲದಿದ್ದರೂ ಕುದಿಸಿ ಆರಿಸಿದ ನೀರನ್ನು ಕುಡಿಯುತ್ತಿರಬೇಕು.
ಆರೋಗ್ಯ
Puttur-ಸೆ.29: ವಿಶ್ವ ಹೃದಯ ದಿನ: ಪುತ್ತೂರಿನ ಮೆಡ್‌ಲ್ಯಾಂಡ್ ಆಸ್ಪತ್ರೆಯಲ್ಲಿ ಹೃದಯ ತಪಾಸಣಾ ಶಿಬಿರ
ವಿಶ್ವ ಹೃದಯ ದಿನದ ಅಂಗವಾಗಿ ಪುತ್ತೂರಿನ ಸಂಪ್ಯದಲ್ಲಿರುವ ಮೆಡ್‌ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಸೆ.29, ಮಂಗಳವಾರದಂದು ಸಂಜೆ ಗಂಟೆ 3ರಿಂದ ವಿಶೇಷ ಹೃದಯ ತಪಾಸಣಾ ಶಿಬಿರ ಹಾಗೂ ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಗಿದೆ.
ಪುತ್ತೂರು: ವಿಶ್ವ ಹೃದಯ ದಿನದ ಅಂಗವಾಗಿ ಪುತ್ತೂರಿನ ಸಂಪ್ಯದಲ್ಲಿರುವ ಮೆಡ್‌ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಸೆ.29, ಮಂಗಳವಾರದಂದು ಸಂಜೆ ಗಂಟೆ 3ರಿಂದ ವಿಶೇಷ ಹೃದಯ ತಪಾಸಣಾ ಶಿಬಿರ ಹಾಗೂ ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಗಿದೆ.
ಶಿಬಿರದಲ್ಲಿ ಹೃದಯದ ಆರೋಗ್ಯಕ್ಕೆ ಸಂಬಂಧಿಸಿದಂತೆ ಇ.ಸಿ.ಜಿ., ಇಕೋ (ECHO), ಟಿ.ಎಂ.ಟಿ. (TMT) ಸೇರಿದಂತೆ ಅಗತ್ಯ ತಪಾಸಣೆಗಳನ್ನು ನಡೆಸಲಾಗುವುದು. ತಪಾಸಣೆಯ ಬಳಿಕ ಹೃದ್ರೋಗ ತಜ್ಞ ವೈದ್ಯರಿಂದ ಸೂಕ್ತ ಸಲಹೆ ಮತ್ತು ಮಾರ್ಗದರ್ಶನವೂ ದೊರೆಯಲಿದೆ.
ಹೃದಯ ಸಂಬಂಧಿ ಕಾಯಿಲೆಗಳನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚಿ ಸೂಕ್ತ ಚಿಕಿತ್ಸೆ ಪಡೆಯಲು ಶಿಬಿರವು ಸಾರ್ವಜನಿಕರಿಗೆ ಉಪಯುಕ್ತ ಅವಕಾಶವಾಗಲಿದೆ. ವಿಶೇಷವಾಗಿ ಎದೆನೋವು, ಉಸಿರಾಟದ ತೊಂದರೆ, ಹೃದಯ ಬಡಿತದಲ್ಲಿ ವ್ಯತ್ಯಾಸ, ಅಧಿಕ ರಕ್ತದೊತ್ತಡ, ಮಧುಮೇಹ ಅಥವಾ ಕುಟುಂಬದಲ್ಲಿ ಹೃದಯ ಕಾಯಿಲೆಯ ಹಿನ್ನೆಲೆ ಹೊಂದಿರುವವರು ಶಿಬಿರದ ಪ್ರಯೋಜನ ಪಡೆಯುವಂತೆ ಆಸ್ಪತ್ರೆಯ ಆಡಳಿತ ಮಂಡಳಿ ಮನವಿ ಮಾಡಿದೆ.
ಹೃದಯದ ಆರೋಗ್ಯದ ಬಗ್ಗೆ ಮುನ್ನೆಚ್ಚರಿಕೆ ವಹಿಸುವುದು ಹಾಗೂ ನಿಯಮಿತ ತಪಾಸಣೆ ಮಾಡಿಸಿಕೊಳ್ಳುವ ಮೂಲಕ ಆರೋಗ್ಯಕರ ಜೀವನಶೈಲಿಯನ್ನು ರೂಢಿಸಿಕೊಳ್ಳುವಂತೆ ಆಸ್ಪತ್ರೆ ತಿಳಿಸಿದೆ.
ಆರೋಗ್ಯ
HIV test-ಯುವಜನರಲ್ಲಿ ಹೆಚ್ಚುತ್ತಿದೆ HIV ಸೋಂಕು; ರಾಜ್ಯದ ಪದವಿ ಮತ್ತು ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಎಚ್‌ಐವಿ ತಪಾಸಣೆ
ರಾಜ್ಯದ ಯುವ ಸಮೂಹದಲ್ಲಿ ಎಚ್‌ಐವಿ (HIV) ಸೋಂಕು ಆತಂಕಕಾರಿ ರೀತಿಯಲ್ಲಿ ಹರಡುತ್ತಿರುವುದನ್ನು ಮನಗಂಡಿರುವ ಕರ್ನಾಟಕ ಸರ್ಕಾರ, ಎಲ್ಲ ಪದವಿ ಮತ್ತು ಎಂಜಿನಿಯರಿಂಗ್ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಎಚ್‌ಐವಿ ತಪಾಸಣೆ ನಡೆಸಲು ನಿರ್ಧರಿಸಿದೆ.
ಬೆಂಗಳೂರು: ರಾಜ್ಯದ ಯುವ ಸಮೂಹದಲ್ಲಿ ಎಚ್‌ಐವಿ (HIV) ಸೋಂಕು ಆತಂಕಕಾರಿ ರೀತಿಯಲ್ಲಿ ಹರಡುತ್ತಿರುವುದನ್ನು ಮನಗಂಡಿರುವ ಕರ್ನಾಟಕ ಸರ್ಕಾರ, ಎಲ್ಲ ಪದವಿ ಮತ್ತು ಎಂಜಿನಿಯರಿಂಗ್ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಎಚ್‌ಐವಿ ತಪಾಸಣೆ ನಡೆಸಲು ನಿರ್ಧರಿಸಿದೆ.
ದೇಶದಲ್ಲೇ ಮೂರನೇ ಸ್ಥಾನ:
ರಾಷ್ಟ್ರೀಯ ಏಡ್ಸ್ ನಿಯಂತ್ರಣ ಸಂಸ್ಥೆಯ ವರದಿ ಪ್ರಕಾರ, ಎಚ್‌ಐವಿ ಸೋಂಕಿತರ ಸಂಖ್ಯೆಯಲ್ಲಿ ಕರ್ನಾಟಕವು ದೇಶದಲ್ಲೇ 3ನೇ ಸ್ಥಾನದಲ್ಲಿದೆ. ರಾಜ್ಯದಲ್ಲಿ ಒಟ್ಟು 2.60 ಲಕ್ಷ ಸೋಂಕಿತರಿದ್ದು, ಈ ಪೈಕಿ ಸುಮಾರು 54 ಸಾವಿರ ಮಂದಿಗೆ ತಮಗೆ ಸೋಂಕು ತಗುಲಿರುವ ಅರಿವೇ ಇಲ್ಲದಿರುವುದು ದೊಡ್ಡ ಆತಂಕಕ್ಕೆ ಕಾರಣವಾಗಿದೆ. ವಿಶೇಷವಾಗಿ 18 ರಿಂದ 35 ವರ್ಷದೊಳಗಿನವರಲ್ಲಿ ಸೋಂಕು ವೇಗವಾಗಿ ಹರಡುತ್ತಿದೆ ಎಂದು ಕರ್ನಾಟಕ ರಾಜ್ಯ ಏಡ್ಸ್ ತಡೆ ಸೊಸೈಟಿ (KSAPS) ಕಳವಳ ವ್ಯಕ್ತಪಡಿಸಿದೆ.
ಕಾಲೇಜುಗಳಲ್ಲಿ ಆರೋಗ್ಯ ಶಿಬಿರ ಮತ್ತು ಜಾಗೃತಿ:
ಸೋಂಕನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚಲು ಆರೋಗ್ಯ ಇಲಾಖೆ ಹಾಗೂ ಕಾಲೇಜು ಶಿಕ್ಷಣ ಇಲಾಖೆಯು ಜಂಟಿಯಾಗಿ ‘ಸಂಯೋಜಿತ ಆರೋಗ್ಯ ಶಿಬಿರ’ಗಳನ್ನು (IHC) ಆಯೋಜಿಸುತ್ತಿವೆ.
ವಿಟಿಯು (VTU) ವ್ಯಾಪ್ತಿಯಲ್ಲೂ ತಪಾಸಣೆ: ರಾಜ್ಯದ ಎಲ್ಲ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ತಪಾಸಣೆ ಹಾಗೂ ಆಪ್ತ ಸಮಾಲೋಚನೆ ನಡೆಸುವಂತೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಸೂಚನೆ ನೀಡಿದೆ.
ವಿವಿಧ ಸ್ಪರ್ಧೆಗಳು: 2026ರ ಜುಲೈನಿಂದ 2027ರ ಫೆಬ್ರವರಿವರೆಗೆ ಕಾಲೇಜುಗಳಲ್ಲಿ ಬೀದಿ ನಾಟಕ, ರಸಪ್ರಶ್ನೆ ಮತ್ತು ತಜ್ಞರ ಉಪನ್ಯಾಸಗಳ ಮೂಲಕ ಜಾಗೃತಿ ಮೂಡಿಸಲು ಯೋಜನೆ ರೂಪಿಸಲಾಗಿದೆ. ಇದಕ್ಕೆ ಅಂಕಗಳ ಆಧಾರದ ಮೇಲೆ ಮಾರ್ಗಸೂಚಿಯನ್ನೂ ನೀಡಲಾಗಿದೆ.
ಮಾಹಿತಿಯ ಗೌಪ್ಯತೆಗೆ ಆದ್ಯತೆ (QR Code ಸೌಲಭ್ಯ):
ವಿದ್ಯಾರ್ಥಿಗಳು ತಮ್ಮ ಎಚ್‌ಐವಿ ಸ್ಥಿತಿಯನ್ನು ಅತ್ಯಂತ ಗೌಪ್ಯವಾಗಿ ತಿಳಿದುಕೊಳ್ಳಲು ಸರ್ಕಾರವು ವಿಶೇಷ ತಂತ್ರಜ್ಞಾನದ ಮೊರೆ ಹೋಗಿದೆ.
ಕ್ಯೂಆರ್ ಕೋಡ್ (QR Code): ಕಾಲೇಜುಗಳಲ್ಲಿ ಕಡ್ಡಾಯವಾಗಿ ಕ್ಯೂಆರ್ ಕೋಡ್ ಪ್ರದರ್ಶಿಸಲಾಗುತ್ತದೆ. ಇದನ್ನು ಸ್ಕ್ಯಾನ್ ಮಾಡುವ ಮೂಲಕ ವಿದ್ಯಾರ್ಥಿಗಳು ಸ್ವಯಂ-ಅಪಾಯ ಮೌಲ್ಯಮಾಪನ ಮಾಡಿಕೊಳ್ಳಬಹುದು.
ವೆಬ್‌ಸೈಟ್: ಗೌಪ್ಯ ಮಾರ್ಗದರ್ಶನಕ್ಕಾಗಿ www.breakfreeindia.org ಜಾಲತಾಣವನ್ನು ಬಳಸಿಕೊಳ್ಳಲು ಅವಕಾಶ ನೀಡಲಾಗಿದೆ.
ಸರ್ಕಾರದ ಮುಂದಿರುವ ಸವಾಲು:
ಕಾಲೇಜುಗಳಲ್ಲಿ ಮಾದಕ ದ್ರವ್ಯಗಳ ವಿರುದ್ಧ ಸಮರ ಸಾರಿರುವ ಸರ್ಕಾರಕ್ಕೆ, ಈಗ ಎಚ್‌ಐವಿ ಹರಡದಂತೆ ತಡೆಯುವುದು ದೊಡ್ಡ ಸವಾಲಾಗಿದೆ. ರಾಜ್ಯದ ಸರ್ಕಾರಿ ಮತ್ತು ಖಾಸಗಿ ಕಾಲೇಜುಗಳಲ್ಲಿರುವ ಲಕ್ಷಾಂತರ ವಿದ್ಯಾರ್ಥಿಗಳ ಆರೋಗ್ಯ ಸುರಕ್ಷತೆಯ ದೃಷ್ಟಿಯಿಂದ ಈ ಕ್ರಮ ಅನಿವಾರ್ಯ ಎಂದು ಕೆಎಸ್‌ಎಪಿಎಸ್ ತಿಳಿಸಿದೆ. ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿಗಳು ಈ ತಪಾಸಣಾ ಪ್ರಕ್ರಿಯೆಯ ಉಸ್ತುವಾರಿ ವಹಿಸಲಿದ್ದಾರೆ.
ಆರೋಗ್ಯ
Puttur-ಪುತ್ತೂರು: ಜು.9ರಂದು ಡಾ. ನಝೀರ್ ಅಹಮ್ಮದ್ ರವರ ಕ್ಲಿನಿಕ್ ನಲ್ಲಿ ಮಾಸಿಕ ಉಚಿತ ಆರೋಗ್ಯ ತಪಾಸಣಾ ಶಿಬಿರ
ಸಾರ್ವಜನಿಕರ ಆರೋಗ್ಯದ ಕಾಳಜಿಯೊಂದಿಗೆ, ಪುತ್ತೂರಿನ ಖ್ಯಾತ ವೈದ್ಯಕೀಯ ತಜ್ಞ ಡಾ. ನಝೀರ್ ಅಹಮದ್, ರೋಟರಿ ಕ್ಲಬ್ ಪುತ್ತೂರು ಸಿಟಿ ಹಾಗೂ ರೋಟರ್ಯಾಕ್ಟ್ ಕ್ಲಬ್ ಪುತ್ತೂರು ಇವರ ಜಂಟಿ ಆಶ್ರಯದಲ್ಲಿ ಮಾಸಿಕ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ.
ಪುತ್ತೂರು: ಸಾರ್ವಜನಿಕರ ಆರೋಗ್ಯದ ಕಾಳಜಿಯೊಂದಿಗೆ, ಪುತ್ತೂರಿನ ಖ್ಯಾತ ವೈದ್ಯಕೀಯ ತಜ್ಞ ಡಾ. ನಝೀರ್ ಅಹಮದ್, ರೋಟರಿ ಕ್ಲಬ್ ಪುತ್ತೂರು ಸಿಟಿ ಹಾಗೂ ರೋಟರ್ಯಾಕ್ಟ್ ಕ್ಲಬ್ ಪುತ್ತೂರು ಇವರ ಜಂಟಿ ಆಶ್ರಯದಲ್ಲಿ ಮಾಸಿಕ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ.
ಶಿಬಿರವು ಜು.9, ಗುರುವಾರದಂದು ಬೆಳಗ್ಗೆ 9-30ರಿಂದ ಮಧ್ಯಾಹ್ನ 12-30ರವರೆಗೆ ಪುತ್ತೂರಿನ ಕಲ್ಲಾರೆಯಲ್ಲಿರುವ ಡಾ. ನಝೀರ್ ಅಹಮದ್ ರವರ ಕ್ಲಿನಿಕ್ ನಲ್ಲಿ ನಡೆಯಲಿರುವುದು.
ಶಿಬಿರದಲ್ಲಿ ಸಿಗುವ ಸೌಲಭ್ಯಗಳು:
ಈ ಶಿಬಿರದಲ್ಲಿ ಸಾರ್ವಜನಿಕರಿಗೆ ಈ ಕೆಳಗಿನ ಪರೀಕ್ಷೆಗಳನ್ನು ಸಂಪೂರ್ಣ ಉಚಿತವಾಗಿ ಮಾಡಿಕೊಡಲಾಗುವುದು.
ಉಚಿತ ಪರೀಕ್ಷೆಗಳು: ಥೈರಾಯಿಡ್ (TSH), ರಕ್ತದ ಸಕ್ಕರೆ ಅಂಶ (Sugar), HBA1C ಮತ್ತು ಮೂಳೆ ಸಾಂದ್ರತೆ ಪರೀಕ್ಷೆ (BMD Test).
-
ಬಿಗ್ ನ್ಯೂಸ್21 hours agoಡಿಕೆಶಿ ಸರ್ಕಾರದಿಂದ ಜನತೆಗೆ ಬಿಗ್ ಶಾಕ್ – ರೈತರಿಗೆ ಬಂಪರ್ ಗಿಫ್ಟ್..! ಹಾಲಿನ ದರ 8 ರೂ. ಏರಿಕೆ : 6 ರೂ. ರೈತರಿಗೆ..! ನ.1 ರಿಂದ ಬಹುತೇಕ ಜಾರಿ
-
Uncategorized22 hours ago
ಶಿಕ್ಷೆಯ ವಿರುದ್ಧ ಹೈಕೋರ್ಟಿಗೆ ಅಪೀಲು; ನ್ಯಾಯಾಲಯಕ್ಕೆ ಗೈರು: ನೆಕ್ಕಿಲಾಡಿಯಲ್ಲಿ ಆರೋಪಿಯ ಬಂಧನ
-
ರಾಜಕೀಯ21 hours ago2027ರ ಜನವರಿ ಮೊದಲ ವಾರದಲ್ಲೇ ಜಿ.ಪಂ ಮತ್ತು ತಾ.ಪಂ ಚುನಾವಣೆ : ಸಚಿವ ಸಂಪುಟದಲ್ಲಿ ಚರ್ಚೆ..!
-
Uncategorized22 hours ago
Rahul Gandhi ;8 ಗಂಟೆಗಳ ಧರಣಿ ಬಳಿಕ ಪೊಲೀಸ್ ಆ್ಯಕ್ಷನ್: ರಾಹುಲ್–ಪ್ರಿಯಾಂಕಾ ಸೇರಿ 50 ಸಂಸದರು ವಶ
-
ಮಂಗಳೂರು10 hours agoChouta-ಫಾರಂ 7 ಕೊಟ್ಟ ಮಾತ್ರಕ್ಕೆ ಮತ ಡಿಲೀಟ್ ಆಗಲ್ಲ; ಅಕ್ರಮ ಡಿಲೀಷನ್ಗೆ ದಾಖಲೆ ತೋರಿಸಿ: ಕಾಂಗ್ರೆಸ್ಗೆ ಚೌಟ ಸವಾಲು
-
ಅಂತರ ರಾಜ್ಯ8 hours agoಕಾಸರಗೋಡು: ಆರ್ಎಸ್ಎಸ್ ವಕ್ತಾರರ ಭಾಗವಹಿಸುವಿಕೆ ವಿರೋಧಿಸಿ ಪ್ರತಿಭಟನೆ; ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳಿಗೆ ಗಾಯ
-
ಸ್ಥಳೀಯ8 hours agoBeltangadi-ಬೆಳ್ತಂಗಡಿ: ಚಾಲಕನ ಸಮಯಪ್ರಜ್ಞೆ; ಬಸ್ನಲ್ಲಿ ಅಸ್ವಸ್ಥಗೊಂಡ ಮಹಿಳೆ ಅಪಾಯದಿಂದ ಪಾರು
-
ರಾಜಕೀಯ9 hours agoAshok Rai-ಪಕ್ಷ ಸಂಘಟನೆಗೆ ಅಶೋಕ್ ರೈ ಹೊಸ ಹೆಜ್ಜೆ: ಪುತ್ತೂರು ಬ್ಲಾಕ್ ಕಾಂಗ್ರೆಸ್ಗೆ ಬೊಲೆರೋ


















