Connect with us

ರಾಜಕೀಯ

CM-ನನ್ನ ಪತ್ನಿಗೆ ಬದಲಿ ನಿವೇಶನ ಕೊಟ್ಟದ್ದು ಬಿಜೆಪಿ ಅವಧಿಯಲ್ಲಿ : ಕುಮಾರಸ್ವಾಮಿ ಯಡಿಯೂರಪ್ಪ ಅವಧಿಯಲ್ಲಾದ ಭೂ ಹಗರಣಗಳ ದಾಖಲೆ ಬಿಡುಗಡೆ ಮಾಡಿದ ಸಿಎಂ – ಸುದೀರ್ಘ ಎರಡೂವರೆ ಗಂಟೆ ಪತ್ರಿಕಾಗೋಷ್ಠಿ ನಡೆಸಿದ ಸಿಎಂ

Published

on

Ad Widget

Ad Widget

Ad Widget

Ad Widget

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ತಮ್ಮ ಪತ್ನಿಗೆ ಬದಲಿ ನಿವೇಶನ ಹಂಚಿಕೆ ಮಾಡಿರುವುದರಲ್ಲಿ ಯಾವ ಅಕ್ರಮವೂ ನಡೆದಿಲ್ಲ. ನಿವೇಶನ ಹಂಚಿಕೆ ಪ್ರಕ್ರಿಯೆಯಲ್ಲಿ ತಮ್ಮ ಪಾತ್ರವೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

Ad Widget

Ad Widget

Ad Widget

Ad Widget

ವಿಧಾನಸೌಧದಲ್ಲಿ ಶುಕ್ರವಾರ ಸುದೀರ್ಘ ಎರಡೂವರೆ ಗಂಟೆಗೂ ಹೆಚ್ಚು ಅವಧಿಯ ಪತ್ರಿಕಾಗೋಷ್ಠಿ ನಡೆಸಿದ ಅವರು, ‘ಮೈಸೂರಿನ ಕೆಸರೆ ಗ್ರಾಮದ ಸರ್ವೆ ನಂಬ‌ರ್ 464ರಲ್ಲಿ ನನ್ನ ಪತ್ನಿ ಪಾರ್ವತಿ ಹೆಸರಿನಲ್ಲಿದ್ದ 3 ಎಕರೆ 16 ಗುಂಟೆ ಜಮೀನನ್ನು ಮುಡಾ ಒತ್ತುವರಿ ಮಾಡಿಕೊಂಡು ಬಡಾವಣೆ ನಿರ್ಮಿಸಿತ್ತು. ಅದಕ್ಕೆ ಪರಿಹಾರವಾಗಿ ಬದಲಿ ನಿವೇಶನ ಹಂಚಿಕೆ ಮಾಡಿದೆ. ಇದರಲ್ಲಿ ಅಕ್ರಮ ಏನಿದೆ’ ಎಂದು ಪ್ರಶ್ನಿಸಿದರು.

Ad Widget

Ad Widget alt="Ad Widget"/>

Ad Widget

ಪರಿಶಿಷ್ಟ ಜಾತಿಯ ಜವರ ಎಂಬುವವರು 1935ರಲ್ಲಿ ಸರ್ಕಾರಿ ಹರಾಜಿನಲ್ಲಿ ಸದರಿ ಜಮೀನನ್ನು ಖರೀದಿಸಿದ್ದರು. ಅವರಿಗೆ ಮೂರು ಜನ ಮಕ್ಕಳಿದ್ದರು. ಜವರ ಮೃತರಾದ ಬಳಿಕ ಕುಟುಂಬದ ಇತರ ಸದಸ್ಯರ ಒಪ್ಪಿಗೆ ಮೇರೆಗೆ ದೇವರಾಜು ಎಂಬ ಮಗನಿಗೆ ಜಮೀನಿನ ಖಾತೆ ವರ್ಗಾವಣೆ ಆಗಿತ್ತು. ಅವರಿಂದ ನನ್ನ ಪತ್ನಿಯ ಅಣ್ಣ ಮಲ್ಲಿಕಾರ್ಜುನಸ್ವಾಮಿ ಖರೀದಿಸಿದ್ದರು. ಇದು ಹರಾಜಿನಲ್ಲಿ ಖರೀದಿಸಿದ ಜಮೀನು ಆಗಿರುವುದರಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರ ಜಮೀನು ಖರೀದಿ ನಿಷೇಧ (ಪಿಟಿಸಿಎಲ್) ಕಾಯ್ದೆ ಅನ್ವಯ ಆಗುವುದಿಲ್ಲ ಎಂದರು.

Ad Widget

Ad Widget <> Ad Widget

ಕೆಸರೆ ಗ್ರಾಮದ 3 ಎಕರೆ 16 ಗುಂಟೆ ಜಮೀನಿನ ಸ್ವಾಧೀನಕ್ಕೆ ಮುಡಾ 1992ರಲ್ಲಿ ಪ್ರಾಥಮಿಕ ಅಧಿಸೂಚನೆ ಮತ್ತು 1997ರಲ್ಲಿ ಅಂತಿಮ ಅಧಿಸೂಚನೆ ಹೊರಡಿಸಿತ್ತು. ಜಮೀನು ಮಾಲೀಕರ ಮನವಿಯಂತೆ ಸದರಿ ಜಮೀನನ್ನು ಡಿನೋಟಿಫೈ ಮಾಡಿ 1997ರಲ್ಲಿ ಆದೇಶ ಹೊರಡಿಸಲಾಗಿತ್ತು ಎಂದು ದಾಖಲೆ ಪ್ರದರ್ಶಿಸಿದರು.

2005ರಲ್ಲಿ ಈ ಜಮೀನು ಖರೀದಿಸಿದ್ದ ಮಲ್ಲಿಕಾರ್ಜುನ ಸ್ವಾಮಿ, ಭೂ ಪರಿವರ್ತನೆಯನ್ನೂ ಮಾಡಿಸಿದ್ದರು. 2006ರಲ್ಲಿ ತಮ್ಮ ಪತ್ನಿ ಪಾರ್ವತಿ ಅವರಿಗೆ ದಾನಪತ್ರ ಮಾಡಿಕೊಟ್ಟಿದ್ದರು ಎಂದರು.

Ad Widget

Ad Widget

‘ಆ ಜಮೀನನ್ನು ಮುಡಾ ಒತ್ತುವರಿ ಮಾಡಿರುವುದು 2013ರಲ್ಲಿ ನಮ್ಮ ಕುಟುಂಬಕ್ಕೆ ಗೊತ್ತಾಯಿತು. ಬಳಿಕ ಬದಲಿ ಜಮೀನು ಕೊಡುವಂತೆ ಪಾರ್ವತಿ ಮುಡಾಕ್ಕೆ ಅರ್ಜಿ ಸಲ್ಲಿಸಿದ್ದರು. 2014 ರಲ್ಲಿ ನಾನು ಮುಖ್ಯಮಂತ್ರಿ ಆಗಿದ್ದಾಗ ಬದಲಿ ನಿವೇಶನ ಕೋರಿರುವ ವಿಷಯವನ್ನು ಪತ್ನಿ ತಿಳಿಸಿದ್ದರು. ಮುಖ್ಯಮಂತ್ರಿ ಹುದ್ದೆಯಲ್ಲಿದ್ದು ಆ ಬಗ್ಗೆ ಯಾವುದೇ ತೀರ್ಮಾನ ಕೈಗೊಳ್ಳುವುದಿಲ್ಲ ಎಂದಿದ್ದೆ. ಸದರಿ ಕಡತದ ಬಗ್ಗೆ ನನ್ನ ಬಳಿ ಚರ್ಚಿಸದಂತೆಯೂ ಅಧಿಕಾರಿಗಳಿಗೆ ಸೂಚಿಸಿದ್ದೆ’ ಎಂದು ಸಿದ್ದರಾಮಯ್ಯ ಹೇಳಿದರು.

‘ಬದಲಿ ನಿವೇಶನ ಹಂಚಿಕೆ ಮಾಡಿರುವುದು ಬಿಜೆಪಿ ಆಡಳಿತದ ಅವಧಿಯಲ್ಲಿ. ಬಿಜೆಪಿ ಶಾಸಕರಾಗಿದ್ದ ಎಸ್.ಎ. ರಾಮದಾಸ್, ನಾಗೇಂದ್ರ, ಜೆಡಿಎಸ್‌ ಶಾಸಕರಾಗಿದ್ದ ಜಿ.ಟಿ. ದೇವೇಗೌಡ ಉಪಸ್ಥಿತರಿದ್ದ ಮುಡಾ ಆಡಳಿತ ಮಂಡಳಿ ಸಭೆಯಲ್ಲಿ ನಿವೇಶನ ಹಂಚಿಕೆ ನಿರ್ಣಯ ಕೈಗೊಳ್ಳಲಾಗಿತ್ತು’ ಎಂದರು.

ಇಂತಹದ್ದೇ ಪ್ರಕರಣದಲ್ಲಿ ಸುಂದರಮ್ಮ ಎಂಬುವವರಿಗೆ ಪೂರ್ಣ ವಿಸ್ತೀರ್ಣದ ಜಮೀನು ಪರಿಹಾರ ನೀಡಲಾಗಿದೆ. ತಮ್ಮ ಪತ್ನಿಗೆ ಶೇಕಡ 50ರಷ್ಟು ಪರಿಹಾರ ಮಾತ್ರ ನೀಡಲಾಗಿದೆ. ಇದರಲ್ಲಿ ತಮ್ಮ ತಪ್ಪೇನಿದೆ ಎಂದು ಪ್ರಶ್ನಿಸಿದರು.

2023ರ ವಿಧಾನಸಭಾ ಚುನಾವಣೆ ಬಳಿಕ ಬಿಜೆಪಿ ಮತ್ತು ಜೆಡಿಎಸ್‌ ಪಕ್ಷದವರು ಹತಾಶರಾಗಿದ್ದಾರೆ. ಆ ಕಾರಣದಿಂದ ತಮ್ಮ ವ್ಯಕ್ತಿತ್ವಕ್ಕೆ ಮಸಿ ಬಳಿಯಲು ಯತ್ನಿಸುತ್ತಿದ್ದಾರೆ. ಅದರ ಭಾಗವಾಗಿಯೇ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಕುಮಾರಸ್ವಾಮಿಯವರ ಭೂ ಹಗರಣಗಳು
• ನನಗೆ ಅವರ ಕುಟುಂಬದ ಆಸ್ತಿಪಾಸ್ತಿಗಳ ಬಗ್ಗೆ ಮಾತನಾಡಲಾಗುವುದಿಲ್ಲ. ನನಗೆ ಏನು ಇಲ್ಲಿರುವ ಯಾರಿಗೂ ಸಾಧ್ಯವಿಲ್ಲ. ಯಾಕೆಂದರೆ ಅವುಗಳ ಸಂಖ್ಯೆ ಎಷ್ಟೊ, ಆಳವೆಷ್ಟೊ, ಉದ್ಧವೆಷ್ಟೊ ತಿಳಿಯದು.

• ಕುಮಾರಸ್ವಾಮಿಯವರು ಇತ್ತೀಚೆಗೆ ನನ್ನನ್ನು ಗುರಿಮಾಡಿಕೊಂಡಿದ್ದಾರೆ. ಯಾಕೆಂದರೆ ಸಿದ್ದರಾಮಯ್ಯನವರದು ಕಳಂಕರಹಿತವಾದ ವ್ಯಕ್ತಿತ್ವ ಎಂಬ ಮಾತು ಅವರ ನಿದ್ದೆಗೆಡಿಸುತ್ತಿದೆ. ಹಾಗಾಗಿ ಅವರು ಇಲ್ಲಸಲ್ಲದ ಕಿತಾಪತಿಗಳನ್ನು ಮಾಡಲು ಪ್ರಾರಂಭಿಸಿದ್ದಾರೆ. ಹಿಟ್ಲರ್‌ವಾದಿಗಳ ಜೊತೆಗೆ ಫ್ಯೂಡಲ್‌ವಾದಿಗಳು ಸೇರಿಕೊಂಡಿದ್ದಾರೆ. ಇಬ್ಬರೂ ಸೇರಿ ಟಾರ್ಗೆಟ್ ಮಾಡಿಕೊಂಡು ಓಡಾಡುತ್ತಿದ್ದಾರೆ. ಮಾಡಲಿ ನನ್ನ ಜೀವಿತಾವಧಿಯಲ್ಲಿ ಇಂಥ ಹಲವಾರು ಪಿತೂರಿಗಳನ್ನು ಎದುರಿಸಿದ್ದೇನೆ.

ಅಂದಿನ ಎಸಿಯಾಗಿದ್ದ ಶ್ರೀ. ಸಿದ್ಧಪ್ಪನವರು ಈ ರೀತಿ ಬರೆದಿದ್ದಾರೆ.

• ಬೆಂಗಳೂರಿಗೆ ಹೊಂದಿಕೊಂಡಂತೆ ಬಿಡದಿಯ ಬಳಿ ಇರುವ ಕೇತಗಾನಹಳ್ಳಿಯ ಸರ್ವೆನಂಬರ್ 7,8,9,10,16 ಮತ್ತು 17ರಲ್ಲಿ ಒಟ್ಟು 110.32 ಎಕರೆ ಸರ್ಕಾರಿ ಗೋಮಾಳ ಸೇರಿದಂತೆ 200 ಎಕರೆ ಜಮೀನನ್ನು ಶ್ರೀ. ಎಚ್. ಡಿ ಕುಮಾರಸ್ವಾಮಿ ಮತ್ತವರ ಕುಟುಂಬದವರು ಹಾಗೂ ಮದ್ದೂರು ಶಾಸಕರಾದ ಶ್ರೀ. ಡಿ ಸಿ ತಮ್ಮಣ್ಣ ಮತ್ತವರ ಕುಟುಂಬದವರು ಈ ಕೆಳಕಂಡ ಕಾಯ್ದೆ ನಿಯಮಗಳನ್ನು ಉಲ್ಲಂಘಿಸಿ ಭೂ ಕಬಳಿಸಿರುವುದಾಗಿ ಆರೋಪಿಸಿ ಈ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಿ 200 ಎಕರೆ ಸರ್ಕಾರಿ ಜಮೀನನ್ನು ಸರ್ಕಾರಕ್ಕೆ ಮುಟ್ಟುಗೋಲು ಹಾಕಿಕೊಳ್ಳಲು ಪ್ರಸ್ತಾವನೆಯನ್ನು ಸಲ್ಲಿಸಲು ಕೋರಿ ದಿನಾಂಕ; 25-08-2014 ರಂದು ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿರುತ್ತಾರೆ. ಅದಕ್ಕೂ ಮೊದಲು ಸಿದ್ದಪ್ಪ ಅವರು 2011 ರಲ್ಲಿ ಜಿ. ಮಾದೇಗೌಡ ಅವರು ಲೋಕಾಯುಕ್ತದಲ್ಲಿ ದಾಖಲಿಸಿದ್ದ ದೂರು ಪ್ರಕರಣದಲ್ಲಿ ವಿಚಾರಣೆ ನಡೆಸಿ ಲೋಕಾಯುಕ್ತಕ್ಕೆ ವರದಿ ಸಲ್ಲಿಸಿರುತ್ತಾರೆ. ಅವರ ಪ್ರಕಾರ
• ಈ 200 ಭೂಮಿಗಳಲ್ಲಿ ಕರ್ನಾಟಕ ಭೂ ಮಂಜೂರಾತಿ ನಿಯಮಗಳು,
• ಕರ್ನಾಟಕ ಭೂ ಸುಧಾರಣಾ ಕಾಯ್ದೆಯ 79 ಎ ಮತ್ತು ಬಿ ಹಾಗೂ 66
• ಪಿಟಿಸಿಎಲ್ ಕಾಯ್ದೆ
• ಮುದ್ರಾಂಕ ಪಾವತಿಸದೆ ಮೋಸ ಮಾಡಿರುವುದು
• ಸರ್ಕಾರಿ ಜಮೀನುಗಳನ್ನು ಕಬಳಿಸಿರುವುದು ಕಂಡುಬಂದಿರುತ್ತದೆ ಎಂದು ವರದಿ ಮಾಡಿದ್ದಾರೆ.
• ಕಂದಾಯ ಇಲಾಖೆಯ ಮಾಹಿತಿಗಳ ಪ್ರಕಾರ ಕೇತಗಾನಹಳ್ಳಿಯ ಸ. ನಂ60 ಮತ್ತು 62 ರಲ್ಲಿ ವ್ಯಾಪಕವಾಗಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಜನರಿಗೆ ದ್ರೋಹ ಮಾಡಿರುವುದು ಕಂಡುಬರುತ್ತಿದೆ.

ಇದಷ್ಟೆ ಅಲ್ಲ 17-3-2011 ರಲ್ಲಿ ಮೈಸೂರು ಮುಡಾದಲ್ಲಿ 60000 ಅಡಿ ಭೂಮಿ ಹಂಚಿಕೆಯ ಕುರಿತು ವಿಧಾನಪರಿಷತ್ತಿನಲ್ಲಿ ಯಡಿಯೂರಪ್ಪನವರು ದಾಖಲೆಗಳನ್ನು ಅಂದಿನ ಸಭಾಪತಿಗಳಿಗೆ ನೀಡಿರುವುದು ದಾಖಲಾಗಿದೆ. ಯಡಿಯೂರಪ್ಪನವರು ನೇರವಾಗಿ ಎಚ್ ಡಿ ದೇವೇಗೌಡರು ನಿಯಮಗಳನ್ನು ಗಾಳಿಗೆ ತೂರಿ 48 ನಿವೇಶನಗಳನ್ನು ತಮ್ಮ ಕುಟುಂಬಕ್ಕೆ ಹಂಚಿಕೆ ಮಾಡಿರುವ ದಾಖಲೆ ಒದಗಿಸಿದ್ದಾರೆ.

ಹಾಗೂ ಎಚ್. ಡಿ ಕುಮಾರಸ್ವಾಮಿಯವರಿಗೆ 7-11-1984 ರಲ್ಲಿ 75*280 ಅಡಿ ಒಟ್ಟು 21000 ಅಡಿಗಳ ಕೈಗಾರಿಕಾ ನಿವೇಶನ ಸಿಐಟಿಬಿ ಮೈಸೂರು ಇಲ್ಲಿಂದ ಮಂಜೂರಾಗಿದೆ. ಚದರ ಗಜಕ್ಕೆ 16 ರೂಪಾಯಿಯಂತೆ 37334 ರೂಪಾಯಿಗಳಿಗೆ ಅಭಿವೃದ್ಧಿಪಡಿಸಿದ ಕೈಗಾರಿಕಾ ನಿವೇಶನವನ್ನು ಇಂಡಸ್ಟ್ರಿಯಲ್ ಸಬ್ 3ನೆ ಹಂತ ಇಲ್ಲಿ ಮಂಜೂರು ಮಾಡಿದ್ದಾರೆ. ಮಂಜೂರಾತಿ ಪತ್ರದಲ್ಲಿ ಎರಡು ವರ್ಷದೊಳಗೆ ಅಲ್ಲಿ ಕೈಗಾರಿಕೆ ಪ್ರಾರಂಭಿಸಬೇಕು ಎಂದು ಷರತ್ತು ವಿಧಿಸಿದ್ದಾರೆ. 1985 ರಲ್ಲಿ ಸ್ವಾಧೀನ ಪತ್ರ ಕೊಟ್ಟಿದ್ದಾರೆ. ಆದರೂ ಕುಮಾರಸ್ವಾಮಿ ಕೈಗಾರಿಕೆ ನಿರ್ಮಿಸಿಲ್ಲ. ಇಂಡಸ್ಟ್ರಿಯಲ್ ನಿವೇಶನ ಬೇರೆ ಯಾರಿಗಾದರೂ ಕೊಟ್ಟಿದ್ದರೆ ಅಲ್ಲಿ ಕೈಗಾರಿಕೆ ಸ್ಥಾಪನೆಯಾಗಿ ಉದ್ಯೋಗಾವಕಾಶಗಳು ಸೃಷ್ಟಿಯಾಗುತ್ತಿದ್ದವು. ಸರ್ಕಾರಕ್ಕೆ ಆದಾಯವೂ ಬರುತ್ತಿತ್ತು. ಕುಮಾರಸ್ವಾಮಿ ಅದನ್ನು ಸಂಪೂರ್ಣ ಉಲ್ಲಂಘಿಸಿದ್ದಾರೆ. ಅಲ್ಲದೆ ದಿನಾಂಕ 18-2-2017 ರಲ್ಲಿ ಮುಡಾ ಆಯುಕ್ತರಿಗೆ ಬದಲಿ ನಿವೇಶನ ಕೊಡುವಂತೆ ಮನವಿ ಕೊಟ್ಟಿದ್ದಾರೆ. ಅವರಿಗೆ ಬದಲಿ ನಿವೇಶನ ಕೊಡಲು 7-1-2023 ರಂದು ಮುಡಾ ನಿರ್ಣಯ ಮಾಡಿದೆ. ಅದೇ ಜಾಗದಲ್ಲಿ ಅಕ್ರಮವಾಗಿದ್ದ ಇನ್ನೊಬ್ಬರು ವ್ಯಕ್ತಿ ಕೋರ್ಟಿಗೆ ಹೋಗಿ ತಡೆಯಾಜ್ಞೆ ತಂದಿರುವುದರಿಂದ ಇದು ನಿಂತಿದೆ. ಇಷ್ಟೆಲ್ಲ ಅಕ್ರಮ ಮಾಡಿ ಕುಮಾರಸ್ವಾಮಿ ವೇದಾಂತ ಮಾತಾಡುತ್ತಿದ್ದಾರೆ.

ಶಿವಮೊಗ್ಗದ ಸುಡಾ ಶಿವಮೊಗ್ಗ ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿರುವ ಎಬಿವಿಪಿ ಲೇಔಟ್‌ನಲ್ಲಿ 1305 ನಿವೇಶನಗಳನ್ನು ರಚಿಸಿ ಹಂಚಿಕೆ ಮಾಡಿದ್ದಾರೆ. ಅವುಗಳಲ್ಲಿ 807 ನಿವೇಶನಗಳು ಅಕ್ರಮವಾಗಿ ಹಂಚಿಕೆ ಮಾಡಿ ವ್ಯಾಪಕ ಹಗರಣ ಮಾಡಿರುವ ಕುರಿತು ಸರ್ಕಾರಕ್ಕೆ 2020 ರಲ್ಲಿ ಲೋಕಾಯುಕ್ತ ವರದಿ ಸಲ್ಲಿಸಿದೆ ಎಂಬುದು ತಿಳಿದು ಬಂದಿದೆ. ಅದರ ಕುರಿತೂ ಕೂಡ ನಿರ್ದಾಕ್ಷಿಣ್ಯ ಕ್ರಮ ವಹಿಸಲಾಗುವುದು.

Ad Widget
Click to comment

Leave a Reply

ರಾಜಕೀಯ

BJP leaders-ಗಡಿಪಾರಿಗೊಳಗಾದ ನರಸಿಂಹ ಮಾಣಿ ಮನೆಗೆ ಬಿಜೆಪಿ ಮುಖಂಡರ ಭೇಟಿ; ಕುಟುಂಬಕ್ಕೆ ಆತ್ಮಸ್ಥೈರ್ಯ

Published

on

Ad Widget

Ad Widget

Ad Widget

Ad Widget

ಗಡಿಪಾರಿಗೊಳಗಾದ ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಸಂಯೋಜಕ ನರಸಿಂಹ ಮಾಣಿ ಅವರ ನಿವಾಸಕ್ಕೆ ಬಿಜೆಪಿ ಮುಖಂಡರಾದ ಸಹಜ್ ರೈ ಬಳಜ್ಜ, ಪ್ರಸನ್ನ ದರ್ಬೆ ಹಾಗೂ ಅಜಿತ್ ರೈ ಹೊಸಮನೆ ಭೇಟಿ ನೀಡಿ ಕುಟುಂಬದ ಸದಸ್ಯರೊಂದಿಗೆ ಮಾತುಕತೆ ನಡೆಸಿದರು.

Ad Widget

Ad Widget

Ad Widget

Ad Widget

ಪುತ್ತೂರು: ಗಡಿಪಾರಿಗೊಳಗಾದ ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಸಂಯೋಜಕ ನರಸಿಂಹ ಮಾಣಿ ಅವರ ನಿವಾಸಕ್ಕೆ ಬಿಜೆಪಿ ಮುಖಂಡರಾದ ಸಹಜ್ ರೈ ಬಳಜ್ಜ, ಪ್ರಸನ್ನ ದರ್ಬೆ ಹಾಗೂ ಅಜಿತ್ ರೈ ಹೊಸಮನೆ ಭೇಟಿ ನೀಡಿ ಕುಟುಂಬದ ಸದಸ್ಯರೊಂದಿಗೆ ಮಾತುಕತೆ ನಡೆಸಿದರು.

Ad Widget

Ad Widget alt="Ad Widget"/>

Ad Widget

ನರಸಿಂಹ ಮಾಣಿ ಅವರು ಎದುರಿಸುತ್ತಿರುವ ಪ್ರಸಕ್ತ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಕುಟುಂಬದ ಸದಸ್ಯರಿಗೆ ಧೈರ್ಯ ಹಾಗೂ ಆತ್ಮಸ್ಥೈರ್ಯ ತುಂಬುವ ಉದ್ದೇಶದಿಂದ ಈ ಭೇಟಿ ನಡೆಯಿತು. ಈ ಸಂದರ್ಭದಲ್ಲಿ ಅವರ ತಾಯಿಯ ಯೋಗಕ್ಷೇಮ ವಿಚಾರಿಸಿದ ಮುಖಂಡರು, ಧೈರ್ಯ ಕಳೆದುಕೊಳ್ಳದೆ ಆತ್ಮವಿಶ್ವಾಸದಿಂದ ಇರುವಂತೆ ಪ್ರೇರಣೆ ನೀಡಿದರು.

Ad Widget

Ad Widget <> Ad Widget

ಸಾಮಾಜಿಕ ಹಾಗೂ ಸಂಘಟನಾತ್ಮಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಕಾರ್ಯಕರ್ತರ ಕುಟುಂಬದೊಂದಿಗೆ ಸಮಾಜ ನಿಲ್ಲಬೇಕು ಎಂಬ ಆಶಯವನ್ನು ಈ ಸಂದರ್ಭದಲ್ಲಿ ವ್ಯಕ್ತಪಡಿಸಲಾಯಿತು.

ಭೇಟಿಯ ವೇಳೆ ಬಿಜೆಪಿ ಪುತ್ತೂರು ಮಂಡಲ ಉಪಾಧ್ಯಕ್ಷ ರತನ್ ರೈ ಕುಂಬ್ರ, ಪುತ್ತೂರು ಯುವಮೋರ್ಚಾ ನಗರ ಮಂಡಲ ಅಧ್ಯಕ್ಷ ನಿತೇಶ್ ನೆಲಪ್ಪಾಲು, ಯುವಮೋರ್ಚಾದ ಪವನ್ ಶೆಟ್ಟಿ ಕಂಬಳತ್ತಡ್ಡ, ಪ್ರೀತಮ್ ಶೆಟ್ಟಿ ಪೆರ್ನೆ, ಆದೇಶ್ ಶೆಟ್ಟಿ ಉಪ್ಪಿನಂಗಡಿ, ವಿಶ್ವನಾಥ ಕುಲಾಲ್ ಹಾಗೂ ಹಿಂದೂ ಜಾಗರಣ ವೇದಿಕೆಯ ರಾಜೇಶ್ ಉಪಸ್ಥಿತರಿದ್ದರು.

Continue Reading

ಮಂಗಳೂರು

Lakshman Sawadi-ಸಹಕಾರಿ ಕ್ಷೇತ್ರದ ಮೂಲಕ ಕರಾವಳಿಯಲ್ಲಿ ಕಾಂಗ್ರೆಸ್‌ಗೆ ಹೊಸ ಶಕ್ತಿ; ತಳಮಟ್ಟದಿಂದ ಪಕ್ಷ ಕಟ್ಟಲು ಕಾರ್ಯಕರ್ತರಿಗೆ ಸಚಿವ ಲಕ್ಷ್ಮಣ ಸವದಿ ಕರೆ

Published

on

Ad Widget

Ad Widget

Ad Widget

Ad Widget

ಹಕಾರಿ ಕ್ಷೇತ್ರದಲ್ಲಿ ಜಾತಿ-ಮತಗಳ ಬೇಧವಿಲ್ಲದೆ ಜನರಿಗೆ ನೇರವಾಗಿ ಸಹಾಯ ಮಾಡಬಹುದು. ಹೀಗಾಗಿ, ತಳಮಟ್ಟದಲ್ಲಿ ಸಹಕಾರಿ ಸಂಘಗಳನ್ನು ಬಲಪಡಿಸುವ ಮೂಲಕ ಮಂಗಳೂರು, ಉಡುಪಿ ಹಾಗೂ ಕಾರವಾರ ಜಿಲ್ಲೆಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಸದೃಢಗೊಳಿಸಲು ಕಾರ್ಯಕರ್ತರು ಮುಂದಾಗಬೇಕು,” ಎಂದು ಸಹಕಾರ ಸಚಿವ ಲಕ್ಷ್ಮಣ ಸವದಿ ಕರೆ ನೀಡಿದರು.

Ad Widget

Ad Widget

Ad Widget

Ad Widget

ಮಂಗಳೂರು: ಸಹಕಾರಿ ಕ್ಷೇತ್ರದಲ್ಲಿ ಜಾತಿ-ಮತಗಳ ಬೇಧವಿಲ್ಲದೆ ಜನರಿಗೆ ನೇರವಾಗಿ ಸಹಾಯ ಮಾಡಬಹುದು. ಹೀಗಾಗಿ, ತಳಮಟ್ಟದಲ್ಲಿ ಸಹಕಾರಿ ಸಂಘಗಳನ್ನು ಬಲಪಡಿಸುವ ಮೂಲಕ ಮಂಗಳೂರು, ಉಡುಪಿ ಹಾಗೂ ಕಾರವಾರ ಜಿಲ್ಲೆಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಸದೃಢಗೊಳಿಸಲು ಕಾರ್ಯಕರ್ತರು ಮುಂದಾಗಬೇಕು,” ಎಂದು ಸಹಕಾರ ಸಚಿವ ಲಕ್ಷ್ಮಣ ಸವದಿ ಕರೆ ನೀಡಿದರು.

Ad Widget

Ad Widget alt="Ad Widget"/>

Ad Widget

​ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿದರು.

Ad Widget

Ad Widget <> Ad Widget

ಗ್ರಾಮೀಣ ಮಟ್ಟದಲ್ಲಿ ಕೃಷಿ ಪತ್ತಿನ ಸಹಕಾರಿ ಸಂಘಗಳು ಪಕ್ಷದ ಮೂಲ ಬೇರುಗಳಿದ್ದಂತೆ. ಜಿಲ್ಲೆಯ ಯಾವ ಗ್ರಾಮಗಳಲ್ಲಿ ಇನ್ನೂ ಸಹಕಾರಿ ಸಂಘಗಳು ಸ್ಥಾಪನೆಯಾಗಿಲ್ಲವೋ ಅಂತಹ ಗ್ರಾಮಗಳನ್ನು ಗುರುತಿಸಿ ಪಟ್ಟಿ ನೀಡಿದರೆ, ತಕ್ಷಣವೇ ಅಧಿಕಾರಿಗಳ ಮೂಲಕ ನೋಂದಣಿ ಮಾಡಿಸಿ ಜಿಲ್ಲಾ ಮಧ್ಯವರ್ತಿ ಬ್ಯಾಂಕ್ (DCC) ಸದಸ್ಯತ್ವ ಕೊಡಿಸಲಾಗುವುದು ಎಂದರು.

ಕರಾವಳಿಯ ಮೂರು ಜಿಲ್ಲೆಗಳಲ್ಲಿ ಪಕ್ಷವನ್ನು ಸಂಘಟಿಸಲು ನಾನು ಸಂಪೂರ್ಣ ಬದ್ಧನಾಗಿದ್ದೇನೆ ಎಂದರು.

Ad Widget

Ad Widget

“2008ರಲ್ಲಿ ನಾನು ಸಹಕಾರ ಸಚಿವನಾಗಿದ್ದಾಗ ಕೃಷಿ ಸಾಲದ ಬಡ್ಡಿದರವನ್ನು ಶೇ.3ಕ್ಕೆ ಇಳಿಸಿದ್ದೆ. ಆದರೆ, ಅಂದಿನ ಪ್ರಧಾನಿ ಡಾ.ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರವು ಅವಧಿಗೆ ಮುನ್ನ ಸಾಲ ಮರುಪಾವತಿಸುವವರಿಗೆ ಶೇ.3ರಷ್ಟು ಸಹಾಯಧನ ಘೋಷಿಸಿದ್ದರಿಂದ, ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕದಲ್ಲಿ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ಸಿಗುವಂತಾಯಿತು. ಈ ಸತ್ಯವನ್ನು ಜನರಿಗೆ ತಿಳಿಸುವ ಕೆಲಸವಾಗಬೇಕು ಎಂದರು.

​ಜೈನ ಅಭಿವೃದ್ಧಿ ನಿಗಮಕ್ಕೆ ಸಿಎಂ ಅನುಮೋದನೆ:

ಕಾಂಗ್ರೆಸ್ ಪಕ್ಷಕ್ಕೆ ‘ಹಸ್ತದ ಚಿಹ್ನೆ’ ಸಿಕ್ಕ ಇತಿಹಾಸವನ್ನು ಸ್ಮರಿಸಿದ ಸವದಿ, “ತುರ್ತು ಪರಿಸ್ಥಿತಿಯ ನಂತರ ಚಿಹ್ನೆಯ ವ್ಯಾಜ್ಯ ಎದುರಾದಾಗ ನಮ್ಮ ಭಾಗದ ಜೈನ ಮುನಿ ಶ್ರೀ ವಿದ್ಯಾನಂದ ಮುನಿಗಳು ಇಂದಿರಾ ಗಾಂಧಿ ಅವರಿಗೆ ಬೆಳ್ಳಿಯ ಹಸ್ತದ ಚಿಹ್ನೆ ನೀಡಿ ಆಶೀರ್ವದಿಸಿದ್ದರು. ಆ ಸಮಾಜದ ಋಣ ತೀರಿಸುವ ಉದ್ದೇಶದಿಂದ ಹಾಗೂ ಕರಾವಳಿ ಭಾಗದಲ್ಲಿ ಹೆಚ್ಚಿರುವ ಜೈನ ಸಮುದಾಯದ ಬೇಡಿಕೆಯಂತೆ, ಪ್ರತ್ಯೇಕ ‘ಜೈನ ಅಭಿವೃದ್ಧಿ ನಿಗಮ’ ಸ್ಥಾಪನೆಗೆ ಎರಡು ದಿನಗಳ ಹಿಂದಷ್ಟೇ ಮುಖ್ಯಮಂತ್ರಿಗಳಿಂದ ಕಡತಕ್ಕೆ ಅನುಮೋದನೆ ಪಡೆಯಲಾಗಿದೆ,” ಎಂದು ಮಾಹಿತಿ ನೀಡಿದರು.

ಸಚಿವರನ್ನು ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಗೌರವಿಸಿದರು.

ಮಾಜಿ ಸಚಿವ ಬಿ. ರಮಾನಾಥ್ ರೈ, ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್, ಮುಡಾ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ಮಾಜಿ ಮೇಯರ್ ಶಶಿಧರ ಹೆಗ್ಡೆ, ಪರಿಸರ‌ಮತ್ತು ಪ್ರವಾಸೋದ್ಯಮ‌ ನಿಗಮ ಅಧ್ಯಕ್ಷೆ ಶಾಲೆಟ್ ಪಿಂಟೋ, ಗ್ಯಾರಂಟಿ ಸಮಿತಿ ಜಿಲ್ಲಾಧ್ಯಕ್ಷ ಭರತ್ ಮುಂಡೋಡಿ, ವಿಶ್ವಾಸ್ ದಾಸ್, ಶುಭೋದಯ ಆಳ್ವ, ಬ್ಲಾಕ್ ಅಧ್ಯಕ್ಷರು, ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

Ad Widget
Continue Reading

ರಾಜಕೀಯ

Puttur-ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ: ಬೂಡಿಯಾರು; ಶಾಸಕರು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆಯುವುದು ಮಾತ್ರ : ಸಾಜ

Published

on

Ad Widget

Ad Widget

Ad Widget

Ad Widget

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲ ಹಾಗೂ ನೆಟ್ಟಣಿಗೆ ಮುಡೂರು ಶಕ್ತಿ ಕೇಂದ್ರದ ವತಿಯಿಂದ ನ.18ರಂದು ಈಶ್ವರಮಂಗಲದಲ್ಲಿ ನಡೆದ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪ್ರತಿಭಟನಾ ಸಭೆಯಲ್ಲಿ ಜಿಲ್ಲಾ ಬಿಜೆಪಿ ಮಾಜಿ ಉಪಾಧ್ಯಕ್ಷ ಹಾಗೂ ಪಾದಯಾತ್ರೆಯ ಜಿಲ್ಲಾ ಸಹ ಸಂಚಾಲಕ ಬೂಡಿಯಾರ್ ರಾಧಾಕೃಷ್ಣ ರೈ ಅವರು ಮಾತನಾಡಿದರು.

Ad Widget

Ad Widget

Ad Widget

Ad Widget

ಪುತ್ತೂರು: ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ. ಅಭಿವೃದ್ಧಿಯ ಹೆಸರಿನಲ್ಲಿ ನೀಡಲಾಗುತ್ತಿರುವ ಭರವಸೆಗಳು ಕೇವಲ ಬ್ಯಾನರ್‌ಗಳಿಗೆ ಸೀಮಿತವಾಗಿದ್ದು, ಕ್ಷೇತ್ರಕ್ಕೆ ಯಾವುದೇ ಗಮನಾರ್ಹ ಅನುದಾನ ಬರುತ್ತಿಲ್ಲ. ಶಾಸಕರು ಕಳೆದ ಮೂರೂವರೆ ವರ್ಷಗಳಲ್ಲಿ ಎಷ್ಟು ಅನುದಾನ ತಂದಿದ್ದಾರೆ ಎಂಬುದನ್ನು ಬಹಿರಂಗಪಡಿಸಲಿ ಎಂದು ಜಿಲ್ಲಾ ಬಿಜೆಪಿ ಮಾಜಿ ಉಪಾಧ್ಯಕ್ಷ ಹಾಗೂ ಪಾದಯಾತ್ರೆಯ ಜಿಲ್ಲಾ ಸಹ ಸಂಚಾಲಕ ಬೂಡಿಯಾರ್ ರಾಧಾಕೃಷ್ಣ ರೈ ಸವಾಲು ಹಾಕಿದರು.

Ad Widget

Ad Widget alt="Ad Widget"/>

Ad Widget

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲ ಹಾಗೂ ನೆಟ್ಟಣಿಗೆ ಮುಡೂರು ಶಕ್ತಿ ಕೇಂದ್ರದ ವತಿಯಿಂದ ನ.18ರಂದು ಈಶ್ವರಮಂಗಲದಲ್ಲಿ ನಡೆದ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪ್ರತಿಭಟನಾ ಸಭೆಯಲ್ಲಿ ಅವರು ಮಾತನಾಡಿದರು.

Ad Widget

Ad Widget <> Ad Widget

ರೈತರಿಗೆ ಬೆಳೆ ವಿಮೆಯ ಸೂಕ್ತ ಮೊತ್ತ ನೀಡದೆ ವಂಚಿಸಲಾಗುತ್ತಿದೆ. ಕಾರ್ಮಿಕರ ನಿಧಿಯ ವಿಚಾರದಲ್ಲೂ ಅನ್ಯಾಯವಾಗುತ್ತಿದೆ. ಕ್ಷೇತ್ರದಾದ್ಯಂತ ರಸ್ತೆ ದುರಸ್ತಿ ಕಾರ್ಯಗಳು ಸಮರ್ಪಕವಾಗಿ ನಡೆಯುತ್ತಿಲ್ಲ. ಒಂದಿಷ್ಟು ಅನುದಾನ ಬಂದಿದ್ದರೆ ಅದು ಕೇಂದ್ರ ಸರ್ಕಾರದಿಂದ ಮಾತ್ರವೇ ಹೊರತು ರಾಜ್ಯ ಸರ್ಕಾರದಿಂದಲ್ಲ ಎಂದು ಆರೋಪಿಸಿದರು.

ಅನ್ನಭಾಗ್ಯ ಯೋಜನೆಯಡಿ ಕೇಂದ್ರ ಸರ್ಕಾರ ನೀಡುವ ಅಕ್ಕಿಯನ್ನೇ ವಿತರಿಸಲಾಗುತ್ತಿದೆ. ಆದರೆ ಬೆಳೆ ವಿಮೆಯಲ್ಲಿ ರಾಜ್ಯ ಸರ್ಕಾರ ತನ್ನ ಪಾಲಿನ ಮೊತ್ತವನ್ನು ನೀಡದೆ ರೈತರಿಗೆ ಅನ್ಯಾಯ ಮಾಡುತ್ತಿದೆ. ಅಭಿವೃದ್ಧಿಯ ಬಗ್ಗೆ ದೊಡ್ಡ ದೊಡ್ಡ ಮಾತುಗಳನ್ನಾಡುವ ಶಾಸಕರು ಕ್ಷೇತ್ರಕ್ಕೆ ತಂದಿರುವ ಅನುದಾನದ ಲೆಕ್ಕವನ್ನು ಜನರ ಮುಂದಿಡಬೇಕು ಎಂದು ಆಗ್ರಹಿಸಿದರು.

Ad Widget

Ad Widget

ಬಿಜೆಪಿ ಅವಧಿಯಲ್ಲಿ ನೆಟ್ಟಣಿಗೆ ಮುಡೂರಿಗೆ ₹29.50 ಕೋಟಿ ಅನುದಾನ: ಸಾಜ ರಾಧಾಕೃಷ್ಣ ಆಳ್ವ

ಗ್ರಾಮಾಂತರ ಮಂಡಲದ ನಿಕಟಪೂರ್ವ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ಮಾತನಾಡಿ, ಬಿಜೆಪಿ ಸರ್ಕಾರದ ಅವಧಿಯಲ್ಲಿ ನೆಟ್ಟಣಿಗೆ ಮುಡೂರು ಗ್ರಾಮಕ್ಕೆ ಅಂದಿನ ಶಾಸಕ ಸಂಜೀವ ಮಠಂದೂರು ಹಾಗೂ ಸಂಸದ ನಳಿನ್ ಕುಮಾರ್ ಕಟೀಲು ಅವರ ಮೂಲಕ ಒಟ್ಟು ₹29.50 ಕೋಟಿ ಅನುದಾನ ಒದಗಿಸಲಾಗಿತ್ತು ಎಂದು ತಿಳಿಸಿದರು.

ಈಶ್ವರಮಂಗಲ-ಸುಳ್ಯಪದವು ರಸ್ತೆ ಹಾಗೂ ಹನುಮಗಿರಿಯಿಂದ ನಿಡಳ್ಳಿ ಮುಂಡೂರು ರಸ್ತೆಯನ್ನು ಪಿಎಂಜಿಎಸ್‌ವೈ ಯೋಜನೆಯಡಿ ಅಭಿವೃದ್ಧಿಪಡಿಸಲಾಗಿತ್ತು. ಆದರೆ ಈಗಿನ ಶಾಸಕರು ಮೂರೂವರೆ ವರ್ಷಗಳಲ್ಲಿ ಸಾಕಷ್ಟು ಅನುದಾನ ತಂದಿದ್ದೇನೆ ಎಂದು ಹೇಳಿಕೊಳ್ಳುತ್ತಿರುವುದು ಕೇವಲ ಭಾಷಣಗಳಿಗೆ ಸೀಮಿತವಾಗಿದೆ. ಬಂದಿರುವುದು ಶಾಸನಬದ್ಧ ಅನುದಾನ ಮಾತ್ರ ಎಂದು ಟೀಕಿಸಿದರು.

ಅನುದಾನ ಮಂಜೂರಾಗಿದೆ ಎಂದು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆದು ಶಿಲಾನ್ಯಾಸ ನೆರವೇರಿಸಲಾಗುತ್ತದೆ. ಆದರೆ ಕಾಮಗಾರಿಗಳು ಆರಂಭವಾಗಲು ಒಂದು ವರ್ಷವೇ ಬೇಕಾಗುತ್ತದೆ. ಶಿಲಾನ್ಯಾಸ ನಡೆದ ಹಲವು ಕಾಮಗಾರಿಗಳು ಇನ್ನೂ ಅನುಷ್ಠಾನಗೊಂಡಿಲ್ಲ. ಆದರೂ ಹಿಂದಿನ ಬಿಜೆಪಿ ಆಡಳಿತದ ಅವಧಿಯಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ ಎಂದು ಅಪಪ್ರಚಾರ ಮಾಡಲಾಗುತ್ತಿದೆ ಎಂದು ಆರೋಪಿಸಿದರು.

ಕಳೆದ ಬಿಜೆಪಿ ಆಡಳಿತದ ಅವಧಿಯಲ್ಲಿ ನೆಟ್ಟಣಿಗೆ ಮುಡೂರು ಗ್ರಾಮಕ್ಕೆ ಬಂದಿರುವ ಅನುದಾನಗಳ ಸಂಪೂರ್ಣ ಪಟ್ಟಿ ಶಕ್ತಿ ಕೇಂದ್ರದ ಪ್ರಮುಖರ ಬಳಿ ಇದೆ ಎಂದು ಅವರು ಹೇಳಿದರು.

ಸಭೆಯಲ್ಲಿ ಶಕ್ತಿ ಕೇಂದ್ರದ ಅಧ್ಯಕ್ಷ ರಾಜೇಶ್ ರೈ ಪರ್ಪುಂಜ ಹಾಗೂ ಗ್ರಾಮಾಂತರ ಮಂಡಲದ ಪ್ರಧಾನ ಕಾರ್ಯದರ್ಶಿ ಲೋಕೇಶ್ ಚಾಕೋಟೆ ಉಪಸ್ಥಿತರಿದ್ದರು.

ಪ್ರತಿಭಟನಾ ಸಭೆಯ ಬಳಿಕ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಗ್ರಾಮ ಪಂಚಾಯತ್ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು. ನೆಟ್ಟಣಿಗೆ ಮುಡೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯ ಅಬ್ದುಲ್ ಖಾದರ್ ನರಸೀನಡ್ಕ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ದೀಪಕ್ ಕುಮಾರ್ ಮುಂಡ್ಯ ವಂದಿಸಿದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!