ಕಾರ್ಯಕ್ರಮಗಳು
Amar Jawan Jyoti-ಜು. 26ರಂದು ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿ ಹಣತೆ ಪ್ರಜ್ವಲನ ಕಾರ್ಯಕ್ರಮ‘ಯೋಧರ ಜತೆಗೆ ನಾವಿದ್ದೇವೆ’ ಎಂಬ ಸಂದೇಶ ರವಾನೆಯ ಉದ್ದೇಶ
ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳು ರೂಪಿಸಿರುವ ಕಿಲ್ಲೆ ಮೈದಾನದ ಮುಂಭಾಗದಲ್ಲಿನ ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿ ಕಾರ್ಗಿಲ್ ವಿಜಯ ದಿವಸದ ಪ್ರಯುಕ್ತ ಜು 26ರಂದು ದೀಪ ಪ್ರಜ್ವಲನ ಕಾರ್ಯಕ್ರಮ ನಡೆಯಲಿದೆ. ದೇಶಕ್ಕಾಗಿ ಪ್ರಾಣಾರ್ಪಣೆಗೂ ಸಿದ್ಧರಾಗಿ ಸಮಾಜವನ್ನು ಕಾಪಾಡುವ ಯೋಧರಿಗಾಗಿ ಪ್ರಾರ್ಥನೆ ಮಾಡುವ ವಿಶೇಷ ಕಾರ್ಯಕ್ರಮವೊಂದನ್ನು ಆಯೋಜಿಸಲಾಗುತ್ತಿದೆ.
ಕೆಲವು ದಿನಗಳ ಹಿಂದೆಯಷ್ಟೇ ಕಾರ್ಗಿಲ್ ವಿಜಯದ ಇಪ್ಪತ್ತೈದನೆ ವರ್ಷಾಚರಣೆಯನ್ನು ಪುತ್ತೂರಿನಲ್ಲಿ ಆಯೋಜನೆ ಮಾಡಿದ್ದಾಗ, ಆ ಕಾರ್ಯಕ್ರಮವದಲ್ಲಿ ಭಾಗವಹಿಸಿದ್ದ ಕಾರ್ಗಿಲ್ ಯೋಧ ಕ್ಯಾಪ್ಟನ್ ನವೀನ್ ನಾಗಪ್ಪ ಅವರು ಯೋಧರಿಗಾಗಿ ದೇವರಲ್ಲಿ ನಿತ್ಯ ಪ್ರಾರ್ಥಿಸಿ, ದೀಪ ಬೆಳಗುವಂತೆ ಕರೆನೀಡಿದ್ದರು. ಅವರ ಮಾತನ್ನು ಪುರಸ್ಕರಿಸುವ ದ್ಯೋತಕವಾಗಿ ಪುತ್ತೂರಿನ ಸಮಸ್ತ ನಾಗರಿಕರನ್ನೊಳಗೊಂಡAತೆ ಅಮರ್ ಜವಾನ್ ಜ್ಯೋತಿಯ ಬಳಿ ಹಣತೆ ಬೆಳಗುವ ಕಾರ್ಯಕ್ರಮ ಆಯೋಜನೆಗೊಳ್ಳುತ್ತಿದೆ.
ನಮಗಾಗಿ ಸರ್ವಸ್ವವನ್ನೂ ತ್ಯಾಗ ಮಾಡಲು ಸಿದ್ಧರಿರುವ ಯೋಧರಿಗಾಗಿ ಪ್ರಾರ್ಥಿಸುವುದು ನಮ್ಮ ಕರ್ತವ್ಯ. ಯೋಧರು ನಮ್ಮಿಂದ ಏನನ್ನೂ ಬಯಸುತ್ತಿಲ್ಲ. ಕೇವಲ ನಮ್ಮ ಪ್ರಾರ್ಥನೆ ಹಾರೈಕೆಗಳಷ್ಟೇ ಅವರ ನಿರೀಕ್ಷೆ. ಆದ್ದರಿಂದ ಎಲ್ಲರೂ ಒಟ್ಟಾಗಿ ಯೋಧರೊಂದಿಗೆ ನಾವಿದ್ದೇವೆ ಎಂಬ ಸಂದೇಶವನ್ನು ಸಾರಬೇಕಿದೆ. ಹಾಗಾಗಿ ಕಾರ್ಗಿಲ್ ವಿಜಯ ದಿವಸದಂದು ನಾಗರಿಕ ಬಂಧುಗಳೆಲ್ಲರೂ ಜತೆಗೂಡಿ ಹಣತೆ ಹಚ್ಚಿ ಯೋಧರಿಗಾಗಿ ಪ್ರಾರ್ಥನೆ ಮಾಡಬೇಕಿದೆ ಎಂಬುದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ ಅವರ ಮಾತು.
ಹಣತೆ ಹಾಗೂ ಉರಿಸುವ ಬತ್ತಿಗಳನ್ನು ಆಯಾ ವ್ಯಕ್ತಿಗಳೇ ಸಿದ್ಧಪಡಿಸಿ ತರುವಂತೆ ಆಯೋಜಕರು ಮನವಿ ಮಾಡಿದ್ದಾರೆ. ಹಣತೆಗೆ ಬೇಕಾದ ಎಣ್ಣೆಯ ವ್ಯವಸ್ಥೆಯನ್ನು ಸ್ಥಳದಲ್ಲಿಯೇ ಉಚಿತವಾಗಿ ಕಲ್ಪಿಸಿಕೊಡಲಾಗುತ್ತದೆ. ಈ ಕಾರ್ಯಕ್ರಮದಲ್ಲಿ ಯಾವುದೇ ಭಾಷಣ, ಮಾತುಗಳಿರುವುದಿಲ್ಲ ಎಂಬುದು ಗಮನಾರ್ಹ.
ಸಭಾ ಕಾರ್ಯಕ್ರಮವೂ ಇರದೆ ಕೇವಲ ಯೋಧರನ್ನು ಗೌರವಿಸುವುದು, ನಮಿಸುವುದಷ್ಟೇ ಈ ಕಾರ್ಯಕ್ರಮದ ಉದ್ದೇಶವಾಗಿದೆ. ಬೆಳಗ್ಗೆ ೮ರಿಂದ ೧೦ರವರೆಗೆ ಹಣತೆ ಬೆಳಗಿ ಸೈನಿಕರಿಗೆ ಗೌರವ ಸಮರ್ಪಿಸುವುದಕ್ಕೆ ಸಾರ್ವಜನಿಕರಿಗೆ ಅವಕಾಶ ಇರುತ್ತದೆ.
ಈಗಾಗಲೇ ಜು 19ರಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳು, ಮಾಜಿ ಸೈನಿಕರ ಸಂಘ, ಅಮರ್ ಜವಾನ್ ಜ್ಯೋತಿ ಸಂರಕ್ಷಣಾ ಸಮಿತಿ ಅಲ್ಲದೆ ಅನ್ಯಾನ್ಯ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಪುತ್ತೂರಿನಲ್ಲಿ ಆಯೋಜನೆಗೊಂಡಿರುವ ಕಾರ್ಗಿಲ್ ವಿಜಯೋತ್ಸವದ ಇಪ್ಪತ್ತೆöÊದನೆಯ ವರ್ಷಾಚರಣೆ ಪುತ್ತೂರಿನ ಇತಿಹಾಸದಲ್ಲೇ ದಾಖಲೆಯ ಕಾರ್ಯಕ್ರಮವಾಗಿ ಮೂಡಿಬಂದಿತ್ತು. ಇದೀಗ ಮತ್ತೊಂದು ಐತಿಹಾಸಿಕ ಕಾರ್ಯಕ್ರಮ ದೀಪ ಬೆಳಗುವ ಮುಖೇನ ಸಾಕಾರಗೊಳ್ಳಲಿದೆ.
ಕಾರ್ಯಕ್ರಮಗಳು
Saptaka Foundation-ಬೆಂಗಳೂರಿನ ಸಪ್ತಕ ಸಂಸ್ಥೆ ವತಿಯಿಂದ ವಿಟ್ಲ ಬಸ್ ನಿಲ್ದಾಣದಲ್ಲಿ ಕುಡಿಯುವ ತಂಪು ನೀರಿನ ವ್ಯವಸ್ಥೆ ಉದ್ಘಾಟನೆ; ಅಳಿಕೆ ಸತ್ಯಸಾಯಿ ಆಸ್ಪತ್ರೆಗೆ ನೀರಿನ ಡಿಸ್ಪೆನ್ಸರ್ ಕೊಡುಗೆ
ಬೆಂಗಳೂರಿನ ಸಪ್ತಕ ಸಂಸ್ಥೆಯು ವಿಟ್ಲದಲ್ಲಿ ಇತ್ತೀಚೆಗೆ ತನ್ನ ಶಾಖೆಯನ್ನು ತೆರೆದ ಸುರತ್ಕಲ್‌ನ ಚಿರಂತನ ಚಾರಿಟೇಬಲ್ ಟ್ರಸ್ಟ್ ಮೂಲಕ ಪುತ್ತೂರು ರಸ್ತೆಯಲ್ಲಿರುವ ವಿಟ್ಲ ಪಟ್ಟಣ ಪಂಚಾಯತ್‌ನ ಬಸ್ ನಿಲ್ದಾಣದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಕುಡಿಯುವ ತಂಪು ನೀರಿನ ವ್ಯವಸ್ಥೆಯನ್ನು ಕಲ್ಪಿಸಿದೆ.

ವಿಟ್ಲ: ಬೆಂಗಳೂರಿನ ಸಪ್ತಕ ಸಂಸ್ಥೆಯು ವಿಟ್ಲದಲ್ಲಿ ಇತ್ತೀಚೆಗೆ ತನ್ನ ಶಾಖೆಯನ್ನು ತೆರೆದ ಸುರತ್ಕಲ್‌ನ ಚಿರಂತನ ಚಾರಿಟೇಬಲ್ ಟ್ರಸ್ಟ್ ಮೂಲಕ ಪುತ್ತೂರು ರಸ್ತೆಯಲ್ಲಿರುವ ವಿಟ್ಲ ಪಟ್ಟಣ ಪಂಚಾಯತ್‌ನ ಬಸ್ ನಿಲ್ದಾಣದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಕುಡಿಯುವ ತಂಪು ನೀರಿನ ವ್ಯವಸ್ಥೆಯನ್ನು ಕಲ್ಪಿಸಿದೆ.
ನೂತನ ವ್ಯವಸ್ಥೆಯನ್ನು ಸಪ್ತಕ ಸಂಸ್ಥೆಯ ಜಿ.ಎಸ್. ಹೆಗಡೆ ಅವರು ಉದ್ಘಾಟಿಸಿದರು. ಬಸ್ ನಿಲ್ದಾಣಕ್ಕೆ ಆಗಮಿಸುವ ಪ್ರಯಾಣಿಕರು ಹಾಗೂ ವಿಟ್ಲದ ಸಾರ್ವಜನಿಕರಿಗೆ ಈ ವ್ಯವಸ್ಥೆಯಿಂದ ಅನುಕೂಲವಾಗಲಿದೆ.
ಕಾರ್ಯಕ್ರಮದಲ್ಲಿ ಪಟ್ಟಣ ಪಂಚಾಯತ್‌ನ ಮಾಜಿ ಅಧ್ಯಕ್ಷರಾದ ರಮಾನಾಥ್ ವಿಟ್ಲ, ರಾಮದಾಸ್ ಶೆಣೈ, ರವೀಶ್ ವಿಟ್ಲ, ಅಶ್ರಫ್, ಚಿರಂತನದ ಭಾರವಿ ದೇರಾಜೆ ಹಾಗೂ ಶಿವಾನಂದ ರೈ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಅಳಿಕೆಯ ಸತ್ಯಸಾಯಿ ಆಸ್ಪತ್ರೆಗೆ ನೀರಿನ ಡಿಸ್ಪೆನ್ಸರ್ ಕೊಡುಗೆ
ಇದೇ ವೇಳೆ, ಬೆಂಗಳೂರಿನ ಸಪ್ತಕ ಸಂಸ್ಥೆಯ ವತಿಯಿಂದ ಚಿರಂತನ ಚಾರಿಟೇಬಲ್ ಟ್ರಸ್ಟ್ ಮೂಲಕ ಅಳಿಕೆಯ ಶ್ರೀ ಸತ್ಯ ಸಾಯಿ ಆಸ್ಪತ್ರೆಗೆ ಬಿಸಿ ನೀರು ಹಾಗೂ ತಂಪು ನೀರಿನ ಡಿಸ್ಪೆನ್ಸರ್‌ಗಳನ್ನು ಒದಗಿಸಲಾಗಿದೆ.
ಮಂಗಳೂರು
Mangalore Dasara-ಮಂಗಳೂರು ದಸರಾಕ್ಕೆ ಚಾಲನೆ: ಸಿಎಂ ಆಗಮನ ಮುಂದೂಡಿಕೆ
ಪ್ರಸಿದ್ಧ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಮಂಗಳೂರು ದಸರಾ ಮಹೋತ್ಸವಕ್ಕೆ ರವಿವಾರ ವಿಧ್ಯುಕ್ತ ಚಾಲನೆ ದೊರೆಯಿತು. ಕ್ಷೇತ್ರದ ಅಭಿವೃದ್ಧಿಯ ರೂವಾರಿ, ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ದರ್ಬಾರು ಮಂಟಪದಲ್ಲಿ ವಿವಿಧ ದೇವಿ ವಿಗ್ರಹಗಳನ್ನು ಪ್ರತಿಷ್ಠಾಪಿಸುವ ಮೂಲಕ ನವರಾತ್ರಿ ಮಹೋತ್ಸವಕ್ಕೆ ಚಾಲನೆ ನೀಡಲಾಯಿತು.
ಮಂಗಳೂರು: ಪ್ರಸಿದ್ಧ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಮಂಗಳೂರು ದಸರಾ ಮಹೋತ್ಸವಕ್ಕೆ ರವಿವಾರ ವಿಧ್ಯುಕ್ತ ಚಾಲನೆ ದೊರೆಯಿತು. ಕ್ಷೇತ್ರದ ಅಭಿವೃದ್ಧಿಯ ರೂವಾರಿ, ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ದರ್ಬಾರು ಮಂಟಪದಲ್ಲಿ ವಿವಿಧ ದೇವಿ ವಿಗ್ರಹಗಳನ್ನು ಪ್ರತಿಷ್ಠಾಪಿಸುವ ಮೂಲಕ ನವರಾತ್ರಿ ಮಹೋತ್ಸವಕ್ಕೆ ಚಾಲನೆ ನೀಡಲಾಯಿತು.
ಬೆಳಗ್ಗೆ ಗುರುಪ್ರಾರ್ಥನೆ, ಪುಣ್ಯಾಹ ಹೋಮ ಹಾಗೂ ನವಕಲಶಾಭಿಷೇಕ ನೆರವೇರಿತು. ಮಧ್ಯಾಹ್ನ 12 ಗಂಟೆಯ ಸುಮಾರಿಗೆ ಶ್ರೀ ಮಹಾಗಣಪತಿ, ಶ್ರೀ ಶಾರದಾ ಮಾತೆ, ಆದಿಶಕ್ತಿ ಹಾಗೂ ಸ್ಕಂದಮಾತೆ, ಕಾತ್ಯಾಯಿನಿ, ಮಹಾಕಾಳಿ, ಮಹಾಗೌರಿ, ಸಿದ್ಧಿಧಾತ್ರಿ, ಶೈಲಪುತ್ರಿ, ಬ್ರಹ್ಮಚಾರಿಣಿ, ಚಂದ್ರಘಂಟಾ ಮತ್ತು ಕೂಷ್ಮಾಂಡಿನಿ ದೇವಿಯರ ವಿಗ್ರಹಗಳನ್ನು ಪ್ರತಿಷ್ಠಾಪಿಸಲಾಯಿತು.
ರವಿವಾರದ ರಜೆಯ ಹಿನ್ನೆಲೆಯಲ್ಲಿ ಸಾವಿರಾರು ಭಕ್ತರು ಕ್ಷೇತ್ರಕ್ಕೆ ಭೇಟಿ ನೀಡಿ ದೇವಿಯರ ವಿಗ್ರಹಗಳ ಪ್ರತಿಷ್ಠಾಪನೆಯ ಅಪೂರ್ವ ಕ್ಷಣಕ್ಕೆ ಸಾಕ್ಷಿಯಾದರು.
ಶಾಸಕ ವೇದವ್ಯಾಸ ಕಾಮತ್, ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಹಾಗೂ ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಕುದ್ರೋಳಿ ಕ್ಷೇತ್ರದ ಅಧ್ಯಕ್ಷ ಜೈರಾಜ್ ಎಚ್. ಸೋಮಸುಂದರಂ, ಉಪಾಧ್ಯಕ್ಷೆ ಊರ್ಮಿಳಾ ರಮೇಶ್, ಕಾರ್ಯದರ್ಶಿ ಬಿ. ಮಾಧವ ಸುವರ್ಣ, ಕ್ಷೇತ್ರಾಡಳಿತ ಮಂಡಳಿಯ ಟ್ರಸ್ಟಿಗಳು, ಕ್ಷೇತ್ರ ಅಭಿವೃದ್ಧಿ ಸಮಿತಿಯ ಪದಾಧಿಕಾರಿಗಳು ಹಾಗೂ ಹಲವು ಗಣ್ಯರು ಉಪಸ್ಥಿತರಿದ್ದರು.
ಈ ಬಾರಿ ಮಹಿಳಾ ದಸರಾ ವಿಶೇಷ ಆಕರ್ಷಣೆ
ಕ್ಷೇತ್ರದ ಖಜಾಂಚಿ ಪದ್ಮರಾಜ್ ಆರ್. ಪೂಜಾರಿ ಮಾಧ್ಯಮದವರೊಂದಿಗೆ ಮಾತನಾಡಿ, ಬಿ. ಜನಾರ್ದನ ಪೂಜಾರಿ ಅವರ ನೇತೃತ್ವದಲ್ಲಿ ಆಡಳಿತ ಮಂಡಳಿ ಹಾಗೂ ಅಭಿವೃದ್ಧಿ ಸಮಿತಿಯ ಸಹಯೋಗದೊಂದಿಗೆ ಈ ಬಾರಿಯ ಮಂಗಳೂರು ದಸರಾ ನಡೆಯುತ್ತಿದೆ ಎಂದು ತಿಳಿಸಿದರು.
ಕಳೆದ ವರ್ಷ ಆರಂಭಿಸಿದ್ದ ಮಕ್ಕಳ ದಸರಾ ಮತ್ತು ಕಿನ್ನಿಪಿಲಿ ಕಾರ್ಯಕ್ರಮಗಳನ್ನು ಈ ಬಾರಿಯೂ ಮುಂದುವರಿಸಲಾಗುವುದು. ಇದೇ ಮೊದಲ ಬಾರಿಗೆ ಮಹಿಳಾ ದಸರಾ ಆಯೋಜಿಸಲಾಗುತ್ತಿದ್ದು, ಮಹಿಳೆಯರಿಗಾಗಿ ವಿವಿಧ ಸ್ಪರ್ಧೆಗಳು ಹಾಗೂ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
ಭಕ್ತರ ಬೇಡಿಕೆಯಂತೆ ಅಕ್ಟೋಬರ್ 20ರಂದು ಅಕ್ಷರಾಭ್ಯಾಸ ಕಾರ್ಯಕ್ರಮವನ್ನೂ ಆಯೋಜಿಸಲಾಗಿದೆ. ಈ ಬಾರಿ ಕ್ಷೇತ್ರಕ್ಕೆ ಭೇಟಿ ನೀಡುವ ಭಕ್ತರ ಸಂಖ್ಯೆ ಶೇ. 25ರಿಂದ 30ರಷ್ಟು ಹೆಚ್ಚಾಗುವ ನಿರೀಕ್ಷೆಯಿದ್ದು, ವ್ಯವಸ್ಥಿತ ನಿರ್ವಹಣೆಗಾಗಿ ಒಂದು ಸಾವಿರಕ್ಕೂ ಹೆಚ್ಚು ಸ್ವಯಂಸೇವಕರನ್ನು ನಿಯೋಜಿಸಲಾಗಿದೆ ಎಂದು ತಿಳಿಸಿದರು.
ಮುಖ್ಯಮಂತ್ರಿ ಆಗಮನ ಮುಂದೂಡಿಕೆ
ಸೋಮವಾರ ಸಂಜೆ 6.30ಕ್ಕೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮಂಗಳೂರು ದಸರಾ ಮಹೋತ್ಸವವನ್ನು ಉದ್ಘಾಟಿಸಬೇಕಿತ್ತು. ಆದರೆ ತುರ್ತು ಕಾರಣದಿಂದ ದೆಹಲಿಗೆ ತೆರಳಬೇಕಾದ ಹಿನ್ನೆಲೆಯಲ್ಲಿ ಅವರ ಪ್ರವಾಸ ರದ್ದಾಗಿದೆ. ಅಕ್ಟೋಬರ್ 15 ಅಥವಾ 16ರಂದು ಮುಖ್ಯಮಂತ್ರಿ ಕ್ಷೇತ್ರಕ್ಕೆ ಭೇಟಿ ನೀಡುವ ನಿರೀಕ್ಷೆಯಿದೆ ಎಂದು ಪದ್ಮರಾಜ್ ಆರ್. ಪೂಜಾರಿ ತಿಳಿಸಿದರು.
ಮಂಗಳೂರು
Mangaluru-ಬೆಳೆ ವಿಮೆ ಅನ್ಯಾಯ ಆರೋಪ: ಅ.9ರಂದು ಮಂಗಳೂರಿನಲ್ಲಿ ರೈತರ ಬೃಹತ್ ಹಕ್ಕೊತ್ತಾಯ | ಸಹಕಾರ ಭಾರತಿ – ಬಿಜೆಪಿ ಬೆಂಬಲ
ಬೆಳೆ ವಿಮೆ ಪಾವತಿಯಲ್ಲಿ ರೈತರಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿ ಸಹಕಾರ ಭಾರತಿ ಹಾಗೂ ಬಿಜೆಪಿ ನೇತೃತ್ವದಲ್ಲಿ ಅ.9ರಂದು ಮಂಗಳೂರಿನಲ್ಲಿ ಬೃಹತ್ ಹಕ್ಕೊತ್ತಾಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮಂಗಳೂರಿನ ಟೌನ್‌ಹಾಲ್‌ನಲ್ಲಿ ಶುಕ್ರವಾರ ಬೆಳಗ್ಗೆ 10.30ಕ್ಕೆ ಕಾರ್ಯಕ್ರಮ ನಡೆಯಲಿದೆ.
ಮಂಗಳೂರು: ಬೆಳೆ ವಿಮೆ ಪಾವತಿಯಲ್ಲಿ ರೈತರಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿ ಸಹಕಾರ ಭಾರತಿ ಹಾಗೂ ಬಿಜೆಪಿ ನೇತೃತ್ವದಲ್ಲಿ ಅ.9ರಂದು ಮಂಗಳೂರಿನಲ್ಲಿ ಬೃಹತ್ ಹಕ್ಕೊತ್ತಾಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಮಂಗಳೂರಿನ ಟೌನ್‌ಹಾಲ್‌ನಲ್ಲಿ ಶುಕ್ರವಾರ ಬೆಳಗ್ಗೆ 10.30ಕ್ಕೆ ಕಾರ್ಯಕ್ರಮ ನಡೆಯಲಿದೆ. ಬೆಳೆ ವಿಮೆ ಯೋಜನೆಯಡಿ ರೈತರಿಗೆ ಸೂಕ್ತ ಪರಿಹಾರ ದೊರೆಯದಿರುವುದು ಸೇರಿದಂತೆ ವಿಮೆ ಪಾವತಿಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಸಭೆಯಲ್ಲಿ ಧ್ವನಿ ಎತ್ತಲಾಗುತ್ತದೆ.
ಬೆಳೆ ವಿಮೆ ಯೋಜನೆಯಡಿ ರೈತರಿಗೆ ನ್ಯಾಯಯುತ ಪರಿಹಾರ ದೊರೆಯಬೇಕು ಹಾಗೂ ವಿಮೆ ಪಾವತಿಯಲ್ಲಿ ಉಂಟಾಗಿರುವ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಕಲ್ಪಿಸಬೇಕು ಎಂಬುದು ಪ್ರಮುಖ ಬೇಡಿಕೆಯಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಸದಸ್ಯರು ಸೇರಿದಂತೆ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಬೆಳೆ ವಿಮೆಯಲ್ಲಿ ಆಗಿರುವ ಅನ್ಯಾಯದ ವಿರುದ್ಧ ಒಗ್ಗಟ್ಟಿನಿಂದ ಹಕ್ಕೊತ್ತಾಯ ಮಂಡಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ.
-
ನಿಧನ ವಾರ್ತೆ13 hours agoSullia-Big Breaking: ಸುಳ್ಯ: ವಿದ್ಯುತ್ ಶಾಕ್ಗೆ ಇಬ್ಬರು ಯುವಕರು ಬಲಿ; ಬಾಲಕನಿಗೆ ಗಾಯ
-
ಸ್ಥಳೀಯ12 hours agoArrested-1,000 ಅಡಿ ಆಳದ ಪ್ರಪಾತದಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ಶವ ಪತ್ತೆ; ಆತ್ಮಹತ್ಯೆ ಕತೆ ಕಟ್ಟಿದ ಪ್ರಿಯಕರ ಅರೆಸ್ಟ್..!
-
ನಿಧನ ವಾರ್ತೆ7 hours agoKalmadka-ಸುಳ್ಯ ಕಲ್ಮಡ್ಕದಲ್ಲಿ ದುರಂತ: ವಿದ್ಯುತ್ ಸ್ಪರ್ಶಿಸಿ ಮೀನು ಹಿಡಿಯಲು ಹೋದ ಬಾವ–ಬಾಮೈದ ಸಾವು
-
ಮಂಗಳೂರು10 hours agoSoujanya Case-BIG BREAKING NEWS: ಸೌಜನ್ಯ ಪ್ರಕರಣ: ಮಂಗಳೂರಿನಲ್ಲಿ ಎಸ್ಐಟಿ ಮಹತ್ವದ ಸಭೆ; ಸೌಜನ್ಯ ದೇಹ ಸಿಕ್ಕ ಸ್ಥಳಕ್ಕೆ ಭೇಟಿ ಸಾಧ್ಯತೆ
-
ಸ್ಥಳೀಯ13 hours agoSatish Patri-ಚಿಕ್ಕಮಗಳೂರು: ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ಅತ್ಯಾಚಾರ ಆರೋಪ; ತಲೆಮರೆಸಿಕೊಂಡಿದ್ದ ಅರ್ಚಕ ಸತೀಶ್ ಪಾತ್ರಿ ಅರೆಸ್ಟ್..!
-
ಬಿಗ್ ನ್ಯೂಸ್7 hours agoVitla-ವಿಟ್ಲ: ಕಾರು–ಆಕ್ಟಿವಾ ಡಿಕ್ಕಿ; ಸವಾರನಿಗೆ ಗಂಭೀರ ಗಾಯ
-
ಶಿಕ್ಷಣ7 hours agoVivekananda-ಪುತ್ತೂರಿನ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಇಬ್ಬರು ಉಪನ್ಯಾಸಕರಿಗೆ ಡಾಕ್ಟರೇಟ್ ಪದವಿ
-
ರಾಜಕೀಯ12 hours agoSudha Yadav-ಆರು ರಾಜ್ಯಗಳಿಗೆ ರಾಜ್ಯಪಾಲರ ಬದಲಾವಣೆ: ಕರ್ನಾಟಕಕ್ಕೆ ನೂತನ ರಾಜ್ಯಪಾಲರಾಗಿ ಸುಧಾ ಯಾದವ್




















