ಅಪರಾಧ
Vitla-ವಿಟ್ಲ : ಅಂಗನವಾಡಿ ಪುಟಾಣಿಗಳ ಅನ್ನಕ್ಕೂ ಕನ್ನ
ವಿಟ್ಲ, ಜು.24 : ವಿಟ್ಲದ ನೆತ್ರಕೆರೆ ಅಂಗನವಾಡಿಯಲ್ಲಿ ಗರ್ಭಿಣಿಯರಿಗೆ ಮತ್ತು ಪುಟಾಣಿಗಳಿಗಾಗಿ ತಂದಿರಿಸಿದ್ದ ಪೌಷ್ಟಿಕ ಆಹಾರ ಸಾಮಗ್ರಿ ಮತ್ತು ಗ್ಯಾಸ್ ಹಂಡೆ, ರೆಗ್ಯುಲೇಟರ್ ಇತ್ಯಾದಿಗಳನ್ನು ಕಳವುಗೈಯಲಾಗಿದೆ.
ತೂಕದ ಯಂತ್ರ, ಗ್ಯಾಸ್ ಹಂಡೆ ಮತ್ತು ಪೌಷ್ಟಿಕ ಆಹಾರ ಸೇರಿ ಒಟ್ಟು 50,000/- ರೂ.ಗಳಿಗೂ ಅಧಿಕ ಮೌಲ್ಯದ ಸಾಮಗ್ರಿಗಳನ್ನು ಕಳವುಗೈಯಲಾಗಿದೆ ಎಂದು ಅಂಗನವಾಡಿ ಮೇಲ್ವಿಚಾರಕಿ ಲತಾ ವಿಟ್ಲ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಾಗಿದೆ.
ಅಂತರ ರಾಜ್ಯ
Viral video-ಚಲಿಸುತ್ತಿರುವ ರೈಲಿನ AC ಬೋಗಿಯಲ್ಲಿ ದೀಪ ಹಚ್ಚಿ ಆರತಿ, ಶಂಖನಾದ; ವೈರಲ್ ವಿಡಿಯೋಗೆ ರೈಲ್ವೆ ಪ್ರತಿಕ್ರಿಯೆ
ಚಲಿಸುತ್ತಿರುವ ರೈಲಿನ ಎಸಿ ಬೋಗಿಯೊಳಗೆ ಪ್ರಯಾಣಿಕನೊಬ್ಬ ಎಣ್ಣೆ ದೀಪ ಹಚ್ಚಿ ಪೂಜೆ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಹಪ್ರಯಾಣಿಕರ ಸುರಕ್ಷತೆ ಹಾಗೂ ಅಗ್ನಿ ಅವಘಡದ ಅಪಾಯದ ಕುರಿತು ವ್ಯಾಪಕ ಚರ್ಚೆಗೆ ಕಾರಣವಾಗಿದೆ.
ನವದೆಹಲಿ: ಚಲಿಸುತ್ತಿರುವ ರೈಲಿನ ಎಸಿ ಬೋಗಿಯೊಳಗೆ ಪ್ರಯಾಣಿಕನೊಬ್ಬ ಎಣ್ಣೆ ದೀಪ ಹಚ್ಚಿ ಪೂಜೆ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಹಪ್ರಯಾಣಿಕರ ಸುರಕ್ಷತೆ ಹಾಗೂ ಅಗ್ನಿ ಅವಘಡದ ಅಪಾಯದ ಕುರಿತು ವ್ಯಾಪಕ ಚರ್ಚೆಗೆ ಕಾರಣವಾಗಿದೆ.
ವೈರಲ್ ವಿಡಿಯೋದಲ್ಲಿ ರೈಲಿನ ಹವಾನಿಯಂತ್ರಿತ ಬೋಗಿಯಲ್ಲಿ ಕುಳಿತಿರುವ ವ್ಯಕ್ತಿಯೊಬ್ಬರು ಶಂಖ ಊದುತ್ತಾ ಆರತಿ ಮಾಡುತ್ತಿರುವುದು ಕಂಡುಬಂದಿದೆ. ಅವರ ಪಕ್ಕದಲ್ಲಿರುವ ಸಣ್ಣ ಟೇಬಲ್ ಮೇಲೆ ದೀಪ, ದೇವರ ಫೋಟೋ, ಹೂವು ಹಾಗೂ ಇತರ ಪೂಜಾ ಸಾಮಗ್ರಿಗಳನ್ನು ಇರಿಸಲಾಗಿದೆ. ಪಂಚೆ ಧರಿಸಿ, ಹಣೆಗೆ ವಿಭೂತಿ ಹಚ್ಚಿಕೊಂಡಿರುವ ವ್ಯಕ್ತಿ ರೈಲು ಚಲಿಸುತ್ತಿರುವಾಗಲೇ ಪೂಜಾ ವಿಧಿವಿಧಾನಗಳನ್ನು ನಡೆಸುತ್ತಿರುವ ದೃಶ್ಯ ವಿಡಿಯೋದಲ್ಲಿದೆ.
ಮುಚ್ಚಿದ ಹಾಗೂ ಜನನಿಬಿಡ ರೈಲು ಬೋಗಿಯೊಳಗೆ ಬೆಂಕಿ ಹಚ್ಚಲು ಅವಕಾಶ ನೀಡಿರುವುದು ಹೇಗೆ ಎಂದು ನೆಟ್ಟಿಗರು ಪ್ರಶ್ನಿಸಿದ್ದಾರೆ. ಧಾರ್ಮಿಕ ಆಚರಣೆ ವೈಯಕ್ತಿಕ ವಿಚಾರವಾದರೂ, ಹಲವು ಪ್ರಯಾಣಿಕರಿರುವ ಬೋಗಿಯೊಳಗೆ ತೆರೆದ ಜ್ವಾಲೆಯೊಂದಿಗೆ ದೀಪ ಹಚ್ಚುವುದು ಅಗ್ನಿ ಅವಘಡಕ್ಕೆ ಕಾರಣವಾಗುವ ಅಪಾಯವಿದೆ ಎಂದು ಹಲವರು ಆತಂಕ ವ್ಯಕ್ತಪಡಿಸಿದ್ದಾರೆ.
ವೈರಲ್ ವಿಡಿಯೋಗೆ ಪ್ರತಿಕ್ರಿಯಿಸಿರುವ ಭಾರತೀಯ ರೈಲ್ವೆ, ಘಟನೆಯ ಬಗ್ಗೆ ಪರಿಶೀಲನೆ ನಡೆಸಲು ಹೆಚ್ಚಿನ ಮಾಹಿತಿಯನ್ನು ಕೇಳಿದೆ. ಪ್ರಯಾಣದ ದಿನಾಂಕ, ರೈಲು ಸಂಖ್ಯೆ ಹಾಗೂ ಪಿಎನ್ಆರ್ (PNR) ಸಂಖ್ಯೆಯಂತಹ ವಿವರಗಳನ್ನು ಹಂಚಿಕೊಳ್ಳುವಂತೆ ರೈಲ್ವೆಯ ಅಧಿಕೃತ ‘ರೈಲ್ವೆ ಸೇವಾ’ ಖಾತೆಯ ಮೂಲಕ ಮನವಿ ಮಾಡಲಾಗಿದೆ.
ಸ್ಥಳೀಯ
Arrested-ಕುಂಭಾಶಿ ದೇವಸ್ಥಾನದಲ್ಲಿ ವೃದ್ಧೆಯ ಚಿನ್ನದ ಸರ ಕಳವು; ತಮಿಳುನಾಡಿನ ಮೂವರು ಮಹಿಳೆಯರ ಬಂಧನ
ಗಣೇಶ ಚತುರ್ಥಿಯ ಸಂದರ್ಭದಲ್ಲಿ ಕುಂಭಾಶಿ ಶ್ರೀ ವಿನಾಯಕ ದೇವಸ್ಥಾನದಲ್ಲಿ ಜನಸಂದಣಿಯ ನಡುವೆ ವೃದ್ಧೆಯೊಬ್ಬರ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಮೂಲದ ಮೂವರು ಮಹಿಳೆಯರನ್ನು ಪೊಲೀಸರು ವಶಕ್ಕೆ ಪಡೆದು, ಕಳವಾಗಿದ್ದ ಚಿನ್ನದ ಸರವನ್ನು ವಶಪಡಿಸಿಕೊಂಡಿದ್ದಾರೆ.
ಕುಂದಾಪುರ: ಗಣೇಶ ಚತುರ್ಥಿಯ ಸಂದರ್ಭದಲ್ಲಿ ಕುಂಭಾಶಿ ಶ್ರೀ ವಿನಾಯಕ ದೇವಸ್ಥಾನದಲ್ಲಿ ಜನಸಂದಣಿಯ ನಡುವೆ ವೃದ್ಧೆಯೊಬ್ಬರ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಮೂಲದ ಮೂವರು ಮಹಿಳೆಯರನ್ನು ಪೊಲೀಸರು ವಶಕ್ಕೆ ಪಡೆದು, ಕಳವಾಗಿದ್ದ ಚಿನ್ನದ ಸರವನ್ನು ವಶಪಡಿಸಿಕೊಂಡಿದ್ದಾರೆ.
2026ರ ಸೆಪ್ಟೆಂಬರ್ 14ರಂದು ಬೈಂದೂರು ತಾಲೂಕಿನ ನಾಡ ಗುಡ್ಡೆಯಂಗಡಿ ನಿವಾಸಿ ಮುತ್ತು (75) ಅವರು ಕುಂಭಾಶಿ ಶ್ರೀ ವಿನಾಯಕ ದೇವಸ್ಥಾನದಲ್ಲಿ ಪ್ರದಕ್ಷಿಣೆ ಹಾಕುತ್ತಿದ್ದ ವೇಳೆ ಜನಸಂದಣಿಯ ನಡುವೆ ಅವರ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಕಳವು ಮಾಡಲಾಗಿತ್ತು. ಈ ಕುರಿತು ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ನಡೆಸುತ್ತಿದ್ದ ವೇಳೆ ಕೃತ್ಯದಲ್ಲಿ ಭಾಗಿಯಾಗಿದ್ದ ತಮಿಳುನಾಡು ಮೂಲದ ವಲ್ಲಿಯಮ್ಮ, ದೇವಿ ಯಾನೆ ತಿಲೋತ್ತಮ ಹಾಗೂ ಪೊನ್ನಿ ಎಂಬ ಮೂವರು ಮಹಿಳೆಯರನ್ನು ಕೇರಳದ ವಯನಾಡು ಜಿಲ್ಲೆಯ ಮಾನಂತವಾಡಿ ತಾಲೂಕಿನ ತಿರುನೆಲ್ಲಿ ಪೊಲೀಸರು ಬಂಧಿಸಿರುವ ಮಾಹಿತಿ ಕುಂದಾಪುರ ಪೊಲೀಸರಿಗೆ ಲಭ್ಯವಾಗಿತ್ತು.
ಕುಂದಾಪುರ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರ ನಿರ್ದೇಶನದಂತೆ, ಕುಂದಾಪುರ ಪೊಲೀಸ್ ಠಾಣೆಯ ನಿರೀಕ್ಷಕರು ನ್ಯಾಯಾಲಯದ ಅನುಮತಿ ಪಡೆದು ಮಾನಂತವಾಡಿ ಜೈಲಿನಲ್ಲಿದ್ದ ಮೂವರು ಆರೋಪಿಗಳನ್ನು ಕುಂದಾಪುರಕ್ಕೆ ಕರೆತಂದು ವಿಚಾರಣೆ ನಡೆಸಿದ್ದಾರೆ.
ಅಪರಾಧ
Bantwal-ಬಂಟ್ವಾಳ: ಬ್ರಹ್ಮರಕೂಟ್ಲು ಟೋಲ್ ಪ್ಲಾಜಾದಲ್ಲಿ ಗುಂಪುಗೂಡಿ ಗಲಾಟೆ; ಟೋಲ್ ಉಪಕರಣಗಳಿಗೆ ಹಾನಿ ಯತ್ನ – ಪ್ರಕರಣ ದಾಖಲು
ಯಾವುದೇ ಪೂರ್ವಾನುಮತಿ ಪಡೆಯದೆ ರಾಜಕೀಯ ಪಕ್ಷವೊಂದರ ಧ್ವಜ ಹಾಗೂ ಬ್ಯಾನರ್ಗಳನ್ನು ಹಿಡಿದು ಗುಂಪುಗೂಡಿದ ಕೆಲವರು ಬ್ರಹ್ಮರಕೂಟ್ಲು ಟೋಲ್ ಪ್ಲಾಜಾದಲ್ಲಿ ಟೋಲ್ ಕಾರ್ಯಾಚರಣೆಗೆ ಅಡ್ಡಿಪಡಿಸಿ, ಉಪಕರಣಗಳಿಗೆ ಹಾನಿ ಮಾಡಲು ಯತ್ನಿಸಿದ ಘಟನೆ ನ.26ರಂದು ನಡೆದಿದೆ.
ಬಂಟ್ವಾಳ: ಯಾವುದೇ ಪೂರ್ವಾನುಮತಿ ಪಡೆಯದೆ ರಾಜಕೀಯ ಪಕ್ಷವೊಂದರ ಧ್ವಜ ಹಾಗೂ ಬ್ಯಾನರ್ಗಳನ್ನು ಹಿಡಿದು ಗುಂಪುಗೂಡಿದ ಕೆಲವರು ಬ್ರಹ್ಮರಕೂಟ್ಲು ಟೋಲ್ ಪ್ಲಾಜಾದಲ್ಲಿ ಟೋಲ್ ಕಾರ್ಯಾಚರಣೆಗೆ ಅಡ್ಡಿಪಡಿಸಿ, ಉಪಕರಣಗಳಿಗೆ ಹಾನಿ ಮಾಡಲು ಯತ್ನಿಸಿದ ಘಟನೆ ನ.26ರಂದು ನಡೆದಿದೆ.
ನ.26ರಂದು ಬೆಳಿಗ್ಗೆ ಸುಮಾರು 11.40ರ ವೇಳೆಗೆ ಈ ಘಟನೆ ನಡೆದಿದ್ದು, ಗುಂಪುಗೂಡಿದವರು ಟೋಲ್ ಪ್ಲಾಜಾದ ಕಾರ್ಯಾಚರಣೆಗೆ ಅಡ್ಡಿಪಡಿಸಿದ್ದಲ್ಲದೆ, ಅಲ್ಲಿನ ಉಪಕರಣಗಳಿಗೆ ಹಾನಿ ಮಾಡಲು ಪ್ರಯತ್ನಿಸಿದ್ದಾರೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮಂಗಳೂರು ಯೋಜನಾ ನಿರ್ದೇಶಕರು ಬಂಟ್ವಾಳ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಈ ದೂರಿನ ಆಧಾರದಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 166/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 189(2), 191(2) ಹಾಗೂ 190ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
-
ನಿಧನ ವಾರ್ತೆ16 hours agoBeltangadi-ಬೆಳ್ತಂಗಡಿ: ವಿಷ ಸೇವಿಸಿ ಚಿಕಿತ್ಸೆ ಫಲಿಸದೆ ಐಟಿಐ ವಿದ್ಯಾರ್ಥಿ ಸಾವು
-
ನಿಧನ ವಾರ್ತೆ16 hours agoKolar-ಕೋಲಾರ: ಹೆದ್ದಾರಿ ಬದಿಯಲ್ಲಿ ಪಾರ್ಸೆಲ್ ರೂಪದಲ್ಲಿ ಮಹಿಳೆಯ ಮೃತದೇಹ ಪತ್ತೆ
-
ಅಂತರ ರಾಜ್ಯ16 hours agoViral video-ಚಲಿಸುತ್ತಿರುವ ರೈಲಿನ AC ಬೋಗಿಯಲ್ಲಿ ದೀಪ ಹಚ್ಚಿ ಆರತಿ, ಶಂಖನಾದ; ವೈರಲ್ ವಿಡಿಯೋಗೆ ರೈಲ್ವೆ ಪ್ರತಿಕ್ರಿಯೆ
-
ನಿಧನ ವಾರ್ತೆ15 hours agoKankanadi-ಶಾಲೆಯಿಂದ ನಡೆದು ಹೋಗುತ್ತಿದ್ದ ಎರಡನೇ ಕ್ಲಾಸ್ ವಿದ್ಯಾರ್ಥಿಗೆ ಖಾಸಗಿ ಬಸ್ ಡಿಕ್ಕಿ; ಕಂಕನಾಡಿಯಲ್ಲಿ ಬಸ್ ಚಾಲಕನ ನಿರ್ಲಕ್ಷ್ಯಕ್ಕೆ ಬಾಲಕ ಬಲಿ
-
ಸ್ಥಳೀಯ16 hours agoArrested-ಕುಂಭಾಶಿ ದೇವಸ್ಥಾನದಲ್ಲಿ ವೃದ್ಧೆಯ ಚಿನ್ನದ ಸರ ಕಳವು; ತಮಿಳುನಾಡಿನ ಮೂವರು ಮಹಿಳೆಯರ ಬಂಧನ
-
ಸ್ಥಳೀಯ9 hours agoRakshit Shivaram-ವಳಾಲು ಟೋಲ್ ದರ ರೂ.250ಕ್ಕೆ ಏರಿಕೆ : ಬಿಜೆಪಿಯವರಿಗೂ ಪಾಲಿದೆಯಾ..? ಶಾಸಕರ ಮೌನಕ್ಕೆ ರಕ್ಷಿತ್ ಶಿವರಾಂ ಗರಂ
-
ಅಂತರ ರಾಜ್ಯ16 hours agoWhatsApp-WhatsApp ಬಳಕೆದಾರರಿಗೆ CERT-In ಎಚ್ಚರಿಕೆ; ಡೇಟಾ ಕದಿಯುವ, ಅಳಿಸುವ ಅಪಾಯ..!
-
ಸ್ಥಳೀಯ15 hours agoDharmasthala-ಪಾಣೇರು ಬಸದಿ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ. 5 ಲಕ್ಷ ಅನುದಾನ

















