ಕೆರೆಯ ಬಳಿಗೆ ಬಂದಿದ್ದ ಇವರು ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದಿದ್ದಾರೆ. ಕಾಲುಜಾರಿ ಬಿದ್ದ ರಭಸಕ್ಕೆ ಕೆರೆಯ ಕೆಸರಿನಲ್ಲಿ ಸಿಲುಕಿಕೊಂಡಿದ್ದು ಮೇಲೆ ಬರಲಾಗದೇ ಉಸಿರುಗಟ್ಟಿ ಪ್ರಾಣ ಬಿಟ್ಟಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕದಳದವರು ಮೃತದೇಹವನ್ನು ಮೇಲೆತ್ತುವಲ್ಲಿ ಯಶಸ್ವಿಯಾಗಿದ್ದಾರೆ. ಸ್ಥಳೀಯರಾದ ಕೃಪಾನ್, ಗುರುಕಿರಣ್, […]" /> ಕೆರೆಯ ಬಳಿಗೆ ಬಂದಿದ್ದ ಇವರು ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದಿದ್ದಾರೆ. ಕಾಲುಜಾರಿ ಬಿದ್ದ ರಭಸಕ್ಕೆ ಕೆರೆಯ ಕೆಸರಿನಲ್ಲಿ ಸಿಲುಕಿಕೊಂಡಿದ್ದು ಮೇಲೆ ಬರಲಾಗದೇ ಉಸಿರುಗಟ್ಟಿ ಪ್ರಾಣ ಬಿಟ್ಟಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕದಳದವರು ಮೃತದೇಹವನ್ನು ಮೇಲೆತ್ತುವಲ್ಲಿ ಯಶಸ್ವಿಯಾಗಿದ್ದಾರೆ. ಸ್ಥಳೀಯರಾದ ಕೃಪಾನ್, ಗುರುಕಿರಣ್, […]"> Puttur-ಪುತ್ತೂರು: ಕಾಲು ಜಾರಿ ಕೆರೆಗೆ ಬಿದ್ದು ಕೆಸರಿನಲ್ಲಿ ಮೇಲೆ ಬರಲಾಗದೆ ವ್ಯಕ್ತಿ ನಿಧನ - Nikhara News | Kannada News Website
Connect with us

ನಿಧನ ವಾರ್ತೆ

Puttur-ಪುತ್ತೂರು: ಕಾಲು ಜಾರಿ ಕೆರೆಗೆ ಬಿದ್ದು ಕೆಸರಿನಲ್ಲಿ ಮೇಲೆ ಬರಲಾಗದೆ ವ್ಯಕ್ತಿ ನಿಧನ

Published

on

Ad Widget

Ad Widget

Ad Widget

Ad Widget

ಪುತ್ತೂರು: ಬೆಳಿಯೂರುಕಟ್ಟೆ ಅಗರ್ತಬೈಲಿನಲ್ಲಿ ಕೆರೆಯ ಬಳಿಗೆ ಬಂದ ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ.

Ad Widget

Ad Widget

Ad Widget

Ad Widget

ಬಲ್ನಾಡು ಗ್ರಾಮದ ಬೆಳಿಯೂರುಕಟ್ಟೆ ಅಗರ್ತಬೈಲು ನಿವಾಸಿ ಜಗನ್ಮೋಹನ್ ರೈ ಅಗರ್ತಬೈಲು(58ವ) ಮೃತಪಟ್ಟವರು.

Ad Widget

Ad Widget alt="Ad Widget"/>

Ad Widget

ಕೆರೆಯ ಬಳಿಗೆ ಬಂದಿದ್ದ ಇವರು ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದಿದ್ದಾರೆ. ಕಾಲುಜಾರಿ ಬಿದ್ದ ರಭಸಕ್ಕೆ ಕೆರೆಯ ಕೆಸರಿನಲ್ಲಿ ಸಿಲುಕಿಕೊಂಡಿದ್ದು ಮೇಲೆ ಬರಲಾಗದೇ ಉಸಿರುಗಟ್ಟಿ ಪ್ರಾಣ ಬಿಟ್ಟಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕದಳದವರು ಮೃತದೇಹವನ್ನು ಮೇಲೆತ್ತುವಲ್ಲಿ ಯಶಸ್ವಿಯಾಗಿದ್ದಾರೆ.

Ad Widget

Ad Widget <> Ad Widget

ಸ್ಥಳೀಯರಾದ ಕೃಪಾನ್, ಗುರುಕಿರಣ್, ಆನಂದ, ರಫೀಕ್ ಮೃತದೇಹವನ್ನು ಮೇಲೆತ್ತುವಲ್ಲಿ ಸಹಕರಿಸಿದ್ದರು. ವಿಷಯ ತಿಳಿಯುತ್ತಿದ್ದಂತೆ ನೂರಾರು ಜನರು ಘಟನಾ ಸ್ಥಳದಲ್ಲಿ ಜಮಾಯಿಸಿದ್ದರು.

Ad Widget
Click to comment

Leave a Reply

ನಿಧನ ವಾರ್ತೆ

Babu Gowda-ಧರ್ಮಸ್ಥಳ: ದಿ. ಸೌಜನ್ಯ ಅಜ್ಜ ಪಾಂಗಳ ನಿವಾಸಿ ಬಾಬು ಗೌಡ ನಿಧನ

Published

on

Ad Widget

Ad Widget

Ad Widget

Ad Widget

ಧರ್ಮಸ್ಥಳ ಗ್ರಾಮದ ಪಾಂಗಳ ನಿವಾಸಿ, ದಿವಂಗತ ಸೌಜನ್ಯ ಅವರ ಅಜ್ಜ ಬಾಬು ಗೌಡ @ ಬಾಲು ಅವರು ಅನಾರೋಗ್ಯದಿಂದ ನ.23ರಂದು ಸಂಜೆ ಸ್ವಗೃಹದಲ್ಲಿ ನಿಧನರಾಗಿದ್ದಾರೆ.

Ad Widget

Ad Widget

Ad Widget

Ad Widget

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಪಾಂಗಳ ನಿವಾಸಿ, ದಿವಂಗತ ಸೌಜನ್ಯ ಅವರ ಅಜ್ಜ ಬಾಬು ಗೌಡ @ ಬಾಲು ಅವರು ಅನಾರೋಗ್ಯದಿಂದ ನ.23ರಂದು ಸಂಜೆ ಸ್ವಗೃಹದಲ್ಲಿ ನಿಧನರಾಗಿದ್ದಾರೆ.

Ad Widget

Ad Widget alt="Ad Widget"/>

Ad Widget

ಮೃತರು ಪತ್ನಿ ಶಾರದಾ, ಮಕ್ಕಳಾದ ಕುಸುಮಾವತಿ ಗೌಡ, ಯಶೋಧ ಗೌಡ, ಪ್ರೇಮಾ ಗೌಡ, ಪುಷ್ಪ ಗೌಡ, ವಿಠಲ ಗೌಡ ಹಾಗೂ ಪುರಂದರ ಗೌಡ ಸೇರಿದಂತೆ ಬಂಧುಮಿತ್ರರನ್ನು ಅಗಲಿದ್ದಾರೆ.

Ad Widget

Ad Widget <> Ad Widget

Ad Widget
Continue Reading

ನಿಧನ ವಾರ್ತೆ

One-sided love-ಇನ್‌ಸ್ಟಾಗ್ರಾಮ್ ಇನ್‌ಫ್ಲುಯೆನ್ಸರ್ ಮೇಲಿನ ಒನ್‌ಸೈಡೆಡ್ ಲವ್; ಹಲ್ಲೆಗೊಳಗಾದ ಯುವಕ ಸಾವು

Published

on

Ad Widget

Ad Widget

Ad Widget

Ad Widget

ಸೋಶಿಯಲ್ ಮೀಡಿಯಾದಲ್ಲಿ ಖ್ಯಾತಿ ಪಡೆದಿದ್ದ ಮಹಿಳಾ ಇನ್‌ಫ್ಲುಯೆನ್ಸರ್ ಮೇಲಿನ ಏಕಪಕ್ಷೀಯ ಪ್ರೀತಿಯ ಹಿನ್ನೆಲೆಯಲ್ಲಿ ಯುವಕನೊಬ್ಬನ ದುರಂತ ಅಂತ್ಯವಾಗಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್‌ನಲ್ಲಿ 6 ಲಕ್ಷಕ್ಕೂ ಅಧಿಕ ಫಾಲೋವರ್ಸ್ ಹೊಂದಿರುವ ಕಂಟೆಂಟ್ ಕ್ರಿಯೇಟರ್ ನೇಹಾ ಬಿಷ್ಟ್ ಅವರ ಮನೆಯಲ್ಲೇ ಈ ಘಟನೆ ನಡೆದಿದೆ.

Ad Widget

Ad Widget

Ad Widget

Ad Widget

ನವದೆಹಲಿ: ಸೋಶಿಯಲ್ ಮೀಡಿಯಾದಲ್ಲಿ ಖ್ಯಾತಿ ಪಡೆದಿದ್ದ ಮಹಿಳಾ ಇನ್‌ಫ್ಲುಯೆನ್ಸರ್ ಮೇಲಿನ ಏಕಪಕ್ಷೀಯ ಪ್ರೀತಿಯ ಹಿನ್ನೆಲೆಯಲ್ಲಿ ಯುವಕನೊಬ್ಬನ ದುರಂತ ಅಂತ್ಯವಾಗಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್‌ನಲ್ಲಿ 6 ಲಕ್ಷಕ್ಕೂ ಅಧಿಕ ಫಾಲೋವರ್ಸ್ ಹೊಂದಿರುವ ಕಂಟೆಂಟ್ ಕ್ರಿಯೇಟರ್ ನೇಹಾ ಬಿಷ್ಟ್ ಅವರ ಮನೆಯಲ್ಲೇ ಈ ಘಟನೆ ನಡೆದಿದೆ.

Ad Widget

Ad Widget alt="Ad Widget"/>

Ad Widget

ನೇಹಾ ಬಿಷ್ಟ್ ಇತ್ತೀಚೆಗೆ ತಮ್ಮ ನಿಶ್ಚಿತಾರ್ಥ ಹಾಗೂ ಮುಂಬರುವ ವಿವಾಹದ ಸಿದ್ಧತೆಗಳ ಕುರಿತು ಇನ್‌ಸ್ಟಾಗ್ರಾಮ್ ಮತ್ತು ಯೂಟ್ಯೂಬ್‌ನಲ್ಲಿ ನಿರಂತರವಾಗಿ ವಿಡಿಯೋಗಳನ್ನು ಹಂಚಿಕೊಳ್ಳುತ್ತಿದ್ದರು. ಈ ವಿಚಾರದಿಂದ ಅಸಮಾಧಾನಗೊಂಡಿದ್ದ ಉತ್ತರ ಪ್ರದೇಶದ ಗಾಜಿಪುರ ಮೂಲದ ಅಭಿನವ್ ಎಂಬ ಯುವಕ ಚೆನ್ನೈನಿಂದ ದೆಹಲಿಗೆ ಬಂದಿದ್ದಾನೆ.

Ad Widget

Ad Widget <> Ad Widget

ಚೆನ್ನೈನ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಅಭಿನವ್, ನವೆಂಬರ್ 7ರಂದು ಪೂರ್ವ ದೆಹಲಿಯ ಮಧು ವಿಹಾರ್‌ನಲ್ಲಿರುವ ನೇಹಾ ಬಿಷ್ಟ್ ಅವರ ಮನೆಗೆ ಬಲವಂತವಾಗಿ ಪ್ರವೇಶಿಸಿದ್ದಾನೆ. ಈ ವೇಳೆ ನೇಹಾ ಅವರನ್ನೇ ಮದುವೆಯಾಗಬೇಕೆಂದು ಪಟ್ಟು ಹಿಡಿದು ಗಲಾಟೆ ನಡೆಸಿದ್ದಾನೆ ಎನ್ನಲಾಗಿದೆ. ಮರುದಿನ ದಾಖಲಾದ ಎಫ್‌ಐಆರ್‌ನಲ್ಲಿ ಆತ ಮದ್ಯಪಾನ ಮಾಡಿದ್ದನೆಂದು ಉಲ್ಲೇಖಿಸಲಾಗಿದೆ.

ಯುವಕನ ವರ್ತನೆಯಿಂದ ಆಕ್ರೋಶಗೊಂಡ ನೇಹಾ ಅವರ ಕುಟುಂಬದ ಸದಸ್ಯರು ಹಾಗೂ ಕೆಲವು ನೆರೆಹೊರೆಯವರು ಆತನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಬೆನ್ನು ಹಾಗೂ ಬಲಗಾಲಿಗೆ ಗಂಭೀರ ಗಾಯಗಳಾಗಿ ರಕ್ತಸ್ರಾವವಾಗುತ್ತಿದ್ದ ಅಭಿನವ್‌ನನ್ನು ತಕ್ಷಣ ರಾಜೀವ್ ಗಾಂಧಿ ಆಸ್ಪತ್ರೆಗೆ ದಾಖಲಿಸಿದ್ದರು.

Ad Widget

Ad Widget

ಸುಮಾರು ಒಂದು ವಾರ ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಭಿನವ್, ಚಿಕಿತ್ಸೆ ಫಲಕಾರಿಯಾಗದೆ ನವೆಂಬರ್ 15ರಂದು ಮೃತಪಟ್ಟಿದ್ದಾನೆ.

ಪೊಲೀಸರ ತನಿಖೆಯ ವೇಳೆ ಅಭಿನವ್ ನಿರಂತರವಾಗಿ ನೇಹಾ ಬಿಷ್ಟ್ ಅವರ ವಿಡಿಯೋಗಳನ್ನು ವೀಕ್ಷಿಸುತ್ತಿದ್ದು, ಅವರ ಮೇಲೆ ಏಕಪಕ್ಷೀಯ ಪ್ರೀತಿ ಬೆಳೆಸಿಕೊಂಡಿದ್ದ ಎಂಬ ವಿಚಾರ ಬೆಳಕಿಗೆ ಬಂದಿದೆ ಎನ್ನಲಾಗಿದೆ. ಕೆಲವು ತಿಂಗಳ ಹಿಂದೆಯೂ ಅಭಿಮಾನಿಯ ಸೋಗಿನಲ್ಲಿ ನೇಹಾ ಅವರ ಮನೆಗೆ ಭೇಟಿ ನೀಡಿದ್ದ ಎಂದು ತಿಳಿದುಬಂದಿದೆ.

ನೇಹಾ ಬೇರೊಬ್ಬರೊಂದಿಗೆ ವಿವಾಹವಾಗುತ್ತಿರುವ ವಿಚಾರ ತಿಳಿದ ಬಳಿಕ ಅಭಿನವ್ ಅಸಮಾಧಾನಗೊಂಡಿದ್ದ ಎನ್ನಲಾಗಿದೆ. ಆದರೆ, ಅಭಿನವ್ ಯಾರೆಂಬುದೇ ನೇಹಾ ಅವರಿಗೆ ತಿಳಿದಿರಲಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ಯುವಕನ ಸಾವಿನ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ನೇಹಾ ಬಿಷ್ಟ್ ಅವರ ತಂದೆ ವೀರೇಂದ್ರ ಬಿಷ್ಟ್ ಹಾಗೂ ಓರ್ವ ನೆರೆಹೊರೆಯ ವ್ಯಕ್ತಿಯನ್ನು ಬಂಧಿಸಿದ್ದಾರೆ. ಪ್ರಕರಣದಲ್ಲಿ ಭಾಗಿಯಾಗಿರುವ ಇತರ ಆರೋಪಿಗಳ ಪತ್ತೆಗಾಗಿ ಪೊಲೀಸರು ತನಿಖೆ ಮುಂದುವರಿಸಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ.

Ad Widget
Continue Reading

ನಿಧನ ವಾರ್ತೆ

Mudbidri-ಮಂಗಳೂರಿನಲ್ಲಿ ಮೇಲ್ಛಾವಣಿ ಕೆಲಸದ ವೇಳೆ ಅವಘಡ: ಮೂಡುಬಿದಿರೆ ತಾ.ಪಂ. ಮಾಜಿ ಉಪಾಧ್ಯಕ್ಷ ಸಾವು

Published

on

Ad Widget

Ad Widget

Ad Widget

Ad Widget

ಮೂಡುಬಿದಿರೆ ತಾಲೂಕು ಪಂಚಾಯತ್‌ನ ಮಾಜಿ ಉಪಾಧ್ಯಕ್ಷ ಸಂತೋಷ್ ಅವರು ಮಂಗಳೂರಿನಲ್ಲಿ ಮನೆಯ ಮೇಲ್ಛಾವಣಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಗುರುವಾರ ಸಂಭವಿಸಿದ ಈ ದುರಂತ ಘಟನೆ ದುಃಖಕ್ಕೆ ಕಾರಣವಾಗಿದೆ.

Ad Widget

Ad Widget

Ad Widget

Ad Widget

ಮೂಡುಬಿದಿರೆ, ನ.20: ಮೂಡುಬಿದಿರೆ ತಾಲೂಕು ಪಂಚಾಯತ್‌ನ ಮಾಜಿ ಉಪಾಧ್ಯಕ್ಷ ಸಂತೋಷ್ ಅವರು ಮಂಗಳೂರಿನಲ್ಲಿ ಮನೆಯ ಮೇಲ್ಛಾವಣಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಗುರುವಾರ ಸಂಭವಿಸಿದ ಈ ದುರಂತ ಘಟನೆ ದುಃಖಕ್ಕೆ ಕಾರಣವಾಗಿದೆ.

Ad Widget

Ad Widget alt="Ad Widget"/>

Ad Widget

ಮೂಡುಬಿದಿರೆ ತಾಲೂಕಿನ ಬೆಳುವಾಯಿ ನಿವಾಸಿಯಾಗಿದ್ದ ಸಂತೋಷ್ ಅವರು ಬೆಳುವಾಯಿ ಕ್ಷೇತ್ರದಿಂದ ತಾಲೂಕು ಪಂಚಾಯತ್ ಸದಸ್ಯರಾಗಿ ಆಯ್ಕೆಯಾಗಿದ್ದರು. ಹೊಸದಾಗಿ ರಚನೆಯಾಗಿದ್ದ ಮೂಡುಬಿದಿರೆ ತಾಲೂಕು ಪಂಚಾಯತ್‌ನ ಮೊದಲ ಅವಧಿಯಲ್ಲಿ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.

Ad Widget

Ad Widget <> Ad Widget

ಸಂತೋಷ್ ಅವರು ಪ್ರತಿದಿನ ಕೆಲಸದ ನಿಮಿತ್ತ ಮಂಗಳೂರಿಗೆ ತೆರಳುತ್ತಿದ್ದರು. ಗುರುವಾರ ಬೇರೆ ಸ್ಥಳದಲ್ಲಿ ಬದಲಿ ಕೆಲಸಗಾರನಾಗಿ ಕೆಲಸಕ್ಕೆ ತೆರಳಿದ್ದ ಅವರು, ಮನೆಯೊಂದರ ಮೇಲ್ಛಾವಣಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಕೆಳಕ್ಕೆ ಬಿದ್ದಿದ್ದಾರೆ ಎನ್ನಲಾಗಿದೆ.

ಘಟನೆಯಲ್ಲಿ ಗಂಭೀರ ಗಾಯಗೊಂಡ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

Ad Widget

Ad Widget

ಮೃತ ಸಂತೋಷ್ ಅವರು ಪತ್ನಿ ಹಾಗೂ ಪುಟ್ಟ ಮಗುವನ್ನು ಅಗಲಿದ್ದಾರೆ. ಜನಪ್ರತಿನಿಧಿಯಾಗಿ ಸೇವೆ ಸಲ್ಲಿಸಿದ್ದ ಅವರ ಅಕಾಲಿಕ ನಿಧನಕ್ಕೆ ಸ್ಥಳೀಯರು ಹಾಗೂ ಗಣ್ಯರು ಸಂತಾಪ ಸೂಚಿಸಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!