ಕ್ರೀಡೆ
Yuvraj Singh-IPLಗೆ ಮರಳಲು ಯುವರಾಜ್ ಸಿಂಗ್ ಭರ್ಜರಿ ತಯಾರಿ; ಅಭಿಮಾನಿಗಳ ಈ ಫೆವರೆಟ್ ತಂಡ ಸೇರಲಿದ್ದಾರಂತೆ ಯುವಿ!
ನಿಖರ ನ್ಯೂಸ್ ; ಪ್ರತೀ ಸೀಸನಲ್ ನಲ್ಲೂ ಸಾವಿರಾರು ಕೋಟಿ ವಹಿವಾಟು ನಡೆಸುವ, ಪ್ರತಿಭಾನ್ವಿತ ಕ್ರಿಕೆಟಿಗರಿಗೆ ವೇದಿಕೆಯಾಗಿರುವ, ಜಗತ್ತಿನ ಶ್ರೀಮಂತ ಕ್ರಿಕೆಟ್ ಲೀಗ ಐಪಿಎಲ್ ನಲ್ಲಿ ಮತ್ತೆ ಆರ್ಭಟಿಸಲು ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಭರ್ಜರಿ ತಯಾರಿ ನಡೆಸುತ್ತಿದ್ದಾರೆ. ಇತ್ತೀಚೆಗಷ್ಟೇ ಯುವಿ ಲೆಜೆಂಡ್ಸ್ ಟ್ರೋಫಿಯಲ್ಲಿ ಅತ್ಯದ್ಭುತ ಪ್ರದರ್ಶನ ನೀಡಿ ತಂಡದ ಗೆಲುವಿಗೆ ಪ್ರಮುಖ ಪಾತ್ರ ವಹಿಸಿದ ಬಳಿಕ ಈ ಮಾತು ಬಲು ಜೋರಾಗಿ ಕೇಳಲಾರಂಭಿಸಿದೆ.ಹಾಗಿದ್ರೇ ಟೀಂ ಇಂಡಿಯಾದ ಹಳೆಯ ಹುಲಿ, ಸಿಕ್ಸರ್ ಕಿಂಗ್ ಮುಂಬರುವ 2025ರ ಐಪಿಎಲ್ ನಲ್ಲಿ ಯಾವ ತಂಡದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಗೊತ್ತಾ? ಈ ವರದಿ ಓದಿ.

ಗುಜರಾತ್ ಟೈಟನ್ಸ್ ಗೆ ಯುವಿ ಸಾರಥ್ಯ!
ಸಧ್ಯದ ಐಪಿಎಲ್ ಮೂಲಗಳ ಪ್ರಕಾರ, ಗುಜರಾತ್ ಟೈಟನ್ಸ್ ತಂಡದ ಕೋಚ್ ಆಗಿರುವ ಆಶಿಶ್ ನೆಹ್ರಾ ಹಾಗೂ ನಿರ್ದೇಶಕ ವಿಕ್ರಮ್ ಸೋಲಂಕಿ ಮುಂಬರುವ 2025ರ ಐಪಿಎಲ್ ಗೂ ಮುನ್ನ ತಂಡವನ್ನು ತೊರೆಯಲಿದ್ದಾರೆ ಎನ್ನಲಾಗಿದೆ. ಹೀಗಾಗಿ ತೆರವಾದ ಸ್ಥಾನಕ್ಕೆ ಗುಜರಾತ್ ಟೈಟನ್ಸ್ ಮ್ಯಾನೆಜ್ಮೆಂಟ್ ಟೀಂ ಇಂಡಿಯಾದ ಮಾಜಿ ಸ್ಪೋಟಕ ಬ್ಯಾಟರ್ ಯುವರಾಜ್ ಸಿಂಗ್ ಅವರನ್ನು ಸಂಪರ್ಕಿಸುತ್ತಿದೆ ಎನ್ನಲಾಗಿದೆ.
ಯುವಿ IPL ಇತಿಹಾಸ!
ಕ್ರಿಕೆಟ್ ಜಗತ್ತಿನಲ್ಲಿ ವಿಶ್ವದಾದ್ಯಂತ ಪ್ರಚಂಡ ಪ್ರದರ್ಶನ ತೋರುತ್ತಿದ್ದ ಯುವರಾಜ್ ಟೀಂ ಇಂಡಿಯಾ ಗೆದ್ದಿರುವ ಎರಡು ವಿಶ್ವಕಪ್ ನಲ್ಲೂ ಪ್ರಮುಖ ಪಾತ್ರ ವಹಿಸಿದ್ದರು. ಇದಿಷ್ಟೇ ಅಲ್ಲದೇ, ಐಪಿಎಲ್ನಲ್ಲಿ 132 ಪಂದ್ಯಗಳನ್ನಾಡಿರುವ ಯುವರಾಜ್ 2750 ರನ್ ಗಳಿಸಿದ್ದಾರೆ. ಇದಲರಲ್ಲಿ 13 ಅರ್ಧಶತಕಗಳೂ ಸೇರಿವೆ. ಯುವರಾಜ್ ಪಂಜಾಬ್, ಹೈದರಾಬಾದ್, ಪುಣೆ ವಾರಿಯರ್ಸ್, ಆರ್ಸಿಬಿ, ಮುಂಬೈ ಇಂಡಿಯನ್ಸ್ ತಂಡಗಳ ಪರ ಬ್ಯಾಟ್ ಬೀಸಿದ್ದಾರೆ.
ಯುವಿಗೆ ಸಿಗಲಿರುವ ಸಂಭಾವನೆ ಎಷ್ಟು ಗೊತ್ತಾ?
ಪ್ರತೀ ಸೀಸನ್ನಲ್ಲೂ ಗುಜರಾಟ್ ಟೈಟಾನ್ಸ್ ತಂಡದ ಪ್ರಮುಖ ಕೋಚ್ ಆಶಿಶ್ ನೆಹ್ರಾಗೆ 3.5 ಕೋಟಿ ಸಂಭಾವನೆ ನೀಡುತ್ತಿದೆ. ಆದರೆ ಮುಂದೆ ಯುವರಾಜ್ ಟೈಟಾನ್ಸ್ ಕೈ ಹಿಡಿದರೆ ಈ ವೇತನ ಗಾತ್ರ ದುಪ್ಪಟ್ಟಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಕ್ರಿಕಟ್ ಅನುಭವ, ದಾಖಲೆಗಳು ಯುವರಾಜ್ ಸಿಂಗ್ ಅವರಿಗೆ ಹೆಚ್ಚಿರುವ ಕಾರಣ ಸಹಜವಾಗಿಯೇ ಯುವಿ ಕೋಚ್ ಆದರೆ ಕೋಟಿ ಕೋಟಿ ಬಾಚಿಕೊಳ್ಳಲಿದ್ದಾರೆ.
ಕ್ರೀಡೆ
Vivekananda-ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಭುವನ್ರಾಮ್ ಭಾರ ಎತ್ತುವ ಸ್ಪರ್ಧೆಯಲ್ಲಿ ವಿಟಿಯು ತಂಡಕ್ಕೆ ಆಯ್ಕೆ
ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಭುವನ್ರಾಮ್ ಜಗದೀಶ್ ಭಂಡಾರಿ ಇವರು ಅಖಿಲ ಭಾರತ ದಕ್ಷಿಣ ವಲಯ ಅಂತರ್ ವಿಶ್ವವಿದ್ಯಾನಿಲಯ ಭಾರ ಎತ್ತುವ ಸ್ಪರ್ಧೆಯಲ್ಲಿ 75 ಕೆಜಿ ವಿಭಾಗದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ತಂಡಕ್ಕೆ ಆಯ್ಕೆಯಾಗಿದ್ದಾರೆ.
ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಭುವನ್ರಾಮ್ ಜಗದೀಶ್ ಭಂಡಾರಿ ಇವರು ಅಖಿಲ ಭಾರತ ದಕ್ಷಿಣ ವಲಯ ಅಂತರ್ ವಿಶ್ವವಿದ್ಯಾನಿಲಯ ಭಾರ ಎತ್ತುವ ಸ್ಪರ್ಧೆಯಲ್ಲಿ 75 ಕೆಜಿ ವಿಭಾಗದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ತಂಡಕ್ಕೆ ಆಯ್ಕೆಯಾಗಿದ್ದಾರೆ.
ಅಂತಿಮ ವರ್ಷದ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಯಾಗಿರುವ ಇವರು ಚೆನ್ನೈನ ವಿನಾಯಕ ಮಿಶನ್ಸ್ ರೀಸರ್ಚ್ ಫೌಂಡೇಶನ್ ಆಶ್ರಯದಲ್ಲಿ ನವೆಂಬರ್ 21 ರಿಂದ 23 ರವರೆಗೆ ನಡೆಯುವ ಈ ಸ್ಪರ್ಧೆಯಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸಲಿದ್ದಾರೆ.
ಇವರಿಗೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಭಾರ್ತಿಕುಮೇರು ಮಾರ್ಗದರ್ಶನವನ್ನು ನೀಡಿದ್ದಾರೆ ಎಂದು ಪ್ರಾಂಶುಪಾಲ ಡಾ.ಪುರುಷೋತ್ತಮ ಚಿಪ್ಪಾರ್ ತಿಳಿಸಿದ್ದಾರೆ.
ಕ್ರೀಡೆ
IPL 2027-ಐಪಿಎಲ್ 2027 ಮಿನಿ ಹರಾಜು ಡಿ.16ಕ್ಕೆ ಫಿಕ್ಸ್: ಆರ್ಸಿಬಿ ಸೇರಿ 10 ತಂಡಗಳ ಪರ್ಸ್ ವಿವರ ಇಲ್ಲಿದೆ..
ಐಪಿಎಲ್ 2027ರ ಮಿನಿ ಹರಾಜಿಗೆ ಸಿದ್ಧತೆಗಳು ಪೂರ್ಣಗೊಂಡಿದ್ದು, ಎಲ್ಲಾ 10 ಫ್ರಾಂಚೈಸಿಗಳು ತಾವು ಉಳಿಸಿಕೊಂಡಿರುವ ಹಾಗೂ ಬಿಡುಗಡೆ ಮಾಡಿರುವ ಆಟಗಾರರ ಅಂತಿಮ ಪಟ್ಟಿಯನ್ನು ನವೆಂಬರ್ 17ರ ಗಡುವಿನೊಳಗೆ ಬಿಸಿಸಿಐಗೆ ಸಲ್ಲಿಸಿವೆ. ಕಳೆದ ಕೆಲವು ತಿಂಗಳುಗಳಿಂದ ನಡೆಯುತ್ತಿದ್ದ ಆಟಗಾರರ ರಿಟೆನ್ಷನ್ ಮತ್ತು ಟ್ರೇಡಿಂಗ್ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಇದೀಗ ಹರಾಜಿನಲ್ಲಿ ಯಾವ ತಂಡದ ಬಳಿ ಎಷ್ಟು ಹಣ ಉಳಿದಿದೆ ಮತ್ತು ಎಷ್ಟು ಆಟಗಾರರನ್ನು ಖರೀದಿಸಲು ಅವಕಾಶವಿದೆ ಎಂಬ ಲೆಕ್ಕಾಚಾರ ಬಹಿರಂಗವಾಗಿದೆ.
ಬೆಂಗಳೂರು, ನ.18: ಐಪಿಎಲ್ 2027ರ ಮಿನಿ ಹರಾಜಿಗೆ ಸಿದ್ಧತೆಗಳು ಪೂರ್ಣಗೊಂಡಿದ್ದು, ಎಲ್ಲಾ 10 ಫ್ರಾಂಚೈಸಿಗಳು ತಾವು ಉಳಿಸಿಕೊಂಡಿರುವ ಹಾಗೂ ಬಿಡುಗಡೆ ಮಾಡಿರುವ ಆಟಗಾರರ ಅಂತಿಮ ಪಟ್ಟಿಯನ್ನು ನವೆಂಬರ್ 17ರ ಗಡುವಿನೊಳಗೆ ಬಿಸಿಸಿಐಗೆ ಸಲ್ಲಿಸಿವೆ. ಕಳೆದ ಕೆಲವು ತಿಂಗಳುಗಳಿಂದ ನಡೆಯುತ್ತಿದ್ದ ಆಟಗಾರರ ರಿಟೆನ್ಷನ್ ಮತ್ತು ಟ್ರೇಡಿಂಗ್ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಇದೀಗ ಹರಾಜಿನಲ್ಲಿ ಯಾವ ತಂಡದ ಬಳಿ ಎಷ್ಟು ಹಣ ಉಳಿದಿದೆ ಮತ್ತು ಎಷ್ಟು ಆಟಗಾರರನ್ನು ಖರೀದಿಸಲು ಅವಕಾಶವಿದೆ ಎಂಬ ಲೆಕ್ಕಾಚಾರ ಬಹಿರಂಗವಾಗಿದೆ.
ಲಕ್ನೋ ಸೂಪರ್ ಜೈಂಟ್ಸ್ ಬಳಿ ಅತಿ ಹೆಚ್ಚು ಹಣ!
ಐಪಿಎಲ್ 2027ರ ಮಿನಿ ಹರಾಜಿನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡ ಅತಿ ಹೆಚ್ಚು ಹಣದೊಂದಿಗೆ ಕಣಕ್ಕಿಳಿಯಲಿದೆ. ಆಟಗಾರರನ್ನು ಉಳಿಸಿಕೊಂಡ ಬಳಿಕ ತಂಡದ ಪರ್ಸ್ನಲ್ಲಿ ಬರೋಬ್ಬರಿ ₹47.45 ಕೋಟಿ ಉಳಿದಿದೆ.
ಕೋಲ್ಕತ್ತಾ ನೈಟ್ ರೈಡರ್ಸ್ ₹41.65 ಕೋಟಿ ಹಾಗೂ ಸನ್ರೈಸರ್ಸ್ ಹೈದರಾಬಾದ್ ₹40.15 ಕೋಟಿ ಹಣದೊಂದಿಗೆ ನಂತರದ ಸ್ಥಾನಗಳಲ್ಲಿವೆ. ಡೆಲ್ಲಿ ಕ್ಯಾಪಿಟಲ್ಸ್ ಬಳಿ ₹39.50 ಕೋಟಿ ಹಾಗೂ ಮುಂಬೈ ಇಂಡಿಯನ್ಸ್ ಬಳಿ ₹32.60 ಕೋಟಿ ಹಣವಿದೆ.
ಇನ್ನೊಂದೆಡೆ, ಗುಜರಾತ್ ಟೈಟಾನ್ಸ್ ತಂಡದ ಬಳಿ ಕೇವಲ ₹8.75 ಕೋಟಿ ಮಾತ್ರ ಉಳಿದಿದ್ದು, 10 ತಂಡಗಳ ಪೈಕಿ ಅತ್ಯಂತ ಕಡಿಮೆ ಮೊತ್ತ ಹೊಂದಿರುವ ತಂಡವಾಗಿದೆ.
ಡೆಲ್ಲಿ, ಮುಂಬೈಗೆ ಹೆಚ್ಚು ಆಟಗಾರರ ಖರೀದಿ ಅವಕಾಶ
ಖಾಲಿ ಇರುವ ಆಟಗಾರರ ಸ್ಥಾನಗಳ ಲೆಕ್ಕಾಚಾರದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಮುಂಚೂಣಿಯಲ್ಲಿವೆ. ಈ ಎರಡೂ ತಂಡಗಳು ತಲಾ 9 ಆಟಗಾರರನ್ನು ಖರೀದಿಸಲು ಅವಕಾಶ ಹೊಂದಿವೆ.
ಕೋಲ್ಕತ್ತಾ ನೈಟ್ ರೈಡರ್ಸ್ 8, ಲಕ್ನೋ ಸೂಪರ್ ಜೈಂಟ್ಸ್ ಮತ್ತು ಸನ್ರೈಸರ್ಸ್ ಹೈದರಾಬಾದ್ ತಲಾ 7 ಆಟಗಾರರನ್ನು ಖರೀದಿಸಬಹುದು. ಚೆನ್ನೈ ಸೂಪರ್ ಕಿಂಗ್ಸ್, ರಾಜಸ್ಥಾನ್ ರಾಯಲ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳಲ್ಲಿ ತಲಾ 6 ಸ್ಥಾನಗಳು ಖಾಲಿಯಿವೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ 6 ಆಟಗಾರರನ್ನು ಖರೀದಿಸುವ ಅವಕಾಶವಿದ್ದು, ಗುಜರಾತ್ ಟೈಟಾನ್ಸ್ ತಂಡದಲ್ಲಿ ಕೇವಲ 3 ಸ್ಥಾನಗಳು ಮಾತ್ರ ಖಾಲಿಯಿವೆ.
10 ತಂಡಗಳ ಪರ್ಸ್ ಮೊತ್ತ ಮತ್ತು ಖಾಲಿ ಸ್ಥಾನಗಳ ವಿವರ
ತಂಡ ಉಳಿದ ಹಣ ಖಾಲಿ ಸ್ಥಾನ ವಿದೇಶಿ ಆಟಗಾರರ ಸ್ಥಾನ
ಲಕ್ನೋ ಸೂಪರ್ ಜೈಂಟ್ಸ್ ₹47.45 ಕೋಟಿ 7 3
ಕೋಲ್ಕತ್ತಾ ನೈಟ್ ರೈಡರ್ಸ್ ₹41.65 ಕೋಟಿ 8 3
ಸನ್ರೈಸರ್ಸ್ ಹೈದರಾಬಾದ್ ₹40.15 ಕೋಟಿ 7 3
ಡೆಲ್ಲಿ ಕ್ಯಾಪಿಟಲ್ಸ್ ₹39.50 ಕೋಟಿ 9 4
ಮುಂಬೈ ಇಂಡಿಯನ್ಸ್ ₹32.60 ಕೋಟಿ 9 2
ಚೆನ್ನೈ ಸೂಪರ್ ಕಿಂಗ್ಸ್ ₹28.05 ಕೋಟಿ 6 2
ರಾಜಸ್ಥಾನ್ ರಾಯಲ್ಸ್ ₹27.05 ಕೋಟಿ 6 2
ಪಂಜಾಬ್ ಕಿಂಗ್ಸ್ ₹18.60 ಕೋಟಿ 6 2
ರಾಯಲ್ ಚಾಲೆಂಜರ್ಸ್ ಬೆಂಗಳೂರು ₹14.15 ಕೋಟಿ 6 1
ಗುಜರಾತ್ ಟೈಟಾನ್ಸ್ ₹8.75 ಕೋಟಿ 3 2
ಡಿಸೆಂಬರ್ 16ರಂದು ಗೋವಾದಲ್ಲಿ ಮಿನಿ ಹರಾಜು
ಐಪಿಎಲ್ 2027ರ ಮಿನಿ ಹರಾಜು ಡಿಸೆಂಬರ್ 16, 2026ರಂದು ಗೋವಾದಲ್ಲಿ ನಡೆಯಲಿದೆ. ಈ ಹರಾಜಿನಲ್ಲಿ ಎಲ್ಲಾ 10 ತಂಡಗಳು ತಮ್ಮ ತಂಡಕ್ಕೆ ಅಗತ್ಯವಿರುವ ಆಟಗಾರರನ್ನು ಖರೀದಿಸಲು ಪೈಪೋಟಿ ನಡೆಸಲಿವೆ.
2025ರಿಂದ 2027ರವರೆಗಿನ ಮೂರು ವರ್ಷಗಳ ಅವಧಿಯ ಆರಂಭದಲ್ಲಿ ಪ್ರತಿ ತಂಡಕ್ಕೆ ಆಟಗಾರರ ಖರೀದಿಗಾಗಿ ₹120 ಕೋಟಿ ಪರ್ಸ್ ನಿಗದಿಪಡಿಸಲಾಗಿತ್ತು. ನಿಯಮದ ಪ್ರಕಾರ ಪ್ರತಿ ಮಿನಿ ಹರಾಜಿಗೂ ಮುನ್ನ ಈ ಮೊತ್ತಕ್ಕೆ ಹೆಚ್ಚುವರಿಯಾಗಿ ₹5 ಕೋಟಿ ಸೇರ್ಪಡೆಯಾಗುತ್ತದೆ. ಹೀಗಾಗಿ 2027ರ ಮಿನಿ ಹರಾಜಿನಲ್ಲಿ ಪ್ರತಿ ತಂಡದ ಒಟ್ಟು ಪರ್ಸ್ ಮೊತ್ತ ₹130 ಕೋಟಿಗೆ ಏರಿಕೆಯಾಗಲಿದೆ.
ಡಿಸೆಂಬರ್ 16ರಂದು ನಡೆಯಲಿರುವ ಹರಾಜಿನಲ್ಲಿ ಯಾವ ತಂಡ ಯಾವ ಸ್ಟಾರ್ ಆಟಗಾರರನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳಲಿದೆ ಮತ್ತು ಯಾವ ತಂಡ ಬಲಿಷ್ಠ ಪಡೆಯನ್ನು ಕಟ್ಟಲಿದೆ ಎಂಬ ಕುತೂಹಲ ಕ್ರಿಕೆಟ್ ಅಭಿಮಾನಿಗಳಲ್ಲಿ ಮನೆಮಾಡಿದೆ.
ಅಂತರ ರಾಜ್ಯ
Mohammed Shami: ಟೆಸ್ಟ್ ಕ್ರಿಕೆಟ್ಗೆ ವಿದಾಯ ಹೇಳಿದ ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ
ಟೀಂ ಇಂಡಿಯಾದ ಅನುಭವಿ ವೇಗದ ಬೌಲರ್ ಮೊಹಮ್ಮದ್ ಶಮಿ ಟೆಸ್ಟ್ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ. ಸದ್ಯ ಭಾರತ ತಂಡದಲ್ಲಿ ಸ್ಥಾನ ಪಡೆಯದಿರುವ ಶಮಿ, ಶುಕ್ರವಾರ ಇನ್ಸ್ಟಾಗ್ರಾಂನಲ್ಲಿ ಭಾವನಾತ್ಮಕ ಸಂದೇಶವೊಂದನ್ನು ಹಂಚಿಕೊಳ್ಳುವ ಮೂಲಕ ತಮ್ಮ ಟೆಸ್ಟ್ ಕ್ರಿಕೆಟ್ ಪಯಣಕ್ಕೆ ತೆರೆ ಎಳೆದಿದ್ದಾರೆ.
ಹೊಸದಿಲ್ಲಿ: ಟೀಂ ಇಂಡಿಯಾದ ಅನುಭವಿ ವೇಗದ ಬೌಲರ್ ಮೊಹಮ್ಮದ್ ಶಮಿ ಟೆಸ್ಟ್ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ. ಸದ್ಯ ಭಾರತ ತಂಡದಲ್ಲಿ ಸ್ಥಾನ ಪಡೆಯದಿರುವ ಶಮಿ, ಶುಕ್ರವಾರ ಇನ್ಸ್ಟಾಗ್ರಾಂನಲ್ಲಿ ಭಾವನಾತ್ಮಕ ಸಂದೇಶವೊಂದನ್ನು ಹಂಚಿಕೊಳ್ಳುವ ಮೂಲಕ ತಮ್ಮ ಟೆಸ್ಟ್ ಕ್ರಿಕೆಟ್ ಪಯಣಕ್ಕೆ ತೆರೆ ಎಳೆದಿದ್ದಾರೆ.
‘ನಾನು ಬಿಳಿ ಜೆರ್ಸಿಗೆ ವಿದಾಯ ಹೇಳುತ್ತಿದ್ದೇನೆ. ಆದರೆ ಅದರೊಂದಿಗೆ ಬೆಸೆದುಕೊಂಡಿರುವ ನೆನಪುಗಳಿಗೆ ಎಂದಿಗೂ ವಿದಾಯ ಹೇಳುವುದಿಲ್ಲ’ ಎಂದು ಶಮಿ ತಮ್ಮ ನಿವೃತ್ತಿ ನಿರ್ಧಾರವನ್ನು ಪ್ರಕಟಿಸಿದ್ದಾರೆ.
ಭಾರತದ ಟೆಸ್ಟ್ ಜೆರ್ಸಿಯನ್ನು ಮೊದಲ ಬಾರಿಗೆ ಧರಿಸಿದ ಕ್ಷಣವನ್ನು ನೆನಪಿಸಿಕೊಂಡಿರುವ ಅವರು, ‘ಮೊದಲ ಬಾರಿಗೆ ಭಾರತದ ಟೆಸ್ಟ್ ಜೆರ್ಸಿ ಧರಿಸಿದಾಗ ನನ್ನಲ್ಲಿದ್ದದ್ದು ಒಂದೇ ಕನಸು. ನನ್ನ ದೇಶಕ್ಕಾಗಿ ಏನಾದರೂ ಮಾಡಬೇಕು ಎಂಬುದಾಗಿತ್ತು. ಅಂದಿನಿಂದ ಪ್ರತಿಯೊಂದು ವಿಕೆಟ್, ಪ್ರತಿಯೊಂದು ಹೋರಾಟ, ಪ್ರತಿಯೊಂದು ಗಾಯ ಹಾಗೂ ಪ್ರತಿಯೊಂದು ಪುನರಾಗಮನವೂ ನನಗೆ ಹೊಸ ಪಾಠ ಕಲಿಸಿದೆ’ ಎಂದು ಬರೆದುಕೊಂಡಿದ್ದಾರೆ.
ಟೆಸ್ಟ್ ಕ್ರಿಕೆಟ್ ನನ್ನ ಜೀವನದ ವಿಶೇಷ ಭಾಗವಾಗಿತ್ತು
‘ನನ್ನ ಪಾಲಿಗೆ ಟೆಸ್ಟ್ ಕ್ರಿಕೆಟ್ ಕೇವಲ ಒಂದು ಮಾದರಿಯಾಗಿರಲಿಲ್ಲ. ಅದು ನನ್ನ ಜೀವನದ ಅತ್ಯಂತ ವಿಶೇಷ ಭಾಗವಾಗಿತ್ತು. ಇಂದು ಭಾರವಾದ ಹೃದಯ ಹಾಗೂ ಅಸಂಖ್ಯಾತ ಸುಂದರ ನೆನಪುಗಳೊಂದಿಗೆ ಟೆಸ್ಟ್ ಕ್ರಿಕೆಟ್ನಿಂದ ನಿವೃತ್ತಿಯಾಗುವ ನಿರ್ಧಾರ ಕೈಗೊಂಡಿದ್ದೇನೆ’ ಎಂದು ತಮ್ಮ ಭಾವನೆಗಳನ್ನು ವ್ಯಕ್ತಪಡಿಸಿದ್ದಾರೆ.
ಇದೇ ವೇಳೆ, ತಮ್ಮ ಕ್ರಿಕೆಟ್ ಪಯಣದಲ್ಲಿ ಬೆಂಬಲವಾಗಿ ನಿಂತ ಸಹ ಆಟಗಾರರು, ತರಬೇತುದಾರರು ಹಾಗೂ ಕುಟುಂಬ ಸದಸ್ಯರಿಗೆ ಶಮಿ ಹೃದಯಪೂರ್ವಕ ಧನ್ಯವಾದ ಸಲ್ಲಿಸಿದ್ದಾರೆ. ಒಳ್ಳೆಯ ಹಾಗೂ ಕಷ್ಟದ ಸಮಯಗಳಲ್ಲೂ ತಮ್ಮ ಮೇಲೆ ನಂಬಿಕೆ ಇಟ್ಟ ಲಕ್ಷಾಂತರ ಭಾರತೀಯ ಅಭಿಮಾನಿಗಳಿಗೂ ಕೃತಜ್ಞತೆ ತಿಳಿಸಿದ್ದಾರೆ.
ತಮ್ಮ ಪ್ರತಿಭೆಯನ್ನು ಗುರುತಿಸಿ, ಬೆಳೆಯಲು ಅವಕಾಶ ನೀಡಿದ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಹಾಗೂ ಕ್ರಿಕೆಟ್ ಅಸೋಸಿಯೇಷನ್ ಆಫ್ ಬೆಂಗಾಲ್ (ಸಿಎಬಿ) ಸಂಸ್ಥೆಗಳಿಗೂ ಧನ್ಯವಾದ ಅರ್ಪಿಸಿದ್ದಾರೆ. ಈ ಸಂಸ್ಥೆಗಳು ನೀಡಿದ ಬೆಂಬಲ ಹಾಗೂ ವಿಶ್ವಾಸ ಸದಾ ತಮ್ಮ ಪಾಲಿಗೆ ವಿಶೇಷವಾಗಿರಲಿದೆ ಎಂದು ಹೇಳಿದ್ದಾರೆ.
-
ಸ್ಥಳೀಯ11 hours agoWedding-ಕ್ಯಾಸೆಟ್ಗಳ ಅಬ್ಬರವಿಲ್ಲ, ಡ್ಯಾನ್ಸ್ಗಳ ಹಂಗಿಲ್ಲ; ಅದ್ದೂರಿತನಕ್ಕೆ ಬ್ರೇಕ್ ಹಾಕಿ ಸರಳತೆಯಲ್ಲೇ ಮದುವೆ ಸಂಭ್ರಮ..!
-
ಬಿಗ್ ನ್ಯೂಸ್10 hours agoRailway-ರೈಲ್ವೆ ಗುಂಪು ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಬರ್ತ್ಗಳ ಸಂಖ್ಯೆಗೆ ಮಿತಿ ರದ್ದು, ಬೆಳಗ್ಗೆ 9ರಿಂದ ಅರ್ಜಿ ಸಲ್ಲಿಕೆಗೆ ಅವಕಾಶ..!
-
ಬಿಗ್ ನ್ಯೂಸ್6 hours agoRakesh Shetty-ಸ್ಟಿಂಗ್ ಹೆಸರಿನಲ್ಲಿ ಜನಪ್ರತಿನಿಧಿಗಳ ಬ್ಲ್ಯಾಕ್ಮೇಲ್ ಆರೋಪ: ರಾಕೇಶ್ ಶೆಟ್ಟಿ ವಿರುದ್ಧ ಕ್ರಮಕ್ಕೆ ಒಳಾಡಳಿತ ಇಲಾಖೆಯಿಂದ ಡಿಜಿಪಿಗೆ ಪತ್ರ
-
ಮಂಗಳೂರು4 hours agoGirish Mattannavar-ಸೌಜನ್ಯ ಪ್ರಕರಣ: ಎಸ್ಐಟಿಗೆ ದಾಖಲೆಗಳ ʼಬ್ಯಾಗ್ʼ ಸಲ್ಲಿಸಿದ ಗಿರೀಶ್ ಮಟ್ಟಣ್ಣನವರ್; ಸೌಜನ್ಯ ಪ್ರಕರಣದಲ್ಲಿ ಆರ್. ಅಶೋಕ್ ಪಾತ್ರದ ಕುರಿತು ಸ್ಪೋಟಕ ಹೇಳಿಕೆ..!
-
ಶಿಕ್ಷಣ4 hours agoVidyamata Academy-ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆಯಲ್ಲೂ ಅಮೋಘ ಸಾಧನೆ ಮುಂದುವರಿಸಿದ ವಿದ್ಯಾಮಾತಾ ಅಕಾಡೆಮಿ
-
ಕಾರ್ಯಕ್ರಮಗಳು5 hours agoVitla-ವಿಟ್ಲ: ನ.25ರಂದು ಮೈತ್ರೇಯಿ ಆಯುರ್ವೇದ ಗುರುಕುಲಂ ಮತ್ತು ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ನೂತನ ಕಟ್ಟಡ ಶಿಲಾನ್ಯಾಸ ಸಮಾರಂಭ; 20 ಹಾಸಿಗೆಗಳ ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ಉದ್ಘಾಟನಾ ಸಮಾರಂಭ; ಆಯುರ್ವೇದದ ಅಮೂಲ್ಯವಾದ ಸನಾತನ ಜ್ಞಾನವನ್ನು ಸಂರಕ್ಷಿಸಿ, ಬೆಳೆಸಿ, ಮುಂದಿನ ಪೀಳಿಗೆಗೆ ತಲುಪಿಸುವುದು ಅಜೇಯ ಟ್ರಸ್ಟ್ನ ಪ್ರಮುಖ ಉದ್ದೇಶವಾಗಿದೆ- ಡಾ. ಸುಧಾರಾವ್
-
ಶಿಕ್ಷಣ12 hours agoPhilomena-ಸಂತ ಫಿಲೋಮಿನಾ ಕಾಲೇಜಿನಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಐದು ದಿನಗಳ ಡಿಜಿಟಲ್ ಕೌಶಲ್ಯಾಭಿವೃದ್ಧಿ ಮತ್ತು ಉದ್ಯೋಗ ಸಿದ್ಧತಾ ತರಬೇತಿ ಕಾರ್ಯಕ್ರಮ
-
ಅಪರಾಧ4 hours agoArrest-ಸಾಲದ ಇಎಂಐ ಕಟ್ಟಲು ಸ್ನೇಹಿತನನ್ನೇ ಕೊಂದು ₹63 ಸಾವಿರ ದೋಚಿದ ಆರೋಪ: ಉತ್ತರ ಪ್ರದೇಶದಲ್ಲಿ ಆರೋಪಿ ಬಂಧನ















