Connect with us

ರಾಜಕೀಯ

ಪ್ರತಾಪ್ ಸಿಂಹ ವಿರುದ್ದ ಕೆರಳಿ ಪಕ್ಷ ತೊರೆದಿದ್ದ ಮೈಸೂರಿನ ಮಾಜಿ ಸಂಸದ ವಿಜಯಶಂಕರ್ ಸೇರಿದಂತೆ 6 ಹೊಸ ಮುಖಗಳು ರಾಜ್ಯಪಾಲರಾಗಿ ಆಯ್ಕೆ

Published

on



Ad Widget

Ad Widget

Ad Widget

Ad Widget

ನವದೆಹಲಿ: ಮಹಾರಾಷ್ಟ್ರದ ಮಾಜಿ ಸ್ಪೀಕರ್ ಹರಿಭಾವು ಬಾಗಡೆ, ಮಾಜಿ ಕೇಂದ್ರ ಸಚಿವ ಸಂತೋಷ್ ಗಂಗ್ವಾರ್ ಮತ್ತು ಬಿಜೆಪಿಯ ಹಿರಿಯ ನಾಯಕರಾದ ಒಪಿ ಮಾಥುರ್ ಮತ್ತು ಮೈಸೂರಿನ ಮಾಜಿ ಸಂಸದ ಸಿ.ಎಚ್‌.ವಿಜಯಶಂಕ‌ರ್ ಸೇರಿದಂತೆ ಆರು ಹೊಸ ರಾಜ್ಯಪಾಲರನ್ನು ರಾಷ್ಟ್ರಪತಿ ದೌಪದಿ ಮುರ್ಮು ಅವರು ನೇಮಕ ಮಾಡಿದ್ದಾರೆ.

Ad Widget

Ad Widget

Ad Widget

Ad Widget

ಮೈಸೂರಿನಿಂದ 2 ಬಾರಿ ಬಿಜೆಪಿ ಸಂಸದರಾಗಿದ್ದ ಸಿ.ಎಚ್​. ವಿಜಯಶಂಕರ್​ ಅವರಿಗೆ 2014ರ ಚುನಾವಣೆಯಲ್ಲಿ ಮೈಸೂರಿನಿಂದ ಟಿಕೆಟ್​ ಸಿಕ್ಕಿರಲಿಲ್ಲ. ಪ್ರತಾಪ್​ ಸಿಂಹ ಮೈಸೂರು- ಕೊಡಗು ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರಿಂದ ವಿಜಯಶಂಕರ್​ ಅವರನ್ನು ದೇವೇಗೌಡರ ವಿರುದ್ಧ ಹಾಸನದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಸಲಾಗಿತ್ತು. ಆದರೆ, ದೇವೇಗೌಡರ ವಿರುದ್ಧ ವಿಜಯಶಂಕರ್​ ಸೋಲು ಕಂಡಿದ್ದರು. 2017ರಲ್ಲಿ ಪ್ರತಾಪ್ ಸಿಂಹ ವಿರುದ್ದ ಕೆರಳಿ ಬಿಜೆಪಿಗೆ ರಾಜೀನಾಮೆ ನೀಡಿ ಕಾಂಗ್ರೆಸ್​ ಸೇರಿದ್ದ ಸಿ.ಎಚ್​. ವಿಜಯಶಂಕರ್​ ಸಿದ್ದರಾಮಯ್ಯನವರ ಆಪ್ತ ವಲಯದಲ್ಲಿ ಗುರುತಿಸಿಕೊಂಡವರು. ನಂತರ ಬಿಜೆಪಿಗೆ ಹಿಂದಿರುಗಿದ್ದರು.

Ad Widget

Ad Widget

Ad Widget alt="Ad Widget"/>

Ad Widget

ಪ್ರಧಾನಿ ನರೇಂದ್ರ ಮೋದಿ ಅವರ ನಿಕಟವರ್ತಿ ಎಂದು ಪರಿಗಣಿಸಲ್ಪಟ್ಟಿರುವ ಗುಜರಾತ್‌ನ ಮಾಜಿ ಮುಖ್ಯ ಕಾರ್ಯದರ್ಶಿ ಕೆ. ಕೈಲಾಸನಾಥನ್‌ ಅವರನ್ನು ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಆಗಿ ನೇಮಿಸಲಾಗಿದೆ.

Ad Widget

Ad Widget <> Ad Widget

ಹರಿಭಾವು ಬಾಗಡೆ ಅವರನ್ನು ರಾಜಸ್ಥಾನದ ರಾಜ್ಯಪಾಲರನ್ನಾಗಿ ನೇಮಿಸಲಾಗಿದ್ದು, ಗಂಗ್ವಾ‌ರ್ ಅವರು ಜಾರ್ಖಂಡ್‌ಗೆ ಹಾಗೂ ಮಾಥುರ್ ಅವರನ್ನು ಸಿಕ್ಕಿಂನ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ.



Ad Widget

ತ್ರಿಪುರಾ ಮಾಜಿ ಮುಖ್ಯಮಂತ್ರಿ ಜಿಷ್ಣು ದೇವ್ ವರ್ಮಾ ಅವರನ್ನು ತೆಲಂಗಾಣದ ರಾಜ್ಯಪಾಲರನ್ನಾಗಿ ನೇಮಿಸಲಾಗಿದ್ದು, ರಮೆನ್ ದೇಕಾ ಅವರು ಛತ್ತೀಸಗಢಕ್ಕೆ ಹಾಗೂ ವಿಜಯಶಂಕರ್ ಅವರು ಮೇಘಾಲಯದ ರಾಜ್ಯಪಾಲರಾಗಿ ನೇಮಕಗೊಂಡಿದ್ದಾರೆ.ಉಳಿದಂತೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮೂವರು ರಾಜ್ಯಪಾಲರನ್ನು ಬೇರೆ ರಾಜ್ಯಗಳಿಗೆ ವರ್ಗಾವಣೆ ಮಾಡಿದೆ.

Ad Widget

Ad Widget

ಜಾರ್ಖಂಡ್ ಗವರ್ನರ್ ಸಿ.ಪಿ. ರಾಧಾಕೃಷ್ಣನ್ ಅವರನ್ನು ಮಹಾರಾಷ್ಟ್ರಕ್ಕೆ ವರ್ಗಾಯಿಸಲಾಗಿದ್ದು, ಪಂಜಾಬ್‌ನಲ್ಲಿ ಭಗವಂತ್‌ ಮಾನ್ ನೇತೃತ್ವದ ಎಎಪಿ ಸರ್ಕಾರದೊಂದಿಗೆ ಭಿನ್ನಾಭಿಪ್ರಾಯ ಹೊಂದಿದ್ದ ಬನ್ವಾರಿಲಾಲ್ ಪುರೋಹಿತ್ ಅವರ ಸ್ಥಾನಕ್ಕೆ ಅಸ್ಸಾಂನ ರಾಜ್ಯಪಾಲ ಗುಲಾಬ್ ಚಂದ್ ಕಟಾರಿಯಾ ಅವರನ್ನು ನೇಮಿಸಲಾಗಿದೆ.

ಸಿಕ್ಕಿಂ ಗವರ್ನರ್ ಲಕ್ಷ್ಮಣ್ ಪ್ರಸಾದ್ ಆಚಾರ್ಯ ಅವರನ್ನು ಅಸ್ಸಾಂನ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ. ಜತೆಗೆ ಮಣಿಪುರದ ರಾಜ್ಯಪಾಲರ ಹೆಚ್ಚುವರಿ ಜವಾಬ್ದಾರಿಯನ್ನು ಸಹ ನೀಡಲಾಗಿದೆ.

Ad Widget
Click to comment

Leave a Reply

ರಾಜಕೀಯ

2027ರ ಜನವರಿ ಮೊದಲ ವಾರದಲ್ಲೇ ಜಿ.ಪಂ ಮತ್ತು ತಾ.ಪಂ ಚುನಾವಣೆ : ಸಚಿವ ಸಂಪುಟದಲ್ಲಿ ಚರ್ಚೆ..!

Published

on



Ad Widget

Ad Widget

Ad Widget

Ad Widget

ಬೆಂಗಳೂರು : 2027 ಹೊಸ ವರ್ಷ ಆರಂಭದಲ್ಲಿಯೇ ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಚುನಾವಣೆ ನಡೆಸಲು ರಾಜ್ಯ ಸರಕಾರ ಮುಂದಾಗಿದೆ ಎನ್ನಲಾಗಿದೆ.

Ad Widget

Ad Widget

Ad Widget

Ad Widget

ಮಂಗಳವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾ‌ರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ವಿಷಯ ಚರ್ಚೆ ನಡೆಸಲಾಗಿದ್ದು, ಚುನಾವಣಾ ಆಯೋಗ ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಮೀಸಲಾತಿ ಪಟ್ಟಿಗೆ ಒಪ್ಪಿಗೆ ಸೂಚಿಸಿದರೆ ಜನವರಿ ಮೊದಲ ವಾರದಲ್ಲಿ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಚುನಾವಣೆ ನಡೆಸಲು ಸರಕಾರ ಮುಂದಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಎರಡು ದಿನಗಳ ಹಿಂದೆ ರಾಜ್ಯ ಚುನಾವಣಾ ಆಯೋಗಕ್ಕೆ ಜಿಲ್ಲಾ ಮತ್ತು ತಾಲೂಕು ಪಂಚಾಯತ್ ವಾರ್ಡುವಾರು ಮೀಸಲಾತಿ ಪಟ್ಟಿಗೆ ಒಪ್ಪಿಗೆ ಕೋರಿ ರಾಜ್ಯ ಸರಕಾರ ಮನವಿ ಸಲ್ಲಿಸಿತ್ತು. ರಾಜ್ಯದಲ್ಲಿ ಪರಿಷತ್‌ ಚುನಾವಣೆ ನೀತಿ ಸಂಹಿತೆ ಹಿನ್ನೆಲೆ ರಾಜ್ಯ ಚುನಾವಣಾ ಆಯೋಗ ಮೀಸಲಾತಿ ಪಟ್ಟಿಯನ್ನು ಕೇಂದ್ರ ಚುನಾವಣಾ ಆಯೋಗಕ್ಕೆ ಕಳುಹಿಸಿದೆ.ಚುನಾವಣಾ ಆಯೋಗ ಮೀಸಲಾತಿ ಪಟ್ಟಿಗೆ ಒಪ್ಪಿಗೆ ಸೂಚಿಸಿದ ಬಳಿಕ ಆ ಸಂಬಂಧ ಕರಡು ಅಧಿಸೂಚನೆ ಹೊರಬೀಳಲಿದೆ.

Ad Widget

Ad Widget <> Ad Widget

ಸಾರ್ವಜನಿಕ ಆಕ್ಷೇಪ ಪರಿಗಣಿಸಿದ ಬಳಿಕ ಡಿಸೆಂಬರ್ ಮಧ್ಯದಲ್ಲಿ ವಾರ್ಡುವಾರು ಮೀಸಲಾತಿ ಪಟ್ಟಿಯ ಅಂತಿಮ ಅಧಿಸೂಚನೆ ಪ್ರಕಟವಾಗಲಿದ್ದು. ಜನವರಿ ಮೊದಲ ವಾರದಲ್ಲಿ ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಚುನಾವಣೆ ನಡೆಸಲು ರಾಜ್ಯ ಮುಂದಾಗಿದ್ದೇವೆ. ಈ ಚುನಾವಣೆಯ 15 ದಿನಗಳ ಬಳಿಕ ಗ್ರಾಮ ಪಂಚಾಯಿತಿ ಚುನಾವಣೆ ನಡೆಸಲು ಉದ್ದೇಶಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರ್ ಖಂಡ್ರೆ ಮಾಹಿತಿ ಹಂಚಿಕೊಂಡಿದ್ದಾರೆ.



Ad Widget
Ad Widget
Continue Reading

ಸ್ಥಳೀಯ

UT Khader-ಚನ್ನಪಟ್ಟಣ: ನಡುರಾತ್ರಿ 2 ಗಂಟೆಗೆ ಸರ್ಕಾರಿ ಆಸ್ಪತ್ರೆಗೆ ಯು.ಟಿ. ಖಾದರ್ ದಿಢೀರ್ ಭೇಟಿ: ಹೊರಗಡೆ ಔಷಧಿ ಬರೆಯುತ್ತಿದ್ದಕ್ಕೆ ಗರಂ

Published

on



Ad Widget

Ad Widget

Ad Widget

Ad Widget

ಆರೋಗ್ಯ ಸಚಿವ ಯು.ಟಿ. ಖಾದರ್ ಅವರು ನಡುರಾತ್ರಿ 2 ಗಂಟೆ ಸುಮಾರಿಗೆ ಚನ್ನಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಖಾಸಗಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ತಡರಾತ್ರಿ ಚನ್ನಪಟ್ಟಣಕ್ಕೆ ಆಗಮಿಸಿದ್ದ ಸಚಿವರು, ಯಾವುದೇ ಮುನ್ಸೂಚನೆ ನೀಡದೆ ನೇರವಾಗಿ ಸರ್ಕಾರಿ ಆಸ್ಪತ್ರೆಗೆ ತೆರಳಿ ವ್ಯವಸ್ಥೆಗಳನ್ನು ಪರಿಶೀಲಿಸಿದರು.

Ad Widget

Ad Widget

Ad Widget

Ad Widget

ಚನ್ನಪಟ್ಟಣ, ಅ.6: ಆರೋಗ್ಯ ಸಚಿವ ಯು.ಟಿ. ಖಾದರ್ ಅವರು ನಡುರಾತ್ರಿ 2 ಗಂಟೆ ಸುಮಾರಿಗೆ ಚನ್ನಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Ad Widget

Ad Widget

Ad Widget alt="Ad Widget"/>

Ad Widget

ಖಾಸಗಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ತಡರಾತ್ರಿ ಚನ್ನಪಟ್ಟಣಕ್ಕೆ ಆಗಮಿಸಿದ್ದ ಸಚಿವರು, ಯಾವುದೇ ಮುನ್ಸೂಚನೆ ನೀಡದೆ ನೇರವಾಗಿ ಸರ್ಕಾರಿ ಆಸ್ಪತ್ರೆಗೆ ತೆರಳಿ ವ್ಯವಸ್ಥೆಗಳನ್ನು ಪರಿಶೀಲಿಸಿದರು.

Ad Widget

Ad Widget <> Ad Widget

ಈ ವೇಳೆ ಆಸ್ಪತ್ರೆಯ ಜನರಲ್ ವಾರ್ಡ್, ಐಸಿಯು ಹಾಗೂ ಶೌಚಾಲಯಗಳ ನೈರ್ಮಲ್ಯವನ್ನು ವೀಕ್ಷಿಸಿದ ಸಚಿವರು, ಸಿಬ್ಬಂದಿಯ ಹಾಜರಾತಿ ಪುಸ್ತಕವನ್ನೂ ಪರಿಶೀಲಿಸಿದರು. ಕರ್ತವ್ಯದಲ್ಲಿದ್ದ ವೈದ್ಯರಿಂದ ಆಸ್ಪತ್ರೆಯಲ್ಲಿನ ಚಿಕಿತ್ಸಾ ವ್ಯವಸ್ಥೆ ಹಾಗೂ ರೋಗಿಗಳ ಕುರಿತಂತೆ ಮಾಹಿತಿ ಪಡೆದುಕೊಂಡರು.



Ad Widget

ಹೊರಗಡೆ ಔಷಧಿ ಬರೆಯುತ್ತಿದ್ದಕ್ಕೆ ಅಸಮಾಧಾನ
ಸರ್ಕಾರಿ ಆಸ್ಪತ್ರೆಗೆ ಬರುವ ರೋಗಿಗಳಿಗೆ ಹೊರಗಿನ ಖಾಸಗಿ ಮೆಡಿಕಲ್ ಸ್ಟೋರ್‌ಗಳಿಂದ ಔಷಧಿ ಖರೀದಿಸುವಂತೆ ಚೀಟಿ ಬರೆದುಕೊಡುತ್ತಿರುವ ವಿಚಾರ ಸಚಿವರ ಗಮನಕ್ಕೆ ಬಂದಿದೆ. ಇದರಿಂದ ಅಸಮಾಧಾನಗೊಂಡ ಖಾದರ್ ಅವರು ವೈದ್ಯರು ಹಾಗೂ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡರು.

Ad Widget

Ad Widget

“ಸರ್ಕಾರಿ ಆಸ್ಪತ್ರೆಯಲ್ಲಿ ಅಗತ್ಯ ಸೌಲಭ್ಯಗಳು ಹಾಗೂ ಔಷಧಿಗಳಿದ್ದರೂ ರೋಗಿಗಳಿಗೆ ಹೊರಗಡೆ ಔಷಧಿ ಬರೆದುಕೊಡುವುದು ಏಕೆ?” ಎಂದು ಪ್ರಶ್ನಿಸಿದ ಸಚಿವರು, ಈ ಬಗ್ಗೆ ವೈದ್ಯರು ಹಾಗೂ ಸಿಬ್ಬಂದಿಯಿಂದ ಸ್ಪಷ್ಟನೆ ಪಡೆದರು.

ಸರ್ಕಾರಿ ಆಸ್ಪತ್ರೆಗೆ ಆಗಮಿಸುವ ಬಡ ಹಾಗೂ ಸಾಮಾನ್ಯ ಜನರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಸೂಕ್ತ ಹಾಗೂ ಸಮಯೋಚಿತ ಚಿಕಿತ್ಸೆ ಒದಗಿಸಬೇಕು. ರೋಗಿಗಳ ಸೇವೆಯಲ್ಲಿ ಯಾವುದೇ ಲೋಪವಾಗದಂತೆ ಕರ್ತವ್ಯ ನಿರ್ವಹಿಸಬೇಕು ಎಂದು ಸಂಬಂಧಪಟ್ಟ ಸಿಬ್ಬಂದಿಗೆ ಸಚಿವ ಯು.ಟಿ. ಖಾದರ್ ಖಡಕ್ ಸೂಚನೆ ನೀಡಿದರು.

Ad Widget
Continue Reading

ರಾಜಕೀಯ

DK Shivakumar-ಏಷ್ಯನ್ ಗೇಮ್ಸ್ ಪದಕ ವಿಜೇತರಿಗೆ ಭರ್ಜರಿ ಬಹುಮಾನ: 8 ಕ್ರೀಡಾಪಟುಗಳಿಗೆ ₹8 ಕೋಟಿ ಘೋಷಿಸಿದ ಡಿಕೆಶಿ – ಭಾಗವಹಿಸಿದವರಿಗೆ 5 ಲಕ್ಷ

Published

on



Ad Widget

Ad Widget

Ad Widget

Ad Widget

ಏಷ್ಯನ್ ಗೇಮ್ಸ್‌ 2026ರಲ್ಲಿ ದೇಶ ಹಾಗೂ ಕರ್ನಾಟಕದ ಕೀರ್ತಿ ಹೆಚ್ಚಿಸಿದ ರಾಜ್ಯದ ಕ್ರೀಡಾಪಟುಗಳನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಂಗಳವಾರ ವಿಧಾನಸೌಧದಲ್ಲಿ ಸನ್ಮಾನಿಸಿದರು. ಈ ವೇಳೆ 8 ಪದಕ ವಿಜೇತ ಕ್ರೀಡಾಪಟುಗಳಿಗೆ ಒಟ್ಟು ₹8 ಕೋಟಿ ನಗದು ಬಹುಮಾನ ಘೋಷಿಸಿದರು. ಇದೇ ವೇಳೆ ಏಷ್ಯನ್ ಗೇಮ್ಸ್‌ನಲ್ಲಿ ಭಾಗವಹಿಸಿದ ಕ್ರೀಡಾಪಟುಗಳಿಗೆ ಹಲವು ಮಹತ್ವದ ಪ್ರೋತ್ಸಾಹಕ ಕ್ರಮಗಳನ್ನು ರಾಜ್ಯ ಸರ್ಕಾರ ಘೋಷಿಸಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ಏಷ್ಯನ್ ಗೇಮ್ಸ್‌ 2026ರಲ್ಲಿ ದೇಶ ಹಾಗೂ ಕರ್ನಾಟಕದ ಕೀರ್ತಿ ಹೆಚ್ಚಿಸಿದ ರಾಜ್ಯದ ಕ್ರೀಡಾಪಟುಗಳನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಂಗಳವಾರ ವಿಧಾನಸೌಧದಲ್ಲಿ ಸನ್ಮಾನಿಸಿದರು. ಈ ವೇಳೆ 8 ಪದಕ ವಿಜೇತ ಕ್ರೀಡಾಪಟುಗಳಿಗೆ ಒಟ್ಟು ₹8 ಕೋಟಿ ನಗದು ಬಹುಮಾನ ಘೋಷಿಸಿದರು. ಇದೇ ವೇಳೆ ಏಷ್ಯನ್ ಗೇಮ್ಸ್‌ನಲ್ಲಿ ಭಾಗವಹಿಸಿದ ಕ್ರೀಡಾಪಟುಗಳಿಗೆ ಹಲವು ಮಹತ್ವದ ಪ್ರೋತ್ಸಾಹಕ ಕ್ರಮಗಳನ್ನು ರಾಜ್ಯ ಸರ್ಕಾರ ಘೋಷಿಸಿದೆ.

Ad Widget

Ad Widget

Ad Widget alt="Ad Widget"/>

Ad Widget

ಏಷ್ಯನ್ ಗೇಮ್ಸ್‌ನಲ್ಲಿ ಭಾಗವಹಿಸಿದ 20 ಕ್ರೀಡಾಪಟುಗಳಿಗೆ ತಲಾ ₹5 ಲಕ್ಷ
ಏಷ್ಯನ್ ಗೇಮ್ಸ್‌ 2026ರಲ್ಲಿ ಭಾಗವಹಿಸಲು ಅರ್ಹತೆ ಪಡೆದು ಸ್ಪರ್ಧಿಸಿದ ಕರ್ನಾಟಕದ 20 ಕ್ರೀಡಾಪಟುಗಳಿಗೆ ಇದೇ ಮೊದಲ ಬಾರಿಗೆ ತಲಾ ₹5 ಲಕ್ಷ ನಗದು ಪ್ರೋತ್ಸಾಹಧನ ನೀಡಲಾಗಿದೆ. ಅಥ್ಲೆಟಿಕ್ಸ್, ಬ್ಯಾಡ್ಮಿಂಟನ್, ಕ್ರಿಕೆಟ್, ಸೈಕ್ಲಿಂಗ್, ಈಕ್ವೆಸ್ಟ್ರಿಯನ್, ಗಾಲ್ಫ್, ಹಾಕಿ, ಶೂಟಿಂಗ್, ಈಜು, ಟೇಬಲ್ ಟೆನ್ನಿಸ್ ಹಾಗೂ ಸ್ಪೋರ್ಟ್ಸ್ ಕ್ಲೈಂಬಿಂಗ್ ವಿಭಾಗದ ಕ್ರೀಡಾಪಟುಗಳು ಇದರ ಫಲಾನುಭವಿಗಳಾಗಿದ್ದಾರೆ.

Ad Widget

Ad Widget <> Ad Widget

ಪದಕ ವಿಜೇತರ ಬಹುಮಾನ ಮೊತ್ತ ಭಾರೀ ಹೆಚ್ಚಳ
ಏಷ್ಯನ್ ಗೇಮ್ಸ್‌ನಲ್ಲಿ ಪದಕ ಗೆದ್ದ ಕ್ರೀಡಾಪಟುಗಳಿಗೆ ನೀಡುತ್ತಿದ್ದ ನಗದು ಬಹುಮಾನವನ್ನು ಸರ್ಕಾರ ಹೆಚ್ಚಿಸಿದೆ. ಈ ಹಿಂದೆ ಚಿನ್ನದ ಪದಕಕ್ಕೆ ₹35 ಲಕ್ಷ, ಬೆಳ್ಳಿಗೆ ₹25 ಲಕ್ಷ ಹಾಗೂ ಕಂಚಿಗೆ ₹15 ಲಕ್ಷ ನೀಡಲಾಗುತ್ತಿತ್ತು.



Ad Widget

ಇನ್ನು ಮುಂದೆ ಚಿನ್ನದ ಪದಕ ವಿಜೇತರಿಗೆ ₹1 ಕೋಟಿ, ಬೆಳ್ಳಿ ಪದಕ ವಿಜೇತರಿಗೆ ₹75 ಲಕ್ಷ ಹಾಗೂ ಕಂಚಿನ ಪದಕ ವಿಜೇತರಿಗೆ ₹50 ಲಕ್ಷ ನಗದು ಬಹುಮಾನ ನೀಡಲು ನಿರ್ಧರಿಸಲಾಗಿದೆ.

Ad Widget

Ad Widget

ಏಷ್ಯನ್ ಗೇಮ್ಸ್, ಕಾಮನ್‌ವೆಲ್ತ್ ಪದಕ ವಿಜೇತರಿಗೆ ನೇರ ನೇಮಕಾತಿ
ಏಷ್ಯನ್ ಗೇಮ್ಸ್ ಹಾಗೂ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಪದಕ ಗೆದ್ದ ಕ್ರೀಡಾಪಟುಗಳಿಗೆ ಗುಂಪು-ಬಿ ಹುದ್ದೆಗಳಿಗೆ ನೇರ ನೇಮಕಾತಿ ಅವಕಾಶ ಕಲ್ಪಿಸಲಾಗಿದೆ. ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯ ಆಯ್ಕೆ ಸಮಿತಿಯ ಮೂಲಕ ಈ ನೇಮಕಾತಿ ಪ್ರಕ್ರಿಯೆ ನಡೆಯಲಿದೆ.

ಒಲಿಂಪಿಕ್ಸ್ ತಯಾರಿಗೆ ತಲಾ ₹10 ಲಕ್ಷ
ಮುಂದಿನ ಒಲಿಂಪಿಕ್ಸ್‌ಗೆ ಸಜ್ಜಾಗುತ್ತಿರುವ ಕ್ರೀಡಾಪಟುಗಳಿಗೂ ಸರ್ಕಾರ ಪ್ರೋತ್ಸಾಹ ನೀಡಿದೆ. ಏಷ್ಯನ್ ಗೇಮ್ಸ್ ಪದಕ ವಿಜೇತರಾದ ಎಂ.ಆರ್. ಪೂವಮ್ಮ, ಸ್ನೇಹಾ ಎಸ್.ಎಸ್. ಹಾಗೂ ಶ್ರೇಯಾಂಕಾ ಪಾಟೀಲ್ ಮತ್ತು ಕಾಮನ್‌ವೆಲ್ತ್ ಗೇಮ್ಸ್ ಪದಕ ವಿಜೇತೆ ಶಿಲ್ಪಾ ಕೆ.ಎಸ್. ಅವರನ್ನು 2026-27ನೇ ಸಾಲಿನ ‘ಗುರಿ ಒಲಿಂಪಿಕ್ಸ್’ ಯೋಜನೆಗೆ ಸೇರ್ಪಡೆ ಮಾಡಲಾಗಿದೆ. ಇವರಿಗೆ ಒಲಿಂಪಿಕ್ಸ್ ತಯಾರಿಗಾಗಿ ತಲಾ ₹10 ಲಕ್ಷ ನಗದು ಪ್ರೋತ್ಸಾಹಧನ ನೀಡಲಾಗುತ್ತದೆ.

ಸರ್ಕಾರಿ ಉದ್ಯೋಗಗಳಲ್ಲಿ ಕ್ರೀಡಾಪಟುಗಳಿಗೆ ಶೇ.2 ಮೀಸಲಾತಿ
ಸಾಧಕ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರಿ ನೇರ ನೇಮಕಾತಿಗಳಲ್ಲಿ ಶೇ.2ರಷ್ಟು ಮೀಸಲಾತಿ ಜಾರಿಗೆ ತರಲಾಗಿದೆ. ಗುಂಪು-ಎ, ಗುಂಪು-ಬಿ, ಗುಂಪು-ಸಿ ಹಾಗೂ ಗುಂಪು-ಡಿ ಹುದ್ದೆಗಳ ನೇರ ನೇಮಕಾತಿಯಲ್ಲಿ ಈ ಮೀಸಲಾತಿ ಅನ್ವಯವಾಗಲಿದೆ. ಈ ಕುರಿತು ಅಕ್ಟೋಬರ್ 3, 2026ರಂದು ಅಧಿಸೂಚನೆ ಹೊರಡಿಸಲಾಗಿದೆ.

8 ಪದಕ ವಿಜೇತ ಕ್ರೀಡಾಪಟುಗಳು
ಶ್ರೇಯಾಂಕ ಆರ್. ಪಾಟೀಲ್ – ಮಹಿಳಾ ಕ್ರಿಕೆಟ್ ತಂಡ, ಚಿನ್ನ
ಎಂ.ಆರ್. ಪೂವಮ್ಮ – 4×400 ಮೀ. ಮಿಶ್ರ ರಿಲೇ, 4×400 ಮೀ. ಮಹಿಳಾ ರಿಲೇ – ಚಿನ್ನ ಮತ್ತು ಬೆಳ್ಳಿ
ತಿಲೋತ್ತಮಾ ಸೇನ್ – ಮಹಿಳೆಯರ 50 ಮೀ. ರೈಫಲ್, ಬೆಳ್ಳಿ
ಆಯುಷ್ ಆರ್. ಶೆಟ್ಟಿ – ಪುರುಷರ ತಂಡ ಬ್ಯಾಡ್ಮಿಂಟನ್, ಬೆಳ್ಳಿ
ಸ್ನೇಹಾ ಎಸ್.ಎಸ್. – 4×100 ಮೀ. ಮಿಶ್ರ ರಿಲೇ, ಕಂಚು
ಅದಿತಿ ಅಶೋಕ್ – ಮಹಿಳಾ ತಂಡ ಗಾಲ್ಫ್, ಬೆಳ್ಳಿ
ಪ್ರಣವಿ ಎಸ್. ಅರಸ್ – ಮಹಿಳಾ ತಂಡ ಗಾಲ್ಫ್ ಹಾಗೂ ವೈಯಕ್ತಿಕ ಸ್ಪರ್ಧೆ, ಬೆಳ್ಳಿ ಮತ್ತು ಚಿನ್ನ
ಮೋಹಿತ್ ಎಚ್.ಎಸ್. – ಪುರುಷರ ಹಾಕಿ ತಂಡ, ಚಿನ್ನ

ತಲಾ ₹5 ಲಕ್ಷ ಪ್ರೋತ್ಸಾಹಧನ ಪಡೆದ 20 ಕ್ರೀಡಾಪಟುಗಳು
ಯಶಸ್ ಪಾಲಾಕ್ಷ, ಸುಪ್ರಿಯಾ ಸಿಂಡಿಗೆರೆ ಬಸವರಾಜು, ಉನ್ನತಿ ಅಯ್ಯಪ್ಪ, ಎಂ.ಆರ್. ಪೂವಮ್ಮ, ಸ್ನೇಹಾ ಎಸ್.ಎಸ್., ಆಯುಷ್ ಶೆಟ್ಟಿ, ಶ್ರೇಯಾಂಕ ಆರ್. ಪಾಟೀಲ್, ಕೀರ್ತಿ ರಂಗಸ್ವಾಮಿ, ಫವಾದ್ ಮಿರ್ಜಾ, ಅದಿತಿ ಅಶೋಕ್, ಪ್ರಣವಿ ಎಸ್. ಅರಸ್, ಮೋಹಿತ್ ಎಚ್.ಎಸ್., ತಿಲೋತ್ತಮಾ ಸೇನ್, ಆಕಾಶ್ ಮಣಿ, ಶ್ರೀಹರಿ ನಟರಾಜ್, ದಕ್ಷಣ್ ಎಸ್., ಅನೀಶ್ ಗೌಡ, ಯಶಸ್ವಿನಿ ಘೋರ್ಪಡೆ, ಸಿಂಧುಶ್ರೀ ಹಾಗೂ ದೀಪು ಮಲ್ಲೇಶ್ ಅವರು ತಲಾ ₹5 ಲಕ್ಷ ಪ್ರೋತ್ಸಾಹಧನ ಪಡೆದಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading